Site icon Vistara News

Crime News: ಗಾಂಜಾ ಮತ್ತಿನಲ್ಲಿ ಕಾರು ಓಡಿಸಿ ಬೈಕ್‌ಗಳಿಗೆ ಗುದ್ದಿದ ಚಾಲಕ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕಳ್ಳರು

Crime News

Crime News

ಕೊಪ್ಪಳ: ಗಾಂಜಾ ಮತ್ತಿನಲ್ಲಿ ಚಾಲಕನೋರ್ವ ಕಾರು ಓಡಿಸಿ ಬೈಕ್‌ಗಳಿಗೆ ಗುದ್ದಿದ ಘಟನೆ ಕೊಪ್ಪಳ ನಗರದ ಸಿಂಪಿ ಲಿಂಗಣ್ಣ ರಸ್ತೆಯಲ್ಲಿ ಶನಿವಾರ ರಾತ್ರಿ ನಡೆದಿದೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಬೈಕ್‌ಗಳಿಗೆ ಹಾನಿಯಾಗಿದ್ದು, ಪೊಲೀಸರು ಕಾರು ಚಾಲಕನ್ನು ವಶಕ್ಕೆ ಪಡೆದಿದ್ದಾರೆ (Crime News).

ಕಾರು ಚಾಲಕನನ್ನು ವಿಶ್ವಾಸ್‌ ಎಂದು ಗುರುತಿಸಲಾಗಿದೆ. ಈತ ಕಾರು ಚಲಾಯಿಸಿ ಬಾರ್ ಆ್ಯಂಡ್ ರೆಸ್ಟೋರೆಂಟ್ ಮುಂದೆ‌ ನಿಲ್ಲಿಸಿದ್ದ ಬೈಕ್‌ಗಳಿಗೆ ಗುದ್ದಿದ್ದಾನೆ. ಈ ವೇಳೆ ಈತ ಅಮಲಿನಲ್ಲಿದ್ದ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಘಟನೆ ವಿವರ

ಶನಿವಾರ ರಾತ್ರಿ ವಿಶ್ವಾಸ್‌ ಕಾರು ಚಲಾಯಿಸಿಕೊಂಡು ಬಂದಿದ್ದು, ಈ ವೇಳೆ ಆತ ಅಮಲಿನಲ್ಲಿದ್ದುದರಿಂದ ನಿಯಂತ್ರಣ ಸಿಗದೆ ಬಾರ್‌ ಮುಂದೆ ನಿಲ್ಲಿಸಿದ್ದ ಸುಮಾರು 10 ಬೈಕ್‌ಗಳಿಗೆ ಗುದ್ದಿದ್ದಾನೆ. ಇದರಿಂದ ಬೈಕ್‌ಗಳಿಗೆ ಹಾನಿಯಾಗಿದ್ದು, ಬೈಕ್‌ ಸವಾರರು ಆತನೊಂದಿಗೆ ವಾಗ್ವಾದ ನಡೆಸಿದರು. ವಿಶ್ವಾಸ್‌ ಗಾಂಜಾ ಸೇವಿಸಿದ ಮತ್ತಿನಲ್ಲಿ ಕಾರು ಚಲಾಯಿಸಿ ಗುದ್ದಿದ್ದಾನೆ ಎಂದು ಆರೋಪಿಸಿ ಬೈಕ್‌ ಸವಾರರು ಆತನನ್ನು ತರಾಟೆಗೆ ತೆಗೆದುಕೊಂಡರು.

ಬಳಿಕ ಘಟನಾ ಸ್ಥಳಕ್ಕೆ ನೂತನ ಎಸ್‌ಪಿ ಡಾ. ರಾಮ್ ಅರಸಿದ್ದಿ ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಿಸಿದರು. ಸದ್ಯ ಕಾರು ಚಾಲಕ ವಿಶ್ವಾಸನನ್ನು ನಗರ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಗದಗ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕಳ್ಳರು

ಗದಗ: ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಮ್ಮಿಗಿ ಗ್ರಾಮದಲ್ಲಿ ಕೆಲವು ತಿಂಗಳಿಂದ ಸಾರ್ವಜನಿಕರ ನೆಮ್ಮದಿ ಕೆಡಿಸಿದ್ದ ಕಳ್ಳರು ಕೊನೆಗೂ ಸಿಕ್ಕಿ ಬಿದ್ದಿದ್ದಾರೆ. ಮಾತ್ರವಲ್ಲ ಅವರನ್ನು ಕೈಯಾರೆ ಹಿಡಿದು ಗ್ರಾಮಸ್ಥರು ಕೂಡಿ ಹಾಕಿ ಪೊಲೀಸರ ವಶಕ್ಕೆ ನೀಡಿ ತಕ್ಕ ಪಾಠ ಕಲಿಸಿದ್ದಾರೆ.

ಹಮ್ಮಿಗಿ ಗ್ರಾಮದಲ್ಲಿ ಕೆಲವು ತಿಂಗಳಿಂದ ಕಳ್ಳತನ ನಿರಂತವಾಗಿ ನಡೆಯುತ್ತಿತ್ತು. ರೈತರ ಟ್ರ್ಯಾಕ್ಟರ್ ಸಾಮಗ್ರಿ, ಮೋಟರ್, ಪಂಪ್ ಸೆಟ್ ಕಳವಾಗುತ್ತಿದ್ದವು. ಮಾತ್ರವಲ್ಲ ಮೇಕೆ, ಕುರಿಗಳನ್ನೂ ಕಳ್ಳರು ಹೊತ್ತೊಯ್ಯುತ್ತಿದ್ದರು. ಇದು ಗ್ರಾಮಸ್ಥರಿಗೆ ತಲೆ ನೋವಾಗಿ ಪರಿಣಮಿಸಿತ್ತು. ಮುಂಡರಗಿ ಪೊಲೀಸ್ ಠಾಣೆಗೆ ಸಾಕಷ್ಟು ಬಾರಿ ದೂರು ನೀಡಿದ್ದರೂ ಕಳವು ಪ್ರಕರಣ ನಿಯಂತ್ರಣಕ್ಕೆ ಬಂದಿರಲಿಲ್ಲ.

ಪ್ರತಿ ಬಾರಿಯೂ ತಪ್ಪಿಸಿಕೊಳ್ಳುತ್ತಿದ್ದ ಕಳ್ಳರ ಅದೃಷ್ಟ ಶನಿವಾರ ಕೈಕೊಟ್ಟಿತ್ತು. ಎಂದಿನಂತರ ಕಳ್ಳತನಕ್ಕೆ ಇಳಿದ ಗ್ಯಾಂಗ್‌ ಅನ್ನು ಗ್ರಾಮಸ್ಥರು ರೆಡ್‌ ಹ್ಯಾಂಡಾಗಿ ಹಿಡಿದು ಗ್ರಾಮ ಪಂಚಾಯತ್‌ನಲ್ಲಿ ಕೂಡಿ ಹಾಕಿ ಬಳಿಕ ಪೊಲೀಸರಿಗೆ ಒಪ್ಪಿಸಿದರು. ಮುಂಡರಗಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ತನಿಖೆ ನಡೆಲಾಗುತ್ತಿದೆ. ʼʼಗ್ರಾಮದಲ್ಲಿ ಕೆಲವು ತಿಂಗಳಿಂದ ನಿರಂತರ ಕಳ್ಳತನ ನಡೆಯುತ್ತಿತ್ತು. ಪೊಲೀಸ್‌ ಠಾಣೆಗೆ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಆದರೆ ಇದೀಗ ಕಳ್ಳರ ಗ್ಯಾಂಗ್‌ ಸಿಕ್ಕಿ ಬಿದ್ದಿದೆ. ಅವರನ್ನು ರೆಡ್‌ ಹ್ಯಾಂಡಾಗಿ ಹಿಡಿದು ಗ್ರಾಮ ಪಂಚಾಯತ್‌ ಕಚೇರಿಯಲ್ಲಿ ಕೂಡಿ ಹಾಕಿ ಬಳಿಕ ಪೊಲೀಸರಿಗೆ ಒಪ್ಪಿಸಿದ್ದೇವೆʼʼ ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Indecent Behaviour: ಮಹಿಳೆಯರಿಗೆ ಮರ್ಮಾಂಗ ತೋರಿಸಿ, ಅಸಭ್ಯ ವರ್ತನೆ; ಕಾಮುಕನಿಗೆ ಹಿಗ್ಗಾಮುಗ್ಗಾ ಬಾರಿಸಿದ ಜನ!

Exit mobile version