ಬೆಂಗಳೂರು: ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (National crime records bureau- NCRB) ಇತ್ತೀಚೆಗಿನ ಅಪರಾಧಗಳ ಅಂಕಿ ಅಂಶವನ್ನು ಪ್ರಕಟಿಸಿದ್ದು, ಕಳೆದ ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ ಅಪರಾಧ ಪ್ರಕರಣಗಳ (crimes) ಸಂಖ್ಯೆ ಮಿತಿ ಮೀರಿ ಹೆಚ್ಚಿರುವುದು ಕಂಡುಬಂದಿದೆ. ಈ ಕುರಿತ ವರದಿಯನ್ನು ʼಎಕ್ಸ್ʼನಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್ (JDS), ʼರಾಜ್ಯದಲ್ಲಿ ಗೃಹ ಇಲಾಖೆ ಇದೆಯೇʼ (Home ministry) ಎಂದು ಪ್ರಶ್ನಿಸಿದೆ.
ರಾಜ್ಯದಲ್ಲಿ ಕಳೆದ ಜನವರಿಯಿಂದ ಏಪ್ರಿಲ್‌ವರೆಗೆ ಏರಿಕೆ ಪ್ರಮಾಣದಲ್ಲಿ ಕೊಲೆ (murder), ಅತ್ಯಾಚಾರ (physical abuse), ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು (Pocso) ನಡೆದಿವೆ. ಕಳೆದ ಮೂರು ವರ್ಷಗಳಲ್ಲಿ ಕೊಲೆ, ಅತ್ಯಾಚಾರ, ಪೋಕ್ಸೋ ಕೇಸ್ ಹೆಚ್ಚಾಗಿವೆ. ಅಲ್ಲದೇ ಎನ್‌ಡಿಪಿಎಸ್ ಅಂದರೆ ಡ್ರಗ್ಸ್ ಕೇಸುಗಳು ಅಧಿಕವಾಗಿವೆ. ಲೈಂಗಿಕ ದೌರ್ಜನ್ಯ ಹಾಗೂ ಸೈಬರ್ ವಂಚನೆ (cyber crime) ಗಗನಕ್ಕೆ ಏರಿವೆ. ಹಲ್ಲೆ, ಮಾರಣಾಂತಿಕ ಹಲ್ಲೆ ಕೇಸ್‌ಗಳು ಅಧಿಕವಾಗುತ್ತಾ ಸಾಗುತ್ತಿವೆ.
ಸ್ತ್ರೀಯರ ಮೇಲೆ ನಡೆಯುವ ಅಪರಾಧಗಳ ಸಂಖ್ಯೆ ಹೆಚ್ಚಿದೆ. ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ, ಅಂಜಲಿ ಕೊಲೆ ಪ್ರಕರಣ, ಕೊಡಗಿನ ಮೀನಾ ಕೊಲೆ ಪ್ರಕರಣಗಳು ಇದಕ್ಕೆ ನಿದರ್ಶನಗಳಾಗಿವೆ. ಇದನ್ನು ನೋಡುತ್ತಿದ್ದರೆ ರಾಜ್ಯದಲ್ಲಿ ಜನರಿಗೆ ರಕ್ಷಣೆಯೇ ಇಲ್ಲವೇ ಎಂಬ ಪ್ರಶ್ನೆ ಮೂಡುವಂತಿದೆ.
ರಾಜ್ಯದಲ್ಲಿ ಕಳೆದ ನಾಲ್ಕು ತಿಂಗಳ ಅಪರಾಧ ಪ್ರಮಾಣ ಹೀಗಿದೆ:
ಕೊಲೆಗಳು | 430 |
ಪೋಕ್ಸೋ ಕೇಸ್ | 1262 |
ಅತ್ಯಾಚಾರ | 198 |
ಹಲ್ಲೆ | 6063 |
ಡ್ರಗ್ಸ್ | 1144 |
ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ | 2327 |
ಸೈಬರ್ ಅಪರಾಧ | 7421 |
ವಂಚನೆ | 2243 |
ರಾಬರಿ | 450 |
ಡಕಾಯಿತಿ | 68 |
ರಾಷ್ಟ್ರೀಯ ಕ್ರೈಂ ರೆಕಾರ್ಡ್ ಬ್ಯೂರೋ ಅಂಕಿ ಅಂಶಗಳಲ್ಲಿ ರಾಜ್ಯದ ಅಪರಾಧ ಕೃತ್ಯಗಳ ಬಗ್ಗೆ ವಿವರ ತೆರೆದಿಟ್ಟಿದೆ. ಕಳೆದ ಮೂರು ವರ್ಷಗಳಲ್ಲಿ ಅಪರಾಧ ಪ್ರಕರಣಗಳು ಏರಿಕೆ ಕಂಡಿವೆ. ಕ್ರೈಂ ರೆಕಾರ್ಡ್ಸ್ ಬ್ಯೂರೋ ಅಂಕಿ ಅಂಶ ಹೀಗಿವೆ:
ಅಪರಾಧ | 2022 | 2023 | 2024 ಏಪ್ರಿಲ್‌ವರೆಗೆ |
ಕೊಲೆ | 1370 | 1295 | 430 |
ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣ (ಪೋಕ್ಸೋ) | 3192 | 3856 | 1262 |
ಅತ್ಯಾಚಾರ ಪ್ರಕರಣಗಳು | 537 | 609 | 198 |
ಹಲ್ಲೆ ಕೇಸ್ | 15372 | 17439 | 6063 |
ಡ್ರಗ್ಸ್ | 6460 | 6764 | 1144 |
ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಕೇಸ್ | 5862 | 6486 | 2327 |
ಸೈಬರ್ ಅಪರಾಧ ಪ್ರಕರಣಗಳು | 12557 | 21895 | 7421 |
ವಿವಿಧ ರೀತಿಯ ವಂಚನೆಗಳು | 6411 | 6921 | 2243 |
ರಾಬರಿಗಳು | 1069 | 1248 | 450 |
ಡಕಾಯಿತಿಗಳು | 217 | 180 | 68 |
ಗೃಹ ಇಲಾಖೆ ಇದೆಯಾ?
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿದೆ. ಹಾದಿಬೀದಿಯಲ್ಲಿ ಕೊಲೆಗಳಾಗುತ್ತಿವೆ. ರಾಜ್ಯವು ಅತ್ಯಾಚಾರಿಗಳ ಆಡಂಬೋಲವಾಗಿದೆ. ಬೆಂಗಳೂರು ಮಹಾನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ. ಕೇವಲ 4 ತಿಂಗಳಲ್ಲಿ ಇಷ್ಟೆಲ್ಲಾ ನಡೆದಿದೆ!! 1/2#ಜನರಿಗಿಲ್ಲ_ನೆಮ್ಮದಿಯ_ಗ್ಯಾರಂಟಿ pic.twitter.com/iu3tqqEYZ3
— Janata Dal Secular (@JanataDal_S) May 18, 2024
“ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿದೆ. ಹಾದಿಬೀದಿಯಲ್ಲಿ ಕೊಲೆಗಳಾಗುತ್ತಿವೆ. ರಾಜ್ಯವು ಅತ್ಯಾಚಾರಿಗಳ ಆಡಂಬೋಲವಾಗಿದೆ. ಬೆಂಗಳೂರು ಮಹಾನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ. ಕೇವಲ 4 ತಿಂಗಳಲ್ಲಿ ಇಷ್ಟೆಲ್ಲಾ ನಡೆದಿದೆ! ರಾಜ್ಯ ಗೃಹ ಇಲಾಖೆ ಎನ್ನುವುದು ಕೆಲಸ ಮಾಡುತ್ತಿದೆಯಾ? ಅಥವಾ ನಿದ್ದೆ ಮಾಡುತ್ತಿದೆಯಾ? ದಯಮಾಡಿ ಹೇಳುವಿರಾ @DrParameshwara ಅವರೇ?” ಎಂದು ಜೆಡಿಎಸ್ ಅಧಿಕೃತ ಖಾತೆಯಿಂದ ಸೋಶಿಯಲ್ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಲಾಗಿದೆ.
ಇದನ್ನೂ ಓದಿ: Prajwal Revanna Case: ಪೆನ್‌ಡ್ರೈವ್ ಕೇಸ್‌ನಲ್ಲಿ ಶಾಮೀಲಾಗಲು ಡಿಕೆಶಿಯಿಂದ 100 ಕೋಟಿ ರೂಪಾಯಿ ಆಫರ್; ದೇವರಾಜೇಗೌಡ ಆರೋಪ