Crime News: ಎಚ್ಚರ! ರಮ್ಜಾನ್‌ ಕಿಟ್ ಹೆಸರಲ್ಲಿ ನಿಮ್ಮನ್ನೂ ದೋಚಬಹುದು; ನಗರದಲ್ಲಿ ನಡೆಯುತ್ತಿದೆ ಹೊಸ ಮಾದರಿಯ ರಾಬರಿ - Vistara News

ಕ್ರೈಂ

Crime News: ಎಚ್ಚರ! ರಮ್ಜಾನ್‌ ಕಿಟ್ ಹೆಸರಲ್ಲಿ ನಿಮ್ಮನ್ನೂ ದೋಚಬಹುದು; ನಗರದಲ್ಲಿ ನಡೆಯುತ್ತಿದೆ ಹೊಸ ಮಾದರಿಯ ರಾಬರಿ

Crime News: ಬೆಂಗಳೂರಿನಲ್ಲಿ ದಿನಕ್ಕೊಂದು ಹೊಸ ಹೊಸ ರೀತಿಯಲ್ಲಿ ಮೋಸ ಮಾಡುವ ದಂಧೆ ನಡೆಯುತ್ತಿದೆ. ಇದಕ್ಕೆ ಇನ್ನೊಂದು ಸೇರ್ಪಡೆ ಇದು. ರಮ್ಜಾನ್‌ ಕಿಟ್ ಕೊಡಿಸುವ ನೆಪದಲ್ಲಿ ದಂಪತಿಯನ್ನು ಮೋಸಗೊಳಿಸಿ ಚಿನ್ನಾಭರಣ, ನಗದು ದೋಚಿ ಪರಾರಿಯಾಗಿದ್ದ ಖತರ್ನಾಕ್ ಕಳ್ಳ ಅಬ್ದುಲ್ಲಾ ಸದ್ಯ ಪೊಲೀಸರ ಅತಿಥಿಯಾಗಿದ್ದಾನೆ. ಜೈಲಿನಲ್ಲಿದ್ದ ಆರೋಪಿ ಅಬ್ದುಲ್ಲಾ ಬಿಡುಗಡೆಯಾದ ದಿನವೇ ಈ ಕೃತ್ಯ ಎಸಗಿದ್ದಾನೆ. ಈ ಹಿಂದೆ ಈತ ತಿಲಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇದೇ ರೀತಿ ರಾಬರಿ ಮಾಡಿ ಜೈಲು ಸೇರಿದ್ದ.

VISTARANEWS.COM


on

Crime News
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬೆಂಗಳೂರಿನಲ್ಲಿ ದಿನಕ್ಕೊಂದು ಹೊಸ ಹೊಸ ರೀತಿಯಲ್ಲಿ ಮೋಸ ಮಾಡುವ ದಂಧೆ ನಡೆಯುತ್ತಿದೆ. ಇದಕ್ಕೆ ಇನ್ನೊಂದು ಸೇರ್ಪಡೆ ಇದು. ರಮ್ಜಾನ್‌ ಕಿಟ್ ಕೊಡಿಸುವ ನೆಪದಲ್ಲಿ ದಂಪತಿಯನ್ನು ಮೋಸಗೊಳಿಸಿ ಚಿನ್ನಾಭರಣ, ನಗದು ದೋಚಿ ಪರಾರಿಯಾಗಿದ್ದ ಖತರ್ನಾಕ್ ಕಳ್ಳ ಅಬ್ದುಲ್ಲಾ ಸದ್ಯ ಪೊಲೀಸರ ಅತಿಥಿಯಾಗಿದ್ದಾನೆ (Crime News).

ಇನ್ನೊಂದು ವಿಶೇಷ ಎಂದರೆ, ಜೈಲಿನಲ್ಲಿದ್ದ ಆರೋಪಿ ಅಬ್ದುಲ್ಲಾ ಬಿಡುಗಡೆಯಾದ ದಿನವೇ ಈ ಕೃತ್ಯ ಎಸಗಿದ್ದಾನೆ. ಈ ಹಿಂದೆ ಈತ ತಿಲಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇದೇ ರೀತಿ ರಾಬರಿ ಮಾಡಿ ಜೈಲು ಸೇರಿದ್ದ. ಕಳೆದ ತಿಂಗಳು 26ರಂದು ಜೈಲಿಂದ ಹೊರಗೆ ಬಂದಿದ್ದ ಆತ ಮತ್ತೆ ತನ್ನ ಹಳೆ ಚಾಳಿ ಮುಂದುವರಿಸಿದ್ದ. ಮತ್ತೆ ಅದೇ ರೀತಿ ಜನರನ್ನು ದೋಚಲು ಪ್ಲಾನ್ ಮಾಡಿದ್ದ ಕಾರ್ಯ ಪ್ರವೃತ್ತನಾಗಿದ್ದ.

ಪ್ರಕರಣದ ಹಿನ್ನೆಲೆ

ಮಾರ್ಚ್‌ 26ರಂದು ರಮ್ಜಾನ್‌ ಕಿಟ್ ಕೊಡಿಸ್ತೀನಿ ಬನ್ನಿ ಎಂದು ರಶೀದ್ ಎಂಬವರನ್ನು ಅಬ್ದುಲ್ಲಾ ತನ್ನ ಬೈಕ್‌ನಲ್ಲಿ ಕರೆದುಕೊಂಡು ಹೋಗಿದ್ದ. ಈತನ ಮಾತು ನಂಬಿದ್ದ ರಶೀದ್‌ ಆತನೊಂದಿಗೆ ತೆರಳಿದ್ದರು. ಹೊಸೂರು ರಸ್ತೆಯ ಆನೇಪಾಳ್ಯ ಮೋರಿ ಬಳಿ ಬರುತ್ತಿದ್ದಂತೆ ಅಬ್ದುಲ್ಲಾ ತನ್ನ ನಿಜ ಮುಖ ತೋರಿದ್ದ. ರಶೀದ್‌ಗೆ ಚಾಕು ತೋರಿಸಿ 5 ಸಾವಿರ ರೂ. ದೋಚಿ ಆತನನ್ನು ಅಲ್ಲೇ ಬಿಟ್ಟು ಬಂದಿದ್ದ.

ಬಳಿಕ ರಶೀದ್ ಪತ್ನಿ ಅಕಿಲಾ ಬಳಿ ಆಗಮಿಸಿ, ʼʼನಿಮ್ಮ ಗಂಡ ಕಿಟ್ ಪಡೆಯುತ್ತಿದ್ದಾರೆ. ಅವರಿಗೆ ಎಲ್ಲವನ್ನೂ ತೆಗೆದುಕೊಂಡು ಬರಲು ಆಗುವುದಿಲ್ಲ. ನೀವು ಕೂಡ ಬನ್ನಿʼʼ ಎಂದು ಅಕಿಲಾ ಬಳಿ ಬುರುಡೆ ಬಿಟ್ಟಿದ್ದ. ಇದನ್ನು ನಂಬಿ ಅಕಿಲಾ ಕೂಡ ಅಬ್ದುಲ್ಲಾ ಜತೆಗೆ ತೆರಳಿದ್ದರು. ನಿರ್ಜನ ಪ್ರದೇಶದಲ್ಲಿ ಬೈಕ್‌ ನಿಲ್ಲಿಸಿದ ಅಬ್ದುಲ್ಲಾ ಚಾಕು ತೋರಿಸಿ, ಬೆದರಿಕೆ ಹಾಕಿ ಅಕಿಲಾ ಬಳಿಯಿದ್ದ 21 ಗ್ರಾಂ ಚಿನ್ನ, 4 ಸಾವಿರ ರೂ. ನಗದು ದೋಚಿ ಪರಾರಿಯಾಗಿದ್ದ.

ಈ ಹಿನ್ನೆಲೆಯಲ್ಲಿ ದಂಪತಿ ಅಶೋಕ ನಗರ ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದರು. ಕಾರ್ಯಾಚರಣೆ ನಡೆಸಿದ ಪೊಲೀಸರು ಸದ್ಯ ತಲೆಮರೆಸಿಕೊಂಡಿದ್ದ ಆರೋಪಿ ಅಬ್ದುಲ್ಲಾನನ್ನು ಬಂಧಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

ಇದನ್ನೂ ಓದಿ: Fraud Case : ಕೆಪಿಎಸ್‌ಸಿ ಸದಸ್ಯತ್ವ ಕೊಡಿಸುವುದಾಗಿ ಮಹಿಳೆಯಿಂದ 4 ಕೋಟಿ ರೂ. ಪೀಕಿದ ವಂಚಕರು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Pavithra Gowda: ಪವಿತ್ರಾಗೆ ಲಿಪ್‌ಸ್ಟಿಕ್‌ ಹಚ್ಚಲು ಅವಕಾಶ ಮಾಡಿಕೊಟ್ಟಿದ್ದ ಮಹಿಳಾ `PSI’ಗೆ ನೋಟಿಸ್‌!

Pavithra Gowda: ಪರಪ್ಪನ ಅಗ್ರಹಾರ ಜೈಲಿನ ಮಹಿಳಾ ಬ್ಯಾರಕ್‌ನಲ್ಲಿ ಪವಿತ್ರಾ ಸೆರೆವಾಸ ಅನುಭವಿಸುತ್ತಿದ್ದಾರೆ. ಸರಿಯಾಗಿ ಊಟ, ನಿದ್ರೆ ಮಾಡದೆ ಚಡಪಡಿಸುತ್ತಿದ್ದಾರೆ ಎನ್ನಲಾಗಿದೆ. ಮಗಳು ಖುಷಿ ಭೇಟಿ ಬಳಿಕ ರಾತ್ರಿ ಬೇಗನೆ ಪವಿತ್ರಾ ಗೌಡ ನಿದ್ದೆಗೆ ಜಾರಿದ್ದರು ಎನ್ನಲಾಗಿದೆ. ಜೈಲು ಸಿಬ್ಬಂದಿ ನೀಡಿದ್ದ ಮುದ್ದೆ, ಅನ್ನ, ಚಪಾತಿ, ಸಾಂಬರ್, ಮಜ್ಜಿಗೆ ಊಟ ಮಾಡಿ ಮಲಗಿದ್ದರು. ಬೆಳಗ್ಗೆ 6 ಗಂಟೆಯ ಸುಮಾರಿಗೆ ನಿದ್ರೆಯಿಂದ ಪವಿತ್ರಾ ಎದ್ದಿದ್ದರು.

VISTARANEWS.COM


on

Pavithra Gowda lipstick case Notice to PSI
Koo

ಬೆಂಗಳೂರು: ನಟಿ ಪವಿತ್ರಾ ಗೌಡ (Pavithra Gowda) ಅವರು ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಅವರು ಅರೆಸ್ಟ್ ಆಗಿದ್ದು, ಸದ್ಯ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಆರಂಭದಲ್ಲಿ ಪವಿತ್ರಾ ಗೌಡ ಅವರನ್ನು ನೋಡಲು ಯಾರೂ ಬಂದಿರಲಿಲ್ಲ. ಇದೀಗ ಮಗಳನ್ನ ಕಂಡು ಕೊಂಚ ನಿರಾಳವಾಗಿದ್ದಾರೆ ಎನ್ನಲಾಗಿದೆ. ಹೀಗಿರುವಾಗಲೇ ಪವಿತ್ರಾಗೆ ಮೇಕಪ್ ಮಾಡಲು ಅವಕಾಶ ನೀಡಿದ ಪಿಎಸ್​ಐಗೆ ಸಂಕಷ್ಟ ಎದುರಾಗಿದೆ. ವಿತ್ರಾ ಗೌಡ ಮನೆ ಮಹಜರು ಮಾಡಲಾಗಿತ್ತು. ಈ ವೇಳೆ ಪವಿತ್ರಾ ಗೌಡ ಕೂಡ ಇದ್ದರು. ಪವಿತ್ರಾಗೆ ಲಿಪ್ಸ್​​ಟಿಕ್ ಹಚ್ಚಲು ಪಿಎಸ್ಐ ಅವಕಾಶ ಕೊಟ್ಟಿದ್ದರು. ಕರ್ತವ್ಯ ಲೋಪ ಹಿನ್ನಲೆಯಲ್ಲಿ ವಿಜಯನಗರದ ಮಹಿಳಾ ಪಿಎಸ್ಐ ನೇತ್ರಾ ಅವರಿಗೆ ನೋಟಿಸ್ ನೀಡಲಾಗಿದೆ.

ಜೂನ್ 15ರಂದು ಆರೋಪಿ ಪವಿತ್ರಾ ಗೌಡಳನ್ನು ಆರ್.ಆರ್.ನಗರದ ಮನೆಗೆ ಸ್ಥಳ ಮಹಜರಿಗೆ ಕೊಂಡೊಯ್ಯಲಾಗಿತ್ತು. ಈ ವೇಳೆ ಪವಿತ್ರಾ ಗೌಡ ಮನೆಯಲ್ಲಿ ವಾಶ್‌ರೂಮ್‌ಗೆಂದು ಹೋದಾಗ ಲಿಪ್ ಸ್ಟಿಕ್ ಹಚ್ಚಿಕೊಂಡು, ಮೇಕಪ್ ಮಾಡಿಕೊಂಡು ಹೊರ ಬಂದಿದ್ದರು. ಪವಿತ್ರಾಗೌಡಗೆ ಲಿಪ್ ಸ್ಟಿಕ್ ನೀಡಿದ್ದ ವಿಜಯನಗರ ಠಾಣೆ ಮಹಿಳಾ ಪಿಎಸ್ ಐಗೆ ಇದೀಗ ಕರ್ತವ್ಯ ಲೋಪ ಆರೋಪದಲ್ಲಿ ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್, ನೋಟಿಸ್ ನೀಡಿದ್ದಾರೆ.

ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ಪವಿತ್ರಾ ಕುಗ್ಗಿ ಹೋಗಿದ್ದರು. ನಿನ್ನೇ ಪವಿತ್ರಾ ಗೌಡ ಭೇಟಿಗೆ ಮಗಳು ಖುಷಿ ತಾಯಿ, ತಂದೆ,ತಮ್ಮ ಆಗಮಿಸಿದ್ದರು. ಇದಕ್ಕೂ ಮುಂಚೆ ʻʻನನ್ನನ್ನು ನೋಡಲು ಯಾರೂ ಬರುವುದಿಲ್ಲ. ನನ್ನನ್ನು ಯಾರೂ ಮಾತನಾಡಿಸುವುದಿಲ್ಲ’ ಎಂದು ಪವಿತ್ರಾ ಬೇಸರ ಮಾಡಿಕೊಂಡಿದ್ದರುʼʼಎನ್ನಲಾಗಿದೆ.ಕೊನೆಗೂ ಪವಿತ್ರಾ ಮಗಳು ಹಾಗೂ ಪವಿತ್ರಾ ತಾಯಿ ಜೈಲಿಗೆ ಬಂದು ಅವರನ್ನು ನೋಡಿ ಹೋಗಿದ್ದಾರೆ.

ಇದನ್ನೂ ಓದಿ: Pavithra Gowda: ನನ್ನನ್ನು ನೋಡಲು ಯಾರೂ ಬರೋದಿಲ್ಲ ಎಂದು ಪವಿತ್ರಾ ಕಣ್ಣೀರು; ʻದಚ್ಚುʼ ನಿರಾಳ!

ಪರಪ್ಪನ ಅಗ್ರಹಾರ ಜೈಲಿನ ಮಹಿಳಾ ಬ್ಯಾರಕ್‌ನಲ್ಲಿ ಪವಿತ್ರಾ ಸೆರೆವಾಸ ಅನುಭವಿಸುತ್ತಿದ್ದಾರೆ. ಸರಿಯಾಗಿ ಊಟ, ನಿದ್ರೆ ಮಾಡದೆ ಚಡಪಡಿಸುತ್ತಿದ್ದಾರೆ ಎನ್ನಲಾಗಿದೆ. ಮಗಳು ಖುಷಿ ಭೇಟಿ ಬಳಿಕ ರಾತ್ರಿ ಬೇಗನೆ ಪವಿತ್ರಾ ಗೌಡ ನಿದ್ದೆಗೆ ಜಾರಿದ್ದರು ಎನ್ನಲಾಗಿದೆ. ಜೈಲು ಸಿಬ್ಬಂದಿ ನೀಡಿದ್ದ ಮುದ್ದೆ, ಅನ್ನ, ಚಪಾತಿ, ಸಾಂಬರ್, ಮಜ್ಜಿಗೆ ಊಟ ಮಾಡಿ ಮಲಗಿದ್ದರು. ಬೆಳಗ್ಗೆ 6 ಗಂಟೆಯ ಸುಮಾರಿಗೆ ನಿದ್ರೆಯಿಂದ ಪವಿತ್ರಾ ಎದ್ದಿದ್ದರು. ಬ್ಯಾರಕ್‌ನಲ್ಲಿಯೇ ಕೆಲಹೊತ್ತು ವಾಕಿಂಗ್ ಮಾಡಿದ್ದಾರೆ. ಜೈಲು ಸಿಬ್ಬಂದಿ ನೀಡಿದ್ದ ಕಾಫಿ ಕುಡಿದು ರಿಲ್ಯಾಕ್ಸ್‌ ಮೂಡ್‌ಗೆ ಜಾರಿದ್ದಾರೆ. ನಿತ್ಯ ಪೌಷ್ಟಿಕ ಆಹಾರ ತಿನ್ನುತ್ತಿದ್ದ ಪವಿತ್ರಾ ಜೈಲೂಟ ಒಗ್ಗದೆ ಇದ್ದರೂ ತಿನ್ನಲೇ ಬೇಕಾದ ಪರಿಸ್ಥಿತಿ ಎದುರಾಗಿದೆ.

Continue Reading

ಕರ್ನಾಟಕ

Self Harming: ಕೆಲಸದಿಂದ ತೆಗೆದು ಕಿರುಕುಳ; ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ

Self Harming: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೇರಂಬಾಡಿ ಗ್ರಾಮದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗಾರ್ಮೆಂಟ್ಸ್‌ನಲ್ಲಿ ಕೆಲಸದಿಂದ ತೆಗೆದು ಬೇರೆಲ್ಲೂ ಕೆಲಸ ಸಿಗದಂತೆ ಕಿರುಕುಳ ನೀಡಲಾಗಿದೆ ಎಂದು ಡೆತ್‌ ನೋಟ್‌ನಲ್ಲಿ ಯುವಕ ಉಲ್ಲೇಖಿಸಿದ್ದಾನೆ.

VISTARANEWS.COM


on

Self Harming
Koo

ಮೈಸೂರು: ಕಂಪನಿಯಲ್ಲಿ ಕೆಲಸದಿಂದ ತೆಗೆದು ಕಿರುಕುಳ ನೀಡಿದ್ದಾರೆ ಎಂದು ಮನನೊಂದು ಯುವಕನೊಬ್ಬ ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ತಿ.ನರಸೀಪುರದಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೇರಂಬಾಡಿ ಗ್ರಾಮದ ಕಿರಣ್ (28) ಮೃತ ಯುವಕ.

ತಿ.ನರಸೀಪುರದ ಸಾಯಿ ಗಾರ್ಮೆಂಟ್ಸ್‌ನಲ್ಲಿ ಯುವಕ ಕಿರಣ್‌ ಕೆಲಸ ಮಾಡುತ್ತಿದ್ದ. ಆದರೆ, ಕಂಪನಿಯಲ್ಲಿ ಕೆಲಸದಿಂದ ಬೇಕಂತಲೇ ತೆಗೆದಿದ್ದಾರೆ. ನನ್ನ ಸಾವಿಗೆ ಕಂಪನಿಯ ಕ್ವಾಲಿಟಿ ಎ.ಜಿ.ಎಂ ಲೋಕೇಶ್‌ ಹಾಗೂ ಎಚ್.ಆರ್. ಎ.ಜಿ.ಎಂ ಅನಿಲ್ ಕಾರಣ ಎಂದು ಡೆತ್‌ ನೋಟ್‌ನಲ್ಲಿ ಯುವಕ ಉಲ್ಲೇಖಿಸಿದ್ದಾನೆ.

ನನ್ನನ್ನು ಕೆಲಸದಿಂದ ಬೇಕಂತಲೇ ತೆಗೆದಿದ್ದಾರೆ. ನನ್ನ ಬಗ್ಗೆ ಬೇರೆ ಕಡೆ ಕೆಟ್ಟ ಫೀಡ್ ಬ್ಯಾಕ್ ಕೊಟ್ಟು ಎಲ್ಲೂ ಕೆಲಸಕ್ಕೆ ತೆಗೆದುಕೊಳ್ಳದ ಹಾಗೆ ಮಾಡಿದ್ದಾರೆ. ಲೋಕೇಶ್‌ ಮತ್ತು ಅನಿಲ್‌ ಅವರಿಂದ ಕೆಲಸ ಸಿಗದ ನಾನು ಅತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್ ನೋಟ್‌ನಲ್ಲಿ ಮೃತ ಕಿರಣ್ ಉಲ್ಲೇಖ ಮಾಡಿದ್ದಾನೆ. ಈ ಬಗ್ಗೆ ತಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Actor Darshan: ರೇಣುಕಾಸ್ವಾಮಿ ಹಲ್ಲೆಗೆ ಬಳಸಿದ್ದ ʻಪೊಲೀಸ್ ಲಾಠಿʼ ಪತ್ತೆ! ʻಡಿ ಗ್ಯಾಂಗ್‌ʼಗೆ ಸಿಕ್ಕಿದ್ದು ಹೇಗೆ?

ಹುಬ್ಬಳ್ಳಿ ಏರ್‌ಪೋರ್ಟ್‌ ನಿರ್ದೇಶಕರಿಗೆ ಜೀವ ಬೆದರಿಕೆ; ʼಲಾಂಗ್ ಲಿವ್ ಪ್ಯಾಲೆಸ್ತೀನ್ʼ ಮೇಲ್‌ ಐಡಿಯಿಂದ ಸಂದೇಶ

Life threat

ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣ ನಿರ್ದೇಶಕರಿಗೆ ಜೀವ ಬೆದರಿಕೆ (Life threat) ಸಂದೇಶ ಬಂದಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ʼಲಾಂಗ್ ಲಿವ್ ಪ್ಯಾಲೆಸ್ತೀನ್ʼ ಎಂಬ ಹೆಸರಿನ ಮೇಲ್ ಐಡಿಯಿಂದ ಬಂದಿರೋ ಬೆದರಿಕೆ ಸಂದೇಶ ಬಂದಿದ್ದು, ಈ ಬಗ್ಗೆ ಗೋಕುಲ ರೋಡ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಮಾನ ನಿಲ್ದಾಣದ ನಿರ್ದೇಶಕ ರೂಪೇಶ್‌ ಕುಮಾರ ಶ್ರೀಪಾದಗೆ ಬೆದರಿಕೆ ಮೇಲ್ ಬಂದಿದೆ. ʼಲಾಂಗ್ ಲಿವ್ ಪ್ಯಾಲೆಸ್ತೀನ್ʼ ಎಂಬ ಹೆಸರಿನ ಮೇಲ್ ಐಡಿಯಿಂದ ನಿರ್ದೇಶಕರ ಕಚೇರಿಯ ಮೇಲ್ ಐಡಿಗೆ ಸಂದೇಶ ಬಂದಿದ್ದು, ” ನಾವು ನಿಮ್ಮನ್ನು ನಾಶ ಮಾಡುತ್ತೇವೆ, ಬೆಂಕಿಯಲ್ಲಿ ಎಸೆಯುತ್ತೇವೆ, ಉಸಿರುಗಟ್ಟಿ ಸಾಯುತ್ತೀರಿ” ನೀವು ಮಾಡಿದ ಎಲ್ಲ ಕೆಟ್ಟ ಕೆಲಸಗಳಿಗೆ ಉತ್ತರವಿಲ್ಲ ಎಂದು ಭಾವಿಸಿದ್ದೀರಾ ಎಂದು ಬೆದರಿಕೆ ಸಂದೇಶ ಬಂದಿದೆ.

ಇದನ್ನೂ ಓದಿ | Actor Darshan: ರೇಣುಕಾಸ್ವಾಮಿ ಹಲ್ಲೆಗೆ ಬಳಸಿದ್ದ ʻಪೊಲೀಸ್ ಲಾಠಿʼ ಪತ್ತೆ! ʻಡಿ ಗ್ಯಾಂಗ್‌ʼಗೆ ಸಿಕ್ಕಿದ್ದು ಹೇಗೆ?

ಈ ಬಗ್ಗೆ ಟರ್ಮಿನಲ್‌ ಉಸ್ತುವಾರಿ ಪ್ರತಾಪ ಅವರ ಗಮನಕ್ಕೆ ರೂಪೇಶ್‌ ಕುಮಾರ್‌ ತಂದಿದ್ದಾರೆ. ನಂತರ ಸಿಎಎಸ್‌ಒ, ಐಬಿ, ಬಿಡಿಡಿಎಸ್ ಮತ್ತು ಬಾಂಬ್ ನಿಷ್ಕ್ರಿಯ ದಳಕ್ಕೆ ಮಾಹಿತಿ ರವಾನೆ ಮಾಡಲಾಗಿದೆ. ವಾಯುಯಾನ ಭದ್ರತಾ ನಿಯಮದ ಪ್ರಕಾರ ಅಗತ್ಯ ಕ್ರಮಗಳನ್ನು ಅಧಿಕಾರಿಗಳು ಕೈಗೊಂಡಿದ್ದಾರೆ. ಗೋಕುಲ ರೋಡ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಂದೇಶ ಕಳುಹಿಸಿರುವ ದುಷ್ಕರ್ಮಿಗಳ ಪತ್ತೆಗಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ವಿದ್ಯುತ್ ತಂತಿ ತಗುಲಿ ಇಬ್ಬರು ಕಾರ್ಮಿಕರಿಗೆ ಗಾಯ

ಶಿವಮೊಗ್ಗ: ವಿದ್ಯುತ್ ತಂತಿ ತಗುಲಿ ಇಬ್ಬರು ಕಾರ್ಮಿಕರಿಗೆ ಗಾಯಗಳಾಗಿರುವ ಘಟನೆ ನಗರದ ಕಾಶಿಪುರದಲ್ಲಿ ನಡೆದಿದೆ. ಗಣೇಶ್ ಹಾಗೂ ರಾಜು ಗಾಯಾಳುಗಳು.

ಸೆಂಟ್ರಿಂಗ್ ಕೆಲಸ ಮಾಡುವ ವೇಳೆ ಪಕ್ಕದಲ್ಲೇ ಇದ್ದ ವಿದ್ಯುತ್ ತಂತಿಯನ್ನು ರಾಜು ಮುಟ್ಟಿದ್ದಾನೆ. ರಾಜುವನ್ನು ರಕ್ಷಿಸಲು ಹೋಗಿ ಗಣೇಶ್‌ಗೂ ಶಾಕ್‌ ಹೊಡೆದಿದೆ. ಹೀಗಾಗಿ ಗಾಯಗೊಂಡ ಇಬ್ಬರನ್ನೂ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Continue Reading

ಕ್ರೈಂ

Robbery Case: 30 ಸೆಕೆಂಡ್‌ನಲ್ಲಿ ಇಡೀ ಜ್ಯುವೆಲ್ಲರಿ ದರೋಡೆ, ಸಿಸಿಟಿವಿಯಲ್ಲಿ ಕೃತ್ಯ ಸೆರೆ

Robbery Case: ಕೇವಲ 30 ಸೆಕೆಂಡಿನಲ್ಲಿ 60 ಲಕ್ಷ ಮೌಲ್ಯದ ಚಿನ್ನಾಭರಣ ದರೋಡೆ ಮಾಡಲಾಗಿದೆ. ಸಿನಿಮಾ ಸ್ಟೈಲ್‌ನಲ್ಲಿ ಜುವೆಲ್ಲರಿ ಶಾಪ್‌ನಲ್ಲಿ ದರೋಡೆ ಮಾಡಲಾಗಿದೆ. ಮಾದನಾಯಕನಹಳ್ಳಿಯ ಲಕ್ಷ್ಮಿಪುರದ ಆಭರಣ ಅಂಗಡಿಯಲ್ಲಿ ಈ ಘಟನೆ ನಡೆದಿದ್ದು, ಗನ್ ತೋರಿಸಿ ಚಿನ್ನಾಭರಣ ದೋಚಿದ್ದಾರೆ.

VISTARANEWS.COM


on

jewellery robbery case
Koo

ಬೆಂಗಳೂರು: ರಾಜಧಾನಿಯ ಚಿನ್ನಾಭರಣದ (Jewelry) ಅಂಗಡಿಗೆ ನುಗ್ಗಿದ ಕಳ್ಳರು ಮಾಲೀಕರಿಗೆ ಗನ್ (gun point) ತೋರಿಸಿ ಕೇವಲ 30 ಸೆಕೆಂಡುಗಳಲ್ಲಿ ಸುಮಾರು 60 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಕದ್ದು (Robbery Case) ಪರಾರಿಯಾಗಿರುವ ಘಟನೆ ಬೆಂಗಳೂರಿನ (Bangalore Crime) ಮಾದನಾಯಕನಹಳ್ಳಿಯ ಲಕ್ಷ್ಮಿಪುರದಲ್ಲಿ ನಡೆದಿದೆ.

ಕೇವಲ 30 ಸೆಕೆಂಡಿನಲ್ಲಿ 60 ಲಕ್ಷ ಮೌಲ್ಯದ ಚಿನ್ನಾಭರಣ ದರೋಡೆ ಮಾಡಲಾಗಿದೆ. ಸಿನಿಮಾ ಸ್ಟೈಲ್‌ನಲ್ಲಿ ಜುವೆಲ್ಲರಿ ಶಾಪ್‌ನಲ್ಲಿ ದರೋಡೆ ಮಾಡಲಾಗಿದೆ. ಮಾದನಾಯಕನಹಳ್ಳಿಯ ಲಕ್ಷ್ಮಿಪುರದ ಆಭರಣ ಅಂಗಡಿಯಲ್ಲಿ ಈ ಘಟನೆ ನಡೆದಿದ್ದು, ಗನ್ ತೋರಿಸಿ ಚಿನ್ನಾಭರಣ ದೋಚಿದ್ದಾರೆ.

ಒಬ್ಬ ಕಳ್ಳ ಗನ್ ಹಿಡಿದು ಮಾಲೀಕರಿಗೆ ಬೆದರಿಕೆ ಹಾಕಿದ್ದು, ಮತ್ತೊಬ್ಬ ಚಿನ್ನಭಾರಣಗಳನ್ನು ಚೀಲಕ್ಕೆ ತುಂಬಿಕೊಂಡಿದ್ದ. ಇನ್ನೊಬ್ಬ ಕಳ್ಳ ಹೊರಗೆ ಬೈಕ್‌ನಲ್ಲಿ ಕಾಯುತ್ತಿದ್ದ. ಕೆಲವೇ ಸೆಕೆಂಡಿನಲ್ಲಿ ಚಿನ್ನಾಭರಣಗಳನ್ನು ದೋಚಿ ಅಲ್ಲಿಂದ ಪರಾರಿಯಾಗಿದ್ದಾರೆ. 750 ಗ್ರಾಂಗಿಂತ ಹೆಚ್ಚು ಚಿನ್ನ ಕದ್ದು ಅಲ್ಲಿಂದ ಕಣ್ಮುಚ್ಚಿ ತೆರೆಯುವಷ್ಟರಲ್ಲಿ ಎಸ್ಕೇಪ್‌ ಆಗಿದ್ದಾರೆ. ಈ ದರೋಡೆಕೋರರ ಕೃತ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಹುಬ್ಬಳ್ಳಿ ಏರ್‌ಪೋರ್ಟ್‌ ನಿರ್ದೇಶಕರಿಗೆ ಜೀವ ಬೆದರಿಕೆ, ʼಲಾಂಗ್ ಲಿವ್ ಪ್ಯಾಲೆಸ್ತೀನ್ʼ ಮೇಲ್‌ ಐಡಿಯಿಂದ ಸಂದೇಶ

ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣ ನಿರ್ದೇಶಕರಿಗೆ ಜೀವ ಬೆದರಿಕೆ (Life threat) ಸಂದೇಶ ಬಂದಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ʼಲಾಂಗ್ ಲಿವ್ ಪ್ಯಾಲೆಸ್ತೀನ್ʼ ಎಂಬ ಹೆಸರಿನ ಮೇಲ್ ಐಡಿಯಿಂದ ಬಂದಿರೋ ಬೆದರಿಕೆ ಸಂದೇಶ ಬಂದಿದ್ದು, ಈ ಬಗ್ಗೆ ಗೋಕುಲ ರೋಡ್ ಪೊಲೀಸ್‌ ಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಮಾನ ನಿಲ್ದಾಣದ ನಿರ್ದೇಶಕ ರೂಪೇಶ್‌ ಕುಮಾರ ಶ್ರೀಪಾದಗೆ ಬೆದರಿಕೆ ಮೇಲ್ ಬಂದಿದೆ. ʼಲಾಂಗ್ ಲಿವ್ ಪ್ಯಾಲೆಸ್ತೀನ್ʼ ಎಂಬ ಹೆಸರಿನ ಮೇಲ್ ಐಡಿಯಿಂದ ನಿರ್ದೇಶಕರ ಕಚೇರಿಯ ಮೇಲ್ ಐಡಿಗೆ ಸಂದೇಶ ಬಂದಿದ್ದು, ” ನಾವು ನಿಮ್ಮನ್ನು ನಾಶ ಮಾಡುತ್ತೇವೆ, ಬೆಂಕಿಯಲ್ಲಿ ಎಸೆಯುತ್ತೇವೆ, ಉಸಿರುಗಟ್ಟಿ ಸಾಯುತ್ತೀರಿ” ನೀವು ಮಾಡಿದ ಎಲ್ಲ ಕೆಟ್ಟ ಕೆಲಸಗಳಿಗೆ ಉತ್ತರವಿಲ್ಲ ಎಂದು ಭಾವಿಸಿದ್ದೀರಾ ಎಂದು ಬೆದರಿಕೆ ಸಂದೇಶ ಬಂದಿದೆ.

ಈ ಬಗ್ಗೆ ಟರ್ಮಿನಲ್‌ ಉಸ್ತುವಾರಿ ಪ್ರತಾಪ ಅವರ ಗಮನಕ್ಕೆ ರೂಪೇಶ್‌ ಕುಮಾರ್‌ ತಂದಿದ್ದಾರೆ. ನಂತರ ಸಿಎಎಸ್‌ಒ, ಐಬಿ, ಬಿಡಿಡಿಎಸ್ ಮತ್ತು ಬಾಂಬ್ ನಿಷ್ಕ್ರಿಯ ದಳಕ್ಕೆ ಮಾಹಿತಿ ರವಾನೆ ಮಾಡಲಾಗಿದೆ. ವಾಯುಯಾನ ಭದ್ರತಾ ನಿಯಮದ ಪ್ರಕಾರ ಅಗತ್ಯ ಕ್ರಮಗಳನ್ನು ಅಧಿಕಾರಿಗಳು ಕೈಗೊಂಡಿದ್ದಾರೆ. ಗೋಕುಲ ರೋಡ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಂದೇಶ ಕಳುಹಿಸಿರುವ ದುಷ್ಕರ್ಮಿಗಳ ಪತ್ತೆಗಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ | Actor Darshan: ರೇಣುಕಾಸ್ವಾಮಿ ಹಲ್ಲೆಗೆ ಬಳಸಿದ್ದ ʻಪೊಲೀಸ್ ಲಾಠಿʼ ಪತ್ತೆ! ʻಡಿ ಗ್ಯಾಂಗ್‌ʼಗೆ ಸಿಕ್ಕಿದ್ದು ಹೇಗೆ?

Continue Reading

ಸ್ಯಾಂಡಲ್ ವುಡ್

‌Actor Darshan: ರೇಣುಕಾಸ್ವಾಮಿಯನ್ನ ಹೀರೊ ಮಾಡೋದು ನಿಲ್ಲಿಸಿ, ದರ್ಶನ್‌ನ ಬಿಟ್ಟುಕೊಡಲ್ಲ ಎಂದ ಖ್ಯಾತ ನಿರೂಪಕಿ!

Actor Darshan: ರೇಣುಕಾಸ್ವಾಮಿ ಕೊಲೆ (Renuka Swamy Murder) ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ (Actor Darshan) ಮತ್ತು ಆತನ ಸಹಚರ ಪ್ರದೋಷ್‌ ಬಗ್ಗೆ ಮತ್ತೊಂದು ಕುತೂಹಲಕಾರಿ ವಿಚಾರ ಬೆಳಕಿಗೆ ಬಂದಿದೆ. ಇಬ್ಬರ ಬಳಿಯೂ ಪರವಾನಗಿ ಹೊಂದಿದ ಪಿಸ್ತೂಲ್‌ಗಳಿದ್ದು Licenced Pistol), ಲೋಕಸಭೆ ಚುನಾವಣೆ (Lok Sabha Election 2024) ವೇಳೆ ಇಬ್ಬರೂ ಅವುಗಳನ್ನು ಪೊಲೀಸರ ಬಳಿ ಠೇವಣಿ (deposit) ಇರಿಸಿರಲಿಲ್ಲ ಎಂಬುದು ಗೊತ್ತಾಗಿದೆ. ಇದೀಗ ಅವುಗಳನ್ನು ವಶಕ್ಕೆ ಪಡೆಯಲಾಗುತ್ತಿದೆ.

VISTARANEWS.COM


on

Actor Darshan support by anchor hemalatha
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿಯ ಭೀಕರ (Actor Darshan) ಹತ್ಯೆಯಲ್ಲಿ ಪವಿತ್ರಾ ಗೌಡ ಹಾಗೂ ದರ್ಶನ್​ 14ದಿನಗಳ ವರೆಗೆ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಹಲವರು ನಟನ ಬೆಂಬಲಕ್ಕೆ ನಿಂತಿದ್ದರು. ನಟಿ ಸಂಜನಾ ಗಲ್ರಾನಿ ಅವರು ಕೂಡ ಸ್ಪಷ್ಟ ಅಭಿಪ್ರಾಯ ನೀಡಿ ದರ್ಶನ್ ತೂಗುದೀಪ ಬೆಂಬಲಕ್ಕೆ ನಿಂತಿದ್ದರು. ಇದರ ಬೆನ್ನಲ್ಲೇ ಕನ್ನಡದ ಖ್ಯಾತ ನಿರೂಪಕಿ ಹೇಮಾಲತಾ ತಮ್ಮ ಇನ್‌ಸ್ಟಾ ಖಾತೆಯಲ್ಲಿ ದರ್ಶನ್‌ ಜೊತೆಗಿನ ಫೋಟೋ ಹಂಚಿಕೊಂಡು ಮೃತ ರೇಣುಕಾಸ್ವಾಮಿಯನ್ನು ಹೀರೋ ಮಾಡುವುದನ್ನು ನಿಲ್ಲಿಸಿ ಎಂದು ಬರೆದುಕೊಂಡಿದ್ದಾರೆ.

ನಿರೂಪಕಿ ಹೇಮಾಲತಾ ಪೋಸ್ಟ್‌ನಲ್ಲಿ ʻʻಸಾವಿರ ಜನ ಸಾವಿರ ಮಾತನಾಡಲಿ.. ಒಮ್ಮೆ ಬೆಳೆದ ಸ್ನೇಹಕ್ಕೆ ಕಡಲಿನಸ್ಟಿರುವ ಪ್ರೀತಿಗೆ ನಾವೆಲ್ಲರೂ ಋಣಿಗಳೇ.. ಸ್ನೇಹಾವೆಂಬ ಸಂಕೋಲೆಯಲಿ ಒಮ್ಮೆ ಸಿಕ್ಕಿಕೊಂಡರೆ ಕೊಂಡಿ ಕಳಚುವುದಿಲ್ಲ…
ಅಂದಿಗೂ ಇಂದಿಗೂ ಎಂದೆಂದಿಗೂ ಮರೆಯುವುದಿಲ್ಲ, ಬಿಡುವುದಿಲ್ಲ, ಬಿಟ್ಟುಕೊಡುವುದಿಲ್ಲ. ಈ ಘಟನೆಗೆ ಏನು ಹೇಳಬೇಕು ಎಂದು ತಿಳಿಯುತ್ತಿಲ್ಲ, ಕಾನೂನಿನ ಮುಖಾಂತರ ಅಂತ್ಯವನ್ನಾಡಿ ಎಲ್ಲಾ ಕಳಂಕವನ್ನು ತೊಳೆದುಕೊಂಡು ಹೊರಗೆ ಬನ್ನಿ. ನಿಮ್ಮ ಮೇಲಿರುವ ಪ್ರೀತಿ ಗೌರವ ಎಂದಿಗೂ ಕಮ್ಮಿ ಆಗುವುದಿಲ್ಲ. ಅಲ್ಲದೇ ಕೊಲೆಯಾಗಿರುವ ರೇಣುಕಾಸ್ವಾಮಿಯನ್ನು ಹೀರೋ ಎನ್ನುವಂತೆ ಬಿಂಬಿಸಬೇಡಿʼʼ ಎಂದು ನಿರೂಪಕಿ ಹೇಮಾಲತಾ ಮನವಿ ಮಾಡಿದ್ದಾರೆ.

ಇದನ್ನೂ ಓದಿ: Actor Darshan: ರೇಣುಕಾಸ್ವಾಮಿ ಹಲ್ಲೆಗೆ ಬಳಸಿದ್ದ ʻಪೊಲೀಸ್ ಲಾಠಿʼ ಪತ್ತೆ! ʻಡಿ ಗ್ಯಾಂಗ್‌ʼಗೆ ಸಿಕ್ಕಿದ್ದು ಹೇಗೆ?

ಇನ್ನು ಈ ಹಿಂದೆ ಬಿಗ್‌ಬಾಸ್‌ ಸ್ಪರ್ಧಿ ಇಶಾನಿ ದರ್ಶನ್‌ ಜೊತೆಗಿನ ಫೋಟೋ ಹಂಚಿಕೊಂಡು, ದರ್ಶನ್ ಸರ್ ತಪ್ಪು ಮಾಡಿದ್ದರೆ ಅವರಿಗೆ ಶಿಕ್ಷೆಯಾಗಲಿ ಎಂದಿದ್ದಾರೆ. ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಇಶಾನಿ, ನಿಜಕ್ಕೂ ಇದು ಅಘಾತಕಾರಿ ಸುದ್ದಿ. ಒಬ್ಬ ಅಣ್ಣನ ರೂಪದಲ್ಲಿ ನಾನು ಕಂಡ ದರ್ಶನ್ ಸರ್ ನಿಜಕ್ಕೂ ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ಕೇಳಿದಾಗ ನಂಬಲು ಸಾಧ್ಯವಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ದರ್ಶನ್‌, ಪ್ರದೋಷ್‌ನಿಂದ ಮೂರು ಪಿಸ್ತೂಲ್‌ ವಶಕ್ಕೆ

ರೇಣುಕಾಸ್ವಾಮಿ ಕೊಲೆ (Renuka Swamy Murder) ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ (Actor Darshan) ಮತ್ತು ಆತನ ಸಹಚರ ಪ್ರದೋಷ್‌ ಬಗ್ಗೆ ಮತ್ತೊಂದು ಕುತೂಹಲಕಾರಿ ವಿಚಾರ ಬೆಳಕಿಗೆ ಬಂದಿದೆ. ಇಬ್ಬರ ಬಳಿಯೂ ಪರವಾನಗಿ ಹೊಂದಿದ ಪಿಸ್ತೂಲ್‌ಗಳಿದ್ದು Licenced Pistol), ಲೋಕಸಭೆ ಚುನಾವಣೆ (Lok Sabha Election 2024) ವೇಳೆ ಇಬ್ಬರೂ ಅವುಗಳನ್ನು ಪೊಲೀಸರ ಬಳಿ ಠೇವಣಿ (deposit) ಇರಿಸಿರಲಿಲ್ಲ ಎಂಬುದು ಗೊತ್ತಾಗಿದೆ. ಇದೀಗ ಅವುಗಳನ್ನು ವಶಕ್ಕೆ ಪಡೆಯಲಾಗುತ್ತಿದೆ.

ದರ್ಶನ್ ಬಳಿ ಎರಡು ಯುಎಸ್ ಮೇಡ್ ಪಿಸ್ತೂಲ್‌ಗಳು, ಪ್ರದೋಷ್ ಬಳಿ ಒಂದು ಲೈಸೆನ್ಸ್ ಪಿಸ್ತೂಲ್‌ ಇವೆ. ಕಳೆದ ಲೋಕಸಭಾ ಚುನಾವಣಾ ವೇಳೆ ಲೈಸೆನ್ಸ್ ಪಡೆದಿರುವ ಎಲ್ಲಾ ಶಸ್ತ್ರಾಸ್ತ್ರಗಳನ್ನು ಪೊಲೀಸರಿಗೆ ಒಪ್ಪಿಸಬೇಕಿತ್ತು. ಆದರೆ ಚುನಾವಾಣೆ ವೇಳೆ ಶಸ್ತ್ರಾಸ್ತ್ರ ಠೇವಣಿಯಿಂದ ದರ್ಶನ್ ಮತ್ತು ಪ್ರದೋಷ್ ವಿನಾಯಿತಿ ಪಡೆದಿದ್ದರು.

ಬೆಂಗಳೂರು ನಗರಾದ್ಯಂತ 7830 ಗನ್ ಲೈಸೆನ್ಸ್ ಪರವಾನಗಿದಾರರಿದ್ದಾರೆ. ಈ ಪೈಕಿ ದರ್ಶನ್ ಮತ್ತು ಪ್ರದೋಷ್ ಸೇರಿ 277 ಜನರಿಗೆ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ನೀಡಲಾಗಿತ್ತು. ಉಳಿದ 7553 ಪರವಾನಗಿ ಹೊಂದಿದ್ದ ಶಸ್ತ್ರಾಸ್ತ್ರಗಳನ್ನು ಪೊಲೀಸರು ಠೇವಣಿ ಇರಿಸಿಕೊಂಡಿದ್ದರು. ಆದರೆ ನಟ ದರ್ಶನ್ ಮತ್ತು ಪ್ರದೋಷ್ ಪಿಸ್ತೂಲ್ ವಾಪಸ್ ಮಾಡದೇ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ಪಡೆದಿದ್ದಾರೆ.

ಬೆಂಗಳೂರಿನ 277 ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ಪಡೆದವರಲ್ಲಿ ದರ್ಶನ್ ಮತ್ತು ಪ್ರದೋಷ್‌ಗೂ ವಿನಾಯಿತಿ ನೀಡಲಾಗಿದ್ದು, ಬೆಂಗಳೂರು ಪೊಲೀಸ್ ಕಮೀಷನರ್ ಅವರಿಂದಲೇ ವಿನಾಯಿತಿ ನೀಡಿ ಆದೇಶ ದೊರೆತಿದೆ. ಕಮೀಷನರ್ ಬಿ. ದಯಾನಂದ ಶಸ್ತ್ರಾಸ್ತ್ರ ಠೇವಣಿ ಸ್ಕ್ರೀನಿಂಗ್ ಕಮಿಟಿಯ ಅಧ್ಯಕ್ಷರಾಗಿದ್ದರು. ಅತಿ ಗಣ್ಯರಿಗೆ ನೀಡುವ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿಯಲ್ಲಿ ನಟ ದರ್ಶನ್ ಮತ್ತು ಪ್ರದೋಷ್ ಕೂಡ ಅವಕಾಶ ಪಡೆದಿದ್ದು, ಕಳೆದ ಮಾರ್ಚ್ 27ರಂದು ವಿನಾಯಿತಿ ನೀಡಿ ಕಮೀಷನರ್ ದಯಾನಂದ್ ಆದೇಶ ನೀಡಿದ್ದರು.

Continue Reading
Advertisement
Pavithra Gowda lipstick case Notice to PSI
ಕ್ರೈಂ11 mins ago

Pavithra Gowda: ಪವಿತ್ರಾಗೆ ಲಿಪ್‌ಸ್ಟಿಕ್‌ ಹಚ್ಚಲು ಅವಕಾಶ ಮಾಡಿಕೊಟ್ಟಿದ್ದ ಮಹಿಳಾ `PSI’ಗೆ ನೋಟಿಸ್‌!

PGCET 2024
ಕರ್ನಾಟಕ21 mins ago

PGCET 2024: ಪಿಜಿಸಿಇಟಿ ಪರೀಕ್ಷೆ ಮುಂದೂಡಿಕೆ; ಶೀಘ್ರದಲ್ಲೇ ಹೊಸ ದಿನಾಂಕ ಪ್ರಕಟ

Liquor Price karnataka
ಕರ್ನಾಟಕ23 mins ago

Liquor Price Karnataka: ಶ್ರೀಮಂತರಿಗೆ ಮತ್ತು, ಬಡವರಿಗೆ ಕುತ್ತು! ಪ್ರೀಮಿಯಂ ಮದ್ಯ ದರ ಇಳಿಕೆ, ಬಡವರ ಎಣ್ಣೆ ರೇಟ್‌ ಏರಿಕೆ?

Lok Sabha Speaker
ದೇಶ38 mins ago

Lok Sabha Speaker: ಎರಡನೇ ಬಾರಿ ಸ್ಪೀಕರ್‌ ಆದ ಓಂ ಬಿರ್ಲಾಗೆ ಮೋದಿ, ರಾಹುಲ್‌ ಅಭಿನಂದನೆ

Tharun Sudhir and sonal monteiro love story support By Darshan
ಸ್ಯಾಂಡಲ್ ವುಡ್42 mins ago

Tharun Sudhir: ದರ್ಶನ್‌ ತಮಾಷೆಯಿಂದಲೇ ಹುಟ್ಟಿತು ತರುಣ್‌- ಸೋನಲ್‌ ಪ್ರೀತಿ? ಇಬ್ಬರ ಲವ್ ಸ್ಟೋರಿ ಶುರುವಾಗಿದ್ದೇಗೆ?

Kenya Violence
ವಿದೇಶ50 mins ago

Kenya Violence: ಕೀನ್ಯಾದಲ್ಲಿ ಭುಗಿಲೆದ್ದ ಹಿಂಸಾಚಾರ; ಭಾರತೀಯರಿಗೆ ಎಚ್ಚರಿಕೆ ನೀಡಿದ ಹೈಕಮಿಷನ್

ಕಥೆಕೂಟ literature meet
ಕಲೆ/ಸಾಹಿತ್ಯ57 mins ago

ಕಥೆ ನಿಜ, ಕಥೆಗಾರ ಸುಳ್ಳು: ಕಥೆಕೂಟ ಸಮಾವೇಶದಲ್ಲಿ ಟಿಎನ್‌ ಸೀತಾರಾಮ್‌

CM Siddaramaiah
ಕರ್ನಾಟಕ1 hour ago

CM Siddaramaiah: ರಾಹುಲ್ ಗಾಂಧಿ ವಿಪಕ್ಷ ನಾಯಕರಾಗಿರೋದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು ಎಂದ ಸಿಎಂ

Jayam Ravi's wife Aarti Ravi removes all her Instagram photos
ಕಾಲಿವುಡ್1 hour ago

Jayam Ravi: ಜಯಂ ರವಿ ದಾಂಪತ್ಯದಲ್ಲಿ ಬಿರುಕು? ಡಿವೋರ್ಸ್‌ ಹಾದಿಯಲ್ಲಿ ಮತ್ತೊಂದು ಸ್ಟಾರ್‌ ಜೋಡಿ!

Gold Rate Today
ಚಿನ್ನದ ದರ1 hour ago

Gold Rate Today: ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌; ಚಿನ್ನದ ದರ ಇಳಿಕೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌