ಶಿವಮೊಗ್ಗ: ರಸ್ತೆ ಅಪಘಾತವೊಂದರಲ್ಲಿ (Road Accident) ಆಟೋ ರಿಕ್ಷಾಗೆ ಗುದ್ದಿ (Auto hit by Canter) ವಿದ್ಯಾರ್ಥಿನಿ ಸ್ಥಳದಲ್ಲೇ ಸಾವಿಗೀಡಾಗಲು (Student death) ಕಾರಣನಾಗಿ ನಿಲ್ಲಿಸದೆ ಪರಾರಿಯಾದ (Hit and Run) ಕ್ಯಾಂಟರ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಡೆಡ್ಲಿ ಆಕ್ಸಿಡೆಂಟ್ (Shivamogga accident) ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಶಿವಮೊಗ್ಗ ತಾಲೂಕಿನ ತಾವರೆ ಚಟ್ನಳ್ಳಿ ಗ್ರಾಮದ ಬಳಿ ದುರ್ಘಟನೆ ನಡೆದಿದೆ. ಅತಿ ವೇಗ ಹಾಗೂ ನಿರ್ಲಕ್ಷ್ಯದಿಂದ ಚಲಾಯಿಸಿದ ಕ್ಯಾಂಟರ್ ಚಾಲಕ ಅಪಘಾತಕ್ಕೆ ಕಾರಣನಾಗಿದ್ದಾನೆ. ಆಟೋಗೆ ಗುದ್ದಿ ಅದು ಪಲ್ಟಿಯಾದರೂ ನಿಲ್ಲಿಸದೆ ಕ್ಯಾಂಟರ್ ಚಲಾಯಿಸಿಕೊಂಡು ಪರಾರಿಯಾಗಿದ್ದಾನೆ. ಆಟೋದಲ್ಲಿದ್ದ ವಿದ್ಯಾರ್ಥಿನಿ ಗಾನವಿ (17) ಸಾವಿಗೀಡಾಗಿದ್ದಾಳೆ.
ಇನ್ನು ಆಟೋದಲ್ಲಿದ್ದ ಗಾನವಿಯ ತಾಯಿ ಹಾಗೂ ಅಜ್ಜಿಗೆ ಗಂಭೀರ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಟೋ ಚಾಲಕನಿಗೂ ಗಾಯಗಳಾಗಿವೆ. ಗಾನವಿ ತಾವರೆ ಚಟ್ನಳ್ಳಿಯ ಪೇಸ್ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಳು. ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ನಿವಾಸಿಯಾಗಿರುವ ಈಕೆ ರಜೆ ಊರಿಗೆ ತೆರಳಿದ್ದು, ಕಾರ್ಯಕ್ರಮ ಮುಗಿಸಿ ಕಾಲೇಜಿಗೆ ವಾಪಸ್ ಆಗುವಾಗ ಅಪಘಾತ ಸಂಭವಿಸಿದೆ.
ಏಕಾಏಕಿ ಬಂದ ಕ್ಯಾಂಟರ್ ಆಟೋಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿ ರಭಸಕ್ಕೆ ಆಟೋ ಸಂಪೂರ್ಣ ಜಖಂ ಆಗಿದೆ. ಹಿಂಡ್ ಆಂಡ್ ರನ್ ಮಾಡಿದ ಕ್ಯಾಂಟರ್ ಚಾಲಕನನ್ನು ಪೊಲೀಸರು ಚೀಲೂರಿನಲ್ಲಿ ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗದ ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೂರು ಮಂದಿಯನ್ನು ಕೊಂದು ಅಬ್ಬರಿಸಿದ ರೌಡಿ ಶೀಟರ್ ಕಾಲಿಗೆ ಗುಂಡೇಟು
ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದಿದ್ದ ಗ್ಯಾಂಗ್ ವಾರ್ (Shimogga Gang War) ಪ್ರಕರಣದಲ್ಲಿ ಮೂವರನ್ನು ನಡುಬೀದಿಯಲ್ಲಿ ಕೊಚ್ಚಿ ಕೊಲೆ (Triple Murder Case) ಮಾಡಿದ್ದ ಆರೋಪಿಗಳಲ್ಲಿ ಒಬ್ಬ ರೌಡಿ ಶೀಟರ್ (Rowdy Sheeter) ಕಾಲಿಗೆ ಪೊಲೀಸರು ಗುಂಡು ಹಾರಿಸಿ (Shoot out) ಬಂಧಿಸಿದ್ದಾರೆ.
ತ್ರಿಬಲ್ ಮರ್ಡರ್ ಪ್ರಕರಣದ ಆರೋಪಿ, ರೌಡಿ ಶೀಟರ್ ಶೋಹಿಬ್ ಕಾಲಿಗೆ ಪೊಲೀಸರು ಶೂಟ್ ಮಾಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯ ಬೀರನಕೆರೆ ಬಳಿ ರೌಡಿ ಶೀಟರ್ ಶೋಹಿಬ್‌ನನ್ನು ಬಂಧಿಸಲು ಹೋದಾಗ ಆತ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದ. ಪಿಎಸ್ಐ ಕುಮಾರ್ ಹಾಗೂ ಹೆಡ್ ಕಾನ್ಸ್‌ಟೇಬಲ್ ಅಣ್ಣಪ್ಪ ಮೇಲೆ ಹಲ್ಲೆಗೆ ಯತ್ನಿಸಿದ್ದ ಶೋಹಿಬ್ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಗಾಯಗೊಳಿಸಿ ಬಂಧಿಸಿದರು.
ಶಿವಮೊಗ್ಗ ನಗರದ ಲಷ್ಕರ್ ಮೊಹಲ್ಲಾ ಸರ್ಕಲ್ ಬಳಿ ಗ್ಯಾಂಗ್ ವಾರ್ ನಡೆದಿತ್ತು. ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್‌ಗಳನ್ನು ಕೊಚ್ಚಿ ಕೊಲೆ (Murder Case) ಮಾಡಲಾಗಿತ್ತು. ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಭೀಕರವಾಗಿ ದುಷ್ಕರ್ಮಿಗಳು ಕೊಲೆ ಮಾಡಿದ್ದರು. ತುಂಗಾನಗರ ಠಾಣಾ ವ್ಯಾಪ್ತಿಯ ರೌಡಿಶೀಟರ್ ಶೋಹೆಬ್ ಅಲಿಯಾಸ್ ಸೇಬು, ದೊಡ್ಡಪೇಟೆ ಠಾಣಾ ವ್ಯಾಪ್ತಿಯ ರೌಡಿಶೀಟರ್ ಗೌಸ್ ಹತ್ಯೆಯಾಗಿತ್ತು. ಚಾಕುವಿನಿಂದ ತಿವಿತಕ್ಕೊಳಗಾಗಿ ತೀವ್ರವಾಗಿ ಗಾಯಗೊಂಡಿದ್ದ ಯಾಸೀನ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ.
ಮೊದಲಿಗೆ ಮೃತ ಯುವಕರ ಕಡೆಯ ಗುಂಪು ರೌಡಿ ಶೀಟರ್ ಯಾಸೀನ್ ಕುರೇಶಿ ಎಂಬಾತನ ಮೇಲೆ ದಾಳಿ ಮಾಡಿದೆ. ಹೀಗಾಗಿ ಯಾಸೀನ್ ಕುರೇಶಿ ಗ್ಯಾಂಗ್ ಪ್ರತಿದಾಳಿ ನಡೆಸಿ, ಹಲ್ಲೆ ಮಾಡಲು ಬಂದಿದ್ದ ಶೋಹೆಬ್, ಗೌಸ್‌ನನ್ನು ಕೊಲೆ ಮಾಡಿದ್ದಾರೆ. ಬ್ಯಾಟ್, ಲಾಂಗುಗಳಿಂದ ಹೊಡೆದು, ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಘಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.
ಸ್ಯಾಂಡಲ್ ವುಡ್ ನಟ ಚೇತನ್ ಚಂದ್ರ ಮೇಲೆ ಹಲ್ಲೆ
ಬೆಂಗಳೂರು: ಸ್ಯಾಂಡಲ್ ವುಡ್ ನಟ ಚೇತನ್ ಚಂದ್ರ ಅವರ ಮೇಲೆ ಹಲ್ಲೆ ಮಾಡಿರುವ ಘಟನೆ (Chetan Chandra) ನಗರದ ಕನಕಪುರ ರಸ್ತೆಯ ಕಗ್ಗಲಿಪುರದಲ್ಲಿ ನಡೆದಿದೆ. ಪಿಯುಸಿ, ರಾಜಧಾನಿ, ಜರಾಸಂಧ, ಪ್ರಭುತ್ವ ಚಿತ್ರಗಳ ಮೂಲಕ ಖ್ಯಾತವಾಗಿರುವ ನಟನ ಮೇಲೆ ಭಾನುವಾರ ಹಲ್ಲೆ ನಡೆದಿದೆ.
ಕಾರಿನಲ್ಲಿದ್ದ ನಟ ಚೇತನ್ ಚಂದ್ರ ಅವರನ್ನು ರಕ್ತ ಬರುವಂತೆ ಥಳಿಸಲಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ನಟ ಚೇತನ್ ಚಂದ್ರ ಮಾಹಿತಿ ಹಂಚಿಕೊಂಡಿದ್ದಾರೆ. ನಟನ ಮೇಲೆ 20ಕ್ಕೂ ಹೆಚ್ಚು ಮಂದಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದ್ದು, ಈ ಪೈಕಿ ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನಟ ಚೇತನ್ ಚಂದ್ರ ಅವರಿಗೆ ಕಗ್ಗಲಿಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.
ಇದನ್ನೂ ಓದಿ | Ram Charan: ಚುನಾವಣಾ ಪ್ರಚಾರದ ವೇಳೆ ರಾಮ್ ಚರಣ್ ಶರ್ಟ್ ಹರಿದ ಫ್ಯಾನ್ಸ್: ಅಲ್ಲು ಸುತ್ತ ಜನವೋ ಜನ!
ಭಾನುವಾರ ಅಮ್ಮಂದಿರ ದಿನವಾಗಿದ್ದರಿಂದ ನಟ ಚೇತನ್ ಚಂದ್ರ ಅವರು ದೇವಸ್ಥಾನಕ್ಕೆ ಹೋಗಿ ಬರುವಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಬೈಕ್‌ನಲ್ಲಿ ಬಂದ ಕೆಲ ಕಿಡಿಗೇಡಿಗಳು ಕಾರಿಗೆ ಅಡ್ಡ ಹಾಕಿ, ದುಡ್ಡು ಕೀಳಲು ಮುಂದಾಗಿದ್ದಾರೆ. ಹಣ ಕೊಡೋದಿಲ್ಲ ಎಂದಿದ್ದಕ್ಕೆ ಗಲಾಟೆ ಮಾಡಿ, ನಟ ಚೇತನ್ ಚಂದ್ರ ಅವರ ಮುಖಕ್ಕೆ ರಕ್ತ ಬರುವ ಹಾಗೆ ಕಿಡಿಗೇಡಿಗಳು ಹೊಡೆದಿದ್ದಾರೆ.
ಇದನ್ನೂ ಓದಿ: Murder Case: ಶಿವಮೊಗ್ಗದಲ್ಲಿ ಗ್ಯಾಂಗ್ ವಾರ್; ಹಾಡಹಗಲೇ ಇಬ್ಬರು ರೌಡಿಶೀಟರ್‌ಗಳ ಭೀಕರ ಹತ್ಯೆ