ನವದೆಹಲಿ: ನೂರಾರು ಕೋಟಿ ರೂ. ಸುಲಿಗೆ ಪ್ರಕರಣದಲ್ಲಿ ಸಿಲುಕಿರುವ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez) ಅವರ ಕುರಿತು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಮತ್ತೊಂದು ಮಹತ್ವದ ವಿಷಯ ಬಹಿರಂಗಪಡಿಸಿದ್ದಾರೆ. ವಂಚಕ ಸುಕೇಶ್ ಚಂದ್ರಶೇಖರ್ ವಿರುದ್ಧದ ಎಲ್ಲ ಪ್ರಕರಣಗಳು, ಸುಕೇಶ್ ಮದುವೆ ಸೇರಿ ಎಲ್ಲ ವಿಚಾರದ ಕುರಿತು ಮೊದಲೇ ಗೊತ್ತಿಲ್ಲ ಎಂದು ಇ.ಡಿ ಅಧಿಕಾರಿಗಳು ತಿಳಿಸಿದ್ದಾರೆ.
ಸುಕೇಶ್ ವಿರುದ್ಧ ದಾಖಲಾದ ಪ್ರಕರಣಗಳ ಕುರಿತು ನನಗೆ ಗೊತ್ತಿರಲಿಲ್ಲ ಎಂಬುದಾಗಿ ಇದಕ್ಕೂ ಮೊದಲು ಜಾಕ್ವೆಲಿನ್ ಹೇಳಿದ್ದರು. ಆದರೆ, ಇ.ಡಿ ಸಲ್ಲಿಸಿದ ಚಾರ್ಜ್‌ಶೀಟ್‌ನಲ್ಲಿ ಮಹತ್ವದ ಅಂಶ ಉಲ್ಲೇಖಿಸಲಾಗಿದೆ. “ಸುಕೇಶ್ ಚಂದ್ರಶೇಖರ್ ವಿರುದ್ಧ ದಾಖಲಾದ ಕ್ರಿಮಿನಲ್ ಪ್ರಕರಣಗಳ ಬಗ್ಗೆ ಜಾಕ್ವೆಲಿನ್‌ಗೆ ಮೊದಲೇ ಗೊತ್ತಿತ್ತು. ಅಲ್ಲದೆ, ಆತ ಮದುವೆಯಾಗಿದ್ದು, ಪತ್ನಿಯ ಹೆಸರಿನ ಬಗ್ಗೆಯೂ ಮಾಹಿತಿ ಇತ್ತು. ಇದೆಲ್ಲ ಗೊತ್ತಿದ್ದರೂ ನಟಿಯು ಸುಕೇಶ್ ಜತೆ ಹಣಕಾಸು ವಹಿವಾಟು ನಡೆಸಿದ್ದಾರೆ” ಎಂದು ಉಲ್ಲೇಖಿಸಿದೆ.
“ಸುಕೇಶ್ ಬಗ್ಗೆ ಎಲ್ಲ ಮಾಹಿತಿ ಗೊತ್ತಿದ್ದರೂ ಆತನ ಜತೆ ನಿಕಟ ಸಂಬಂಧ ಹೊಂದಿದ್ದು, ಹಣಕಾಸು ಲಾಭ ಪಡೆದಿದ್ದು ಅಪರಾಧವೇ ಆಗಿದೆ” ಎಂದೂ ಇ.ಡಿ ಪ್ರಸ್ತಾಪಿಸಿದೆ. ನೂರಾರು ಕೋಟಿ ರೂ. ಸುಲಿಗೆ ಮಾಡಿದ ಆರೋಪದಲ್ಲಿ ಸುಕೇಶ್ ವಿರುದ್ಧ ಹಲವು ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ಸುಕೇಶ್ ಸುಮಾರು ೭.೧೨ ಕೋಟಿ ರೂ. ನೀಡಿದ್ದಾರೆ ಎಂದು ಇಡಿ ಆರೋಪಿಸಿದೆ.
ಇದನ್ನೂ ಓದಿ | ವಿಸ್ತಾರ Explainer | ರಕ್ಕಮ್ಮ ಜಾಕ್ವೆಲಿನ್ ವಂಚಕ ಸುಕೇಶ್ ಕೈಯಲ್ಲಿ ರೊಕ್ಕಮ್ಮ ಆಗಿದ್ದು ಹೇಗೆ?