ಎಐ ತಂತ್ರಜ್ಞಾನದಿಂದ ಹಿಂದು ಯುವತಿಯ ಅಶ್ಲೀಲ ವಿಡಿಯೊ ಸೃಷ್ಟಿಸಿ ಇಸ್ಲಾಂಗೆ ಮತಾಂತರಗೊಳಿಸಲು ಯತ್ನ: ಫೈಜಲ್ ವಿರುದ್ಧ ದೂರು - Vistara News

ಕ್ರೈಂ

ಎಐ ತಂತ್ರಜ್ಞಾನದಿಂದ ಹಿಂದು ಯುವತಿಯ ಅಶ್ಲೀಲ ವಿಡಿಯೊ ಸೃಷ್ಟಿಸಿ ಇಸ್ಲಾಂಗೆ ಮತಾಂತರಗೊಳಿಸಲು ಯತ್ನ: ಫೈಜಲ್ ವಿರುದ್ಧ ದೂರು

Cyber Crime: ಉತ್ತರ ಪ್ರದೇಶದ ಬರೇಲಿಯಲ್ಲಿ ಹಿಂದು ವಿದ್ಯಾರ್ಥಿನಿಯನ್ನು ಬೆದರಿಸಿ ಇಸ್ಲಾಂಗೆ ಮತಾಂತರಗೊಳಿಸಲು ಮುಂದಾದ ಆಘಾತಕಾರಿ ಘಟನೆ ನಡೆದಿದೆ. ಮತಾಂತರಗೊಂಡು ಮದುವೆಯಾಗುವಂತೆ ಫೈಜಲ್ ಮತ್ತು ಅಮೀನ್ ಅವರಿಂದ ಬೆದರಿಕೆಗಳು ಬರುತ್ತಿವೆ ಎಂದು ವಿದ್ಯಾರ್ಥಿನಿ ತಿಳಿಸಿದ್ದಾಳೆ. ಈ ಸಂಬಂಧ ಮೇ 20ರಂದು ಸಂತ್ರಸ್ತೆಯ ತಂದೆ ನೀಡಿದ ದೂರಿನ ಮೇರೆಗೆ ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

VISTARANEWS.COM


on

Cyber Crime
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಉತ್ತರ ಪ್ರದೇಶದ ಬರೇಲಿಯಲ್ಲಿ ಹಿಂದು ವಿದ್ಯಾರ್ಥಿನಿಯನ್ನು ಬೆದರಿಸಿ ಇಸ್ಲಾಂಗೆ ಮತಾಂತರಗೊಳಿಸಲು ಮುಂದಾದ ಆಘಾತಕಾರಿ ಘಟನೆ ನಡೆದಿದೆ. ಮತಾಂತರಗೊಂಡು ಮದುವೆಯಾಗುವಂತೆ ಫೈಜಲ್ ಮತ್ತು ಅಮೀನ್ ಅವರಿಂದ ಬೆದರಿಕೆಗಳು ಬರುತ್ತಿವೆ ಎಂದು ವಿದ್ಯಾರ್ಥಿನಿ ತಿಳಿಸಿದ್ದಾಳೆ. ಆರೋಪಿಗಳು ಎಐ ತಂತ್ರಜ್ಞಾನ (AI tool) ಬಳಸಿಕೊಂಡು ವಿದ್ಯಾರ್ಥಿನಿಯ ಅಶ್ಲೀಲ ವಿಡಿಯೊವನ್ನು ರಚಿಸಿದ್ದು, ಇದನ್ನು ಬಹಿರಂಗಪಡಿಸುವುದಾಗಿ ಬೆದರಿಕೆ ಒಡ್ಡಿ ಮತಾಂತರ ನಡೆಸಲು ಯತ್ನಿಸುತ್ತಿದ್ದಾರೆ. ಈ ಸಂಬಂಧ ಮೇ 20ರಂದು ಸಂತ್ರಸ್ತೆಯ ತಂದೆ ನೀಡಿದ ದೂರಿನ ಮೇರೆಗೆ ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ (Cyber Crime).

ಬರೇಲಿಯ ಭೋಜಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ತನ್ನ ಮಗಳು ಕಾಲೇಜು ವಿದ್ಯಾರ್ಥಿನಿಯಾಗಿದ್ದು, ಈ ಘಟನೆಯಿಂದ ಆಘಾತಕ್ಕೊಳಗಾಗಿದ್ದಾಳೆ ಎಂದು ಆಕೆಯ ತಂದೆ ತಿಳಿಸಿದ್ದಾರೆ. ʼʼಮೇ 7ರಂದು ಫೈಜಲ್ ಮಗಳ ವಾಟ್ಸ್‌ಆ್ಯಪ್‌ ನಂಬರ್‌ಗೆ ʼಹಾಯ್ʼ ಎನ್ನುವ ಸಂದೇಶ ಕಳುಹಿಸಿದ್ದ. ಅಪರಿಚಿತ ನಂಬರ್‌ ಆಗಿರುವುದರಿಂದ ಮಗಳು ಇದಕ್ಕೆ ಪ್ರತಿಕ್ರಿಯೆ ನೀಡಿರಲಿಲ್ಲ. ಹೀಗಾಗಿ ಆತ ಕರೆ ಮಾಡಿ ಬಲವಂತವಾಗಿ ಮಾತನಾಡಲು ಪ್ರಯತ್ನಿಸಿದ್ದ. ಈ ವೇಳೆ ಫೈಜಲ್ ತಾನು ಆಕೆಯನ್ನು ಇಷ್ಟಪಡುವುದಾಗಿ ಹೇಳಿದ್ದ. ಜತೆಗೆ ಇಸ್ಲಾಂಗೆ ಮತಾಂತರವಾಗು. ಆಗ ನಾನು ಯಾವಾಗಲೂ ನಿನ್ನನ್ನು ಸಂತೋಷವಾಗಿರಿಸುತ್ತೇನೆ ಎಂದು ಹೇಳಿದ್ದʼʼ ಎನ್ನುವುದು ಸಂತ್ರಸ್ತೆಯ ತಂದೆ ನೀಡಿದ ವಿವರಣೆ.

ʼʼಇದನ್ನು ಕೇಳಿದ ನಂತರ ಮಗಳು ಯಾವುದೇ ಪ್ರತಿಕ್ರಿಯೆ ನೀಡದೆ ಫೋನ್ ಸಂಪರ್ಕ ಕಡಿತಗೊಳಿಸಿದ್ದಳು. ಮೇ 19ರಂದು ಮತ್ತೆ ಆಕೆಗೆ ಅದೇ ಸಂಖ್ಯೆಯಿಂದ ಮತ್ತೊಮ್ಮೆ ಮೆಸೇಜ್‌ ಬಂದಿದೆ. ಆಕೆ ಯಾರೆಂದು ಕೇಳಿದಾಗ ವಿಡಿಯೊ ಫೈಜಲ್‌ ಕರೆ ಮಾಡಲು ಆರಂಭಿಸಿದ್ದ. ಆಕೆ ರಿಸೀವ್‌ ಮಾಡದೇ ಇದ್ದಾಗ ಅಶ್ಲೀಲ ಸಂದೇಶಗಳು ಮತ್ತು ಅಶ್ಲೀಲ ವಿಡಿಯೊಗಳನ್ನು ಕಳುಹಿಸಿದ್ದ. ಇದಕ್ಕೆ ಆಕ್ಷೇಪ ಸಲ್ಲಿಸಿದಾಗ ಆತ ಮನೆಗೆ ಬಂದು ಅಪಹರಿಸುವುದಾಗಿ ಬೆದರಿಕೆ ಹಾಕಿದ್ದ. ಮಾತ್ರವಲ್ಲ ಈ ವಿಷಯವನ್ನು ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿಯೂ ಹೆದರಿಸಿದ್ದʼʼ ಎಂದು ವಿದ್ಯಾರ್ಥಿನಿಯ ತಂದೆ ದೂರಿನಲ್ಲಿ ತಿಳಿಸಿದ್ದಾರೆ.

ಜತೆಗೆ ಫೈಜಲ್‌, ಮತಾಂತರಗೊಳ್ಳಲಿದಿದ್ದರೆ ಎಐ ತಂತ್ರಜ್ಞಾನ ಬಳಿಸಿ ಯುವತಿಯ ಅಶ್ಲೀಲ ಫೋಟೊ, ವಿಡಿಯೊ ರಚಿಸುವುದಾಗಿಯೂ ಬೆದರಿಕೆ ಹಾಕಿದ್ದಾನೆ. ಇದು ಹೊರ ಬಂದರೆ ಮತ್ತೆ ಆಕೆಗೆ ತಲೆ ಎತ್ತು ನಡೆಯಲೂ ಸಾಧ್ಯವಿಲ್ಲ ಎಂದು ಹೇಳಿದ್ದಾಗಿ ದೂರಿನಲ್ಲಿ ವಿವರಿಸಲಾಗಿದೆ.

ಇದನ್ನೂ ಓದಿ: Attempting to Convert: ಯೋಗಿ ನಾಡಿನಲ್ಲಿ ಮತಾಂತರಕ್ಕೆ ಯತ್ನ; ಪಾದ್ರಿ ಸೇರಿ 10 ಮಂದಿಯ ಬಂಧನ

ಇದಾದ ಬಳಿಕ ಸಂತ್ರಸ್ತೆ ತಮ್ಮ ಮನೆಯವರಿಗೆ ವಿಷಯ ತಿಳಿಸಿದ್ದಳು. ತನಿಖೆ ನಡೆಸಿದಾಗ ಬೆದರಿಕೆಯ ಕರೆ ಬಂದ ಫೋನ್‌ ನಂಬರ್‌ ಬರೇಲಿಯ ಭೋಜಿಪುರ ಪೊಲೀಸ್ ಠಾಣೆ ಪ್ರದೇಶದಲ್ಲಿ ವಾಸಿಸುವ ಫೈಜಲ್‌ನದ್ದು ಎಂದು ತಿಳಿದು ಬಂತು. ಹೆಚ್ಚಿನ ವಿಚಾರಣೆ ವೇಳೆ ಪ್ರಕರಣದಲ್ಲಿ ಫೈಜಲ್‌ನ ತಂದೆ ಅಮೀನ್‌ನ ಕೈವಾಡ ಇರುವುದು ಕೂಡ ಕಂಡುಬಂತು. ಇಬ್ಬರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಂತ್ರಸ್ತೆಯ ತಂದೆ ಆಗ್ರಹಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಸ್ಯಾಂಡಲ್ ವುಡ್

Actor Darshan: ಪರಪ್ಪನ ಅಗ್ರಹಾರದಲ್ಲಿ ʻದಾಸʼ; ʻಡಿʼಬಾಸ್‌ ಕೈದಿ ನಂಬರ್‌ 6106!

Actor Darshan: ಪತ್ನಿ ವಿಜಯಲಕ್ಷ್ಮಿ ಮೇಲೆ ಹಲ್ಲೆ ಮಾಡಿದ ಹಿನ್ನೆಲೆಯಲ್ಲಿ 2011ರಲ್ಲಿ ದರ್ಶನ್ 28‌ ದಿನ ಜೈಲು ಪಾಲಾಗಿದ್ದರು. ಅಂದು ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ಜಾಮೀನು ನಿರಾಕರಣೆಗೊಂಡ ಬಳಿಕ, ಹೈಕೋರ್ಟ್‌ನಿಂದ ಜಾಮೀನು ಪಡೆದಿದ್ದರು. ಇದೀಗ 13 ವರ್ಷಗಳ ಬಳಿಕ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೆ ಜೈಲಿಗೆ ಹೋಗಿದ್ದಾರೆ.ದರ್ಶನ್​ಗೆ ಈಗಾಗಲೇ ವಿಚಾರಣಾಧೀನ ಕೈದಿ ಸಂಖ್ಯೆಯನ್ನು ಸಹ ನೀಡಲಾಗಿದೆ.

VISTARANEWS.COM


on

Actor Darshan Judicial Custody Jailer Gave UTP Number
Koo

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನವಾಗಿ 12 ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿದ್ದ ನಟ ದರ್ಶನ್ (Actor Darshan) ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರಿಂದ (Actor Darshan), ಪರಪ್ಪನ ಅಗ್ರಹಾರಕ್ಕೆ ಶಿಫ್ಟ್‌ ಆಗಿದ್ದಾರೆ. ಪರಪ್ಪನ ಅಗ್ರಹಾರ (Actor Darshan) ಜೈಲಿನ ಬಳಿ ಬಿಗಿ ಬಂಧೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು, ದರ್ಶನ್​ಗೆ ಈಗಾಗಲೇ ವಿಚಾರಣಾಧೀನ ಕೈದಿ ಸಂಖ್ಯೆಯನ್ನು ಸಹ ನೀಡಲಾಗಿದೆ.ದರ್ಶನ್​ಗೆ ವಿಚಾರಣಾಧೀನ ಕೈದಿ ಸಂಖ್ಯೆ 6106 ನ್ನು ನೀಡಲಾಗಿದೆ. ಇನ್ನು ನ್ಯಾಯಾಂಗ ಬಂಧನಕ್ಕೆ ಒಳಪಟ್ಟ ಧನರಾಜ್​ಗೆ 6107, ವಿನಯ್​ಗೆ 6108, ಪ್ರದೂಶ್​ಗೆ 6109 ಸಂಖ್ಯೆಗಳನ್ನು ನೀಡಲಾಗಿದೆ.

ಪರಪ್ಪನ ಅಗ್ರಹಾರದಲ್ಲಿ ಮೂರು ವಿಶೇಷ ಬ್ಯಾರಕ್​ಗಳಿದ್ದು, ಇತರೆ ಕೈದಿಗಳಿಂದ ಅಪಾಯವಿರುವ ಆರೋಪಿಗಳನ್ನು ಈ ಬ್ಯಾರಕ್​ನಲ್ಲಿ ಇಡಲಾಗುತ್ತಿದೆ. ಇದೀಗ ದರ್ಶನ್​ ಅನ್ನು ಮೂರನೇ ಬ್ಯಾರಕ್​ನಲ್ಲಿ ಇರಿಸಲಾಗಿದೆ.ಪರಪ್ಪನ ಅಗ್ರಹಾರದಲ್ಲಿ ಮೂರು ವಿಶೇಷ ಬ್ಯಾರಕ್​ಗಳಿದ್ದು, ಇತರೆ ಕೈದಿಗಳಿಂದ ಅಪಾಯವಿರುವ ಆರೋಪಿಗಳನ್ನು ಈ ಬ್ಯಾರಕ್​ನಲ್ಲಿ ಇಡಲಾಗುತ್ತಿದೆ. ಇದೀಗ ದರ್ಶನ್​ ಅನ್ನು ಮೂರನೇ ಬ್ಯಾರಕ್​ನಲ್ಲಿ ಇರಿಸಲಾಗಿದೆ.. ಪವಿತ್ರಾ ಗೌಡಗೆ ವಿಚಾರಣಾಧೀನ ಕೈದಿ ನಂಬರ್‌ವನ್ನು ಜೈಲಾಧಿಕಾರಿಗಳು ನೀಡಿದ್ದರು. ಪವಿತ್ರಾ ಗೌಡ ವಿಚಾರಣಾಧೀನ(UTP)ಕೈದಿ ನಂಬರ್ 6024 ಆಗಿತ್ತು.

ಪತ್ನಿ ವಿಜಯಲಕ್ಷ್ಮಿ ಮೇಲೆ ಹಲ್ಲೆ ಮಾಡಿದ ಹಿನ್ನೆಲೆಯಲ್ಲಿ 2011ರಲ್ಲಿ ದರ್ಶನ್ 28‌ ದಿನ ಜೈಲು ಪಾಲಾಗಿದ್ದರು. ಅಂದು ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ಜಾಮೀನು ನಿರಾಕರಣೆಗೊಂಡ ಬಳಿಕ, ಹೈಕೋರ್ಟ್‌ನಿಂದ ಜಾಮೀನು ಪಡೆದಿದ್ದರು. ಇದೀಗ 13 ವರ್ಷಗಳ ಬಳಿಕ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೆ ಜೈಲಿಗೆ ಹೋಗಿದ್ದಾರೆ.

ಇದನ್ನೂ ಓದಿ: Actor Darshan: ಜೈಲು ಸೇರಿದ ನಟ ದರ್ಶನ್ ಮುಂದೆ ಇರೋ ಆಯ್ಕೆಗಳೇನು?

ನಟ ದರ್ಶನ್‌ಗೆ ಪ್ರಭಾವಿ ರಾಜಕಾರಣಿಗಳ ಸಂಪರ್ಕ ಇರುವುದರಿಂದ ಪಾರದರ್ಶಕವಾಗಿ ತನಿಖೆ ನಡೆಸಲು ರಾಜ್ಯ ಸರ್ಕಾರ ಈ ಬಾರಿ ಖಡಕ್ ನಿರ್ಧಾರ ತೆಗೆದುಕೊಂಡಿದೆ. ಪ್ರಕರಣದಲ್ಲಿ ಯಾರೂ ಒತ್ತಡ ಹಾಕಬೇಡಿ ಎಂದು ಕೂಡ ಸಚಿವರಿಗೆ ಸಿಎಂ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಇದರಿಂದ ಪೊಲೀಸರು ಅಗತ್ಯ ಸಾಕ್ಷ್ಯ ಸಂಗ್ರಹಣೆ ಮಾಡುತ್ತಿದ್ದು, ಕೋರ್ಟ್‌ನಲ್ಲಿ ವಕೀಲರು ಸಮರ್ಥ ವಾದ ಮಂಡಿಸುತ್ತಿದ್ದಾರೆ. ಹೀಗಾಗಿ ಆರೋಪಿಗಳೆಲ್ಲಾ ಪರಪ್ಪನ ಅಗ್ರಹಾರ ಸೇರಿದ್ದಾರೆ.

ಆರೋಪಿಗಳು ಕೃತ್ಯದಲ್ಲಿ ಭಾಗಿಯಾಗಿರೋದಕ್ಕೆ ಸೂಕ್ತ ಸಾಕ್ಷ್ಯಗಳಿವೆ. ಈ ನಾಲ್ಕು ಮಂದಿ ರೇಣುಕಾಸ್ವಾಮಿ ಕೊಲೆಯಲ್ಲಿ ಭಾಗಿಯಾಗಿದ್ದಾರೆ. ಇವರಿಗೆ ನೆಲದ ಕಾನೂನಿನ ಮೇಲೆ ಕಿಂಚಿತ್ತು ಗೌರವ ಇಲ್ಲ. ಎ1 ಪ್ರಚೋದನೆಗೆ ದರ್ಶನ್ ಮತ್ತು ಟೀಂ ಒಳಗಾಗಿ ಕೃತ್ಯ ಮಾಡಿದೆ. ಎಲ್ಲರಿಗೂ ಕೊಲ್ಲುವ ಸಮಾನ ಉದ್ದೇಶವೂ ಕಂಡು ಬಂದಿದೆ. ಅದಕ್ಕಾಗಿ ಲಕ್ಷಾಂತರ ರೂಪಾಯಿನ್ನು ಬಳಕೆ ಮಾಡಿದ್ದಾರೆ ಎಂದು ರಿಮ್ಯಾಂಡ್‌ ಅರ್ಜಿಯಲ್ಲಿ ಉಲ್ಲೇಖ ಮಾಡಲಾಗಿದೆ. ವಾದ-ಪ್ರತಿವಾದ ಆಲಿಸಿದ ಬಳಿಕ ಆರೋಪಿಗಳನ್ನು ಜುಲೈ 4ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಜಡ್ಜ್‌ ಆದೇಶ ನೀಡಿದರು.

Continue Reading

ಕ್ರೈಂ

Share Market Scam: ಮುಖೇಶ್ ಅಂಬಾನಿ ಡೀಪ್ ಫೇಕ್‌! 7 ಲಕ್ಷ ರೂ. ಕಳೆದುಕೊಂಡ ವೈದ್ಯೆ

ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ ಅವರ ಡೀಪ್‌ಫೇಕ್ ರೀಲ್ ಅನ್ನು ಇನ್ ಸ್ಟಾಗ್ರಾಮ್ ನಲ್ಲಿ ನೋಡಿ ಪ್ರಭಾವಿತರಾದ ಡಾ. ಪಾಟೀಲ್ ಅವರು ಹೂಡಿಕೆ (Share Market Scam) ಮಾಡಲು ನಿರ್ಧರಿಸಿ ಅವರು ನೀಡಿರುವ ಲಿಂಕ್ ಮೂಲಕ ಸಂಪರ್ಕಿಸಿದ್ದಾರೆ. ಅವರು ಕಳುಹಿಸಿರುವ ಲಿಂಕ್ ಮೂಲಕ ಆಪ್ ಡೌನ್‌ಲೋಡ್ ಮಾಡಿ ವಿವಿಧ ಖಾತೆಗಳಿಗೆ 7.1 ಲಕ್ಷ ರೂ. ಜಮೆ ಮಾಡಿದ್ದಾರೆ.

VISTARANEWS.COM


on

By

Share Market Scam
Koo

ಮುಂಬಯಿ: ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ (Mukesh Ambani) ಅವರ ಡೀಪ್‌ಫೇಕ್ (Deepfake) ರೀಲ್ ನಿಂದ ಪ್ರಭಾವಿತಳಾದ ವೈದ್ಯಯೊಬ್ಬರು “ಷೇರ್ ಮಾರ್ಕೆಟ್ ಹಗರಣ”ದಲ್ಲಿ (Share Market Scam) 7 ಲಕ್ಷ ರೂ. ಕಳೆದುಕೊಂಡಿರುವ ಘಟನೆ ಮುಂಬಯಿನಲ್ಲಿ (Mumbai) ನಡೆದಿದೆ. ಈ ಕುರಿತು ವೈದ್ಯೆ ಪೊಲೀಸರಿಗೆ ದೂರು ನೀಡಿದ್ದಾರೆ. ಅಂಧೇರಿಯಲ್ಲಿ ನೆಲೆಸಿರುವ 54 ವರ್ಷದ ಆಯುರ್ವೇದ ವೈದ್ಯರಾದ ಡಾ.ಕೆ.ಎಚ್. ಪಾಟೀಲ್ ಅವರು ಏಪ್ರಿಲ್‌ನಲ್ಲಿ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋ ನೋಡಿ ವಂಚನೆಗೆ ಒಳಗಾಗಿದ್ದಾರೆ.

ಏಪ್ರಿಲ್ 15- 17ರ ನಡುವೆ ಷೇರು ಮಾರುಕಟ್ಟೆ ಹಗರಣದಲ್ಲಿ 7 ಲಕ್ಷ ರೂ.ಗೂ ಹೆಚ್ಚು ನಷ್ಟವನ್ನು ಕಳೆದುಕೊಂಡಿರುವುದಾಗಿ ವೈದ್ಯೆ ಡಾ. ಪಾಟೀಲ್ ದೂರಿನಲ್ಲಿ ತಿಳಿಸಿದ್ದಾರೆ. ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ ಅವರ ಡೀಪ್‌ಫೇಕ್ ರೀಲ್ ಅನ್ನು ಇನ್ ಸ್ಟಾಗ್ರಾಮ್ ನಲ್ಲಿ ನೋಡಿದ ಡಾ. ಪಾಟೀಲ್ ಅದರಿಂದ ಪ್ರಭಾವಿತರಾಗಿ ಹೂಡಿಕೆ ಮಾಡಲು ನಿರ್ಧರಿಸಿದ್ದರು. ಬಳಿಕ ಅವರನ್ನು ಲಿಂಕ್ ಮೂಲಕ ವಾಟ್ಸಾಪ್ ಗ್ರೂಪ್‌ಗೆ ಸೇರಿಸಿ ಲಾಭದ ಭರವಸೆ ನೀಡಲಾಯಿತು. ಆಪ್ ಡೌನ್‌ಲೋಡ್ ಮಾಡಿ ವಿವಿಧ ಖಾತೆಗಳಲ್ಲಿ ಹಣ ಜಮಾ ಮಾಡುವಂತೆ ಮಾಡಲಾಗಿತ್ತು ಎಂದು ಡಾ. ಪಾಟೀಲ್ ದೂರಿನಲ್ಲಿ ತಿಳಿಸಿದ್ದಾರೆ.

ಡಾ. ಪಾಟೀಲ್ ಏಪ್ರಿಲ್ 15 ರಂದು ತಮ್ಮ ಇನ್ ಸ್ಟಾ ಗ್ರಾಮ್ ಫೀಡ್‌ನಲ್ಲಿ ಡೀಪ್‌ಫೇಕ್ ವಿಡಿಯೋವನ್ನು ನೋಡಿದರು. ರಾಜೀವ್ ಶರ್ಮಾ ಟ್ರೇಡ್ ಗ್ರೂಪ್ ಹೆಸರಿನ ಟ್ರೇಡಿಂಗ್ ಅಕಾಡೆಮಿಯ ಯಶಸ್ಸನ್ನು ಪ್ರಚಾರ ಮಾಡುವ ಅಂಬಾನಿಯನ್ನು ಒಳಗೊಂಡಿರುವ ವಿಡಿಯೋ ಮತ್ತು ಹೂಡಿಕೆಯ ಮೇಲಿನ ಹೆಚ್ಚಿನ ಲಾಭಕ್ಕಾಗಿ ಬಿಸಿಎಫ್ ಅಕಾಡೆಮಿಗೆ ಸೇರಲು ಜನರನ್ನು ಒತ್ತಾಯಿಸಿತು.


ಆ ಗುಂಪನ್ನು ಆನ್‌ಲೈನ್‌ನಲ್ಲಿ ಹುಡುಕಿದಾಗ ಅವರು ಲಂಡನ್‌ ಮತ್ತು ಮುಂಬಯಿನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿ ಕಚೇರಿಗಳನ್ನು ಹೊಂದಿದ್ದಾರೆಂದು ಎಂದು ತಿಳಿಯಿತು. ಡಾ. ಪಾಟೀಲ್ ಅವರು ಆನ್‌ಲೈನ್‌ನಲ್ಲಿ ಅಕಾಡೆಮಿಯನ್ನು ಸಂಪರ್ಕಿಸಿದರು. ಮೇ ಮತ್ತು ಜೂನ್ ನಡುವೆ ಒಟ್ಟು 7.1 ಲಕ್ಷ ರೂ. ಅನ್ನು ಹೂಡಿಕೆಯನ್ನು ಮೇಲ್ವಿಚಾರಣೆ ಮಾಡುವ ಖಾತೆಯನ್ನು ಒದಗಿಸಲಾಯಿತು. ಅದರಲ್ಲಿ 30 ಲಕ್ಷ ರೂ. ಲಾಭವಾಗಿರುವುದು ತೋರಿಸಿತ್ತು. ಈ ತಿಂಗಳು ಮೊತ್ತವನ್ನು ಹಿಂಪಡೆಯಲು ಪ್ರಯತ್ನಿಸಿದಾಗ ಅದು ಸಾಧ್ಯವಾಗಲಿಲ್ಲ. ತಾನು ಮೋಸ ಹೋಗಿರುವುದನ್ನು ಅರಿತ ಅವರು ಪೊಲೀಸರಿಗೆ ದೂರು ನೀಡಿದ್ದಾಳೆ.

ಪೊಲೀಸರು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 419 ಮತ್ತು 420 ಮತ್ತು ಐಟಿ ಕಾಯ್ದೆಯ ಸೆಕ್ಷನ್ 66 (ಡಿ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಡಾ. ಪಾಟೀಲ್‌ 16 ಬ್ಯಾಂಕ್ ಖಾತೆಗಳಿಗೆ ಡಾ. ಪಾಟೀಲ್ ಹಣವನ್ನು ವರ್ಗಾಯಿಸಿದ್ದಾರೆ ಎನ್ನಲಾಗಿದೆ.

Continue Reading

ಕರ್ನಾಟಕ

Suraj Revanna Case: ಅಸಹಜ ಲೈಂಗಿಕ ದೌರ್ಜನ್ಯ ಕೇಸ್‌; ಎಂಎಲ್‌ಸಿ ಸೂರಜ್‌ ರೇವಣ್ಣ ಅರೆಸ್ಟ್‌

Suraj Revanna Case: ಲೈಂಗಿಕ ದೌರ್ಜನ್ಯ ಹಗರಣದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಬಂಧನವಾಗಿ ವಿಚಾರಣೆ ನಡೆಯುತ್ತಿರುವ ನಡುವೆಯೇ ಎಚ್‌.ಡಿ.ರೇವಣ್ಣ ಕುಟುಂಬದ ಮತ್ತೊಬ್ಬರ ಬಂಧನವಾಗಿದೆ. ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಪ್ರಜ್ವಲ್‌ ಸಹೋದರ, ವಿಧಾನ ಪರಿಷತ್ ಸದಸ್ಯ ಸೂರಜ್‌ ರೇವಣ್ಣ ಅವರನ್ನು ಸೆನ್ ಪೊಲೀಸ್ ಠಾಣೆಯಲ್ಲಿ ಬಂಧಿಸಲಾಗಿದೆ.

VISTARANEWS.COM


on

Suraj Revanna Case
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ ಹಗರಣದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಬಂಧನವಾಗಿ ವಿಚಾರಣೆ ನಡೆಯುತ್ತಿರುವ ನಡುವೆಯೇ ಎಚ್‌.ಡಿ.ರೇವಣ್ಣ ಕುಟುಂಬದ ಮತ್ತೊಬ್ಬರ ಬಂಧನವಾಗಿದೆ. ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ (Unnatural sexual abuse)ದ ಆರೋಪದ ಮೇಲೆ ಪ್ರಜ್ವಲ್‌ ಸಹೋದರ, ವಿಧಾನ ಪರಿಷತ್ ಸದಸ್ಯ ಸೂರಜ್‌ ರೇವಣ್ಣ (Suraj Revanna Case) ಅವರನ್ನು ಹಾಸನದ ಸೆನ್ ಪೊಲೀಸ್ ಠಾಣೆಯಲ್ಲಿ ಬಂಧಿಸಲಾಗಿದೆ.

ಪ್ರಕರಣದ ಸಂಬಂಧ ಸೂರಜ್‌ ರೇವಣ್ಣ ಅವರನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳ ಪಡಿಸಿದರು. ಶನಿವಾರ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ಹಿನ್ನೆಲೆಯಲ್ಲಿ ತಡರಾತ್ರಿವರೆಗೂ ವಿಚಾರಣೆ ನಡೆಯಿತು. ಭಾನುವಾರ ಮುಂಜಾನೆ 4 ಗಂಟೆವರೆಗೂ ಸೂರಜ್‌ನನ್ನು ತನಿಖಾಧಿಕಾರಿಗಳು ವಿಚಾರಣೆಗೆ ಒಳಪಡಿಸಿದರು.

ಏನಿದು ಪ್ರಕರಣ?

ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯಿಸಿ ದೌರ್ಜನ್ಯ ಎಸಗಿದ್ದು, ನನ್ನ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ಸೂರಜ್‌ ರೇವಣ್ಣ ವಿರುದ್ಧ ಅರಕಲಗೂಡಿನ ಜೆಡಿಎಸ್ ಕಾರ್ಯಕರ್ತರೊಬ್ಬರು ಆರೋಪ ಮಾಡಿದ್ದರು. ಈ ಬಗ್ಗೆ ಡಿಜಿಪಿ, ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಮುಖ್ಯಮಂತ್ರಿ ಹಾಗೂ ಗೃಹ ಮಂತ್ರಿಗಳಿಗೆ ದೂರು ಸಲ್ಲಿಸಿದ್ದಾರೆ ಎನ್ನಲಾಗಿದೆ.

ಖಾಸಗಿ ಫೈನಾನ್ಸ್‌ ಕಂಪನಿಯಲ್ಲಿ ಉದ್ಯೋಗಿಯಾದ ಜೆಡಿಎಸ್ ಕಾರ್ಯಕರ್ತ, ಜೂನ್ 16ರಂದು ಸೂರಜ್ ತನಗೆ ವಾಟ್ಸ್‌ಆ್ಯಪ್ ಮೂಲಕ ಸಂದೇಶ ಕಳುಹಿಸಿ, ಗನ್ನಿಕಡ ತೋಟದ ಮನೆಗೆ ಆಹ್ವಾನಿಸಿದ್ದರು. ಉದ್ಯೋಗ ನೀಡುವ ಭರವಸೆ ನೀಡಿ ತನ್ನನ್ನು ಕರೆಸಿಕೊಂಡು, ಸಲಿಂಗಕಾಮಕ್ಕೆ ಒತ್ತಾಯಿಸಿ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಇದರಿಂದ ನನ್ನ ದೇಹದ ಮೇಲೆ ಗಾಯಗಳಾಗಿದ್ದು, ಈ ಬಗ್ಗೆ ಎಲ್ಲಾದರೂ ಬಹಿರಂಗಪಡಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಕೂಡ ಹಾಕಿದ್ದಾರೆ ಎಂದು ಆರೋಪಿಸಿದ್ದರು.

ಪ್ರತಿ ದೂರು

ಇತ್ತ ಸಂತ್ರಸ್ತ ದೂರು ದಾಖಲಿಸುತ್ತಿದ್ದಂತೆ ಅವರ ವಿರುದ್ಧವೇ ಎಫ್‌ಐಆರ್‌ ದಾಖಲಿಸಲಾಗಿದೆ. ಸುಳ್ಳು ಆರೋಪ ಮಾಡಿ ಹಣಕ್ಕಾಗಿ ಪೀಡಿಸಿದ್ದಾರೆ ಎಂದು ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ನೀಡಿದ ದೂರಿನ ಮೇರೆಗೆ ಹೊಳೆನರಸೀಪುರ ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಸೂರಜ್ ರೇವಣ್ಣ ವಿರುದ್ಧ ದೂರುದಾರ ಲೈಂಗಿಕ ಕಿರುಕುಳ ದೂರು ನೀಡುವುದಾಗಿ ಬೆದರಿಕೆ ಹಾಕಿದ್ದ. ಐದು ಕೋಟಿ ರೂ. ಹಣ ನೀಡದಿದ್ದರೆ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ. ಸುಳ್ಳು ದೂರು ನೀಡಿ ಬೆದರಿಕೆ ಹಾಕಿರುವ ಬಗ್ಗೆ ಉಲ್ಲೇಖಿಸಿ ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ದೂರು ಸಲ್ಲಿಕೆ ಮಾಡಿದ್ದರಿಂದ ಐಪಿಸಿ ಸೆಕ್ಸೆನ್ 384, 506 ರ ಅಡಿಯಲ್ಲಿ 168/2024 ರಡಿ ಕೇಸ್ ದಾಖಲಾಗಿದೆ.

ಇದನ್ನೂ ಓದಿ | Prajwal Revanna Case: ರೇವಣ್ಣ ಜಾಮೀನು ರದ್ದು ಕೋರಿ ಎಸ್‌ಐಟಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ

ನಿಮ್ಮ ಬಾಸ್ ಬಳಿ ಕೆಲಸ ಕೊಡಿಸು ಎಂದು ಅರಕಲಗೂಡು ಮೂಲದ ಯುವಕ ಕೇಳಿಕೊಂಡಿದ್ದ. ನೀನೇ ಹೋಗಿ ಬಾಸ್ ಭೇಟಿ ಮಾಡು ಎಂದು ಫೊನ್ ನಂಬರ್ ಕೊಟ್ಟಿದ್ದೆ. ಜೂನ್ 16ರಂದು ಗನ್ನಿಕಡದ ತೋಟದ ಮನೆಗೆ ಕೆಲಸ ಕೇಳಲು ಸಂತ್ರಸ್ತ ಹೋಗಿದ್ದ. ಕೆಲಸ ಕೇಳಿ ವಾಪಸ್ ಬಂದ ಬಳಿಕ ಬ್ಲ್ಯಾಕ್ ಮೇಲ್ ಮಾಡಿರೋದಾಗಿ ಆರೋಪಿಸಲಾಗಿದೆ. ನೀನು ಕೆಲಸ ಕೊಡಿಸಲ್ಲ, ನಿಮ್ಮ ಬಾಸೂ ಕೆಲಸ ಕೊಡಿಸ್ತಿಲ್ಲ. ನನಗೆ ತುಂಬಾ ಕಷ್ಟ ಇದೆ, ನನಗೆ ಹಣ ಬೇಕು. ನೀನು, ನಿಮ್ಮ ಬಾಸ್‌ನಿಂದ ಐದು ಕೋಟಿ ಹಣ ಕೊಡಿಸದಿದ್ದರೆ, ಅವರ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸುತ್ತೇನೆ ಎಂದು ಸಂತ್ರಸ್ತ ಬೆದರಿಕೆ ಹಾಕಿದ್ದಾನೆ ಎಂದು ದೂರುದಾರ ಶಿವಕುಮಾರ್‌ ಹೇಳಿದ್ದಾರೆ.

Continue Reading

ಕರ್ನಾಟಕ

Suraj Revanna Case:  ಸಲಿಂಗ ಕಾಮ ಆರೋಪ; ಸಂತ್ರಸ್ತನ ವೈದ್ಯಕೀಯ ಪರೀಕ್ಷೆ ಬಳಿಕ ಇಂದೇ ಅರೆಸ್ಟ್‌ ಆಗ್ತರಾ ಸೂರಜ್‌ ರೇವಣ್ಣ?

Suraj Revanna Case: ವಿಧಾನ ಪರಿಷತ್ ಸದಸ್ಯ  ಸೂರಜ್‌ ರೇವಣ್ಣ ವಿರುದ್ಧ ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ ಆರೋಪಗಳು ಕೇಳಿ ಬಂದಿದೆ. ಸದ್ಯ ಸಂತ್ರಸ್ತನನ್ನು ಪೊಲೀಸರು ಬೆಂಗಳೂರಿಗೆ ಕರೆ ತಂದಿದ್ದು, ಇಂದು (ಜೂನ್‌ 23) ವೈದ್ಯಕೀಯ ಪರೀಕ್ಷೆ ನಡೆಯಲಿದೆ. ವೈದ್ಯಕೀಯ ಪರೀಕ್ಷೆಯ ಪ್ರಾಥಮಿಕ ವರದಿ ವೈದ್ಯಕೀಯ ಪರೀಕ್ಷೆಯ ವರದಿ ಆಧರಿಸಿ ಸೂರಜ್‌ ಬಂಧನದ ಬಗ್ಗೆ ಪೊಲೀಸರು ತೀರ್ಮಾನಿಸಲಿದ್ದಾರೆ.

VISTARANEWS.COM


on

Suraj Revanna Case
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ ಹಗರಣದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಬಂಧನವಾಗಿ ವಿಚಾರಣೆ ನಡೆಯುತ್ತಿರುವ ನಡುವೆಯೇ ಎಚ್‌.ಡಿ.ರೇವಣ್ಣ ಕುಟುಂಬದ ಮತ್ತೊಬ್ಬರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಪ್ರಜ್ವಲ್‌ ಸಹೋದರ, ವಿಧಾನ ಪರಿಷತ್ ಸದಸ್ಯ  ಸೂರಜ್‌ ರೇವಣ್ಣ (Suraj Revanna Case) ವಿರುದ್ಧ ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ (Unnatural sexual abuse) ಆರೋಪಗಳು ಕೇಳಿ ಬಂದಿದೆ. ಸದ್ಯ ಸಂತ್ರಸ್ತನನ್ನು ಪೊಲೀಸರು ಬೆಂಗಳೂರಿಗೆ ಕರೆ ತಂದಿದ್ದು, ಇಂದು (ಜೂನ್‌ 23) ವೈದ್ಯಕೀಯ ಪರೀಕ್ಷೆ ನಡೆಯಲಿದೆ.

ತನ್ನ ಮೇಲೆ ಸೂರಜ್‌ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಆರೋಪಿಸಿರುವ ಸಂತ್ರಸ್ತನಿಗೆ ಬೆಂಗಳೂರಿನಲ್ಲಿ ವೈದ್ಯಕೀಯ ಪರೀಕ್ಷೆ ನಡೆಯಲಿದೆ. ಶನಿವಾರ ತಡರಾತ್ರಿ 2 ಗಂಟೆಗೆ ಹೊಳೆನರಸೀಪುರ ಪೊಲೀಸರು ಸಂತ್ರಸ್ತನನ್ನು ಹಾಸನದಿಂದ ಬೌರಿಂಗ್ ಆಸ್ಪತ್ರೆಗೆ ಕರೆ ತಂದಿದ್ದಾರೆ. ಸಂತ್ರಸ್ತನ ಮನವಿ ಮೇರೆಗೆ ಹಾಸನದ ಬದಲು ಬೆಂಗಳೂರಿನಲ್ಲಿ ವೈದ್ಯಕೀಯ ಪರೀಕ್ಷೆ ನಡೆಯಲಿದೆ.

ಸಂತ್ರಸ್ತ ಲೈಂಗಿಕ ಕ್ರಿಯೆ ನಡೆಸಲು ಸಮರ್ಥನಾಗಿದ್ದಾನ ಎನ್ನುವ ಬಗ್ಗೆ ವೈದ್ಯರು ಪರೀಕ್ಷೆ ಮಾಡಲಿದ್ದಾರೆ. ಬಿಪಿ, ಶುಗರ್, ಇಸಿಜಿ, ದೇಹದ ಮೇಲೆ ಕಚ್ಚಿರುವ ಕಲೆಗಳ ಬಗ್ಗೆ ಪರೀಕ್ಷೆ ನಡೆಯಲಿದೆ. ಬೆಳಿಗ್ಗೆ ಹಿರಿಯ ವೈದ್ಯರ ಸಮ್ಮುಖದಲ್ಲಿ ಪರೀಕ್ಷೆ ನಡೆಯಲಿದೆ.

ತೀವ್ರ ವಿಚಾರಣೆ

ಪ್ರಕರಣದ ಸಂಬಂಧ ಇತ್ತ ಹಾಸನದಲ್ಲಿ ಸೂರಜ್‌ ರೇವಣ್ಣ ಅವರನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳ ಪಡಿಸಿದರು. ಶನಿವಾರ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ಹಿನ್ನೆಲೆಯಲ್ಲಿ ತಡರಾತ್ರಿವರೆಗೂ ವಿಚಾರಣೆ ನಡೆಯಿತು. ಸಕಲೇಶಪುರ ಡಿವೈಎಸ್‌ಪಿ ಪ್ರಮೋದ್ ಕುಮಾರ್ ನೇತೃತ್ವದಲ್ಲಿ ವಿಚಾರಣೆ ನಡೆಸಲಾಗುತ್ತಿದೆ.

ಭಾನುವಾರ ಮುಂಜಾನೆ 4 ಗಂಟೆವರೆಗೂ ಸೂರಜ್‌ನನ್ನು ತನಿಖಾಧಿಕಾರಿಗಳು ವಿಚಾರಣೆಗೆ ಒಳಪಡಿಸಿದರು. ಬಳಿಕ ಹಾಸನ ನಗರದ ಸೆನ್ ಠಾಣೆಯಲ್ಲೇ ಸೂರಜ್‌ಗೆ ಮಲಗಲು ವ್ಯವಸ್ಥೆ ಮಾಡಲಾಯಿತು. ಇಂದು ಕೂಡ ವಿಚಾರಣೆ ಮುಂದುವರಿಯಲಿದೆ.

ಬಂಧನ ಸಾಧ್ಯತೆ

ಸೂರಜ್‌ ವಿರುದ್ಧ ಕೇಳಿ ಬಂದ ಅಸಹಜ ಲೈಂಗಿಕ ದೌರ್ಜನ್ಯ ಮತ್ತು ಸಂತ್ರಸ್ತನ ವಿರುದ್ಧ ಸೂರಜ್‌ ಆಪ್ತ ದಾಖಲಿಸಿದ ಬ್ಲ್ಯಾಕ್‌ಮೇಲ್‌ ಆರೋಪದ ಬಗ್ಗೆಯೂ ವಿಚಾರಣೆ ನಡೆಸಲಾಗುತ್ತಿದೆ. ಇನ್ನು ಸೂರಜ್ ವಿರುದ್ಧ ದೂರು ನೀಡಿರುವ ಸಂತ್ರಸ್ತನ ವೈದ್ಯಕೀಯ ಪರೀಕ್ಷೆಯ ಪ್ರಾಥಮಿಕ ವರದಿ ವರದಿ ಆಧರಿಸಿ ಸೂರಜ್‌ ಬಂಧನದ ಬಗ್ಗೆ ಪೊಲೀಸರು ತೀರ್ಮಾನಿಸಲಿದ್ದಾರೆ.

ಸೂರಜ್ ವಿರುದ್ಧ ಐಪಿಸಿ ಸೆಕ್ಷೆನ್ 377, 342, 506 ಅಡಿ ಕೇಸ್ ದಾಖಲಾಗಿದ್ದು, ಬಂಧನ ಸಾಧ್ಯತೆ ಹೆಚ್ಚಿದೆ ಎಂದು ಮೂಲಗಳು ತಿಳಿಸಿವೆ. ಸೂರಜ್ ಬಂಧನವಾದರೆ ವೈದ್ಯಕೀಯ ಪರೀಕ್ಷೆ ಬಳಿಕ ನ್ಯಾಯಾಧೀಶರ ಎದುರು ಪೊಲೀಸರು ಹಾಜರುಪಡಿಸಲಿದ್ದಾರೆ.

ಇದನ್ನೂ ಓದಿ: Suraj Revanna Case: ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ ಎಂದ ಸೂರಜ್‌ ರೇವಣ್ಣ

ಏನಿದು ಪ್ರಕರಣ?

ಲೋಕಸಭಾ ಚುನಾವಣಾ ವೇಳೆ ಅರಕಲಗೂಡು ತಾಲೂಕಿನ ಜೆಡಿಎಸ್ ಕಾರ್ಯಕರ್ತನಾಗಿದ್ದ ಸಂತ್ರಸ್ತನನ್ನು ಪರಿಚಯ ಮಾಡಿಕೊಂಡು ಎಂಎಲ್‌ಸಿ ಸೂರಜ್‌ ಫೋನ್‌ ನಂಬರ್‌ ಪಡೆದುಕೊಂಡಿದ್ದರು. ಬಳಿಕ ಮನೆಗೆ ಕರೆಸಿ ದೌರ್ಜನ್ಯ ನಡೆಸಿದ್ದಾಗಿ ಸಂತ್ರಸ್ತ ಹೇಳಿಕೆ ನೀಡಿದ್ದು, ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ.

Continue Reading
Advertisement
Actor Darshan Judicial Custody Jailer Gave UTP Number
ಸ್ಯಾಂಡಲ್ ವುಡ್8 mins ago

Actor Darshan: ಪರಪ್ಪನ ಅಗ್ರಹಾರದಲ್ಲಿ ʻದಾಸʼ; ʻಡಿʼಬಾಸ್‌ ಕೈದಿ ನಂಬರ್‌ 6106!

viral video
Latest9 mins ago

Viral Video: ತಲೆ ಮೇಲೆ ಎರಡು ಗ್ಯಾಸ್ ಸಿಲಿಂಡರ್, ಅದರ ಮೇಲೆ ಬಿಂದಿಗೆ! ಅಬ್ಬಾ ಎಂಥ ಅದ್ಭುತ!

Gully cricket vibes
ಕ್ರೀಡೆ14 mins ago

Gully Cricket Vibes: ಗಲ್ಲಿ ಕ್ರಿಕೆಟ್​ನಂತೆ ಚೆಂಡು ಹುಡುಕಾಡಿದ ವಿರಾಟ್​ ಕೊಹ್ಲಿ; ವಿಡಿಯೊ ವೈರಲ್​

Share Market Scam
ಕ್ರೈಂ24 mins ago

Share Market Scam: ಮುಖೇಶ್ ಅಂಬಾನಿ ಡೀಪ್ ಫೇಕ್‌! 7 ಲಕ್ಷ ರೂ. ಕಳೆದುಕೊಂಡ ವೈದ್ಯೆ

Tharun Sudhir sonal monteiro will get marriage
ಸಿನಿಮಾ25 mins ago

Tharun Sudhir: ಸೋನಲ್ ಜತೆ `ತರುಣ್ ಸುಧೀರ್‌’ಗೆ ಕೂಡಿಬಂತು ಕಂಕಣಭಾಗ್ಯ?

Rushikonda Palace Issue
ದೇಶ39 mins ago

Rushikonda Palace: 500 ಕೋಟಿಯ ಋಷಿಕೊಂಡ ಅರಮನೆ; 12 ಬೆಡ್‌ರೂಮ್‌, ವಾಶ್‌ರೂಮ್‌ ಒಂದು ಮನೆಯಷ್ಟು!

Sumit Nagal
ಕ್ರೀಡೆ45 mins ago

Paris Olympics 2024: ಅಧಿಕೃತವಾಗಿ ಪ್ಯಾರಿಸ್​ ಒಲಿಂಪಿಕ್ಸ್ ಟಿಕೆಟ್​ ಪಡೆದ ಸುಮಿತ್‌ ನಗಾಲ್‌

Suraj Revanna Case
ಕರ್ನಾಟಕ1 hour ago

Suraj Revanna Case: ಅಸಹಜ ಲೈಂಗಿಕ ದೌರ್ಜನ್ಯ ಕೇಸ್‌; ಎಂಎಲ್‌ಸಿ ಸೂರಜ್‌ ರೇವಣ್ಣ ಅರೆಸ್ಟ್‌

Doodle V3 E-Cycle
ಆಟೋಮೊಬೈಲ್1 hour ago

Doodle V3 E-Cycle: ‘ಕಲ್ಕಿ 2898 ಎಡಿ’ನಿಂದ ಪ್ರೇರಿತವಾದ ಇ-ಸೈಕಲ್ ಮಾರುಕಟ್ಟೆಗೆ

Suraj Revanna Case
ಕರ್ನಾಟಕ2 hours ago

Suraj Revanna Case:  ಸಲಿಂಗ ಕಾಮ ಆರೋಪ; ಸಂತ್ರಸ್ತನ ವೈದ್ಯಕೀಯ ಪರೀಕ್ಷೆ ಬಳಿಕ ಇಂದೇ ಅರೆಸ್ಟ್‌ ಆಗ್ತರಾ ಸೂರಜ್‌ ರೇವಣ್ಣ?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ2 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ3 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು6 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು6 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ7 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ7 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ7 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 week ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

ಟ್ರೆಂಡಿಂಗ್‌