Site icon Vistara News

Jai Shree Ram slogan: ರಾಮಭಕ್ತರ ಮೇಲೆ ಹಲ್ಲೆ ಮಾಡಿದ 4 ಮಂದಿಯ ಬಂಧನ, ಇಂದು ಬಿಜೆಪಿ ಪ್ರತಿಭಟನೆ

jai shree ram assault case

ಬೆಂಗಳೂರು: ‘ಜೈ ಶ್ರೀರಾಮ್‌’ ಘೋಷಣೆ (Jai Shree Ram slogan) ಕೂಗಿದ್ದಕ್ಕೆ ಹಿಂದು ಯುವಕರ ಮೇಲೆ ಹಲ್ಲೆ ಪ್ರಕರಣಕ್ಕೆ (Assault Case) ಸಂಬಂಧಿಸಿ ನಾಲ್ಕು ಮಂದಿ ಆರೋಪಿಗಳನ್ನು (Culprits) ಪೊಲೀಸರು ಬಂಧಿಸಿದ್ದಾರೆ. ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಹಿಂದು ಯುವಕರ (Hindu youth) ಮೇಲೆ ಬುಧವಾರ ಸಂಜೆ ಹಲ್ಲೆ ಮಾಡಿದ್ದವರ ಪೈಕಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಎ1 ಫರ್ಮಾನ್, ಎ2 ಸಮೀರ್ ಹಾಗೂ ಮತ್ತಿಬ್ಬರನ್ನು ಬಂಧಿಸಲಾಗಿದೆ. ಒಟ್ಟು ನಾಲ್ವರು ಆರೋಪಿಗಳ ಪೈಕಿ ಇಬ್ಬರು ಅಪ್ರಾಪ್ತರಾಗಿದ್ದಾರೆ. ಸದ್ಯ ಆರೋಪಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ.

“ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಹಲ್ಲೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಸಿಸಿಟಿವಿ ದೃಶ್ಯಗಳ ಪರಿಶೀಲನೆ ಕೂಡ ಮಾಡಲಾಗಿದೆ. ಘಟನೆಯಲ್ಲಿ ನಾಲ್ವರು ಭಾಗಿಯಾಗಿರೋದು ಗೊತ್ತಾಗಿದೆ. ನಾಲ್ವರಲ್ಲಿ ಇಬ್ಬರು ಅಪ್ರಾಪ್ತರಿದ್ದಾರೆ. ಪ್ರಮುಖ ಆರೋಪಿ ಫರ್ಮಾನ್. ತನಿಖೆ ಮುಂದುವರೆದಿದೆ. ಮತ್ತೆ ಯಾರಾದರೂ ಭಾಗಿಯಾಗಿದ್ದಾರಾ ಎಂದು ಪರಿಶೀಲಿಸಲಾಗುತ್ತಿದೆ” ಎಂದು ಈಶಾನ್ಯ ವಿಭಾಗ ಡಿಸಿಪಿ ಲಕ್ಷ್ಮಿಪ್ರಸಾದ್ ಹೇಳಿಕೆ ನೀಡಿದ್ದಾರೆ.

“ಆರೋಪಿಗಳು ಬೈಕ್‌ನಲ್ಲಿ ಹೋಗುತ್ತಿರಬೇಕಾದರೆ ಕಾರನ್ನ ಗಮನಿಸಿದ್ದಾರೆ. ಕಾರಲ್ಲಿ ಬಾವುಟ ಹಿಡಿದು ಹೋಗ್ತಿರೋದು ನೋಡಿ ವಾಪಸ್ಸು ಬಂದಿದ್ದಾರೆ. ಕಾರನ್ನು ಅಡ್ಡ ಹಾಕಿ ಗಲಾಟೆ ಮಾಡಿದ್ದಾರೆ” ಎಂದು ಅವರು ಹೇಳಿದ್ದಾರೆ.

ಗಾಂಜಾ ನಶೆಯಲ್ಲಿ ಹಲ್ಲೆ ಮಾಡಿದ್ರಾ ಯುವಕರು?

ಗಾಂಜಾ ನಶೆಯಲ್ಲಿ ಕಾರು ಅಡ್ಡ ಹಾಕಿ ಯುವಕರು ಗಲಾಟೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಯುವಕರು ಗಾಂಜಾ ಸೇವನೆ ಮಾಡಿದ್ದರೇ ಎಂಬ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಇದಕ್ಕಾಗಿ ಆರೋಪಿಗಳಿಗೆ ಮೆಡಿಕಲ್ ಟೆಸ್ಟ್ ಮಾಡಿಸಲು ಪೊಲೀಸರು ಮುಂದಾಗಿದ್ದಾರೆ.

ಗುರುವಾರ ಬೆಳಗ್ಗೆ ವಿದ್ಯಾರಣ್ಯಪುರ ಠಾಣೆ ಎದುರು ಪ್ರತಿಭಟನೆ

ವಿದ್ಯಾರಣ್ಯಪುರಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಅವರು ಭೇಟಿ ನೀಡಿ, ಹಲ್ಲೆಗೊಳಗಾದ ಯುವಕರ ಯೋಗಕ್ಷೇಮ ವಿಚಾರಿಸಿ, ಧೈರ್ಯ ತುಂಬಿದ್ದಾರೆ. ಈ ವೇಳೆ ಘಟನೆ ಖಂಡಿಸಿ ಗುರುವಾರ (ಏ.18) ಬೆಳಗ್ಗೆ 10 ಗಂಟೆಗೆ ವಿದ್ಯಾರಣ್ಯಪುರ ಪೋಲಿಸ್ ಠಾಣೆ ಮುಂಭಾಗ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸುವುದಾಗಿ ಸಂಸದೆ ಹೇಳಿದ್ದಾರೆ.

ಯಾರೇ ಆಗಲಿ ಚುನಾವಣೆ ಸಂದರ್ಭದಲ್ಲಿ ಈ ರೀತಿ ಗಲಭೆ ಹೆಚ್ಚಿಸುವ ಪ್ರಯತ್ನ ಮಾಡಬಾರದು. ಅದೂ ನಮ್ಮ ಕ್ಷೇತ್ರದಲ್ಲಿ‌ ಕೆಲವರ ಕುಮ್ಮಕ್ಕಿನಿಂದ ಗಲಭೆ ಮಾಡಿರಬಹುದು. ಇದಕ್ಕೆ ಕಾಂಗ್ರೆಸ್ ಕುಮ್ಮಕ್ಕು ಸಹ ಇರಬಹುದು. ಪೊಲೀಸರು ಈ ಪ್ರಕರಣದಲ್ಲಿ ಬೇಜವಾಬ್ದಾರಿಯಾಗಿ ವರ್ತಿಸುತ್ತಿದ್ದಾರೆ. ಈ ಬಗ್ಗೆ ಪೊಲೀಸ್ ಕಮೀಷನರ್‌ಗೆ ಮನವಿ ಮಾಡ್ತೀನಿ. ಕೂಡಲೇ ತಪ್ಪಿತಸ್ಥರ ಮೇಲೆ ಕಠಿಣ ಕಾನೂನು ಕ್ರಮ ಆಗಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಒತ್ತಾಯಿಸಿದರು.

ಏನಿದು ಪ್ರಕರಣ?

ಬುಧವಾರ ಸಂಜೆ ಜೈ ಶ್ರೀರಾಮ್ ಎಂದು ಕೂಗಿದ್ದಕ್ಕೆ (Jai Shri Ram Slogan) ಕಾರಿನಲ್ಲಿ ಹೋಗುತ್ತಿದ್ದ ಹಿಂದು ಯುವಕರ ಮೇಲೆ ಮುಸ್ಲಿಂ ಯುವಕರು ಹಲ್ಲೆ ನಡೆಸಿದ್ದರು. ವಿದ್ಯಾರಣ್ಯಪುರದ ಚಿಕ್ಕ ಬೆಟ್ಟಳ್ಳಿ ಮಸೀದಿ ಬಳಿ ಘಟನೆ ನಡೆದಿತ್ತು. ರಾಮನವಮಿ (Ram Navami) ಹಿನ್ನೆಲೆ ಜೈ ಶ್ರೀರಾಮ್ ಎಂದು ಹೇಳುತ್ತಾ ಹಿಂದು ಯುವಕರು ಕಾರಿನಲ್ಲಿ ಹೋಗುತ್ತಿದ್ದಾಗ, ಅವರನ್ನು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ಮಾಡಲಾಗಿತ್ತು.

ಶ್ರೀ ರಾಮನವಮಿ ಕಾರ್ಯಕ್ರಮ ಮುಗಿಸಿ ಕಾರಿನಲ್ಲಿ ಹಿಂದು ಯುವಕರು ತೆರಳುತ್ತಿದ್ದಾಗ, ಜೈ ಶ್ರೀರಾಮ್ ಎಂದು ಕೂಗಿದ್ದರು. ಈ ವೇಳೆ ಎರಡು ಬೈಕ್‌ಗಳಲ್ಲಿ ಬಂದ ಮುಸ್ಲಿಂ ಯುವಕರು, “ಜೈ ಶ್ರೀರಾಮ್‌ ಹೇಳಬಾರದು, ಅಲ್ಲಾಹ್ ಅಂತ ಹೇಳಬೇಕು” ಎಂದು ಹಿಂದು ಯುವಕರ ಮೇಲೆ ಹಲ್ಲೆ ನಡೆಸಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಬಗ್ಗೆ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಬೈಕ್‌ನಲ್ಲಿ ಬಂದಿದ್ದ ಯುವಕರು, ಜೈ ಶ್ರೀ ರಾಮ್ ಇಲ್ಲಾ… ಓನ್ಲೀ ಅಲ್ಲಾ ಹು ಅಕ್ಬರ್ ಎಂದು ಹೇಳಿದ್ದರು. ಅಲ್ಲದೆ ಕಾರಿನಲ್ಲಿ ಇದ್ದವರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದರು. ಇದೇ ವೇಳೆ ನಾವು ನಿಮ್ಮ ಹಬ್ಬದಲ್ಲಿ ಹೀಗೆ ಮಾಡುತ್ತೀವಾ ಎಂದು ಹಿಂದು ಯುವಕರು ಪ್ರಶ್ನೆ ಮಾಡಿದ್ದರು.

ವಿದ್ಯಾರಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲು

ಹಿಂದು ಯುವಕರ ಮೇಲೆ ಹಲ್ಲೆ ಪ್ರಕರಣ ಸಂಬಂಧ ಡಿ. ಪವನ್ ಕುಮಾರ್ ನೀಡಿದ ದೂರಿನ ಮೇರೆಗೆ ವಿದ್ಯಾರಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸ್ನೇಹಿತರಾದ ವಿನಾಯಕ ಮತ್ತು ರಾಹುಲ್ ಜತೆ ಚಿಕ್ಕಬೆಟ್ಟಹಳ್ಳಿ ರಸ್ತೆಯಲ್ಲಿ ಮಧ್ಯಾಹ್ನ ಕಾರಿನಲ್ಲಿ ಹೋಗುತ್ತಿದ್ದೆ. ಕಾರಿನ ಮುಂದೆ ಶ್ರೀರಾಮನ ಧ್ವಜ ಕಟ್ಟಿದ್ದನ್ನು ನೋಡಿದ ಇಬ್ಬರು ಮುಸ್ಲಿಂ ಯುವಕರು, ನಮ್ಮ ಬಳಿ ಬಂದು, ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾ, ಅಲ್ಲಾ ಹು ಅಕ್ಬರ್” ಎಂದು ಕೂಗಬೇಕು ಎಂದು ಒತ್ತಾಯಿಸಿದರು. ನಾವು ಹಾಗೆ ಕೂಗುವುದಿಲ್ಲವೆಂದು ಹೇಳಿದಾಗ, ನಮ್ಮ ಮೇಲೆ ದೊಣ್ಣೆಯಿಂದ ಹಲ್ಲೆ ಮಾಡಿದ್ದು, ರಾಹುಲ್ ತಲೆಗೆ ಪೆಟ್ಟು ಬಿದ್ದು ಮೂಗಿನಿಂದ ರಕ್ತಸ್ರಾವವಾಗಿದೆ. ಹೇಗೋ ನಾವು ಅಲ್ಲಿಂದ ತಪ್ಪಿಸಿಕೊಂಡು ಬಂದಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ಇದನ್ನೂ ಓದಿ | Road Accident: ವಾಟರ್‌ ಟ್ಯಾಂಕರ್‌ಗೆ ಡಿಕ್ಕಿಯಾಗಿ ಬೈಕ್‌ ಹಿಂಬದಿ ಸವಾರ ಸಾವು; ಬೆಚ್ಚಿ ಬೀಳಿಸುವ ಅಪಘಾತದ ದೃಶ್ಯ!

Exit mobile version