Dowry Death : ವರದಕ್ಷಿಣೆ ಕಿರುಕುಳ ಆರೋಪ, ಗೃಹಿಣಿ ಆತ್ಮಹತ್ಯೆಗೆ ಶರಣು - Vistara News

ಕ್ರೈಂ

Dowry Death : ವರದಕ್ಷಿಣೆ ಕಿರುಕುಳ ಆರೋಪ, ಗೃಹಿಣಿ ಆತ್ಮಹತ್ಯೆಗೆ ಶರಣು

Dowry death : ಮೂಡಿಗೆರೆ ತಾಲೂಕಿನ ಚಂದುವಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಆತ್ಮಹತ್ಮೆ ಮಾಡಿಕೊಂಡ ಸುಭೀಕ್ಷಾ 4 ವರ್ಷಗಳ ಹಿಂದೆ ಚಂದುವಳ್ಳಿಯ ಪ್ರವೀಣ್ ಜೊತೆ ವಿವಾಹವಾಗಿದ್ದರು. ಪತಿಯು ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ. ಅಂತೆಯೇ ಸೋಮವಾರ ಸಂಜೆ 4 ಗಂಟೆಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ.

VISTARANEWS.COM


on

Dowry death
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿಕ್ಕಮಗಳೂರು : ಪತಿಯ ಕುಟುಂಬಸ್ಥರಿಂದ ಎದುರಾದ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತ ಮಹಿಳೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ (Dowry Death) ಮಾಡಿಕೊಂಡಿರುವ ಪ್ರಕರಣ ನಡೆದಿದೆ. 25 ವರ್ಷದ ಸುಭೀಕ್ಷಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದಾರೆ. ಅವರಿಗೆ ಎರಡೂವರೆ ವರ್ಷದ ಒಂದು ಗಂಡು ಮಗು ಇದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನಲ್ಲಿ ಘಟನೆ ನಡೆದಿದೆ.

ಮೂಡಿಗೆರೆ ತಾಲೂಕಿನ ಚಂದುವಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಆತ್ಮಹತ್ಮೆ ಮಾಡಿಕೊಂಡ ಸುಭೀಕ್ಷಾ 4 ವರ್ಷಗಳ ಹಿಂದೆ ಚಂದುವಳ್ಳಿಯ ಪ್ರವೀಣ್ ಜೊತೆ ವಿವಾಹವಾಗಿದ್ದರು. ಪತಿಯು ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ. ಅಂತೆಯೇ ಸೋಮವಾರ ಸಂಜೆ 4 ಗಂಟೆಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮದುವೆಯಾಗಿ 7 ವರ್ಷದ ಒಳಗೆ ಗೃಹಿಣಿ ಆತ್ಮಹತ್ಯೆಗೆ ಶರಣಾದರೆ ತಹಸೀಲ್ದಾರ್ ರಿಂದ ಸ್ಪಾಟ್ ಮಹಜರ್ ಮಾಡಬೇಕಾಗುತ್ತದೆ. ಹೀಗಾಗಿ ಮಂಗಳವಾರದ ತನಕ ಸ್ಪಾಟ್ ಮಹಜರ್ ಮಾಡಿಲ್ಲ.

ಸುಭೀಕ್ಷಾ ಅವರ ಕುಟುಂಬಸ್ಥರು ವರದಕ್ಷಿಣೆ ಕಿರುಕುಳದಿಂದ ತಮ್ಮ ಪುತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಿದ್ದಾರೆ. ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Student Death : ಮೈಸೂರಿನ ಕಾಲೇಜಿನ ಹಾಸ್ಟೆಲ್‌‌ನಲ್ಲಿ 17 ವರ್ಷದ ವಿದ್ಯಾರ್ಥಿನಿ ಅನಾರೋಗ್ಯದಿಂದ ಸಾವು

ಮೈಸೂರು: ಮೈಸೂರಿನ ಕಾಲೇಜಿನ ಹಾಸ್ಟೆಲ್‌ವೊಂದರಲ್ಲಿ ವಾಸವಿದ್ದು ಕಲಿಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಅನಾರೋಗ್ಯದಿಂದ ಮೃತಪಟ್ಟಿದ್ದಾಳೆ. ದಕ್ಷ ಪಿಯು ಕಾಲೇಜಿನಲ್ಲಿ ವ್ಯಾಸಂಗ ಮಾಡುತಿದ್ದ ಜಯಪ್ರಾರ್ಥನಾ (17) ಮೃತಪಟ್ಟ ವಿದ್ಯಾರ್ಥಿನಿ. ಪೋಷಕರಿಗೆ ಘಟನೆಯ ಬಗ್ಗೆ ಕಾಲೇಜು ಆಡಳಿತ ಮಂಡಳಿ ಮಾಹಿತಿ ನೀಡಿದೆ. ವಿದ್ಯಾರ್ಥಿನಿಯ ಸಾವಿಗೆ ನಿಖರ ಕಾರಣ ಏನೆಂದು ತಿಳಿದು ಬಂದಿಲ್ಲ. ಏಕಾಏಕಿ ಅನಾರೋಗ್ಯ ಉಂಟಾಗಿದ್ದ ಕಾರಣ ಮೃತಪಟ್ಟಿದ್ದಾಳೆ ಎಂದು ಹೇಳಲಾಗಿದೆ.

ಇದನ್ನೂ ಓದಿ: Bengaluru Rape Attempt Case : ಕಾಲೇಜು ವಿದ್ಯಾರ್ಥಿನಿಯ ಅತ್ಯಾಚಾರ ಯತ್ನ ಪ್ರಕರಣಕ್ಕೆ ಹೊಸ ತಿರುವು, ಸಂತ್ರಸ್ತೆಯ ವಿರುದ್ಧವೇ ಕೇಸ್‌ ದಾಖಲು!

ಮೈಸೂರಿನ ಹೂಟಗಳ್ಳಿಯಲ್ಲಿರುವ ಕಾಲೇಜಿನ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತಿದ್ದ ಜಯಪ್ರಾರ್ಥನಾ ಮೂಲತಃ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನವರಾಗಿದ್ದಾರೆ. ಭಾನುವಾರ ಊಟದ ನಂತರ ಜಯಪ್ರಾರ್ಥನಾ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ವಿಚಾರ ತಿಳಿದು ಖಾಸಗಿ ಆಸ್ಪತ್ರೆಯಲ್ಲಿ ಆಡಳಿತ ಮಂಡಳಿ ಚಿಕಿತ್ಸೆ ಕೊಡಿಸಿತ್ತು. ಆದರೆ ಅನಾರೋಗ್ಯದ ವಿಚಾರವನ್ನು ಪೋಷಕರ ಗಮನಕ್ಕೆ ತರದೇ ನಿರ್ಲಕ್ಷ್ಯ ತೋರಿತ್ತು.

ಸೋಮವಾರ ಬೆಳಗ್ಗೆ ಜಯಪ್ರಾರ್ಥನಾಳ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿತ್ತು. ಆ ಸಮಯದಲ್ಲಿ ವಿಷಯವನ್ನು ಪೊಷಕರಿಗೆ ತಿಳಿಸಿದ್ದಾರೆ. ಆದರೆ, ಪೋಷಕರು ಆಸ್ಪತ್ರೆಗೆ ಬರುವ ಮುನ್ನವೇ ಜಯಪ್ರಾರ್ಥನಾ ಮೃತಪಟ್ಟಿದ್ದಾಳೆ. ಮಗಳ ಸಾವಿಗೆ ಕಾಲೇಜು ಆಡಳಿತ ಮಂಡಳಿಯ ಕಾರಣ ಎಂದು ಪೋಷಕರ ಆರೋಪ ಮಾಡಿದ್ದಾರೆ. ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Kolkata Doctor murder case: ಅಂತ್ಯಕ್ರಿಯೆ ನಡೆದ 3 ಗಂಟೆ ನಂತ್ರ FIR ದಾಖಲು..ಆಸ್ಪತ್ರೆ ವೈದ್ಯರು, ಪೊಲೀಸರು ಏನ್‌ ಮಾಡ್ತಿದ್ರು?- ಸುಪ್ರೀಂ ತರಾಟೆ

kolkata Doctor murder case: ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ನೇತೃತ್ವ ನ್ಯಾಯಪೀಠ ಪ್ರಕರಣದ ವಿಚಾರಣೆ ನಡೆಸಿದ್ದು, ಘಟನೆಗೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲು ಮತ್ತು ಇತರ ಪ್ರಕ್ರಿಯೆ ನಡೆಸುವಲ್ಲಿ ಪೊಲೀಸ್‌ ಇಲಾಖೆ, ಆಸ್ಪತ್ರೆ ಆಡಳಿತ ಮಂಡಳಿ ಮತ್ತು ಪಶ್ಚಿಮ ಬಂಗಾಳ ಸರ್ಕಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ. ಟ್ರೈನಿ ವೈದ್ಯೆಯ ಮೃತದೇಹವನ್ನು ಅಂತ್ಯ ಸಂಸ್ಕಾರಕ್ಕೆ ಕಳುಹಿಸಿದ ಮೂರು ಗಂಟೆಗಳ ನಂತರ ಎಫ್‌ಐಆರ್‌ ಏಕೆ ದಾಖಲಾಗಿದೆ? ಕಾಲೇಜು ಪ್ರಾಂಶುಪಾಲ ಏನು ಮಾಡುತ್ತಿದ್ದರು? ಎಂದು ಪ್ರಶ್ನಿಸಿದೆ

VISTARANEWS.COM


on

kolkata Doctor murder case
Koo

ನವದೆಹಲಿ:ಕೋಲ್ಕತಾದ ಆರ್‌ ಜಿ ಕರ್‌ ವೈದ್ಯಕೀಯ ಕಾಲೇಜಿನಲ್ಲಿ(RG Kar Medical college) ನಡೆದಿರುವ ವೈದ್ಯೆಯ ಬರ್ಬರ ಸಾಮೂಹಿಕ ಅತ್ಯಾಚಾರ ಹಾಗು ಕೊಲೆಯ (Kolkata Doctor murder case) ಪ್ರಕರಣದ ವಿಚಾರಣೆ ಇಂದು ಸುಪ್ರೀಂಕೋರ್ಟ್‌(Supreme Court)ನಲ್ಲಿ ನಡೆಸಿದ್ದು, ಇಂತಹ ಹೇಯ ಕೃತ್ಯಕ್ಕೆ ಕಡಿವಾಣ ಹಾಕಲು ಮತ್ತೊಂದು ಅತ್ಯಾಚಾರ ನಡೆಯುವವರೆಗೆ ಕಾಯಲು ಸಾಧ್ಯವಿಲ್ಲ ಎಂಂದು ಖಡಕ್‌ ಆಗಿ ಹೇಳಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ನೇತೃತ್ವ ನ್ಯಾಯಪೀಠ ಪ್ರಕರಣದ ವಿಚಾರಣೆ ನಡೆಸಿದ್ದು, ಘಟನೆಗೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲು ಮತ್ತು ಇತರ ಪ್ರಕ್ರಿಯೆ ನಡೆಸುವಲ್ಲಿ ಪೊಲೀಸ್‌ ಇಲಾಖೆ, ಆಸ್ಪತ್ರೆ ಆಡಳಿತ ಮಂಡಳಿ ಮತ್ತು ಪಶ್ಚಿಮ ಬಂಗಾಳ ಸರ್ಕಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ. ಟ್ರೈನಿ ವೈದ್ಯೆಯ ಮೃತದೇಹವನ್ನು ಅಂತ್ಯ ಸಂಸ್ಕಾರಕ್ಕೆ ಕಳುಹಿಸಿದ ಮೂರು ಗಂಟೆಗಳ ನಂತರ ಎಫ್‌ಐಆರ್‌ ಏಕೆ ದಾಖಲಾಗಿದೆ? ಕಾಲೇಜು ಪ್ರಾಂಶುಪಾಲ ಏನು ಮಾಡುತ್ತಿದ್ದರು? FIR ದಾಖಲಾಗದೇ ಯುವತಿಯ ಮೃತದೇಹವನ್ನು ಪೋಷಕರಿಗೆ ಹಸ್ತಾಂತರಿಸಲಾಗಿದೆ. ಪೊಲೀಸರು ಏನು ಮಾಡುತ್ತಿದ್ದರು? ಇಷ್ಟು ಪ್ರಕರಣವೊಂದು ನಡೆದಿರುವಾಗ ಘಟನಾ ಸ್ಥಳದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಹೇಗೆ ಅವಕಾಶ ಮಾಡಿಕೊಟ್ಟರು ಎಂದು ಖಡಕ್‌ ಆಗಿ ಪ್ರಶ್ನಿಸಿದ್ದಾರೆ.

ಪೀಠದ ಪ್ರಶ್ನೆಗಳಿಗೆ ಉತ್ತರವಾಗಿ, ಪಶ್ಚಿಮ ಬಂಗಾಳ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ಆಸ್ಪತ್ರೆಯಲ್ಲಿ ಜನರು ಫೋಟೋಗಳನ್ನು ತೆಗೆದುಕೊಂಡಿದ್ದಾರೆ, ಅಸಹಜ ಸಾವಿನ ಪ್ರಕರಣವನ್ನು ತಕ್ಷಣವೇ ಪ್ರಾರಂಭಿಸಲಾಯಿತು ಮತ್ತು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಇರುವ ಮಂಡಳಿಯನ್ನು ಸ್ಥಾಪಿಸಲಾಯಿತು ಎಂದು ಪ್ರತಿವಾದಿಸಿದರು. ಆದರೆ, ವಿಶೇಷವಾಗಿ ಸಂತ್ರಸ್ತೆಯ ಪೋಷಕರ ಅನುಪಸ್ಥಿತಿಯಲ್ಲಿ ಎಫ್‌ಐಆರ್ ದಾಖಲಿಸುವುದು ಆಸ್ಪತ್ರೆಯ ಕರ್ತವ್ಯ ಎಂದು ಸಿಜೆಐ ಚಂದ್ರಚೂಡ್ ಹೇಳಿದ್ದಾರೆ.

ಎಫ್‌ಐಆರ್‌ನ ಟೈಮ್‌ಲೈನ್ ಅನ್ನು ಪ್ರಶ್ನಿಸಿದ ನ್ಯಾಯಮೂರ್ತಿ ಪಾರ್ದಿವಾಲಾ, “ಎಫ್‌ಐಆರ್ ದಾಖಲಿಸಿದ ಮೊದಲ ಮಾಹಿತಿದಾರರು ಯಾರು? ಎಫ್‌ಐಆರ್‌ನ ಸಮಯ ಎಷ್ಟು?” ಮೊದಲ ಮಾಹಿತಿದಾರ ಸಂತ್ರಸ್ತೆಯ ತಂದೆಯಾಗಿದ್ದು, ರಾತ್ರಿ 11:45 ಕ್ಕೆ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಸಿಬಲ್ ಪ್ರತಿಕ್ರಿಯಿಸಿದರು.

ವೈದ್ಯಕೀಯ ವೃತ್ತಿಗಳು ಹಿಂಸೆಗೆ ಗುರಿಯಾಗುತ್ತಿವೆ. ಸಮಾಜದಲ್ಲಿ ಬೇರೂರಿರುವ ಪಿತೃಪ್ರಭುತ್ವದ ಪಕ್ಷಪಾತದಿಂದಾಗಿ, ಮಹಿಳಾ ವೈದ್ಯರು ಹಿಂಸಾಚಾರಕ್ಕೆ ಹೆಚ್ಚು ಗುರಿಯಾಗುತ್ತಿದ್ದಾರೆ. ಉದ್ಯೋಗ ಸ್ಥಳದಲ್ಲೇ ಅವರ ಮೇಲಿನ ಶೋಷಣೆ ಹೆಚ್ಚಾಗುತ್ತಿದೆ ಎಂದು ಸಿಜೆಐ ಚಂದ್ರಚೂಡ್‌ ಅಭಿಪ್ರಾಯಪಟ್ಟಿದ್ದಾರೆ.

ರಾಷ್ಟ್ರೀಯ ಕಾರ್ಯಪಡೆ ನೇಮಕ

ಇನ್ನು ವೈದ್ಯೆ ಕೊಲೆ ಪ್ರಕರಣದ ತನಿಖೆ ನಡೆಸಲು ಸುಪ್ರೀಂಕೋರ್ಟ್‌ ರಾಷ್ಟ್ರೀಯ ಕಾರ್ಯಪಡೆಯನ್ನು ನೇಮಕ ಮಾಡಿದೆ. ಈ ಕಾರ್ಯಪಡೆಯಲ್ಲಿ ಸರ್ಜನ್‌ ವೈಸ್‌ ಅಡ್ಮಿರಲ್‌ ಆರ್‌.ಕೆ. ಸರಿನ್‌, ಏಷ್ಯನ್ ಇನ್ಸ್ಟಿಟ್ಯೂಟ್ ಆಫ್ ನ್ಯಾಷನಲ್ ಗ್ಯಾಸ್ಟ್ರೋಲಜಿ ವ್ಯವಸ್ಥಾಪಕ ನಿರ್ದೇಶಕ ಡಾ. ನಾಗೇಶ್ವರ ರೆಡ್ಡಿ ಇದ್ದಾರೆ.

ಇದನ್ನೂ ಓದಿ: Kolkata Doctor murder case: ಕೋಲ್ಕತ್ತಾ ಟ್ರೈನಿ ವೈದ್ಯೆಯ ಕೊಲೆ ಪ್ರಕರಣ- ಇಂದು ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ

Continue Reading

ಬೆಂಗಳೂರು

Assault Case : ಬೆಂಗಳೂರಿನಲ್ಲಿ ನಿಲ್ಲದ ರೋಡ್‌ ರೇಜ್‌ ಕಿರಿಕ್‌; ಕಾರಿನ ಮೇಲೆ ಕಲ್ಲು ಎತ್ತಿಹಾಕಿ ಪುಂಡಾಟ

assault case : ಕಾರು ಚಾಲಕ ಬಲ ತಿರುವ ಪಡೆಯಲು ಇಂಡಿಕೇಟರ್ ಬಳಸದೆ ಏಕಾಏಕಿ ನುಗ್ಗಿದ್ದ. ಈ ವೇಳೆ ಬೈಕ್ ಸವಾರನಿಗೆ ಕಾರ್ ಡಿಕ್ಕಿಯಾಗಿ ಕೆಳಗೆ ಬಿದ್ದಿದ್ದ. ಸಾವರಿಸಿಕೊಂಡು ಮೇಲೆ ಎದ್ದ ಅನಿಲ್ ರೆಡ್ಡಿ ಕಾರಿನಿಂದ ಕೆಳಗೆಇಳಿಯುವಂತೆ ಚಾಲಕನಿಗೆ ಹೇಳಿದ್ದ. ಆದರೆ ಕಾರಿನಿಂದ ಚಾಲಕ ಕೆಳಗೆ ಇಳಿಯದೆ ಕುಳಿತಿದ್ದರಿಂದ ಕೋಪಗೊಂಡು ಕಲ್ಲಿನಿಂದ ಗ್ಲಾಸ್ ಪುಡಿಗಟ್ಟಿದ್ದ.

VISTARANEWS.COM


on

By

Assault case
Koo

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಒಂದಲ್ಲ ಎರಡಲ್ಲ ಹತ್ತಾರು ಕಡೆಗಳಲ್ಲಿ ರೋಡ್ ರೇಜ್ ಪ್ರಕರಣಗಳು ನಡೆಯುತ್ತಲೇ ಇವೆ. ಸದ್ಯ ಕಿಡಿಗೇಡಿಯೊಬ್ಬ ಕಾರಿನ ಗ್ಲಾಸ್ ಮೇಲೆ ಕಲ್ಲು ಎತ್ತು ಹಾಕಿ ಅಟ್ಟಹಾಸ (Assault Case) ಮೆರೆದಿದ್ದಾನೆ. ಬೆಂಗಳೂರಿನ ಸರ್ಜಾಪುರ ಮುಖ್ಯರಸ್ತೆಯ ದೊಡ್ಡಕನ್ನೆಹಳ್ಳಿಯಲ್ಲಿ ಘಟನೆ ನಡೆದಿದೆ.

ಬೆಂಗಳೂರು ಪೊಲೀಸರಿಗೆ ಟ್ಯಾಗ್ ಮಾಡಿ ಎಕ್ಸ್‌ನಲ್ಲಿ ವಿಡಿಯೋ ಶೇರ್ ಮಾಡಲಾಗಿದೆ. ಸರ್ಜಾಪುರ ರಸ್ತೆಯ ದೊಡ್ಡಕನ್ನಲಿ ಬಳಿ ನಿನ್ನೆ ಸೋಮವಾರ ರಾತ್ರಿ‌ 10.30ರ ಸುಮಾರಿಗೆ ಘಟನೆ ನಡೆದಿದೆ. ಕಾರು ಅಡ್ಡಗಟ್ಟಿ ಗುಂಡಾ ವರ್ತನೆ ತೋರಿದ ಬೈಕ್ ಸವಾರನೊಬ್ಬ, ಕಾರಿನ ವೈಪರ್ ಕಿತ್ತು ಮುಂಭಾಗದ ಗಾಜಿಗೆ ಕಲ್ಲುಎತ್ತಿಹಾಕಿ ಹೊಡೆದು ಹಾಕಿದ್ದಾನೆ.

ಇತ್ತ ವ್ಯಕ್ತಿಯ ದೌರ್ಜನ್ಯ ಕಂಡು ಕಾರೊಳಗೆ ಇದ್ದ ಮಹಿಳೆ ಮತ್ತು ಮಗು ಕಿರುಚಾಡಿದ್ದಾರೆ. ಅಲ್ಲದೇ ಬೈಕ್ ಸವಾರನ ಗುಂಡಾ ವರ್ತನೆ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ. ಇದೇ ವೇಳೆ ಸ್ಥಳೀಯರು ದರ್ಪ ತೋರುತ್ತಿದ್ದ ವ್ಯಕ್ತಿಯನ್ನು ತಡೆದು ನಿಲ್ಲಿಸಿ, ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಬೈಕ್ ಸವಾರನನ್ನು ಬೆಳ್ಳಂದೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆಗೆ ಅಸಲಿ ಕಾರಣ ಏನು ಎಂಬುದರ ಬಗ್ಗೆ ಇಬ್ಬರಿಂದ ಮಾಹಿತಿ ಪಡೆಯುತ್ತಿದ್ದಾರೆ.

ಇಂಡಿಕೇಟರ್‌ ಹಾಕದೆ ಕಾರು ಚಾಲಕ ಯಡವಟ್ಟು

ಈ ಸಂಬಂಧ ದೂರು ದಾಖಲಾಗುತ್ತಿದ್ದಂತೆ ಆರೋಪಿ ಅನಿಲ್ ರೆಡ್ಡಿ ಎಂಬಾತನನ್ನು ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ. ನಿನ್ನೆ ರಾತ್ರಿ 10 ಗಂಟೆ ಸರ್ಜಾಪುರ ಮುಖ್ಯ ರಸ್ತೆಯ ದೊಡ್ಡಕನ್ನಹಳ್ಳಿ ಮುಖ್ಯ ರಸ್ತೆಯಲ್ಲಿ ಘಟನೆ ನಡೆದಿತ್ತು. ಕಾರು ಚಾಲಕ ಬಲ ತಿರುವ ಪಡೆಯಲು ಇಂಡಿಕೇಟರ್ ಬಳಸದೆ ಏಕಾಏಕಿ ನುಗ್ಗಿದ್ದ. ಈ ವೇಳೆ ಬೈಕ್ ಸವಾರನಿಗೆ ಕಾರ್ ಡಿಕ್ಕಿಯಾಗಿ ಕೆಳಗೆ ಬಿದ್ದಿದ್ದ. ಸಾವರಿಸಿಕೊಂಡು ಮೇಲೆ ಎದ್ದ ಅನಿಲ್ ರೆಡ್ಡಿ ಕಾರಿನಿಂದ ಕೆಳಗೆಇಳಿಯುವಂತೆ ಚಾಲಕನಿಗೆ ಹೇಳಿದ್ದ. ಆದರೆ ಕಾರಿನಿಂದ ಚಾಲಕ ಕೆಳಗೆ ಇಳಿಯದೆ ಕುಳಿತಿದ್ದರಿಂದ ಕೋಪಗೊಂಡು ಕಲ್ಲಿನಿಂದ ಗ್ಲಾಸ್ ಪುಡಿಗಟ್ಟಿದ್ದ. ಘಟನೆ ಸಂಬಂಧ ಕಾರು ಚಾಲಕನಿಂದ ಬೆಳ್ಳಂದೂರು ಠಾಣೆಗೆ ದೂರು ದೂರಿನ ಹಿನ್ನಲೆ ಕೇಸ್ ದಾಖಲಾಗಿತ್ತು. ಇದೀಗ ಎಫ್ಐಆರ್ ದಾಖಲಿಸಿ ಅನಿಲ್ ರೆಡ್ಡಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: Rayara Aradhane 2024 : ಏಕಾಏಕಿ ಸುರಿದ ಮಳೆ; ಭಕ್ತರಿಗೆ ಮಠದ ಪ್ರಾಕಾರದಲ್ಲಿ ಮಲಗಲು ವ್ಯವಸ್ಥೆ ಮಾಡಿಕೊಟ್ಟ ಮಂತ್ರಾಲಯ ಶ್ರೀಗಳು

ಕಾರು ಅಡ್ಡಗಟ್ಟಿ ಗಲಾಟೆ

ಬೆಂಗಳೂರಿನಲ್ಲಿ ರೋಡ್ ರೇಜ್ ಪ್ರಕರಣವು ಮುಂದುವರಿದಿದ್ದು, ಬೈಕ್‌ನಲ್ಲಿ ಬಂದವರು ಕಾರನ್ನು ಚೇಸ್ ಮಾಡಿ ಅಡ್ಡಗಟ್ಟಿ ಗಲಾಟೆ‌ ಮಾಡಿದ್ದಾರೆ. ಜಿತಿನ್ ರಾಜ್ ಎಂಬುವವರು ತಮ್ಮ ಕಾರಲ್ಲಿ ಗೆಳೆಯನ ಜತೆ ಇಂದಿರಾನಗರದ ಗೆಳೆಯನ ಮನೆಗೆ ಹೋಗುತ್ತಿದ್ದರು. ಈ ವೇಳೆ ಸಿಗ್ನಲ್ ವೇಳೆ ಅಡ್ಡ ಬಂದು ಮೂರ್ನಾಲ್ಕು ಕಿಲೋ ಮೀಟರ್ ಕಾರನ್ನು ಫಾಲೋ ಮಾಡಿದ್ದಾರೆ. ನಂತರ ಇಂದಿರಾನಗರದ ಬಳಿ ಪಲ್ಸರ್ ಬೈಕಲ್ಲಿ ಓವರ್ ಟೇಕ್ ಮಾಡಿ, ಕಾರನ್ನು ಅಡ್ಡಗಟ್ಟಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಆರೋಪಿಗಳು ಕಾರು ಅಡ್ಡಗಟ್ಟುವ ದೃಶ್ಯ ಕಾರಿನ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಾರು ಚಾಲಕ ಜಿತಿನ್ ರಾಜ್ ಈ ಸಂಬಂಧ ಪೊಲೀಸರಿಗೆ ದೂರು ನೀಡಿದ್ದಾರೆ.

ವ್ಹೀಲಿಂಗ್‌ ಚಾಳಿ ಮುಂದುವರಿಸಿದ ಸವಾರ

ಬೆಂಗಳೂರಿನಲ್ಲಿ ವ್ಹೀಲಿಂಗ್‌ ಹಾವಳಿ ಮಿತಿ ಮೀರಿದೆ. ಆರ್.ಟಿ.ನಗರ ಸಂಚಾರಿ ಪೊಲೀಸರು, ಮೂರು ಬಾರಿ ಬಂಧಿಸಿ ವ್ಹೀಲಿಂಗ್‌ ಮಾಡದಂತೆ ಎಚ್ಚರಿಕೆ ನೀಡಿದ್ದರೂ, ಮತ್ತೆ ಅದೆ ಚಾಳಿ ಮುಂದುವರಿಸಿದ್ದಾನೆ. ಪೋಷಕರನ್ನು ಕರೆಸಿ ಎಚ್ಚರಿಕೆ ನೀಡಿದಾಗ, ನಾನು ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಅಪ್ಲೋಡ್ ಮಾಡಿದರೆ ಹಣ ಬರುತ್ತೆ ಎಂದಿದ್ದ. ತಿಂಗಳಿಗೆ ಬೈಕ್ ವ್ಹೀಲಿಂಗ್ ಮಾಡಿ ಸಾವಿರಗಟ್ಟಲೆ ಸಂಪಾದನೆ ಮಾಡುತ್ತೆನೆ. ನನಗೆ ಏನು ಕೆಲಸವಿಲ್ಲ ,ಬೈಕ್ ವ್ಹೀಲಿಂಗ್‌ ಮಾಡಿದರೆ ಹಣ ಬರುತ್ತೆ. ದಯವಿಟ್ಟು ನನ್ನ ಬಿಟ್ಟು ಬಿಡಿ ಎಂದಿದ್ದ. ಬಂಧಿಸಿ ದಂಡ ಹಾಕಿ ಸ್ಟೇಷನ್ ಬೇಲ್ ಮೇಲೆ ಬಿಡುಗಡೆ ಮಾಡಲಾಗಿತ್ತು. ಬೈಕ್‌ ಸವಾರ ಮತ್ತೆ ಅದೇ ಚಾಳಿ ಮುಂದುವರೆಸಿದ್ದಾನೆ.

ಬೆಂಗಳೂರಿನಲ್ಲಿ ಫುಡ್ ಡೆಲಿವರಿ ಬಾಯ್‌ಗೆ ಹಿಗ್ಗಾಮುಗ್ಗ ಥಳಿತ

ಬೆಂಗಳೂರಿನ ಜಯನಗರದ ಸೌತ್ ಎಂಡ್ ಸರ್ಕಲ್ ಸಮೀಪ ಮಂಗಳವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಫುಡ್‌ ಡೆಲಿವರಿ ಬಾಯ್‌ಗೆ ನಾಲ್ಕೈದು ಮಂದಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಸೌತ್ ಎಂಡ್ ಸರ್ಕಲ್ ಸಿಗ್ನಲ್ ಬಳಿಯೇ‌ ಮನಸೋ ಇಚ್ಚೆ ಹಲ್ಲೆ ಮಾಡಿದ್ದು, ಯಾವ ಕಾರಣಕ್ಕೆ ಗಲಾಟೆ ನಡೆದಿದೆ ಎಂಬುದರ ಬಗ್ಗೆ ಸ್ಪಷ್ಟತೆ ಇಲ್ಲ. ಇನ್ನೂ ಘಟನೆ ಸಂಬಂಧ ಇದುವರೆಗೂ ಯಾವುದೇ ದೂರು ದಾಖಲಾಗಿಲ್ಲ. ಬಿಎಂಟಿಸಿ ಬಸ್‌ನಲ್ಲಿ ತೆರಳುತ್ತಿದ್ದ ಪ್ರಯಾಣಿಕರ ಮೊಬೈಲ್‌ನಲ್ಲಿ ಗಲಾಟೆ ವಿಡಿಯೋ ಸೆರೆಯಾಗಿದೆ. ಸದ್ಯ ಹೊಡದಾಟದ ವಿಡಿಯೊ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದಕ್ಷಿಣ ಕನ್ನಡ

Assault Case : ಮಂಗಳೂರಿನಲ್ಲಿ ಫುಟ್ಬಾಲ್‌ ಆಟಕ್ಕೆ ಕಿರಿಕ್‌; ವಿದ್ಯಾರ್ಥಿಗಳನ್ನು ಕಿಡ್ನ್ಯಾಪ್‌ ಮಾಡಿ ಅರೆಬೆತ್ತಲೆಗೊಳಿಸಿ ಹಲ್ಲೆ

Assault Case : ಎರಡು ಕಾಲೇಜುಗಳ ವಿದ್ಯಾರ್ಥಿಗಳ ನಡುವೆ ಕಿರಿಕ್‌ ಶುರುವಾಗಿದ್ದು, ಇದೀಗ ಠಾಣೆ ಮೆಟ್ಟಿಲೇರಿದೆ. ಫುಟ್ಬಾಲ್‌ ಆಟಕ್ಕೆ ಗಲಾಟೆಯಾಗಿದ್ದು, ನಾಲ್ಕೈದು ಮಂದಿ ವಿದ್ಯಾರ್ಥಿಗಳನ್ನು ಕಿಡ್ನ್ಯಾಪ್‌ ಮಾಡಿ ಅರೆ ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ್ದಾರೆ.

VISTARANEWS.COM


on

By

assault case
Koo

ಮಂಗಳೂರು: ಫುಟ್ಬಾಲ್ ಆಟದಲ್ಲಿ ವಿದ್ಯಾರ್ಥಿಗಳ ಮಧ್ಯೆ ಕಿರಿಕ್ ಶುರುವಾಗಿದ್ದು, ಕಿಡ್ನ್ಯಾಪ್ ಮಾಡಿ ಹಲ್ಲೆ (Assault Case) ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ವಿದ್ಯಾರ್ಥಿಗಳನ್ನು ಕಿಡ್ನ್ಯಾಪ್ ಮಾಡಿ ಯದ್ವಾತದ್ವಾ ಹಲ್ಲೆ ಮಾಡಿದ್ದು,ವಿಡಿಯೊ ವೈರಲ್‌ ಆಗಿದೆ.

ಮಂಗಳೂರಿನ ಎರಡು ಕಾಲೇಜಿನ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದೆ. ಮಂಗಳೂರಿನ ಯೆನಪೊಯ ಮತ್ತು ಅಲೋಶಿಯಸ್ ಕಾಲೇಜು ವಿದ್ಯಾರ್ಥಿಗಳ ನಡುವೆ ಕಿರಿಕ್‌ ನಡೆದಿದೆ. ಘಟನೆಯಲ್ಲಿ ಮಹಮ್ಮದ್ ಶುರೈ, ಮಹಮ್ಮದ್ ಅಫ್ರಾನ್, ಇಬ್ರಾಹಿಂ ಖಲೀಲ್ ಮತ್ತು ಮಹಮ್ಮದ್ ಜನ್ಮದ್ ಎಂಬ ವಿದ್ಯಾರ್ಥಿಗಳಿಗೆ ಹಲ್ಲೆ ನಡೆಸಿದ್ದಾರೆ.

ಹಲ್ಲೆ ಮಾಡಿದ ದಿಯಾನ್,ಅನ್ನೈ, ತಸ್ಮಿನ್,ಸಲ್ಮಾನ್, ಅನಾಸ್ ಎಂಬ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಮಹಾಕಾಳಿ ಪಡ್ಪು ಬಳಿ ಮನಬಂದಂತೆ ಥಳಿಸಿ, ಸಿಗರೇಟ್‌ನಿಂದ ಸುಟ್ಟು ಹಲ್ಲೆ ನಡೆಸಿದ್ದಾರೆ. ಮಾತ್ರವಲ್ಲದೆ ಅರೆಬೆತ್ತಲು ಗೊಳಿಸಿ ಬಸ್ಕಿ ಹೊಡೆಸಿ ಕ್ಷಮೆ ಕೇಳುವಂತೆ ಥಳಿಸಿದ್ದಾರೆ. ಈ ವಿಡಿಯೊವೆಲ್ಲವೂ ವೈರಲ್‌ ಆಗಿದೆ. ವಿಡಿಯೋ ವೈರಲ್ ಹಿನ್ನೆಲೆಯಲ್ಲಿ ತನಿಖೆ ಕೈಗೆತ್ತಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: Dowry Death : ವರದಕ್ಷಿಣೆ ಕಿರುಕುಳ ಆರೋಪ, ಗೃಹಿಣಿ ಆತ್ಮಹತ್ಯೆಗೆ ಶರಣು

ಆಂಬ್ಯುಲೆನ್ಸ್‌ಗೆ ದಾರಿ ಬಿಟ್ಟಿದ್ದಕ್ಕೆ ಕಾರು ಚಾಲಕನ ಮೇಲೆ‌ ದರ್ಪ

ಆಂಬ್ಯುಲೆನ್ಸ್‌ಗೆ ದಾರಿ ಬಿಟ್ಟಿದ್ದಕ್ಕೆ ಕಾರು ತಡೆದು ಚಾಲಕನಿಗೆ ಕೆಲವರು ಅವಾಜ್‌ ಹಾಕಿದ್ದಾರೆ. ಸಂಚಾರಿ ಪೊಲೀಸ್ ಸಿಬ್ಬಂದಿ ಮುಂದೆಯೇ ಅವಾಜ್ ಹಾಕಿದ್ದಾರೆ. ಕಾರು ಚಾಲಕ ಟ್ರಾಫಿಕ್ ವೇಳೆ ಆಂಬ್ಯುಲೆನ್ಸ್‌ಗೆ ದಾರಿ ಬಿಟ್ಟಿದ್ದ. ಈ ವೇಳೆ ಅಕ್ಕ ಪಕ್ಕದವರು ಬಂದು ಯಾಕೆ ಗಾಡಿ ಸೈಡಿಗೆ ಹಾಕಿದೆ ಎಂದು ಅವಾಜ್‌ ಹಾಕಿದ್ದಾರೆ. ವಿಡಿಯೋ ಸಮೇತ ಪೊಲೀಸರಿಗೆ ದೂರು ನೀಡಿದ್ದು, ಘಟನೆ ಎಲ್ಲಿ ನಡೆದಿದೆ,‌ ಯಾವಾಗ ನಡೆದಿದ್ದು ಎಂದು ಪೊಲೀಸರು ಮಾಹಿತಿ ಕೇಳಿದ್ದಾರೆ.

ಬೆಂಗಳೂರಿನಲ್ಲಿ ಫುಡ್ ಡೆಲಿವರಿ ಬಾಯ್‌ಗೆ ಹಿಗ್ಗಾಮುಗ್ಗ ಥಳಿತ

ಬೆಂಗಳೂರಿನ ಜಯನಗರದ ಸೌತ್ ಎಂಡ್ ಸರ್ಕಲ್ ಸಮೀಪ ಮಂಗಳವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಫುಡ್‌ ಡೆಲಿವರಿ ಬಾಯ್‌ಗೆ ನಾಲ್ಕೈದು ಮಂದಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಸೌತ್ ಎಂಡ್ ಸರ್ಕಲ್ ಸಿಗ್ನಲ್ ಬಳಿಯೇ‌ ಮನಸೋ ಇಚ್ಚೆ ಹಲ್ಲೆ ಮಾಡಿದ್ದು, ಯಾವ ಕಾರಣಕ್ಕೆ ಗಲಾಟೆ ನಡೆದಿದೆ ಎಂಬುದರ ಬಗ್ಗೆ ಸ್ಪಷ್ಟತೆ ಇಲ್ಲ. ಇನ್ನೂ ಘಟನೆ ಸಂಬಂಧ ಇದುವರೆಗೂ ಯಾವುದೇ ದೂರು ದಾಖಲಾಗಿಲ್ಲ. ಬಿಎಂಟಿಸಿ ಬಸ್‌ನಲ್ಲಿ ತೆರಳುತ್ತಿದ್ದ ಪ್ರಯಾಣಿಕರ ಮೊಬೈಲ್‌ನಲ್ಲಿ ಗಲಾಟೆ ವಿಡಿಯೋ ಸೆರೆಯಾಗಿದೆ. ಸದ್ಯ ಹೊಡದಾಟದ ವಿಡಿಯೊ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಕಾರು ಅಡ್ಡಗಟ್ಟಿ ಗಲಾಟೆ

ಬೆಂಗಳೂರಿನಲ್ಲಿ ರೋಡ್ ರೇಜ್ ಪ್ರಕರಣವು ಮುಂದುವರಿದಿದ್ದು, ಬೈಕ್‌ನಲ್ಲಿ ಬಂದವರು ಕಾರನ್ನು ಚೇಸ್ ಮಾಡಿ ಅಡ್ಡಗಟ್ಟಿ ಗಲಾಟೆ‌ ಮಾಡಿದ್ದಾರೆ. ಜಿತಿನ್ ರಾಜ್ ಎಂಬುವವರು ತಮ್ಮ ಕಾರಲ್ಲಿ ಗೆಳೆಯನ ಜತೆ ಇಂದಿರಾನಗರದ ಗೆಳೆಯನ ಮನೆಗೆ ಹೋಗುತ್ತಿದ್ದರು. ಈ ವೇಳೆ ಸಿಗ್ನಲ್ ವೇಳೆ ಅಡ್ಡ ಬಂದು ಮೂರ್ನಾಲ್ಕು ಕಿಲೋ ಮೀಟರ್ ಕಾರನ್ನು ಫಾಲೋ ಮಾಡಿದ್ದಾರೆ. ನಂತರ ಇಂದಿರಾನಗರದ ಬಳಿ ಪಲ್ಸರ್ ಬೈಕಲ್ಲಿ ಓವರ್ ಟೇಕ್ ಮಾಡಿ, ಕಾರನ್ನು ಅಡ್ಡಗಟ್ಟಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಆರೋಪಿಗಳು ಕಾರು ಅಡ್ಡಗಟ್ಟುವ ದೃಶ್ಯ ಕಾರಿನ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಾರು ಚಾಲಕ ಜಿತಿನ್ ರಾಜ್ ಈ ಸಂಬಂಧ ಪೊಲೀಸರಿಗೆ ದೂರು ನೀಡಿದ್ದಾರೆ.

ಕಾರಿನ ಗ್ಲಾಸ್‌ ಮೇಲೆ ಕಲ್ಲು ಎತ್ತಿಹಾಕಿ ಪುಂಡಾಟ

ರಾಜಧಾನಿ ಬೆಂಗಳೂರಿನಲ್ಲಿ ಒಂದಲ್ಲ ಎರಡಲ್ಲ ಹತ್ತಾರು ಕಡೆಗಳಲ್ಲಿ ರೋಡ್ ರೇಜ್ ಪ್ರಕರಣಗಳು ನಡೆಯುತ್ತಲೇ ಇವೆ. ಸದ್ಯ ಕಿಡಿಗೇಡಿಯೊಬ್ಬ ಕಾರಿನ ಗ್ಲಾಸ್ ಮೇಲೆ ಕಲ್ಲು ಎತ್ತು ಹಾಕಿ ಅಟ್ಟಹಾಸ ಮೆರೆದಿದ್ದಾನೆ. ಬೆಂಗಳೂರಿನ ಸರ್ಜಾಪುರ ಮುಖ್ಯರಸ್ತೆಯ ದೊಡ್ಡಕನ್ನೆಹಳ್ಳಿಯಲ್ಲಿ ಘಟನೆ ನಡೆದಿದೆ.

ಬೆಂಗಳೂರು ಪೊಲೀಸರಿಗೆ ಟ್ಯಾಗ್ ಮಾಡಿ ಎಕ್ಸ್‌ನಲ್ಲಿ ವಿಡಿಯೋ ಶೇರ್ ಮಾಡಲಾಗಿದೆ. ಸರ್ಜಾಪುರ ರಸ್ತೆಯ ದೊಡ್ಡಕನ್ನಲಿ ಬಳಿ ನಿನ್ನೆ ಸೋಮವಾರ ರಾತ್ರಿ‌ 10.30ರ ಸುಮಾರಿಗೆ ಘಟನೆ ನಡೆದಿದೆ. ಕಾರು ಅಡ್ಡಗಟ್ಟಿ ಗುಂಡಾ ವರ್ತನೆ ತೋರಿದ ಬೈಕ್ ಸವಾರನೊಬ್ಬ, ಕಾರಿನ ವೈಪರ್ ಕಿತ್ತು ಮುಂಭಾಗದ ಗಾಜಿಗೆ ಕಲ್ಲುಎತ್ತಿಹಾಕಿ ಹೊಡೆದು ಹಾಕಿದ್ದಾನೆ.

ಇತ್ತ ವ್ಯಕ್ತಿಯ ದೌರ್ಜನ್ಯ ಕಂಡು ಕಾರೊಳಗೆ ಇದ್ದ ಮಹಿಳೆ ಮತ್ತು ಮಗು ಕಿರುಚಾಡಿದ್ದಾರೆ. ಅಲ್ಲದೇ ಬೈಕ್ ಸವಾರನ ಗುಂಡಾ ವರ್ತನೆ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ. ಇದೇ ವೇಳೆ ಸ್ಥಳೀಯರು ದರ್ಪ ತೋರುತ್ತಿದ್ದ ವ್ಯಕ್ತಿಯನ್ನು ತಡೆದು ನಿಲ್ಲಿಸಿ, ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಬೈಕ್ ಸವಾರನನ್ನು ಬೆಳ್ಳಂದೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆಗೆ ಅಸಲಿ ಕಾರಣ ಏನು ಎಂಬುದರ ಬಗ್ಗೆ ಇಬ್ಬರಿಂದ ಮಾಹಿತಿ ಪಡೆಯುತ್ತಿದ್ದಾರೆ.

ವ್ಹೀಲಿಂಗ್‌ ಚಾಳಿ ಮುಂದುವರಿಸಿದ ಸವಾರ

ಬೆಂಗಳೂರಿನಲ್ಲಿ ವ್ಹೀಲಿಂಗ್‌ ಹಾವಳಿ ಮಿತಿ ಮೀರಿದೆ. ಆರ್.ಟಿ.ನಗರ ಸಂಚಾರಿ ಪೊಲೀಸರು, ಮೂರು ಬಾರಿ ಬಂಧಿಸಿ ವ್ಹೀಲಿಂಗ್‌ ಮಾಡದಂತೆ ಎಚ್ಚರಿಕೆ ನೀಡಿದ್ದರೂ, ಮತ್ತೆ ಅದೆ ಚಾಳಿ ಮುಂದುವರಿಸಿದ್ದಾನೆ. ಪೋಷಕರನ್ನು ಕರೆಸಿ ಎಚ್ಚರಿಕೆ ನೀಡಿದಾಗ, ನಾನು ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಅಪ್ಲೋಡ್ ಮಾಡಿದರೆ ಹಣ ಬರುತ್ತೆ ಎಂದಿದ್ದ. ತಿಂಗಳಿಗೆ ಬೈಕ್ ವ್ಹೀಲಿಂಗ್ ಮಾಡಿ ಸಾವಿರಗಟ್ಟಲೆ ಸಂಪಾದನೆ ಮಾಡುತ್ತೆನೆ. ನನಗೆ ಏನು ಕೆಲಸವಿಲ್ಲ ,ಬೈಕ್ ವ್ಹೀಲಿಂಗ್‌ ಮಾಡಿದರೆ ಹಣ ಬರುತ್ತೆ. ದಯವಿಟ್ಟು ನನ್ನ ಬಿಟ್ಟು ಬಿಡಿ ಎಂದಿದ್ದ. ಬಂಧಿಸಿ ದಂಡ ಹಾಕಿ ಸ್ಟೇಷನ್ ಬೇಲ್ ಮೇಲೆ ಬಿಡುಗಡೆ ಮಾಡಲಾಗಿತ್ತು. ಬೈಕ್‌ ಸವಾರ ಮತ್ತೆ ಅದೇ ಚಾಳಿ ಮುಂದುವರೆಸಿದ್ದಾನೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

Latest

Sexual Abuse : ತಾಯಿಯೊಂದಿಗೆ ಮಲಗಿದ್ದ 3 ವರ್ಷದ ಹೆಣ್ಣು ಮಗುವನ್ನುಎಳೆದೊಯ್ದು ಅತ್ಯಾಚಾರ ಎಸಗಿದ ಪಾಪಿ

Sexual Abuse ದೇವಾಲಯದ ಹೊರಗೆ ತನ್ನ ತಾಯಿಯೊಂದಿಗೆ ಮಲಗಿದ್ದ 3 ವರ್ಷದ ಬಾಲಕಿಯನ್ನು ಅಪಹರಿಸಿ, ಕ್ರೂರವಾಗಿ ಅತ್ಯಾಚಾರ ಎಸಗಿ ರಸ್ತೆ ಬದಿಯಲ್ಲಿ ಎಸೆದಿರುವ ಆಘಾತಕಾರಿ ಘಟನೆ ಜೋಧಪುರದಲ್ಲಿ ನಡೆದಿದೆ. ಚಿಂದಿ ಆಯುವವನ ಮಗಳಾದ ಸಂತ್ರಸ್ತೆಯನ್ನು ಸ್ಥಳೀಯ ಮಹಿಳೆಯೊಬ್ಬರು ಮುಂಜಾನೆ ಪತ್ತೆಹಚ್ಚಿದ್ದು, ಆಕೆಯ ಬೆನ್ನಿನ ಮೇಲೆ ತೀವ್ರ ಗಾಯಗಳು, ಕಚ್ಚಿದ ಗುರುತುಗಳಿರುವುದು ಪತ್ತೆಯಾಗಿವೆ. ತಕ್ಷಣ ಮಹಿಳೆ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ.

VISTARANEWS.COM


on

Sexual Abuse
Koo

ಜೋಧಪುರ : ಕಾಮುಕರ ದುಷ್ಟ ಕಣ್ಣು ಚಿಕ್ಕ ಮಕ್ಕಳನ್ನು ಕೂಡ ಬಿಡುವುದಿಲ್ಲ. ಅಂತೆಯೇ ದೇವಾಲಯದ ಹೊರಗೆ ತನ್ನ ತಾಯಿಯೊಂದಿಗೆ ಮಲಗಿದ್ದ 3 ವರ್ಷದ ಬಾಲಕಿಯನ್ನು ಅಪಹರಿಸಿ, ಕ್ರೂರವಾಗಿ ಅತ್ಯಾಚಾರ (Sexual Abuse)ಎಸಗಿ ರಸ್ತೆ ಬದಿಯಲ್ಲಿ ಎಸೆದಿರುವ ಆಘಾತಕಾರಿ ಘಟನೆ ರಾಜಸ್ಥಾನದ ಜೋಧಪುರದಲ್ಲಿ ನಡೆದಿದೆ. ಚಿಂದಿ ಆಯುವ ಕುಟುಂಬದ ಆ ಮಗುವನ್ನು ರಸ್ತೆಯಲ್ಲಿ ಬಿದ್ದಿದ್ದನ್ನು ಕಂಡ ಮಹಿಳೆಯೊಬ್ಬರು ಆಸ್ಪತ್ರೆಗೆ ಸೇರಿಸಿದ್ದಾರೆ. ಮಗುವಿನ ಬೆನ್ನಿನ ಮೇಲೆ ತೀವ್ರ ಗಾಯಗಳು, ಕಚ್ಚಿದ ಗುರುತುಗಳಾಗಿವೆ. ಆರೋಪಿಯು ಅತ್ಯಂತ ಕ್ರೂರವಾಗಿ ಪುಟ್ಟ ಮಗುವನ್ನು ಅತ್ಯಾಚಾರ ಮಾಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಆರೋಪಿಯನ್ನು ಪೊಲೀಸರು ಬಂಧಿಸಿದ್ದು ಹರೀಶ್ ದಾಸ್ ಸಿಂಧಿ ಎಂದು ಹೇಳಲಾಗಿದೆ. ಅಪರಾಧದ ಸ್ಥಳವನ್ನು ಪರಿಶೀಲಿಸಲು ವಿಧಿವಿಜ್ಞಾನ ತಂಡವನ್ನು ನಿಯೋಜಿಸಲಾಗಿದೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಆಕೆಯ ಮೇಲೆ ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ. ಸಹಾಯಕ ಪೊಲೀಸ್ ಆಯುಕ್ತ ಅನಿಲ್ ಕುಮಾರ್ ಮಾತನಾಡಿ, ಸಿಸಿಟಿವಿ ದೃಶ್ಯಾವಳಿಯಲ್ಲಿ ಮುಂಜಾನೆ 2 ಗಂಟೆ ಸುಮಾರಿಗೆ ಆರೋಪಿ ಬಾಲಕಿಯನ್ನು ಕರೆದೊಯ್ಯುತ್ತಿರುವುದು ದಾಖಲಾಗಿದೆ. ಪೊಲೀಸರು ಸಿಸಿಟಿವಿ ರೆಕಾರ್ಡಿಂಗ್‍ಗಳನ್ನು ಪರಿಶೀಲಿಸುತ್ತಿದ್ದು, ಆರೋಪಿಗಳನ್ನು ಗುರುತಿಸಲು ಪ್ರಯತ್ನಿಸುತ್ತಿರುವುದಾಗಿ ತಿಳಿಸಿದ್ದಾರೆ.

ಬಾಲಕಿಯ ಪೋಷಕರು ಮಧ್ಯಪ್ರದೇಶದ ಮೂಲದವರು. ಜೋಧಪುರದ ಕೊಳೆಗೇರಿಯಲ್ಲಿ ವಾಸಿಸವಾಗಿದ್ದರು ಎಂದು ಉಪ ಪೊಲೀಸ್ ಆಯುಕ್ತ (ಪಶ್ಚಿಮ) ರಾಜೇಶ್ ಕುಮಾರ್ ಯಾದವ್ ಬಹಿರಂಗಪಡಿಸಿದ್ದಾರೆ. ಮಗುವಿನ ತಂದೆ ಚಿಂದಿ ಆಯುವ ಕೆಲಸ ಮಾಡುತ್ತಿದ್ದು, ತಾಯಿ ಮಾನಸಿಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಬಾಲಕಿಗೆ ಐದು ವರ್ಷದ ಸಹೋದರನಿದ್ದಾನೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೊ ನೋಡುತ್ತ ದೇವಾಲಯದೊಳಗೇ ಹಸ್ತಮೈಥುನ!

ಮತ್ತೊಂದು ಪ್ರಕರಣದಲ್ಲಿ, ಬೆಂಗಳೂರಿನಲ್ಲಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿಯ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಬೈಕ್‍ನಲ್ಲಿ ಬಂದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬುದಾಗಿ ತಿಳಿದುಬಂದಿದೆ. ಹೆಚ್ಚುವರಿ ಪೊಲೀಸ್ ಆಯುಕ್ತ (ಪೂರ್ವ ವಲಯ) ರಮಣ್ ಗುಪ್ತಾ ಅವರ ಪ್ರಕಾರ, ಮಹಿಳೆ ಕೋರಮಂಗಲದಲ್ಲಿ ಸಭೆ ಮುಗಿಸಿಕೊಂಡು ಹೆಬ್ಬಗೋಡಿಗೆ ಹಿಂದಿರುಗುತ್ತಿದ್ದಾಗ ಈ ದಾಳಿ ನಡೆದಿದೆ. ಆಕೆಗೆ ಲಿಫ್ಟ್ ಕೊಡುವುದಾಗಿ ಕರೆದುಕೊಂಡು ಬಂದು ಆಕೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ ಎಸಗಿದ್ದಾನೆ ಎಂಬುದಾಗಿ ತಿಳಿದುಬಂದಿದೆ. ಈ ಕುರಿತು ಪೊಲೀಸರು ಅತ್ಯಾಚಾರ ಪ್ರಕರಣವನ್ನು ದಾಖಲಿಸಿ ತನಿಖೆ ಪ್ರಾರಂಭಿಸಿದ್ದಾರೆ.

Continue Reading
Advertisement
CM vs Governor
ಪ್ರಮುಖ ಸುದ್ದಿ13 mins ago

CM vs Governor: ರಾಜ್ಯಪಾಲರ ವಿರುದ್ಧ ಹೋರಾಟ ತೀವ್ರ; ರಾಷ್ಟ್ರಪತಿಗಳಿಗೆ ದೂರು ನೀಡಲು ರಾಜ್ಯ ಸರ್ಕಾರ ಚಿಂತನೆ

kolkata Doctor murder case
ಪ್ರಮುಖ ಸುದ್ದಿ20 mins ago

Kolkata Doctor murder case: ಅಂತ್ಯಕ್ರಿಯೆ ನಡೆದ 3 ಗಂಟೆ ನಂತ್ರ FIR ದಾಖಲು..ಆಸ್ಪತ್ರೆ ವೈದ್ಯರು, ಪೊಲೀಸರು ಏನ್‌ ಮಾಡ್ತಿದ್ರು?- ಸುಪ್ರೀಂ ತರಾಟೆ

HD Kumaraswamy
ಪ್ರಮುಖ ಸುದ್ದಿ33 mins ago

HD Kumaraswamy : ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು 2ನೇ ಬಾರಿ ರಾಜ್ಯಪಾಲರ ಅನುಮತಿ ಕೋರಿದ ಎಸ್‌ಐಟಿ

Child Online Protection Award
ಬೆಂಗಳೂರು1 hour ago

Child Online Protection Award : ಸ್ಟೋಗೋ ಉತ್ಸವ, ಚೈಲ್ಡ್ ಆನ್‌ಲೈನ್ ಪ್ರೊಟೆಕ್ಷನ್ ಪ್ರಶಸ್ತಿ 2024 ಘೋಷಣೆ

Yuvraj Singh
ಕ್ರೀಡೆ2 hours ago

Yuvraj Singh : ಶೀಘ್ರದಲ್ಲೇ ತೆರೆಗೆ ಬರಲಿದೆ ಯುವರಾಜ್ ಸಿಂಗ್‌ ಬಯೋಪಿಕ್‌

Mollywood Sex Mafia
ಪ್ರಮುಖ ಸುದ್ದಿ2 hours ago

Mollywood Sex Mafia: ಮಲಯಾಳಂ ಚಿತ್ರರಂಗದ ಸೆಕ್ಸ್‌ ಮಾಫಿಯಾ ಬಟಾಬಯಲು; 15 ಪ್ರಭಾವಿಗಳಿಂದ ದಂಧೆ- ಸ್ಫೋಟಕ ವರದಿ ಔಟ್‌

Assault case
ಬೆಂಗಳೂರು2 hours ago

Assault Case : ಬೆಂಗಳೂರಿನಲ್ಲಿ ನಿಲ್ಲದ ರೋಡ್‌ ರೇಜ್‌ ಕಿರಿಕ್‌; ಕಾರಿನ ಮೇಲೆ ಕಲ್ಲು ಎತ್ತಿಹಾಕಿ ಪುಂಡಾಟ

Stree 2 Box Office Day 5
ಸಿನಿಮಾ2 hours ago

Stree 2 Box Office Day 5: ಕಲ್ಕಿ, ಫೈಟರ್ ದಾಖಲೆ ಮುರಿದ ಶ್ರದ್ಧಾ ಕಪೂರ್‌ ಅಭಿನಯದ ಸ್ತ್ರೀ 2

assault case
ದಕ್ಷಿಣ ಕನ್ನಡ2 hours ago

Assault Case : ಮಂಗಳೂರಿನಲ್ಲಿ ಫುಟ್ಬಾಲ್‌ ಆಟಕ್ಕೆ ಕಿರಿಕ್‌; ವಿದ್ಯಾರ್ಥಿಗಳನ್ನು ಕಿಡ್ನ್ಯಾಪ್‌ ಮಾಡಿ ಅರೆಬೆತ್ತಲೆಗೊಳಿಸಿ ಹಲ್ಲೆ

Yash-Radhika
Latest2 hours ago

Yash-Radhika: ರಾಕಿಂಗ್ ಸ್ಟಾರ್‌ ಯಶ್- ರಾಧಿಕಾ ಕುಟುಂಬದ ಸಂಭ್ರಮದ ರಕ್ಷಾಬಂಧನ; ಇಲ್ಲಿವೆ ಚಿತ್ರಗಳು

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌