Site icon Vistara News

Hassan Pen Drive Case: ಜರ್ಮನಿಯಲ್ಲಿ ಪ್ರಜ್ವಲ್‌ ಎಲ್ಲಿದ್ದಾರೆ? ಪತ್ತೆ ಮಾಡುತ್ತಿದೆ ಎಸ್‌ಐಟಿ!

Hassan Pen Drive Case Where is Prajwal in Germany SIT is on lookout

ಬೆಂಗಳೂರು: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ತನಿಖೆ ಚುರುಕುಗೊಂಡಿದೆ. ವೈರಲ್ ವಿಡಿಯೊಗಳ ಸತ್ಯಾಸತ್ಯತೆ ಪರಿಶೀಲನೆಗೆ ಮುಂದಾಗಲಾಗಿದೆ. ಇನ್ನು ಜರ್ಮನಿಗೆ ತೆರಳಿರುವ ಪ್ರಜ್ವಲ್‌ ರೇವಣ್ಣ ಅಲ್ಲಿ ಎಲ್ಲಿದ್ದಾರೆ ಎಂಬ ಬಗ್ಗೆ ಎಂಬ ಬಗ್ಗೆ ಎಸ್‌ಐಟಿ ಮಾಹಿತಿಯನ್ನು ಕಲೆಹಾಕುತ್ತಿದೆ. ಹೀಗಾಗಿ ಅವಶ್ಯ ಬಿದ್ದರೆ ಪ್ರಜ್ವಲ್‌ ಇರುವಲ್ಲಿಗೆ ಹೋಗಿ ಕರೆತರಲು ಪ್ಲ್ಯಾನ್‌ ಮಾಡಲಾಗುತ್ತಿದೆ ಎನ್ನಲಾಗಿದೆ.

ಎಚ್.ಡಿ. ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಸ್ ಗಂಭೀರವಾಗಿದೆ. ಈ ಹಿನ್ನೆಲೆಯಲ್ಲಿ ಸೋಮವಾರ (ಏಪ್ರಿಲ್‌ 29) ಸಂಜೆ ವೇಳೆಗೆ ಸಿಐಡಿ ಕಚೇರಿಯಲ್ಲಿ ಎಸ್‌ಐಟಿ ಅಧಿಕಾರಿಗಳ ಸಭೆ ನಡೆಯಲಿದೆ. ಪ್ರಕರಣದ ತನಿಖೆಗೆ ಪೂರ್ಣ ಪ್ರಮಾಣದ ತನಿಖಾ ತಂಡವನ್ನು ಎಸ್‌ಐಟಿ ಈ ವೇಳೆ ರಚಿಸಿಕೊಳ್ಳಲಿದೆ. ಅಲ್ಲದೆ, ಯಾರು ಯಾರಿಗೆ ಯಾವೆಲ್ಲ ಜವಾಬ್ದಾರಿಯನ್ನು ನೀಡಬೇಕು? ಅವರು ಅದಕ್ಕೆ ಸಂಬಂಧಿಸಿ ಏನೆಲ್ಲ ಸಾಕ್ಷಿಗಳನ್ನು ಸಂಗ್ರಹಿಸಬೇಕು ಎಂಬಿತ್ಯಾದಿ ವಿಚಾರಗಳ ಬಗ್ಗೆ ಇಲ್ಲಿ ತೀರ್ಮಾನ ಆಗಲಿದೆ.

ಸಿಐಡಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಬಿ.ಕೆ. ಸಿಂಗ್ ನೇತೃತ್ವದ ಎಸ್‌ಐಟಿ ತಂಡ ಇದಾಗಿದ್ದು, ಸಿಂಗ್‌ ಅವರು ಈಗಾಗಲೇ ಸಿಐಡಿ ಕಚೇರಿಗೆ ಆಗಮಿಸಿದ್ದಾರೆ. ಟೀಂ ರಚನೆಯಾದ ಬಳಿಕ ತನಿಖೆ ಪ್ರಾರಂಭವಾಗಲಿದ್ದು, ಮತ್ತಷ್ಟು ವೇಗ ಪಡೆದುಕೊಳ್ಳಲಿದೆ.

ಕೆಲವು ತಂಡಗಳ ರಚನೆ

ತನಿಖೆ ನಡೆಸಲು ಕೆಲವು ತಂಡಗಳನ್ನು ರಚನೆ ಮಾಡಲು ಈಗಾಗಲೇ ನಿರ್ಧಾರ ಮಾಡಲಾಗಿದೆ ಎಂದು ತಿಳಿದುಬಂದಿದೆ. ಹೀಗಾಗಿ ನೂತನ ತಂಡಗಳು ಇಂದು ಅಥವಾ ನಾಳೆ (ಏಪ್ರಿಲ್‌ 29 – 30) ಹಾಸನಕ್ಕೆ ತೆರಳಲಿವೆ. ಸದ್ಯ ಹೊಳೆನರಸೀಪುರ ನಗರ ಠಾಣೆಯಲ್ಲಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ಧ ಎಫ್‌ಐಆರ್ ದಾಖಲಾಗಿದೆ.‌

ಇದನ್ನೂ ಓದಿ: Hassan Pen Drive Case: ಪ್ರಜ್ವಲ್‌ ಉಚ್ಚಾಟನೆಗೆ ದೇವೇಗೌಡರ ಹಿಂದೇಟು; ದೊಡ್ಡ ಗೌಡರ ಭಯಕ್ಕೆ ಏನು ಕಾರಣ?

ಹೊಳೆನರಸೀಪುರ ನಗರ ಠಾಣೆಗೆ ದೂರು ನೀಡಿದ ಎಸ್‌ಐಟಿ ತಂಡವು ಮೊದಲಿಗೆ ಸಂತ್ರಸ್ತೆಯ ಹೇಳಿಕೆಯನ್ನು ಪಡೆದುಕೊಳ್ಳಲಿದ್ದಾರೆ. ಇನ್ನು ಪ್ರಕರಣದ ಬಗ್ಗೆ ರಾಜ್ಯದ ಯಾವುದೇ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾದರೂ ಎಸ್ಐಟಿಗೆ ವರ್ಗಾವಣೆ ಆಗಲಿದೆ, ಹಾಗೆಯೇ ತನಿಖೆ ಭಾಗವಾಗಿ ವೈರಲ್ ವಿಡಿಯೊಗಳ ಸತ್ಯಾಸತ್ಯತೆಯನ್ನು ಪರಿಶೀಲನೆ ನಡೆಸಲು ಎಸ್‌ಐಟಿ ಮುಂದಾಗಿದ್ದು, ಅವುಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್‌) ಕಳುಹಿಸಲಿದೆ.

Exit mobile version