ಬೆಂಗಳೂರು: ಮೈಸೂರಿನ ಚಾಮರಾಜ ಕ್ಷೇತ್ರದ ಶಾಸಕ ಹರೀಶ್ ಗೌಡ (MLA Harish Gowda) ಸೇರಿದಂತೆ ಹಲವು ವಿಐಪಿಗಳಿಗೆ ಹನಿಟ್ರ್ಯಾಪ್ (Honey Trap) ಗಾಳ ಹಾಕಿದ್ದ ಖತರ್‌ನಾಕ್ ಗ್ಯಾಂಗನ್ನು ಸಿಸಿಬಿ ಪೊಲೀಸರು (CCB Police) ಬಂಧಿಸಿದ್ದಾರೆ. ಇವರು ವಿಶಿಷ್ಟ ವಿಧಾನ ಅನುಸರಿಸಿ, ಹೋಟೆಲ್‌ಗಳ ರೂಮಿನಲ್ಲಿ ಉಳಿದುಕೊಳ್ಳುತ್ತಿದ್ದ ವಿಐಪಿಗಳನ್ನು ಹನಿಟ್ರ್ಯಾಪ್ ಮಾಡಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್ (Blackmail) ಮಾಡುತ್ತಿದ್ದರು ಎಂದು ಗೊತ್ತಾಗಿದೆ.
ದೊಡ್ಡ ದೊಡ್ಡ ಹೋಟೆಲ್‌ಗಳಲ್ಲಿ ಉಳಿದುಕೊಳ್ಳುತ್ತಿದ್ದ ಶಾಸಕರು, ಸಚಿವರು, ಉದ್ಯಮಿಗಳು, ವಿಶ್ವ ವಿದ್ಯಾಲಯಗಳ ಕುಲಪತಿಗಳು ಸೇರಿ ವಿಐಪಿಗಳನ್ನು ಹನಿಟ್ರ್ಯಾಪ್ ಮಾಡಿ, ನಂತರ ಅವರದ್ದೇ ವಿಡಿಯೋ ಎನ್ನುವಂತೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ಅನ್ನು ಬೆಂಗಳೂರು ಸಿಸಿಬಿ ಪೊಲೀಸರು ಬೇಧಿಸಿದ್ದಾರೆ. ಈ ಗ್ಯಾಂಗ್‌ನ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ಹೆಡೆಮುರಿಕಟ್ಟಿ ಜೈಲಿಗಟ್ಟಿದ್ದಾರೆ.
ಸಮಾಜದ ಗಣ್ಯ ವ್ಯಕ್ತಿಗಳಿಗೆ ಹನಿಟ್ರಾಪ್ ಮೂಲಕ ಬ್ಲಾಕ್ ಮೇಲ್ ಮಾಡ್ತಿದ್ದವರನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೀಗೆ, ಹನಿಟ್ರ್ಯಾಪ್ ಮಾಡಿ ಕೋಟ್ಯಾಂತರ ರೂ. ಹಣಕ್ಕೆ ಬೆಡಿಕೆ ಇಟ್ಟು ಬ್ಲಾಕ್ ಮೇಲ್ ಮಾಡಿದ್ದ ಆರೋಪಿಗಳು ಮೈಸೂರು, ಬೆಂಗಳೂರು ಸೇರಿ ವವಿಧೆಡೆ ಇಂತಹ ಕೃತ್ಯಗಳನ್ನು ಎಸಗಿದ್ದಾರೆ. ಮೈಸೂರಿನ ಚಾಮರಾಜ ಕ್ಷೇತ್ರದ ಶಾಸಕ ಹರೀಶ್ ಗೌಡ ಅವರು ಬೆಂಗಳೂರಿನ ಸಿಸಿಬಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಶಾಸಕರು ನೀಡಿದ ದೂರಿನ ಅನ್ವಯ ಕೇಸ್ ದಾಖಲು ಮಾಡಿಕೊಂಡ ಸಿಸಿಬಿ ಪೊಲೀಸರು ಹನಿಟ್ರ್ಯಾಪ್ ಮಾಡುತ್ತಿದ್ದ ಜಾಲವನ್ನು ಬೇಧಿಸಿದ್ದಾರೆ.
ವಿಶ್ವವಿದ್ಯಾಲಯದ ಉಪಕುಲಪತಿಗಳೊಬ್ಬರು ಹೀಗೆ ಬ್ಲಾಕ್‌ಮೇಲ್‌ಗೆ ಒಳಗಾಗಿದ್ದು, ಈ ಬಗ್ಗೆ ಶಾಸಕ ಶಾಸಕ ಹರೀಶ್ ಗೌಡ ಅವರಿಗೆ ಮಾಹಿತಿ ನೀಡಿದ್ದರು. ಉಪಕುಲಪತಿಗಳ ಬೆಂಬಲಕ್ಕೆ ನಿಂತ ಶಾಸಕ ಹರೀಶ್ ಗೌಡ, ದೂರು ನೀಡಿ ಧೈರ್ಯ ಹೇಳಿದ್ದರು. ಆರೋಪಿಗಳ ಗ್ಯಾಂಗ್ ಪುನಃ ಶಾಸಕ ಹರೀಶ್ ಗೌಡ ವಿರುದ್ಧವೇ ಸುಳ್ಳು ಹನಿಟ್ರ್ಯಾಪ್ ಮಾದರಿ ವಿಡಿಯೋ ಸೃಜಿಸಿ ಬೆದರಿಕೆ ಹಾಕಲು ಮುಂದಾಗಿದೆ. ಈ ಪ್ರಕರಣ ಬೇಧಿಸಿದ ಸಿಸಿಬಿ ಪೊಲೀಸರಿಗೆ ಮೈಸೂರು ಮೂಲದ ಸಂತೋಷ್ ಮತ್ತು ಪುಟ್ಟರಾಜು ಎಂಬ ಇಬ್ಬರು ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಈ ಹನಿಟ್ರ್ಯಾಪ್ ಮತ್ತು ಬ್ಲ್ಯಾಕ್‌ಮೇಲ್ ಗ್ಯಾಂಗ್‌ನಲ್ಲಿ ಒರ್ವ ಯುವತಿ ಕೂಡ ಭಾಗಿಯಾಗಿದ್ದಾಳೆ ಎಂದು ಸಿಸಿಬಿ ಪೊಲೀಸರು ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಆರೋಪಿಗಳು ಪ್ರಭಾವಿಗಳ ಸಂಪರ್ಕ ಮಾಡಿ ಅವರನ್ನು ಫಾಲೋ ಮಾಡುತ್ತಿದ್ದರು. ಬಳಿಕ ವಿಐಪಿಗಳನ್ನು ಭೇಟಿ ಮಾಡಿ ನಂಬರ್ ಪಡೆದುಕೊಳ್ಳುತ್ತಿದ್ದರು. ನಂತರ, ವಿಐಪಿಗಳ ಚಲನವಲನದ ಮೇಲೆ ಹದ್ದಿನ ಕಣ್ಣಿಡುತ್ತಿದ್ದ ಆರೋಪಿಗಳು ವಿಐಪಿಗಳು ಉಳಿದುಕೊಳ್ಳುತ್ತಿದ್ದ ಐಷಾರಾಮಿ ಹೋಟೆಲ್‌ಗಳ ರೂಮು ಬುಕಿಂಗ್, ಚೆಕ್-ಇನ್ ಹಾಗೂ ಚೆಕ್-ಔಟ್ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದರು. ವಿಐಪಿಗಳು ಹೋಟೆಲ್‌ನ ರೂಮು ಖಾಲಿ ಮಾಡಿಕೊಂಡು ಹೋದ ನಂತರ ಅವರು ಉಳಿದುಕೊಂಡಿದ್ದ ರೂಮ್ ಅನ್ನು ಬಾಡಿಗೆ ಪಡೆದು ಈ ಆರೋಪಿಗಳು ಅಲ್ಲಿ ಉಳಿದುಕೊಳ್ಳುತ್ತಿದ್ದರು.
ವಿಐಪಿಗಳು ಉಳಿದುಕೊಂಡ ರೂಮಿನಲ್ಲಿ ಯುವತಿಯನ್ನು ಬಳಸಿಕೊಂಡು ವಿಡಿಯೋ ರೆಕಾರ್ಡ್ ಮಾಡುತ್ತಿದ್ದರು. ವಿಐಪಿಗಳು ಉಳಿದುಕೊಂಡ ರೂಮಿನಲ್ಲಿ ಹಿಡನ್ ಕ್ಯಾಮೆರಾ ಇಟ್ಟಿರುವ ರೀತಿಯಲ್ಲಿ ವಿಡಿಯೋ ಮಾಡಿಕೊಳ್ಳುತ್ತಿದ್ದರು. ಬಳಿಕ ಆ ರೂಮಿನಲ್ಲಿ ಉಳಿದುಕೊಂಡಿದ್ದ ವಿಐಪಿ ಈ ಯುವತಿಯನ್ನು ಬಳಕೆ ಮಾಡಿಕೊಂಡಿದ್ದಾರೆ ಎಂಬ ರೀತಿಯಲ್ಲಿ ವಿಡಿಯೋ ಕ್ರಿಯೇಟ್ ಮಾಡಿ ಅದನ್ನು ವಿಐಪಿಗಳಿಗೆ ಕಳಿಸುತ್ತಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಹಾಗೂ ಪೊಲೀಸರಿಗೆ ಕೊಡುವುದಾಗಿ ಬೆದರಿಕೆ ಒಡ್ಡಿ ಹಣ ಪೀಕುತ್ತಿದ್ದರು.
ಇದನ್ನೂ ಓದಿ: Honey trap : ಉದ್ಯಮಿಯ ಬೆತ್ತಲೆ ವಿಡಿಯೊ ತೆಗೆದು Honey trap; ಮುಸ್ಲಿಂ ಮಹಿಳೆ ಸಹಿತ ಮೂವರ ಸೆರೆ