ದಾವಣಗೆರೆ: ವಾಲ್ಮೀಕಿ ನಿಗಮದ ಅಧೀಕ್ಷಕ (Valmiki Corporation Scam) ಚಂದ್ರಶೇಖರ್ ಆತ್ಮಹತ್ಯೆ (Self harming) ಪ್ರಕರಣ ಸರಕಾರಕ್ಕೆ ತಂದಿಟ್ಟಿರುವ ತಲೆನೋವು ಇನ್ನೂ ಬಿಸಿಯಾಗಿರುವಾಗಲೇ, ದಾವಣಗೆರೆಯಲ್ಲಿ ಕಂಟ್ರಾಕ್ಟರ್ (Contractor) ಒಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೊತೆಗೆ, ಬಿಲ್ ಹಣ (bill payment) ಕೊಡದೆ ಸತಾಯಿಸುತ್ತಿದ್ದ ಕೆಆರ್‌ಐಡಿಎಲ್ (KRIDL) ಅಧಿಕಾರಿಗಳ ಕಿರುಕುಳವನ್ನೂ ಬಯಲಿಗೆಳೆಯುವ ಡೆತ್ ನೋಟ್ (Death note) ಬರೆದಿಟ್ಟು ಪ್ರಾಣ ಬಿಟ್ಟಿದ್ದಾರೆ.
ದಾವಣಗೆರೆ ಜಿಲ್ಲೆಯ ಸಂತೇಬೆನ್ನೂರಿನ ಕಂಟ್ರಾಕ್ಟರ್ ಪಿ.ಎಸ್ ಗೌಡರ್ ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್‌ನೋಟ್ ಬರೆದಿಟ್ಟಿದ್ದಾರೆ. ಡೆತ್‌ನೋಟ್‌ನಲ್ಲಿ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ (KRIDL) ನಿಂದ ತಮಗೆ ಬಾಕಿ ಬಿಲ್ ಪಾವತಿ ಮಾಡದೆ ಅಧಿಕಾರಿಗಳು ಕಿರುಕುಳ ನೀಡುತ್ತಿರುವ ಕಾರಣ ಮನನೊಂದು ಆತ್ಮಹತ್ಯೆಗೆ ಶರಣಾಗುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.
ಇದರೊಂದಿಗೆ, ಶಿವಮೊಗ್ಗದ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣದ ನಂತರ ಮತ್ತೊಬ್ಬ ಕಂಟ್ರಾಕ್ಟರ್ ಆತ್ಮಹತ್ಯೆ ಪ್ರಕರಣ ಸರ್ಕಾರವನ್ನು ಇಕ್ಕಟ್ಟಿಗೆ ಸಿಕ್ಕಿಸಲಿದೆಯಾ ಎಂಬ ಕುತೂಹಲ ಮೂಡಿದೆ.
ಗೌಡರ್ ಸಂತೇಬೆನ್ನೂರಿನ ತಮ್ಮ ಮನೆಯಲ್ಲಿ ಮೇ 26ರಂದು ಡೆತ್ ನೋಟ್ ಬರೆದಿಟ್ಟು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂತೇಬೆನ್ನೂರಿನ ಕೃಷಿ ಇಲಾಖೆ ಆವರಣದಲ್ಲಿ ಕೆಲಸ ಮಾಡಿದ್ದ ಕಾಮಗಾರಿಗೆ ಸಂಬಂಧಿಸಿದ ಹಣ ಬಿಡುಗಡೆ ಮಾಡದೇ ಕೆಆರ್‌ಡಿಎಲ್ ಅಧಿಕಾರಿಗಳು ಸತಾಯಿಸುತ್ತಿದ್ದಾರೆ. 2023- 24ರ ಸಾಲಿನಲ್ಲಿ ಕೆಲಸ ಮಾಡಿದ್ದು, ಬಿಲ್ ಪಾವತಿಸದೇ ತೊಂದರೆ ನೀಡುತ್ತಿದ್ದಾರೆ. ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಡೆತ್ ನೋಟ್‌ನಲ್ಲಿ ಕೆಆರ್‌ಡಿಎಲ್ ಅಧಿಕಾರಿಗಳ ವರ್ತನೆ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಗೌಡರ್, ಅಧಿಕಾರಿಗಳ ಮೇಲೆ ಕ್ರಮಕ್ಕೆ ಒತ್ತಾಯಿಸಿದ್ದರಲ್ಲದೆ, ಕೆಆರ್‌ಐಡಿಎಲ್ ಸಂಸ್ಥೆಯಿಂದ ದೊಡ್ಡ ಮೊತ್ತದ ಪರಿಹಾರ ನೀಡುವಂತೆ ಆಗ್ರಹಪಡಿಸಿದ್ದಾರೆ. ಅಷ್ಟೇ ಅಲ್ಲದೇ, ಅವರ ಇಬ್ಬರು ಸಹೋದರರ ಮೇಲೂ ಹಣಕಾಸಿನ ವಿಚಾರದಲ್ಲಿ ಮೋಸ ಮಾಡಿದ್ದಾರೆಂದು ಆರೋಪಿಸಿದ್ದಾರೆ. ತನ್ನ ಸಹೋದರ ಶ್ರೀನಿವಾಸ್, ತನ್ನ ಮೇಲೆ ಹಾಗೂ ಪತ್ನಿಯ ಮೇಲೆ ಹಲ್ಲೆ ನಡೆಸಿದ್ದಾನೆ ಎಂದೂ ದೂರಿದ್ದಾರೆ.
ಈ ಕುರಿತು ಪಿ.ಎಸ್ ಗೌಡರ್ ಪತ್ನಿ ವಸಂತ ಕುಮಾರಿಯವರಿಂದ ಸಂತೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಸಂತೇಬೆನ್ನೂರಿನ ಪೊಲೀಸ್ ಠಾಣೆಯಲ್ಲಿ 306 ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ತನಿಖೆಗೆ ಎಸ್‌ಐಟಿ?
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ (Valmiki development corporation) ಅಧೀಕ್ಷಕ ಚಂದ್ರಶೇಖರ್ ಆತ್ಮಹತ್ಯೆ (Officer self Harming) ಪ್ರಕರಣದ (Valmiki corporation Scam) ತನಿಖೆಯನ್ನು ಸಿಐಡಿಗೆ (CID) ಒಪ್ಪಿಸಿರುವರಾಜ್ಯ ಸರ್ಕಾರ, ಇದೀಗ ಪ್ರತಿಪಕ್ಷದ ಒತ್ತಡದಿಂದ ಸಿಬಿಐ (CBI) ತನಿಖೆಗೆ ಹೋಗಬಹುದಾದ ಸನ್ನಿವೇಶ ಎದುರಿಸಲು ಎಸ್ಐಟಿ (SIT) ರಚನೆಗೆ ಮುಂದಾಗಿದೆ ಎಂದು ತಿಳಿದುಬಂದಿದೆ.
185 ಕೋಟಿ ರೂ.ಗಳ ಅಕ್ರಮ ಹಣ ವರ್ಗಾವಣೆಯ (Illegal Money transfer) ಗಂಭೀರ ಸ್ವರೂಪದ ಪ್ರಕರಣ ಇದಾಗಿರುವುದರಿಂದ ಈಗಾಗಲೇ ಸಿಐಡಿ ತನಿಖೆಗೆ ಸರ್ಕಾರ ನೀಡಿದೆ. ಆದರೆ ಪ್ರತಿಪಕ್ಷಗಳು ಸಿಬಿಐ ತನಿಖೆಗೆ ನೀಡಲು ಒತ್ತಾಯಿಸುತ್ತಿವೆ. ಇಂದು ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಗೃಹ ಸಚಿವ ಪರಮೇಶ್ವರ್ (G Parameshwara) ಜೊತೆ ಅಧಿಕಾರಿಗಳ ಸಭೆ ಕರೆದಿದ್ದು, ಈ ಸಭೆಯಲ್ಲಿ ಎಸ್‌ಐಟಿ ರಚನೆ ಬಗ್ಗೆ ತೀರ್ಮಾನ ಆಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಇಂದಿನ ಸಿಎಂ ಮತ್ತು ಹೋಂ ಮಿನಿಸ್ಟರ್ ಸಭೆ ಭಾರೀ ಮಹತ್ವ ಪಡೆದುಕೊಂಡಿದೆ.
ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ಕೊಡುವಂತೆ ಬ್ಯಾಂಕ್ ಆಫ್ ಬರೋಡಾ ಅಧಿಕಾರಿಗಳು ಕೇಂದ್ರ ಗೃಹ ಇಲಾಖೆಗೆ ಪತ್ರ ಬರೆದಿದ್ದಾರೆ. ಹತ್ತು ಕೋಟಿ ರೂಪಾಯಿಗಳಿಗಿಂತಲೂ ಹೆಚ್ಚು ಬ್ಯಾಂಕ್ ಹಣದಲ್ಲಿ ಅವ್ಯವಹಾರ ಆಗಿದ್ದರೆ ಇದರಲ್ಲಿ ಸಿಬಿಐ ಎಂಟ್ರಿ ಆಗಬಹುದು. ಇದನ್ನು ಸಿಬಿಐ ಹಾಗೂ ಕೇಂದ್ರ ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳುವ ಮೊದಲೇ ಎಸ್ಐಟಿ ರಚನೆ ಮಾಡಿ ತನಿಖೆ ಇನ್ನಷ್ಟು ಚುರುಕುಗೊಳಿಸಲು ಸರ್ಕಾರ ತೀರ್ಮಾನ ಮಾಡುವ ಸಾಧ್ಯತೆ ಇದೆ. ಜೊತೆಗೆ, ಪ್ರಕರಣದಲ್ಲಿ ಕೇಳಿ ಬಂದಿರುವ ಹೆಸರಾದ ಅಧಿಕಾರಿ ನಾಗರಾಜ್, ಸಚಿವ ನಾಗೇಂದ್ರ ಜೊತೆ ಆಪ್ತರಾಗಿರುವುದರಿಂದಲೂ, ತನಿಖೆಯನ್ನು ಸಿಬಿಐಗೆ ಒಪ್ಪಿಸಲು ರಾಜ್ಯ ಸರ್ಕಾರಕ್ಕೆ ಇಷ್ಟವಿಲ್ಲದಾಗಿದೆ.
ಇದನ್ನೂ ಓದಿ: Bhavani Reavanna : ಭವಾನಿ ರೇವಣ್ಣಗೆ ಬಂಧನ ಭೀತಿ; ಜಾಮೀನು ಅರ್ಜಿ ತೀರ್ಪು ಮುಂದಕ್ಕೆ