ನವದೆಹಲಿ: (ಗಾಜಿಯಾಬಾದ್): ಇಲ್ಲಿನ ಗುರುಗ್ರಾಮದ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಲೆಗೈದು(Murder Case) ತಾನೂ ಕೂಡ ಮೆಟ್ರೋ ನಿಲ್ದಾಣದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ. ಗೌರವ್ ಶರ್ಮಾ ಮೃತ ವ್ಯಕ್ತಿ. ಇಂದು ಬೆಳಗ್ಗೆ ಉತ್ತರ ಪ್ರದೇಶದ ಗಾಜಿಯಾಬಾದ್‌ನ ಮೆಟ್ರೋ ನಿಲ್ದಾಣದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಗೌರವ್ ಶರ್ಮಾ ಮತ್ತು ಅವರ ಪತ್ನಿ ಲಕ್ಷ್ಮಿ ರಾವತ್ ಗುರುಗ್ರಾಮ್‌ನ ಡಿಎಲ್‌ಎಫ್ ಹಂತ 3 ಪ್ರದೇಶದ ಎಸ್ ಬ್ಲಾಕ್‌ನಲ್ಲಿ ಬಾಡಿಗೆ ಅಪಾರ್ಟ್ಮೆಂಟ್‌ನಲ್ಲಿ ವಾಸಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಗೌರವ್ ಶರ್ಮಾ ಉತ್ತರ ಪ್ರದೇಶದ ಆಗ್ರಾ ಮೂಲದವರಾಗಿದ್ದರು. ಸೋಮವಾರ ಗುರುಗ್ರಾಮದಲ್ಲಿರುವ ಬಾಡಿಗೆ ಮನೆಯಲ್ಲಿ ಪತ್ನಿ ಲಕ್ಷ್ಮಿ ರಾವತ್ ಅವರನ್ನು ಕೊಂದ ಬಳಿಕ ಗೌರವ್ ಪರಾರಿಯಾಗಿದ್ದ. ಇಬ್ಬರೂ ಆರು ತಿಂಗಳ ಹಿಂದೆ ಪ್ರಸ್ತುತ ಮನೆಗೆ ಸ್ಥಳಾಂತರಗೊಂಡಿದ್ದರು ಎಂದು ಪೊಲೀಸರು ತಿಳಿಸಿರುವುದಾಗಿ ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.
ಗೌರವ್ ಶರ್ಮಾ ಆತ್ಮಹತ್ಯೆ ಮಾಡಿಕೊಂಡ ದೃಶ್ಯ ಮೆಟ್ರೋ ನಿಲ್ದಾಣದ ಪ್ಲಾಟ್‌ಫಾರ್ಮ್ ಸಂಖ್ಯೆ 1 ರ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹಳಿ ದಾಟಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪತ್ನಿಯ ಕೊಲೆಗೆ ಕಾರಣವೇನು ಎಂಬುದು ಸ್ಪಷ್ಟವಾಗಿಲ್ಲ. ಕೊಲೆ ನಡೆದ ಸ್ಥಳದಲ್ಲಿ ಒಂದು ವರ್ಷದ ಮಗು ತಾಯಿಯ ಶವದ ಪಕ್ಕದಲ್ಲಿ ಅಳುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ತನ್ನ ಹೆಂಡತಿಯ ಕುತ್ತಿಗೆಯನ್ನು ಹರಿತವಾದ ಆಯುಧದಿಂದ ಸೀಳಿ ಬಳಿಕ ತಲೆಗೆ ಇಟ್ಟಿಗೆಯಿಂದ ಹೊಡೆದಿದ್ದ. ಮಗುವಿಗೂ ಕೂಡ ಇಟ್ಟಿಗೆಯಿಂದ ಹೊಡೆದಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪೊಲೀಸರು ಆತನನ್ನು ಬಂಧಿಸಲು ಕಾರ್ಯಾಚರಣೆ ಆರಂಭಿಸಿದ್ದರು ಆದರೆ ಗುರುಗ್ರಾಮ್‌ನಿಂದ 30 ಕಿಮೀ ದೂರದಲ್ಲಿರುವ ಉತ್ತರ ಪ್ರದೇಶದ ಕೌಶಂಬಿಯಲ್ಲಿ ಆತ ಶವವಾಗಿ ಪತ್ತೆಯಾಗಿದ್ದಾನೆ. “ಆತ್ಮಹತ್ಯೆ ಮಾಡಿಕೊಂಡ ಗೌರವ್ ಶರ್ಮಾ ತನ್ನ ಪತ್ನಿ ಲಕ್ಷ್ಮಿಯನ್ನು ಕೊಂದಿದ್ದಾನೆ ಎಂಬುದಕ್ಕೆ ಎಲ್ಲ ಸಾಂದರ್ಭಿಕ ಪುರಾವೆಗಳು ಸಿಕ್ಕಿವೆ. ನಾವು ಅವರ ವಿರುದ್ಧ ಕೊಲೆಯ ಎಫ್‌ಐಆರ್ ದಾಖಲಿಸಿದ್ದೇವೆ” ಎಂದು ಡಿಎಲ್‌ಎಫ್ ಹಂತ -3 ಪೊಲೀಸ್ ಠಾಣೆ ಎಸ್‌ಎಚ್‌ಒ ದಿನಕರ್ ಪಿಟಿಐಗೆ ತಿಳಿಸಿದ್ದಾರೆ.
ಇದನ್ನೂ ಓದಿ Murder Case: ಕತ್ತು ಸೀಳಿ ಬಾವಿಗೆ ಎಸೆದು ವ್ಯಕ್ತಿಯ ಹತ್ಯೆ
Murder Case : ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ, 4 ದಿನದ ಬಳಿಕ ಶವ ಪತ್ತೆ
ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಕೊಲೆ (Murder Case) ಮಾಡಲಾಗಿದೆ. ಕಲಬುರಗಿ ಜಿಲ್ಲೆ (Kalaburagi News) ಕಮಲಾಪುರ ತಾಲೂಕಿನ ಓಕಳಿ ಗ್ರಾಮ ರಸ್ತೆಯಲ್ಲಿ ನಡೆದ ಘಟನೆಯಲ್ಲಿ ಕೊಲೆಯಾದ ವ್ಯಕ್ತಿಯನ್ನು ಅಂಬಾರಾಯ್ ಪಟ್ಟೇದಾರ್ (28) ಎಂದು ಗುರುತಿಸಲಾಗಿದೆ.
ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಕೂಡಿ ದರ್ಗಾ ಗ್ರಾಮದ ನಿವಾಸಿಯಾಗಿರುವ ಅಂಬಾರಾಯ್ ಪಟ್ಟೇದಾರ್ (28) ಡಿಸೆಂಬರ್ 29ರಂದು ನಾಪತ್ತೆಯಾಗಿದ್ದ. ಇದೀಗ ನಾಲ್ಕು ದಿನಗಳ ಬಳಿಕ ಆತ ಶವವಾಗಿ ಪತ್ತೆಯಾಗಿದ್ದಾನೆ.
ಅಂಬಾರಾಯ್ ಪಟ್ಟೇದಾರ್ ತನ್ನ ಪತ್ನಿಯ ತವರೂರು ಬೆಳಕೋಟಾ ಗ್ರಾಮದಲ್ಲಿ ವಾಸವಾಗಿದ್ದ. ಇದೀಗ ಆತನನ್ನು ಯಾರೋ ಅಪಹರಿಸಿ ಕೊಲೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.