HD Revanna Case: ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಕೇಸ್‌; ರೇವಣ್ಣ ವಿರುದ್ಧ ಸಂತ್ರಸ್ತೆ ಹೇಳಿಕೆಯಲ್ಲಿ ಭಾರಿ ಗೊಂದಲ! - Vistara News

ಕ್ರೈಂ

HD Revanna Case: ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಕೇಸ್‌; ರೇವಣ್ಣ ವಿರುದ್ಧ ಸಂತ್ರಸ್ತೆ ಹೇಳಿಕೆಯಲ್ಲಿ ಭಾರಿ ಗೊಂದಲ!

HD Revanna Case: ಹೊಳೆನರಸೀಪುರದಲ್ಲಿ ಎಚ್.ಡಿ. ರೇವಣ್ಣ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ರೇವಣ್ಣ ಅವರಿಗೆ ಜಾಮೀನು ನೀಡುವ ಬಗ್ಗೆ ವಾದ ಮಂಡಿಸಿದ ವಕೀಲ ಸಿ.ವಿ. ನಾಗೇಶ್‌, ದೂರುದಾರೆಯ ಹೇಳಿಕೆ ಬಗ್ಗೆ ಕೋರ್ಟ್‌ ಗಮನಕ್ಕೆ ತಂದರು. ಈ ಹೇಳಿಕೆಯು ಸಂಪೂರ್ಣ ಗೊಂದಲಮಯವಾಗಿದೆ. ಬೇಕೆಂದೇ ನಮ್ಮ ಕಕ್ಷಿದಾರರನ್ನು ಇಲ್ಲಿ ಫಿಟ್‌ ಮಾಡಲಾಗಿದೆ. ಇದೊಂದು ಸುಳ್ಳು ಕೇಸ್‌ ಎಂದು ವಾದಿಸಿದರು. ಹೊಳೆನರಸೀಪುರ ಪೊಲೀಸ್ ಠಾಣೆ ಸಬ್ ಇನ್ಸ್‌ಪೆಕ್ಟರ್ ಒಬ್ಬರು ಬೆಂಗಳೂರಿಗೆ ಬಂದು ದೂರುದಾರರಿಂದ ತಮಗೆ ನೀಡಿದಂತೆ ದೂರು ಬರೆಸಿಕೊಂಡು ಹೋಗಿ ಕೇಸ್ ದಾಖಲಿಸಿದ್ದಾರೆ ಎಂಬುದನ್ನು ಗಮನಕ್ಕೆ ತಂದರು. ಅಲ್ಲದೆ, ಪೊಲೀಸರು ದಾಖಲು ಮಾಡಿಕೊಂಡಿರುವ ಹೇಳಿಕೆಯನ್ನು ಕೋರ್ಟ್‌ ಮುಂದೆ ಓದಿದರು.

VISTARANEWS.COM


on

Holenarasipura sexual assault case lot of confusion in the victim statement against HD Revanna Case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ (Physical Abuse) ಪ್ರಕರಣದಲ್ಲಿ ಮಾಜಿ ಸಚಿವ ಎಚ್‌.ಡಿ ರೇವಣ್ಣ (HD Revanna Case) ಅವರಿಗೆ ಜಾಮೀನು (Bail) ನೀಡಲಾಗಿದೆ. ಗುರುವಾರ ಮಧ್ಯಂತರ ಜಾಮೀನು ನೀಡಿ ಶುಕ್ರವಾರಕ್ಕೆ (ಮೇ 17) ವಿಚಾರಣೆಯನ್ನು ಮುಂದೂಡಲಾಗಿತ್ತು. ಶುಕ್ರವಾರ ವಾದ – ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶರು ಸೋಮವಾರಕ್ಕೆ (ಮೇ 20) ವಿಚಾರಣೆಯನ್ನು ಮುಂದೂಡಿದ್ದಾರೆ. ಈ ಹಿನ್ನೆಲೆಯಲ್ಲಿ ಎಚ್.ಡಿ. ರೇವಣ್ಣ ಅವರಿಗೆ ಮಧ್ಯಂತರ ರಿಲೀಫ್‌ ಸಿಕ್ಕಿದೆಯಾದರೂ ಜೈಲಾ? ಬೇಲಾ? ಎಂಬುದು ಸೋಮವಾರ ಪ್ರಕಟವಾಗುವ ತೀರ್ಪಿನ ಮೇಲೆ ನಿಂತಿದೆ. ಇದೇ ವೇಳೆ ರೇವಣ್ಣ ಪರ ವಕೀಲರು ಪ್ರಕರಣದ ದೋಷಗಳನ್ನು ಕೋರ್ಟ್‌ ಮುಂದೆ ಎತ್ತಿ ತೋರಿಸಿದರು. ಪೊಲೀಸರು ದಾಖಲಿಸಿಕೊಂಡಿರುವ ದೂರಿನಲ್ಲಿ ಉಲ್ಲೇಖವಾಗಿರುವ ಮಹಿಳೆಯ ಹೇಳಿಕೆಯಲ್ಲಿನ ಗೊಂದಲದ ಬಗ್ಗೆ ಗಮನ ಸೆಳೆದಿದ್ದಾರೆ.

ಹೊಳೆನರಸೀಪುರದಲ್ಲಿ ಎಚ್.ಡಿ. ರೇವಣ್ಣ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ರೇವಣ್ಣ ಅವರಿಗೆ ಜಾಮೀನು ನೀಡುವ ಬಗ್ಗೆ ವಾದ ಮಂಡಿಸಿದ ವಕೀಲ ಸಿ.ವಿ. ನಾಗೇಶ್‌, ದೂರುದಾರೆಯ ಹೇಳಿಕೆ ಬಗ್ಗೆ ಕೋರ್ಟ್‌ ಗಮನಕ್ಕೆ ತಂದರು. ಈ ಹೇಳಿಕೆಯು ಸಂಪೂರ್ಣ ಗೊಂದಲಮಯವಾಗಿದೆ. ಬೇಕೆಂದೇ ನಮ್ಮ ಕಕ್ಷಿದಾರರನ್ನು ಇಲ್ಲಿ ಫಿಟ್‌ ಮಾಡಲಾಗಿದೆ. ಇದೊಂದು ಸುಳ್ಳು ಕೇಸ್‌ ಎಂದು ವಾದಿಸಿದರು.

ಕೋರ್ಟ್‌ನಲ್ಲಿ ವಾದ ಮಂಡಿಸಿದ ಸಿ.ವಿ. ನಾಗೇಶ್‌, ದೂರುದಾರರು ಹೊಳೆನರಸೀಪುರ ಪೊಲೀಸ್ ಠಾಣೆಗೆ ದೂರು ನೀಡಿಲ್ಲ. ಹೊಳೆನರಸೀಪುರ ಪೊಲೀಸ್ ಠಾಣೆ ಸಬ್ ಇನ್ಸ್‌ಪೆಕ್ಟರ್ ಒಬ್ಬರು ಬೆಂಗಳೂರಿಗೆ ಬಂದು ದೂರುದಾರರಿಂದ ತಮಗೆ ನೀಡಿದಂತೆ ದೂರು ಬರೆಸಿಕೊಂಡು ಹೋಗಿ ಕೇಸ್ ದಾಖಲಿಸಿದ್ದಾರೆ ಎಂಬುದನ್ನು ಗಮನಕ್ಕೆ ತಂದರು. ಅಲ್ಲದೆ, ಪೊಲೀಸರು ದಾಖಲು ಮಾಡಿಕೊಂಡಿರುವ ಹೇಳಿಕೆಯನ್ನು ಕೋರ್ಟ್‌ ಮುಂದೆ ಓದಿದರು.

ಇದು ಸಂತ್ರಸ್ತೆ ನೀಡಿದ ದೂರೇ ಅಲ್ಲ

ಪ್ರಜ್ವಲ್ ರೇವಣ್ಣ ಮೇಲೆ‌ ಲೈಂಗಿಕ ದೌರ್ಜನ್ಯವೆಸಗಿರುವ ಬಗ್ಗೆ ಏಪ್ರಿಲ್ 24ರ ರಾತ್ರಿ‌ 11 ಗಂಟೆಗೆ ಬೆಂಗಳೂರಿನಲ್ಲಿರುವ ಸಂತ್ರಸ್ತೆಯೊಬ್ಬರು ದೂರು ನೀಡಲು‌ ಬಂದಿದ್ದರು. ಅವರು ಮಾನಸಿಕವಾಗಿ ಕುಗ್ಗಿ ಹೋಗಿದ್ದರು. ಆ ಬಗ್ಗೆ ಹಿರಿಯ ಅಧಿಕಾರಿಗಳಿಗೆ ವಿಷಯ ತಿಳಿಸಿ, ಮಹಿಳಾ ಸಿಬ್ಬಂದಿಯೊಂದಿಗೆ ಸಂತ್ರಸ್ತೆ ಇರುವ ಸ್ಥಳಕ್ಕೆ ಹೋಗಿ ದೂರು ಪಡೆದು‌ ಕೇಸ್ ದಾಖಲಿಸಿದ್ದಾಗಿ ಸ್ಟೇಷನ್ ಬುಕ್‌ನಲ್ಲಿ‌ ಉಲ್ಲೇಖಿಸಿದ್ದಾರೆ. ಇಲ್ಲಿ ಸ್ಪಷ್ಟವಾಗಿ ಗೊತ್ತಾಗುವುದೇನೆಂದರೆ ಈ ದೂರು ರಿಜಿಸ್ಟರ್ ಆಗಿರುವುದಲ್ಲ‌. ದೂರನ್ನು ತಿದ್ದುಪಡಿ ಮಾಡಿ ತಮಗೆ ಬೇಕಾದ ಹಾಗೆ ಮಾಡಿಕೊಂಡಿದ್ದಾರೆ. ರೇವಣ್ಣ ವಿರುದ್ಧ ದೂರುದಾರೆ ನೀಡಿದ ದೂರನ್ನು ಮಹಿಳಾ ಅಧಿಕಾರಿ ದಾಖಲಿಸಿಕೊಳ್ಳಲ್ಲಿಲ್ಲ. ಆಕೆಯ ಹೇಳಿಕೆಯನ್ನು ಲಿಖಿತ ರೂಪದಲ್ಲಿ ದಾಖಲಿಸಿಕೊಂಡಿಲ್ಲ. ಇದು ಸಂತ್ರಸ್ತೆ ನೀಡಿದ ದೂರೇ ಅಲ್ಲ. ಬೇಕಂತಲೇ ಸೃಷ್ಟಿಯಾಗಿರುವ ಕೇಸ್ ಆಗಿದೆ. ಆಕೆಗೆ ಲೈಂಗಿಕ ದೌರ್ಜನ್ಯ ಅಂದರೇನು ಅಂತ ಗೊತ್ತೇ ಇರುವುದಿಲ್ಲ ಎಂದು ಸಿ.ವಿ. ನಾಗೇಶ್ ವಾದಿಸಿದರು.

ಸಂತ್ರಸ್ತೆ ಹೇಳಿಕೆಯಲ್ಲಿ ಭಾರಿ ಗೊಂದಲ!

ಲೈಂಗಿಕ ದೌರ್ಜನ್ಯವೇ ಬೇರೆ, ಅತ್ಯಾಚಾರವೇ ಬೇರೆ. ಸಂತ್ರಸ್ತೆ ನೀಡಿದ ದೂರಿನ ಅಂಶಗಳನ್ನು ಓದಿ ಹೇಳಿದ ಸಿ.ವಿ. ನಾಗೇಶ್‌, ಸಂತ್ರಸ್ತೆಯ ಪತಿ ಆಕೆಯ ಮೇಲೆ ಪಟ್ಟ ಅನುಮಾನವನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆಕೆ ನನ್ನ ಮೇಲೆ ಆ ರೀತಿ ಕೃತ್ಯ ನಡೆದಿಲ್ಲ ಎಂದು ಹೇಳಿದ್ದಾಳೆ. ನಾಲ್ಕೈದು ವರ್ಷಗಳ ಹಿಂದೆ ನಡೆದಿರುವ ಕೃತ್ಯದ ಬಗ್ಗೆ ಆರೋಪಿಸಿದ್ದಾರೆ. ಒಂದು ಕಡೆ ರೇವಣ್ಣ ಹಾಗೂ ಪ್ರಜ್ವಲ್‌ ರೇವಣ್ಣ ನೀಡಿದ್ದ ಲೈಂಗಿಕ ದೌರ್ಜನ್ಯದ ಬಗ್ಗೆ ಹೇಳುತ್ತಾರೆ. ಮತ್ತೊಂದೆಡೆ ಸಂತ್ರಸ್ತೆ ಗಂಡ ಬೇರೆ ಹೆಣ್ಣು‌ ಮಕ್ಕಳ ವಿಡಿಯೊ ಬಗ್ಗೆ ಕೇಳಿದಾಗ ನನ್ನ ಮೇಲೆ ಆ ರೀತಿ ಆಗಿಲ್ಲ‌ ಅಂತ ಹೇಳಿದ್ದಾಳೆ. ಮತ್ತೊಂದೆಡೆ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಕಿರುಕುಳ ತಾಳಲಾರದೆ ಮನೆ ಕೆಲಸ ಬಿಟ್ಟು ಬಂದೆ ಎಂದು ಹೇಳುತ್ತಾಳೆ. ತನಿಖಾಧಿಕಾರಿಗಳು ಸಂತ್ರಸ್ತೆ ಹೇಳಿಕೆ ಆಧಾರದ ಮೇಲೆ 376 ದಾಖಲಿಸಲು ಅನುಮತಿ ಕೇಳಿದ್ದಾರೆ. ಯಾರ ಮೇಲೆ ಸೆಕ್ಷನ್‌ 376 ದಾಖಲಿಸುತ್ತಾರೆ ಎಂದು ಸಿ.ವಿ. ನಾಗೇಶ್ ಪ್ರಶ್ನೆ ಮಾಡಿದರು.

ದೂರುದಾರರು ಲೈಂಗಿಕ ದೌರ್ಜನ್ಯ ತಾಳಲಾರದೆ 4 ವರ್ಷದ ಹಿಂದೆ ಮನೆ ಕೆಲಸ ಬಿಟ್ಟೆ ಎಂದು ಹೇಳುತ್ತಾರೆ. ಮನೆ ಬಿಟ್ಟು ಬಂದಿದ್ದಕ್ಕೆ ಪೊಲೀಸರನ್ನು ಕಳುಹಿಸಿ ಆಶ್ರಯ ಮನೆ ಖಾಲಿ ಮಾಡಿಸಿದರು ಎಂದು ಆರೋಪಿಸುತ್ತಾರೆ. ತಮ್ಮ ಒಡವೆ, ಬಟ್ಟೆ ಎಲ್ಲವನ್ನೂ ಕಿತ್ತುಕೊಂಡರು ಎಂದು ಹೇಳುತ್ತಾರೆ. ಹಾಗಾದರೆ ನಾಲ್ಕೂವರೆ ವರ್ಷದ ಹಿಂದೆ ಅವರ ಮನೆಯಲ್ಲಿದ್ದಾಗ ನಡೆದ ಅತ್ಯಾಚಾರ, ಲೈಂಗಿಕ ದೌರ್ಜನ್ಯವು ಅವರಿಗೆ ಗೊತ್ತಾಗಲಿಲ್ಲವೇ? ಮನೆ ಖಾಲಿ ಮಾಡಿಸಿದ ಮೇಲೆ ಯಾಕೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ ನಡೆದಿದೆ ಅಂತ ಗೊತ್ತಾಯ್ತಾ ಎಂದು ಸಿ.ವಿ. ನಾಗೇಶ್ ಪ್ರಶ್ನೆ ಮಾಡಿದರು.

ವಾದ ಆರಂಭಿಸಿ ಜಯ್ನಾ ಕೊಠಾರಿ

ಇದಕ್ಕೂ ಮೊದಲು 42ನೇ ಎಸಿಎಂಎಂ ಕೋರ್ಟ್‌ನಲ್ಲಿ ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ವಿಚಾರಣೆ ಆರಂಭವಾಯಿತು. ಈ ವೇಳೆ ಮಾಜಿ‌ ಸಚಿವ ಎಚ್.ಡಿ. ರೇವಣ್ಣ ಅವರು ಬರಿಗಾಲಿನಲ್ಲಿಯೇ ಕೋರ್ಟ್‌ಗೆ ಹಾಜರಾದರು. ಎಸ್‌ಪಿಪಿ ಜಯ್ನಾ ಕೊಠಾರಿ ವಾದ ಮಂಡನೆಗೆ ಮುಂಚೆ ಇನ್ ಕ್ಯಾಮೆರಾ ವಿಚಾರಣೆ ನಡೆಸುವಂತೆ ಮನವಿ ಮಾಡಿದರು. ಅದಕ್ಕೆ ನ್ಯಾಯಾಧೀಶರು, ಮೊದಲು ಅರ್ಜಿ ವಿಚಾರಣೆಯ ಅರ್ಹತೆ ಬಗ್ಗೆ ವಾದ ಮಂಡಿಸಿ. ನಂತರ ಇನ್ ಕ್ಯಾಮೆರಾ ವಿಚಾರಣೆ ನಡೆಸೋಣ ಎಂದು ಹೇಳಿದರು.

ವಾದ ಶುರು ಮಾಡಿದ ಎಸ್ಐಟಿ ಪರ ಎಸ್‌ಪಿಪಿ ಜಯ್ನಾ ಕೊಠಾರಿ, ಹೊಳೆನರಸೀಪುರ ಪ್ರಕರಣದಲ್ಲಿ ಐಪಿಸಿ 376 ಸೆಕ್ಷನ್ ಹಾಕಲಾಗಿದ್ದು, ಇದು ಅತ್ಯಾಚಾರ ಆರೋಪವಾಗಿದೆ. ಸಂತ್ರಸ್ತೆಯ ವಿಚಾರಣೆ ಬಳಿಕ ಅತ್ಯಾಚಾರ ಆರೋಪ ದಾಖಲಾಗಿದೆ. ಸಂತ್ರಸ್ತೆ ಹೇಳಿಕೆಯನ್ನು ಅವರು ಕೋರ್ಟ್‌ನಲ್ಲಿ ಓದಿ ಹೇಳಿದರು. ಮೊದಲಿಗೆ ಈ ಕೇಸಿನಲ್ಲಿ ಸೆಕ್ಷನ್ 354 ಮಾತ್ರ ಇತ್ತು. ವಿಚಾರಣೆ ಬಳಿಕ 376 ಸೇರ್ಪಡೆಯಾಗಿದೆ ಎಂದು ಸಂತ್ರಸ್ತೆ ದೂರಿನಲ್ಲಿ ಆರೋಪಿಸಿರುವ ಅಂಶಗಳನ್ನು ಉಲ್ಲೇಖಿಸಿ ಕೋರ್ಟ್‌ ಗಮನಕ್ಕೆ ತಂದರು.

ಆಶ್ರಯ ಮನೆಯೂ ವಾಪಸ್‌

ಎಚ್.ಡಿ. ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯದ ಬಗ್ಗೆ ಅಂಶಗಳ ಕೋರ್ಟ್‌ ಮುಂದೆ ಓದಿದ ಎಸ್‌ಪಿಪಿ ಜಯ್ನಾ ಕೊಠಾರಿ, ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಅವರ ಕಿರುಕುಳ ತಾಳಲಾರದೆ ಮನೆ ಬಿಟ್ಟು ಬಂದಿರುವುದಾಗಿ ಸಂತ್ರಸ್ತೆ ಹೇಳಿಕೆ ನೀಡಿದ್ದಾರೆ. ಕೆಲಸ ಬಿಟ್ಟು ಬಂದಿದಕ್ಕೆ ಮೊದಲು‌ ನೀಡಿದ್ದ ಆಶ್ರಯ ಮನೆಯನ್ನು ಬಲವಂತವಾಗಿ ವಾಪಸ್‌ ಪಡೆದಿದ್ದಾರೆ. ಆ ಬಗ್ಗೆ ಜಿಲ್ಲಾಧಿಕಾರಿಗೆ ದೂರು ನೀಡಿದರೂ ನ್ಯಾಯ ಸಿಕ್ಕಿಲ್ಲ. ಸಂತ್ರಸ್ತೆಯ ಆರೋಪಗಳನ್ನು ಕೋರ್ಟ್‌ ಮುಂದೆ ಹೇಳಿದರು.

ಹೀಗಾಗಿ ಸಂತ್ರಸ್ತೆ ಹೇಳಿಕೆ ಮೇಲೆ ಸೆಕ್ಷನ್ 376 ಅನ್ನು ಸೇರಿಸಲಾಗಿದೆ ಎಂದು ವಾದಿಸಿದ ಜಯ್ನಾ ಕೊಠಾರಿ, ನಾನ್ ಬೇಲಬಲ್ ಸೆಕ್ಷನ್ ಸೇರಿಸಿರುವುದರಿಂದ ಸೆಷನ್ಸ್ ಕೋರ್ಟ್‌ನಲ್ಲಿ ವಿಚಾರಣೆ ನಡೆಯಬೇಕು. ಇದರಿಂದ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು. ತನಿಖಾಧಿಕಾರಿಯ ಮನವಿ ನಂತರ ಸೆಕ್ಷನ್‌ 376 ಸೇರ್ಪಡೆಗೊಂಡಿದೆ. ಈ ಮೊದಲಿಗೆ ಈ ಕೇಸಿನಲ್ಲಿ ಸೆಕ್ಷನ್‌ 354 A, D ಮಾತ್ರವಿತ್ತು. ಪ್ರಜ್ಬಲ್ ರೇವಣ್ಣ ಹಾಗೂ ರೇವಣ್ಣ ವಿರುದ್ಧ ಇರುವ ಪ್ರಕರಣವನ್ನು ವಿಭಜಿಸಬಾರದು. ಇಬ್ಬರಿಂದಲೂ ಲೈಂಗಿಕ ದೌರ್ಜನ್ಯ ನಡೆದಿದೆ. ಇದರಿಂದ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಎಂದು ಇಂತಹ ಪ್ರಕರಣಗಳಲ್ಲಿ ಜಾಮೀನು ನಿರಾಕರಿಸಿರುವ ಸುಪ್ರೀಂ ಕೋರ್ಟ್‌ನ ತೀರ್ಪುಗಳನ್ನು ಉಲ್ಲೇಖಿಸಿ ವಾದಿಸಿದರು.

ದೂರುದಾರೆಗೆ ಇಬ್ಬರಿಂದಲೂ ಕಿರುಕುಳ

ಎಸ್ಐಟಿ ತಂಡದಿಂದ ತನಿಖೆ ಪ್ರಗತಿಯಲ್ಲಿದೆ. ಈ‌ ಸಂದರ್ಭದಲ್ಲಿ ಆರೋಪಿಗೆ ಜಾಮೀನು ನೀಡುವುದರಿಂದ ಸಾಕ್ಷಿಗಳ ಮೇಲೆ ಪ್ರಭಾವ ಬೀರುತ್ತದೆ. ಬೇಲಬಲ್ ಸೆಕ್ಷನ್ ಇದ್ದಾಗ ಮಾತ್ರ ಸೆಕ್ಷನ್‌ 436 ಪ್ರಕಾರ ಜಾಮೀನು ನೀಡಬಹುದು. ಆದರೆ, ಈ ಪ್ರಕರಣದಲ್ಲಿ ನಾನ್ ಬೇಲಬಲ್ ಸೆಕ್ಷನ್ 436 ಅಡಿಯಲ್ಲಿ ಜಾಮೀನು ನೀಡುವಂತಿಲ್ಲ. ಅಲ್ಲದೆ, ನಾನ್ ಬೇಲಬಲ್ ಸೆಕ್ಷನ್ ಇರುವುದಿರಿಂದ ಇದರ ವಿಚಾರಣೆಯು ಸೆಷನ್ಸ್‌ ಕೋರ್ಟ್‌ನಲ್ಲಿರುವುದರಿಂದ ಅಲ್ಲಿ ವಿಚಾರಣೆ ನಡೆಯಬೇಕು. ದೂರುದಾರರಿಗೆ ಮನೆಯಲ್ಲಿ ಇಬ್ಬರಿಂದಲೂ (ರೇವಣ್ಣ, ಪ್ರಜ್ವಲ್) ಕಿರುಕುಳ ನಡೆದಿದೆ. ಇದನ್ನೆಲ್ಲ ಮುಕ್ತ ನ್ಯಾಯಾಲಯದಲ್ಲಿ ವಿವರಿಸಲು ಆಗದು. ಇದು ಇನ್ ಕ್ಯಾಮೆರಾ ವಿಚಾರಣೆ ನಡೆಯಬೇಕು ಎಂದು ಜಯ್ನಾ ಕೊಠಾರಿ ವಾದ ಮಂಡಿಸಿದರು.

ಜಾಮೀನು ಅರ್ಜಿ ವಿಚಾರಣೆ ವ್ಯಾಪ್ತಿ ಈ ಕೋರ್ಟ್‌ಗಿಲ್ಲ: ಜಯ್ನಾ ಕೊಠಾರಿ

ಇಲ್ಲಿ ತಂದೆ – ಮಗ ಇಬ್ಬರಿಂದಲೂ ಲೈಂಗಿಕ ದೌರ್ಜನ್ಯ ನಡೆದಿದೆ. ರೇವಣ್ಣ ಅವರಿಂದ ಇಷ್ಟೇ ಪ್ರಮಾಣದಲ್ಲಿ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಹೇಳಲು ಸಾಧ್ಯವಿಲ್ಲ. ಅದೆಲ್ಲವೂ ತನಿಖೆಯ ನಂತರವಷ್ಟೇ ಗೊತ್ತಾಗಬೇಕಿದೆ. ಈಗಲೇ ಶಾಸಕ ರೇವಣ್ಣ ಮೇಲೆ ಅತ್ಯಾಚಾರ ಆರೋಪ ಇಲ್ಲವೆಂದು ಹೇಳಲು ಸಾಧ್ಯವಾಗುವುದಿಲ್ಲ. ಒಮ್ಮೆ ಅತ್ಯಾಚಾರ ಆರೋಪ ದಾಖಲಾದರೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ವ್ಯಾಪ್ತಿಗೆ ಬರುವುದಿಲ್ಲ. ಹೀಗಾಗಿ ಜಾಮೀನು ಅರ್ಜಿ ವಿಚಾರಣೆ ನಡೆಸಲು ಈ ಕೋರ್ಟ್‌ಗೆ ವ್ಯಾಪ್ತಿ ಇಲ್ಲ. ಸೆಕ್ಷನ್‌ 376 ಅಪರಾಧಕ್ಕೆ ಜೀವಾವಧಿ ಶಿಕ್ಷೆ ಇದೆ. ಇದು ಜಾಮೀನುರಹಿತ ಅಪರಾಧವಾಗಿದೆ. ಹೀಗಿದ್ದಾಗ ಜಾಮೀನು ಅರ್ಜಿ ಊರ್ಜಿತವಲ್ಲ. ಇಬ್ಬರ ವಿರುದ್ಧ ತನಿಖೆ ಇನ್ನೂ ನಡೆಯುತ್ತಿದೆ. ಆರೋಪ ಪಟ್ಟಿ ದಾಖಲಾದ ನಂತರವಷ್ಟೇ ಯಾರ ಮೇಲೆ ಏನು ಆರೋಪ‌ ಎಂದು ತಿಳಿಯಲಿದೆ. ಸೆಕ್ಷನ್‌ 41ಎ ಅಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದರೂ ಬಂದಿಲ್ಲ. ಇದನ್ನು ಜಾಮೀನು ಅರ್ಜಿಯ ವಿಚಾರಣೆ ವೇಳೆ ಹೇಳುತ್ತೇನೆ. ಈಗ ಜಾಮೀನು ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಬಾರದೆಂಬ ವಿಚಾರಕ್ಕಷ್ಟೇ ವಾದಿಸುತ್ತಿದ್ದೇನೆ ಎಂದು ಎಸ್‌ಪಿಪಿ ಜಯ್ನಾ ಕೊಠಾರಿ ವಾದ ಮಂಡಿಸಿದರು.

ಬಳಿಕ ಮತ್ತೊಬ್ಬ ಎಸ್‌ಪಿಪಿ ಅಶೋಕ್ ನಾಯಕ್ ವಾದ ಮಂಡಿಸಿ, ಜನಪ್ರತಿನಿಧಿಗಳಿಗೆ ಸಂಬಂಧಿಸಿದಂತೆ ಪ್ರಕರಣಗಳು ಇಲ್ಲಿಗೆ ಬರುತ್ತವೆ. ಜಾಮೀನು ಅಂದರೆ ಸೆಷನ್ ನ್ಯಾಯಾಲಯದ ಕೋರ್ಟ್ 82ಕ್ಕೆ ಬರುತ್ತದೆ ಎಂದು ಹೇಳುತ್ತಿದ್ದಂತೆ ಮಧ್ಯಪ್ರವೇಶಿಸಿದ ನ್ಯಾಯಾಧೀಶರು, ಇದು ಪೋಕ್ಸೋ ಕೇಸ್‌ ಆಗಿದ್ದರೆ ನೀವು ಸೆಷನ್ ಕೋರ್ಟ್‌ಗೆ ಹೋಗಿ. ಇದು ಇಲ್ಲಿ ನಿರ್ವಹಿಸಲಾಗದಿದ್ದರೆ ಅಲ್ಲಿಗೆ ಕಳಿಸಲಾಗುತ್ತದೆ ಎಂದು ಹೇಳಿದರು.

ಮತ್ತೆ ವಾದ ಮುಂದುವರಿಸಿದ ಅಶೋಕ್‌ ನಾಯಕ್‌, ಸಂತ್ರಸ್ತೆ ಮೇಲೆ ತಂದೆ ಮತ್ತು ಪುತ್ರ ಇಬ್ಬರೂ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಒಬ್ಬಳ ಮೇಲೆ ಪದೇ ಪದೆ ದೌರ್ಜನ್ಯವೆಸಗಿದ್ದಾರೆ. ಕೊಲೆ ಪ್ರಕರಣದಲ್ಲಿ 302 ಸೆಕ್ಷನ್ ಜತೆಗೆ ಇತರೆ ಬೇಲಬಲ್ ಸೆಕ್ಷನ್‌ಗಳನ್ನ ಹಾಕಿರುತ್ತಾರೆ. ಹಾಗಂತ ಆರೋಪಿಗಳನ್ನು ಹಾಗೂ ಕೇಸ್‌ ಅನ್ನು ವಿಭಜನೆ ಮಾಡಲು ಆಗುತ್ತದೆಯೇ? ಅದೇ ರೀತಿ ಈ ಪ್ರಕರಣದಲ್ಲಿ ತಂದೆ, ಮಗ ಇಬ್ಬರೂ ಒಂದೇ ಅಪರಾಧ ಎಸಗಿದ್ದಾರೆ. ಒಂದೇ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಎರಡನೇ ಆರೋಪಿಯನ್ನು ಮೊದಲನೇ ಆರೋಪಿಯೇ ರಕ್ಷಣೆ ಮಾಡುತ್ತಿದ್ದಾರೆ. ದೇಶ ಬಿಟ್ಟು ಹೋಗಲು ಮೊದಲ ಆರೋಪಿಯೇ ಸಹಾಯ ಮಾಡಿದ್ದಾರೆ ಎಂದು ಹೇಳಿದರು.

ಪ್ರತಿ ವಾದ ಮಂಡಿಸಿದ ಸಿ.ವಿ. ನಾಗೇಶ್‌

ಈ ವೇಳೆ ರೇವಣ್ಣ ಪರ ವಕೀಲ‌ ಸಿ.ವಿ. ನಾಗೇಶ್ ಪ್ರತಿವಾದ ಆರಂಭಿಸಿ, ನಮ್ಮ ಕಕ್ಷಿದಾರರ ವಿರುದ್ಧ ದಾಖಲಾಗಿರುವ ಪ್ರಕರಣವು ಬೇಲಬಲ್ ಸೆಕ್ಷನ್‌ಗಳಾಗಿವೆ. ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಕೇಸ್‌ನಲ್ಲಿ ಜಾಮೀನು ನೀಡಬೇಕಾದ ಸೆಕ್ಷನ್‌ಗಳನ್ನು ಹಾಕಲಾಗಿದೆ. ಎಫ್ಐಆರ್ ದಾಖಲಾದ ದಿನಾಂಕ, ಅದರಲ್ಲಿರುವ ಸೆಕ್ಷನ್‌ಗಳು ಏನು ಎಂಬುದನ್ನು ಇದೇ ವೇಳೆ ಕೋರ್ಟ್‌ ಗಮನಕ್ಕೆ ತಂದರು. ಯಾವುದೇ ವ್ಯಕ್ತಿಯ ವಿರುದ್ಧ ದೂರು ದಾಖಲಾದರೆ, ಆತ ಬಂಧನಕ್ಕೊಳಗಾಗುವ ಮುನ್ನ ಶರಣಾದರೆ ಜಾಮೀನು ನೀಡಬಹುದು. ಇದರ ಗ್ರಾವಿಟಿಯೇ 436 ಸಿಆರ್‌ಪಿಸಿ ಆಗಿದೆ. ಇಲ್ಲಿ ಸಿಆರ್‌ಪಿಸಿ 439 ಅಲ್ಲ. ರೇವಣ್ಣ ವಿರುದ್ಧ ಈಗ ಆರೋಪ ಕೇಳಿಬಂದಿದೆ. ಆದರೆ, ಈ ಆರೋಪವು ದೂರು ದಾಖಲಾದ ದಿನ ಅಥವಾ ವಾರದ ಹಿಂದೆ ಇಲ್ಲವೇ ವರ್ಷದ ಹಿಂದೆ ನಡೆದಿಲ್ಲ. ಕೃತ್ಯ ನಡೆದು ಹಲವು ವರ್ಷಗಳೇ ಕಳೆದು ಹೋಗಿವೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ಮಾಹಿತಿ ನೀಡಿದರು.

ಗರ್ಭಗುಡಿಯಲ್ಲಿ ದೇವರು ಕುಳಿತಂತೆ ಕುಳಿತಿದ್ದೆ!

ಈ ವೇಳೆ ಮಧ್ಯ ಪ್ರವೇಶ ಮಾಡಿದ ಎಸ್‌ಪಿಪಿ ಜಯ್ನಾ ಕೊಠಾರಿ ಆಕ್ಷೇಪ ವ್ಯಕ್ತಪಡಿಸಲು ಮುಂದಾದರು. ಅದಕ್ಕೆ ಸಿಟ್ಟಾದ ಸಿ.ವಿ. ನಾಗೇಶ್, “ನೀವು ವಾದ ಮಾಡಬೇಕಾದರೆ ನಾನು ಗರ್ಭಗುಡಿಯಲ್ಲಿ‌ ದೇವರು ಕುಳಿತ ಹಾಗೆ ಕುಳಿತುಕೊಂಡಿದ್ದೆ. ಏನಾದರೂ ತೊಂದರೆ ಮಾಡಿದ್ದೇನಾ? ಎಂದು ಪ್ರಶ್ನಿಸಿ ತಮ್ಮ ವಾದವನ್ನು ಮುಂದುವರಿಸಿದರು.

ಇದು ಅತ್ಯಾಚಾರ ಪ್ರಕರಣ ಅಲ್ಲ

ಸೆಷನ್ಸ್ ಕೋರ್ಟ್‌ನಲ್ಲಿ ನಡೆದ ವಿಚಾರಣೆಯಲ್ಲಿ 376 ಸೆಕ್ಷನ್ ಇರಲಿಲ್ಲ. ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ಬಂದಾಗ ಈ ಸೆಕ್ಷನ್‌ ಸೇರ್ಪಡೆಯಾಗಿದೆ. ಅವತ್ತು ನಿರೀಕ್ಷಣಾ ಜಾಮೀನಿಗೆ ಆಕ್ಷೇಪಣೆ ಸಲ್ಲಿಸಿದ್ದರು. ಇವರು ಮೊದಲೇ 376 ಇದೆ ಎಂದು ಹೇಳಿದ್ದರೆ, ನಾವು ನಿರೀಕ್ಷಣಾ ಜಾಮೀನು ಅರ್ಜಿಯನ್ನೇ ವಾಪಸ್‌ ಪಡೆಯುತ್ತಿರಲಿಲ್ಲ. ರೇವಣ್ಣ ವಿರುದ್ಧ 376 ಇದೆ ಅಂತ ಹೇಳಲಿ. ಆಗ ನಾವು ಕಾನೂನು ಹೋರಾಟಕ್ಕೆ ಸಿದ್ಧರಿದ್ದೇವೆ. ನಮ್ಮ ಕಕ್ಷಿದಾರರ ವಿರುದ್ಧ ದಾಖಲಾಗಿರೋದು ಕೇವಲ ಲೈಂಗಿಕ ದೌರ್ಜನ್ಯ ಪ್ರಕರಣವಾಗಿದೆ. ಅತ್ಯಾಚಾರ ಪ್ರಕರಣ ಅಲ್ಲ. ಇದೊಂದು‌ ಸುಳ್ಳು ಕೇಸ್ ಆಗಿದೆ ಎಂದು ಸಿ.ವಿ. ನಾಗೇಶ್ ವಾದಿಸಿದರು.

ಇದುವರೆಗೂ ರೇವಣ್ಣ ಅವರಿಗೆ ನೀಡಿದ ಯಾವ ನೋಟಿಸ್‌ನಲ್ಲೂ ಸೆಕ್ಷನ್‌ 376 ಇದೆ ಅಂತ ಉಲ್ಲೇಖಿಸಿಲ್ಲ. ಈಗ 376 ಇದೆ ಎಂದು ಹೇಳುತ್ತಿದ್ದಾರೆ. ಇದರಿಂದ ನಮ್ಮ ಕಕ್ಷಿದಾರರಿಗೆ ಜಾಮೀನು ನೀಡಬಹುದು. ರೇವಣ್ಣ ವಿರುದ್ಧ ದಾಖಲಾಗಿರುವ ಕೇಸ್‌ನಲ್ಲಿ ಎಲ್ಲವೂ ಬೇಲಬಲ್ ಸೆಕ್ಷನ್‌ಗಳಿವೆ. ಹೀಗಾಗಿ ಜಾಮೀನು‌ ನೀಡಬೇಕೆಂದು ಮನವಿ ಮಾಡಿದ ಸಿ.ವಿ. ನಾಗೇಶ್ ತಮ್ಮ ವಾದವನ್ನು ಮುಕ್ತಾಯ ಮಾಡಿದರು.

ಇದನ್ನೂ ಓದಿ: Prajwal Revanna Case: ವಕೀಲ ದೇವರಾಜೇಗೌಡರಿಗೆ ನ್ಯಾಯಾಂಗ ಬಂಧನ; ಪೊಲೀಸ್‌ ಕಸ್ಟಡಿ ಅಂತ್ಯ

ಎಫ್‌ಐಆರ್‌ ಬಳಿಕವೂ ಸೆಕ್ಷನ್‌ ಸೇರಿಸಬಹುದು

ಬಳಿಕ ಎಸ್‌ಪಿಪಿ ಜಯ್ನಾ ಕೊಠಾರಿ ವಾದ ಮಂಡಿಸಿ, ರೇವಣ್ಣ ಪರ ವಕೀಲರು ಕೇವಲ ಬೇಲಬಲ್ ಸೆಕ್ಷನ್‌ಗಳ ಬಗ್ಗೆ ಮಾತ್ರ ಹೇಳಿದ್ದಾರೆ. ಪ್ರಾರಂಭದಲ್ಲೇ ಜಾಮೀನು ರಹಿತ ಸೆಕ್ಷನ್‌ಗಳನ್ನು ದಾಖಲಿಸದೆ ಇರಬಹುದು. ತನಿಖೆ ನಡೆದಾಗ ಯಾವಾಗ ಬೇಕಿದ್ದರೂ ಅಪರಾಧ ನಡೆದಿರುವ ಸೆಕ್ಷನ್‌ಗಳನ್ನು ಎಫ್‌ಐಆರ್‌ನಲ್ಲಿ ಸೇರಿಸಬಹುದು. ಈ ಬಗ್ಗೆ ಅವಕಾಶವೂ ಇದೆ. ನಂತರವು ಜಾಮೀನು ರಹಿತದ ಸೆಕ್ಷನ್‌ಗಳನ್ನು ಕೂಡಾ ಸೇರಿಸುವ ಅವಕಾಶ ಇದೆ. ಅದಕ್ಕೆ‌ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಹೇಳಿದೆ ಎಂದು ಹೇಳಿದರು.

ಭಯದಿಂದ ಗಂಡನ ಬಳಿ ಸತ್ಯ ಮುಚ್ಚಿಟ್ಟಿರುವ ಸಂತ್ರಸ್ತೆ

ರೇವಣ್ಣ ಪರ ವಕೀಲರು‌ ಹೇಳುವಂತೆ ಮಹಿಳಾ ಪೊಲೀಸ್ ಇಲ್ಲದೆ ನಮ್ಮ ಪೊಲೀಸರು ಹೋಗಿಲ್ಲ. ಮಹಿಳಾ ಸಿಬ್ಬಂದಿಯ ಜತೆಯಲ್ಲೆ ಹೋಗಿ ದೂರು ದಾಖಲಿಸಿಕೊಂಡಿದ್ದಾರೆ. ಅದರಲ್ಲಿ ಯಾವುದೇ ಅನುಮಾನ ಬೇಡ. ಸಂತ್ರಸ್ತೆ ತನ್ನ ಗಂಡನ ಬಳಿ ಕೆಲವೊಂದನ್ನು ಮುಚ್ಚಿಟ್ಟಿದ್ದಾಳೆ. ಸತ್ಯ ಹೇಳಿದರೆ ಮನೆಯಿಂದ ಹೊರ ಹಾಕುತ್ತಾರೆ ಎಂಬ ಭಯದಲ್ಲಿ ಆಕೆ ಗಂಡನಿಗೆ ಆ ರೀತಿಯಾಗಿ ಹೇಳಿದ್ದಾಳೆ. ಆಕೆಯ ಸುರಕ್ಷತೆಗೆ ಸಂಬಂಧಿಸಿದ ವಿಚಾರವಾಗಿದ್ದರಿಂದ ರಹಸ್ಯ ಸ್ಥಳದಲ್ಲಿ ದೂರು ಪಡೆಯಲಾಗಿದೆ. ಇದು ಸಂಪೂರ್ಣವಾಗಿ ಮಹಿಳೆಯ ರಕ್ಷಣೆಗೆ ಸಂಬಂಧಿಸಿದ ವಿಚಾರವಾಗಿದೆ. ನಾವು ಮೆಮೋ ಹಾಕಿದ್ದೆವು, ರಿಮಾಂಡ್ ಅಪ್ಲಿಕೇಶನ್‌ನಲ್ಲೂ ಲೈಂಗಿಕ ದೌರ್ಜನ್ಯ ಅಂತ ಹೇಳಿದ್ದೆವು. ಆದರೆ, ಈಗ ಸೆಕ್ಷನ್‌ 376 ಹಾಕಿರುವುದಕ್ಕೆ ದಾಖಲೆ ಇದೆ ಎಂದು ಎಸ್‌ಪಿಪಿ ಜಯ್ನಾ ಕೊಠಾರಿ ತಮ್ಮ ವಾದವನ್ನು ಮುಕ್ತಾಯಗೊಳಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Road Accident: ಬೆಳಗಾವಿಯಲ್ಲಿ ಕಾಲೇಜು ಬಸ್‌ಗೆ ಟಿಪ್ಪರ್ ಡಿಕ್ಕಿ; 40ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

Road Accident: ಕೊಲ್ಹಾಪುರದಿಂದ ಬೆಳಗಾವಿಗೆ ವಿದ್ಯಾರ್ಥಿಗಳು ಪ್ರವಾಸಕ್ಕೆ ಆಗಮಿಸಿದ್ದಾಗ ಅಪಘಾತ ನಡೆದಿದೆ. ಅಪಘಾತದಲ್ಲಿ ಗಾಯಗೊಂಡ ವಿದ್ಯಾರ್ಥಿಗಳನ್ನು ಬೆಳಗಾವಿಯ ‌ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

VISTARANEWS.COM


on

Road Accident
Koo

ಬೆಳಗಾವಿ: ಟಿಪ್ಪರ್ ಹಾಗೂ ಕಾಲೇಜು ಬಸ್ ಡಿಕ್ಕಿಯಾಗಿ (Road Accident) ಪ್ರವಾಸಕ್ಕೆ ಬಂದಿದ್ದ ಸುಮಾರು 40ಕ್ಕೂ ವಿದ್ಯಾರ್ಥಿಗಳಿಗೆ ಗಾಯಗಳಾಗಿರುವ ಘಟನೆ ಜಿಲ್ಲೆಯ ಭೂತರಾಮನಹಟ್ಟಿ ಬಳಿ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ನಡೆದಿದೆ. ಕೊಲ್ಹಾಪುರದಿಂದ ವಿದ್ಯಾರ್ಥಿಗಳು ಪ್ರವಾಸಕ್ಕೆ ಆಗಮಿಸಿದ್ದಾಗ ಅಪಘಾತ ನಡೆದಿದೆ.

ರಾಣಿ ಚೆನ್ನಮ್ಮ ಮಿನಿ ಜೂಗೆ ಪ್ರವಾಸಕ್ಕೆಂದು ವಿದ್ಯಾರ್ಥಿಗಳು ಬಂದಿದ್ದರು. ಜೂ ನೋಡಿ ವಾಪಸಾಗುವ ವೇಳೆ ಹೆದ್ದಾರಿಯಲ್ಲಿ ಕಾಲೇಜು ಬಸ್ ಯು ಟರ್ನ್ ಮಾಡುವಾಗ ಟಿಪ್ಪರ್ ಡಿಕ್ಕಿಯಾಗಿದೆ. ಇದರಿಂದ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅವರನ್ನು ಬೆಳಗಾವಿ ‌ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ

ರಾಯಚೂರು: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಅಪರಾಧಿಗೆ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ನೀಡಿದೆ. 2021 ರಲ್ಲಿ ರಾಯಚೂರಿನ ಲಿಂಗಸುಗೂರು ತಾಲೂಕಿನಲ್ಲಿ ಘಟನೆ ನಡೆದಿತ್ತು.

ಲಿಂಗಸುಗೂರು ತಾಲೂಕಿನ ನೀರಲಕೆರೆಯ ಹುಲ್ಲಪ್ಪ ಶಿಕ್ಷೆಗೊಳಗಾದ ಆರೋಪಿ. ಆರೋಪಿ ಮೇಲಿನ ಆಪಾದನೆ ಸಾಬೀತಾದ ಹಿನ್ನೆಲೆ ಶಿಕ್ಷೆ ಪ್ರಕಟವಾಗಿದೆ. 20 ವರ್ಷ ಕಠಿಣ ಜೈಲು ಶಿಕ್ಷೆ, 15 ಸಾವಿರ ರೂಪಾಯಿ ದಂಡ ವಿಧಿಸಿ ಲಿಂಗಸುಗೂರಿನ 3 ನೇ ಅಧಿಕ ಜಿಲ್ಲಾ ಮತ್ತು ಸತ್ರ ಪೋಕ್ಸೊ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

ಇದನ್ನೂ ಓದಿ | Bagalkot News: ಬುರ್ಕಾ ಧರಿಸಿ ಓಡಾಡ್ತಿದ್ದ ವ್ಯಕ್ತಿಗೆ ಮಹಿಳೆಯರಿಂದ ಚಪ್ಪಲಿ ಏಟು!

ಸರ್ಕಾರದ ಸಂತ್ರಸ್ತರ ಪರಿಹಾರ ನಿಧಿಯಿಂದ ನೊಂದ ಬಾಲಕಿಗೆ 9 ಲಕ್ಷ ರೂ ಪರಿಹಾರ ನೀಡಲು ಆದೇಶ ನೀಡಲಾಗಿದೆ. ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಡೊ ಪ್ರಕರಣಕ್ಕೆ ಸಂಬಂಧಿಸಿ ಶಿಕ್ಷೆ ಪ್ರಕಟವಾಗಿದೆ.

ವಾಹನ ಚಲಾಯಿಸುತ್ತಿದ್ದಾಗಲೇ ಚಾಲಕನಿಗೆ ತಲೆಸುತ್ತು; ರಸ್ತೆ ಬಿಟ್ಟು ಜಮೀನಿಗೆ ನುಗ್ಗಿದ ಬಸ್‌

Bus Accident

ಗದಗ: ಬಸ್‌ ಚಲಾಯಿಸುತ್ತಿದ್ದಾಗಲೇ ಚಾಲಕನಿಗೆ ತಲೆ ಸುತ್ತು ಬಂದಿದ್ದು, ನಿಯಂತ್ರಣ ತಪ್ಪಿ ರಸ್ತೆಯಿಂದ ಜಮೀನಿಗೆ ಬಸ್‌ಗೆ ನುಗ್ಗಿದ (Bus Accident) ಘಟನೆ ನಡೆದಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಟೋಲ್ ಗೇಟ್ ಬಳಿ ಘಟನೆ ನಡೆದಿದೆ.

ಸಾರಿಗೆ ಸಂಸ್ಥೆಯ ಬಸ್‌ವೊಂದು ಮುಂಡರಗಿ ಪಟ್ಟಣದಿಂದ ಹಮ್ಮಿಗಿ ಗ್ರಾಮಕ್ಕೆ ತೆರಳುತ್ತಿತ್ತು. ಸುಮಾರು 40ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು. ಈ ವೇಳೆ ಚಾಲಕನಿಗೆ ತಲೆ ಸುತ್ತು ಬಂದಿದೆ. ನೋಡ ನೋಡುತ್ತಿದ್ದಂತೆ ರಸ್ತೆ ಬದಿ ಜಮೀನಿಗೆ ಬಸ್‌ ನುಗ್ಗಿದೆ.

ಇದನ್ನೂ ಓದಿ: Self Harming : ಒಂದೇ ದಿನ ನಾಲ್ವರು ಗೃಹಿಣಿಯರ ಆತ್ಮಹತ್ಯೆ; ಅವರಲ್ಲಿಬ್ಬರು ಯೋಧರ ಪತ್ನಿಯರು

ಅದೃಷ್ಟವಶಾತ್‌ ಸಣ್ಣ ಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರಾಗಿದ್ದಾರೆ. ಬಸ್‌ನಲ್ಲಿ ಸಿಲುಕಿದ್ದ ಗಾಯಾಳುಗಳನ್ನು ಸ್ಥಳೀಯರು ರಕ್ಷಿಸಿ, ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಮುಂಡರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಜಮೀನಿಗೆ ಬಿದ್ದಿದ್ದ ಬಸ್‌ ಅನ್ನು ತೆರವು ಮಾಡಲಾಗಿದೆ.

Continue Reading

ಕರ್ನಾಟಕ

Bagalkot News: ಬುರ್ಕಾ ಧರಿಸಿ ಓಡಾಡ್ತಿದ್ದ ವ್ಯಕ್ತಿಗೆ ಮಹಿಳೆಯರಿಂದ ಚಪ್ಪಲಿ ಏಟು!

Bagalkot News: ಇಳಕಲ್‌ ನಗರದಲ್ಲಿ ವ್ಯಕ್ತಿ ಬುರ್ಕಾದಲ್ಲಿ ಓಡಾಡುತ್ತಿದ್ದರಿಂದ ಸಂಶಯ ಬಂದು ವಿಚಾರಿಸಿದಾಗ ಮಹಿಳೆ ಅಲ್ಲ, ಪುರುಷ ಎಂದು ಗೊತ್ತಾಗಿದೆ. ಹೀಗಾಗಿ ಸ್ಥಳೀಯರು ಹಿಗ್ಗಾಮುಗ್ಗಾ ಥಳಿಸಿದ್ದಾರೆ.

VISTARANEWS.COM


on

Bagalkot News
Koo

ಬಾಗಲಕೋಟೆ: ಬುರ್ಕಾ ಧರಿಸಿ ಓಡಾಡ್ತಿದ್ದ ವ್ಯಕ್ತಿಗೆ ಮಹಿಳೆಯರಿಂದ ಚಪ್ಪಲಿ ಏಟು ಬಿದ್ದಿರುವ ಘಟನೆ ಇಳಕಲ್‌ ನಗರದ (Bagalkot News) ಎಸಿಒ ಶಾಲೆ ಬಳಿ ನಡೆದಿದೆ. ಬುರ್ಕಾ ಧರಿಸಿ ಹೋಗುತ್ತಿದ್ದಾಗ ಅನುಮಾನ ಬಂದು ಸ್ಥಳೀಯರು ಪ್ರಶ್ನಿಸಿದ್ದಾರೆ. ಈ ವೇಳೆ ಆ ವ್ಯಕ್ತಿ ಮಹಿಳೆಯಲ್ಲ, ಪುರುಷ ಎಂದು ತಿಳಿದುಬಂದಿದ್ದರಿಂದ ಸ್ಥಳೀಯರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಇದೇ ವೇಳೆ ಮಹಿಳೆಯರು ಕೂಡ ಬಾಯಿಗೆ ಬಂದಂತೆ ಬೈಯ್ದು ಚಪ್ಪಲಿಯಿಂದ ಹೊಡೆದಿದ್ದಾರೆ.

ವಿಚಾರಣೆ ವೇಳೆ ಬುರ್ಕಾ ಧರಿಸಿದ್ದ ವ್ಯಕ್ತಿ ಹುನಗುಂದ ತಾಲೂಕಿನ ವೀರಾಪುರ ನಿವಾಸಿ ಮಹಾಂತೇಶ್ ರಾಮವಾಡಗಿ (36) ಎಂದು ತಿಳಿದುಬಂದಿದೆ. ನಗರದಲ್ಲಿ ಬುರ್ಕಾದಲ್ಲಿ ಓಡಾಡುತ್ತಿದ್ದರಿಂದ ಸಂಶಯ ಬಂದು ವಿಚಾರಿಸಿದಾಗ ಮಹಿಳೆ ಅಲ್ಲ ಎಂದು ಗೊತ್ತಾಗಿದೆ. ಇದರಿಂದ ಸ್ಥಳದಲ್ಲಿದ್ದ ಜನತೆಯಿಂದ ವ್ಯಕ್ತಿಗೆ ಧರ್ಮದೇಟು ಬಿದ್ದಿದೆ. ಆತನ ಚೀಲ ಪರಿಶೀಲಿಸಿದಾಗ ಚಾಕು, ಕತ್ತರಿ ಕಂಡುಬಂದಿದೆ.

ಇದನ್ನೂ ಓದಿ | Actor Darshan: ಸಸ್ಯಾಹಾರಿ ಅಂದ್ರೂ ರೇಣುಕಾಸ್ವಾಮಿ ಬಾಯಿಗೆ ಬಿರಿಯಾನಿ ಮೂಳೆ ತುರುಕಿದ್ದ ಆರೋಪಿಗಳು!

ಸುದ್ದಿ ತಿಳಿದು ಸ್ಥಳಕ್ಕೆ ಇಳಕಲ್‌ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಚಪ್ಪಲಿ ಏಟು ತಿಂದ ವ್ಯಕ್ತಿಗೆ ಹೆಂಡತಿ, ಮಗ ಇದ್ದು, ಮಂಗಳೂರಿನ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಮಂಗಳೂರಿನಿಂದ ಗದಗಗೆ ಬಂದು, ಬುರ್ಕಾ ಖರೀದಿಸಿದ್ದ ಮಹಾಂತೇಶ್, ಇಳಕಲ್‌ನಲ್ಲಿ ಓಡಾಡುತ್ತಿದ್ದ. ಇಳಕಲ್ ಠಾಣೆಗೆ ಮಹಾಂತೇಶ್ ಸಂಬಂಧಿಕರನ್ನು ಕರೆಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

ಬೆಂಗಳೂರು: ನಟ ದರ್ಶನ್‌ (Actor Darshan) ಗೆಳತಿ, ನಟಿಯೂ ಆದ ಪವಿತ್ರಾ ಗೌಡ (Pavithra Gowda) ಅವರ ಕುರಿತು ಅಶ್ಲೀಲ ಮೆಸೇಜ್‌ ಮಾಡಿದ ಹಿನ್ನೆಲೆಯಲ್ಲಿ ನಡೆದ ರೇಣುಕಾಸ್ವಾಮಿ ಕೊಲೆ (murder case) ಪ್ರಕರಣಕ್ಕೆ ಕ್ಷಣಕ್ಕೊಂದು ತಿರುವುಗಳು ಸಿಗುತ್ತಿವೆ. ಈಗಾಗಲೇ ಮತ್ತಿಬ್ಬರು ಆರೋಪಿಗಳು ಚಿತ್ರದುರ್ಗದ ಪೊಲೀಸರಿಗೆ ಶರಣಾಗಿದ್ದು, ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ ಆಗಿದೆ. ಈ ನಡುವೆ ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್‌ ಮಾಡಿ ಕರೆತರುವ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಜೂನ್ 8ರ ಬೆಳಗ್ಗೆ 11:30ಕ್ಕೆ ಗುಯಿಲಾಳ್ ಟೋಲ್ ಬಳಿ ಕಾರಿನಲ್ಲಿ ಕಿಡ್ನ್ಯಾಪ್‌ ಮಾಡಿಕೊಂಡು ಹೋಗುತ್ತಿರುವ ದೃಶ್ಯ ಸೆರೆಯಾಗಿದೆ. ಕಾರಿನ ಮುಂಭಾಗ ಡ್ರೈವರ್ ರವಿ ಹಾಗೂ ರಾಘವೇಂದ್ರ ಕುಳಿತಿದ್ದರು. ಹಿರಿಯೂರು ಮಾರ್ಗವಾಗಿ ಬೆಂಗಳೂರು ಕಡೆ ಪ್ರಯಾಣ ಮಾಡಿರುವ ಈ ಗ್ಯಾಂಗ್‌ ವಿಐಪಿ ಕಾರ್ಡ್ ತೋರಿಸಿ ಹೋಗಿದ್ದಾರೆ.

ಮಾತ್ರವಲ್ಲದೇ ದರ್ಶನ್ ಸಂಘದ ಅಧ್ಯಕ್ಷ ಎಂದು ಬಿಲ್ಡಪ್ ಕೊಟ್ಟು ಹೋಗಿರುವ ದೃಶ್ಯವೆಲ್ಲವೂ ಹಿರಿಯೂರು ಗುಯಿಲಾಳ್ ಟೋಲ್ ಸಮೀಪದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇನ್ನುಳಿದ ನಾಲ್ಕು ಮಂದಿ ಜತೆ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಬಿಟ್ಟು ಜೂನ್‌ 9ರ ಬೆಳಗಿನ ಜಾವ 4:30ಕ್ಕೆ ಚಿತ್ರದುರ್ಗದತ್ತ ಚಾಲಕ ರವಿ ವಾಪಸ್‌ ಆಗಿದ್ದಾನೆ.

ಇದನ್ನೂ ಓದಿ: Actor Darshan: ರೇಣುಕಾಸ್ವಾಮಿ ಕೊಲೆ ಕೇಸ್; ಆರೋಪಿಗಳಿಗೆ ನೀಡಲು ರೆಸ್ಟೋರೆಂಟ್‌ನಲ್ಲಿ ಇಟ್ಟಿದ್ದ 30 ಲಕ್ಷ ಸೀಜ್

ಶರಣಾಗತಿಯಾಗಿದ್ದ ಆರೋಪಿಗಳು

ಇನ್ನೂ ತಾವೇ ಸರೆಂಡರ್ ಆಗಿರುವ ಕಾರು ಚಾಲಕ ರವಿ ಜತೆಗೆ ಹೇಮಂತ್ ಹಾಗೂ ಪುನೀತ್‌ರನ್ನು ಪೊಲೀಸರು ಶುಕ್ರವಾರ ನ್ಯಾಯಾಲಯಕ್ಕೆ ಕರೆದುಕೊಂಡು ಹೋದರು. ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್‌ ಮಾಡಿಕೊಂಡು ಬಂದಾಗ ರವಿ ಕಾರು ಚಲಾಯಿಸಿದ್ದ. ಸ್ಕಾರ್ಪಿಯೋ ಮಾಲೀಕ ಪುನೀತ್ ಹಾಗೂ ಶವ ಸಾಗಿಸಿದ ಬಳಿಕ ಹೇಮಂತ್ ಕಾರನ್ನು ವಾಶ್ ಮಾಡಿದ್ದ. ಇದೀಗ ಈ ಮೂವರನ್ನು ನ್ಯಾಯಾಲಯಕ್ಕೆ ಕರೆದುಕೊಂಡು ಹೋಗಿದ್ದಾರೆ.

Continue Reading

ಕರ್ನಾಟಕ

Gangster Ravi Pujari: ಭೂಗತ ಪಾತಕಿ ರವಿ ಪೂಜಾರಿಗೆ ಅನಾರೋಗ್ಯ; ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು

Gangster Ravi Pujari: ಉದ್ಯಮಿಗಳು, ಚಿತ್ರನಟರಿಗೆ ಜೀವ ಬೆದರಿಕೆ ಹಾಕಿ ಹಣ ವಸೂಲಿ ಮಾಡುತ್ತಿದ್ದ ಭೂಗತ ಪಾತಕಿ ರವಿ ಪೂಜಾರಿ ವಿರುದ್ಧ ಕರ್ನಾಟಕ, ಕೇರಳ ಹಾಗೂ ಮಹಾರಾಷ್ಟ್ರದಲ್ಲಿ 60ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಈತನನ್ನು 2019ರ ಫೆಬ್ರವರಿಯಲ್ಲಿ ಪಶ್ಚಿಮ ಆಫ್ರಿಕಾದ ಸೆನೆಗಲ್‌ನಲ್ಲಿ ಬಂಧಿಸಲಾಗಿತ್ತು.

VISTARANEWS.COM


on

Gangster Ravi Pujari
Koo

ಬೆಂಗಳೂರು: ಭೂಗತ ಪಾತಕಿ ರವಿ ಪೂಜಾರಿ (Gangster Ravi Pujari) ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಹರ್ನಿಯಾ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆ ಮಲ್ಟಿಸ್ಪೆಷಾಲಿಟಿ ಘಟಕಕ್ಕೆ ಆತನನ್ನು ಸೋಮವಾರ ದಾಖಲಿಸಲಾಗಿದೆ.

ಭೂಗತ ಪಾತಕಿ ರವಿ ಪೂಜಾರಿ ವಿರುದ್ಧ ಕರ್ನಾಟಕ, ಕೇರಳ ಹಾಗೂ ಮಹಾರಾಷ್ಟ್ರದಲ್ಲಿ 60ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಈತ ಉದ್ಯಮಿಗಳು, ಚಿತ್ರನಟರಿಗೆ ಜೀವ ಬೆದರಿಕೆ ಹಾಕಿ ಹಣ ವಸೂಲಿ ಮಾಡುತ್ತಿದ್ದ. 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ರವಿ ಪೂಜಾರಿಯನ್ನು 2019ರ ಫೆಬ್ರವರಿಯಲ್ಲಿ ಪಶ್ಚಿಮ ಆಫ್ರಿಕಾದ ಸೆನೆಗಲ್‌ನಲ್ಲಿ ಇಂಟರ್‌ಪೋಲ್‌ ಪೊಲೀಸರು ಬಂಧಿಸಿದ್ದರು. ನಂತರ ಆತನನ್ನು ರಾಜ್ಯಕ್ಕೆ ಕರೆತರಲಾಗಿತ್ತು. ವಿಚಾರಣೆ ಬಳಿಕ ಆತ ಪರಪ್ಪನ ಅಗ್ರಹಾರ ಜೈಲು ಸೇರಿದ್ದ. ಇದೀಗ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ | Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

ಬೆಂಗಳೂರು/ಚಿತ್ರದುರ್ಗ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ (Actor Darshan) ಸೇರಿ ಹಲವರು ಸೆರೆಯಾಗಿದ್ದು, ಇದೀಗ ಮತ್ತಿಬ್ಬರು ಆರೋಪಿಗಳು ಪೊಲೀಸರಿಗೆ ಶರಣಾಗಿದ್ದಾರೆ. ಚಿತ್ರದುರ್ಗದ ಅನುಕುಮಾರ್ ಅಲಿಯಾಸ್‌ ಅನು, ಜಗದೀಶ್ ಅಲಿಯಾಸ್‌ ಜಗ್ಗು ಸರೆಂಡರ್ ಆಗಿದ್ದಾರೆ.

ಚಿತ್ರದುರ್ಗದ ಡಿವೈಎಸ್‌ಪಿ ಪಿ.ಕೆ ದಿನಾಕರ್ ಅವರಿಗೆ ಶರಣಾಗಿದ್ದಾರೆ. ಅನು ಚಿತ್ರದುರ್ಗದ ಸಿಹಿನೀರ ಹೊಂಡ ನಿವಾಸಿಯಾದರೆ, ಜಗದೀಶ್ ಚಿತ್ತದುರ್ಗದ ರೈಲ್ವೆ ಸ್ಟೇಶನ್ ಏರಿಯಾ ನಿವಾಸಿಯಾಗಿದ್ದಾನೆ. ಸದ್ಯ ಇಬ್ಬರು ಆರೋಪಿಗಳನ್ನು ಕಾಮಾಕ್ಷಿಪಾಳ್ಯ ಪೊಲೀಸರಿಗೆ ಒಪ್ಪಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ ಸೇರಿ ಒಟ್ಟು 16 ಮಂದಿ ಆರೋಪಿಗಳು ಹತ್ಯೆ ಪ್ರಕರಣದಲ್ಲಿ ಬಂಧಿಯಾಗಿದ್ದಾರೆ.

ಪವಿತ್ರಗೌಡ ನೋಡಲು ಬಂದ ಸಂಬಂಧಿಕರು

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರಗೌಡ ಭೇಟಿಗೆ ಆಕೆಯ ಸಹೋದರಿ ಹಾಗೂ ಸಂಬಂಧಿ ಬಂದಿದ್ದರು. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿರುವ ಕೊಲೆ ಆರೋಪಿ ಪವಿತ್ರಗೌಡ ಭೇಟಿಗೆ ಪೊಲೀಸರು ನಿರಾಕರಿಸಿದರು. ಫೋನ್ ಮಾಡಿಸಿ ಒಳಗಡೆ ಹೋಗಲು ಪ್ರಯತ್ನಿಸಿದರು. ಆದರೆ ಬಂದ ದಾರಿಗೆ ಸುಂಕ ಎಲ್ಲ ಎಂಬಂತೆ ಬರಿಗೈಯ್ಯಲ್ಲಿ ಹೋದರು. ಈ ಮೊದಲು ಸಾಂತ್ವನ ಕೇಂದ್ರಕ್ಕೆ ಹೋಗಿದ್ದಾಗ ಠಾಣೆಯಲ್ಲಿ ಭೇಟಿ ಮಾಡುವಂತೆ ಸೂಚಿಸಿ ಕಳಿಸಲಾಗಿತ್ತು. ಈಗ ಠಾಣೆಗೆ ಬಂದು ಮನವಿ ಮಾಡಿಕೊಂಡರು ಪವಿತ್ರಗೌಡ ಭೇಟಿಗೆ ಪೊಲೀಸರು ಅವಕಾಶ ಮಾಡಿಕೊಟ್ಟಿಲ್ಲ.

ಇದನ್ನೂ ಓದಿ: Actor Darshan: ರೇಣುಕಾಸ್ವಾಮಿ ಕೊಲೆ ಕೇಸ್; ಆರೋಪಿಗಳಿಗೆ ನೀಡಲು ರೆಸ್ಟೋರೆಂಟ್‌ನಲ್ಲಿ ಇಟ್ಟಿದ್ದ 30 ಲಕ್ಷ ಸೀಜ್

Continue Reading

ಕರ್ನಾಟಕ

Actor Darshan: ಸಸ್ಯಾಹಾರಿ ಅಂದ್ರೂ ರೇಣುಕಾಸ್ವಾಮಿ ಬಾಯಿಗೆ ಬಿರಿಯಾನಿ ಮೂಳೆ ತುರುಕಿದ್ದ ಆರೋಪಿಗಳು!

Actor Darshan: ಬಲವಂತ ಮಾಡಿದಾಗ ಬಿರಿಯಾನಿ ತಿನ್ನದೆ ಕೆಳಗೆ ಉಗಿದಿದ್ದರಿಂದ ರೇಣುಕಾ ಸ್ವಾಮಿಯನ್ನು ಹಿಗ್ಗಾಮುಗ್ಗಾ ಥಳಿಸಲಾಗಿತ್ತು ಎಂದು ಆರೋಪಿಯೊಬ್ಬ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ.

VISTARANEWS.COM


on

Actor Darshan
Koo

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Renuka Swamy murder case) ಇನ್ನಿಬ್ಬರು ಆರೋಪಿಗಳು ಪೊಲೀಸರಿಗೆ ಶರಣಾಗಿದ್ದಾರೆ. ಈ ನಡುವೆ ಪ್ರಕರಣದಲ್ಲಿ (Actor Darshan) ಹೇಗೆಲ್ಲಾ ರೇಣುಕಾಸ್ವಾಮಿಗೆ ಚಿತ್ರಹಿಂಸೆ ನೀಡಲಾಗಿತ್ತು ಎಂಬ ವಿಷಯಗಳು ಒಂದೊಂದಾಗೆ ಬೆಳಕಿಗೆ ಬರುತ್ತಿವೆ. ಕಿಡ್ನ್ಯಾಪ್‌ ಆಗಿದ್ದ ದಿನ ಊಟ ಕೊಡಿಸಿದ್ದ ಡಿ ಗ್ಯಾಂಗ್, ನಾನು ಶಾಖಾಹಾರಿ ಎಂದರೂ ಬಿಡದೇ ರೇಣುಕಾಸ್ವಾಮಿ ಬಾಯಿಗೆ ಬಿರಿಯಾನಿ ಮೂಳೆ ತುರುಕಿದ್ದರು ಎನ್ನಲಾಗಿದೆ.

ಚಿತ್ರದುರ್ಗದಿಂದ ಜೂನ್‌ 8ರಂದು ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್‌ ಮಾಡಿ ಬೆಂಗಳೂರಿಗೆ ಕರೆತರಲಾಗಿತ್ತು. ನಂತರ ಆತನನ್ನು ಪಟ್ಟಣಗೆರೆ ಶೆಡ್‌ನಲ್ಲಿ ಕೂಡಿಹಾಕಿ ಟಾರ್ಚರ್‌ ನೀಡಲಾಗಿದೆ. ಮಧ್ಯಾಹ್ನ ಊಟ ಕೊಡಿಸಿದಾಗ ನಾನು ಸಸ್ಯಹಾರಿ ಎಂದು ರೇಣುಕಾಸ್ವಾಮಿ ಹೇಳಿದ್ದಾನೆ. ಆದರೂ ಬಿಡದೆ ಆರೋಪಿಗಳು ಬಿರಿಯಾನಿ ತಿನ್ನಿಸಿದ್ದಾರೆ.

ಇದನ್ನೂ ಓದಿ | Actor Darshan: ಚಿನ್ನುಮರಿ ತಂಟೆಗೆ ಹೋದ್ರೆ ಒದೆ, ಪವಿತ್ರಾ ಗೌಡ ತಂಟೆಗೆ ಬಂದ್ರೆ ಕೊಲೆ; ಟ್ರೋಲ್ ಆಗುತ್ತಿದೆ ​ ದರ್ಶನ್​ ಕೊಲೆ ಕೇಸ್​​

ಬಲವಂತ ಮಾಡಿದಾಗ ಬಿರಿಯಾನಿ ತಿನ್ನದೆ ಕೆಳಗೆ ಉಗಿದಿದ್ದರಿಂದ ರೇಣುಕಾ ಸ್ವಾಮಿಯನ್ನು ಹಿಗ್ಗಾಮುಗ್ಗಾ ಥಳಿಸಿದ್ದ ಗ್ಯಾಂಗ್, ಬಾಸ್ ಬರುತ್ತಾರೆ ಒದೆ ತಿನ್ನಲು ರೆಡಿಯಾಗು. ಬಿರಿಯಾನಿ ತಿಂದ್ರೆ ಶಕ್ತಿ ಬರುತ್ತೆ ಎಂದು ಬಿರಿಯಾನಿ ತಿನ್ನಿಸಲು ಯತ್ನಿಸಿದ್ದಾರೆ. ಈ ಬಗ್ಗೆ ಪೊಲೀಸರ ಮುಂದೆ ಆರೋಪಿ ದೀಪಕ್ ಹೇಳಿಕೆ ಕೊಟ್ಟಿದ್ದಾನೆ.

ಕಿಡ್ನ್ಯಾಪ್ ಮಾಡಿಕೊಂಡು ಹೋಗುತ್ತಿದ್ದ ಸಿಸಿಟಿವಿ ಫುಟೇಜ್‌ ಲಭ್ಯ

ಡಿ ಗ್ಯಾಂಗ್‌ನಿಂದ ದುರ್ಗದ ಹುಡುಗನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್‌ ಮಾಡಿದ್ದ ಸಂದರ್ಭದ ಸ್ಫೋಟಕ ವಿಡಿಯೊ ವಿಸ್ತಾರ ನ್ಯೂಸ್‌ಗೆ ಲಭ್ಯವಾಗಿದೆ. KA-11-B-7939 ಕಾರಿನಲ್ಲಿ ಜೂನ್ 8 ಬೆಳಗ್ಗೆ 11:30ಕ್ಕೆ ಗುಯಿಲಾಳ್ ಟೋಲ್ ಅನ್ನು ಗ್ಯಾಂಗ್ ಕ್ರಾಸ್ ಮಾಡಿತ್ತು. ಕಾರಿನ ಮುಂಭಾಗ ಡ್ರೈವರ್ ರವಿ ಮತ್ತು ರಾಘವೇಂದ್ರ ಕೂತಿರುವ ದೃಶ್ಯ ಸೆರೆಯಾಗಿದೆ.

ಇದನ್ನೂ ಓದಿ | Darshan Arrested : ಅನ್ನಪೂರ್ಣೇಶ್ವರಿ ನಗರ ಪೊಲೀಸ್​ ಠಾಣೆಯಲ್ಲಿ ಬೀಗರೂಟವೇ? ಶಾಮಿಯಾನ ಹಾಕಿದ ಪೊಲೀಸರ ನಡೆ ಫುಲ್ ಟ್ರೋಲ್​!

ಹಿರಿಯೂರು ಮಾರ್ಗವಾಗಿ ಬೆಂಗಳೂರು ಕಡೆ ಪ್ರಯಾಣ ಮಾಡಿದ್ದ ಟೀಂ, ಟೋಲ್‌ನಲ್ಲಿ ವಿಐಪಿ ಕಾರ್ಡ್ ಪ್ರದರ್ಶನ ಮಾಡಿ, ದರ್ಶನ್ ಅಭಿಮಾನಿಗಳ ಸಂಘದ ಅಧ್ಯಕ್ಷ ಎಂದು ರಾಘವೇಂದ್ರ ಬಿಲ್ಡಪ್ ಕೊಟ್ಟು ಹೋಗಿದ್ದರು. ಬೆಂಗಳೂರಿಗೆ ಬಿಟ್ಟು ವಾಪಸ್ ಹೋಗುವಾಗ ಡ್ರೈವರ್ ರವಿ ಮಾತ್ರ ವಾಹನದಲ್ಲಿ ಕಾಣಿಸಿಕೊಂಡಿದ್ದಾರೆ. ಜೂನ್‌ 9 ಬೆಳಗಿನ ಜಾವ 4:30 ಕ್ಕೆ ಚಿತ್ರದುರ್ಗದತ್ತ ರವಿ ತೆರಳಿದ್ದ. ಈತ ಇನ್ನುಳಿದ ನಾಲ್ಕು ಮಂದಿ ಜೊತೆ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಬಿಟ್ಟು ಹೋಗಿದ್ದ.

Continue Reading
Advertisement
ಕರ್ನಾಟಕ3 mins ago

Congress Guarantee: ಗ್ಯಾರಂಟಿ ಯೋಜನೆ ನಿಲ್ಲಲ್ಲ ನಿಲ್ಲಲ್ಲ ನಿಲ್ಲಲ್ಲ ಎಂದ ಸಿದ್ದರಾಮಯ್ಯ

Arundhati Roy
ದೇಶ18 mins ago

Arundhati Roy: ‘ಕಾಶ್ಮೀರ ಭಾರತದ್ದಲ್ಲ’ ಎಂದಿದ್ದ ಅರುಂಧತಿ ರಾಯ್‌ ವಿರುದ್ಧ ಉಗ್ರರ ನಿಗ್ರಹ ಕಾಯ್ದೆ ಅಡಿ ಕ್ರಮ!

Sunny Leone
ಸಿನಿಮಾ54 mins ago

Sunny Leone: ಸನ್ನಿ ಲಿಯೋನ್ ಬೇಕೇಬೇಕೆಂದು ವಿದ್ಯಾರ್ಥಿಗಳ ಪಟ್ಟು; ಕೇರಳ ವಿವಿಗೆ ಇಕ್ಕಟ್ಟು!

ಕರ್ನಾಟಕ57 mins ago

Course Fee Hike: ತಾಂತ್ರಿಕ ಶಿಕ್ಷಣ ಕೋರ್ಸ್‌ಗಳ ಪ್ರವೇಶ ಶುಲ್ಕ ಶೇ.10ರಷ್ಟು ಹೆಚ್ಚಳ

engineering students have invented a unique fire extinguisher drone at bengaluru
ಕರ್ನಾಟಕ1 hour ago

Bengaluru News: ಬೆಂಕಿ ನಂದಿಸುವ ‘ವಿಶಿಷ್ಟ ಡ್ರೋನ್‌’; ಎಂಜಿನಿಯರಿಂಗ್‌ ವಿದ್ಯಾರ್ಥಿಗಳ ಆವಿಷ್ಕಾರ!

RBI Penalty
ದೇಶ1 hour ago

RBI Penalty: ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾಗೆ 1.45 ಕೋಟಿ ರೂ. ದಂಡ ವಿಧಿಸಿದ ಆರ್‌ಬಿಐ; ಕಾರಣ ಏನು?

Government urdu school roof collapse in Shira
ತುಮಕೂರು1 hour ago

Shira News: ಸರ್ಕಾರಿ ಶಾಲಾ ಕೊಠಡಿ ಚಾವಣಿ ಕುಸಿತ; ಶಿಕ್ಷಕಿ ತಲೆಗೆ ಪೆಟ್ಟು, ವಿದ್ಯಾರ್ಥಿಗಳು ಪಾರು

Journalist Sunayana Suresh is now a director
ಕರ್ನಾಟಕ1 hour ago

Kannada Short Movie: ಪತ್ರಕರ್ತೆ ಸುನಯನಾ ಸುರೇಶ್ ಈಗ ನಿರ್ದೇಶಕಿ; ‘ಮೌನ ರಾಗ’ ಕಿರುಚಿತ್ರಕ್ಕೆ ನಿರ್ದೇಶನ

Road Accident
ಕರ್ನಾಟಕ2 hours ago

Road Accident: ಬೆಳಗಾವಿಯಲ್ಲಿ ಕಾಲೇಜು ಬಸ್‌ಗೆ ಟಿಪ್ಪರ್ ಡಿಕ್ಕಿ; 40ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

Narendra Modi
ದೇಶ2 hours ago

Narendra Modi: ಸ್ನೇಹಿತ ಮೋದಿಯನ್ನು ಕೈಮುಗಿದು ಆತ್ಮೀಯವಾಗಿ ಸ್ವಾಗತಿಸಿದ ಇಟಲಿ ಪ್ರಧಾನಿ ಮೆಲೋನಿ; Video ಇದೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ3 hours ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು4 hours ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು5 hours ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ5 hours ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ3 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ3 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ3 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ3 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

ಟ್ರೆಂಡಿಂಗ್‌