Site icon Vistara News

Electric Shock: ರಾಣೇಬೆನ್ನೂರಿನಲ್ಲಿ ವಿದ್ಯುತ್ ಶಾಕ್ ಹೊಡೆದು ತಂದೆ ಮಗ-ಸಾವು

Electric Shock

ಹಾವೇರಿ: ವಿದ್ಯುತ್ ಶಾಕ್ ಹೊಡೆದು ತಂದೆ-ಮಗ ಮೃತಪಟ್ಟಿರುವ ಘಟನೆ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಪತ್ತೆಪುರ ಗ್ರಾಮದಲ್ಲಿ ನಡೆದಿದೆ. ಮೋಟಾರ್ ಪಂಪ್‌ಸೆಟ್ ರಿಪೇರಿ ಮಾಡುತ್ತಿದ್ದಾಗ ಅವಘಡ (Electric Shock) ನಡೆದಿದ್ದು, ಸ್ಥಳಕ್ಕೆ ಹೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ತಂದೆ ಕರಿಬಸಪ್ಪ (45), ಮಗ ದರ್ಶನ್‌ (25) ಮೃತರು. ತುಂಗಭದ್ರ ನದಿ ದಡದಲ್ಲಿ ಹಾಕಿದ್ದ ಪಂಪ್ ಸೆಟ್ ರಿಪೇರಿ ಮಾಡುತ್ತಿದ್ದಾಗ ವಿದ್ಯುತ್ ಶಾಕ್ ಹೊಡೆದು ತಂದೆ-ಮಗ ಮೃತಪಪಟ್ಟಿದ್ದಾರೆ. ಸ್ಥಳಕ್ಕೆ ಹೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ | Namma Metro: ಆ.6ರಂದು ನಮ್ಮ ಮೆಟ್ರೋದಲ್ಲಿ ದಾಖಲೆ ಸಂಖ್ಯೆಯಲ್ಲಿ ಪ್ರಯಾಣಿಕರ ಓಡಾಟ

Self Harming: ಖಿನ್ನತೆಯಿಂದ ನೇಣಿಗೆ ಶರಣಾದ ಕೇರಳ ಮೂಲದ ಯುವತಿ

ಬೆಂಗಳೂರು: ಕೇರಳ ಮೂಲದ ಯುವತಿಯೊಬ್ಬಳು ಖಿನ್ನತೆಯಿಂದ ನೇಣಿಗೆ ಶರಣಾಗಿರುವ ಘಟನೆ (Self Harming) ನಗರದ ಕುಮಾರಸ್ವಾಮಿ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಂಜನಾ‌ (26) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

ನಗರದ ಪಿ.ಜಿ.ಯಲ್ಲಿ ಯುವತಿ ವಾಸವಿದ್ದಳು. ಇತ್ತೀಚೆಗೆ ತಂದೆ ತೀರಿಕೊಂಡಿದ್ದರಿಂದ ಕೆಲ ದಿನಗಳಿಂದ ಒಂಟಿತನ ಹಾಗೂ ಖಿನ್ನತೆಗೆ ಒಳಗಾಗಿದ್ದಳು ಎನ್ನಲಾಗಿದೆ. ಆಗಸ್ಟ್ 3ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕುಮಾರಸ್ವಾಮಿ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ

ಆನೇಕಲ್: ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಸಮೀಪದ ಶಿಲೀಂಧ್ರದೊಡ್ಡಿ ಬಾಲಾಜಿ ಬಡಾವಣೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆಯಾಗಿದೆ.

ಪಾಳು ಬಿದ್ದ ನೀರಿನ ತೊಟ್ಟಿಯಲ್ಲಿ ಸುಮಾರು 30 ವರ್ಷ ವಯಸ್ಸಿನ ಅಪರಿಚಿತ ಮಹಿಳೆ ಶವ ಪತ್ತೆಯಾಗಿದ್ದು, ಕೊಲೆಗೈದು ತೊಟ್ಟಿಯಲ್ಲಿ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ. ಕಳೆದ ನಾಲ್ಕೈದು ದಿನಗಳ ಹಿಂದೆ ಶವ ಎಸೆದು ಹೋಗಿರುವ ಅನುಮಾನಗಳು ಮೂಡಿವೆ. ಬನ್ನೇರುಘಟ್ಟ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Exit mobile version