ಇಂಗ್ಲಿಷ್‌ ಮಾತಿನ ಅಪಾರ್ಥ, ಮೈಮೇಲೆ ಎರಗಿದ ಪಿಟ್‌ಬುಲ್‌ ನಾಯಿ! - Vistara News

ಕ್ರೈಂ

ಇಂಗ್ಲಿಷ್‌ ಮಾತಿನ ಅಪಾರ್ಥ, ಮೈಮೇಲೆ ಎರಗಿದ ಪಿಟ್‌ಬುಲ್‌ ನಾಯಿ!

ಇಂಗ್ಲೀಷ್‌ ಭಾಷೆಯನ್ನು ಕಿರಾಣಿ ಅಂಗಡಿ ಮಾಲೀಕ ಅಪಾರ್ಥವಾಗಿ ತಿಳಿದುಕೊಂಡಿದ್ದಾನೆ. ಗ್ರಾಹಕನಿಗೆ ಇಂಗ್ಲೀ಼ಷ್‌ ಗೊತ್ತಿರುವುದೇ ಕಂಟಕ ಆಗಿದೆ.

VISTARANEWS.COM


on

ನಾಯಿಯಿಂದ ಕಚ್ಚಿಸಿಕೊಂಡ ಥಾಪ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಇಂಗ್ಲಿಷ್‌ ಭಾಷಾ ವ್ಯಾಮೋಹ ಇಲ್ಲದೇ ಇರುವವರು ಯಾರು ಹೇಳಿ? ಇಂಗ್ಲಿಷ್‌ ಭಾಷೆ ಬರದೇ ಇದ್ದರೂ ಕಂಗ್ಲಿಷ್‌ ಆದರೂ ಮಾತನಾಡಲು ಮುಂದಾಗುತ್ತಾರೆ. ಈ ಭರಾಟೆಯಲ್ಲಿ ಅಪಾರ್ಥವಾಗಿ ಅವಾಂತರ ಆಗುವುದಿದೆ. ದಿಲ್ಲಿಯಲ್ಲಿ ಇಂಥದ್ದೇ ಒಂದು ಘಟನೆ ನಡೆದಿದೆ. ಇಂಗ್ಲಿಷ್‌ ಪದದ ಎಡವಟ್ಟಿನಿಂದಾಗಿ ಯುವಕನೊಬ್ಬ ಅನ್ಯಾಯವಾಗಿ ಹಲ್ಲೆಗೆ ಒಳಗಾಗಿದ್ದಾನೆ. ಇಷ್ಟೇ ಅಲ್ಲ, ಆಕ್ರಮಣಕಾರಿ ನಾಯಿ ಎಂದೇ ಕರೆಯಲಾಗುವ ಪಿಟ್‌ ಬುಲ್‌ ದಾಳಿಯಿಂದಲೂ ಗಂಭೀರವಾಗಿ ಗಾಯಗೊಂಡಿದ್ದಾನೆ!

ದಿಲ್ಲಿಯ ಮಾಳವೀಯ ನಗರದಲ್ಲಿ ಶುಕ್ರವಾರ ರಾತ್ರಿ ಕುಡಿಯುವ ನೀರು ತರಲು ಟ್ಯಾಟೂ ಕಲಾವಿದ 27 ವರ್ಷದ ಥಾಪಾ ಕಿರಾಣಿ ಅಂಗಡಿಗೆ ಹೋಗಿದ್ದ. ನೀರು ಕೊಡಿ ಎಂದು ಇಂಗ್ಲಿಷ್‌ನಲ್ಲಿ ಕೇಳಿದ್ದ. ಆತನ ದುರಾದೃಷ್ಟಕ್ಕೆ ಅವನು ಹೇಳಿದ್ದು ಅಂಗಡಿ ಮಾಲೀಕ ಕೈಫ್‌ ಗೆ ಅರ್ಥವಾಗಲಿಲ್ಲ. ಈ ನೇಪಾಳಿ ಯುವಕ ತನ್ನನ್ನು ಬೈಯುತ್ತಿದ್ದಾನೆ ಎಂದೇ ತಪ್ಪಾಗಿ ಅರ್ಥ ಮಾಡಿಕೊಂಡ. ಥಾಪಾಗೆ ಥಳಿಸಲು ಆರಂಭಿಸಿದ. ಥಾಪಾ ಇನ್ನೊಮ್ಮೆ, ಮತ್ತೊಮ್ಮೆ ಇಂಗ್ಲಿಷ್‌ ನಲ್ಲಿ, ತಾನು ಕೇಳಿದ್ದು ನೀರನ್ನು ಎಂದರೂ ಆ ಅಂಗಡಿ ಮಾಲೀಕನಿಗೆ ಅರ್ಥವಾಗಲಿಲ್ಲ. ಥಾಪಾಗೆ ಗೂಸಾ ಬೀಳುವುದು ನಿಲ್ಲಲಿಲ್ಲ.

ಥಾಪಾನ ಗ್ರಹಚಾರಕ್ಕೆ, ಅಂಗಡಿ ಮಾಲೀಕ ಸಾಕಿದ್ದ ಪಿಟ್‌ಬುಲ್‌ ನಾಯಿ ಒಂದೇ ಸಮನೆ ಕೂಗತೊಡಗಿತು. ಅಂಗಡಿ ಮಾಲೀಕ ಕೈಫ್‌ ಆ ನಾಯಿಯನ್ನು ಥಾಪಾ ಮೇಲೆ ಛೂ ಬಿಟ್ಟ. ತಕ್ಷಣ ಅದು ಆ ಯುವಕನ ಮೇಲೆ ಎರಗಿ ಕಚ್ಚಲು ಶುರು ಮಾಡಿತು. ಈ ಜಗಳ ನೋಡಲು ನೂರಾರು ಜನ ಸೇರಿದ್ದರೂ, ಯಾರೊಬ್ಬರೂ ಥಾಪಾನ ನೆರವಿಗೆ ಬರಲಿಲ್ಲ. ನಾಯಿ ಆತನ ಮೇಲೆ ಹರಿಹಾಯ್ದು ಕುತ್ತಿಗೆ, ತಲೆಯ ಹಿಂಭಾಗ ಮತ್ತು ಕೈಗಳನ್ನು ಕಚ್ಚಿ ಗಂಭೀರವಾಗಿ ಗಾಯಗೊಳಿಸಿತು. ಒಂದು ಕಿವಿಯನ್ನು ಕಚ್ಚಿ ಸಂಪೂರ್ಣವಾಗಿ ಹರಿದು ಹಾಕಿತು.

ಇದನ್ನೂ ಓದಿ : ಪ್ರೀತಿಯ ಶ್ವಾನದ ಜತೆಗೊಂದು ಹ್ಯಾಪಿ ಜರ್ನಿ ..!

ಕಿವಿ ಜೋಡಿಸಲು ಸರ್ಜರಿ

ಕೈ, ಕಾಲು, ತಲೆಯಿಂದ ರಕ್ತ ಒಂದೇ ಸಮನೆ ಸುರಿಯುತ್ತಿತ್ತು. ಹೇಗೋ ರೂಮಿಗೆ ತಲುಪಿದ. ಥಾಪಾನನ್ನು ರೂಮ್‌ ಮೇಟ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ. ಅಲ್ಲಿನ ವೈದ್ಯರು ಕಿವಿಗೆ ಸರ್ಜರಿ ಮಾಡಿದ್ದಾರೆ.

ಡೆಹರಾಡೂನ್‌ ಮೂಲದವನಾದ ಥಾಪಾ ಕೆಲಸದ ನಿಮಿತ್ತ ದಿಲ್ಲಿಯ ಮಾಳವೀಯ ನಗರಕ್ಕೆ ಬಂದಿದ್ದ. ಇದೀಗ ಈ ಪ್ರಕರಣ ಪೊಲೀಸ್‌ ಠಾಣೆಯ ಮೆಟ್ಟಿಲು ಹತ್ತಿದೆ. ಪೊಲೀಸರು ಆರೋಪಿ ಮೇಲೆ ಎಫ್‌ ಐ ಆರ್‌ ದಾಖಲಿಸಿಕೊಂಡಿದ್ದಾರೆ. ತನ್ನನ್ನು ವಿನಾಕಾರಣ ಥಳಿಸಿದ ಅಂಗಡಿ ಮಾಲೀಕನ ಮೇಲೆ ಪೊಲೀಸರು ಇನ್ನೂ ಕ್ರಮ ಕೈಗೊಂಡಿಲ್ಲ ಎನ್ನುವುದು ಥಾಪಾನ ನೋವಿನ ದನಿ.

ಇದನ್ನೂ ಓದಿ : ಸರ್ಕಾರ ಕೊಟ್ಟರೂ ಪೊಲೀಸರು ಕೊಡಲಿಲ್ಲ: ಬೆಂಗಳೂರಿನಲ್ಲಿ 24/7 ಹೋಟೆಲ್‌ ನಡೆಸಲು ಅನುಮತಿಗೆ ಮನವಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Self Harming: ಕಟ್ಟಡದ ಮೇಲಿಂದ ಬಿದ್ದು ಯುವಕ ಸೂಸೈಡ್‌

Bengaluru News : ಕೆಲಸ ಸಿಗದೆ ಇರುವುದಕ್ಕೆ ಬೇಸರಗೊಂಡ ಯುವಕನೊಬ್ಬ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ (Self harming) ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

VISTARANEWS.COM


on

By

Self Harming Man commits suicide after falling from PG in Bengaluru
Koo

ಬೆಂಗಳೂರು: ಪಿ.ಜಿ ಮೇಲಿಂದ ಬಿದ್ದು ಯುವಕ ಆತ್ಮಹತ್ಯೆ (Self harming) ಮಾಡಿಕೊಂಡಿದ್ದಾನೆ. ಬೆಂಗಳೂರಿನ ವೈಟ್ ಫಿಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯ ಅಂಬೇಡ್ಕರ್ ನಗರದಲ್ಲಿ ಘಟನೆ ನಡೆದಿದೆ. ಕಲಬುರಗಿ ಮೂಲದ 28ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಘಟನಾ ಸ್ಥಳಕ್ಕೆ ವೈಟ್ ಫಿಲ್ಡ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯುವಕ ಕೆಲಸ ಹುಡುಕಿಕೊಂಡು ಬೆಂಗಳೂರಿಗೆ ಬಂದಿದ್ದ ಎನ್ನಲಾಗಿದೆ. ಆದರೆ ಅಲೆದಾಡಿ ಸುಸ್ತಾದ ಯುವಕನಿಗೆ ಎಲ್ಲೂ ಕೆಲಸ ಸಿಕ್ಕಿರಲಿಲ್ಲ ಎನ್ನಲಾಗಿದೆ. ಇದರಿಂದ ಮನನೊಂದು ತಾನು ವಾಸವಿದ್ದ ಪಿಜಿ ಕಟ್ಟಡದ ಮೇಲಿಂದ ಬಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Viral News: ಬ್ರೇಕ್‌ ಬದಲು ಎಕ್ಸಿಲೇಟರ್‌ ತುಳಿದ: ಹೊಸ ಕಾರಿನ ಪೂಜೆ ವೇಳೆ ನಡೆಯಿತು ಅವಘಡ; ಇಲ್ಲಿದೆ ವಿಡಿಯೊ

Crime News: ಮಕ್ಕಳನ್ನು ಕೊಂದ ಬಳಿಕ ಕಟ್ಟಡದಿಂದ ಜಿಗಿದು ಮಹಿಳೆ ಆತ್ಮಹತ್ಯೆ; ಡೆತ್‌ನೋಟ್‌ನಲ್ಲಿ ಏನಿದೆ?

ಮುಂಬೈ: ಮಹಾರಾಷ್ಟ್ರದ ನಾಸಿಕ್‌ನಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ಮಹಿಳೆಯೊಬ್ಬಳು ತನ್ನಿಬ್ಬರು ಮಕ್ಕಳನ್ನು ಕೊಂದು ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸಾವಿಗೆ ಮುನ್ನ ವಿಡಿಯೊ ಮೆಸೇಜ್‌ ಮಾಡಿರುವ ಮಹಿಳೆ, ಪತಿಯ ಕಿರುಕುಳದಿಂದ ತಾನು ಈ ನಿರ್ಧಾರಕ್ಕೆ ಬಂದಿರುವುದಾಗಿ ಆರೋಪಿಸಿದ್ದಾಳೆ. ಮೃತರನ್ನು ಅಶ್ವಿನಿ ನಿಕುಂಭ್‌ (30) ಮತ್ತು ಮಕ್ಕಳಾದ ಆರಾಧ್ಯಾ (8) ಹಾಗೂ ಅಗಸ್ತ್ಯ (2) ಎಂದು ಗುರುತಿಸಲಾಗಿದೆ (Crime News).

ʼʼಅಶ್ವಿನಿ ಆತ್ಮಹತ್ಯೆ ಮಾಡುವ ಮುನ್ನ ಮಕ್ಕಳಿಗೆ ವಿಷ ನೀಡಿದ್ದಾರೆʼʼ ಎಂದು ಪೊಲೀಸರು ತಿಳಿಸಿದ್ದು, ಘಟನೆ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ. ಬುಧವಾರ ಬೆಳಿಗ್ಗೆ 7 ಗಂಟೆ ಸುಮಾರಿಗೆ ಅಶ್ವಿನಿ ಕೋನಾರ್ಕ್‌ ನಗರದ ಅಪಾರ್ಟ್‌ಮೆಂಟ್‌ನ ಟೆರೇಸ್‌ನಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಳು. ಘಟನೆ ಸ್ಥಳಕ್ಕೆ ತಲುಪಿದ ಪೊಲೀಸರಿಗೆ ಬಳಿಕ ಆಕೆಯ ಮಕ್ಕಳ ಶವವೂ ಕಂಡು ಬಂದಿತ್ತು. ಈ ವೇಳೆ ಆಕೆಯ ಪತಿ ಊರಿನಲ್ಲಿ ಇರಲಿಲ್ಲ. ಹೀಗಾಗಿ ಆಕೆಯೇ ಮಕ್ಕಳಿಗೆ ವಿಷ ಉಣಿಸಿ ಕೊಂದು ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ಊಹಿಸಿದ್ದಾರೆ.

ಡೆತ್‌ನೋಟ್‌ ಪತ್ತೆ

ಪರಿಶೀಲನೆ ವೇಳೆ ಪೊಲೀಸರಿಗೆ ಅಶ್ವಿನಿ ಬರೆದಿದ್ದಾಳೆ ಎನ್ನಲಾದ ಡೆತ್‌ನೋಟ್‌ ಪತ್ತೆಯಾಗಿದೆ. ಇದರಲ್ಲಿ ಆಕೆ ಪತಿ ಸ್ವಪ್ನಿಲ್‌ ಕಿರುಕುಳ ನೀಡುತ್ತಿರುವ ಬಗ್ಗೆ ಉಲ್ಲೇಖಿಸಿದ್ದಾಳೆ.‌ ಜತೆಗೆ ಸಾಯುವ ಮುನ್ನ ವಿಡಿಯೊವನ್ನು ರೆಕಾರ್ಡ್‌ ಮಾಡಿದ್ದಾಳೆ. ಸ್ವಪ್ನಿಲ್‌ ನಿರಂತರ ಹಿಂಸೆ ನೀಡುತ್ತಿರುವುದರಿಂದ ಈ ನಿರ್ಧಾರಕ್ಕೆ ಬಂದಿರುವುದಾಗಿ ಆಕೆ ತನ್ನ ಸಂಬಂಧಿಕರಿಗೆ ಕಳುಹಿಸಿದ ವಿಡಿಯೊದಲ್ಲಿ ತಿಳಿಸಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ. ಕೃತ್ಯ ನಡೆಯುವ ವೇಳೆ ಸ್ವಪ್ನಿಲ್‌ ಕೆಲಸದ ನಿಮಿತ್ತ ಪುಣೆಗೆ ತೆರಳಿದ್ದರು. ಸದ್ಯ ಅವರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ.

ಇದನ್ನೂ ಓದಿ: ಶಾಲೆಗೆ ಹೋಗದ್ದಕ್ಕೆ ಬೈದ ತಾಯಿ, ಬಾಲಕ ಆತ್ಮಹತ್ಯೆ

ನೆಚ್ಚಿನ ಶ್ವಾನ ಮರಿ ನಾಪತ್ತೆಯಾದ ಕೊರಗಿನಿಂದ ಆತ್ಮಹತ್ಯೆ

ತನ್ನ ಪ್ರೀತಿಯ ಶ್ವಾನ ನಾಪತ್ತೆಯಾದ ಹಿನ್ನೆಲೆಯಲ್ಲಿ ಕೊರಗಿನಿಂದ 12 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಏಪ್ರಿಲ್‌ 27ರಂದು ಹರಿಯಾಣದಲ್ಲಿ ನಡೆದಿತ್ತು. ʼʼಐದು ದಿನಗಳ ಹಿಂದೆ ನಮ್ಮ ಸಾಕು ನಾಯಿ ಕಾಣೆಯಾಗಿತ್ತು. ಈ ಶ್ವಾನ ಮತ್ತು ಬಾಲಕಿಯ ಮಧ್ಯೆ ಸುಮಾರು 3 ತಿಂಗಳಿಂದ ಉತ್ತಮ ಬಾಂಧವ್ಯ ರೂಪುಗೊಂಡಿತ್ತುʼʼ ಎಂದು ಘಟನೆಯ ಬಗ್ಗೆ ಮನೆಯವರು ತಿಳಿಸಿದ್ದರು. ʼʼಶ್ವಾನ ಕಾಣೆಯಾದಾಗಿನಿಂದ ಆಕೆ ಖಿನ್ನತೆಗೆ ಒಳಗಾಗಿದ್ದಳು. ಬಳಿಕ ತೀವ್ರ ಚಿಂತೆಗೆ ಒಳಗಾಗಿದ್ದ ಅವಳು ಸರಿಯಾಗಿ ಆಹಾರವನ್ನೂ ಸೇವಿಸುತ್ತಿರಲಿಲ್ಲʼʼ ಎಂದು ಅವರು ಹೇಳಿದ್ದರು. ಕುಟುಂಬಸ್ಥರು ಆಕೆಯನ್ನು ಸಮಾಧಾನಪಡಿಸಲು ಎಷ್ಟೇ ಪ್ರಯತ್ನಿಸಿದರೂ ನಾಯಿಮರಿಯನ್ನು ಕಳೆದುಕೊಂಡ 6ನೇ ತರಗತಿಯ ವಿದ್ಯಾರ್ಥಿನಿಯ ದುಃಖವನ್ನು ಕಡಿಮೆ ಮಾಡಲು ಸಾಧ್ಯವಾಗಲಿಲ್ಲ ಎಂದು ಮೂಲಗಳು ತಿಳಿಸಿವೆ.

ಬಾಲಕಿಯ ತಾಯಿ ಮತ್ತು ಸಹೋದರಿ ದಿನಸಿ ಖರೀದಿಗಾಗಿ ಮನೆಯಿಂದ ಹೊರ ಹೋಗಿದ್ದರು. ಮನೆಯಲ್ಲಿ ಒಬ್ಬಳೇ ಇದ್ದ ಬಾಲಕಿ ಈ ವೇಳೆ ಶಾಕಿಂಗ್‌ ನಿರ್ಧಾರ ಕೈಗೊಂಡಿದ್ದಳು. ನೇಣು ಬಿಗಿದುಕೊಂಡು ಜೀವ ಕಳೆದುಕೊಂಡಿದ್ದಳು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

Atrocity on women: ಟಿಎಂಸಿ ಮುಖಂಡರ ವಿರುದ್ಧ ಅತ್ಯಾಚಾರ ಕೇಸ್‌; ಯೂ ಟರ್ನ್‌ ಹೊಡೆದ ದೂರುದಾರೆ

Atrocity on women:ಪಶ್ಚಿಮ ಬಂಗಾಳದ 24 ಪರಗಣ ಜಿಲ್ಲೆಯ ಸಂದೇಶ್‌ಖಲಿಯಲ್ಲಿ ತೃಣ ಮೂಲ ಕಾಂಗ್ರೆಸ್ ನಾಯಕ ಶೇಖ್ ಷಹಜಹಾನ್ ಮತ್ತು ಅವರ ಸಹಚರರ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಯುವತಿಯರ ಮೇಲೆ ‘ವ್ಯವಸ್ಥಿತ ಅತ್ಯಾಚಾರ’ ಎಸಗಿದ ಆರೋಪ ಕೇಳಿಬಂದಿದ್ದು, ರಾಜಕೀಯ ಕೋಲಾಹಲಕ್ಕೆ ಕಾರಣವಾಗಿತ್ತು. ಟಿಎಂಸಿ ಪಕ್ಷದ ಮುಖಂಡರು ಸುಂದರವಾದ ಹೆಂಡತಿ ಅಥವಾ ಚಿಕ್ಕ ಹೆಣ್ಣುಮಕ್ಕಳು ಇರುವ ಮನೆಗಳಿಗೆ ಸಮೀಕ್ಷೆ ನೆಪದಲ್ಲಿ ಬರುತ್ತಿದ್ದರು.

VISTARANEWS.COM


on

Atrocity on women
Koo

ಪಶ್ಚಿಮ ಬಂಗಾಳ: ಇಡೀ ರಾಜ್ಯದಲ್ಲೇ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಕ್ಕೆ ಕಾರಣವಾಗಿದ್ದ ತೃಣಮೂಲ ಕಾಂಗ್ರೆಸ್‌(Trinamool Congress) ಮುಖಂಡರ ವಿರುದ್ಧದ ಅತ್ಯಾಚಾರ ಪ್ರಕರಣ(Atrocity on women)ದಲ್ಲಿ ಮಹತ್ವದ ಬೆಳವಣಿಗೆಯೊಂದು ಆಗಿದೆ. ಅತ್ಯಾಚಾರದ ದೂರು ನೀಡಿದ್ದ ಮೂವರು ಮಹಿಳೆಯರಲ್ಲಿ ಒಬ್ಬ ಸಂತ್ರಸ್ತೆ ಯೂ ಟರ್ನ್‌ ಹೊಡೆದಿದ್ದು, ಸುಳ್ಳು ದೂರು ನೀಡುವಂತೆ ಸ್ಥಳೀಯ ಬಿಜೆಪಿ ಮುಖಂಡರು(BJP Leaders) ಒತ್ತಾಯಿಸಿದ್ದರು ಎಂದು ಹೇಳಿಕೆ ನೀಡಿದ್ದಾಳೆ. ಅಲ್ಲದೇ ತನ್ನ ದೂರನ್ನು ಹಿಂಪಡೆದಿದ್ದಾಳೆ.

ಏನಿದು ಪ್ರಕರಣ?

ಪಶ್ಚಿಮ ಬಂಗಾಳದ 24 ಪರಗಣ ಜಿಲ್ಲೆಯ ಸಂದೇಶ್‌ಖಲಿಯಲ್ಲಿ ತೃಣ ಮೂಲ ಕಾಂಗ್ರೆಸ್ ನಾಯಕ ಶೇಖ್ ಷಹಜಹಾನ್ ಮತ್ತು ಅವರ ಸಹಚರರ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಯುವತಿಯರ ಮೇಲೆ ‘ವ್ಯವಸ್ಥಿತ ಅತ್ಯಾಚಾರ’ ಎಸಗಿದ ಆರೋಪ ಕೇಳಿಬಂದಿದ್ದು, ರಾಜಕೀಯ ಕೋಲಾಹಲಕ್ಕೆ ಕಾರಣವಾಗಿತ್ತು. ಟಿಎಂಸಿ ಪಕ್ಷದ ಮುಖಂಡರು ಸುಂದರವಾದ ಹೆಂಡತಿ ಅಥವಾ ಚಿಕ್ಕ ಹೆಣ್ಣುಮಕ್ಕಳು ಇರುವ ಮನೆಗಳಿಗೆ ಸಮೀಕ್ಷೆ ನೆಪದಲ್ಲಿ ಬರುತ್ತಿದ್ದರು. ಮಹಿಳೆಯರನ್ನು ಪಕ್ಷದ ಕಚೇರಿಗೆ ಕರೆದೊಯ್ಯುತ್ತಿದ್ದರು. ಹಲವಾರು ರಾತ್ರಿಯವರೆಗೂ ತಮಗೆ ತೃಪ್ತಿಯಾಗುವವರೆಗೂ ಅವರನ್ನು ಅಲ್ಲಿಯೇ ಇರಿಸಿಕೊಳ್ಳುತ್ತಿದ್ದರು ಎಂದು ಮಹಿಳೆಯೊಬ್ಬರು ಹೇಳಿರುವ ವಿಡಿಯೋ ವೈರಲ್ ಆಗಿದ್ದು ಇಡೀ ದೇಶದಲ್ಲಿ ಸುದ್ದಿಯಾಗಿತ್ತು.

ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯಲ್ಲಿ ಸ್ಥಳೀಯ ಜಿಲ್ಲಾ ಪಂಚಾಯತ್ ಸದಸ್ಯ ಶೇಖ್ ಷಹಜಹಾನ್ ವಿರುದ್ಧ ‘ವ್ಯವಸ್ಥಿತ ಲೈಂಗಿಕ ದೌರ್ಜನ್ಯ’ ಮತ್ತು ಭೂ ಕಬಳಿಕೆಯ ಆರೋಪ ಕೇಳಿಬಂದಿತ್ತು. ಈತನೇ ಮುಖ್ಯ ತಪ್ಪಿತಸ್ಥ ಎಂದು ಮಹಿಳೆಯರು ಆರೋಪಿಸಿದ್ದಾರೆ. ಬಹಳ ಪ್ರಭಾವಿ ಟಿಎಂಸಿ ನಾಯಕರಾಗಿರುವ ಷಹಜಹಾನ್ ಶೇಖ್ ಮತ್ತು ಅವರ ಸಹಚರರ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪಗಳನ್ನು ಮಾಡಿ ಸಂದೇಶ್‌ಖಾಲಿಯ ಮಹಿಳೆಯರು ನಡೆಸುತ್ತಿದ್ದ ಪ್ರತಿಭಟನೆ, ಇತ್ತೀಚೆಗೆ ಉಗ್ರ ಸ್ವರೂಪ ಪಡೆದುಕೊಂಡಿತ್ತು. ಇದಾದ ಮೇಲೆ ಷಹಜಹಾನ್‌ ಮೇಲೆ ಇಡಿ ರೇಡ್‌ ಕೂಡ ನಡೆದಿತ್ತು.

ಇದನ್ನೂ ಓದಿ:Human trafficking: ಕೆಲಸ ಕೊಡಿಸೋದಾಗಿ ನಂಬಿಸಿ ರಷ್ಯಾ-ಉಕ್ರೇನ್‌ ಯುದ್ಧ ಪೀಡಿತ ಪ್ರದೇಶಕ್ಕೆ ರವಾನೆ-ಇಬ್ಬರು ಅರೆಸ್ಟ್‌

ಯೂಟರ್ನ್‌ ಹೊಡೆದ ಮಹಿಳೆ ಹೇಳೋದೇನು?

ಷಹಜಹಾನ್‌ ಮತ್ತು ಆತನ ಸಹಚರರ ವಿರುದ್ಧ ದೂರು ದಾಖಲಿಸಿದ್ದ ಮೂವರು ಮಹಿಳೆಯರಲ್ಲಿ ಒಬ್ಬಳು ತನ್ನ ದೂರನ್ನು ವಾಪಾಸ್‌ ಪಡೆದಿದ್ದು, ಬಿಜೆಪಿಯ ಕುಮ್ಮಕ್ಕು ಎಂದು ಹೇಳಿದ್ದಾಳೆ.ಬಿಜೆಪಿಯ ಸ್ಥಳೀಯ ಮುಖಂಡರು ನನ್ನನ್ನು ಬೆದರಿಸಿ ಖಾಲಿ ಪತ್ರಕ್ಕೆ ಸಹಿ ಹಾಕಿಸಿಕೊಂಡಿದ್ದರು. ಬಿಜೆಪಿ ಮಹಿಳಾ ಮೋರ್ಛಾದ ನಾಯಕರು ನಮ್ಮ ಮನೆಗೆ ಬಂದು ಸುಳ್ಳು ಅತ್ಯಾಚಾರ ದೂರಿಗೆ ಸಹಿ ಮಾಡುವಂತೆ ಒತ್ತಾಯಿಸಿದ್ದರು. ಇದಾದ ಮೇಲೆ ಪೊಲೀಸ್‌ ಠಾಣೆಗೂ ಕರೆದೊಯ್ದು ಅತ್ಯಾಚಾರ ಪ್ರಕರಣ ದಾಖಲಿಸಿದರು. ನನ್ನ ಮೇಲೆ ಯಾವ ಟಿಎಂಸಿ ಮುಖಂಡನೂ ಅತ್ಯಾಚಾರ ಮಾಡಿಲ್ಲ. ರಾತ್ರಿ ವೇಳೆ ಟಿಎಂಸಿ ಕಚೇರಿಗೆ ಬರುವಂತೆ ಯಾರೂ ಒತ್ತಾಯಿಸಿಲ್ಲ ಎಂದು ಮಹಿಳೆ ಹೇಳಿದ್ದಾರೆ. ಅಲ್ಲದೇ ಇದೀಗ ಆಕೆ ಬಿಜೆಪಿ ವಿರುದ್ಧವೇ ದೂರು ನೀಡಿದ್ದಾಳೆ. ಮತ್ತೊಂದೆಡೆ ಬಿಜೆಪಿ ಮುಖಂಡ ಸುವೇಂದು ಅಧಿಕಾರಿ ಹಾಗೂ ಬಿಜೆಪಿ ನಾಯಕರ ವಿರುದ್ಧ ಚುನಾವಣಾ ಆಯೋಗಕ್ಕೆ ಟಿಎಂಸಿ ದೂರು ನೀಡಿದೆ.

Continue Reading

ಕ್ರೈಂ

HD Revanna Case Jailed: ಎಚ್‌.ಡಿ ರೇವಣ್ಣ ಪರ ಸುದ್ದಿಗೋಷ್ಠಿ ನಡೆಸಿದ ನಾಲ್ವರ ಬಂಧನ; ಕಾರ್ತಿಕ್‌ ಬಂಧನಕ್ಕೂ ಕ್ಷಣಗಣನೆ

HD Revanna Case Jailed: ಯುವ ಜನತಾದಳ‌ ಮಾಜಿ ಅಧ್ಯಕ್ಷ ಎಚ್.ಕೆ.ಸುಜಯ್, ಕಪ್ಪಡಿ‌ ಗ್ರಾಮದ ಮಧು, ಹೆಬ್ಬಾಳು ಗ್ರಾಮ ಪಂಚಾಯತ್ ಸದಸ್ಯ ಮನು,‌ ವಕೀಲ‌ ತಿಮ್ಮಪ್ಪ ಎಂಬವರನ್ನು ಬಂಧಿಸಲಾಗಿದೆ. ಇವರು ಸಂತ್ರಸ್ತ ಮಹಿಳೆಯ ಕಿಡ್ನಾಪ್‌ಗೆ ಸಹಕರಿಸಿದ್ದರು ಎಂದು ಆರೋಪಿಸಲಾಗಿದೆ.

VISTARANEWS.COM


on

hd revanna jailed prajwal revanna case
Koo

ಮೈಸೂರು: ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಸಂತ್ರಸ್ತ ಮಹಿಳೆಯನ್ನು ಕಿಡ್ನಾಪ್‌ (Kidnap case) ಮಾಡಿಸಲಾಗಿದೆ ಎನ್ನಲಾದ ಪ್ರಕರಣದಲ್ಲಿ ಮತ್ತೆ ನಾಲ್ವರನ್ನು ಎಸ್ಐಟಿ (SIT) ಪೊಲೀಸರು ಬಂಧಿಸಿದ್ದಾರೆ. ಈಗಾಗಲೇ ಈ ಪ್ರಕರಣದಲ್ಲಿ ರೇವಣ್ಣ ಬಂಧಿತರಾಗಿ ವಿಚಾರಣಾಧೀನ ಕೈದಿಯಾಗಿ (HD Revanna Case Jailed) ಜೈಲಿನಲ್ಲಿದ್ದಾರೆ.

ಯುವ ಜನತಾದಳ‌ ಮಾಜಿ ಅಧ್ಯಕ್ಷ ಎಚ್.ಕೆ.ಸುಜಯ್, ಕಪ್ಪಡಿ‌ ಗ್ರಾಮದ ಮಧು, ಹೆಬ್ಬಾಳು ಗ್ರಾಮ ಪಂಚಾಯತ್ ಸದಸ್ಯ ಮನು,‌ ವಕೀಲ‌ ತಿಮ್ಮಪ್ಪ ಎಂಬವರನ್ನು ಬಂಧಿಸಲಾಗಿದೆ. ಇವರು ಸಂತ್ರಸ್ತ ಮಹಿಳೆಯ ಕಿಡ್ನಾಪ್‌ಗೆ ಸಹಕರಿಸಿದ್ದರು ಎಂದು ಆರೋಪಿಸಲಾಗಿದೆ. ಕೆ.ಆರ್.ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ನಾಲ್ವರೂ ನಿನ್ನೆ ಎಚ್‌.ಡಿ ರೇವಣ್ಣ ಪರ ಸುದ್ದಿಗೋಷ್ಠಿ ನಡೆಸಿ ಪೊಲೀಸರು ತಾರತಮ್ಯ ಎಸಗುತ್ತಿರುವ ಕುರಿತು ಆರೋಪಿಸಿದ್ದರು.

ಕಾರ್ತಿಕ್‌ ಬಂಧನಕ್ಕೆ ಬಲೆ ಬೀಸಿದ ಪೊಲೀಸರು

ಹಾಸನ ಸಂಸದ ಪ್ರಜ್ವಲ್ ರೇವಣ್ಣರದ್ದು (Hassan MP Prajwal revanna case) ಎನ್ನಲಾದ ಅಶ್ಲೀಲ ವೀಡಿಯೋ ವೈರಲ್ (viral video) ಆರೋಪ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಬಳಿಕ ಪ್ರಜ್ವಲ್ ಮಾಜಿ ಕಾರು ಚಾಲಕ ಕಾರ್ತಿಕ್‌ಗೆ ಬಂಧನ ಭೀತಿ ಎದುರಾಗಿದೆ. ಕಾರ್ತಿಕ್, ಪುಟ್ಟಿ ಅಲಿಯಾಸ್ ಪುಟ್ಟರಾಜ್, ನವೀನ್ ಗೌಡ ಹಾಗು ಚೇತನ್ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಏಪ್ರಿಲ್ 23ರಂದು ಹಾಸನ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿತ್ತು. ಎಡಿಟ್ ಮಾಡಿ ಸಂಸದ ಪ್ರಜ್ವಲ್ ಅವರ ಅಶ್ಲೀಲ ಫೋಟೋ ವೀಡಿಯೋ ಸೃಷ್ಟಿ ಮಾಡಿ ಪೆನ್ ಡ್ರೈವ್ ಮೂಲಕ ಹಂಚಿಕೊಂಡ ಆರೋಪವಿದೆ. ಕಾರ್ತಿಕ್, ಪುಟ್ಟರಾಜ್, ನವೀನ್ ಗೌಡ, ಶರತ್ ಆಲಿಯಾಸ್ ಕ್ವಾಲಿಟಿ ಬಾರ್ ಶರತ್ ವಿರುದ್ಧ ಜೆಡಿಎಸ್‌ ದೂರು ಕೊಟ್ಟಿತ್ತು.

ನವೀನ್ ಗೌಡ ಮತ್ತು ಇತರರು ಎಂದು ಸೆನ್ ಠಾಣೆ ಪೊಲೀಸರು ಎಫ್‌ಐಆರ್ ದಾಖಲು ಮಾಡಿದ್ದರು. ನ್ಯಾಯಾಲಯಕ್ಕೆ ರಿಮೈಂಡರ್ ಅರ್ಜಿ ಮೂಲಕ ಕಾರ್ತಿಕ್, ಪುಟ್ಟರಾಜು ಹಾಗೂ ಚೇತನ್ ಎಂಬ ಹೆಸರು ಉಲ್ಲೇಖಿಸಿ ಮಾಹಿತಿ ರವಾನಿಸಿದ್ದರು. ತಮ್ಮ ವಿರುದ್ಧ ಕೇಸ್ ದಾಖಲಾಗುತ್ತಲೆ ಆರೋಪಿಗಳು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ನಿನ್ನೆ ಹಾಸನದ ಮೂರನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ಅರ್ಜಿ ವಜಾ ಆಗಿದೆ.

ಅರ್ಜಿ ವಜಾ ಬೆನ್ನಲ್ಲೇ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಪೆನ್ ಡ್ರೈವ್ ವೈರಲ್ ಆರೋಪ ಪ್ರಕರಣ ಇನ್ನೂ ಎಸ್ಐಟಿಗೆ ಹಸ್ತಾಂತರ ಆಗಿಲ್ಲ. ಈ ಹಿನ್ನೆಲೆಯಲ್ಲಿ ಹಾಸನ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇಂದು ರೇವಣ್ಣ ಮತ್ತೊಂದು ಜಾಮೀನು ಅರ್ಜಿ ವಿಚಾರಣೆ

ಮಹಿಳೆ ಅಪಹರಣ (kidnap) ಕೇಸ್‌ನಲ್ಲಿ ಬಂಧನಕ್ಕೊಳಗಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಹೆಚ್. ಡಿ ರೇವಣ್ಣ ಅವರ ಇನ್ನೊಂದು ಜಾಮೀನು ಅರ್ಜಿ ಇಂದು ಜನಪ್ರತಿನಿಧಿ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಗಾಗಲಿದೆ. ಮಗ, ಹಾಸನ ಸಂಸದ (Hassan MP) ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ (Prajwal Revanna Case) ಪ್ರಕರಣದಲ್ಲಿಯೂ ಆರೋಪಿಯಾಗಿರುವ ರೇವಣ್ಣ ಅವರಿಗೆ ನಿನ್ನೆಯ ವಿಚಾರಣೆಯಲ್ಲಿ ಬೇಲ್‌ ಸಿಕ್ಕಿಲ್ಲ.

ಬೆಳಗ್ಗೆ ಹನ್ನೊಂದು ಗಂಟೆ ನಂತರ ಜನಪ್ರತಿನಿಧಿ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಹೆಚ್.ಡಿ ರೇವಣ್ಣ ಪರ ಹಿರಿಯ ವಕೀಲ ಸಿ.ವಿ ನಾಗೇಶ್ ವಾದ ಮಂಡಿಸಲಿದ್ದಾರೆ. 65 ವರ್ಷದವರಾಗಿರುವ ಹೆಚ್.ಡಿ ರೇವಣ್ಣ ಈಗಾಗಲೇ ಪ್ರಕರಣ, ಮಗನ ಮೇಲಿನ ಆರೋಪದಿಂದ ಮಾನಸಿಕವಾಗಿ ನೊಂದಿದ್ದಾರೆ. ನಾಲ್ಕು ದಿನಗಳ ಕಾಲ ಕಸ್ಟಡಿಯಲ್ಲಿದ್ದು ವಿಚಾರಣೆ ಎದುರಿಸಿದ್ದಾರೆ. ಕಸ್ಟಡಿ ವೇಳೆ ಅನಾರೋಗ್ಯದ ಸಮಸ್ಯೆ ಎದುರಿಸಿದ್ದಾರೆ ಎಂಬ ಮಾಹಿತಿಯಿದೆ. ಹೊಟ್ಟೆ ಉರಿ ಸಮಸ್ಯೆ ಎಂದು ನ್ಯಾಯಾಧೀಶರ ಮುಂದೆ ಅಳಲು ತೋಡಿಕೊಂಡಿದ್ದರು. ಇಂದು ಇದೇ ವಿಚಾರವನ್ನು ಮತ್ತೆ ಜನಪ್ರತಿನಿಧಿ ನ್ಯಾಯಾಲಯದಲ್ಲಿ ವಕೀಲರು ಉಲ್ಲೇಖ ಮಾಡಲಿದ್ದಾರೆ. ಹಲವಾರು ವರ್ಷ ರಾಜ್ಯ ಸಚಿವರಾಗಿದ್ದು ಸೇವೆ ಸಲ್ಲಿಸಿರುವ ರೇವಣ್ಣ, ಪ್ರಕರಣದ ಗುರುತ್ವ ಅರಿತು ತನಿಕೆಗೆ ಸಹಕಾರ ಒದಗಿಸುತ್ತಿದ್ದಾರೆ. ಈ ಎಲ್ಲ ವಿಚಾರಗಳಿಂದ ಹೆಚ್.ಡಿ ರೇವಣ್ಣಗೆ ಬೇಲ್ ಸಿಗಬೇಕು ಎಂದು ವಾದಿಸುವ ಸಾಧ್ಯತೆ ಇದೆ.

ಎಸ್ಐಟಿ ಮತ್ತೆ ಈ ಬಗ್ಗೆ ಆಕ್ಷೇಪಣೆ ಸಲ್ಲಿಸಲಿದೆ. ಈಗಾಗಲೇ ರೇವಣ್ಣ ತನಿಖೆ ಸರಿಯಾಗಿ ಸಹಕರಿಸಿಲ್ಲ ಎಂದು ಎಸ್‌ಐಟಿ ಹೇಳಿದೆ. ಸಮರ್ಪಕವಾಗಿ ವಿಚಾರಣೆ ಆಗಿಲ್ಲ. ಮತ್ತೊಂದು ಕಡೆ ಹೆಚ್. ಡಿ ರೇವಣ್ಣ ಮಾಜಿ ಸಚಿವ, ಶಾಸಕ ಹಾಗೂ ಪ್ರಭಾವ ಉಳ್ಳ ವ್ಯಕ್ತಿಯಾಗಿದ್ದಾರೆ. ಹೊರ ಬಂದ ಮೇಲೆ ತಮ್ಮ ಪ್ರಭಾವ ಬಳಸಿ ಸಾಕ್ಷ್ಯ ನಾಶ ಮಾಡುವ, ಸಂತ್ರಸ್ತೆಯರನ್ನು ಕಾಂಟ್ಯಾಕ್ಟ್ ಮಾಡುವ ಸಾಧ್ಯತೆ ಇದೆ. ಈ ಅಂಶಗಳ ಹಿನ್ನೆಲೆಯಲ್ಲಿ ಜಾಮೀನು ನೀಡಬಾರದು ಎಂದು ಸರ್ಕಾರದ ಪರ ವಕೀಲರು ಆಕ್ಷೇಪಣೆ ಸಲ್ಲಿಸಲಿದ್ದಾರೆ.

ಇದನ್ನೂ ಓದಿ: HD Revanna Jailed: ಇಂದು ಜನಪ್ರತಿನಿಧಿ ನ್ಯಾಯಾಲಯದಲ್ಲಿ ಹೆಚ್.ಡಿ ರೇವಣ್ಣ ಭವಿಷ್ಯ ನಿರ್ಧಾರ

Continue Reading

ಕ್ರೈಂ

Crime News: ಮಕ್ಕಳನ್ನು ಕೊಂದ ಬಳಿಕ ಕಟ್ಟಡದಿಂದ ಜಿಗಿದು ಮಹಿಳೆ ಆತ್ಮಹತ್ಯೆ; ಡೆತ್‌ನೋಟ್‌ನಲ್ಲಿ ಏನಿದೆ?

Crime News: ಮಹಾರಾಷ್ಟ್ರದ ನಾಸಿಕ್‌ನಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ಮಹಿಳೆಯೊಬ್ಬಳು ತನ್ನಿಬ್ಬರು ಮಕ್ಕಳನ್ನು ಕೊಂದು ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೃತರನ್ನು ಅಶ್ವಿನಿ ನಿಕುಂಭ್‌ (30) ಮತ್ತು ಮಕ್ಕಳಾದ ಆರಾಧ್ಯಾ (8) ಹಾಗೂ ಅಗಸ್ತ್ಯ (2) ಎಂದು ಗುರುತಿಸಲಾಗಿದೆ. ಪತಿಯ ಕಿರುಕುಳದಿಂದ ಮಹಿಳೆ ಈ ಕೃತ್ಯ ಎಸಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

VISTARANEWS.COM


on

Crime News
Koo

ಮುಂಬೈ: ಮಹಾರಾಷ್ಟ್ರದ ನಾಸಿಕ್‌ನಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ಮಹಿಳೆಯೊಬ್ಬಳು ತನ್ನಿಬ್ಬರು ಮಕ್ಕಳನ್ನು ಕೊಂದು ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸಾವಿಗೆ ಮುನ್ನ ವಿಡಿಯೊ ಮೆಸೇಜ್‌ ಮಾಡಿರುವ ಮಹಿಳೆ, ಪತಿಯ ಕಿರುಕುಳದಿಂದ ತಾನು ಈ ನಿರ್ಧಾರಕ್ಕೆ ಬಂದಿರುವುದಾಗಿ ಆರೋಪಿಸಿದ್ದಾಳೆ. ಮೃತರನ್ನು ಅಶ್ವಿನಿ ನಿಕುಂಭ್‌ (30) ಮತ್ತು ಮಕ್ಕಳಾದ ಆರಾಧ್ಯಾ (8) ಹಾಗೂ ಅಗಸ್ತ್ಯ (2) ಎಂದು ಗುರುತಿಸಲಾಗಿದೆ (Crime News).

ʼʼಅಶ್ವಿನಿ ಆತ್ಮಹತ್ಯೆ ಮಾಡುವ ಮುನ್ನ ಮಕ್ಕಳಿಗೆ ವಿಷ ನೀಡಿದ್ದಾರೆʼʼ ಎಂದು ಪೊಲೀಸರು ತಿಳಿಸಿದ್ದು, ಘಟನೆ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ. ಬುಧವಾರ ಬೆಳಿಗ್ಗೆ 7 ಗಂಟೆ ಸುಮಾರಿಗೆ ಅಶ್ವಿನಿ ಕೋನಾರ್ಕ್‌ ನಗರದ ಅಪಾರ್ಟ್‌ಮೆಂಟ್‌ನ ಟೆರೇಸ್‌ನಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಳು. ಘಟನೆ ಸ್ಥಳಕ್ಕೆ ತಲುಪಿದ ಪೊಲೀಸರಿಗೆ ಬಳಿಕ ಆಕೆಯ ಮಕ್ಕಳ ಶವವೂ ಕಂಡು ಬಂದಿತ್ತು. ಈ ವೇಳೆ ಆಕೆಯ ಪತಿ ಊರಿನಲ್ಲಿ ಇರಲಿಲ್ಲ. ಹೀಗಾಗಿ ಆಕೆಯೇ ಮಕ್ಕಳಿಗೆ ವಿಷ ಉಣಿಸಿ ಕೊಂದು ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ಊಹಿಸಿದ್ದಾರೆ.

ಡೆತ್‌ನೋಟ್‌ ಪತ್ತೆ

ಪರಿಶೀಲನೆ ವೇಳೆ ಪೊಲೀಸರಿಗೆ ಅಶ್ವಿನಿ ಬರೆದಿದ್ದಾಳೆ ಎನ್ನಲಾದ ಡೆತ್‌ನೋಟ್‌ ಪತ್ತೆಯಾಗಿದೆ. ಇದರಲ್ಲಿ ಆಕೆ ಪತಿ ಸ್ವಪ್ನಿಲ್‌ ಕಿರುಕುಳ ನೀಡುತ್ತಿರುವ ಬಗ್ಗೆ ಉಲ್ಲೇಖಿಸಿದ್ದಾಳೆ.‌ ಜತೆಗೆ ಸಾಯುವ ಮುನ್ನ ವಿಡಿಯೊವನ್ನು ರೆಕಾರ್ಡ್‌ ಮಾಡಿದ್ದಾಳೆ. ಸ್ವಪ್ನಿಲ್‌ ನಿರಂತರ ಹಿಂಸೆ ನೀಡುತ್ತಿರುವುದರಿಂದ ಈ ನಿರ್ಧಾರಕ್ಕೆ ಬಂದಿರುವುದಾಗಿ ಆಕೆ ತನ್ನ ಸಂಬಂಧಿಕರಿಗೆ ಕಳುಹಿಸಿದ ವಿಡಿಯೊದಲ್ಲಿ ತಿಳಿಸಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ. ಕೃತ್ಯ ನಡೆಯುವ ವೇಳೆ ಸ್ವಪ್ನಿಲ್‌ ಕೆಲಸದ ನಿಮಿತ್ತ ಪುಣೆಗೆ ತೆರಳಿದ್ದರು. ಸದ್ಯ ಅವರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ.

ಇದನ್ನೂ ಓದಿ: ಶಾಲೆಗೆ ಹೋಗದ್ದಕ್ಕೆ ಬೈದ ತಾಯಿ, ಬಾಲಕ ಆತ್ಮಹತ್ಯೆ

ನೆಚ್ಚಿನ ಶ್ವಾನ ಮರಿ ನಾಪತ್ತೆಯಾದ ಕೊರಗಿನಿಂದ ಆತ್ಮಹತ್ಯೆ

ತನ್ನ ಪ್ರೀತಿಯ ಶ್ವಾನ ನಾಪತ್ತೆಯಾದ ಹಿನ್ನೆಲೆಯಲ್ಲಿ ಕೊರಗಿನಿಂದ 12 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಏಪ್ರಿಲ್‌ 27ರಂದು ಹರಿಯಾಣದಲ್ಲಿ ನಡೆದಿತ್ತು. ʼʼಐದು ದಿನಗಳ ಹಿಂದೆ ನಮ್ಮ ಸಾಕು ನಾಯಿ ಕಾಣೆಯಾಗಿತ್ತು. ಈ ಶ್ವಾನ ಮತ್ತು ಬಾಲಕಿಯ ಮಧ್ಯೆ ಸುಮಾರು 3 ತಿಂಗಳಿಂದ ಉತ್ತಮ ಬಾಂಧವ್ಯ ರೂಪುಗೊಂಡಿತ್ತುʼʼ ಎಂದು ಘಟನೆಯ ಬಗ್ಗೆ ಮನೆಯವರು ತಿಳಿಸಿದ್ದರು. ʼʼಶ್ವಾನ ಕಾಣೆಯಾದಾಗಿನಿಂದ ಆಕೆ ಖಿನ್ನತೆಗೆ ಒಳಗಾಗಿದ್ದಳು. ಬಳಿಕ ತೀವ್ರ ಚಿಂತೆಗೆ ಒಳಗಾಗಿದ್ದ ಅವಳು ಸರಿಯಾಗಿ ಆಹಾರವನ್ನೂ ಸೇವಿಸುತ್ತಿರಲಿಲ್ಲʼʼ ಎಂದು ಅವರು ಹೇಳಿದ್ದರು. ಕುಟುಂಬಸ್ಥರು ಆಕೆಯನ್ನು ಸಮಾಧಾನಪಡಿಸಲು ಎಷ್ಟೇ ಪ್ರಯತ್ನಿಸಿದರೂ ನಾಯಿಮರಿಯನ್ನು ಕಳೆದುಕೊಂಡ 6ನೇ ತರಗತಿಯ ವಿದ್ಯಾರ್ಥಿನಿಯ ದುಃಖವನ್ನು ಕಡಿಮೆ ಮಾಡಲು ಸಾಧ್ಯವಾಗಲಿಲ್ಲ ಎಂದು ಮೂಲಗಳು ತಿಳಿಸಿವೆ.

ಬಾಲಕಿಯ ತಾಯಿ ಮತ್ತು ಸಹೋದರಿ ದಿನಸಿ ಖರೀದಿಗಾಗಿ ಮನೆಯಿಂದ ಹೊರ ಹೋಗಿದ್ದರು. ಮನೆಯಲ್ಲಿ ಒಬ್ಬಳೇ ಇದ್ದ ಬಾಲಕಿ ಈ ವೇಳೆ ಶಾಕಿಂಗ್‌ ನಿರ್ಧಾರ ಕೈಗೊಂಡಿದ್ದಳು. ನೇಣು ಬಿಗಿದುಕೊಂಡು ಜೀವ ಕಳೆದುಕೊಂಡಿದ್ದಳು.

Continue Reading
Advertisement
Akshaya Tritiya Fashion
ಫ್ಯಾಷನ್21 mins ago

Akshaya Tritiya Fashion: ಅಕ್ಷಯ ತೃತೀಯಕ್ಕೆ ಬಂತು ಬಂಗಾರದ ಕಾಸಗಲದ ಆಕರ್ಷಕ ಮೂಗಿನ ಸ್ಟಡ್ಸ್

SSLC Result 2024
ಶಿಕ್ಷಣ27 mins ago

SSLC Result 2024: ಎಸ್‌ಎಸ್‌ಎಲ್‌ಸಿ ‌ಉತ್ತರ ಪತ್ರಿಕೆ ಮರು ಮೌಲ್ಯಮಾಪನ, ಮರುಎಣಿಕೆಗೆ ಅರ್ಜಿ ಸಲ್ಲಿಸಲು ಆನ್‌ಲೈನ್‌ನಲ್ಲಷ್ಟೆ ಅವಕಾಶ

MS Dhoni
ಕ್ರೀಡೆ28 mins ago

MS Dhoni: ಧೋನಿಗೆ ವಿಶೇಷ ಉಡುಗೊರೆ ನೀಡಿದ ಅಭಿಮಾನಿ; ವಿಡಿಯೊ ವೈರಲ್​

Janhvi Kapoor Wears Cricket-Themed Dress
ಬಾಲಿವುಡ್34 mins ago

Janhvi Kapoor: ಕ್ರಿಕೆಟ್ ಥಿಮ್‌ ಡ್ರೆಸ್‌ನಲ್ಲಿ ಪೋಸ್‌ ಕೊಟ್ಟ ಜಾನ್ವಿ ಕಪೂರ್; ಚೆಂಡಿದೆ ಬೆನ್ನ ಹಿಂದೆ!

Job Alert
ಉದ್ಯೋಗ60 mins ago

Job Alert: 506 ಹುದ್ದೆಗಳ ಭರ್ತಿಗೆ ಯುಪಿಎಸ್‌ಸಿಯಿಂದ ಅರ್ಜಿ ಆಹ್ವಾನ; ಮೇ 14ರೊಳಗೆ ಅಪ್ಲೈ ಮಾಡಿ

Kannada Serials TRP Puttakkana makkalu TOP one
ಕಿರುತೆರೆ1 hour ago

Kannada Serials TRP: ಟಾಪ್‌ 3ರಲ್ಲಿ ಇವೆ ಎರಡು ಧಾರಾವಾಹಿಗಳು; ʻಪುಟ್ಟಕ್ಕನ ಮಕ್ಕಳುʼ ಸೀರಿಯಲ್‌ನದ್ದೇ ಪಾರುಪತ್ಯ!

Self Harming Man commits suicide after falling from PG in Bengaluru
ಬೆಂಗಳೂರು1 hour ago

Self Harming: ಕಟ್ಟಡದ ಮೇಲಿಂದ ಬಿದ್ದು ಯುವಕ ಸೂಸೈಡ್‌

Atrocity on women
ದೇಶ1 hour ago

Atrocity on women: ಟಿಎಂಸಿ ಮುಖಂಡರ ವಿರುದ್ಧ ಅತ್ಯಾಚಾರ ಕೇಸ್‌; ಯೂ ಟರ್ನ್‌ ಹೊಡೆದ ದೂರುದಾರೆ

Money Guide
ಮನಿ-ಗೈಡ್1 hour ago

Money Guide: ನಿಮ್ಮ ಎನ್‌ಪಿಎಸ್‌ ಖಾತೆ ಸ್ಥಗಿತಗೊಂಡಿದ್ದರೆ ಚಿಂತಿಸಬೇಡಿ; ಮನೆಯಲ್ಲೇ ಕೂತು ಸಕ್ರಿಯಗೊಳಿಸುವ ವಿಧಾನ ಇಲ್ಲಿದೆ

Virender Sehwag
ಕ್ರಿಕೆಟ್1 hour ago

Virender Sehwag: ಏಕದಿನ ವಿಶ್ವಕಪ್​ ಸೋಲಿಗೆ ಕೊಹ್ಲಿ, ರಾಹುಲ್​ ನೇರ ಕಾರಣ ಎಂದ ಮಾಜಿ ಆಟಗಾರ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

SSLC Result 2024 what is the reason for most of the students fail in SSLC
ಕರ್ನಾಟಕ4 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ4 hours ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ4 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

SSLC Result 2024 78 schools get zero results in SSLC exams
ಬೆಂಗಳೂರು5 hours ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

SSLC Result 2024 SSLC students get 20 percent grace marks but result is very poor
ಶಿಕ್ಷಣ5 hours ago

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

SSLC Exam Result 2024 Announce
ಬೆಂಗಳೂರು6 hours ago

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ2 days ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ2 days ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ2 days ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

ಟ್ರೆಂಡಿಂಗ್‌