Site icon Vistara News

ಧನ ಸಹಾಯದ ಮೆಸೆಜ್‌ ಕಳುಹಿಸಿ ಚಂದ್ರಶೇಖರ ಕಂಬಾರ ಹೆಸರಿನಲ್ಲಿ ವಂಚನೆ

ಚಂದ್ರಶೇಖರ ಕಂಬಾರ

ಬೆಂಗಳೂರು: ಜ್ಞಾನಪೀಠ ಪುರಸ್ಕೃತ ಸಾಹಿತಿ ಡಾ. ಚಂದ್ರಶೇಖರ ಕಂಬಾರ ಅವರ ಹೆಸರಿನಲ್ಲಿ ವಾಟ್ಸ್‌ಆ್ಯಪ್‌ ಮೆಸೇಜ್ ಕಳಿಸಿ ವಂಚನೆ ನಡೆಸಲಾಗುತ್ತಿರುವ ಆರೋಪ ಕೇಳಿಬಂದಿದೆ.

ಕಿಡಿಗೇಡಿಗಳು, ಕಂಬಾರರ ಹೆಸರಲ್ಲಿ ಮೆಸೇಜ್ ಮಾಡಿ ಹಣದ ಸಹಾಯ ಕೇಳುತ್ತಿದ್ದಾರೆ. ಈ ಕುರಿತು ಕಂಬಾರ ಅವರು ಬನಶಂಕರಿಯ ಸೈಬರ್‌ ಅಪರಾಧ ವಿಭಾಗದಲ್ಲಿ ದೂರು ದಾಖಲಿಸಿದ್ದಾರೆ.

ಕೋಲ್ಕತ್ತಾದಲ್ಲಿ ನನ್ನ ಸ್ನೇಹಿತರೊಬ್ಬರಿಗೆ ವಾಟ್ಸ್‌ಆ್ಯಪ್‌ ಮೂಲಕ ಮಸೇಜ್ ಮಾಡಿದ್ದಾರೆ. ನಾನು ತೊಂದರೆಯಲ್ಲಿದ್ದೀನಿ, ಹಣದ ಸಹಾಯಬೇಕಿದೆ ಅಂದಿದ್ದಾರೆ. ನಂತರ ಅವರ ಸ್ನೇಹಿತ ನನಗೆ ಕರೆ ಮಾಡಿ ವಿಚಾರ ತಿಳಿಸಿದರು. ಈ ಬಗ್ಗೆ ಸೈಬರ್ ಕ್ರೈಮ್ ಪೊಲೀಸರಿಗೆ ದೂರು ನೀಡಿದ್ದೀನಿ. ಈ‌ ಹಿಂದೆ ಕೂಡ ಇದೇ ರೀತಿ ಈ ಮೇಲ್‌ಗಳ ಮೂಲಕ ಹಣ ಕೇಳಿದರು. ಕೆಲ ಕಿಡಿಗೇಡಿಗಳು ನನ್ನ ಹೆಸರನ್ನು ಬಳಸಿಕೊಂಡು ಈ ರೀತಿ ಮಾಡುತ್ತಿದ್ದಾರೆ. ನನ್ನ ಹೆಸರು ದುರುಪಯೋಗವಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಚಂದ್ರಶೇಖರ ಕಂಬಾರ

ಇದನ್ನೂ ಓದಿ| ದಿಶಾ ಸಿನಿಮಾ ಹೆಸರಲ್ಲಿ ವಂಚನೆ; ನಿರ್ದೇಶಕ ರಾಮ್‌ ಗೋಪಾಲ್‌ ವರ್ಮಾ ವಿರುದ್ಧ ಕೇಸ್‌

Exit mobile version