Site icon Vistara News

FSL Report : ಸರ್ಕಾರಿ FSL ವರದಿ ಬಂದಿಲ್ಲ, ಖಾಸಗಿ ವರದಿ ಒಪ್ಪಲ್ಲ; ಬಿಜೆಪಿಗೆ ಪರಮೇಶ್ವರ್‌ ತಿರುಗೇಟು

FSL REPORT BJP G Parameshwar

ಬೆಂಗಳೂರು: ರಾಜ್ಯಸಭಾ ಚುನಾವಣೆಯ (Rajya sabha Election) ಫಲಿತಾಂಶ ಪ್ರಕಟವಾದ ಫೆ. 27ರಂದು ವಿಜಯೋತ್ಸವದ ವೇಳೆ ವಿಧಾನಸೌಧದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಲಾಗಿದೆ ಎಂಬ ವಿದ್ಯಮಾನಕ್ಕೆ ಸಂಬಂಧಿಸಿ ಬಿಜೆಪಿ ಬಿಡುಗಡೆ ಮಾಡಿದ ಖಾಸಗಿ ಎಫ್‌ಎಸ್‌ಎಲ್‌ ವರದಿಯ (FSL Report) ಬಗ್ಗೆ ರಾಜ್ಯ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ.

ಕಾಂಗ್ರೆಸ್‌ನ ವಿಜಯೀ ಅಭ್ಯರ್ಥಿ ನಾಸಿರ್‌ ಹುಸೇನ್‌ (Nasir Husein) ಅವರ ವಿಜಯೋತ್ಸವದ ಸಂದರ್ಭದಲ್ಲಿ ವಿಧಾನಸೌಧದ (Vidhana Soudha) ಒಳಗೇ ಪಾಕಿಸ್ತಾನ್‌ ಜಿಂದಾಬಾದ್‌ (Pakistan Zindabad) ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ (BJP Karnataka) ಖಾಸಗಿ ಎಫ್‌ಎಸ್‌ಎಲ್‌ ವರದಿಯನ್ನು (FSL Report) ಬಿಡುಗಡೆ ಮಾಡಿದೆ. ಈ ವರದಿಯು ಪಾಕಿಸ್ತಾನ್‌ ಜಿಂದಾಬಾದ್‌ ಎಂದು ಘೋಷಣೆ ಮಾಡಿದ್ದನ್ನು ಸಮರ್ಥಿಸುತ್ತಿದೆ ಎಂದು ಬಿಜೆಪಿ ಟ್ವೀಟ್‌ನಲ್ಲಿ ಹೇಳಿದೆ.

ಖಾಸಗಿ ವಿಧಿ ವಿಜ್ಞಾನ ತಜ್ಞರಾದ ಫಣೀಂದ್ರ ಬಿ.ಎನ್‌ ಅವರು ನೀಡಿರುವ ಎಫ್‌ಎಸ್‌ಎಲ್‌ ವರದಿಯನ್ನು ಟ್ವೀಟ್‌ ಮಾಡಿರುವ ಬಿಜೆಪಿ, ಇದರಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿರುವುದನ್ನು ದೃಢಪಡಿಸಲಾಗಿದೆ ಎನ್ನುವುದನ್ನು ಉಲ್ಲೇಖಿಸಿದೆ. ಇದನ್ನು ಉಲ್ಲೇಖಿಸಿ ಟ್ವೀಟ್‌ ಮಾಡಿರುವ ಕಮಲಪಕ್ಷ ಕಾಂಗ್ರೆಸ್‌ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ಇದನ್ನೂ ಓದಿ : Blast in Bengaluru : ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಇಟ್ಟ ಟೋಪಿವಾಲಾ 50 ಗಂಟೆ ಕಳೆದರೂ ಸಿಕ್ಕಿಲ್ಲ!

ಆಕ್ಷೇಪ ವ್ಯಕ್ತಪಡಿಸಿದ ಗೃಹ ಸಚಿವ ಜಿ. ಪರಮೇಶ್ವರ್‌

ರಾಜ್ಯ ಸರಕಾರ ವಿವಾದಿತ ವಿಡಿಯೊದ ಎಫ್‌ಎಸ್‌ಎಲ್‌ ವಿಶ್ಲೇಷಣೆಗೆ ಕಳುಹಿಸಿಕೊಟ್ಟಿದ್ದು, ಅದರ ವರದಿ ಇನ್ಎನೂ ಬಂದಿಲ್ಲ. ಈಗ ಬಿಜೆಪಿ ಬಿಡುಗಡೆ ಮಾಡಿರುವ ಖಾಸಗಿ ವರದಿ ಅಧಿಕೃತವಲ್ಲ ಎಂದು ಸೋಮವಾರ ಗೃಹ ಸಚಿವ ಜಿ. ಪರಮೇಶ್ವರ್‌ ಹೇಳಿದರು.

ʻʻನಾವು ಖಾಸಗಿ ಸಂಸ್ಥೆ ವರದಿ ಗಣನೆಗೆ ತೆಗೆದುಕೊಳ್ಳಲ್ಲ. ಸರ್ಕಾರದ ಎಫ್‌ಎಸ್‌ಎಲ್‌, ಗೃಹ ಇಲಾಖೆಯ ಫಾರೆನ್ಸಿಕ್ ವರದಿ ಆಧಾರದ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ. ಪಾಸಿಟಿವ್ ಆಗಿ, ಕೂಗಿರೋದು ದೃಢ ಅಂದ್ರೆ ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆʼʼ ಎಂದು ಜಿ. ಪರಮೇಶ್ವರ್‌ ಹೇಳಿದ್ದಾರೆ.

ಸರ್ಕಾರ ವರದಿಯನ್ನು ಮುಚ್ಚಿಡುತ್ತಿದೆ ಎನ್ನುವ ಬಿಜೆಪಿ ಆರೋಪ, ಘಟನೆಯ ಮರುದಿನವೇ ಪ್ರಿಯಾಂಕ್ ಖರ್ಗೆ ವರದಿ ಬಂದಿದೆ ಎಂದು ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅವರು ಯಾವ ಅಧಾರದ ಮೇಲೆ ಹೇಳಿದ್ದಾರೆ ಎಂದು ಗೊತ್ತಿಲ್ಲ. ಇದು ನಮ್ಮ‌ಇಲಾಖೆಗೆ ಸಂಬಂಧಿಸಿದ್ದು. ನಮ್ಮ ವರದಿ ಬಂದ ಮೇಲೆ ಹೇಳ್ತೀನಿ ಎಂದು ಹೇಳಿದರು.

ಎಫ್‌ಎಸ್‌ಎಲ್‌ ವರದಿ ಬಿಡುಗಡೆ ಮಾಡಲು ಖಾಸಗಿಯವರು ಯಾರು? ಅವರಿಗೆ NOC ಯಾರು ಕೊಟ್ಟಿದ್ದಾರೆ. ಅವರಿಗೆ ಈ ರೀತಿ ವರದಿ ಕೊಡಲು ಅನುಮತಿ ಇದೆಯಾ.? ಎಲ್ಲವನ್ನೂ ಚೆಕ್ ಮಾಡ್ತೀನಿ ಎಂದು ಹೇಳಿದರು.

ಇದನ್ನೂ ಓದಿ : ವಿಧಾನಸೌಧದಲ್ಲಿ ‘ಪಾಕಿಸ್ತಾನ್‌ ಜಿಂದಾಬಾದ್‌’ ಘೋಷಣೆ ನಿಜ; ಎಫ್‌ಎಸ್‌ಎಲ್‌ ತಜ್ಞ ಫಣೀಂದ್ರ ಹೇಳಿಕೆ

ಬಿಜೆಪಿ ಟ್ವೀಟ್‌ನಲ್ಲಿ ಹೇಳಿದ್ದೇನು?

ಸತ್ಯವನ್ನೇ ತಿರುಚಿ ಸುಳ್ಳು ಮಾಡಿ ಪ್ರಚಾರ ಮಾಡಿದ ಕಾಂಗ್ರೆಸ್ಸಿಗರೇ ಸುಳ್ಳು ಸುದ್ದಿಗಳ ಸೃಷ್ಟಿಕರ್ತರು ಎಂಬುದನ್ನು ವೈಜ್ಞಾನಿಕ ವರದಿ ಬಹಿರಂಗಪಡಿಸಿದೆ. ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದನ್ನು “ನಾಸೀರ್ ಸಾಬ್ ಜಿಂದಾಬಾದ್” ಎಂದು ತಿರುಚಿ ಕನ್ನಡಿಗರಿಗೆ ಟೋಪಿ ಹಾಕಲು ಹೊರಟ ಹುನ್ನಾರ ಈಗ FSL ವರದಿಯಲ್ಲಿ ಬಟಾ ಬಯಲಾಗಿದೆ ಎಂದು ಬಿಜೆಪಿ ತನ್ನ ಟ್ವೀಟ್‌ನಲ್ಲಿ ಹೇಳಿದೆ.

ರಾಷ್ಟ್ರ ವಿರೋಧಿ ಧೋರಣೆಯ ಕರ್ನಾಟಕ ಕಾಂಗ್ರೆಸ್‌ ಹಾಗೂ ಸುಳ್ಳು ಸುದ್ದಿ ಕಾರ್ಖಾನೆಯ ಮುಖ್ಯಸ್ಥರಾದ ಪ್ರಿಯಾಂಕ್ ಖರ್ಗೆ ಅವರು ಈಗಲಾದರೂ ತಮ್ಮ ದೇಶದ್ರೋಹದ ಕೃತ್ಯವನ್ನು ಒಪ್ಪಿಕೊಂಡು ವಿಧಾನಸೌಧದ ಎದುರು ಸಾಷ್ಟಾಂಗ ನಮಸ್ಕಾರ ಮಾಡಿ ಕನ್ನಡಿಗರ ಕ್ಷಮೆ ಕೋರಬೇಕು ಎಂದು ಬಿಜೆಪಿ ಟ್ವೀಟ್‌ ಮಾಡಿ ಆಕ್ರೋಶ ವ್ಯಕ್ತಪಡಿಸಿದೆ.

ಫಣೀಂದ್ರ ಅವರು ನೀಡಿದ ವರದಿಯಲ್ಲಿ ಏನಿದೆ?

ನಿರ್ದಿಷ್ಟ ವಿಡಿಯೊದಲ್ಲಿ ಹೇಳಿದ್ದು ನಾಸಿರ್‌ ಖಾನ್‌ ಜಿಂದಾಬಾದ್‌ ಎಂದು ಹೇಳಿದ್ದೇ ಅಥವಾ ಪಾಕಿಸ್ತಾನ್‌ ಜಿಂದಾಬಾದ್‌ ಎಂದು ಹೇಳಿದ್ದೇ ಎಂಬ ಸೀಮಿತ ವಿಚಾರದಲ್ಲಿ ಪರಿಶೀಲಿಸಿದಾಗ ಬಹುಪಾಲು ಇದು ಪಾಕಿಸ್ತಾನ್‌ ಜಿಂದಾಬಾದ್‌ ಎಂದೇ ಹೇಳಿದಂತಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

Exit mobile version