ಕ್ರೈಂ
Drone Prathap: ಡ್ರೋನ್ ಪ್ರತಾಪ್ ಮತ್ತೊಂದು ‘ದೋಖಾ’ ಬಯಲು! ಏನಿದು ವಂಚನೆ?
Drone Prathap: ಡ್ರೋನ್ ಪ್ರತಾಪ್ ಅವರ ಮತ್ತೊಂದು ದೋಖಾ ಬಟಾ ಬಯಲಾಗಿದೆ. ಬ್ಯೂಸಿನೆಸ್ ಪಾರ್ಟನರ್ ʻಸಾರಂಗ್ ಮಾನೆಗೆʼ ಪ್ರತಾಪ್ ಮೋಸ ಮಾಡಿರುವ ಸುದ್ದಿ ಇದೀಗ ಬೆಳಕಿಗೆ ಬಂದಿದೆ.
ಬೆಂಗಳೂರು: ಡ್ರೋನ್ ಪ್ರತಾಪ್ (Drone Prathap) `ಬಿಗ್ ಬಾಸ್ ಸೀಸನ್ʼ 10ರ ಫಿನಾಲೆ ವೀಕ್ ತಲುಪಿದ್ದಾರೆ. ಆಟಗಳನ್ನು ಚೆನ್ನಾಗಿಯೇ ನಿಭಾಯಿಸುತ್ತಿದ್ದಾರೆ. ಡ್ರೋನ್ ಪ್ರತಾಪ್ ಅವರು ಮನೆಯಲ್ಲಿ ಕೆವಲ ಆಟ ಮಾತ್ರವಲ್ಲ ವೈಯಕ್ತಿಕ ವಿಚಾರಗಳಿಗೂ ಸುದ್ದಿಯಾಗಿದ್ದರು. ಈಗಾಗಲೇ ಪ್ರತಾಪ್ ವಿರುದ್ಧ ಬಿಬಿಎಂಪಿ ಅಧಿಕಾರಿ (BBMP Officer) ಪ್ರಯಾಗ್ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಇದೀಗ ಮತ್ತೆ ಡ್ರೋನ್ ಪ್ರತಾಪ್ ಅವರ ಮತ್ತೊಂದು ದೋಖಾ ಬಟಾ ಬಯಲಾಗಿದೆ. ಬ್ಯೂಸಿನೆಸ್ ಪಾರ್ಟನರ್ ʻಸಾರಂಗ್ ಮಾನೆಗೆʼ ಪ್ರತಾಪ್ ಮೋಸ ಮಾಡಿರುವ ಸುದ್ದಿ ಇದೀಗ ಬೆಳಕಿಗೆ ಬಂದಿದೆ.
ಪುಣೆಯ ಕ್ಯಾಸ್ಪರ್ ಡ್ರೊನೊಟಿಕ್ಸ್ ಹೆಸರಿನ ಸಂಸ್ಥೆಯ ಸಿಇಓ ಸಾರಂಗ್ ಮಾನೆ ಎಂಬುವರು ಕೆಲ ತಿಂಗಳ ಹಿಂದೆ ಡ್ರೋನ್ ಪ್ರತಾಪ್ ಅವರಿಗೆ ಎಂಟು ಡ್ರೋನ್‌ಗಳನ್ನು ನೀಡುವಂತೆ ಒಪ್ಪಂದ ಮಾಡಿಕೊಂಡು ಅಡ್ವಾನ್ಸ್ ನೀಡಿದ್ದರು. ಪ್ರತಾಪ್ ಅವರ ಕಂಪನಿ ʻಡ್ರೋನಾರ್ಕ್ ಏರೋಸ್ಪೇಸ್ ಪ್ರೈವೇಟ್ ಲಿಮಿಟೆಡ್ʼ ಜತೆ ಬ್ಯುಸಿನೆಸ್ ಪಾರ್ಟನರ್ ಆಗಿದ್ದರು ಸಾರಂಗ್. ಎಂಟು ತಿಂಗಳ ಹಿಂದೆ ಡ್ರೋನ್ ಪ್ರತಾಪ್ ಅವರು ಬ್ಯೂಸಿನೆಸ್ ಪಾರ್ಟನರ್ ಸಾರಂಗ್ ಅವರನ್ನು ಮಹಾರಾಷ್ಟ್ರದ ದುಲೇನಲ್ಲಿ ಭೇಟಿ ಮಾಡಿದ್ದರು. ಪ್ರತಾಪ್ ಅವರು ಸಾರಂಗ್ ಅವರಿಗೆ ಒಂಬತ್ತು ಡ್ರೋನ್ ನೀಡಬೇಕಿತ್ತು. ಹೀಗಾಗಿ ಸಾರಂಗ್ ಅವರು ಪ್ರತಾಪ್‌ಗೆ 35 ಲಕ್ಷದ 75 ಸಾವಿರ ನೀಡಿದ್ದರು. ಆದರೆ ಡ್ರೋನ್ ನೀಡಲು ಪ್ರತಾಪ್ ಎರಡುವರೆ ತಿಂಗಳು ಸಮಯ ತೆಗೆದುಕೊಂಡಿದ್ದರು. ಇದಾದ ಬಳಿಕ ಎರಡು ಡ್ರೋನ್ ಅನ್ನು ಸಾರಂಗ್ ಅವರಿಗೆ ಪ್ರತಾಪ್ ನೀಡಿದ್ದರು. ಇದಾದ ಮೇಲೆ ಇನ್ನರೆಡು ಡ್ರೋನ್‌ಗಳನ್ನು ಸಾರಂಗ್‌ಗೆ ಕಳುಹಿಸಿಕೊಟ್ಟಿದ್ದರು. ಆದರೀಗ ಸಾರಂಗ್ ಈ ಬಗ್ಗೆ ಧ್ವನಿ ಎತ್ತಿದ್ದು, ನಾಲ್ಕು ಡ್ರೋನ್‌ಗಳು ಈಗ ಕೆಲಸ ಮಾಡುತ್ತಿಲ್ಲ ಬ್ಯಾಟರಿಗಳ ಕ್ಯಾಲಿಟಿ ಸರಿಯಿಲ್ಲ. ಮತ್ತೊಂದು ಹಾರಬೇಕಾದರೆ, ಕೆಳಗಡೆ ಬಿದ್ದು ಹೋಯಿತು. ನಾವೀಗ ತುಂಬಾ ಲಾಸ್ ನಲ್ಲಿದ್ದೀವಿ ಎಂದು ಆಕ್ರೋಶ ಹೊರಹಾಕಿದ್ದಾರೆ.
ಇದನ್ನೂ ಓದಿ: BBK SEASON 10: ಹೆದರೋ ಕಾಲ ಹೋಯ್ತು; ʻವಿನಯ್ʼ ಏಟಿಗೆ ತಿರುಗೇಟು ಕೊಟ್ಟ ಪ್ರತಾಪ್!
ಈ ಬಗ್ಗೆ ವಿಸ್ತಾರ ಜತೆ ಸಾರಂಗ್ ಹಲವು ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಸಾರಂಗ್ ಮಾತನಾಡಿ ʻʻನಾನು ಇ-ಮೇಲ್ ಮೂಲಕ ವಾರ್ನಿಂಗ್ ನೀಡಿದ್ದೇನೆ ನಾನು ಲೋನ್ ಮೂಲಕ ದುಡ್ಡು ತಂದು, ರೈತರ ಬಳಿ ದುಡ್ಡು ಇಸ್ಕೋಂಡು ಪ್ರತಾಪ್‌ಗೆ ಕೊಟ್ಟಿದ್ದೆ. ಆದರೆ ಇಲ್ಲಿಯವರೆಗೆ ಆತ ಹಣ ಕೊಟ್ಟಿಲ್ಲ. ಅವರ ಪಿಎ ಸಾಗರ್ ನನಗೆ ಹೇಳಿದ್ದಾರೆ. ಪ್ರತಾಪ್ ಕಾರ್ ಸೇಲ್ ಮಾಡಿದ್ದಾನೆ ಅವನ ಬಳಿ ಹಣವಿಲ್ಲ ಎಂದು. ಕಾರ್ ಇರೋದು ಡ್ರೋನ್ ಪ್ರತಾಪ್ ತಂದೆಯ ಹೆಸರಿನಲ್ಲಿ. ಅವರ ಜತೆ ನನಗೆ ಸಂಪರ್ಕ ಇಲ್ಲ. ಪ್ರತಾಪ್ ಬಿಗ್ ಬಾಸ್ ಮನೆಯಲ್ಲಿ ಇದ್ದಾರೆ ಬಂದು ಕೊಡ್ತಾರೆ ಎಂದು ಹೇಳಿದ್ದಾರೆ. ಹೀಗಾಗಿ ಸುಮ್ಮನ್ನಿದ್ದೇ. ಪ್ರತಾಪ್‌ಗೆ ಕಿರಣ್ ಮಾಧವ್ ಬೆಂಬಲ ನೀಡುತ್ತಿದ್ದರು. ನನಗೆ ಅವರಿಬ್ಬರು ಸೇರಿ ಬೆಂಗಳೂರಿನಲ್ಲಿ 20 ಸಾವಿರದ ಹೋಟೆಲ್ ಫೆಸಿಲಿಟಿ ನೀಡಿ ಬ್ಯುಸಿನೆಸ್ ಮಾಡಿದ್ದರು. ಈಗ ನೋಡಿದ್ರೆ ಈ ರೀತಿ ಮಾಡ್ತಿದ್ದಾರೆ. ನನಗೀಗ ಬಡ್ಡಿ ಎಲ್ಲವೂ ಸೇರಿ 83 ಲಕ್ಷ ರೂ. ಖರ್ಚಾಗಿದೆ. ನಮ್ಮದು ಸ್ಟಾರ್ಟ್ ಅಪ್ ಕಂಪನಿ. ನಮಗೆ ತುಂಬ ಕಷ್ಟ ಆಗಿದೆ ಡ್ರೋನ್ ಪ್ರತಾಪ್ ನಿಂದʼʼ ಎಂದು ಸಾರಂಗ್ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ: Drone Prathap: ಬಿಗ್‌ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ಆತ್ಮಹತ್ಯೆಗೆ ಯತ್ನ; ಆಗಿದ್ದೇನು?
ಮತ್ತೊಂದೆಡೆ ಪ್ರತಾಪ್ ವಿರುದ್ಧ ಪ್ರಯಾಗ್ ರಾಜ್ (Prayag Raj) 50 ಲಕ್ಷ ರೂ. ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಮತ್ತೊಬ್ಬ ಅಧಿಕಾರಿ 2 ಕೋಟಿ ರೂ.ಗೆ ಮೊಕದ್ದಮೆ ಹೂಡಿದ್ದಾರೆ ಎಂದು ವಕೀಲರು ಸ್ಪಷ್ಟ ಪಡಿಸಿದ್ದಾರೆ.
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ಕೊಡಗು
Murder Case : ತೆಲಂಗಾಣ ಉದ್ಯಮಿ ಕೊಲೆ ಕೇಸ್; ಸ್ಥಳ ಮಹಜರು ವೇಳೆ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಕಾಲ್ಕಿತ್ತ ಆರೋಪಿ
Murder Case : ತೆಲಂಗಾಣ ಉದ್ಯಮಿ ಕೊಲೆ ಪ್ರಕರಣದ ಆರೋಪಿ ಸ್ಥಳ ಮಹಜರು ವೇಳೆ ಎಸ್ಕೇಪ್ ಆಗಿದ್ದು, ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.
ಬೆಂಗಳೂರು: ಕೊಲೆ ಆರೋಪಿಯನ್ನು (Murder Case) ಮಹಜರು ನಡೆಸಲು ಕರೆದೊಯ್ಯುವ ವೇಳೆ ಪೊಲೀಸರ ಕಣ್ತಪ್ಪಿಸಿ ಎಸ್ಕೇಪ್ ಆಗಿರುವ ಘಟನೆ ತೆಲಂಗಾಣ ರಾಜ್ಯದ ಉಪ್ಪಳ್‌ನಲ್ಲಿ ನಡೆದಿದೆ. ತೆಲಂಗಾಣದಲ್ಲಿ ಉದ್ಯಮಿಯನ್ನು ಹತ್ಯೆ ನಡೆಸಿ ಬಳಿಕ ಕೊಡಗು ಜಿಲ್ಲೆಯ ಸುಂಟಿಕೊಪ್ಪದ ಪನ್ಯದ ಎಸ್ಟೇಟ್‌ನಲ್ಲಿ ಸುಟ್ಟುಹಾಕಿದ್ದರು. ಈ ಸಂಬಂಧ ಮೂವರು ಆರೋಪಿಗಳನ್ನು ಕೊಡಗು ಪೊಲೀಸರು ಬಂಧಿಸಿದ್ದರು.
ಓರ್ವ ನ್ಯಾಯಾಂಗ ಬಂಧನವಾಗಿದ್ದು, ಉಳಿದ ಇಬ್ಬರು ಆರೋಪಿಗಳ ಪೈಕಿ ಅಂಕುರ್ ರಾಣಾ ಠಾಕೂರ್‌ನನ್ನು ಎರಡು ದಿನಗಳ ಹಿಂದೆ ತೆಲಂಗಾಣಕ್ಕೆ ಮಹಜರು ನಡೆಸಲು ಕರೆದುಕೊಂಡು ಹೋಗಲಾಗಿತ್ತು. ಈ ವೇಳೆ ಪೊಲೀಸರ ಕಣ್ತಪ್ಪಿಸಿ ಎಸ್ಕೇಪ್ ಆಗಿದ್ದಾನೆ. ಸದ್ಯ ಆರೋಪಿ ಪರಾರಿ ಸಂಬಂಧ ತೆಲಂಗಾಣ ಉಪ್ಪಳ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಹೆಚ್ಚುವರಿಯಾಗಿ ಕೊಡಗಿನ ಎರಡು ಎಕ್ಸ್ ಪರ್ಟ್ ಟೀಮ್ ಕೂಡ ತೆಲಂಗಾಣಕ್ಕೆ ತೆರಳಿದ್ದು ಹುಟುಕಾಟ ನಡೆಸುತ್ತಿದ್ದಾರೆ.
ಏನಿದು ಪ್ರಕರಣ?
ಕೊಡಗು: ಅಕ್ಟೋಬರ್ 8ರಂದು ಕೊಡಗಿನ ಸುಂಟಿಕೊಪ್ಪ ಸಮೀಪ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ (Murder case) ಪತ್ತೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರು ಪ್ರಕರಣವನ್ನು ಭೇದಿಸಿ ತೆಲಂಗಾಣ ಮೂಲದ ಮೂವರು ಆರೋಪಿಗಳನ್ನು ಬಂಧಿಸಿದ್ದರು. ಪ್ರಮುಖ ಆರೋಪಿ ನಿಹಾರಿಕ (29), ಪಶು ವೈದ್ಯ ನಿಖಿಲ್ ಹಾಗೂ ಹರಿಯಾಣದ ಅಂಕುರ್ ಎಂಬುವವರು ಬಂಧಿತರು.
ಈ ಮೂವರು ರಿಯಲ್ ಎಸ್ಟೇಟ್ ಉದ್ಯಮಿ ರಮೇಶ್ (54) ಎಂಬಾತನನ್ನು ತೆಲಂಗಾಣದಲ್ಲಿ ಕೊಲೆ ಮಾಡಿ, ಕೊಡಗಿನಲ್ಲಿ ಸುಟ್ಟು ಹಾಕಿ ಕಾಲ್ಕಿತ್ತಿದ್ದರು. ಆಸ್ತಿಗಾಗಿ ನಿಹಾರಿಕ ಪ್ರಿಯಕರರ ಜತೆ ಸೇರಿ ತನ್ನ ಪತಿಯನ್ನೇ ಹತ್ಯೆ ಮಾಡಿದ್ದಳು. ಹತ್ಯೆ ಮಾಡಿ ನಂತರ ಕೊಡಗಿನ ಸುಂಟಿಕೊಪ್ಪದಲ್ಲಿ ಸುಟ್ಟು ಹಾಕಿದ್ದರು. ಪ್ರಕರಣ ಸಂಬಂಧ ಪೊಲೀಸರು ಸಿಸಿ ಕ್ಯಾಮೆರಾ ಸುಳಿವು ಆಧಾರಿಸಿ, ರೆಡ್ ಕಲರ್ ಬೆಂಜ್ ಕಾರಿನ ಹಿಂದೆ ಬಿದ್ದಿದ್ದರು. ಕಾರುಪತ್ತೆ ಮಾಡಿ ಆರೋಪಿಯನ್ನು ಬಂಧಿಸಲಾಗಿತ್ತು.
ನಿಹಾರಿಕ ತಾನು 10ನೇ ತರಗತಿಯಲ್ಲಿ ಇರುವಾಗಲೇ ಮದುವೆಯಾಗಿದ್ದಳು. ಎರಡು ಮಕ್ಕಳಾದ ಮೇಲೆ ಪತಿಗೆ ಡಿವೋಸ್ ಕೊಟ್ಟು ದೂರವಾಗಿದ್ದಳು. ಬಳಿಕ ಜೈಲಿನಲ್ಲಿದ್ದ ಅಂಕುರ್ ಎಂಬಾತನ ಪರಿಚಯವಾಗಿತ್ತು. ಈ ಅಂಕುರ್ ಮೂಲಕ ರಮೇಶ್‌ನ ಪರಿಚಯವಾಗಿ ಮದುವೆಯಾಗಿದ್ದಳು. ರಮೇಶ್ ರಿಯಲ್ ಎಸ್ಟೇಟ್ ಬ್ಯುಸಿನೆಸ್ ಮಾಡುತ್ತಿದ್ದರು. ಈ ನಡುವೆ ನಿಹಾರಿಕ, ನಿಖಿಲ್ ಜತೆಗೂ ಲಿವಿಂಗ್ ರಿಲೇಶನ್ ಶಿಪ್‌ನಲ್ಲಿ ಇದ್ದಳು.
ನಿಹಾರಿಕ ಅಂಕುರ್‌ನೊಂದಿಗೆ ಸೇರಿ ಆಸ್ತಿ ನೀಡುವಂತೆ ರಮೇಶ್‌ನಿಗೆ ಕಿರುಕುಳ ನೀಡುತ್ತಿದ್ದರು. ಆಸ್ತಿ ನೀಡದೇ ಇದ್ದದ್ದಕ್ಕೆ ಹೈದರಾಬಾದ್ ಸಮೀಪ ಹಗ್ಗದಿಂದ ಬಿಗಿದು ರಮೇಶ್‌ನ ಕೊಲೆ ಮಾಡಿದ್ದರು. ಕೊಲೆ ಮಾಡಿ ಬಳಿಕ ರಮೇಶ್‌ನ ಕಾರಿನಲ್ಲೇ ಆತನ ಅಪಾರ್ಟ್ಮೆಂಟ್‌ಗೆ ಹೋಗಿ ಹಣ, ಆಸ್ತಿ ದಾಖಲೆ ದೋಚಿದ್ದರು. ನಂತರ ಬೆಂಗಳೂರಿಗೆ ಬಂದು ಪೆಟ್ರೋಲ್ ಖರೀದಿಸಿ, ಕೊಡಗಿಗೆ ತಂದು ರಮೇಶ್ ಬಾಡಿಯನ್ನು ಸುಟ್ಟು ಹಾಕಿದ್ದರು. ಕೊಲೆ ಬಳಿಕ ಅಂಕುರ್ ದೆಹಲಿ, ಹರಿಯಾಣ ಅಂತ ಸುತ್ತಾಡಿದ್ದ.
ಕೊಡಗು
Murder case : ಸುಳಿವೆ ಇಲ್ಲದಿರುವ ಕೊಲೆ ಪ್ರಕರಣ ಭೇದಿಸಿದ ಸುಂಟಿಕೊಪ್ಪ ಪೊಲೀಸರಿಗೆ ಸನ್ಮಾನ
Murder case : ಸುಳಿವೆ ಇಲ್ಲದಿರುವ ಕೊಲೆ ಪ್ರಕರಣವನ್ನು ಭೇದಿಸಿದ ಸುಂಟಿಕೊಪ್ಪ ಪೊಲೀಸರಿಗೆ ಪನ್ಯ ಎಫ್.ಸಿ. ತಂಡದ ಸದಸ್ಯರು ಸನ್ಮಾನಿಸಿ ಗೌರವಿಸಿದರು.
ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ಠಾಣಾ ವ್ಯಾಪ್ತಿಯ ಸಂದೇಶ್ ಎಂಬುವವರಿಗೆ ಸೇರಿದ ಪನ್ಯ ಕಾಫಿ ತೋಟದಲ್ಲಿ ವ್ಯಕ್ತಿಯನ್ನು ಕೊಲೆ (murder case) ಮಾಡಿ, ಸುಟ್ಟು ಹಾಕಿದ ಪ್ರಕರಣವನ್ನು ಸುಂಟಿಕೊಪ್ಪ ಪೊಲೀಸರು ಕಾರ್ಯಾಚರಣೆ ನಡೆಸಿ ಭೇದಿಸಿದ್ದರು. ಹೀಗಾಗಿ ಸುಂಟಿಕೊಪ್ಪ ಪೊಲೀಸರ ಕಾರ್ಯವನ್ನು ಶ್ಲಾಘಿಸಿ ಪನ್ಯತೋಟದ ಪನ್ಯ ಎಫ್.ಸಿ. ತಂಡದ ಸದಸ್ಯರು ಸುಂಟಿಕೊಪ್ಪ ಠಾಣೆಗೆ ತೆರಳಿ ಕುಶಾಲನಗರ ವೃತ್ತ ನಿರೀಕ್ಷಕ ಮುದ್ದು ಮಾದೇವ, ಸುಂಟಿಕೊಪ್ಪದ ಠಾಣಾಧಿಕಾರಿ ಚಂದ್ರಶೇಖರ ಹಾಗೂ ಕಾರ್ಯಾಚರಣೆಯಲ್ಲಿ ಭಾಗಿಯಾದ ಸಿಬ್ಬಂದಿಯನ್ನು ಸನ್ಮಾನಿಸಿ ಗೌರವಿಸಿದರು.
ಯಾವುದೆ ಸುಳಿವು ಇಲ್ಲದಿರೋ ಈ ಪ್ರಕರಣವನ್ನು ಪೊಲೀಸರು ಭೇದಿಸಿರೋದಕ್ಕೆ ಪನ್ಯ ಎಫ್.ಸಿ ತಂಡ ಶ್ಲಾಘನೆ ವ್ಯಕ್ತಪಡಿಸಿತ್ತು. ಪನ್ಯ ಎಫ್.ಸಿ. ತಂಡದ ಸುಮಾರು 25ಕ್ಕೂ ಅಧಿಕ ಸದಸ್ಯರು ಪಾಲ್ಗೊಂಡಿದ್ದರು. ಗ್ರಾ.ಪಂ. ಸದಸ್ಯ ಪ್ರಸಾದ್ ಕುಟ್ಟಪ್ಪ ಅವರ ನೇತೃತ್ವದಲ್ಲಿ ಈ ಸನ್ಮಾನ ಕಾರ್ಯಕ್ರಮ ನಡೆಯಿತು
ಆಸ್ತಿಗಾಗಿ ಪ್ರಿಯಕರನ ಜತೆ ಸೇರಿ ಗಂಡನಿಗೆ ಚಟ್ಟ ಕಟ್ಟಿದ್ದಳು
ಕೊಡಗು: ಅಕ್ಟೋಬರ್ 8ರಂದು ಕೊಡಗಿನ ಸುಂಟಿಕೊಪ್ಪ ಸಮೀಪ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ (Murder case) ಪತ್ತೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರು ಪ್ರಕರಣವನ್ನು ಬೇಧಿಸಿದ್ದು, ತೆಲಂಗಾಣ ಮೂಲದ ಮೂವರು ಆರೋಪಿಗಳನ್ನು ಬಂಧಿಸಿದ್ದರು. ಪ್ರಮುಖ ಆರೋಪಿ ನಿಹಾರಿಕ (29), ಪಶು ವೈದ್ಯ ನಿಖಿಲ್ ಹಾಗೂ ಹರಿಯಾಣದ ಅಂಕುರ್ ಎಂಬುವವರು ಬಂಧಿತರು.
ಈ ಮೂವರು ರಿಯಲ್ ಎಸ್ಟೇಟ್ ಉದ್ಯಮಿ ರಮೇಶ್ (54) ಎಂಬಾತನನ್ನು ತೆಲಂಗಾಣದಲ್ಲಿ ಕೊಲೆ ಮಾಡಿ, ಕೊಡಗಿನಲ್ಲಿ ಸುಟ್ಟು ಹಾಕಿ ಕಾಲ್ಕಿತ್ತಿದ್ದರು. ಆಸ್ತಿಗಾಗಿ ನಿಹಾರಿಕ ಪ್ರಿಯಕರರ ಜತೆ ಸೇರಿ ತನ್ನ ಪತಿಯನ್ನೇ ಹತ್ಯೆ ಮಾಡಿದ್ದಳು. ಹತ್ಯೆ ಮಾಡಿ ನಂತರ ಕೊಡಗಿನ ಸುಂಟಿಕೊಪ್ಪದಲ್ಲಿ ಸುಟ್ಟು ಹಾಕಿದ್ದರು. ಪ್ರಕರಣ ಸಂಬಂಧ ಪೊಲೀಸರು ಸಿಸಿ ಕ್ಯಾಮೆರಾ ಸುಳಿವು ಆಧಾರಿಸಿ, ರೆಡ್ ಕಲರ್ ಬೆಂಜ್ ಕಾರಿನ ಹಿಂದೆ ಬಿದ್ದಿದ್ದರು. ಕಾರುಪತ್ತೆ ಮಾಡಿ ಆರೋಪಿಯನ್ನು ಬಂಧಿಸಲಾಗಿತ್ತು.
ನಿಹಾರಿಕ ತಾನು 10ನೇ ತರಗತಿಯಲ್ಲಿ ಇರುವಾಗಲೇ ಮದುವೆಯಾಗಿದ್ದಳು. ಎರಡು ಮಕ್ಕಳಾದ ಮೇಲೆ ಪತಿಗೆ ಡಿವೋಸ್ ಕೊಟ್ಟು ದೂರವಾಗಿದ್ದಳು. ಬಳಿಕ ಜೈಲಿನಲ್ಲಿದ್ದ ಅಂಕುರ್ ಎಂಬಾತನ ಪರಿಚಯವಾಗಿತ್ತು. ಈ ಅಂಕುರ್ ಮೂಲಕ ರಮೇಶ್‌ನ ಪರಿಚಯವಾಗಿ ಮದುವೆಯಾಗಿದ್ದಳು. ರಮೇಶ್ ರಿಯಲ್ ಎಸ್ಟೇಟ್ ಬ್ಯುಸಿನೆಸ್ ಮಾಡುತ್ತಿದ್ದರು. ಈ ನಡುವೆ ನಿಹಾರಿಕ, ನಿಖಿಲ್ ಜತೆಗೂ ಲಿವಿಂಗ್ ರಿಲೇಶನ್ ಶಿಪ್‌ನಲ್ಲಿ ಇದ್ದಳು.
ನಿಹಾರಿಕ ಅಂಕುರ್‌ನೊಂದಿಗೆ ಸೇರಿ ಆಸ್ತಿ ನೀಡುವಂತೆ ರಮೇಶ್‌ನಿಗೆ ಕಿರುಕುಳ ನೀಡುತ್ತಿದ್ದರು. ಆಸ್ತಿ ನೀಡದೇ ಇದ್ದದ್ದಕ್ಕೆ ಹೈದರಾಬಾದ್ ಸಮೀಪ ಹಗ್ಗದಿಂದ ಬಿಗಿದು ರಮೇಶ್‌ನ ಕೊಲೆ ಮಾಡಿದ್ದರು. ಕೊಲೆ ಮಾಡಿ ಬಳಿಕ ರಮೇಶ್‌ನ ಕಾರಿನಲ್ಲೇ ಆತನ ಅಪಾರ್ಟ್ಮೆಂಟ್‌ಗೆ ಹೋಗಿ ಹಣ, ಆಸ್ತಿ ದಾಖಲೆ ದೋಚಿದ್ದರು. ನಂತರ ಬೆಂಗಳೂರಿಗೆ ಬಂದು ಪೆಟ್ರೋಲ್ ಖರೀದಿಸಿ, ಕೊಡಗಿಗೆ ತಂದು ರಮೇಶ್ ಬಾಡಿಯನ್ನು ಸುಟ್ಟು ಹಾಕಿದ್ದರು. ಕೊಲೆ ಬಳಿಕ ಅಂಕುರ್ ದೆಹಲಿ, ಹರಿಯಾಣ ಅಂತ ಸುತ್ತಾಡಿದ್ದ.
ಬೆಂಗಳೂರು
Assault Case : ಬೆಂಗಳೂರಿನಲ್ಲೊಬ್ಬ ಸೈಕೋಪಾಥ್ ಪತಿ; ನಿಧಿಗಾಗಿ ಮಗುನಾ ಬಲಿ ಕೊಡೋಣವೆಂದು ಪತ್ನಿಗೆ ಕಿರುಕುಳ
ಬೆಂಗಳೂರು: ಬೆಂಗಳೂರಿನಲ್ಲೊಬ್ಬ ಸೈಕೋಪಾಥ್ ಪತಿಯ ಕಾಟಕ್ಕೆ ಬೇಸತ್ತ ಪತ್ನಿ ಪೊಲೀಸ್ ಠಾಣೆ (Assault Case) ಮೆಟ್ಟಿಲೇರಿದ್ದಾಳೆ. ಮಗುವನ್ನು ಬಲಿ ಕೊಡೋಣ, ಬಲಿ ಕೊಟ್ರೆ ನಿಧಿ ಸಿಗುತ್ತೆ. ಕುಟುಂಬದ ಸಮೃದ್ಧಿ ಹೆಚ್ಚಾಗತ್ತೆ ಎಂದು ಪತ್ನಿಗೆ ಕಿರುಕುಳ ನೀಡುತ್ತಿದ್ದಾನೆ. ಪತಿ ವಿರುದ್ಧ ಸಿಡಿದೆದ್ದ ಪತ್ನಿಯಿಂದ ಪೊಲೀಸ್ ಕಮಿಷನರ್‌ಗೆ ದೂರು ನೀಡಿದ್ದಾರೆ. ಬೆಂಗಳೂರಿನ ಕೆ.ಆರ್.ಪುರಂ ನಿವಾಸಿ ಸದ್ದಾಂ ವಿರುದ್ಧ ಪತ್ನಿಯೇ ದೂರು ನೀಡಿದ್ದಾರೆ. ಕಳೆದ ನಾಲ್ಕು ವರ್ಷಗಳ ಹಿಂದೆ ನಾನೊಬ್ಬ ಹಿಂದು ಯುವಕಮ ನನ್ನ ಹೆಸರು ಆದಿಈಶ್ವರ್ ಎಂದು ಸುಳ್ಳು ಹೇಳಿ ಸದ್ದಾಂ ಹಿಂದು ಧರ್ಮದ ಯುವತಿಯನ್ನು ಮದುವೆಯಾಗಿದ್ದ.
ಮದುವೆಯಾಗಿ ಪತ್ನಿ ಗರ್ಭಿಣಿಯಾದಾಗ ತಾನೊಬ್ಬ ಮುಸಲ್ಮಾನ್ ತನ್ನ ಹೆಸರು ಸದ್ದಾಂ ಎಂದು ಹೇಳಿಕೊಂಡಿದ್ದ.
ನೀನು ಮುಸಲ್ಮಾನ್ ಧರ್ಮಕ್ಕೆ ಮತಾಂತರವಾಗಬೇಕೆಂದು ಪತ್ನಿಯನ್ನು ಮತಾಂತರಿಸಿದ್ದ. ಅಲ್ಲದೇ ಪತ್ನಿಯ ಹೆಸರನ್ನು ಬದಲಾಯಿಸಿದ್ದ. ಪ್ರೀತಿಸಿ ಮದುವೆಯಾದವನು ಧರ್ಮ ಯಾವುದಾದರೇನು ಎಂದು ಪತ್ನಿಯೂ ಸುಮ್ಮನಾಗಿದ್ದಳು. ಆದರೆ ಇತ್ತೀಚಿಗೆ ಸೈಕೋ ರೀತಿಯಲ್ಲಿ ಸದ್ದಾಂ ವರ್ತಿಸುತ್ತಿದ್ದ.
ಗಂಡು ಮಗು ಹುಟ್ಟಿದ ನಂತರ ಕುಟ್ಟಿ ಸೈತಾನ್ ಪೂಜೆ ಮಾಡಬೇಕು. ಕುಟ್ಟಿ ಸೈತಾನ್ ಪೂಜೆಯಲ್ಲಿ ಮಗುವನ್ನು ಬಲಿ ಕೊಡಬೇಕು. ಮಗುವನ್ನು ಬಲಿ ಕೊಟ್ರೆ ಸಮೃದ್ಧಿ ಹೆಚ್ಚಾಗತ್ತೆ, ಜತೆಗೆ ನಿಧಿ ಸಿಗತ್ತೆ ಎಂದು ಪತ್ನಿಗೆ ಕಿರುಕುಳ ನೀಡುತ್ತಿದ್ದ. ಸದ್ಯ ಸೈಕೋ ಗಂಡನಿಂದ ತಪ್ಪಿಸಿಕೊಂಡಿರುವ ಮಹಿಳೆ ತುಮಕೂರಿನ ತವರು ಮನೆ ಸೇರಿಕೊಂಡಿದ್ದಾಳೆ. ತುಮಕೂರಿಗೂ ತೆರಳಿ ಮಗುವನ್ನು ಬಲಿ ಕೊಡೋಣ ಮಗುವನ್ನು ಕೊಡು ಎಂದು ಟಾರ್ಚರ್ ಕೊಟ್ಟಿದ್ದಾನೆ. ಆರೋಪಿ ಸದ್ದಾಂ ಪತ್ನಿಯ ತಾಯಿಗೂ ಜೀವ ಬೆದರಿಕೆ ಹಾಕಿದ್ದಾನೆ.
ಹೀಗಾಗಿ ಮಹಿಳೆ ಈ ಬಗ್ಗೆ ಕೆ.ಆರ್.ಪುರ ಠಾಣೆಗೆ ದೂರು ನೀಡಿದ್ದಾಳೆ. ಆದರೆ ಯಾವುದೇ ಕ್ರಮವಾಗದ ಹಿನ್ನೆಲೆಯಲ್ಲಿ ಪೊಲೀಸ್ ಆಯುಕ್ತ ದಯಾನಂದ್‌ಗೆ ನೊಂದಾಕೆ ದೂರು ನೀಡಿದ್ದಾಳೆ. ತಡರಾತ್ರಿ ಎದ್ದು ಮಂತ್ರ ಪಠಿಸುತ್ತಾ ವಾಮಾಚಾರ ವಿದ್ಯೆ ಅಭ್ಯಾಸ ಮಾಡುತ್ತಿದ್ದ. ಪತಿಯ ವರ್ತನೆ ಕಂಡು ಭಯಭೀತಳಾಗಿದ್ದ ಮಹಿಳೆ, ದಿನ ಕಳೆದಂತೆ ಕುಟ್ಟಿ ಸೈತಾನ್ ಪೂಜೆಗೆ ಮಗುವನ್ನು ಬಲಿ ಕೊಡಬೇಕೆಂದು ಹಿಂಸೆ ನೀಡಲು ಶುರು ಮಾಡಿದ್ದ.
ಉತ್ತರ ಕನ್ನಡ
Murder Case : ಗಾರೆ ಕೆಲಸಕ್ಕೆ ಬಂದಿದ್ದ ಯುವಕನನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಪಾಪಿಗಳು
Murder Case : ಗಾರೆ ಕೆಲಸಕ್ಕೆ ಬಂದಿದ್ದ ಯುವಕನನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಜತೆಗೆ ಇದ್ದವರೆ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ.
ಉತ್ತರ ಕನ್ನಡ : ಗಾರೆ ಕೆಲಸಕ್ಕೆ ಬಂದಿದ್ದ ಯುವಕನನ್ನು ಕಲ್ಲಿನಿಂದ ಜಜ್ಜಿ ಕೊಲೆ (Murder Case) ಮಾಡಲಾಗಿದೆ. ಉತ್ತರಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ಸರ್ಕಾರಿ ಆಸ್ಪತ್ರೆ ಕ್ವಾರ್ಟರ್ಸ್ ಬಳಿ ಘಟನೆ ನಡೆದಿದೆ. ಹುಬ್ಬಳ್ಳಿ ಮೂಲದ ಇಮ್ತಿಯಾಝ್(25) ಕೊಲೆಯಾದವನು.
ಗಾರೆ ಕೆಲಸಕ್ಕಾಗಿ ಇಮ್ತಿಯಾಝ್ ಕಳೆದೊಂದು ತಿಂಗಳಿನಿಂದ ಕುಮಟಾ ಸರಕಾರಿ ಆಸ್ಪತ್ರೆಯ ಕ್ವಾರ್ಟರ್ಸ್‌ನಲ್ಲಿ ತಂಗಿದ್ದ. ಈತನ ಜತೆ ಹುಬ್ಬಳ್ಳಿ ಮೂಲದ ಮೊಯುದ್ದೀನ್, ಮೌನೇಶ್ ಹಾಗೂ ಸಾದಿಕ್ ಎಂಬುವವರು ಕ್ವಾರ್ಟರ್ಸ್‌ನಲ್ಲಿ ತಂಗಿದ್ದರು. ಗಾರೆ ಕೆಲಸಕ್ಕಾಗಿಯೇ ಕುಮಟಾಕ್ಕೆ ಬಂದು, ನಾಲ್ವರು ಒಂದೇ ರೂಮಿನಲ್ಲಿ ತಂಗಿದ್ದ. ಇಮ್ತಿಯಾಝ್ ಕೊಲೆಯ ಬಳಿಕ ಜತೆಗಿದ್ದ ಮೂವರು ಪರಾರಿ ಆಗಿದ್ದಾರೆ.
ಇನ್ಸ್‌ಪೆಕ್ಟರ್ ಯೋಗೀಶ್ ನೇತೃತ್ವದಲ್ಲಿ ಕೊಲೆ ಪ್ರಕರಣದ ತನಿಖೆ ನಡೆಯುತ್ತಿದೆ. ಈಗಾಗಲೇ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಮತ್ತೊಬ್ಬನಿಗಾಗಿ ಪೊಲೀಸರಿಂದ ಶೋಧ ಕಾರ್ಯ ನಡೆಯುತ್ತಿದೆ. ಘಟನೆ ಸಂಬಂಧ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.