ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ KILL DK brothers’ ಎಂದು ಪೋಸ್ಟ್ ಮಾಡಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಖಾಸಗಿ ಕಂಪನಿಯಲ್ಲಿ (Private Company worker) ಕೆಲಸ ಮಾಡುತ್ತಿರುವ ರಂಜಿತ್ ಆರ್ ಎಂಬಾತನನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ.
ಈಗ ಸಾಮಾಜಿಕ ಜಾಲತಾಣದಲ್ಲಿ (Social Media) ಕಿಲ್ ಡಿಕೆ ಬ್ರದರ್ಸ್ ಎಂದು ಪೋಸ್ಟ್ ಮಾಡಿದ್ದ. ರಂಜಿತ್ ಕಾಂಗ್ರೆಸ್ ಸರ್ಕಾರ ಮತ್ತು ಡಿ.ಕೆ ಬ್ರದರ್ಸ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುತ್ತಿದ್ದ. ಪ್ರಚೋದನಾಕಾರಿ ಪೋಸ್ಟ್‌ಗಳನ್ನು ಹಾಕುತ್ತಿದ್ದ ಆರೋಪಿ ಮೇಲೆ ಜಯನಗರ ಕಾಂಗ್ರೆಸ್ ವತಿಯಿಂದ ಎಫ್‌ಐಆರ್ ದಾಖಲಾಗಿತ್ತು.
ಜಯನಗರ ಯೂತ್ ಕಾಂಗ್ರೆಸ್ ಉಪಾಧ್ಯಕ್ಷ ಶರತ್ ಎಂಬವರು ನೀಡಿದ ದೂರಿನ ಆಧಾರದಲ್ಲಿ ಕೇಸು ದಾಖಲಾಗಿತ್ತು.
ಈತ ಡಿ.ಕೆ. ಬ್ರದರ್ಸ್ ಮಾತ್ರವಲ್ಲದೆ, ಮುಸ್ಲಿಮರ ಬಗ್ಗೆಯೂ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದ. ಕಾಂಗ್ರೆಸ್ ಪಕ್ಷ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಿದ್ದ. ಕಿಕ್ ಔಟ್ ಕಾಂಗ್ರೆಸ್ ಎಂದು ಶಬ್ದ ಪ್ರಯೋಗ ಮಾಡಿ ಪೋಸ್ಟ್ ಮಾಡಿದ್ದ.
ಸೈಬರ್ ಕ್ರೈಂ ಡಿಟೆಕ್ಟಿವ್ ಎಂದು ಹೇಳಿಕೊಂಡಿದ್ದ!
ಕಾಂಗ್ರೆಸ್ ಮತ್ತು ಅದರ ನಾಯಕರ ವಿರುದ್ಧ ಕೆಟ್ಟದಾಗಿ ಪೋಸ್ಟ್ ಮಾಡುತ್ತಿದ್ದ ಆತ ತನ್ನನ್ನು ತಾನು ಸೈಬರ್ ಕ್ರೈಂ ಡಿಟೆಕ್ಟಿವ್ ಎಂದು ಕಾಲ್ ಡಿಟೇಲ್ಸ್‌ನಲ್ಲಿ ಹಾಕಿಕೊಂಡಿದ್ದ. ತಾನು ಬೆಂಗಳೂರು ಸಿಟಿ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡಿಕೊಂಡಿದ್ದೇನೆ ಎಂದಿದ್ದ. ಜಯನಗರ ಪೊಲೀಸರು ಆತನನ್ನು ಬಂಧಿಸಿದ್ದು, ಕೋರ್ಟ್‌ಗೆ ಹಾಜರುಪಡಿಸಿದ್ದಾರೆ.
ರಂಜಿತ್ ವಿರುದ್ಧ ಧರ್ಮಗಳ ಮಧ್ಯೆ ದ್ವೇಷಕ್ಕೆ ಕಾರಣವಾಗುವ ಮತ್ತು ಮಾನಹಾನಿಕರವಾಗಿ ವರ್ತಿಸುವ ಆರೋಪದ ಮೇಲೆ ಪ್ರಕರಣಗಳನ್ನು ದಾಖಲಿಸಲಾಗಿದೆ.
ಇದನ್ನೂ ಓದಿ : Murder case : ಆಸ್ತಿಗಾಗಿ ಪತ್ನಿಯನ್ನೇ ಕೊಂದ ಗಂಡ; ಮುಖಕ್ಕೆ ದಿಂಬು ಇಟ್ಟು ಉಸಿರುಗಟ್ಟಿಸಿದ!
ಆನೇಕಲ್ ಬಳಿ ಬೈಕ್‌ಗೆ ಟ್ರ್ಯಾಕ್ಟರ್ ಡಿಕ್ಕಿಯಾಗಿ ಮಹಿಳೆ ಸಾವು
ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲ್ಲೂಕಿನ ದೊಮ್ಮಸಂದ್ರದಲ್ಲಿ ಬುಲೆಟ್ ಬೈಕ್‌ಗೆ ಟ್ರ್ಯಾಕ್ಟರ್ ಡಿಕ್ಕಿಯಾಗಿ ಬೈಕ್‌ನ ಹಿಂಬದಿಯಲ್ಲಿ ಕುಳಿತಿದ್ದ ಮಹಿಳೆಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಟ್ರ್ಯಾಕ್ಟರ್ ಅತಿ ವೇಗವಾಗಿ ಬಂದು ಮುಂದೆ ಸಾಗುತ್ತಿದ್ದ ಬುಲೆಟ್ ಬೈಕ್‌ಗೆ ಡಿಕ್ಕಿ ಹೊಡೆದಿತ್ತು. ಈ ವೇಳೆ ಬೈಕ್‌ನ ಹಿಂಬದಿ ಕುಳಿತಿದ್ದ ಮಹಿಳೆ ಆಯ ತಪ್ಪಿ ಕೆಳಗೆ ಬಿದ್ದಿದ್ದರು. ಈ ವೇಳೆ ಮಹಿಳೆ ಮೇಲೆ ಟ್ರಾಕ್ಟರ್ ಹರಿದು ಗಂಭೀರ ಗಾಯಗೊಂಡರು. ಕೂಡಲೇ ಮಹಿಳೆಯರನ್ನು ಆಸ್ಪತ್ರೆಗೆ ರವಾನೆ ಮಾಡಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವು ಸಂಭವಿಸಿದೆ. ಸರ್ಜಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.