Illicit Relationship: ವಿಚ್ಛೇದಿತ ನರ್ಸ್‌ ಜೊತೆ ಲವ್ವಿ ಡವ್ವಿ; ಪೊಲೀಸಪ್ಪನಿಗೇ ಕಾನೂನು ರುಚಿ ತೋರಿಸಿದ ಪತ್ನಿ - Vistara News

ಕ್ರೈಂ

Illicit Relationship: ವಿಚ್ಛೇದಿತ ನರ್ಸ್‌ ಜೊತೆ ಲವ್ವಿ ಡವ್ವಿ; ಪೊಲೀಸಪ್ಪನಿಗೇ ಕಾನೂನು ರುಚಿ ತೋರಿಸಿದ ಪತ್ನಿ

Illicit Relationship: ಸಿರವಾರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ರಾಜ್ ಮಹಮ್ಮದ್ ಎಂಬಾತನ ಮೇಲೆ ಆತನ ಪತ್ನಿಯಿಂದ ಕೇಸು ಬಿದ್ದಿದೆ. ದೇವದುರ್ಗ ಪೊಲೀಸ್‌ ಠಾಣೆಯಲ್ಲಿ ಮಹಿಳಾ ಪೇದೆ ಆಗಿರುವ ಪ್ಯಾರಿ ಬೇಗಂ ಎಂಬಾಕೆ ಈತನ ಪತ್ನಿ ಹಾಗೂ ದೂರು ಸಲ್ಲಿಸಿದವರು.

VISTARANEWS.COM


on

illicit relationship raichur siravara
ದೂರು ನೀಡಿದ ಪ್ಯಾರಿ ಬೇಗಂ, ಆರೋಪಿಗಳಾದ ರಾಜ್‌ ಮೊಹಮ್ಮದ್‌, ಸರಳಾ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ರಾಯಚೂರು: ವಿಚ್ಛೇದಿತ ನರ್ಸ್‌ ಒಬ್ಬಾಕೆಯೊಂದಿಗೆ ಲವ್ವಿ ಡವ್ವಿ (Illicit Relationship) ಹೊಂದಿದ್ದ ಪೊಲೀಸ್‌ ಕಾನ್‌ಸ್ಟೇಬಲ್‌ (Police constable) ಒಬ್ಬಾತನಿಗೆ ಆತನ ಪತ್ನಿ ಕಾನೂನು ಅಸ್ತ್ರದ ಮೂಲಕ ಪಾಠ ಕಲಿಸಲು ಮುಂದಾಗಿದ್ದಾರೆ. ಘಟನೆ ರಾಯಚೂರಿನ ದೇವದುರ್ಗದಲ್ಲಿ ನಡೆದಿದೆ.

ಸಿರವಾರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ರಾಜ್ ಮಹಮ್ಮದ್ ಎಂಬಾತನ ಮೇಲೆ ಆತನ ಪತ್ನಿಯಿಂದ ಕೇಸು ಬಿದ್ದಿದೆ. ದೇವದುರ್ಗ ಪೊಲೀಸ್‌ ಠಾಣೆಯಲ್ಲಿ ಮಹಿಳಾ ಪೇದೆ ಆಗಿರುವ ಪ್ಯಾರಿ ಬೇಗಂ ಎಂಬಾಕೆ ಈತನ ಪತ್ನಿ ಹಾಗೂ ದೂರು ಸಲ್ಲಿಸಿದವರು. ರಾಜ್ ಮಹಮ್ಮದ್ ಮತ್ತು ಪ್ಯಾರಿ‌ ಬೇಗಂ ಪ್ರೀತಿಸಿ ಮದುವೆಯಾದವರು. ಆದರೆ ಇತ್ತೀಚೆಗೆ ರಾಜ್‌ ಮಹಮ್ಮದ್‌ ಇನ್ನೊಬ್ಬ ಮಹಿಳೆ ಜೊತೆಗೆ ಅಕ್ರಮ ಸಂಬಂಧ ಬೆಳೆಸಿಕೊಂಡಿದ್ದ.

ಕವಿತಾ ಆಸ್ಪತ್ರೆ ನರ್ಸ್ ಸರಳ ಎಂಬಾಕೆಯ ಜೊತೆ ಸುಮಾರು 4-5 ವರ್ಷಗಳಿಂದ ವಿವಾಹೇತರ ಸಂಬಂಧ ನಡೆಸಿದ್ದ. ಇವರಿಬ್ಬರನ್ನೂ ಮನೆಯೊಂದರಲ್ಲಿ ರೆಡ್ ಹ್ಯಾಂಡ್ ಆಗಿ ಪ್ಯಾರಿ ಬೇಗಂ ಹಿಡಿದಿದ್ದರು. ಬಳಿಕ ಪೊಲೀಸರಿಗೆ ಒಪ್ಪಿಸಿ ಪತಿ ವಿರುದ್ಧವೇ ಎಸ್ಪಿಗೆ ದೂರು ನೀಡಿದ್ದಾರೆ. ಎಸ್‌ಪಿಯನ್ನು ಭೇಟಿ ಮಾಡಿ, ‌ಬಳಿಕ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ರಾಜ್ ಮಹಮ್ಮದ್, ರಿಜಿಯಾ ಬೇಗಂ, ಮೈಬೂಬ್ ಮತ್ತು ಸ್ಟಾಫ್ ನರ್ಸ್ ಸರಳ ವಿರುದ್ಧ ರಾಯಚೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಗರ್ಭಪಾತ, ವರದಕ್ಷಿಣೆ ಕಿರುಕುಳ (Dowry harassment), ಕೊಲೆ ಯತ್ನ (Murder attempt) ಸೇರಿದಂತೆ ಹಲವು ಆರೋಪಗಳನ್ನು ಗಂಡನ ವಿರುದ್ಧ ಪ್ಯಾರಿ ಬೇಗಂ ನೀಡಿದ್ದಾರೆ.

ವಿದ್ಯಾರ್ಥಿಗಳ ಬಾರ್‌ ನೈಟ್‌ ಆಯೋಜಿಸಿದ್ದ ಬಾರ್‌ ಮಾಲೀಕನ ಮೇಲೆ ಕ್ರಮ

ಮಂಗಳೂರು: ವಿದ್ಯಾರ್ಥಿಗಳು ಕುಡಿದು ಕುಣಿದ ಕುಪ್ಪಳಿಸಲು ಬಾರ್‌ ನೈಟ್‌ (Students Night) ಕಾರ್ಯಕ್ರಮ ಆಯೋಜಿಸಿದ್ದ ಬಾರ್‌ ಮಾಲೀಕರ ಕಾರ್ಯಕ್ರಮವನ್ನು ಪೊಲೀಸರು (Mangalore police) ಬಂದ್‌ ಮಾಡಿಸಿದ್ದಾರೆ. ಇದರ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿತ್ತು.

ʼಸ್ಟೂಡೆಂಟ್ಸ್ ವೆಡ್‌ನೆಸ್‌ಡೇ ನೈಟ್ʼ ಎಂಬ ಕಾರ್ಯಕ್ರಮವನ್ನು ಆಯೋಜಿಸಿ ವಿದ್ಯಾರ್ಥಿಗಳಿಗೆ ಮುಕ್ತ ಆಹ್ವಾನವನ್ನು ನಗರದ ದೇರೆಬೈಲ್ ಕೊಂಚಾಡಿಯಲ್ಲಿರುವ ಲಿಕ್ಕರ್‌ ಲಾಂಜ್‌ ಎಂಬ ಬಾರ್‌ ನೀಡಿತ್ತು. ಈ ಬಾರ್‌ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ಇದೀಗ ಕಾರ್ಯಕ್ರಮವನ್ನು ಪೊಲೀಸರು ಬಂದ್ ಮಾಡಿಸಿದ್ದಾರೆ. ಅಬಕಾರಿ ಇಲಾಖೆ ಲಿಕ್ಕರ್ ಲಾಂಜ್ ವಿರುದ್ಧ ಎಫ್ಐಆರ್ ದಾಖಲಿಸಿದೆ.

ಸಂಜೆ 7 ಗಂಟೆಯಿಂದ ಮಧ್ಯರಾತ್ರಿ ವರೆಗೆ ಮದ್ಯ ಸಹಿತ ಪಾರ್ಟಿ ಕಾರ್ಯಕ್ರಮವನ್ನು ಆಯೋಜಿಸಲು ಸಮಯ ನಿಗದಿಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಆಹಾರ, ಮದ್ಯ, ಮ್ಯೂಸಿಕ್, ಮನೋರಂಜನಾ ಕಾರ್ಯಕ್ರಮಗಳಿರುವುದಾಗಿ ಪ್ರಚಾರ ಮಾಡಲಾಗಿತ್ತು. ಇಷ್ಟು ಮಾತ್ರವಲ್ಲದೆ ವಿದ್ಯಾರ್ಥಿಗಳು ಸ್ಕೂಲ್ ಐಡಿ (ಗುರುತು ಕಾರ್ಡ್) ತೋರಿಸಿದರೆ ಬಿಲ್‌ನಲ್ಲಿ ಶೇ.15ರಷ್ಟು ಕಡಿತದ ಆಫರ್ ನೀಡಲಾಗಿತ್ತು. ಈ ಇವೆಂಟ್‌ಗೆ ವಿದ್ಯಾರ್ಥಿನಿಯರು ಬಂದರೆ ಅವರಿಗೆ ಫ್ರೀ ಶೂಟರ್ಸ್ ಸ್ಪೆಷಲ್ ಆಫರ್ ನೀಡುವ ಭರವಸೆಯನ್ನು ನೀಡಲಾಗಿತ್ತು.

ಕೊಂಚಾಡಿಯ ಬಾರ್‌ನಲ್ಲಿ ಆಯೋಜಿಸಿದ ಈ ಕಾರ್ಯಕ್ರಮದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹರಿದಾಡುತ್ತಿದ್ದಂತೆ ಸಾರ್ವಜನಿಕರಿಂದ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಿದ ಕಾವೂರು ಪೊಲೀಸರು ಕಾರ್ಯಕ್ರಮವನ್ನೇ ರದ್ದುಮಾಡಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ ಬಾರ್‌ನ ಮಾಲೀಕರಿಗೆ ಕಾವೂರು ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಿದ್ದಾರೆ. ಮಾತ್ರವಲ್ಲದೆ ಜಿಲ್ಲಾ ನ್ಯಾಯಾಲಯದ ಅಸಿಸ್ಟೆಂಟ್ ಪಬ್ಲಿಕ್ ಪ್ರಾಸಿಕ್ಯೂಟರ್(ಎಪಿಪಿ)ಗೆ ಪತ್ರ ಬರೆದು ಈ ಘಟನೆಗೆ ಯಾವ ಸೆಕ್ಷನ್‌ನಡಿ ಪ್ರಕರಣ ದಾಖಲಿಸಬಹುದೆಂದು ಪೊಲೀಸ್‌ ಮೂಲಗಳು ಸಲಹೆ ಕೇಳಿದ್ದಾರೆಂದು ತಿಳಿದು ಬಂದಿದೆ. ವಿದ್ಯಾರ್ಥಿಗಳನ್ನು ಬಾರ್‌ಗೆ ಆಹ್ವಾನಿಸಿ ಸಾಮಾಜಿಕ ಜಾಲತಾಣದಲ್ಲಿ ಜಾಹೀರಾತು ಹಾಕಿದ್ದಕ್ಕಾಗಿ ಅಬಕಾರಿ ಇಲಾಖೆ ಈಗಾಗಲೇ 7 ಸಾವಿರ ರೂ. ದಂಡ ವಿಧಿಸಿದೆ. ಅಲ್ಲದೆ ಬಾರ್ ವಿರುದ್ಧ ಎಫ್ಐಆರ್ ದಾಖಲಿಸಿದೆ.

ನಾವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಜಿಲ್ಲಾ ನ್ಯಾಯಾಲಯದ ಅಸಿಸ್ಟೆಂಟ್ ಪಬ್ಲಿಕ್ ಪ್ರಾಸಿಕ್ಯೂಟರ್‌ಗೆ ಪತ್ರ ಬರೆದಿದ್ದು, ಈ ಘಟನೆಗೆ ಯಾವ ಸೆಕ್ಷನ್‌ನಡಿ ಪ್ರಕರಣ ದಾಖಲಿಸಬಹುದೆಂದು ಮಾಹಿತಿ ಕೇಳಿದ್ದೇವೆ. ಅವರ ಉತ್ತರ ಬಂದ ಕೂಡಲೇ ಮುಂದಿನ ಕ್ರಮದ ಬಗ್ಗೆ ನಿರ್ಧರಿಸಲಾಗುವುದು ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗರ್‌ವಾಲ್ ತಿಳಿಸಿದ್ದಾರೆ.

ಇದನ್ನೂ ಓದಿ: Atal Setu: ಅಟಲ್‌ ಸೇತು ಮೇಲೆ ಕಾರಿನಲ್ಲಿ ಬಂದು, ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಟೆಕ್ಕಿ; ಏನಾಗಿತ್ತು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ರಸ್ತೆಯಲ್ಲೇ ಸಿಸಿಟಿವಿ ಕ್ಯಾಮೆರಾ ಅಳವಡಿಗೆ- ಸೇನಾ ಮಾಹಿತಿ ಪಾಕಿಸ್ತಾನಕ್ಕೆ ರವಾನೆ-ಆರೋಪಿ ಬಂಧನ

VISTARANEWS.COM


on

ಪಂಜಾಬ್‌ನ ಪಠಾಣ್‌ಕೋಟ್‌ನ ಪೊಲೀಸರು ಶಂಕಿತ ಬೇಹುಗಾರಿಕೆ ಜಾಲವನ್ನು ಬಯಲಿಗೆಳೆದಿದ್ದಾರೆ. ಭಾರತೀಯ ಸೇನೆ ಮತ್ತು ಅರೆಸೇನಾ ಪಡೆಗಳ ಚಲನವಲನಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನದ ಹ್ಯಾಂಡ್ಲರ್‌ಗಳೊಂದಿಗೆ ಹಂಚಿಕೊಂಡಿದ್ದಕ್ಕಾಗಿ ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಚಕ್ ಧಾರಿವಾಲ್ ಗ್ರಾಮದ ನಿವಾಸಿ ಬಲ್ಜಿತ್ ಸಿಂಗ್ ಅಲಿಯಾಸ್ ಬಿಟ್ಟು ಬಂಧಿತ ಆರೋಪಿ.ಈತ ಸೇನೆ ಮತ್ತು ಅರೆಸೇನಾ ಪಡೆಗಳ ಚಲನವಲನಗಳ ಮೇಲೆ ಕಣ್ಣಿಡಲು ರಾಷ್ಟ್ರೀಯ ಹೆದ್ದಾರಿ-44 ರ ಪಠಾಣ್‌ಕೋಟ್-ಜಮ್ಮು ಪ್ರದೇಶದ ಸೇತುವೆಯ ಬಳಿಯ ಅಂಗಡಿಯೊಂದರಲ್ಲಿ ಸಿಸಿಟಿವಿ ಕ್ಯಾಮೆರಾವನ್ನು ಅಳವಡಿಸಿದ್ದ ಎಂದು ಪೋಲಿಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

40 ಸಾವಿರ ಆಸೆಗೆ ಭಾರತೀಯ ಸೇನಾ ಮಾಹಿತಿ ರವಾನೆ

ಪಾಕಿಸ್ತಾನ ಮತ್ತು ವಿದೇಶದಲ್ಲಿರುವವರಿಗೆ ಸಿಸಿಟಿವಿ ಕಣ್ಗಾವಲು ಮಾಹಿತಿಯನ್ನು ಎಲೆಕ್ಟ್ರಾನಿಕ್ ರೂಪದಲ್ಲಿ ರವಾನಿಸಲಾಗುತ್ತಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿ ದಲ್ಜಿಂದರ್ ಸಿಂಗ್ ಧಿಲ್ಲೋನ್ ತಿಳಿಸಿದ್ದಾರೆ. ವಿಚಾರಣೆಯ ಸಮಯದಲ್ಲಿ, ಸಿಂಗ್ ಜನವರಿಯಲ್ಲಿ ಸುಜನ್‌ಪುರ ಬಳಿಯ ಹೆದ್ದಾರಿಯಲ್ಲಿರುವ ಅಂಗಡಿಯಲ್ಲಿ ಇಂಟರ್ನೆಟ್ ಆಧಾರಿತ ಸಿಸಿಟಿವಿ ಕ್ಯಾಮೆರಾವನ್ನು ಅಳವಡಿಸಿದ್ದಾಗಿ ಒಪ್ಪಿಕೊಂಡಿದ್ದಾನೆ. ಜೊತೆಗೆ ದುಬೈನಲ್ಲಿರುವ ಅಪರಿಚಿತ ವ್ಯಕ್ತಿಯಿಂದ ನಿರ್ದೇಶನ ಬರುತ್ತಿದ್ದು, 40,000ರೂ.ಗಳನ್ನು ಪಡೆದಿರುವುದಾಗಿ ಪೊಲೀಸ್‌ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ. ಸದ್ಯ ಬಂಧಿತನಿಂದ ಸಿಸಿಟಿವಿ ಕ್ಯಾಮೆರಾ, ಇಂಟರ್‌ನೆಟ್‌ ವೈಫೈ ರೂಟರ್ ಸೇರಿದಂತೆ ಹಲವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಪ್ರಕರಣ ಸಂಬಂಧ ನಾಲ್ವರು ಆರೆಸ್ಟ್

ಪಠಾಣ್‌ಕೋಟ್-ಜಮ್ಮು ಹೆದ್ದಾರಿಯಲ್ಲಿ ಅನುಮಾನಾಸ್ಪದ ಚಟುವಟಿಕೆಗಳ ಬಗ್ಗೆ ಗುಪ್ತಚರ ಮಾಹಿತಿ ಪಡೆದ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಪ್ರಕರಣ ಸಂಬಂಧ ಸುಜನ್‌ಪುರ ಪೊಲೀಸರು, ಬಲ್ಜಿತ್ ಸಿಂಗ್ ಅಲಿಯಾಸ್ ಬಿಟ್ಟು, ವಿಕ್ರಮ್‌ಜಿತ್ ಸಿಂಗ್ ಅಲಿಯಾಸ್ ವಿಕ್ಕಾ, ಬಲ್ವಿಂದರ್ ಸಿಂಗ್ ಅಲಿಯಾಸ್ ವಿಕ್ಕಿ ಮತ್ತು ತರಣ್‌ಪ್ರೀತ್ ಸಿಂಗ್ ಅಲಿಯಾಸ್ ತನ್ನು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದು, ಆರೋಪಿಗಳು ಅಪರಾಧ ಮತ್ತು ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಸಂಬಂಧ ಹಿರಿಯ ಅಧಿಕಾರಿಗಳಿಗೆ ವಿವರಣೆ ನೀಡಲಾಗಿದ್ದು, ಬೇಹುಗಾರಿಕೆಯ ಹಿಂದಿನ ಹಣಕಾಸಿನ ಮೂಲವನ್ನು ಪತ್ತೆಹಚ್ಚಲು ಹೆಚ್ಚಿನ ತನಿಖೆ ನಡೆಯುತ್ತಿದೆ.

Continue Reading

Latest

ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್‌ ಕಡ್ಡಿ ಪತ್ತೆ

VISTARANEWS.COM


on

ಪ್ರಧಾನಮಂತ್ರಿ ನರೇಂದ್ರ ಮೋದಿ ಬೆಂಗಳೂರು ಪ್ರವಾಸದ ವೇಳೆ ಭಾರಿ ಭದ್ರತಾ ಲೋಪ ಬೆಳಕಿಗೆ ಬಂದಿದೆ. ರವಿಶಂಕರ ಗುರೂಜಿ ಅವರ ಜನ್ಮದಿನದ ಅಂಗವಾಗಿ ಆರ್ಟ್‌ ಆಫ್‌ ಲಿವಿಂಗ್‌ ಆಶ್ರಮದಲ್ಲಿ ಹಮ್ಮಿಕೊಂಡಿದ್ದ ಧ್ಯಾನ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಮೋದಿ ಆಗಮಿಸಿದ್ದರು. ಎಚ್‌ಎಎಲ್‌ ನಿಂದ ಕನಕಪುರ ರಸ್ತೆಯ ರವಿಶಂಕರ ಗುರೂಜಿ ಆಶ್ರಮಕ್ಕೆ ಮೋದಿ ತೆರಳಿದ್ದರು. ಇದೇ ವೇಳೆ ಕಗ್ಗಲೀಪುರ ಸಮೀಪದ ತಾತಗುಣಿ ಬಳಿ ಜಿಲೆಟಿನ್‌ ಕಡ್ಡಿಗಳು ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ಮೋದಿ ತೆರಳುವ ಮಾರ್ಗದಿಂದ 50 ಮೀಟರ್‌ ದೂರದಲ್ಲಿ ಈ ಜಿಲೆಟಿನ್‌ ಕಡ್ಡಿಗಳು ಸಿಕ್ಕಿವೆ. ಮೋದಿ ಆಗಮನದ ವೇಳೆ ಭಾರಿ ಅವಘಡಕ್ಕೆ ಸಂಚು ರೂಪಿಸಲಾಗಿತ್ತೇ ಎಂಬ ಶಂಕೆ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಈಗಾಗಲೇ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ತೀವ್ರಗೊಳಿಸಿದ್ದಾರೆ. ಜಿಲೆಟಿನ್ ಕಡ್ಡಿಗಳು ಎಲ್ಲಿಂದ ಬಂದವು?, ಪ್ರಧಾನಮಂತ್ರಿ ಪ್ರಯಾಣಿಸುವ ಮಾರ್ಗದಲ್ಲಿ ಸ್ಫೋಟಿಸಲು ಇಡಲಾಗಿತ್ತೇ? ಘಟನೆ ಹಿಂದೆ ಯಾವುದೇ ಸಂಘಟಿತ ಸಂಚು ಇದೆಯೇ? ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, ಕೋರಮಂಗಲ ಠಾಣೆಗೆ ಕರೆ ಮಾಡಿದ ವ್ಯಕ್ತಿಯೊಬ್ಬರು ವಿವಿಧ ಪ್ರದೇಶಗಳಲ್ಲಿ ಸ್ಫೋಟದ ಬೆದರಿಕೆ ನೀಡಿದ್ದಾರೆ. ಜೊತೆಗೆ ಜಿಲೆಟಿನ್ ಕಡ್ಡಿಗಳನ್ನು ಬಳಸಿ ಸ್ಫೋಟ ಮಾಡುವುದಾಗಿ ಎಚ್ಚರಿಕೆ ನೀಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಕರೆ ಬಂದ ತಕ್ಷಣವೇ ಪೊಲೀಸರು ಕಾರ್ಯಪ್ರವೃತ್ತರಾಗಿ ಆ ವ್ಯಕ್ತಿಯನ್ನು ಪತ್ತೆ ಹಚ್ಚಿದ್ದಾರೆ. HAL ಪ್ರದೇಶದಲ್ಲಿ ನಡೆಸಿದ ಪರಿಶೀಲನೆಯಲ್ಲಿ ಯಾವುದೇ ಸ್ಫೋಟಕ ವಸ್ತುಗಳು ಕಂಡುಬಂದಿಲ್ಲ. ತನಿಖೆಯ ವೇಳೆ ಆರ್ಟ್ ಆಫ್ ಲಿವಿಂಗ್ ಸುತ್ತಮುತ್ತ ಪ್ರದೇಶದಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Continue Reading

ಕ್ರೈಂ

ಪ.ಬಂಗಾಳ ಶೂಟೌಟ್‌ಗೆ ಟ್ವಿಸ್ಟ್‌, ಅಸಲಿಗೆ ಸುವೇಂದು ಟಾರ್ಗೆಟ್‌ ಆಗಿದ್ರಾ?

VISTARANEWS.COM


on

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನವಾಣೆ ಫಲಿತಾಂಶ ಹೊರ ಬೀಳುತ್ತಿದ್ದಂತೆಯೇ ಹಿಂಸಾಚಾರ ಜೋರಾಗಿತ್ತು. ಇದೀಗ ರಕ್ತದೋಕುಳಿಯೇ ಹರಿದಿದೆ. ಬಿಜೆಪಿ ನಾಯಕ ಹಾಗೂ ಸಿಎಂ ರೇಸ್​ನಲ್ಲಿರುವ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ.


ಕಾರಿನಲ್ಲಿ ಮನೆಗೆ ಮರಳುತ್ತಿದ್ದಾಗ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಗಾಡಿ ಅಡ್ಡಗಟ್ಟಿ, ಗುಂಡಿನ ದಾಳಿ ಮಾಡಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಒಬ್ಬ ವ್ಯಕ್ತಿ ಕಾರಿನ ಕಿಟಕಿಯ ಹತ್ತಿರ ಬಂದು ಚಂದ್ರನಾಥ್ ಮೇಲೆ ಮೂರು ಸುತ್ತು ಗುಂಡು ಹಾರಿಸಿದ್ದಾನೆ. ಚಾಲಕನ ಪಕ್ಕದ ಸೀಟಿನಲ್ಲಿ ಕುಳಿತಿದ್ದ ರಥ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈಗ, ಸುವೇಂದು ಅಧಿಕಾರಿ ಪಿಎ ಚಂದ್ರನಾಥ್‌ ಹತ್ಯೆ ಕೇಸ್‌ ಟ್ವಿಸ್ಟ್‌ ಪಡೆದುಕೊಂಡಿದೆ. ಅಸಲಿಗೆ ಸುವೇಂದು ಅಧಿಕಾರಿ ಕೊಲೆಗೆ ಟಾರ್ಗೆಟ್‌‌ , ಮಾಡಲಾಗಿತ್ತು ಎನ್ನಲಾಗಿದ್ದು, ಅದು ಮಿಸ್‌‌ ಆಗಿ ಸುವೇಂದು ಆಪ್ತನ ಹತ್ಯೆ ಮಾಡಲಾಗಿದೆ ಎನ್ನಲಾಗಿದೆ. ದುಷ್ಕರ್ಮಿಗಳು ಆಸ್ಟ್ರಿಯಾ ಮೂಲದ ಗ್ಲಾಕ್‌ ಪಿಸ್ತೂಲ್‌ ಬಳಸಿ ಶೂಟ್‌ ಮಾಡಿದ್ದಾರೆ.

Continue Reading

ಕ್ರೈಂ

ಪಶ್ಚಿಮ ಬಂಗಾಳದಲ್ಲಿ ರಕ್ತದೋಕುಳಿ, ಸುವೇಂದು ಅಧಿಕಾರಿ ಪಿಎ ಚಂದ್ರನಾಥ್‌ ಶೂಟೌಟ್‌‌..!

VISTARANEWS.COM


on

ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನವಾಣೆ ಫಲಿತಾಂಶ ಹೊರಬೀಳ್ತಿದ್ದಂತೆ ಹಿಂಸಾಚಾರ ಜೋರಾಗಿತ್ತು. ಇದೀಗ ರಕ್ತದೋಕುಳಿಯೇ ಹರಿದಿದೆ. ಬಿಜೆಪಿ ನಾಯಕ ಹಾಗೂ ಸಿಎಂ ರೇಸ್​ನಲ್ಲಿರುವ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ.


ಕಾರಿನಲ್ಲಿ ಮನೆಗೆ ಮರಳುತ್ತಿದ್ದಾಗ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಂದ ಗುಂಡಿನ ದಾಳಿ ಮಾಡಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಒಬ್ಬ ವ್ಯಕ್ತಿ ಕಾರಿನ ಕಿಟಕಿಯ ಹತ್ತಿರ ಬಂದು ಚಂದ್ರನಾಥ್ ಮೇಲೆ ಮೂರು ಸುತ್ತು ಗುಂಡು ಹಾರಿಸಿದ್ದಾನೆ. ಚಾಲಕನ ಪಕ್ಕದ ಸೀಟಿನಲ್ಲಿ ಕುಳಿತಿದ್ದ ರಥ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಆದ್ರೀಗ, ಸುವೇಂದು ಅಧಿಕಾರಿ ಪಿಎ ಚಂದ್ರನಾಥ್‌ ಹತ್ಯೆ ಕೇಸ್‌ ಟ್ವಿಸ್ಟ್‌ ಪಡೆದುಕೊಂಡಿದೆ. ಸುವೇಂದು ಅಧಿಕಾರಿ ಕೊಲೆಗೆ ಟಾರ್ಗೆಟ್‌‌ , ಮಾಡಲಾಗಿತ್ತು ಎನ್ನಲಾಗಿದ್ದು, ಮಿಸ್‌‌ ಆಗಿ ಆಪ್ತನ ಹತ್ಯೆ ಮಾಡಿದ್ದಾರೆ. ದುಷ್ಕರ್ಮಿಗಳು ಆಸ್ಟ್ರಿಯಾ ಮೂಲದ ಗ್ಲಾಕ್‌ ಪಿಸ್ತೂಲ್‌ ಬಳಸಿ ಶೂಟೌಟ್‌‌ ಮಾಡಿದ್ದಾರೆ.

Continue Reading
Advertisement
Latest1 day ago

ಟೀಮ್‌ ಇಂಡಿಯಾಗೆ ವೈಭವ್‌ ಸೂರ್ಯವಂಶಿ ಎಂಟ್ರಿ

Latest1 day ago

ಸಿಇಟಿ ಫಲಿತಾಂಶ ಪ್ರಕಟ

ಅವಿಭಾಗೀಕೃತ1 day ago

ರಾಮಲಿಂಗಾರೆಡ್ಡಿ ರಾಜೀನಾಮೆ ಕಗ್ಗಂಟಿಗೆ ತೆರೆ? ಸುರ್ಜೇವಾಲಾ ಮಾತುಕತೆ ಯಶಸ್ವಿ?

Latest2 days ago

ರಾಮಲಿಂಗಾರೆಡ್ಡಿ ಜೊತೆ ಮಾತನಾಡುತ್ತೇನೆ – ಡಿಕೆಶಿ

Latest2 days ago

ಬಿಜೆಪಿಗೆ ರಾಜೀನಾಮೆ ಬಳಿಕ ಹೊಸ ರಾಜಕೀಯ ಚಳವಳಿ ಘೋಷಿಸಿದ ಅಣ್ಣಾಮಲೈ; ತಮಿಳುನಾಡಿನಲ್ಲಿ ಏಕಾಂಗಿ ಹೋರಾಟದ ನಿರ್ಧಾರ

Latest2 days ago

ರಾಹುಲ್ ಗಾಂಧಿ ಸಮ್ಮುಖದಲ್ಲಿ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆ

Latest2 days ago

ಖಾತೆ ಹಂಚಿಕೆ ಬಗ್ಗೆ ಮುನಿಯಪ್ಪ ಅಸಮಾಧಾನ: ಸಚಿವ ಸ್ಥಾನಕ್ಕೆ ರಾಜೀನಾಮೆ ಚಿಂತನೆ?

Latest3 days ago

ರಾಮಲಿಂಗಾ ರೆಡ್ಡಿ ರಾಜೀನಾಮೆ ಕಾಂಗ್ರೆಸ್ ಒಳಜಗಳದ ಪರಿಣಾಮ: ವಿಜಯೇಂದ್ರ ವಾಗ್ದಾಳಿ

Latest3 days ago

ಅಣ್ಣಾಮಲೈ ರಾಜೀನಾಮೆ ಸ್ವೀಕಾರ : ಹೊಸ ಪಕ್ಷ ಘೋಷಣೆ ಕುರಿತು ಇಂದು ಮಹತ್ವದ ಸುದ್ದಿಗೋಷ್ಠಿ

Latest3 days ago

ರಾಜ್ಯಸಭಾ ಚುನಾವಣೆಗೆ ಇಂದು ಮಧ್ಯಾಹ್ನ ನಾಮಪತ್ರ ಸಲ್ಲಿಸಲಿರುವ ಮಲ್ಲಿಕಾರ್ಜುನ ಖರ್ಗೆ

galipata neetu
ಕಿರುತೆರೆ3 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ3 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌