Site icon Vistara News

Actor Jaggesh: ಅರಣ್ಯಾಧಿಕಾರಿಗಳ ಕ್ರಮ ಪ್ರಶ್ನಿಸಿ ಹೈಕೋರ್ಟ್‌ ಮೊರೆ ಹೋದ ಜಗ್ಗೇಶ್‌

Jaggesh

ಬೆಂಗಳೂರು: ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದ ಆರೋಪದ ಮೇಲೆ ನಟ ದರ್ಶನ್ ತೂಗುದೀಪ, ನಿಖಿಲ್ ಕುಮಾರಸ್ವಾಮಿ, ಜಗ್ಗೇಶ್ (Actor Jaggesh) ಮತ್ತು ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಅವರ ಮನೆ ಮೇಲೆ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದರು. ಈ ವಿಚಾರದಲ್ಲಿ ಜಗ್ಗೇಶ್ ಅವರು ಅಸಮಾಧಾನಗೊಂಡಂತಿದೆ. ಅವರು ಈ ಪ್ರಕರಣದಲ್ಲಿ ಕೋರ್ಟ್ ಮೊರೆ ಹೋಗಿದ್ದಾರೆ. ಅರಣ್ಯಾಧಿಕಾರಿಗಳ ಕ್ರಮ ಪ್ರಶ್ನಿಸಿ ಹೈಕೋರ್ಟ್‌ಗೆ ನಟ ಜಗ್ಗೇಶ್ ಅರ್ಜಿ ಸಲ್ಲಿಸಿದ್ದಾರೆ.

ನಟ ಮನವಿ ಮಾಡಿದ್ದೇನು?

ಅರಣ್ಯಾಧಿಕಾರಿಗಳ ಕ್ರಮ ಕಾನೂನುಬಾಹಿರವೆಂದು ಘೋಷಿಸಲು ನಟ ಮನವಿ ಮಾಡಿದ್ದಾರೆ. ಅರಣ್ಯಾಧಿಕಾರಿಗಳು ನೀಡಿದ ನೊಟೀಸ್‌ ರದ್ದು ಪಡಿಸಬೇಕು. ನೊಟೀಸ್‌ಗೆ ಉತ್ತರಿಸುವ ಮೊದಲೇ 14 ಅಧಿಕಾರಿಗಳಿಂದ ದಾಳಿ ನಡೆದಿದೆ. ಪೂರ್ತಿ ಮನೆಯಲ್ಲಿನ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ. ಸಂದರ್ಶನದಲ್ಲಿ ಹೇಳಿದ ಮಾತನ್ನಾಧರಿಸಿ ತೇಜೋವಧೆ ಮಾಡಲಾಗಿದೆ. ಎಲ್ಲಾ ಆರೋಪಗಳೂ ಸುಳ್ಳೆಂದು ಸ್ಪಷ್ಟನೆ ನೀಡಿದ್ದಾರೆ. ಅರಣ್ಯಾಧಿಕಾರಿಗಳ ಕ್ರಮ ಕಾನೂನುಬಾಹಿರವೆಂದು ಘೋಷಿಸಬೇಕು ಎಂದಯ ನಟ ಜಗ್ಗೇಶ್ ಪರ ವಕೀಲರು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: Actor Jaggesh: ಹುಲಿ ಉಗುರು ಕಂಟಕ; ಜಗ್ಗೇಶ್‌ ಅರೆಸ್ಟ್‌ ಯಾವಾಗ?

ಆಗಿದ್ದೇನು?

 ʻʻನನಗೆ 20 ವರ್ಷ ತುಂಬಿದಾಗ ಅಮ್ಮ ಈ ಲಾಕೆಟ್ ನೀಡಿದ್ದರು. ಮಗ ಹುಲಿ ಇದ್ದಾಂಗೆ ಇರಬೇಕು ಎಂದು ಅಮ್ಮ ಈ ಲಾಕೆಟ್​ನ ಹಾಕಿದ್ದರು’ ಎಂದು ಸಂದರ್ಶನದಲ್ಲಿ ಜಗ್ಗೇಶ್ ಹೇಳಿದ್ದರು. ಈ ವಿಡಿಯೊ ವೈರಲ್ ಆಗಿತ್ತು.

ಪರೋಕ್ಷವಾಗಿ ಅಸಮಾಧಾನ 

ಮನೆಗೆ ಅರಣ್ಯಾಧಿಕಾರಿಗಳ ಭೇಟಿ ನಂತರ ಸಾಮಾಜಿಕ ಜಾಲತಾಣದಲ್ಲಿ ನಟ ಜಗ್ಗೇಶ್‌ ಪ್ರತಿಕ್ರಿಯಿಸಿ, ಕಾನೂನು ದೊಡ್ಡದು, ಅಧಿಕಾರಿಗಳು ಕೇಳಿದ ವಸ್ತು ಒಪ್ಪಿಸಲಾಗಿದೆ. ಅಮ್ಮ ನೀಡಿದ ಬಹಳ ಹಳೆಯ ಲಾಕೆಟ್ ಎಂದು ತಿಳಿಸಿರುವೆ. ಎಷ್ಟೋ ದೋಚುವ ಮನುಷ್ಯರು, ಕೊಲೆ ಪಾತಕರು, ದೇಶದ್ರೋಹಿಗಳು, ಸಮಾಜ ಘಾತಕರಿಗಿಂತ ನನ್ನತಾಯಿ ಕಾಣಿಕೆ ಬಗ್ಗೆ ನಿನ್ನೆಯಿಂದ ತಲೆಕೆಡಿಸಿಕೊಂಡ ದೇವರುಗಳಿಗೆ ಧನ್ಯವಾದ. ತಲೆತಗ್ಗಿಸುವ ಯಾವ ಕೆಲಸ ಮಾಡಿಲ್ಲಾ ಮಾಡೋದಿಲ್ಲಾ! ಪಾಚ್ಕೊಳಿ ಎಂದು ಹೇಳಿದ್ದರು.

ಇದನ್ನೂ ಓದಿ: Darshan Thoogudeepa: ದರ್ಶನ್‌ ಮನೆಯಲ್ಲಿ 8 ಹುಲಿ ಉಗುರಿನ ಮಾದರಿಯ ಪೆಂಡೆಂಟ್?

ಒಂದು ವಿಷಯ ಅದ್ಭುತವಾಗಿ ಅರಿತೆ, ಪ್ರೀತಿಸುವವರು 1000 ಜನ ಇದ್ದರೂ, ವಿಷಯವಿಲ್ಲದೆ ದ್ವೇಷ ಮಾಡುವ 100 ಜನರು ಇದ್ದೆ ಇರುತ್ತಾರೆ. But remember one thing, ಒಳ್ಳೆ ಗುಣ, ನಡತೆ ಇದ್ದಾಗ ಕೊಲ್ಲೋಕೆ ಸಾವಿರ ಮಂದಿ ಬಂದರೂ, ಕಾಯಲು ಒಬ್ಬ ಬರುತ್ತಾನೆ, ಅವನೇ ದೇವರು. ಬದುಕಲ್ಲಿ ಸಾಧ್ಯವಾದರೆ ಒಬ್ಬರಿಗೆ ಒಳ್ಳೆಯದು ಮಾಡಿ,
ಅನ್ಯರಿಗೆ ಕೆಡುಕು ಬಯಸಿ ಬಾಳಿದರೆ ನಾಶವಾಗುತ್ತಾರೆ ಎಂದು ಕಿಡಿಕಾರಿದ್ದರು.

Exit mobile version