ಹುಬ್ಬಳ್ಳಿ: ದರೋಡೆ (Robbery case) ಹಾಗೂ ಕೊಲೆ (Murder Case) ಮಾಡಿ ತಲೆತಪ್ಪಿಸಿಕೊಂಡಿದ್ದ ಆರೋಪಿಯ ಕಾಲಿಗೆ ಹುಬ್ಬಳ್ಳಿ (Hubli News) ಪೊಲೀಸರು ಗುಂಡೇಟು ಹಾರಿಸಿ (Police Firing) ಬಂಧಿಸಿದ್ದಾರೆ. ಹೈದ್ರಾಬಾದ್ ಮೂಲದ ಫರ್ಹಾನ್ ಶೇಖ್ ಬಂಧಿತ ಆರೋಪಿ.
ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಫರ್ಹಾನ್ ಶೇಖ್ ದರೋಡೆ ಮಾಡಿದ್ದ. ಗಾಮನಗಟ್ಟಿ ರಸ್ತೆಯ ತಾರಿಹಾಳ ಕ್ರಾಸ್ ಬಳಿ ಈತ ಇರುವುದನ್ನು ತಿಳಿದು ಬಂಧಿಸಲು ಪೊಲೀಸರು ತೆರಳಿದಾಗ, ಅವರ ಮೇಲೆ ಹಲ್ಲೆಗೆ ಫರ್ಹಾನ್ ಶೇಖ್ ಮುಂದಾಗಿದ್ದ. ಆ ಸಂದರ್ಭದಲ್ಲಿ ಕೇಶ್ವಾಪುರ ಠಾಣೆ ಪಿಎಸ್‌ಐ ಕವಿತಾ ಸ. ಮಾಡಗ್ಯಾಳ ಆರೋಪಿಯ ಕಾಲಿಗೆ ಫೈರ್ ಮಾಡಿದ್ದಾರೆ.
ಫರ್ಹಾನ್‌ನ ಇರಿತದಿಂದ ಪೊಲೀಸ್ ಸಿಬ್ಬಂದಿ ಸುಜಾತಾ ಮತ್ತು ಮಹೇಶ್‌ಗೆ ಗಾಯಗಳಾಗಿವೆ. ಇಬ್ಬರೂ ಕಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗುಂಡೇಟು ತಿಂದ ಫರ್ಹಾನ್ ಶೇಖ್‌ನನ್ನೂ ಕಿಮ್ಸ್‌ಗೆ ದಾಖಲು ಮಾಡಲಾಗಿದೆ.
ಕೃತಿ ಕುಮಾರಿಗೆ ಮನಬಂದಂತೆ ಇರಿದ ಪಾತಕಿ, ಭೋಪಾಲ್‌ಗೆ ಪರಾರಿಯಾದ ಕೊಲೆಗಾರ ಪ್ರಿಯತಮ
ಬೆಂಗಳೂರು: ಕೋರಮಂಗಲದ ಪಿಜಿಯೊಂದರಲ್ಲಿ ನಡೆದ ಕೃತಿ ಕುಮಾರಿ ಎಂಬ ಯುವತಿಯ ಮರ್ಡರ್ ವಿಡಿಯೋ ಸಿಸಿಟಿವಿಯಲ್ಲಿ ಲಭ್ಯವಾಗಿದ್ದು, ಇದೀಗ ವೈರಲ್ ಆಗಿದೆ. ಯುವತಿ ರಕ್ತದ ಮಡುವಿನಲ್ಲಿ ಬಿದ್ದು ಸಹಾಯಕ್ಕಾಗಿ ಆರ್ತನಾದ ಮಾಡುತ್ತಿದ್ದರೂ ಅಲ್ಲಿದ್ದ ಇತರ ಯುವತಿಯರು ಆಕೆಯ ಸಹಾಯಕ್ಕೆ ಬರದೆ ತಮ್ಮಷ್ಟಕ್ಕೇ ಹೋಗಿದ್ದುದು ಕೂಡ ಈ ವಿಡಿಯೋದಲ್ಲಿ ದಾಖಲಾಗಿದೆ.
ಜು.23ರಂದು ಕೋರಮಂಗಲದ ಪಿಜಿಯಲ್ಲಿ ಕೃತಿ ಕುಮಾರಿ ಕೊಲೆ ನಡೆದಿತ್ತು. ಆರೋಪಿ ಅಭಿಷೇಕ್ ಕೃತಿ ಕುಮಾರಿಯನ್ನು ಎರಡೇ ನಿಮಿಷದಲ್ಲಿ ಕೊಲೆಮಾಡಿ ಪರಾರಿಯಾಗಿದ್ದಾನೆ. ಕತ್ತು, ಎದೆ, ಹೊಟ್ಟೆ ಭಾಗ ಸೇರಿ ಹಲವು ಕಡೆ ಇರಿದಿದ್ದಾನೆ. ಕತ್ತನ್ನು ಕೋಳಿ ಕತ್ತಿನಂತೆ ಕೊಯಿದಿದ್ದಾನೆ. ಮೊದಲು ಪಿಜಿ ರೂಮಿನ ಬಾಗಿಲು ಬಡಿದ ಕೊಲೆಗಾರ, ಆಕೆ ಬಾಗಿಲು ತೆರೆದ ಕೂಡಲೇ ಒಳಹೋಗಿದ್ದಾನೆ. ನಂತರ ಕೆಲವು ಸೆಕೆಂಡ್‌ನಲ್ಲಿ ಆಕೆ ಆತನಿಂದ ಪಾರಾಗಲು ಹೊರಗೋಡಿ ಬಂದಿದ್ದು, ಆಕೆಯನ್ನು ಕಾರಿಡಾರ್‌ನಲ್ಲೇ ತಡೆದ ಪಾತಕಿ ಮನಬಂದಂತೆ ಇರಿದಿದ್ದಾನೆ.
ಪ್ರಾಣ ಉಳಿಸಿಕೊಳ್ಳಲು ಕೃತಿ ಕುಮಾರಿ ಒದ್ದಾಡಿದ್ದಾಳೆ. ರಕ್ತದ ಮಡುವಿನಲ್ಲಿದ್ದ ಕೃತಿ ಕುಮಾರಿ ಆರ್ತನಾದ ಮಾಡಿದರೂ ಪಿಜಿಯಲ್ಲಿದ್ದ ಮೂವರು ಯುವತಿಯರು ಮಾತ್ರ ಹತ್ತಿರ ಬಂದಿಲ್ಲ. ಮಾನವೀಯತೆಯನ್ನೇ ಮರೆತಂತೆ ವರ್ತಿಸಿದ ಇವರು ಕೃತಿ ಕುಮಾರಿಯ ಹತ್ತಿರ ಕೂಡ ಹೋಗಿಲ್ಲ. ಕೈಯಲ್ಲಿದ್ದ ಮೊಬೈಲ್ ಫೋನ್ ನೋಡ್ತಾ ಆಚೆ ಹೋಗಿದ್ದಾರೆ. ಈ ಎಲ್ಲಾ ದೃಶ್ಯಗಳು ಪಿಜಿಯಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕೋರಮಂಗಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಅಭಿಷೇಕ್‌ಗಾಗಿ ಹುಡುಕಾಟ ಆರಂಭಿಸಿದ್ದಾರೆ. ಕೊಲೆಮಾಡಿದ ಬಳಿಕ ಆರೋಪಿ ಅಭಿಷೇಕ್ ಬಟ್ಟೆ ಬದಲಿಸಿಕೊಂಡು ಪರಾರಿಯಾಗಿದ್ದಾನೆ. ಆತ ಭೋಪಾಲ್‌ಗೆ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಕೋರಮಂಗಲ ಪೊಲೀಸರು ಆರೋಪಿಯನ್ನ ಆರೆಸ್ಟ್ ಮಾಡಲು ಭೋಪಾಲ್‌ಗೆ ತೆರಳಿದ್ದಾರೆ.
ಕೃತಿ ಹತ್ಯೆ ಪ್ರಕರಣದ ಬಗ್ಗೆ ಪೂರ್ವ ವಿಭಾಗ ಹೆಚ್ಚುವರಿ ಪೊಲೀಸ್ ಆಯುಕ್ತ ರಮನ್ ಗುಪ್ತ ಹೇಳಿಕೆ ನೀಡಿ, ʼʼಘಟನೆ ರಾತ್ರಿ 11.10ರಿಂದ 11.30ರ ಸುಮಾರಿಗೆ ನಡೆದಿದ್ದು, ರಾತ್ರಿ 12 ಗಂಟೆ ಸುಮಾರಿಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿದೆ. ತಕ್ಷಣ ನಮ್ಮ ಸಿಬ್ಬಂದಿ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದಾರೆ. ಆಕೆ ಮೂಲತಃ ಬಿಹಾರದವರು ಎನ್ನುವ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಈಗಾಗಲೇ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಯಾವ ಕಾರಣಕ್ಕೆ ಕೊಲೆಯಾಗಿದೆ ಎನ್ನುವುದು ಇನ್ನಷ್ಟೇ ಗೊತ್ತಾಗಬೇಕು. ಪಿಜಿಯ ಸಿಸಿಟಿವಿ ಸೇರಿದಂತೆ ಎಲ್ಲವನ್ನೂ ಪರಿಶೀಲನೆ ನಡೆಸಿದ್ದೇವೆ. ಪಿಜಿಯ ನಿರ್ಲಕ್ಷ್ಯತನದ ಬಗ್ಗೆ ಪರಿಶೀಲಿಸಲಾಗುತ್ತಿದೆ. ಆರೋಪಿ ಪತ್ತೆಗಾಗಿ ಪೊಲೀಸರ ವಿಶೇಷ ತಂಡವನ್ನೂ ರಚಿಸಲಾಗಿದೆʼʼ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: Murder Case: ʼಸಾಫ್ಟ್ ಟಚ್ʼ ಸ್ಪಾಗೆ ಹೋಗಿದ್ದ ಕ್ರಿಮಿನಲ್‌ನನ್ನು ಪ್ರೇಯಸಿ ಎದುರೇ ತುಂಡು ತುಂಡಾಗಿ ಕತ್ತರಿಸಿದರು!