Site icon Vistara News

Jai Sriram Slogan: ಜೈ ಶ್ರೀರಾಮ್‌ ಹೇಳಿದ್ದಕ್ಕೆ ಮುಸ್ಲಿಂ ಯುವಕರಿಂದ ಹಲ್ಲೆ; ಇನ್ನೊಂದು ಘಟನೆ

jai sriram slogan koppal crime news

ಕೊಪ್ಪಳ: ʼಜೈ ಶ್ರೀರಾಮ್ʼ ಎಂದ (Jai Sriram Slogan) ವ್ಯಕ್ತಿಯ ಮೇಲೆ ಮುಸ್ಲಿಂ ಯುವಕರು ಹಲ್ಲೆ (Assault Case) ನಡೆಸಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ. ಕೊಪ್ಪಳ (Koppal news) ಜಿಲ್ಲೆಯ ಗಂಗಾವತಿ ತಾಲೂಕಿನ ಶ್ರೀರಾಮನಗರದ ಶೈನ್ ಬಾರ್‌ನಲ್ಲಿ ಈ ಘಟನೆ (Crime news) ನಡೆದಿದ್ದು, ಮದ್ಯ ಸೇವನೆಯ ವೇಳೆ ʼಜೈ ಶ್ರೀರಾಮ್‌ʼ ಎಂದಿದ್ದಕ್ಕೆ ಹಲ್ಲೆ ನಡೆಸಲಾಗಿದೆ ಎಂಬುದು ಆರೋಪ.

ಶ್ರೀರಾಮ ನಗರದ ಕುಮಾರ್ ರಾಠೋಡ್ ಎಂಬವರ ಮೇಲೆ ಹಲ್ಲೆ ಮಾಡಿದ್ದಾರೆಂದು ಆರೋಪಿಸಲಾಗಿದೆ. ಹಲ್ಲೆಯಲ್ಲಿ ಗಾಯಗೊಂಡಿರುವ ಕುಮಾರ್ ರಾಠೋಡ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಾರ್‌ನಲ್ಲಿ ʼಜೈ ಶ್ರೀರಾಮ್‌ʼ ಎಂದು ಕೂಗಿದಾಗ 20 ಜನ ಮುಸ್ಲಿಂ ಯುವಕರು ಘೇರಾಯಿಸಿ ಸೇರಿ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಸ್ಥಳಕ್ಕೆ ಗಂಗಾವತಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಶ್ರೀರಾಮನವಮಿ (Sri Ram Navami) ಸಂದರ್ಭದಲ್ಲಿ ಜೈ ಶ್ರೀರಾಮ್‌ ಘೋಷಣೆ ಕೂಗಿದ್ದ ಯುವಕರನ್ನು ಅಡ್ಡಗಟ್ಟಿ ಕೆಲ ಮುಸ್ಲಿಂ ಯುವಕರು ಗೂಂಡಾಗಿರಿ ನಡೆಸಿದ್ದ ಘಟನೆ ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ನಡೆದಿತ್ತು. ಹಿಂದು ಯುವಕರ ಮೇಲೆ ಹಲ್ಲೆ ಪ್ರಕರಣ ಸಂಬಂಧ ಡಿ. ಪವನ್ ಕುಮಾರ್ ನೀಡಿದ ದೂರಿನ ಮೇರೆಗೆ ವಿದ್ಯಾರಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಕೆಲವರನ್ನು ವಶಕ್ಕೆ ಪಡೆದುಕೊಂಡು ವಿಚಾರಿಸಲಾಗಿದೆ.

ಗುಜರಿ ಅಂಗಡಿ ಮಾಲೀಕನಿಗೆ ಬೆದರಿಸಿ ಹಣ ಪೀಕಿದ ಪೊಲೀಸ್‌ 

ಬೆಂಗಳೂರು: ಮಾರತ್ತಹಳ್ಳಿ ಪೊಲೀಸ್ ಠಾಣೆ ಸಿಬ್ಬಂದಿ ಸುಳ್ಳು ಆರೋಪಗಳನ್ನು ಮಾಡಿ ಗುಜರಿ ಅಂಗಡಿ ಮಾಲೀಕನಿಂದ ಹಣ ವಸೂಲಿ (Fraud Case) ಮಾಡಿರುವ ಆರೋಪವೊಂದು ಕೇಳಿ ಬಂದಿದೆ. ಗುಜರಿ ಅಂಗಡಿ ಮಾಲೀಕ ಅಖ್ತಿರ್ ಅಲಿ ಮಂಡಲ್‌ ಎಂಬುವವರು ಈ ಸಂಬಂಧ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ.

ಅಖ್ತರ್ ಅವರು ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ನಲ್ಲೂರಳ್ಳಿಯಲ್ಲಿ ಗುಜರಿ ಅಂಗಡಿ ಇಟ್ಟುಕೊಂಡಿದ್ದರು. ಕಳೆದ ಏಪ್ರಿಲ್ 17ರ ಮಧ್ಯಾಹ್ನ 12ಗಂಟೆಗೆ ಗುಜುರಿ ಬಳಿ ಪೊಲೀಸ್ ಸಿಬ್ಬಂದಿ, ಇನ್ಫಾರ್ಮರ್ ಎಸ್.ನಿವಾಸ್ ಎಂಬಾತನ ಜತೆಗೆ ಆಗಮಿಸಿದ್ದರು. ಹೀಗೆ ಬಂದವರೇ ನಾವು ಪೊಲೀಸರು ನೀವು ದಂಧೆ ನಡೆಸುತ್ತಿದ್ದೀರಾ? ಗಾಂಜಾ ಮಾರಾಟ ಮಾಡುತ್ತೀದ್ದೀರಾ ಎಂದು ಬೆದರಿಕೆ ಹಾಕಿದ್ದಾರೆ.

ಕೆಲಸಗಾರರ ಮೇಲೆ ಹಲ್ಲೆ ಮಾಡಿ ಅಖ್ತರ್ ಬಳಿ ಸುಮಾರು 2 ಲಕ್ಷ ರೂ. ಹಣವನ್ನು ಇನ್ಫಾರ್ಮರ್ ಖಾತೆಗೆ ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಮೊದಲು 20 ಸಾವಿರ ನಗದು ಪಡೆದುಕೊಂಡು ಬಳಿಕ ಬ್ಯಾಂಕ್ ಖಾತೆಯಿಂದ 80 ಸಾವಿರ ರೂ. ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಅಷ್ಟೇ ಅಲ್ಲ ಹೋಗುವಾಗ ಬೆದರಿಕೆ ಹಾಕಿ ಎಟಿಎಂ ಕಾರ್ಡ್ ಹಾಗೂ ಪಿನ್ ನಂಬರ್‌ ಪಡೆದುಕೊಂಡಿದ್ದಾರೆ. ಬಳಿಕ ಎಟಿಎಂನಿಂದ 50 ಸಾವಿರ ಹಣ ಡ್ರಾ ಮಾಡಿಕೊಂಡಿದ್ದಾರೆ.

ಮರುದಿನ ವಾಪಸ್‌ ಗುಜುರಿ ಅಂಗಡಿಗೆ ಬಂದಿದ್ದ ಆರೋಪಿಗಳು, ಎಟಿಎಂ ಕಾರ್ಡ್ ಕೊಟ್ಟು ಮತ್ತೆ 50 ಸಾವಿರ ಹಣ ಪಡೆದುಕೊಂಡು ಹೋಗಿದ್ದಾರೆ. ಮತ್ತೊಮ್ಮೆ 50 ಸಾವಿರ ರೂ. ಕೊಡಬೇಕು ಇಲ್ಲದಿದ್ದರೆ ಬೈಕ್ ತೆಗೆದುಕೊಂಡು ಹೋಗುವುದಾಗಿ ಬೆದರಿಕೆ ಹಾಕಿದ್ದಾರೆ. ಇವರ ಕಾಟ ತಾಳಲಾರದೆ ಅಖ್ತಿರ್‌ ವೈಟ್ ಫೀಲ್ಡ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ನಿವಾಸ್ ಎಂಬಾತನನ್ನು ಬಂಧಿಸಿದ್ದಾರೆ. ತಲೆಮರೆಸಿಕೊಂಡಿರುವ ಮೂವರು ಆರೋಪಿಗಳಿಗೆ ಹುಡುಕಾಟ ನಡೆಸಿದ್ದಾಗಿ ವೈಟ್ ಫೀಲ್ಡ್ ಡಿಸಿಪಿ ಶಿವಕುಮಾರ್ ಗುಣಾರೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Road Accident : ಮಿಡ್‌ನೈಟ್‌ನಲ್ಲಿ ರಸ್ತೆ ಕಾಣದೆ ಡಿವೈಡರ್‌ಗೆ ಬೈಕ್‌ ಡಿಕ್ಕಿ; ಹಾರಿ ಬಿದ್ದ ಸವಾರ ಸ್ಥಳದಲ್ಲೇ ಸಾವು

Exit mobile version