ಕೊಡಗು: ಕಾಫಿ ತೋಟದ ಮಧ್ಯೆ ನೇಣು ಬಿಗಿದು ವ್ಯಕ್ತಿಯೊಬ್ಬ ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾಣೆ. ಮಾದಪುರ ಸಮೀಪದ ಗರಗಂದೂರು ಗ್ರಾಮದ ಮಧು ಮೃತ ದುರ್ದೈವಿ. ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ವಸಮೀಪದ 7ನೇ ಹೊಸಕೋಟೆಯಲ್ಲಿ ಘಟನೆ (Dead Body Found) ನಡೆದಿದೆ.
ಕಾವೇರಿ ಎಸ್ಟೇಟ್ ಸಮೀಪದ ರಸ್ತೆ ಬದಿಯಲ್ಲಿ ಮಧು ತನ್ನ ಬೈಕ್ ನಿಲ್ಲಿಸಿ ನಂತರ ತೋಟಕ್ಕೆ ತೆರಳಿ, ಅಲ್ಲಿದ್ದ ಮರದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಧು ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕಾರ್ಮಿಕರು ಮೃತದೇಹವನ್ನು ಕಂಡು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ಇದನ್ನೂ ಓದಿ: Assault Case : ವಿಕೋಪಕ್ಕೆ ತಿರುಗಿದ ಜಗಳ; ಕಪಾಳಮೋಕ್ಷಕ್ಕೆ ವ್ಯಕ್ತಿ ಬಲಿ
ಕೆರೆಯಲ್ಲಿ ತೇಲುತ್ತಿದ್ದ ಅಪರಿಚಿತ ಶವ
ಬೆಂಗಳೂರು ಹೊರವಲಯದ ಆನೇಕಲ್ ಪಟ್ಟಣದ ದೊಡ್ಡಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಮೀನು ಹಿಡಿಯಲು ಹೋಗಿ ಕೆರೆಗೆ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. 40 ವರ್ಷ ವಯಸ್ಸಿನ ಆಸುಪಾಸಿನಲ್ಲಿರುವ ವ್ಯಕ್ತಿಯ ಮೃತದೇಹವಾಗಿದ್ದು, ಗುರುತು ಪತ್ತೆಯಾಗಿಲ್ಲ.
ಕೆರೆಯಲ್ಲಿ ಶವ ತೇಲುತ್ತಿದ್ದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಆನೇಕಲ್ ಪೊಲೀಸರು, ಕೆರೆಯಿಂದ ಮೃತದೇಹವನ್ನು ಹೊರತೆಗೆದಿದ್ದಾರೆ. ಸದ್ಯ ಇದು ಆಕಸ್ಮಿಕ ಸಾವೋ ಅಥವಾ ಕೊಲೆಯೋ ಎಂಬುದನ್ನು ತಿಳಿಯಲು ಮೃತದೇಹವವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಜತೆಗೆ ಮೃತನ ಗುರುತು ಪತ್ತೆಗೆ ಮುಂದಾಗಿದ್ದಾರೆ. ಆನೇಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಕ್ಷುಲ್ಲಕ ಕಾರಣಕ್ಕೆ ಪತ್ನಿ ಮೇಲೆ ಕಲ್ಲು ಎತ್ತಿ ಹಾಕಿದ ದುಷ್ಟ ಪತಿ
ಬೆಂಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪತಿಯೊಬ್ಬ ಪತ್ನಿ ಮೇಲೆ ಕಲ್ಲು ಎತ್ತಿ ಹಾಕಿರುವ ಘಟನೆ ನಡೆದಿದೆ. ಅನಿಲ್ ಎಂಬಾತ ಪತ್ನಿ ದೀಪಿಕಾ ಮೇಲೆ ಕಲ್ಲು ಎತ್ತು ಹಾಕಿದ್ದಾನೆ. ನಿನ್ನೆ ಭಾನುವಾರ ರಾತ್ರಿ ತಿಂಡ್ಲು ಸರ್ಕಲ್ ಬಳಿ ಇರುವ ಮನೆಯಲ್ಲಿ ಘಟನೆ ನಡೆದಿದೆ. ದೀಪಿಕಾ ಸ್ಥಿತಿ ತೀರ ಗಂಭೀರವಾಗಿದ್ದು, ವಿಕ್ಟೋರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಸದ್ಯ ಕೊಡಿಗೇಹಳ್ಳಿ ಠಾಣಾ ಪೊಲೀಸರು ಆರೋಪಿ ಅನಿಲ್ನನ್ನು ಬಂಧಿಸಿದ್ದಾರೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ