Death Threat: ಮೋದಿ, ಯೋಗಿಗೆ ಜೀವ ಬೆದರಿಕೆ; ಕರೆ ಮಾಡಿದ ಕಮ್ರಾನ್ ಖಾನ್‌ ಯಾರು? Vistara News

ಕ್ರೈಂ

Death Threat: ಮೋದಿ, ಯೋಗಿಗೆ ಜೀವ ಬೆದರಿಕೆ; ಕರೆ ಮಾಡಿದ ಕಮ್ರಾನ್ ಖಾನ್‌ ಯಾರು?

Death Threat: ಮುಂಬೈ ಪೊಲೀಸ್‌ ಕಂಟ್ರೋಲ್‌ ರೂಮ್‌ಗೆ ಕರೆ ಮಾಡಿದ್ದ ಆರೋಪಿ ಕಮ್ರಾನ್‌ ಖಾನ್‌, ಜೆ ಜೆ ಆಸ್ಪತ್ರೆಯನ್ನೂ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ.

VISTARANEWS.COM


on

narendra modi and yogi adityanath
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ (Yogi Adityanath) ಅವರಿಗೆ ವ್ಯಕ್ತಿಯೊಬ್ಬ ಜೀವ ಬೆದರಿಕೆ (Death Threat) ಹಾಕಿದ್ದಾನೆ. ಮುಂಬೈ ಪೊಲೀಸ್‌ ಕಂಟ್ರೋಲ್‌ ರೂಮ್‌ಗೆ ಕರೆ ಮಾಡಿದ ಅನಾಮಧೇಯ ವ್ಯಕ್ತಿಯು, ಮೋದಿ ಹಾಗೂ ಯೋಗಿ ಅವರ ಹತ್ಯೆ ಜತೆಗೆ ಮುಂಬೈನಲ್ಲಿರುವ ಜೆ. ಜೆ. ಆಸ್ಪತ್ರೆಯನ್ನು ಬಾಂಬಿಟ್ಟು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾನೆ. ಕೂಡಲೇ ಎಚ್ಚೆತ್ತ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿಯನ್ನು ಕಮ್ರಾನ್‌ ಖಾನ್‌ ಎಂಬುದಾಗಿ ಗುರುತಿಸಲಾಗಿದೆ. ಈತನನ್ನು ಮುಂಬೈನ ಸಿಯೋನ್‌ ಪ್ರದೇಶದಲ್ಲಿ ಬಂಧಿಸಲಾಗಿದೆ. ಆರೋಪಿಯನ್ನು ವಶಪಡಿಸಿಕೊಂಡಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈತ ಜೀವ ಬೆದರಿಕೆಯೊಡ್ಡಲು ಏನು ನಿಖರ ಕಾರಣ ಎಂಬುದರ ಕುರಿತು ತನಿಖೆ ನಡೆಸುತ್ತಿದ್ದಾರೆ. ಆರೋಪಿ ವಿರುದ್ಧ ಮುಂಬೈನ ಆಜಾದ್‌ ಮೈದಾನ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೋದಿಗೆ ಜೀವ ಬೆದರಿಕೆ ಇದೇ ಮೊದಲಲ್ಲ

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜೀವ ಬೆದರಿಕೆ ಬರುವುದು ಇದೇ ಮೊದಲಲ್ಲ. ಕೆಲ ದಿನಗಳ ಹಿಂದಷ್ಟೇ ಉತ್ತರ ಪ್ರದೇಶದ ಗೋರಖ್‌ಪುರ ನಿವಾಸಿ ಅರುಣ್‌ ಕುಮಾರ್‌ ಎಂಬಾತನು ಮೋದಿ ಹತ್ಯೆ ಮಾಡಲಾಗುವುದು ಎಂದು ಬೆದರಿಕೆ ಹಾಕಿದ್ದ. ಬಳಿಕ ಪೊಲೀಸರು ಈತನನ್ನು ಬಂಧಿಸಿದ್ದರು. ಇನ್ನು ಕಳೆದ ಏಪ್ರಿಲ್‌ನಲ್ಲೂ ಮೋದಿ ಅವರು ಕೇರಳ ಭೇಟಿ ವೇಳೆ ಬಿಜೆಪಿ ಕಚೇರಿಗೆ ಬೆದರಿಕೆ ಒಡ್ಡಿ ಪತ್ರವೊಂದನ್ನು ಬರೆಯಲಾಗಿತ್ತು.

ಅಂಬಾನಿಗೆ ಬೆದರಿಕೆ ಹಾಕಿದವನ ಬಂಧನ

ಕೆಲ ದಿನಗಳ ಹಿಂದಷ್ಟೇ ರಿಲಯನ್ಸ್‌ ಇಂಡಸ್ಟ್ರೀಸ್‌ನ ಮುಖ್ಯಸ್ಥ ಮುಕೇಶ್ ಅಂಬಾನಿ (Mukesh Ambani) ಅವರಿಗೆ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ತೆಲಂಗಾಣದ 19 ವರ್ಷದ ಯುವಕನ್ನು ಪೊಲೀಸರು ಬಂಧಿಸಿದ್ದರು. ಆರೋಪಿಯನ್ನು ಗಣೇಶ್‌ ರಮೇಶ್‌ ವನಪರ್ದಿ ಎಂದು ಗುರುತಿಸಲಾಗಿದ್ದು ಆತನನ್ನು ಪೊಲೀಸ್​​​ ಕಸ್ಟಡಿಗೆ ಒಪ್ಪಿಸಲಾಗಿತ್ತು.

ಇದನ್ನೂ ಓದಿ: Mukesh Ambani: ಕೊನೆಗೂ ಪೊಲೀಸ್‌ ಬಲೆಗೆ ಬಿದ್ದ ಅಂಬಾನಿಗೆ ಜೀವ ಬೆದರಿಕೆ ಹಾಕಿದ 19 ವರ್ಷದ ಯುವಕ

ಮುಕೇಶ್ ಅಂಬಾನಿ ಅವರಿಗೆ ಅಪರಿಚಿತ ವ್ಯಕ್ತಿಯಿಂದ 400 ಕೋಟಿ ರೂ.ಗಳ ಬೆದರಿಕೆ ಇಮೇಲ್ ಬಂದ ಕೆಲವೇ ದಿನಗಳಲ್ಲಿ ಈ ಬಂಧಿಸಲಾಗಿತ್ತು. ಅಂಬಾನಿಯ ಕಂಪನಿಗೆ ಅಕ್ಟೋಬರ್‌ 30ರಂದು ಜೀವ ಬೆದರಿಕೆಯ ಇಮೇಲ್ ಬಂದಿತ್ತು. ಆ ಮೂಲಕ ನಾಲ್ಕು ದಿನಗಳ ಅಂತರದಲ್ಲಿ ಅಂಬಾನಿ ಅವರಿಗೆ ಮೂರನೇ ಬೆದರಿಕೆ ಇಮೇಲ್ ಬಂದಿತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

ತಮ್ಮ ಕಾರಿಗೆ ಡಿಕ್ಕಿ ಹೊಡೆದ ಬೈಕ್ ಸುಟ್ಟು ಹಾಕಿ ಎಂದ ಭವಾನಿ ರೇವಣ್ಣ! ವಿಡಿಯೊ ನೋಡಿ

ಅಪಘಾತ ನಡೆದಾಗ ಬೈಕ್‌ ಸವಾರನನ್ನು ಸಂತೈಸುವುದು ಬಿಟ್ಟು ಹಿಗ್ಗಾಮುಗ್ಗಾ ಬೈಯುವ ಮೂಲಕ ಮಾನವೀಯತೆ ಮರೆತ ಭವಾನಿ ರೇವಣ್ಣ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

VISTARANEWS.COM


on

Bhavani Revanna
Koo

ಮೈಸೂರು: ಕಾರಿಗೆ ಡಿಕ್ಕಿ ಹೊಡೆದ ಬೈಕ್ ಚಾಲಕನನ್ನು ಭವಾನಿ ರೇವಣ್ಣ (Bhavani Revanna) ತರಾಟೆಗೆ ತೆಗೆದುಕೊಂಡ ಘಟನೆ ಕೆ.ಆರ್.ನಗರ ತಾಲೂಕಿನ ಸಾಲಿಗ್ರಾಮದ ಹೊರವಲಯದಲ್ಲಿ ನಡೆದಿದೆ. ಅಪಘಾತ ನಡೆದಾಗ ಬೈಕ್‌ ಸವಾರನನ್ನು ಸಂತೈಸುವುದು ಬಿಟ್ಟು ಹಿಗ್ಗಾಮುಗ್ಗಾ ಬೈದಿರುವ ಭವಾನಿ ರೇವಣ್ಣ, ಬೈಕ್‌ ಸುಟ್ಟು ಹಾಕಿ ಎಂದು ಆಕ್ರೋಶ ಹೊರಹಾಕಿರುವುದು ಕಂಡುಬಂದಿದೆ. ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಕೆ.ಆರ್.ನಗರ ತಾಲೂಕಿನ ಸಾಲಿಗ್ರಾಮದ ಹೊರವಲಯದಲ್ಲಿ ಅಪಘಾತ ನಡೆದಿದೆ. ಹಾಸನ – ಕೆ.ಆರ್.ನಗರ ರಸ್ತೆಯಲ್ಲಿ ಬರುತ್ತಿದ್ದಾಗ ಭವಾನಿ ರೇವಣ್ಣ ಕಾರಿಗೆ ಬೈಕ್‌ ಸವಾರರೊಬ್ಬರು ಡಿಕ್ಕಿ ಹೊಡೆದಿದ್ದಾರೆ. ಈ ವೇಳೆ ಅಕ್ಕಾ ಕಾರು ಸೈಡಿಗೆ ಹಾಕಿ ಅಂದಿದ್ದಕ್ಕೆ ಕಿಡಿಕಾರಿರುವ ಭವಾನಿ ರೇವಣ್ಣ, ನನ್ನ ಕಾರಿಗೆ ಡ್ಯಾಮೇಜ್‌ ಆಗಿದೆ. ರಿಪೇರಿ ಮಾಡಿಸೋಕೆ 50 ಲಕ್ಷ ರೂ. ಹಣ ಬೇಕು. ಯಾರಾದರೂ ನ್ಯಾಯ ಮಾತನಾಡುವವರು ಐವತ್ತು ಲಕ್ಷ ಹಣ ಕೊಟ್ಟು ಮಾತನಾಡಿ. ಒಂದೂವರೆ ಕೋಟಿ ರೂಪಾಯಿ ಗಾಡಿ ಇದು ಎಂದು ದರ್ಪ ತೋರಿದ್ದಾರೆ.

ಸಾಲಿಗ್ರಾಮ ಠಾಣೆಯ ಇನ್ಸ್‌ಪೆಕ್ಟರ್‌ನ ಕರೀರಿ, ತಗೊಂಡು ಹೋಗಿ ಇವನನ್ನು ಒಳಗೆ ಹಾಕಲಿ, ಸಾಯಂಗಿದ್ರೆ ಬಸ್ಸಿಗೆ ಸಿಕ್ಕಿ ಸಾಯಬೇಕಿತ್ತು. ಸಾಯೋಕೆ ನನ್ ಕಾರೇ ಬೇಕಿತ್ತಾ? ಅವನು ಸತ್ತೋಗ್ತಾನೆ ಅಂತ ಅವನ ಬಗ್ಗೆ ಯಾಕೆ ಯೋಚನೆ ಮಾಡ್ತೀಯಾ? ಒಂದೂವರೆ ಕೋಟಿ ರೂಪಾಯಿ ಕಾರು ಬಗ್ಗೆ ಯೋಚನೆ ಮಾಡು ಎಂದಿರುವ ಭವಾನಿ ರೇವಣ್ಣ, ಬೈಕ್ ಸವಾರನ‌ನ್ನು ನಿಲ್ಲಿಸಿ ಫೋಟೊ ಕ್ಲಿಕ್ಕಿಸಿಕೊಂಡಿದ್ದಾರೆ.

ಇದನ್ನೂ ಓದಿ | ಚಿಕ್ಕಮಗಳೂರು ಪೊಲೀಸ್-ವಕೀಲರ ಸಂಘರ್ಷ; ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ

ಅಪಘಾತದಲ್ಲಿ ಗಾಯಗೊಂಡವನನ್ನು ಸಂತೈಸುವುದು ಬಿಟ್ಟು ಹಿಗ್ಗಾಮುಗ್ಗಾ ಬೈಯುವ ಮೂಲಕ ಭವಾನಿ ರೇವಣ್ಣ ಮಾನವೀಯತೆ ಮರೆತಿದ್ದಾರೆ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉತ್ತರ ಕನ್ನಡ

Drown in Sea: ಗೋಕರ್ಣ ಸಮುದ್ರದಲ್ಲಿ ಈಜಲು ತೆರಳಿದ್ದ ಇಬ್ಬರು ನೀರುಪಾಲು

Drown in Sea: ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಗೋಕರ್ಣ ಕಡಲತೀರದಲ್ಲಿ ಮುಳುಗಿ ಇಬ್ಬರು ಪ್ರವಾಸಿಗರು ಮೃತಪಟ್ಟಿದ್ದಾರೆ.

VISTARANEWS.COM


on

drown in sea
Koo

ಕಾರವಾರ: ಸಮುದ್ರದಲ್ಲಿ ಈಜಲು ತೆರಳಿದ್ದ ಇಬ್ಬರು ಪ್ರವಾಸಿಗರು ನೀರುಪಾಲಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಗೋಕರ್ಣ ಕಡಲತೀರದಲ್ಲಿ (Drown in Sea) ನಡೆದಿದೆ. ಇದೇ ವೇಳೆ ಗಂಭೀರಗೊಂಡ ಮತ್ತೊಬ್ಬ ಪ್ರವಾಸಿಗನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಲಬುರಗಿ ಮೂಲದ ಅಭಿಷೇಕ್, ಆಕಾಶ್ ಮೃತ ಪ್ರವಾಸಿಗರು. ಕಲಬುರಗಿಯಿಂದ ಐವರು ಸ್ನೇಹಿತರು ಪ್ರವಾಸಕ್ಕೆಂದು ಗೋಕರ್ಣಕ್ಕೆ ಆಗಮಿಸಿದ್ದರು. ಸಮುದ್ರದಲ್ಲಿ ಮೂವರು ಈಜಲು ತೆರಳಿದ್ದಾಗ ಅಲೆಗಳಿಗೆ ಸಿಲುಕಿ ಮುಳುಗಿದ್ದರು. ಈ ವೇಳೆ ಇಬ್ಬರು ಪ್ರವಾಸಿಗರು ಮೃತಪಟ್ಟಿದ್ದು, ಒಬ್ಬನನ್ನು ರಕ್ಷಣೆ ಮಾಡಲಾಗಿದೆ. ಗಂಭೀರಗೊಂಡ ಪ್ರವಾಸಿಗನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ | ಚಿಕ್ಕಮಗಳೂರು ಪೊಲೀಸ್-ವಕೀಲರ ಸಂಘರ್ಷ; ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ

ಮಹಿಳಾ ಸಬ್ ಇನ್‌ಸ್ಪೆಕ್ಟರ್‌ ಜತೆ ಅನುಚಿತವಾಗಿ ವರ್ತಿಸಿ ಹೋಟೆಲ್‌ ಮಾಲೀಕ ಬಂಧನ

ಬೆಂಗಳೂರು: ಮಹಿಳಾ ಸಬ್ ಇನ್‌ಸ್ಪೆಕ್ಟರ್‌ ಜತೆ ಅನುಚಿತ ವರ್ತನೆ ತೋರಿದ ಹೊಟೇಲ್ ಮಾಲೀಕನನ್ನು ಪೊಲೀಸರು ಬಂಧಿಸಿದ ಘಟನೆ ಅನ್ನಪೂರ್ಣೇಶ್ವರಿ ನಗರದಲ್ಲಿ ನಡೆದಿದೆ. ತಡರಾತ್ರಿವರೆಗೂ ಹೋಟೆಲ್ ತೆಗೆದಿದ್ದ ಹಿನ್ನೆಲೆಯಲ್ಲಿ ಪ್ರಶ್ನಿಸಿದ ಕಾರಣ ಹೊಟೇಲ್ ಮಾಲೀಕ ಸಂಜೀವ್ ಗೌಡ ಎಂಬಾತ ಪಿಎಸ್‌ವೈ ಪ್ರತಿಮಾ ಜತೆ ಅನುಚಿತವಾಗಿ ವರ್ತಿಸಿದ್ದರು.

ಸುಳ್ಳು ಪ್ರಕರಣ ದಾಖಲಿಸಿ 50 ಸಾವಿರ ಲಂಚ ಕೇಳಿದ್ದಾರೆಂದು ಸುಳ್ಳು ಕೇಸ್‌ ಹಾಕುವುದಾಗಿ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಹೊಟೇಲ್ ಅಶ್ವ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ. 24 ಗಂಟೆ ಹೊಟೇಲ್ ನಡೆಸಲು ಅನುಮತಿ ಇದೆ ಎಂದು ಮಾಲೀಕ ಹೇಳಿದ್ದ. ಅನುಮತಿ ಪತ್ರ ತೋರಿಸುವಂತೆ ಕೇಳಿದಾಗ, ಆರ್‌ಟಿಐ ಹಾಕಿಕೊಂಡು ನೋಡು ಎಂದು ಮಾಲೀಕ ದರ್ಪ ತೋರಿದ್ದಾರೆ. ಈ ಸಂಬಂಧ ಪಿಎಸ್‌ಐ ಪ್ರತಿಮಾ ದೂರು ದಾಖಲಿಸಿದ್ದರು. ದೂರಿನ ಅನ್ವಯ ಮಾಲೀಕ ಸಂಜೀವ್ ಗೌಡ ಸೇರಿ ಐವರನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ.

ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶದ ಕುತೂಹಲಕರ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ:

Continue Reading

ಕರ್ನಾಟಕ

ಚಿಕ್ಕಮಗಳೂರು ಪೊಲೀಸ್-ವಕೀಲರ ಸಂಘರ್ಷ; ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ

Atrocity on Lawyer : ಚಿಕ್ಕಮಗಳೂರಿನ ವಕೀಲ ಪ್ರೀತಂ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಆರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಜತೆಗೆ ಪ್ರೀತಂ ವಿರುದ್ಧವು ಎಫ್‌ಐಆರ್‌ ದಾಖಲಾಗಿದ್ದು, ಈ ಸಂಘರ್ಷವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ.

VISTARANEWS.COM


on

By

Chikkamagaluru police lawyer clash The case is being investigated by the CID
Koo

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಪೊಲೀಸ್-ವಕೀಲರ ಸಂಘರ್ಷ ಪ್ರಕರಣವನ್ನು (Atrocity on Lawyer) ಸರ್ಕಾರವು ಸಿಐಡಿಗೆ ವರ್ಗಾವಣೆ ಮಾಡಿದೆ. ಚಿಕ್ಕಮಗಳೂರಿನ ಪಶ್ಚಿಮ ವಲಯ ಐಜಿಪಿ ಚಂದ್ರಗುಪ್ತ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ನಿನ್ನೆ ಅಹೋರಾತ್ರಿ ಪೊಲೀಸರ ಹಾಗೂ ಕುಟುಂಬಸ್ಥರ ಪ್ರತಿಭಟನೆ ಹಿನ್ನೆಲೆಯಲ್ಲಿ ನಗರಠಾಣೆಗೆ ಐಜಿಪಿ ಚಂದ್ರಗುಪ್ತ ಭೇಟಿ ನೀಡಿದರು. ನಿನ್ನೆಯ ಪ್ರತಿಭಟನೆಗೆ ಕಾರಣವಾದ ಲೋಪದೋಷಗಳ ಬಗ್ಗೆ, ಸಮಸ್ಯೆಗಳ ಕುರಿತು ಇಂಚಿಂಚೂ ಮಾಹಿತಿ ಪಡೆದರು. ಬಳಿಕ ಈ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಆಗಿರುವುದಾಗಿ ಸ್ಪಷ್ಟ ಪಡಿಸಿದರು.

ಹೆಲ್ಮೆಟ್‌ ಹಾಕದ ಕಾರಣಕ್ಕೆ ಪ್ರೀತಮ್‌ ಎಂಬ ಯುವ ವಕೀಲನ ಮೇಲೆ ನಗರ ಠಾಣೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಇದರಿಂದ ರೊಚ್ಚಿಗೆದ್ದ ವಕೀಲರು ಕಳೆದ ಶುಕ್ರವಾರ ಜಿಲ್ಲಾ ನ್ಯಾಯಾಲಯದ ಮುಂದೆ ಕೋರ್ಟ್ ಕಲಾಪಗಳನ್ನು ಬಹಿಷ್ಕರಿಸಿ ಚಿಕ್ಕಮಗಳೂರು ನಗರದ ಪ್ರಮುಖ ರಸ್ತೆಗಳಲ್ಲಿ ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸಿದ್ದರು.

ವಕೀಲರ ಪ್ರತಿಭಟನೆಗೆ ಮಣಿದ ಎಸ್‌ಪಿ ವಿಕ್ರಂ, ಓರ್ವ ಪಿಎಸ್ಐ, ಎಎಸ್‌ಐ ಸೇರಿ ಆರು ಮಂದಿ ಸಿಬ್ಬಂದಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದರು. ಈ ಪ್ರಕರಣವು ಹೈಕೋರ್ಟ್‌ ಮೆಟ್ಟಿಲೇರಿದಾಗ ಪೊಲೀಸರ ದೌರ್ಜನ್ಯ (Atrocity on Lawyer) ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ (Karnataka High court) ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ತುರ್ತು ವಿಚಾರಣೆ ನಡೆಸಿತು. ಇತ್ತ ಪೊಲೀಸರಿಗೆ ರಕ್ಷಣೆ ಇಲ್ಲ, ಪೊಲೀಸ್ ಕುಟುಂಬಗಳಿಗೆ ಅನ್ಯಾಯ ಆಗಿದೆ ಎಂದು ಪೊಲೀಸ್‌ ಸಿಬ್ಬಂದಿ ಹಾಗೂ ಕುಟುಂಬಸ್ಥರು ಶನಿವಾರ ಅಹೋರಾತ್ರಿ ಧರಣಿಯನ್ನು ನಡೆಸಿದ್ದರು. ಪೊಲೀಸ್‌ ಸಿಬ್ಬಂದಿಯನ್ನು ಬಂಧಿಸಿದರೆ ಸಾಮೂಹಿಕ ರಾಜೀನಾಮೆ ನೀಡುವುದಾಗಿ ಎಸ್‌ಪಿಗೆ ಎಚ್ಚರಿಕೆ ನೀಡಿದ್ದರು. ನಗರದ 6 ಠಾಣೆಗಳ 300ಕ್ಕೂ ಹೆಚ್ಚು ಪೊಲೀಸರು ಕೆಲಸ ನಿಲ್ಲಿಸಿ ಪ್ರತಿಭಟನೆಗೆ ಆಗಮಿಸಿ, ನಾವ್ಯಾರು ಕೆಲಸ ಮಾಡಲ್ಲ ಎಂದು ಪಟ್ಟು ಹಿಡಿದಿದ್ದರು.

Lawyer preetham

ಏನಿದು ಪ್ರಕರಣ?

ಹೆಲ್ಮೆಟ್ ಹಾಕದಿರುವ ವಿಚಾರಕ್ಕೆ ವಕೀಲರನ್ನು ಠಾಣೆಗೆ ಕರೆದೊಯ್ದು ಹಿಗ್ಗಾಮುಗ್ಗಾ ಹಲ್ಲೆ ನಡೆಸಿರುವ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡಿತ್ತು. ಪೊಲೀಸರ ವಿರುದ್ಧ ಸಿಡಿದೆದ್ದ ರಾಜ್ಯ ವಕೀಲರ ಸಂಘ ಬೀದಿಗಿಳಿದು ಪ್ರತಿಭಟನೆ ನಡೆಸಿ ಖಾಕಿ ವಿರುದ್ಧ ಕೆಂಡ ಕಾರಿದ್ದರು. ಕಾಫಿನಾಡಲ್ಲಿ ವಕೀಲರ ಪ್ರತಿಭಟನೆ ಕ್ಷಣ ಕ್ಷಣಕ್ಕೂ ಕಾವು ಪಡೆಯುತ್ತಿದ್ದು, ಹಲ್ಲೆ ನಡೆಸಿದ ಪೊಲೀಸರನ್ನು ಬಂಧಿಸದಿದ್ದರೆ ಮುಂದೆ ಏನಾದರೂ ನಮಗೆ ಗೊತ್ತಿಲ್ಲ ಎಂದು ವಕೀಲರ ಪಡೆ ಖಡಕ್ ವಾರ್ನಿಂಗ್ ಕೊಟ್ಟಿತ್ತು.

ಅಂದಹಾಗೇ ಕಳೆದ ನವೆಂಬರ್‌ 30ರ ರಾತ್ರಿ 7 ಗಂಟೆ ಸುಮಾರಿಗೆ ಹೆಲ್ಮೆಟ್ ಧರಿಸಿದೆ ಹೋಗುತ್ತಿದ್ದ ವಕೀಲ ಪ್ರೀತಮ್‌ನನ್ನು ತಡೆದ ಪೊಲೀಸರು ಬೈಕ್‌ನಿಂದ ಕೆಳಗಿಳಿಸಿ ಕೀ ಕಿತ್ತುಕೊಂಡಿದ್ದರು. ಈ ವಿಚಾರ ದೊಡ್ಡದಾಗಿ ಬೈಕ್ ಸವಾರನನ್ನು ಠಾಣೆಗೆ ಕರೆದು ಕರೆದೊಯ್ದು ಹಿಗ್ಗಾ ಮುಗ್ಗ ಹಲ್ಲೆ ನಡೆಸಿರುವ ವಿಚಾರ ಇತರೆ ವಕೀಲರು ಸಿಟ್ಟಿಗೆಳುವಂತೆ ಮಾಡಿತ್ತು.

ದಂಡ ಹಾಕುವ ಬದಲು ಠಾಣೆಯಲ್ಲಿ ವಕೀಲ ಪ್ರೀತಮ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದರು. ಚಿಕ್ಕಮಗಳೂರು ನಗರ ಠಾಣೆಯ ಮುಂದೆ ರಾತ್ರಿ ಇಡೀ ಪ್ರತಿಭಟನೆ ನಡೆಸಿ ಸುಖಾ ಸುಮ್ಮನೆ ಹಲ್ಲೆ ನಡೆಸಿದ ಪೊಲೀಸರನ್ನು ಬಂಧಿಸುವಂತೆ ವಕೀಲರು ಪಟ್ಟು ಹಿಡಿದಿದ್ದರು. ಚಿಕ್ಕಮಗಳೂರು ಎಸ್‌ಪಿ ವಿಕ್ರಂ ಅಮಟೆ ವಿಚಾರಣೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ ಎಂದರು ಪಟ್ಟು ಬಿಡದ ನೂರಾರು ವಕೀಲರು ಪೊಲೀಸರನ್ನು ಬಂಧಿಸಿಲೇ ಬೇಕೆಂದು ಒತ್ತಾಯ ಮಾಡಿದರು. ಬಳಿಕ ವಕೀಲರ ಪ್ರತಿಭಟನೆಗೆ ಮಣಿದ ಎಸ್‌ಪಿ ವಿಕ್ರಂ, ಓರ್ವ ಪಿಎಸ್ಐ, ಎಎಸ್‌ಐ ಸೇರಿ ಆರು ಮಂದಿ ಸಿಬ್ಬಂದಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದರು.

ಕಪ್ಪಾಳಕ್ಕೆ ಹೊಡೆದಿದ್ದ ಪ್ರೀತಮ್‌!

ಪೊಲೀಸ್‌ ಸಿಬ್ಬಂದಿ ಹೋರಾಟಕ್ಕೆ ಮಣಿದ ಹಿರಿಯ ಅಧಿಕಾರಿಗಳು ವಕೀಲರ ವಿರುದ್ಧ ಎಫ್‌ಐಆರ್‌ ದಾಖಲು ಮಾಡಿದರು. ಪೇದೆ ಗುರುಪ್ರಸಾದ್ ನೀಡಿದ ದೂರಿನ ಮೇಲೆ ವಕೀಲ ಪ್ರೀತಮ್ ಮೇಲೂ ಎಫ್‌ಐಆರ್ ದಾಖಲಾಗಿದೆ. ವಕೀಲ ಪ್ರೀತಮ್ ಗುರುಪ್ರಸಾದ್‌ ಕಪ್ಪಾಳಕ್ಕೆ ಹೊಡಿದಿದ್ದಾರೆ ಎಂದು ಆರೋಪಿಸಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶದ ಕುತೂಹಲಕರ ಸುದ್ದಿಗಳಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಕರ್ನಾಟಕ

Murder Case: ಆಸ್ತಿ ವಿವಾದ; ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಕೊಲೆಗೈದ ತಂದೆ-ಮಗ

Murder Case: ಶಿವಮೊಗ್ಗ ತಾಲೂಕಿನ ಬೆಳಲಕಟ್ಟೆ ಗ್ರಾಮದಲ್ಲಿ ವ್ಯಕ್ತಿಗೆ ರಸ್ತೆಯಲ್ಲೇ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ.

VISTARANEWS.COM


on

Murder by setting fire
Koo

ಶಿವಮೊಗ್ಗ: ಆಸ್ತಿ ವಿಚಾರಕ್ಕೆ ತಂದೆ-ಮಗ ಸೇರಿ ವ್ಯಕ್ತಿಯೊಬ್ಬರಿಗೆ ರಸ್ತೆಯಲ್ಲೇ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ ಘಟನೆ ತಾಲೂಕಿನ ಬೆಳಲಕಟ್ಟೆ ಗ್ರಾಮದಲ್ಲಿ ನಡೆದಿದೆ. ಬೈಕ್‍ನಲ್ಲಿ ತೆರಳುತ್ತಿದ್ದ ವ್ಯಕ್ತಿಯನ್ನು ಆತನ ಅಣ್ಣ ಹಾಗೂ ಮಗ ಅಡ್ಡಗಟ್ಟಿ ಪೆಟ್ರೋಲ್ ಸುರಿದು ಸಜೀವವಾಗಿ ಸುಟ್ಟು (Murder Case) ಹಾಕಿದ್ದಾರೆ.

ಬೆಳಲಕಟ್ಟೆ ಗ್ರಾಮದ ಮಹೇಶಪ್ಪ (60) ಮೃತರು. ಸಹೋದರ ಕುಮಾರ್ ಹಾಗೂ ಆತನ ಮಗ ಕಾರ್ತಿಕ್ ಆರೋಪಿಗಳು. ಮಹೇಶಪ್ಪ ಬೆಳಲಕಟ್ಟೆಯಿಂದ ಬಿಕ್ಕೋನಹಳ್ಳಿಯ ಮಗಳ ಮನೆಗೆ ಹೋಗುತ್ತಿದ್ದಾಗ ಅಡ್ಡ ಹಾಕಿದ ಸಹೋದರ ಮತ್ತು ಆತನ ಮಗ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಇದರಿಂದ ಗಂಭೀರವಾಗಿ ಗಾಯಗೊಂಡು ನರಳಾಡುತ್ತಿದ್ದ ಮಹೇಶಪ್ಪನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾನೆ.

ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ, ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಆಸ್ತಿ ಮಾರಾಟದ ವಿಚಾರಕ್ಕಾಗಿ ಅಣ್ಣ-ತಮ್ಮನ ನಡುವೆ ಒಂದು ವರ್ಷದಿಂದ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದೆ. ಆದರೆ, ಈ ಕಲಹ ಕೊಲೆಯಲ್ಲಿ ಅಂತ್ಯವಾಗಿದ್ದು, ಹತ್ಯೆ ಬಳಿಕ ಆರೋಪಿಗಳು ನಾಪತ್ತೆಯಾಗಿದ್ದಾರೆ. ಅವರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಮೃತ ವ್ಯಕ್ತಿಯು ಘಟನೆ ನಡೆದಾಗ ಅಳಿಯನಿಗೆ ಕರೆ ಮಾಡಿ ತನ್ನ ಹತ್ಯೆ ಮಾಡಿದ ಇಬ್ಬರ ಹೆಸರನ್ನು ಹೇಳಿದ್ದಾನೆ. ಘಟನೆಯಿಂದ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದು, ಕೊಲೆ ಮಾಡಿದ ತಂದೆ ಮಗನಿಗೆ ಕಠಿಣ ಶಿಕ್ಷೆಯಾಗಬೇಕೆಂದು ಮೃತರ ಪುತ್ರಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ | Bomb Blast : ನಾಡಬಾಂಬ್ ಸಿಡಿದು ವ್ಯಕ್ತಿ ಕೈ ಛಿದ್ರ; ಹಾವೇರಿಯಲ್ಲಿ 7 ಜೀವಂತ ಬಾಂಬ್ ಪತ್ತೆ

sommaya

ಮೈಸೂರು: ಪತಿಯೊಬ್ಬ ಪತ್ನಿಯ ಪ್ರಿಯತಮನನ್ನು ಮಚ್ಚಿನಿಂದ ಕೊಚ್ಚಿ ಕೊಲೆ (Murder case) ಮಾಡಿರುವ ಘಟನೆ ನಡೆದಿದೆ. ಪತ್ನಿ ಜತೆಗೆ ಅನೈತಿಕ ಸಂಬಂಧ ಹೊಂದಿದ್ದ ಎಂಬ ಸಿಟ್ಟಿಗೆ ಹತ್ಯೆಗೈದಿದ್ದಾನೆ. ನಂಜನಗೂಡು ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಮಹದೇವಸ್ವಾಮಿ (39) ಕೊಲೆಯಾದ ವ್ಯಕ್ತಿ. ಸೋಮಯ್ಯ ಎಂಬಾತ ಮಚ್ಚಿನಿಂದ ಮಹದೇವಸ್ವಾಮಿ ಮೇಲೆ ದಾಳಿ ಮಾಡಿ ಕೊಲೆ ಮಾಡಿದ್ದಾನೆ. ಪತ್ನಿ ಜತೆಗೆ ಮಹದೇವಸ್ವಾಮಿ ಅಕ್ರಮ ಸಂಬಂಧ ಹೊಂದಿದ್ದ ಎಂದು ಸೋಮಯ್ಯ ಭಾವಿಸಿದ್ದ. ಗ್ರಾಮದ ಮಾರಮ್ಮನ ದೇವಾಲಯದಲ್ಲಿ ಮಲಗಿದ್ದ ಮಹದೇವಸ್ವಾಮಿ ಮೇಲೆ ಎರಗಿ ಸೋಮಯ್ಯ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಮಹದೇವಸ್ಮಾಮಿಯನ್ನು ಕೊಲೆ ಮಾಡಿ ಸೋಮಯ್ಯ ಪರಾರಿ ಆಗಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ಡಿವೈಎಸ್‌ಪಿ ಗೋವಿಂದರಾಜು, ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಸುನೀಲ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಇದನ್ನೂ ಓದಿ | Murder Case : ವ್ಯಕ್ತಿಯ ತಲೆ ಸೀಳಿ ಮೋರಿಗೆ ಶವ ಎಸೆದ ಹಂತಕರು!

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶದ ಕುತೂಹಲಕರ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ:

Continue Reading
Advertisement
Top 10 news
ಟಾಪ್ 10 ನ್ಯೂಸ್23 mins ago

VISTARA TOP 10 NEWS : ಬಿಜೆಪಿಗೆ 4ನೇ ಮೂರು ಬಹುಮತ, ಸೈದ್ಧಾಂತಿಕ ಹೋರಾಟ ನಿರಂತರ ಎಂದ ರಾಹುಲ್​ ಮತ್ತಿತರ ದಿನದ ಪ್ರಮುಖ ಸುದ್ದಿಗಳು

with defeat of Rajasthan and Chhattisgarh Congress ruled states reduced to 3
ದೇಶ35 mins ago

ರಾಜಸ್ಥಾನ, ಛತ್ತೀಸ್‌ಗಢ ಸೋಲಿನೊಂದಿಗೆ 3 ರಾಜ್ಯಗಳಿಗೆ ಸೀಮಿತವಾದ ಕಾಂಗ್ರೆಸ್!

Bhavani Revanna
ಕರ್ನಾಟಕ49 mins ago

ತಮ್ಮ ಕಾರಿಗೆ ಡಿಕ್ಕಿ ಹೊಡೆದ ಬೈಕ್ ಸುಟ್ಟು ಹಾಕಿ ಎಂದ ಭವಾನಿ ರೇವಣ್ಣ! ವಿಡಿಯೊ ನೋಡಿ

Bangalore bulls
ಕ್ರೀಡೆ57 mins ago

Pro Kabaddi : ತಲೈವಾಸ್​, ಗುಜರಾತ್​ ಜಯಂಟ್ಸ್​ಗೆ ಗೆಲುವು

indian cricket team
ಕ್ರಿಕೆಟ್1 hour ago

Ind vs Aus : ಭಾರತ ತಂಡಕ್ಕೆ ಕೊನೇ ಪಂದ್ಯದಲ್ಲೂ ಜಯ, 4-1 ಅಂತರದಿಂದ ಸರಣಿ ಕೈವಶ

this hat-trick has guaranteed the 2024 victory Says PM Narendra Modi
ದೇಶ2 hours ago

PM Narendra Modi: 3 ರಾಜ್ಯದ ಗೆಲುವು 2024ರ ಹ್ಯಾಟ್ರಿಕ್ ಜಯದ ಮುನ್ಸೂಚನೆ; ಮೋದಿ ಬಣ್ಣನೆ

drown in sea
ಉತ್ತರ ಕನ್ನಡ2 hours ago

Drown in Sea: ಗೋಕರ್ಣ ಸಮುದ್ರದಲ್ಲಿ ಈಜಲು ತೆರಳಿದ್ದ ಇಬ್ಬರು ನೀರುಪಾಲು

BJP wins three states Congress one
ಕರ್ನಾಟಕ3 hours ago

Assembly Elections 2023: ಬಿಜೆಪಿಗೆ ನಾಲ್ಕನೇ ಮೂರು ಬಹುಮತ, ಕಾಂಗ್ರೆಸ್‌ಗೆ ಒಂದೇ ಗ್ಯಾರಂಟಿ!

Team India
ಕ್ರಿಕೆಟ್3 hours ago

IND vs SA : ಭಾರತದ ದಕ್ಷಿಣ ಆಫ್ರಿಕಾ ಪ್ರವಾಸ ಕುರಿತ ಪೂರ್ಣ ವಿವರ ಇಲ್ಲಿದೆ

Raman_Sao_Choudhary
ದೇಶ3 hours ago

Chhattisgarh Election Result: ಛತ್ತೀಸ್‌ಗಢ ಸಿಎಂ ರೇಸ್‌ನಲ್ಲಿ ಸಾವೊ, ಚೌಧರಿ, ರಮಣ್ ಸಿಂಗ್!

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Police call off protest FIR against lawyer who slapped police
ಕರ್ನಾಟಕ12 hours ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ18 hours ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ1 day ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ2 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ2 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ3 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ3 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ6 days ago

Dina Bhavishya : ಈ ರಾಶಿಯವರಿಗೆ ಬೇಸರ ತರಲಿದೆ ಸಂಗಾತಿಯ ಕಹಿ ಮಾತು

ಟ್ರೆಂಡಿಂಗ್‌