Prince Tewatia Killed: ತಿಹಾರ ಜೈಲಲ್ಲಿ ಗ್ಯಾಂಗ್‌ವಾರ್; ಲಾರೆನ್ಸ್‌ ಬಿಷ್ಣೋಯಿ ಆಪ್ತ ಪ್ರಿನ್ಸ್‌ ತೆವಾಟಿಯಾ ಹತ್ಯೆ - Vistara News

ಕ್ರೈಂ

Prince Tewatia Killed: ತಿಹಾರ ಜೈಲಲ್ಲಿ ಗ್ಯಾಂಗ್‌ವಾರ್; ಲಾರೆನ್ಸ್‌ ಬಿಷ್ಣೋಯಿ ಆಪ್ತ ಪ್ರಿನ್ಸ್‌ ತೆವಾಟಿಯಾ ಹತ್ಯೆ

Prince Tewatia Killed: ಕೊಲೆ, ಕೊಲೆ ಯತ್ನ ಸೇರಿ 16 ಪ್ರಕರಣಗಳಲ್ಲಿ ಪ್ರಿನ್ಸ್‌ ತೆವಾಟಿಯಾ ಭಾಗಿಯಾಗಿದ್ದಾನೆ. ಹಾಗಾಗಿ, ಕಳೆದ ವರ್ಷ ಈತನನ್ನು ಬಂಧಿಸಿ ತಿಹಾರ ಜೈಲಿನಲ್ಲಿ ಇರಿಸಲಾಗಿತ್ತು. ಜೈಲಿನಲ್ಲಿಯೇ ವಿರೋಧಿ ಗುಂಪು ತೆವಾಟಿಯಾ ಮೇಲೆ ದಾಳಿ ನಡೆಸಿದೆ.

VISTARANEWS.COM


on

Gangster Lawrence Bishnoi's close associate Prince Tewatia killed in Delhi's Tihar Jail
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಸಮಾಜದ ಶಾಂತಿಗೆ ಭಂಗ ತರುವ ಕೆಲಸ ಮಾಡಿದವರು, ಕೊಲೆ ಸೇರಿ ಹಲವು ಅಪರಾಧ ಎಸಗಿದವರು ಪಾಠ ಕಲಿಯಲಿ, ಅವರು ಕೂಡ ಪರಿವರ್ತನೆ ಹೊಂದಲಿ, ಅವರಿಂದ ಸಮಾಜಕ್ಕೆ ಹೆಚ್ಚು ಹಾನಿಯಾಗದಿರಲಿ ಎಂದು ಅವರನ್ನು ಜೈಲಿಗೆ ಹಾಕಲಾಗುತ್ತದೆ. ಹೀಗೆ, ಅಪರಾಧ ಕೃತ್ಯಗಳಲ್ಲಿ ತೊಡಗಿ, ದೆಹಲಿಯ ತಿಹಾರ ಜೈಲು ಸೇರಿದವರು ಜೈಲಿನಲ್ಲಿಯೇ ಗ್ಯಾಂಗ್‌ವಾರ್‌ ನಡೆಸಿದ್ದಾರೆ. ಅಷ್ಟೇ ಅಲ್ಲ, ಗ್ಯಾಂಗ್‌ಸ್ಟರ್‌ ಲಾರೆನ್ಸ್‌ ಬಿಷ್ಣೋಯಿ ಆಪ್ತ ಪ್ರಿನ್ಸ್‌ ತೆವಾಟಿಯಾನನ್ನು (Prince Tewatia Killed) (30) ಹತ್ಯೆ ಮಾಡಿದ್ದಾರೆ.

ಶುಕ್ರವಾರ ಸಂಜೆ ತಿಹಾರ ಜೈಲಿನಲ್ಲಿ ಶುಕ್ರವಾರ ಸಂಜೆ ಕೈದಿಗಳ ಮಧ್ಯೆಯೇ ಗಲಾಟೆ ನಡೆದಿದೆ. ಇದೇ ವೇಳೆ ಪ್ರಿನ್ಸ್‌ ತೆವಾಟಿಯಾನನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಗ್ಯಾಂಗ್‌ಸ್ಟರ್‌ ಪ್ರಿನ್ಸ್‌ ತೆವಾಟಿಯಾನನ್ನು ಸೆಂಟ್ರಲ್‌ ಜೈಲಿನ ಮೂರನೇ ಸೆಲ್‌ನಲ್ಲಿ ಇರಿಸಲಾಗಿದೆ. ಇದೇ ಸೆಲ್‌ನಲ್ಲಿ ಗ್ಯಾಂಗ್‌ವಾರ್‌ ನಡೆದಿದ್ದು, ತೆವಾಟಿಯಾಗೆ ಸಹ ಕೈದಿಗಳು ಚಾಕು ಇರಿದಿದ್ದಾರೆ. ಗಲಾಟೆಯಲ್ಲಿ ನಾಲ್ವರು ಕೈದಿಗಳಿಗೆ ಗಾಯಗಳಾಗಿವೆ. ಇನ್ನು, ಗಂಭೀರವಾಗಿ ಗಾಯಗೊಂಡಿದ್ದ ತೆವಾಟಿಯಾನನ್ನು ದೀನ ದಯಾಳ್‌ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅಷ್ಟೊತ್ತಿಗಾಗಲೇ ತೆವಾಟಿಯಾ ಮೃತಪಟ್ಟಿದ್ದಾನೆ ಎಂದು ಘೋಷಿಸಿದರು.

ಜೈಲಿನಲ್ಲಿ ಏನೇನಾಯ್ತು?

ಶುಕ್ರವಾರ ಸಂಜೆ 5.30ರ ಸುಮಾರಿಗೆ ಮತ್ತೊಂದು ಗ್ಯಾಂಗ್‌ನ ಅತ್ತಾತುರ್‌ ರೆಹಮಾನ್‌ ಹಾಗೂ ತೆವಾಟಿಯಾ ಮಧ್ಯೆ ಗಲಾಟೆ ನಡೆದಿದೆ. ಇದೇ ವೇಳೆ ರೆಹಮಾನ್‌ ಗ್ಯಾಂಗ್‌ನ ಸದಸ್ಯರು ತೆವಾಟಿಯಾ ಮೇಲೆ ಎರಗಿದ್ದಾರೆ. ಇದೇ ವೇಳೆ ರೆಹಮಾನ್‌ ಗ್ಯಾಂಗ್‌ನ ಮೂವರು ತೆವಾಟಿಯಾಗೆ ಚಾಕು ಇರಿದಿದ್ದಾರೆ. ಗಲಾಟೆ ಕುರಿತು ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಜೈಲಧಿಕಾರಿಗಳು ತಿಳಿಸಿದ್ದಾರೆ.

ಯಾರಿದು ತೆವಾಟಿಯಾ?

ಪಂಜಾಬಿ ರಾಜಕಾರಣಿ, ಗಾಯಕ ಸಿಧು ಮೂಸೆವಾಲಾ ಅವರನ್ನು ಹತ್ಯೆಗೈದ ಪ್ರಕರಣದ ರೂವಾರಿ ಜೈಲು ಸೇರಿರುವ ಗ್ಯಾಂಗ್‌ಸ್ಟರ್‌ ಲಾರೆನ್ಸ್‌ ಬಿಷ್ಣೋಯಿಯ ಆಪ್ತನಾಗಿರುವ ಪ್ರಿನ್ಸ್‌ ತೆವಾಟಿಯಾ ವಿರುದ್ಧ 16 ಕ್ರಿಮಿನಲ್‌ ಕೇಸ್‌ಗಳಿವೆ. ಕೊಲೆ, ಕೊಲೆ ಯತ್ನದ ಆರೋಪಗಳಿವೆ. 2022ರ ಡಿಸೆಂಬರ್‌ನಲ್ಲಿ ದೆಹಲಿ ಪೊಲೀಸ್‌ ಕ್ರೈಂ ಬ್ರ್ಯಾಂಚ್‌ ವಿಭಾಗದ ಸಿಬ್ಬಂದಿಯು ಈತನನ್ನು ಬಂಧಿಸಿ, ತಿಹಾರ ಜೈಲಿನಲ್ಲಿ ಇರಿಸಿದ್ದಾರೆ.

Sanjay Raut: ಎಕೆ 47 ರೈಫಲ್​​ನಿಂದ ಕೊಲ್ಲುತ್ತೇವೆ; ಶಿವಸೇನೆ ನಾಯಕ ಸಂಜಯ್​ ರಾವತ್​ಗೆ ಬಿಷ್ಣೋಯಿ ಗ್ಯಾಂಗ್​ನಿಂದ ಬೆದರಿಕೆ

ಲಾರೆನ್ಸ್ ಬಿಷ್ಣೋಯಿ ಮತ್ತು ಮೂಸೆವಾಲಾ ನಡುವೆ ಹಗೆತನವಿತ್ತು. ಬ್ರಾರ್ ಮತ್ತು ಬಿಷ್ಣೋಯಿ ಸಂಚು ರೂಪಿಸಿ ಮೂಸೆವಾಲಾರನ್ನು ಕೊಂದಿದ್ದಾರೆ. ಕಳೆದ ವರ್ಷ ಆಗಸ್ಟ್ 7ರಂದು ಅಕಾಲಿ ದಳದ ಯುವ ನಾಯಕ ವಿಕ್ರಮಜಿತ್ ಸಿಂಗ್ ಅಲಿಯಾಸ್ ವಿಕ್ಕಿ ಮಿದ್ದುಖೇರಾ ಹತ್ಯೆಯಲ್ಲಿ ಮೂಸೆವಾಲಾ ಭಾಗಿಯಾಗಿದ್ದರು. ಇದು ಬಿಷ್ಣೋಯಿ ಪ್ರತೀಕಾರಕ್ಕೆ ಕಾರಣವಾಗಿದೆ. ಪರಾರಿಯಾಗಿರುವ ಬ್ರಾರ್, ಮೂಸೆವಾಲಾ ಹತ್ಯೆಯ ಹೊಣೆ ಹೊತ್ತುಕೊಂಡಿದ್ದಾನೆ. ಯುವ ಅಕಾಲಿ ನಾಯಕ ವಿಕ್ಕಿ ಮಿದ್ದುಖೇರಾ ಹತ್ಯೆಗೆ ಪ್ರತೀಕಾರವಾಗಿ ಈ ಕೊಲೆ ನಡೆದಿದೆ. ಇದರ ಮಾಸ್ಟರ್‌ ಮೈಂಡ್‌ ಬಿಷ್ಣೋಯಿ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Hasan Pen Drive Case: ಎಲ್ಲೂ ಕಾಣದ ಪ್ರಜ್ವಲ್‌, ಇಂದು ಎಚ್‌ಡಿ ರೇವಣ್ಣ ಹೈಕೋರ್ಟ್‌ ಮೊರೆ

Hasan Pen Drive Case: ಅಶ್ಲೀಲ ವಿಡಿಯೋ ‌ಪೆನ್‌ಡ್ರೈವ್ ಸೋಶಿಯಲ್‌ ಮೀಡಿಯಾ ಮೂಲಕ ವೈರಲ್ ಆಗುತ್ತಿರುವ ಹಿನ್ನೆಲೆಯಲ್ಲಿ ಇದನ್ನು ತಡೆಯಲು ಅಗತ್ಯ ಕ್ರಮಗಳನ್ನು ಪೊಲೀಸರು ಕೈಗೊಳ್ಳುತ್ತಿದ್ದಾರೆ. ಕೆಲ ಪೆನ್‌ ಡ್ರೈವ್‌ಗಳನ್ನು ಹೊಳೆನರಸೀಪುರ ಪೊಲೀಸರು ವಶಕ್ಕೆ ‌ಪಡೆದಿದ್ದಾರೆ. ಪೆನ್‌ಡ್ರೈವ್‌ಗಳನ್ನು ಎಸ್‌ಐಟಿ‌ ತಂಡಕ್ಕೆ‌ ಹೊಳೆನರಸೀಪುರ ಪೊಲೀಸರು ಹಸ್ತಾಂತರ ಮಾಡಲಿದ್ದಾರೆ.

VISTARANEWS.COM


on

hd revanna prajwal revanna
Koo

ಹಾಸನ: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS leader) ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ (Hasan Pen Drive Case) ಇನ್ನೊಬ್ಬ ಆರೋಪಿಯಾಗಿ ಎಫ್‌ಐಆರ್‌ನಲ್ಲಿ ದಾಖಲಾಗಿರುವ ಜೆಡಿಎಸ್‌ ಮುಖಂಡ ಹೆಚ್. ಡಿ ರೇವಣ್ಣ (HD Revanna) ಅವರು ಇಂದು ಹೈಕೋರ್ಟ್ (High Court) ಮೊರೆ ಹೋಗುವ ಸಾಧ್ಯತೆ ಇದೆ. ಹಗರಣದಲ್ಲಿ ದಾಖಲಾಗಿರುವ ಎಫ್‌ಐಆರ್ ಕೂಡ ನೂತನವಾಗಿ ರಚನೆಯಾಗಿರುವ ಎಸ್‌ಐಟಿಗೆ ವರ್ಗಾವಣೆಯಾಗುವ ಸಾಧ್ಯತೆ ಇದೆ.

ಹೊಳೆನರಸೀಪುರ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿ.ಕೆ ಸಿಂಗ್‌ ನೇತೃತ್ವದಲ್ಲಿ ನಿನ್ನೆ ಎಸ್‌ಐಟಿ ರಚನೆಯ ಬಗ್ಗೆ ರಾಜ್ಯ ಸರ್ಕಾರ ಅಧಿಕೃತ ಅದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಎಸ್‌ಐಟಿಗೆ ಎಫ್‌ಐಆರ್ ವರ್ಗಾವಣೆ ಸಾಧ್ಯತೆ ಇದೆ. ಹೆಚ್.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಇಬ್ಬರ ಮೇಲೂ ಎಫ್‌ಐಆರ್ ದಾಖಲಿಸಲಾಗಿದೆ.

ಮನೆಕೆಲಸದಾಕೆಯೇ ನೀಡಿರುವ ದೂರು ಇದಾಗಿದೆ. ಸಂಸದ ಪ್ರಜ್ವಲ್‌ ರೇವಣ್ಣ ಅವರು ದೇಶ ತೊರೆದು ಜರ್ಮನಿಗೆ ಹೋಗಿದ್ದಾರೆ ಎನ್ನಲಾಗಿದೆ. ಹೆಚ್. ಡಿ ರೇವಣ್ಣ ಇಂದು ಹೈಕೋರ್ಟ್ ಮೊರೆ ಹೋಗುವ ಸಾಧ್ಯತೆ ಇದೆ. ಲೈಂಗಿಕ ಕಿರುಕುಳ ಪ್ರಕರಣ ಗಂಭೀರ ಸ್ವರೂಪದ್ದಾದ್ದರಿಂದ, ಎಫ್‌ಐಆರ್‌ಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಜೊತೆಗೆ ಸಂಭಾವ್ಯ ಬಂಧನ ತಪ್ಪಿಸಲು ನಿರೀಕ್ಷಣಾ ಜಾಮೀನಿಗೂ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.

ಅಶ್ಲೀಲ ವಿಡಿಯೋ ‌ಪೆನ್‌ಡ್ರೈವ್ ಸೋಶಿಯಲ್‌ ಮೀಡಿಯಾ ಮೂಲಕ ವೈರಲ್ ಆಗುತ್ತಿರುವ ಹಿನ್ನೆಲೆಯಲ್ಲಿ ಇದನ್ನು ತಡೆಯಲು ಅಗತ್ಯ ಕ್ರಮಗಳನ್ನು ಪೊಲೀಸರು ಕೈಗೊಳ್ಳುತ್ತಿದ್ದಾರೆ. ಕೆಲ ಪೆನ್‌ ಡ್ರೈವ್‌ಗಳನ್ನು ಹೊಳೆನರಸೀಪುರ ಪೊಲೀಸರು ವಶಕ್ಕೆ ‌ಪಡೆದಿದ್ದಾರೆ. ಪೆನ್‌ಡ್ರೈವ್‌ಗಳನ್ನು ಎಸ್‌ಐಟಿ‌ ತಂಡಕ್ಕೆ‌ ಹೊಳೆನರಸೀಪುರ ಪೊಲೀಸರು ಹಸ್ತಾಂತರ ಮಾಡಲಿದ್ದಾರೆ.

ಇನ್ನು ಎಫ್‌ಎಸ್‌ಎಲ್‌ ಪರಿಶೀಲನೆಗೆ ವಿಡಿಯೋ ರೆಕಾರ್ಡ್ ಮಾಡಿರುವ ಮಾಸ್ಟರ್ ಡಿವೈಸ್ ಬೇಕಿರುವ ಹಿನ್ನೆಲೆಯಲ್ಲಿ, ಪ್ರಜ್ವಲ್ ರೇವಣ್ಣ ಅವರ ಫೋನ್‌ ವಶಕ್ಕೆ ಪಡೆಯಬೇಕಿದೆ. ಈ ಫೋನ್‌ನಲ್ಲಿ ಅಶ್ಲೀಲ ವಿಡಿಯೋ ಚಿತ್ರೀಕರಿಸಿಕೊಳ್ಳಲಾಗಿದೆ ಎನ್ನಲಾಗಿದೆ. ಇದಕ್ಕಾಗಿ ಪ್ರಜ್ವಲ್ ರೇವಣ್ಣ ಅವರ ಫೋನ್ ಅನ್ನು ಎಸ್ಐಟಿ ತಂಡ ವಶಕ್ಕೆ ಪಡೆಯಲಿದೆ. ಆದರೆ ಈಗಾಗಲೆ ಪ್ರಜ್ವಲ್ ರೇವಣ್ಣ ನಾಟ್‌ ರೀಚಬಲ್‌ ಆಗಿದ್ದು, ತಮ್ಮ ಮೊಬೈಲ್ ಬದಲಾವಣೆ ಮಾಡಿದ್ದಾರೆ ಎಂಬ ಶಂಕೆ ಇದೆ. ಹೀಗಾಗಿ ವಿಡಿಯೋ ರೆಕಾರ್ಡ್ ಆದ‌‌ ಸಂದರ್ಭದ ಫೋನ್‌ ಐಎಂಇಐ ನಂಬರ್ ಕೂಡ ಎಸ್‌ಐಟಿ ಟ್ರ್ಯಾಕ್ ಮಾಡಲಿದೆ.

ಮಹಿಳೆಯಿಂದ ಲೈಂಗಿಕ ದೌರ್ಜನ್ಯ ದೂರು

ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ ಮಹಿಯೊಬ್ಬರು ನೀಡಿದ ದೂರಿನ ಮೇರೆಗೆ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಹಾಗೂ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಲೈಂಗಿಕ ದೌರ್ಜನ್ಯ ಮಾಡಿದ್ದಾರೆ ಎಂದು ಆರೋಪಿಸಿ ತಂದೆ-ಮಗ ಇಬ್ಬರ ಮೇಲೂ ಮನೆ ಕೆಲಸದಾಕೆಯೇ ದೂರು ನೀಡಿದ್ದಾಳೆ.

ದೂರಿನಲ್ಲಿ ಏನಿದೆ?

47 ವರ್ಷದ ಮಹಿಳೆ ನೀಡಿದ ದೂರಿನ ಅನ್ವಯ ಹೊಳೆನರಸೀಪುರ ಟೌನ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ದೂರುದಾರೆಗೆ ಭವಾನಿ ರೇವಣ್ಣ ಸೋದರತ್ತೆ ಮಗಳು. ಎಚ್‌.ಡಿ. ರೇವಣ್ಣ ಶಾಸಕರಾಗಿದ್ದಾಗ ನಾಗಲಾಪುರ ಹಾಲಿನ ಡೇರಿಯಲ್ಲಿ ಕೆಲಸ ಕೊಡಿಸಿದ್ದರು. ಬಳಿಕ ಬಿಸಿಎಂ ಹಾಸ್ಟೆಲ್‌ನಲ್ಲಿ ಅಡುಗೆ ಕೆಲಸ ಕೊಡಿಸಿದ್ದರು. 2015ರಲ್ಲಿ ರೇವಣ್ಣ ಅವರ ಮನೆಯಲ್ಲೇ ಕೆಲಸಕ್ಕೆ ಸೇರಿಸಿಕೊಂಡಿದ್ದರು. ಒಟ್ಟು 6 ಹೆಣ್ಣು ಮಕ್ಕಳು ಮನೆಯಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸಕ್ಕೆ ಸೇರಿಕೊಂಡ ನಾಲ್ಕು ತಿಂಗಳಿಗೆ ಕೊಠಡಿಗೆ ಬರುವಂತೆ ರೇವಣ್ಣ ಆಹ್ವಾನಿಸಿದ್ದರು.

ಇನ್ನು ಭವಾನಿ ರೇವಣ್ಣ ಮನೆಯಲ್ಲಿ ಇಲ್ಲದಿದ್ದಾಗ ಎಚ್.ಡಿ. ರೇವಣ್ಣ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಸ್ಟೋರ್ ರೂಮ್‌ನಲ್ಲಿ ಹಣ್ಣು ಕೊಡೋ ನೆಪದಲ್ಲಿ ಕೈ ಹಿಡಿದು ಎಳೆದಾಡಿದ್ದರು. ಅದೇ ರೀತಿ ಅಡುಗೆ ಮನೆಯಲ್ಲಿ ಇದ್ದಾಗ ಪ್ರಜ್ವಲ್ ರೇವಣ್ಣ ಹಿಂಬದಿಯಿಂದ ಬಂದು ಮೈ‌ಮುಟ್ಟಿ ಹೊಟ್ಟೆ ಜಿಗುಟುತ್ತಿದ್ದರು. ಜೊತೆಗೆ ಎಣ್ಣೆ ಹಚ್ಚಲು ಪದೇ ಪದೇ ಕರೆದು ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದರು. ಮನೆಯಲ್ಲಿದ್ದಾಗ ವಿಡಿಯೋ ಕಾಲ್ ಮಾಡಿ ನನ್ನ ಮಗಳ ಜೊತೆ ಅಸಭ್ಯವಾಗಿ ಮಾತನಾಡುತ್ತಿದ್ದರು. ಇದಕ್ಕೆ ಮಗಳು ಹೆದರಿಕೊಂಡು ನಂಬರ್ ಬ್ಲಾಕ್ ಕೂಡ ಮಾಡಿದ್ದಳು. ಇದರಿಂದ‌ ಮನೆ ಕೆಲಸ ಬಿಟ್ಟು ಹೊರಗಡೆ ಬಂದಿದ್ದಾಗಿ ದೂರಿನಲ್ಲಿ ತಿಳಿಸಿದ್ದಾಳೆ.

ಈಗ ಕೆಲ ವಿಡಿಯೊಗಳು ವೈರಲ್ ಆಗುತ್ತಿದ್ದು, ನನ್ನ ಗಂಡ ಶೀಲ ಶಂಕಿಸುತ್ತಿದ್ದಾನೆ. ಇದರಿಂದ ಮನನೊಂದು ದೂರು ನೀಡುತ್ತಿರೋದಾಗಿ 47 ವರ್ಷದ ಮಹಿಳೆ ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ. ಸದ್ಯ ಮಹಿಳೆ ದೂರಿನನ್ವಯ ಪ್ರಜ್ವಲ್ ರೇವಣ್ಣ ಹಾಗೂ ಎಚ್.ಡಿ. ರೇವಣ್ಣ ಇಬ್ಬರ ಮೇಲೂ ಎಫ್‌ಐಆರ್ ದಾಖಲಾಗಿದೆ.

ಇದನ್ನೂ ಓದಿ | Hassan Pen Drive Case: ಹಾಸನ ಅಶ್ಲೀಲ ವಿಡಿಯೊ ಪ್ರಕರಣ; ಬಿ.ಕೆ.ಸಿಂಗ್‌ ನೇತೃತ್ವದಲ್ಲಿ ಎಸ್‌ಐಟಿ ರಚನೆ

Continue Reading

ವಿದೇಶ

Stab wound: ಗರ್ಲ್‌ಫ್ರೆಂಡ್‌ನ ಚುಚ್ಚಿ ಕೊಲ್ಲೋ ಮುನ್ನ ಗೂಗಲ್‌ ಸರ್ಚ್‌ ಮಾಡಿದ್ದ ಹಂತಕ!

Stab wound: ಕೊಲೆ ಮಾಡುವ ಮುನ್ನ ಚಾಕುವಿನಿಂದ ಕೊಲೆ ಮಾಡುವುದು ಹೇಗೆ? ಲಂಡನ್‌ನಲ್ಲಿ ವಿದೇಶಿಗರು ಕೊಲೆ ಮಾಡಿದರೆ ಯಾವ ರೀತಿಯ ಶಿಕ್ಷೆ ಆಗುತ್ತದೆ ಎಂಬುದನ್ನು ಸರ್ಚ್‌ ಮಾಡಿದ್ದಾಗಿ ಕೋರ್ಟ್‌ ವಿಚಾರಣೆ ವೇಳೆ ಹೇಳಿದ್ದ.

VISTARANEWS.COM


on

Koo

ಲಂಡನ್‌: ತನ್ನ ಪ್ರೇಯಸಿಗೆ ಒಂಬತ್ತು ಬಾರಿ ಚುಚ್ಚಿ ಬಳಿಕ ಕತ್ತು ಕೊಯ್ದು ಬರ್ಬರವಾಗಿ ಕೊಲೆ (Stab wound)  ಮಾಡಿದ್ದ ಹೈದರಾಬಾದ್‌ ಮೂಲದ ವ್ಯಕ್ತಿಯೊಬ್ಬ ಹೈದರಾಬಾದ್‌ ಮೂಲದ ವ್ಯಕ್ತಿ ಕೃತ್ಯಕ್ಕೂ ಮುನ್ನ ಚಾಕುವಿನಿಂದ ತಕ್ಷಣ ಕೊಲೆ ಮಾಡುವುದು ಹೇಗೆ ಎಂಬುದನ್ನು ಗೂಗಲ್‌ನಲ್ಲಿ ಸರ್ಚ್‌(Google Search) ಮಾಡಿದ್ದ. 2022ರಲ್ಲಿ ಲಂಡನ್‌ ರೆಸ್ಟೋರೆಂಟ್‌(London restaurant)ನಲ್ಲಿ ಹೈದರಾಬಾದ್‌ ಮೂಲದ 25 ವರ್ಷದ ಶ್ರೀರಾಮ್‌ ಎಂಬಾತ ತನ್ನ 23ವರ್ಷದ ಪ್ರೇಯಸಿ ಸೋನಾ ಬಿಜು ಎಂಬಾಕೆಯನ್ನು ಮದುವೆಗೆ ನಿರಾಕರಿಸಿದಳೆಂಬ ಕೋಪದಲ್ಲಿ ಬರ್ಬರವಾಗಿ ಹತ್ಯೆ ಮಾಡಿದ್ದ.

ಸೋನಾ ರೆಸ್ಟೋರೆಂಟ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದಳು. ಆಕೆಯನ್ನು ಮದುವೆ ಆಗುವಂತೆ ಶ್ರೀರಾಮ್‌ ಅಗಾಗ ಪೀಡಿಸುತ್ತಿದ್ದನಂತೆ. ಮದುವೆಗೆ ಒಪ್ಪದೇ ಇದ್ದಲ್ಲಿ ಕೊಲೆ ಮಾಡುವುದಾಗಿ ಆಕೆಗೆ ಬೆದರಿಕೆಯನ್ನೂ ಹಾಕಿದ್ದ. ಆದರೆ ಶ್ರೀರಾಮ್‌ನ ವರ್ತನೆಯಿಂದ ಬೇಸತ್ತಿದ್ದ ಆಕೆ ಮದುವೆಗೆ ನಿರಾಕರಿಸಿದ್ದಳು. ಇದರಿಂದ ಕೋಪಗೊಂಡಿದ್ದ ಶ್ರೀರಾಮ್‌, ಆಕೆಯನ್ನು ರೆಸ್ಟೋರೆಂಟ್‌ನಿಂದ ಕತ್ತು ಹಿಡಿದು ಹೊರಗೆಳೆದು ತಂದು ಚಾಕುವಿನಿಂದ ಚುಚ್ಚಲು ಶುರು ಮಾಡಿದ್ದ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸೋನಾಗೆ, ಒಂದು ತಿಂಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಕೊನೆಗೆ ಚಿಕಿತ್ಸೆ ಫಲಕಾರಿಯಾಗದೇ ಆಕೆ ಕೊನೆಯುಸಿರೆಳೆದಿದ್ದಳು. ಪ್ರಕರಣದಲ್ಲಿ ಶ್ರೀರಾಮ್‌ಗೆ ಲಂಡನ್‌ ಕೋರ್ಟ್‌ 16ವರ್ಷ ಜೀವಾವಧಿ ಶಿಕ್ಷೆ ವಿಧಿಸಿತ್ತು. ಇನ್ನು ಕೋರ್ಟ್‌ ವಿಚಾರಣೆ ವೇಳೆ ಕೊಲೆ ಮಾಡುವ ಮುನ್ನ ಚಾಕುವಿನಿಂದ ಕೊಲೆ ಮಾಡುವುದು ಹೇಗೆ? ಲಂಡನ್‌ನಲ್ಲಿ ವಿದೇಶಿಗರು ಕೊಲೆ ಮಾಡಿದರೆ ಯಾವ ರೀತಿಯ ಶಿಕ್ಷೆ ಆಗುತ್ತದೆ ಎಂಬುದನ್ನು ಸರ್ಚ್‌ ಮಾಡಿದ್ದಾಗಿ ಹೇಳಿದ್ದ.

2017ರಿಂದ ಹೈದರಾಬಾದ್‌ ಕಾಲೇಜಿನಲ್ಲಿ ಪರಿಚಯಸ್ಥರಾಗಿದ್ದ ಸೋನಾ ಮತ್ತು ಶ್ರೀರಾಮ್‌ ಪರಸ್ಪರ ಡೇಟ್‌ ಮಾಡುತ್ತಿದ್ದರು. 2022ರಲ್ಲಿ ಇವರಿಬ್ಬರೂ ಲಂಡನ್‌ ವಿಶ್ವವಿದ್ಯಾಲಯದಲ್ಲಿ ಉನ್ನತ ಶಿಕ್ಷಣಕ್ಕೆಂದು ತೆರಳಿದ್ದರು. ಅಲ್ಲಿ ರೆಸ್ಟೋರೆಂಟ್‌ವೊಂದರಲ್ಲಿ ಪಾರ್ಟ್‌ಟೈಂ ಕೆಲಸ ಮಾಡುತ್ತಿದ್ದ ಸೋನಾಳನ್ನು ಭೇಟಿಯಾಗಲು ಆಗಾಗ ಶ್ರೀರಾಮ್‌ ಹೋಗುತ್ತಿದ್ದ. ಆರಂಭದಲ್ಲಿ ಚೆನ್ನಾಗಿಯೇ ಇದ್ದ ಈ ಜೋಡಿ ನಡುವೆ ಬಳಿಕ ಮನಸ್ತಾಪ ಉಂಟಾಗಿತ್ತು. ಶ್ರೀರಾಮ್‌ ಸೋನಾಳ ಮೇಲೆ ದೈಹಿಕ ಮತ್ತು ಮಾನಸಿಕವಾಗಿ ಕಿರುಕುಳ ನೀಡಲು ಶುರು ಮಾಡಿದ್ದ. ಇದರಿಂದ ಬೇಸತ್ತ ಸೋನಾ ಆತನಿಂದ ದೂರ ಉಳಿಯಲು ನಿರ್ಧರಿಸಿದ್ದಳು.

ಇದನ್ನೂ ಓದಿ: Actress Haripriya: ಐಷಾರಾಮಿ ಕಾರು ಖರೀದಿಸಿದ ʻಸಿಂಹಪ್ರಿಯಾʼ! ಬೆಲೆ ಎಷ್ಟು?

ಕೆಲವು ದಿನಗಳ ಹಿಂದೆ ರಾಜ್ಯದಲ್ಲೂ ಇಂತಹದ್ದೇ ಒಂದು ಘಟನೆ ಬೆಳಕಿಗೆ ಬಂದಿತ್ತು. ಪ್ರೀತಿಸಲು‌ ನಿರಾಕರಿಸಿದಳು ಎಂಬ ಕಾರಣಕ್ಕಾಗಿ ಪಾಗಲ್‌ ಪ್ರೇಮಿ ಫಯಾಜ್‌ ಎಂಬಾತ ಕಾರ್ಪೋರೇಟರ್‌ ಮಗಳು ನೇಹಾ ಎಂಬ ವಿದ್ಯಾರ್ಥಿನಿಯನ್ನು ಭೀಕರವಾಗಿ ಕೊಲೆ ಮಾಡಿದ್ದ. ಈ ಪ್ರಕರಣ ರಾಷ್ಟ್ರ ಮಟ್ಟದಲ್ಲಿ ಬಹಳ ಚರ್ಚೆ ಆಗಿತ್ತು. ಕಾಲೇಜು ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಪ್ರತಿಭಟನೆಗಳೂ ಕೂಡ ನಡೆದವು. ನೇಹಾಳನ್ನು ಕೊಂದ ಆರೋಪಿ ಫಯಾಜ್‌ ವಿರುದ್ಧ ಶೂಟೌಟ್ ಆರ್ಡರ್‌ ಮಾಡಿ, ಎನ್‌ಕೌಂಟರ್ ಮಾಡಿ ಬಿಸಾಕಿ ಎಂಬ ಆಗ್ರಹ ಕೇಳಿಬಂದಿತ್ತು.

Continue Reading

ಕರ್ನಾಟಕ

Love Jihad Case: ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್; ಬಾಲಕಿಯನ್ನು ಪುಸಲಾಯಿಸಿ ಕರೆತಂದ ಅನ್ಯಕೋಮಿನ ಯುವಕ!

Love Jihad: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪುಸಲಾಯಿಸಿ ಕರೆತಂದಿದ್ದ ಅನ್ಯಕೋಮಿನ ಯುವಕನಿಗೆ ಹಿಂದು ಜಾಗರಣಾ ವೇದಿಕೆ ಕಾರ್ಯಕರ್ತರು ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ.

VISTARANEWS.COM


on

love jihad
Koo

ಹುಬ್ಬಳ್ಳಿ: ನೇಹಾ ಹಿರೇಮಠ್‌ ಹತ್ಯೆ ಪ್ರಕರಣದ ಬೆನ್ನಲ್ಲೇ ನಗರದಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ (Love Jihad Case) ಬೆಳಕಿಗೆ ಬಂದಿದೆ. ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪುಸಲಾಯಿಸಿ ಕರೆತಂದಿದ್ದ ಅನ್ಯಕೋಮಿನ ಯುವಕನಿಗೆ ಹಿಂದು ಜಾಗರಣಾ ವೇದಿಕೆ ಕಾರ್ಯಕರ್ತರು ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ.

ಹುಬ್ಬಳ್ಳಿಯ ಗಬ್ಬೂರನಲ್ಲಿ ಅನ್ಯಕೋಮಿನ ಯುವಕನ ಜತೆ ಬಾಲಕಿ ಇದ್ದಳು. ಬಾಗಲಕೋಟೆ ಜಿಲ್ಲೆಯಿಂದ ಹುಬ್ಬಳ್ಳಿಗೆ ಬಾಲಕಿಯನ್ನು ಯುವಕ ಕರೆತಂದಿದ್ದ. ಗಬ್ಬೂರ ಹೋಟೆಲ್‌ನಲ್ಲಿ ಇದ್ದವನನ್ನು ಗಮನಿಸಿ ಸ್ಥಳೀಯರು ಪೊಲೀಸ್ ಸ್ಟೇಷನ್‌ಗೆ ಕರೆದೊಯ್ದಿದ್ದಾರೆ. ಈ ವೇಳೆ ಹಿಂದು ಜಾಗರಣಾ ವೇದಿಕೆ ಮುಖಂಡರು, ಯುವಕನಿಗೆ ಥಳಿಸಿ, ಹುಬ್ಬಳ್ಳಿಯ ಬೇಂಡಿಗೇರಿ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಅಪ್ರಾಪ್ತ ಬಾಲಕಿ ಕಾಣೆಯಾಗಿರುವ ಕುರಿತು ಕೇಸ್ ದಾಖಲಾಗಿತ್ತು. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ | Jatra Rathotsava: ಇಂಡಿಯ ಕಮರಿಮಠದ ಜಾತ್ರೆಯಲ್ಲಿ ರಥದ ಚಕ್ರಕ್ಕೆ ಸಿಲುಕಿ ಇಬ್ಬರು ದುರ್ಮರಣ; ಮತ್ತೊಬ್ಬ ಗಂಭೀರ

ಕೆರೆಯಲ್ಲಿ ಕಾಲು ಜಾರಿ ಬಿದ್ದು ತಂದೆ-ಮಗಳು ಸಾವು

ಕೋಲಾರ: ಕೆರೆಯಲ್ಲಿ ಕಾಲು ಜಾರಿ ಬಿದ್ದು ತಂದೆ-ಮಗಳು ಮೃತಪಟ್ಟಿರುವ ಘಟನೆ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಕಾಮಸಮುದ್ರ ಗ್ರಾಮದ ವೃಷಭಾವತಿ ಕರೆಯಲ್ಲಿ ನಡೆದಿದೆ. ಮಜರಾಗೊಲ್ಲಹಳ್ಳಿ ಗ್ರಾಮದಲ್ಲಿ ಮದುವೆ ಕಾರ್ಯಕ್ರಮಕ್ಕೆಂದು ಬಂದಿದ್ದ ತಂದೆ-ಮಗಳು, ಕೆರೆ ಬಳಿ ಸೆಲ್ಫಿ ತೆಗದುಕೊಳ್ಳಲು ಹೋದಾಗ, ಮಗಳು ಕಾಲು ಜಾರಿ ನೀರಗೆ ಬಿದ್ದಿದ್ದಾಳೆ. ಹೀಗಾಗಿ ಮಗಳನ್ನು ರಕ್ಷಿಸಲು ಹೋದ ತಂದೆಯೂ ಮುಳುಗಿದ್ದಾರೆ

ಬೆಂಗಳೂರು ಮೂಲದ ಸಯ್ಯದ್ ಅಯ್ಯೂಬ್ (35) ಹಾಗೂ ಫಾತಿಮಾ (10) ಮೃತ ತಂದೆ, ಮಗಳು. ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Continue Reading

ಕರ್ನಾಟಕ

ಬೆಂಗಳೂರಿನಲ್ಲಿ ಆರ್‌ಬಿಐ ನಿಯಮ ಉಲ್ಲಂಘಿಸಿ ನೋಟು ನಗದೀಕರಣ; ಇಬ್ಬರಿಗೆ 4 ವರ್ಷ ಜೈಲು!

ಭಾರತೀಯ ರಿಸರ್ವ್‌ ಬ್ಯಾಂಕ್‌ ಮಾರ್ಗಸೂಚಿಗಳನ್ನು ಪಾಲಿಸದೆ ಇಬ್ಬರು ಆರೋಪಿಗಳು ನೋಟುಗಳನ್ನು ನಗದೀಕರಣ ಮಾಡಿಕೊಂಡಿದ್ದಾರೆ. ಹಾಗಾಗಿ, ಇಬ್ಬರಿಗೂ ನ್ಯಾಯಾಲಯವು ತಲಾ 4 ವರ್ಷ ಜೈಲು ಶಿಕ್ಷೆ ವಿಧಿಸಿದೆ.

VISTARANEWS.COM


on

Notes
Koo

ಬೆಂಗಳೂರು: ಭಾರತೀಯ ರಿಸರ್ವ್‌ ಬ್ಯಾಂಕ್‌ (RBI) ನಿಯಮಗಳನ್ನು ಉಲ್ಲಂಘಿಸಿ ನೋಟುಗಳನ್ನು ನಗದೀಕರಣ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದಲ್ಲಿರುವ ಸಿಬಿಐ ವಿಶೇಷ ನ್ಯಾಯಾಲಯವು (CBI Special Court) ಇಬ್ಬರು ಆರೋಪಿಗಳಿಗೆ ತಲಾ 4 ವರ್ಷ ಜೈಲು ಶಿಕ್ಷೆ ವಿಧಿಸಿದೆ. ನೋಟು ನಗದೀಕರಣ ಮಾಡಿದ ಎಸ್.‌ ಗೋಪಾಲಯ್ಯ ಹಾಗೂ ಎಲ್‌ಐಸಿ ಏಜೆಂಟ್‌ ಕೆ.ರಾಘವೇಂದ್ರ ಎಂಬುವರಿಗೆ ನ್ಯಾಯಾಲಯವು ಜೈಲು ಶಿಕ್ಷೆ ವಿಧಿಸಿದೆ.

2016ರಲ್ಲಿ ಕೇಂದ್ರ ಸರ್ಕಾರವು ಐನೂರು ಹಾಗೂ ಸಾವಿರ ರೂ. ಮುಖಬೆಲೆಯ ನೋಟುಗಳನ್ನು ಅಮಾನ್ಯಗೊಳಿಸಿದ ಸಂದರ್ಭದಲ್ಲಿ ನಿಷೇಧಿತ ಕರೆನ್ಸಿಗಳ ನಗದೀಕರಣಕ್ಕೆ ಆರ್‌ಬಿಐ ಹಲವು ಮಾರ್ಗಸೂಚಿಗಳನ್ನು ಹೊರಡಿಸಿತ್ತು. ಆದರೆ, ಇಬ್ಬರೂ ಆರ್‌ಬಿಐ ಮಾರ್ಗಸೂಚಿಗಳನ್ನು ಗಾಳಿಗೆ ತೂರಿ ನೋಟುಗಳನ್ನು ನಗದೀಕರಣ ಮಾಡಿಕೊಂಡಿದ್ದರು. ಹಾಗಾಗಿ, ಸಿಬಿಐ ನ್ಯಾಯಾಲಯವು ಇಬ್ಬರಿಗೂ ಜೈಲು ಶಿಕ್ಷೆಯ ಜತೆಗೆ ಭಾರಿ ದಂಡ ವಿಧಿಸಿದೆ. ಎಸ್‌.ಗೋಪಾಲಯ್ಯಗೆ 2.10 ಲಕ್ಷ ರೂ. ಹಾಗೂ ರಾಘವೇಂದ್ರಗೆ 1.6 ಲಕ್ಷ ರೂ. ದಂಡ ವಿಧಿಸಿದೆ.

money guide

ಮಾರ್ಗಸೂಚಿ ಅನುಸರಿಸದೆ ನೋಟುಗಳನ್ನು ನಗದೀಕರಣ ಮಾಡಿಕೊಂಡ ಹಿನ್ನೆಲೆಯಲ್ಲಿ ಸಿಬಿಐ 2017ರ ಮಾರ್ಚ್‌ನಲ್ಲಿ ಈಗ ಶಿಕ್ಷೆಗೆ ಗುರಿಯಾಗಿರುವ ಇಬ್ಬರು ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಿಸಿತ್ತು. ತನಿಖೆ ವೇಳೆ ಇವರ ದುರುದ್ದೇಶ ಬಯಲಾಗಿತ್ತು. ತನಿಖೆ ಪೂರ್ಣಗೊಳಿಸಿದ್ದ ತಂಡವು ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿತ್ತು. ಅದರಂತೆ, ನ್ಯಾಯಾಲಯವು ಇಬ್ಬರು ಆರೋಪಿಗಳಿಗೆ ಜೈಲು ಶಿಕ್ಷೆ ವಿಧಿಸಿದೆ.

ಕೆಲ ತಿಂಗಳ ಹಿಂದಷ್ಟೇ, ರಾಷ್ಟ್ರೀಯ ತನಿಖಾ ದಳವು ನಕಲಿ ನೋಟು ಜಾಲದ ಮೇಲೆ ಮುಗಿಬಿದ್ದಿತ್ತು. ಬಿಹಾರ, ಉತ್ತರ ಪ್ರದೇಶ, ಮಹಾರಾಷ್ಟ್ರ ಹಾಗೂ ಕರ್ನಾಟಕದಲ್ಲಿ ಎನ್‌ಐಎ ಏಕಕಾಲದಲ್ಲಿ ದಾಳಿ ನಡೆಸಿದ್ದು, ಅದರಲ್ಲಿ ಕರ್ನಾಟಕದ ಬಳ್ಳಾರಿಯಲ್ಲೂ ಒಬ್ಬನನ್ನು ಸೆರೆ ಹಿಡಿದಿತ್ತು. ಬಳ್ಳಾರಿಯಲ್ಲಿ ಬಂಧಿತ ಆರೋಪಿಯನ್ನು ಮಹೇಂದ್ರ ಎಂದು ಗುರುತಿಸಲಾಗಿದ್ದು, ಆತನಿಂದ ಭಾರಿ ಪ್ರಮಾಣದ ನಕಲಿ ನೋಟು, ನೋಟು ತಯಾರಿಸುವ ಪೇಪರ್, ಪ್ರಿಂಟಿಂಗ್ ಮೆಷಿನ್‌ಗಳನ್ನು ವಶಕ್ಕೆ ಪಡೆಯಲಾಗಿತ್ತು. ಈತ 500, 200, ಹಾಗೂ 100 ರೂ ಮುಖಬೆಲೆಯ ನೋಟು ತಯಾರಿಸುತ್ತಿದ್ದ ಎಂದು ತಿಳಿದುಬಂದಿತ್ತು.

ಇದನ್ನೂ ಓದಿ: Fake Currency: ಬಳ್ಳಾರಿಯಲ್ಲಿ ಖೋಟಾ ನೋಟು ಪ್ರಿಂಟ್ ಮಾಡುತ್ತಿದ್ದ ಇಬ್ಬರ ಬಂಧನ

Continue Reading
Advertisement
srinivasa prasad sutturu sri
ಕರ್ನಾಟಕ27 mins ago

Srinivasa Prasada Passes Away: ಕೊನೇ ಬಾರಿಗೆ ʼCoffee’ ಎಂದು ಬರೆದಿದ್ದ ಶ್ರೀನಿವಾಸ ಪ್ರಸಾದ್;‌ ನಾಳೆ ಅಂತ್ಯಕ್ರಿಯೆ; ಗಣ್ಯರ ಸಂತಾಪ

Gurucharan Singh soon to get married faced financial crunch
ಸಿನಿಮಾ48 mins ago

Gurucharan Singh: ನಿಗೂಢವಾಗಿ ನಾಪತ್ತೆಯಾದ ಈ ನಟನಿಗೆ ಶೀಘ್ರದಲ್ಲೇ ಮದುವೆ!

IPL 2024
ಪ್ರಮುಖ ಸುದ್ದಿ54 mins ago

IPL 2024 : ಡೇವಿಡ್ ವಾರ್ನರ್ ಅವರೊಂದಿಗೆ ‘ಈ’ ಅದ್ಭುತ ಐಪಿಎಲ್ ದಾಖಲೆಯನ್ನು ಸರಿಗಟ್ಟಿದ ಕೊಹ್ಲಿ

War 2 A galaxy of stars descended at a Mumbai restaurant on Sunday evening
ಸ್ಯಾಂಡಲ್ ವುಡ್1 hour ago

War 2 Movie: `ವಾರ್‌2′, `ಬ್ರಹ್ಮಾಸ್ತ್ರ’ ತಂಡಕ್ಕೆ ಸ್ಪೆಷಲ್‌ ಡಿನ್ನರ್‌ ಪಾರ್ಟಿ ಆಯೋಜಿಸಿದ ಅಯಾನ್ ಮುಖರ್ಜಿ !

hd revanna prajwal revanna
ಪ್ರಮುಖ ಸುದ್ದಿ1 hour ago

Hasan Pen Drive Case: ಎಲ್ಲೂ ಕಾಣದ ಪ್ರಜ್ವಲ್‌, ಇಂದು ಎಚ್‌ಡಿ ರೇವಣ್ಣ ಹೈಕೋರ್ಟ್‌ ಮೊರೆ

ವಿದೇಶ1 hour ago

Stab wound: ಗರ್ಲ್‌ಫ್ರೆಂಡ್‌ನ ಚುಚ್ಚಿ ಕೊಲ್ಲೋ ಮುನ್ನ ಗೂಗಲ್‌ ಸರ್ಚ್‌ ಮಾಡಿದ್ದ ಹಂತಕ!

Actress Haripriya Vasishta Simha Buys A Swanky New SUV Car
ಸ್ಯಾಂಡಲ್ ವುಡ್2 hours ago

Actress Haripriya: ಐಷಾರಾಮಿ ಕಾರು ಖರೀದಿಸಿದ ʻಸಿಂಹಪ್ರಿಯಾʼ! ಬೆಲೆ ಎಷ್ಟು?

Kane Williamson
ಕ್ರೀಡೆ2 hours ago

Kane Williamson : ನ್ಯೂಜಿಲ್ಯಾಂಡ್ ವಿಶ್ವ ಕಪ್​ ತಂಡಕ್ಕೆಕೇನ್​ ವಿಲಿಯಮ್ಸನ್​ ನಾಯಕ

PM Narendra Modi
ಕರ್ನಾಟಕ2 hours ago

PM Narendra Modi: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಅಬ್ಬರದ ಪ್ರಚಾರಕ್ಕೆ ಸಿದ್ಧತೆ

PM Not OBC Said by Rahul Gandhi and BJP hits back to him
ಪ್ರಮುಖ ಸುದ್ದಿ2 hours ago

PM Narendra Modi: ಸಂಪತ್ತು ಮರುಹಂಚಿಕೆಯ ರಾಹುಲ್ ಗಾಂಧಿ ಐಡಿಯಾ ನಗರ ನಕ್ಸಲ್ ಚಿಂತನೆ: ಪಿಎಂ ಮೋದಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 29 2024
ಭವಿಷ್ಯ6 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202418 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 202420 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 202422 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 202423 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ1 day ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ2 days ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

ಟ್ರೆಂಡಿಂಗ್‌