ಬೆಂಗಳೂರು: ಮಹಿಳೆ ಅಪಹರಣ (kidnap) ಕೇಸ್‌ನಲ್ಲಿ ಬಂಧನಕ್ಕೊಳಗಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ (HD Revanna Jailed) ಮಾಜಿ ಸಚಿವ ಹೆಚ್. ಡಿ ರೇವಣ್ಣ ಅವರ ಇನ್ನೊಂದು ಜಾಮೀನು ಅರ್ಜಿ (Bail plea) ಇಂದು ಜನಪ್ರತಿನಿಧಿ ವಿಶೇಷ ನ್ಯಾಯಾಲಯದಲ್ಲಿ (peoples representative court) ವಿಚಾರಣೆಗೆ ಒಳಗಾಗಲಿದೆ. ಮಗ, ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ (Prajwal Revanna Case) ಪ್ರಕರಣದಲ್ಲಿಯೂ ಆರೋಪಿಯಾಗಿರುವ ರೇವಣ್ಣ ಅವರಿಗೆ ನಿನ್ನೆಯ ವಿಚಾರಣೆಯಲ್ಲಿ ಬೇಲ್ ಸಿಕ್ಕಿಲ್ಲ.
ಬೆಳಗ್ಗೆ ಹನ್ನೊಂದು ಗಂಟೆ ನಂತರ ಜನಪ್ರತಿನಿಧಿ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಹೆಚ್.ಡಿ ರೇವಣ್ಣ ಪರ ಹಿರಿಯ ವಕೀಲ ಸಿ.ವಿ ನಾಗೇಶ್ ವಾದ ಮಂಡಿಸಲಿದ್ದಾರೆ. 65 ವರ್ಷದವರಾಗಿರುವ ಹೆಚ್.ಡಿ ರೇವಣ್ಣ ಈಗಾಗಲೇ ಪ್ರಕರಣ, ಮಗನ ಮೇಲಿನ ಆರೋಪದಿಂದ ಮಾನಸಿಕವಾಗಿ ನೊಂದಿದ್ದಾರೆ. ನಾಲ್ಕು ದಿನಗಳ ಕಾಲ ಕಸ್ಟಡಿಯಲ್ಲಿದ್ದು ವಿಚಾರಣೆ ಎದುರಿಸಿದ್ದಾರೆ. ಕಸ್ಟಡಿ ವೇಳೆ ಅನಾರೋಗ್ಯದ ಸಮಸ್ಯೆ ಎದುರಿಸಿದ್ದಾರೆ ಎಂಬ ಮಾಹಿತಿಯಿದೆ. ಹೊಟ್ಟೆ ಉರಿ ಸಮಸ್ಯೆ ಎಂದು ನ್ಯಾಯಾಧೀಶರ ಮುಂದೆ ಅಳಲು ತೋಡಿಕೊಂಡಿದ್ದರು. ಇಂದು ಇದೇ ವಿಚಾರವನ್ನು ಮತ್ತೆ ಜನಪ್ರತಿನಿಧಿ ನ್ಯಾಯಾಲಯದಲ್ಲಿ ವಕೀಲರು ಉಲ್ಲೇಖ ಮಾಡಲಿದ್ದಾರೆ. ಹಲವಾರು ವರ್ಷ ರಾಜ್ಯ ಸಚಿವರಾಗಿದ್ದು ಸೇವೆ ಸಲ್ಲಿಸಿರುವ ರೇವಣ್ಣ, ಪ್ರಕರಣದ ಗುರುತ್ವ ಅರಿತು ತನಿಕೆಗೆ ಸಹಕಾರ ಒದಗಿಸುತ್ತಿದ್ದಾರೆ. ಈ ಎಲ್ಲ ವಿಚಾರಗಳಿಂದ ಹೆಚ್.ಡಿ ರೇವಣ್ಣಗೆ ಬೇಲ್ ಸಿಗಬೇಕು ಎಂದು ವಾದಿಸುವ ಸಾಧ್ಯತೆ ಇದೆ.
ಎಸ್ಐಟಿ ಮತ್ತೆ ಈ ಬಗ್ಗೆ ಆಕ್ಷೇಪಣೆ ಸಲ್ಲಿಸಲಿದೆ. ಈಗಾಗಲೇ ರೇವಣ್ಣ ತನಿಖೆ ಸರಿಯಾಗಿ ಸಹಕರಿಸಿಲ್ಲ ಎಂದು ಎಸ್‌ಐಟಿ ಹೇಳಿದೆ. ಸಮರ್ಪಕವಾಗಿ ವಿಚಾರಣೆ ಆಗಿಲ್ಲ. ಮತ್ತೊಂದು ಕಡೆ ಹೆಚ್. ಡಿ ರೇವಣ್ಣ ಮಾಜಿ ಸಚಿವ, ಶಾಸಕ ಹಾಗೂ ಪ್ರಭಾವ ಉಳ್ಳ ವ್ಯಕ್ತಿಯಾಗಿದ್ದಾರೆ. ಹೊರ ಬಂದ ಮೇಲೆ ತಮ್ಮ ಪ್ರಭಾವ ಬಳಸಿ ಸಾಕ್ಷ್ಯ ನಾಶ ಮಾಡುವ, ಸಂತ್ರಸ್ತೆಯರನ್ನು ಕಾಂಟ್ಯಾಕ್ಟ್ ಮಾಡುವ ಸಾಧ್ಯತೆ ಇದೆ. ಈ ಅಂಶಗಳ ಹಿನ್ನೆಲೆಯಲ್ಲಿ ಜಾಮೀನು ನೀಡಬಾರದು ಎಂದು ಸರ್ಕಾರದ ಪರ ವಕೀಲರು ಆಕ್ಷೇಪಣೆ ಸಲ್ಲಿಸಲಿದ್ದಾರೆ.
ಎಚ್‌ಡಿ ರೇವಣ್ಣ ಈಗ ಕೈದಿ ನಂಬರ್ 4567
ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಚಿವ ಎಚ್.ಡಿ ರೇವಣ್ಣ (HD Revanna Jailed) ಅವರಿಗೆ ವಿಚಾರಣಾಧೀನ ಕೈದಿ ನಂಬರ್ ಅನ್ನು ಜೈಲಾಧಿಕಾರಿಗಳು ನೀಡಿದ್ದು, ಅವರ ನಂಬರ್ 4567 ಆಗಿದೆ. ನಿನ್ನೆ ರಾತ್ರಿ ಎಲ್ಲ ಕೈದಿಗಳಂತೆ ಜೈಲಿನ ಊಟ ಸೇವಿಸಿದ್ದ ರೇವಣ್ಣ ನಿದ್ರಿಸದೆ ಮೌನಿಯಾಗಿ ಯೋಚಿಸುತ್ತಾ ಕುಳಿತಿದ್ದರು ಎಂದು ತಿಳಿದುಬಂದಿದೆ. ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರ ಅಶ್ಲೀಲ ವಿಡಿಯೊ ಪೆನ್‌ಡ್ರೈವ್ ಪ್ರಕರಣದಲ್ಲಿ (Hassan Pen Drive) ಹಾಗೂ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪ ಹೊತ್ತಿರುವ ರೇವಣ್ಣ ಅವರ ಜಾಮೀನು ಅರ್ಜಿ (bail plea) ವಿಚಾರಣೆ ಬುಧವಾರ (ಮೇ 8) ನಡೆದಿದ್ದು, ಏಳು ದಿನ ಅಂದರೆ ಮೇ 14ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಲಾಗಿದೆ.
ಜೈಲಿಗೆ ಬರುವ ಎಲ್ಲಾ ಆರೋಪಿಗಳಿಗೆ ಎಂಟ್ರಿ ನಂಬರ್ ನೀಡಲಾಗುತ್ತದೆ. ಅದರಂತೆಯೇ ರೇವಣ್ಣಗೆ ವಿಚಾರಣಾಧೀನ ಬಂಧಿ 4567 ನಂಬರ್ ನೀಡಲಾಗಿದೆ. ಜೈಲಿನಲ್ಲಿ ಎಲ್ಲ ಕೈದಿಗಳಿಗೆ ನೀಡುವ ಊಟ ಸವಿಯಬೇಕಾದ ಪರಿಸ್ಥಿತಿ ಅವರದ್ದಾಗಿದೆ. ಜೈಲಿನ ಮೆನುವಿನಂತೆಯೇ ಅಧಿಕಾರಿಗಳು ಚಪಾತಿ, ಪಲ್ಯ, ಮುದ್ದೆ, ಅನ್ನ, ಸಾಂಬಾರ್ ಊಟ ನೀಡಿದ್ದಾರೆ. ಕೋರ್ಟ್ ಅನುಮತಿ ಇದ್ದರೆ ಮಾತ್ರ ಹೊರಗಿನ ಊಟ ತರಿಸಲು ಅವಕಾಶವಿದೆ. ಆದರೆ ರೇವಣ್ಣಗೆ ಹೊರಗಿನ ಊಟಕ್ಕೆ ಯಾವುದೇ ಅನುಮತಿ ಇಲ್ಲ. ಆದರೆ ರಾತ್ರಿ ಊಟ ನೀಡಿ ಒಂದು ಗಂಟೆ ಕಳೆದರೂ ಊಟ ಮಾಡದೆ ರೇವಣ್ಣ ಮೌನಕ್ಕೆ ಜಾರಿದ್ದಾರೆ ಎಂದು ತಿಳಿದುಬಂದಿದೆ.
ರಾಜ್ಯ ಸಚಿವರಾಗಿ ಐಷಾರಾಮಿ ಜೀವನ ನಡೆಸಿದ್ದ ರೇವಣ್ಣ ಒಂದು ರಾತ್ರಿಯನ್ನು ಸಾಮಾನ್ಯ ಕೈದಿಗಳಂತೆ ಜೈಲಿನಲ್ಲಿ ಕಳೆದಿದ್ದು, ರಾತ್ರಿ ನೀಡಿದ್ದ ಮುದ್ದೆ, ಚಪಾತಿ, ರೈಸ್ ಸಾಂಬಾರ್ ತಡವಾಗಿ ತಿಂದಿದ್ದಾರೆ. ಮನೆಯವರು ತಂದು ಕೊಟ್ಟಿರುವ ಬಟ್ಟೆ ಪಡೆದಿದ್ದಾರೆ. ರಾತ್ರಿ ಒಂದು ಗಂಟೆಯವರೆಗೂ ನಿದ್ರೆ ಮಾಡದೆ ಯೋಚಿಸುತ್ತಿದ್ದರು ಎನ್ನಲಾಗಿದೆ. ರೇವಣ್ಣ ಆರೋಗ್ಯ ಸರಿ ಇಲ್ಲದ ಕಾರಣ ಜೈಲಾಧಿಕಾರಿಗಳು ಹೆಚ್ಚು ನಿಗಾ ಇಟ್ಟಿದ್ದಾರೆ. ರೇವಣ್ಣ ಇರುವ ಕೊಠಡಿ ಬಳಿ ಒಬ್ಬ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಇಂದು ಬೆಳಿಗ್ಗೆ 5.30ಕ್ಕೆ ನಿದ್ರೆಯಿಂದ ಎದ್ದ ರೇವಣ್ಣ ಅವರಿಗೆ ಕಾಫಿ-ಟೀ ನೀಡಲಾಗಿದೆ. ಕೈದಿಗಳಿಗೆ ಟಿವಿ ವ್ಯವಸ್ಥೆ ಇಲ್ಲ. ಹೊರಗಿನ ಸುದ್ದಿ ತಿಳಿಯಲು ನ್ಯೂಸ್ ಪೇಪರ್ ವ್ಯವಸ್ಥೆ ಮಾಡಲಾಗಿದೆ. ರೇವಣ್ಣಗೆ ಓದಲು ಕನ್ನಡ-ಇಂಗ್ಲೀಷ್ ಪೇಪರ್ ನೀಡಲಾಗಿದೆ. ಪೇಪರ್ ಕಡೆ ಕಣ್ಣಾಡಿಸಿ ನಿನ್ನೆಯ ವಿದ್ಯಮಾನಗಳನ್ನು ರೇವಣ್ಣ ಓದಿದ್ದಾರೆ. ಜೈಲಿನ ಮೆನುವಿನಂತೆ ರೇವಣ್ಣಗೆ ಇಂದು ಬೆಳಗ್ಗಿನ ತಿಂಡಿಗೆ ಪುಳಿಯೋಗರೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: Prajwal Revanna Case: ಎಚ್.ಡಿ ರೇವಣ್ಣ ಈಗ ಕೈದಿ ನಂಬರ್ 4567, ನಿದ್ದೆ ಮಾಡದೆ ಮೌನಿಯಾಗಿ ಕುಳಿತ ಮಾಜಿ ಸಚಿವ