ಶಿವಮೊಗ್ಗ: ಮೇಲಧಿಕಾರಿಗಳ ಕಿರುಕುಳ (harassment) ಸಹಿಸಲಾಗುತ್ತಿಲ್ಲ ಎಂದು ಆರೋಪಿಸಿ ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ (karnataka state valmiki development corporation) ಸೂಪರಿಂಟೆಂಡೆಂಟ್ ಚಂದ್ರಶೇಖರ್ (52) ಎಂಬವರು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ. ಶಿವಮೊಗ್ಗದ (Shivamogga news) ತಮ್ಮ ಮನೆಯಲ್ಲಿ ಅವರು ನೇಣು ಹಾಕಿಕೊಂಡಿದ್ದಾರೆ.
ಶಿವಮೊಗ್ಗದ ವಿನೋಬ ನಗರದ ಕೆಂಚಪ್ಪ ಲೇಔಟ್‌ನಲ್ಲಿರುವ ಅವರ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ 187 ಕೋಟಿ ರೂಪಾಯಿ ಮೊತ್ತದ ಹಗರಣಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ.
ಚಂದ್ರಶೇಖರ್ ಬರೆದಿರುವ ಡೆತ್ ನೋಟ್ ಒಂದು ಸಿಕ್ಕಿದ್ದು, ಅದರಲ್ಲಿ ತಮ್ಮ ಮೇಲಧಿಕಾರಿಗಳನ್ನು ತಮ್ಮ ಸಾವಿಗಾಗಿ ದೂರಿದ್ದಾರೆ. 6 ಪುಟಗಳ ಡೆತ್ ನೋಟ್ ಬರೆದಿದ್ದು, ಅದರಲ್ಲಿ ಪದ್ಮನಾಭ, ಪರಶುರಾಮ್, ಶುಚಿಸ್ವತ ಎಂಬ ಅಧಿಕಾರಿಗಳೇ ನನ್ನ ಸಾವಿಗೆ ಕಾರಣ ಎಂದು ಬರೆದಿಟ್ಟಿದ್ದಾರೆ. ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಡೀಪ್‌ಫೇಕ್ ಬಳಸಿ ವಿದ್ಯಾರ್ಥಿನಿಯರ ನಗ್ನಚಿತ್ರ ರೂಪಿಸಿ ಕಿರುಕುಳ
ಬೆಂಗಳೂರು: ಸೆಲೆಬ್ರಿಟಿಗಳಿಗೆ ಕಾಡುತ್ತಿದ್ದ ಡೀಪ್‌ಫೇಕ್ ಕಾಟವು ಇದೀಗ ಶಾಲಾ ವಿದ್ಯಾರ್ಥಿನಿಯರಿಗೆ ಶುರುವಾಗಿದೆ. ಪ್ರತಿಷ್ಠಿತ ಶಾಲೆಯ ವಿದ್ಯಾರ್ಥಿನಿಯರ ಮಾರ್ಫಿಂಗ್ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಪೋಷಕರಲ್ಲಿ ಆತಂಕ ಹೆಚ್ಚಿದೆ. ಡೀಪ್‌ಫೇಕ್ ತಂತ್ರಜ್ಞಾನದ (Deep fake Technology) ದುರ್ಬಳಕೆ ಎಂದರೆ ಇದುವರೆಗೆ ರಶ್ಮಿಕಾ ಮಂದಣ್ಣ, ಕತ್ರಿನಾ ಕೈಫ್, ಸಚಿನ್ ತೆಂಡೂಲ್ಕರ್ ಅವರಂತಹ ಸೆಲೆಬ್ರಿಟಿಗಳು, ನಟಿಯರ ತಿರುಚಿದ ವಿಡಿಯೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದು ಎಂದಾಗಿತ್ತು. ಆದರೆ, ಡೀಪ್‌ಫೇಕ್ ತಂತ್ರಜ್ಞಾನದ ಕಾವು (Deep fake Scam) ಶಾಲಾ ವಿದ್ಯಾರ್ಥಿಯರಿಗೂ ಎದುರಾಗಿದೆ.
ಖಾಸಗಿ ಶಾಲೆಯೊಂದರ 9ನೇ ತರಗತಿ ವಿದ್ಯಾರ್ಥಿನಿಯ AI ಅಲ್ಲಿ ರಚನೆಯಾದ ನಗ್ನ ಫೋಟೋ ವೈರಲ್ ಆಗಿದೆ. ಮೇ 24 ರಂದು ಬೆಳಕಿಗೆ ಬಂದ ಪ್ರಕರಣವು ಈಗ ಚರ್ಚೆಗೆ ಗ್ರಾಸವಾಗಿದೆ. ಅಂದಹಾಗೆ 50ಕ್ಕೂ ಹೆಚ್ಚು ಶಾಲೆಯ ವಿದ್ಯಾರ್ಥಿಗಳು ಇದ್ದ ಇನ್ಸ್ಟ್ರಾಗ್ರಾಂನಲ್ಲಿ ಗ್ರೂಪ್‌ವೊಂದು ರಚನೆ ಮಾಡಿದ್ದರು. ಆ ಗ್ರೂಪ್‌ನಲ್ಲಿ ಅನಾಮಧೇಯ ವ್ಯಕ್ತಿಯಿಂದ ವಿದ್ಯಾರ್ಥಿನಿಯರ ಮಾರ್ಫಿಂಗ್ ಫೋಟೋಸ್ ವೈರಲ್ ಆಗಿದೆ. ಆ ವ್ಯಕ್ತಿ ಯಾರು ಎಂಬುದರ ಅರಿವು ಕೂಡ ವಿದ್ಯಾರ್ಥಿನಿಯರಿಗೆ ಇಲ್ಲ.
ಶಾಲಾ ಗ್ರೂಪ್‌ನಲ್ಲಿ ಇದ್ದಾನೆಂದರೆ ಅವನು ಖಂಡಿತ ವಿದ್ಯಾರ್ಥಿ ಆಗಿರಬಹುದೆಂದು ಶಂಕಿಸಲಾಗಿದೆ. ಈ ವಿಚಾರ ತಿಳಿದ ಕೂಡಲೇ ವಿದ್ಯಾರ್ಥಿನಿಯರು ಕುಗ್ಗಿ ಹೋಗಿದ್ದಾರೆ. ಈಗಾಗಲೇ ವಿದ್ಯಾರ್ಥಿನಿಯರ ಪೋಷಕರು ಸೈಬರ್ ಸೆಲ್‌ಗೆ ದೂರು ನೀಡಿದ್ದಾರೆ. ಡೀಪ್‌ಫೇಕ್ ಕಾಟಕ್ಕೆ ವಿದ್ಯಾರ್ಥಿನಿಯರು ಮಾನಸಿಕ ಹಿಂಸೆಗೆ ಒಳಗಾಗಿದ್ದಾರೆ.
ಇದನ್ನೂ ಓದಿ: Kichcha Sudeep: ವಾಲ್ಮೀಕಿ ಜಾತ್ರೆಗೆ ಈ ಬಾರಿ ನಟ ಕಿಚ್ಚ ಸುದೀಪ್‌ಗೆ ಇಲ್ಲ ಆಹ್ವಾನ