Khalistani Terrorist: ಖಲಿಸ್ತಾನಿ ಭಯೋತ್ಪಾದಕ ಲಾಂಡಾನ ಪ್ರಮುಖ ಸಹಾಯಕ ಬಲ್ಜೀತ್ ಸಿಂಗ್ ಬಂಧನ - Vistara News

ಕ್ರೈಂ

Khalistani Terrorist: ಖಲಿಸ್ತಾನಿ ಭಯೋತ್ಪಾದಕ ಲಾಂಡಾನ ಪ್ರಮುಖ ಸಹಾಯಕ ಬಲ್ಜೀತ್ ಸಿಂಗ್ ಬಂಧನ

ಮಾರಕಾಸ್ತ್ರಗಳ ಪೂರೈಕೆಗೆ ಸಂಬಂಧಿಸಿದ ಪ್ರಮುಖ ಖಲಿಸ್ತಾನಿ ಭಯೋತ್ಪಾದಕ (Khalistani Terrorist) ಜಾಲವನ್ನು ಭೇದಿಸಿರುವ ರಾಷ್ಟ್ರೀಯ ತನಿಖಾ ಸಂಸ್ಥೆಯು, ಮಧ್ಯಪ್ರದೇಶದ ಬದ್ವಾನಿ ಜಿಲ್ಲೆಯಲ್ಲಿ ಬಲ್ಜೀತ್ ಸಿಂಗ್ ಅಲಿಯಾಸ್ ರಾಣಾ ಭಾಯ್ ಅಲಿಯಾಸ್ ಬಲ್ಲಿ ಎಂಬಾತನನ್ನು ಗುರುವಾರ ಪಂಜಾಬ್‌ನಲ್ಲಿ ಬಂಧಿಸಿದೆ. ಈ ಮೂಲಕ ಖಲಿಸ್ತಾನಿ ಉಗ್ರರ ವಿರುದ್ಧ ತನಿಖಾ ಸಂಸ್ಥೆಗಳು ಯಶ ಸಾಧಿಸಿದಂತಾಗಿದೆ.

VISTARANEWS.COM


on

Khalistani Terrorist
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಭಯೋತ್ಪಾದಕ ಚಟುವಟಿಕೆಗಳಿಗೆ ಮಾರಾಕಾಸ್ತ್ರಗಳ ಪೂರೈಕೆಗೆ (supply of deadly weapons) ಸಂಬಂಧಿಸಿ ಖಲಿಸ್ತಾನಿ ಭಯೋತ್ಪಾದಕ (Khalistani Terrorist) ಲಖ್ಬೀರ್ ಸಿಂಗ್ ಸಂಧು ಅಲಿಯಾಸ್ ಲಾಂಡಾನ ಪ್ರಮುಖ ಸಹಾಯಕನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (National Investigation Agency) ಶುಕ್ರವಾರ ಬಂಧಿಸಿದೆ.

ಮಾರಕಾಸ್ತ್ರಗಳ ಪೂರೈಕೆಗೆ ಸಂಬಂಧಿಸಿದ ಪ್ರಮುಖ ಭಯೋತ್ಪಾದನಾ ಜಾಲವನ್ನು ಭೇದಿಸಿದ ಎನ್‌ಐಎ, ಮಧ್ಯಪ್ರದೇಶದ ಬದ್ವಾನಿ ಜಿಲ್ಲೆಯ ಬಲ್ಜೀತ್ ಸಿಂಗ್ ಅಲಿಯಾಸ್ ರಾಣಾ ಭಾಯ್ ಅಲಿಯಾಸ್ ಬಲ್ಲಿ ಎಂಬಾತನನ್ನು ಗುರುವಾರ ಪಂಜಾಬ್‌ನಲ್ಲಿ ಬಂಧಿಸಿದೆ. ಬಲ್ಜೀತ್ ಸಿಂಗ್ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ಪಂಜಾಬ್‌ನಲ್ಲಿರುವ ಲಾಂಡಾನ ಏಜೆಂಟ್‌ಗಳಿಗೆ ಪ್ರಮುಖ ಶಸ್ತ್ರಾಸ್ತ್ರ ಪೂರೈಕೆದಾರ ಎಂದು ತಿಳಿದು ಬಂದಿದೆ.

Khalistani Terrorist


ಭಯೋತ್ಪಾದನಾ ವಿರೋಧಿ ಏಜೆನ್ಸಿ ಪ್ರಕಾರ, ಈ ಶಸ್ತ್ರಾಸ್ತ್ರಗಳನ್ನು ಉದ್ಯಮಿಗಳು ಮತ್ತು ಇತರರಿಂದ ಹಣ ಸುಲಿಗೆ ಸೇರಿದಂತೆ ದೊಡ್ಡ ಪ್ರಮಾಣದ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ಬಳಸಲಾಗುತ್ತಿತ್ತು. ಗುರುಪ್ರೀತ್ ಸಿಂಗ್ ಮತ್ತು ಸತ್ನಾಮ್ ಸಿಂಗ್ ಸತ್ತಾ ಎಂಬುವರನ್ನು ಈ ಹಿಂದೆ ಬಂಧಿಸಲಾಗಿತ್ತು. ಅವರು ನೀಡಿದ ಸುಳಿವು ಆಧರಿಸಿ ಎನ್‌ಐಎ ಈ ಬಂಧನ ನಡೆಸಿದೆ.

ಕಳೆದ ವರ್ಷ ಜುಲೈ 10ರಂದು ಎನ್‌ಐಎ ಸ್ವಯಂಪ್ರೇರಿತವಾಗಿ ದಾಖಲಿಸಿದ ಪ್ರಕರಣದ ತನಿಖೆ ವೇಳೆ ಪಂಜಾಬ್ ಮತ್ತು ಇತರ ಕೆಲವು ಸ್ಥಳಗಳಲ್ಲಿ ನಡೆದಿದ್ದ ಹಿಂಸಾತ್ಮಕ ಕೃತ್ಯಗಳಲ್ಲಿ ಖಲಿಸ್ತಾನಿ ಭಯೋತ್ಪಾದಕ ಸಂಘಟನೆಗಳಿಗೆ ಶಸ್ತ್ರಾಸ್ತ್ರಗಳನ್ನು ಪೂರೈಸಲು ಸತ್ನಾಮ್ ಸಿಂಗ್ ಸತ್ತಾಗೆ ಬಲ್ಜೀತ್ ಸಿಂಗ್ ಶಸ್ತ್ರಾಸ್ತ್ರಗಳನ್ನು ಒದಗಿಸಿದ್ದಾನೆ ಎನ್ನಲಾಗಿದೆ.

ಇದನ್ನೂ ಓದಿ: Khalistani Terrorists: ಬಿಜೆಪಿ ತೊರೆಯದಿದ್ದರೆ ಸಾಯಲು ಸಿದ್ಧರಾಗಿ; ಸಿಖ್‌ ನಾಯಕರಿಗೆ ಖಲಿಸ್ತಾನಿ ಉಗ್ರರಿಂದ ಜೀವ ಬೆದರಿಕೆ

ಖಲಿಸ್ತಾನಿ ಭಯೋತ್ಪಾದಕ ಸಂಘಟನೆಗಳ ವಿರುದ್ಧದ ಕಾರ್ಯಾಚರಣೆಯ ಭಾಗವಾಗಿ ತನಿಖೆಯನ್ನು ಮುಂದುವರಿಸಿರುವ ಎನ್‌ಐಎ, ಭಾರತದಲ್ಲಿ ಭಯೋತ್ಪಾದನೆಯನ್ನು ಉತ್ತೇಜಿಸಲು ಲಾಂಡಾ ಮತ್ತು ಸತ್ತಾ ಇಬ್ಬರೂ ವಿದೇಶಗಳಿಂದ ಕಾರ್ಯನಿರ್ವಹಿಸುತ್ತಿದ್ದರು ಎಂದು ಹೇಳಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Pooja Khedkar: IAS ಟ್ರೈನಿ ಅಧಿಕಾರಿ ಪೂಜಾ ಖೇಡ್ಕರ್‌ ವಿರುದ್ಧ FIR ದಾಖಲಿಸಿದ UPSC

Pooja Khedkar: UPSC ತನ್ನ ಅಧಿಕೃತ ಪ್ರಕಟಣೆ ಹೊರಡಿಸಿದ್ದು, 2022ರ ನಾಗರಿಕ ಸೇವಾ ಪರೀಕ್ಷೆಯಲ್ಲಿ ಪೂಜಾ ಮನೋರಮಾ ದಿಲೀಪ್ ಖೇಡ್ಕರ್ ಅವರು ನಕಲಿ ದಾಖಲೆ ಸೃಷ್ಟಿಸಿರುವ ಆರೋಪವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್‌ಸಿ) ವಿವರವಾದ ಮತ್ತು ಸಂಪೂರ್ಣ ತನಿಖೆ ನಡೆಸಿದೆ. ಅವರನ್ನು ಮುಂಬರುವ ಪರೀಕ್ಷೆಗಳಿಂದ ಡಿಬಾರ್‌ ಮಾಡಲಾಗಿದೆ ಎನ್ನಲಾಗಿದೆ.

VISTARANEWS.COM


on

Pooja Khedkar
Koo

ಹೊಸದಿಲ್ಲಿ: ಮಹಾರಾಷ್ಟ್ರ ಕೇಡರ್‌ನ ಐಎಎಸ್‌ ಅಧಿಕಾರಿ, ಅತಿಯಾದ ದರ್ಪ, ನಕಲಿ ದಾಖಲೆ ಸೃಷ್ಟಿಯಿಂದಲೇ ದೇಶಾದ್ಯಂತ ಗಮನ ಸೆಳೆದಿರುವ ಟ್ರೈನಿ ಅಧಿಕಾರಿ (Trainee IAS Officer) ಪೂಜಾ ಖೇಡ್ಕರ್‌ (Pooja Khedkar) ವಿರುದ್ಧ ಕೇಂದ್ರ ಲೋಕ ಸೇವಾ ಆಯೋಗ(UPSC) ಎಫ್‌ಐಆರ್‌ ದಾಖಲಿಸಿದೆ. ಅಲ್ಲದೇ ನಾಗರಿಕ ಸೇವಾ ಪರೀಕ್ಷೆ-2022 ರ ಉಮೇದುವಾರಿಕೆಯನ್ನು ರದ್ದುಗೊಳಿಸುವಂತೆ ಶೋಕಾಸ್‌ ನೊಟೀಸ್‌ ಜಾರಿಗೊಳಿಸಲಾಗಿದೆ.

UPSC ತನ್ನ ಅಧಿಕೃತ ಪ್ರಕಟಣೆ ಹೊರಡಿಸಿದ್ದು, 2022ರ ನಾಗರಿಕ ಸೇವಾ ಪರೀಕ್ಷೆಯಲ್ಲಿ ಪೂಜಾ ಮನೋರಮಾ ದಿಲೀಪ್ ಖೇಡ್ಕರ್ ಅವರು ನಕಲಿ ದಾಖಲೆ ಸೃಷ್ಟಿಸಿರುವ ಆರೋಪವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್‌ಸಿ) ವಿವರವಾದ ಮತ್ತು ಸಂಪೂರ್ಣ ತನಿಖೆ ನಡೆಸಿದೆ. ಅವರನ್ನು ಮುಂಬರುವ ಪರೀಕ್ಷೆಗಳಿಂದ ಡಿಬಾರ್‌ ಮಾಡಲಾಗಿದೆ ಎನ್ನಲಾಗಿದೆ.

ಪೂಜಾ ಅವರು ಅಂಗವೈಕಲ್ಯ ಪ್ರಮಾಣಪತ್ರವನ್ನು ಪಡೆಯಲು ಸುಳ್ಳು ವಿಳಾಸ ಮತ್ತು ನಕಲಿ ಪಡಿತರ ಚೀಟಿಯನ್ನು ಬಳಸಿದ್ದಾರೆ ಎನ್ನುವ ಮಾಹಿತಿ ಬಹಿರಂಗಗೊಂಡಿದೆ.

ಪುಣೆಯ ಯಶವಂತರಾವ್ ಚವಾಣ್ ಸ್ಮಾರಕ ಆಸ್ಪತ್ರೆ 2022ರ ಆಗಸ್ಟ್ 24ರಂದು ಪೂಜಾಗೆ ಅಂಗವೈಕಲ್ಯ ಪ್ರಮಾಣಪತ್ರವನ್ನು ನೀಡಿದೆ. ಅದರಲ್ಲಿ ಪೂಜಾ ಖೇಡ್ಕರ್ ಅವರ ವಿಳಾಸವನ್ನು ʼʼಪುಣೆ ಜಿಲ್ಲೆಯ ಪ್ಲಾಟ್ ಸಂಖ್ಯೆ 53, ದೇಹು ಅಲಂಡಿ ರಸ್ತೆ, ತಲವಾಡೆ, ಪಿಂಪ್ರಿ ಚಿಂಚ್ವಾಡ್” ಎಂದು ಉಲ್ಲೇಖಿಸಲಾಗಿದೆ. ಆದರೆ ಈ ಸ್ಥಳದಲ್ಲಿ ಯಾವುದೇ ಮನೆ ಇಲ್ಲ. ಬದಲಾಗಿ ಥರ್ಮೋವರ್ಟಾ ಎಂಜಿನಿಯರಿಂಗ್ ಕಂಪನಿ ಎಂಬ ಕಾರ್ಖಾನೆ ಇದೆ. ಕುತೂಹಲಕಾರಿ ಸಂಗತಿಯೆಂದರೆ, ಕೆಂಪು-ನೀಲಿ ದೀಪವನ್ನು ಅಕ್ರಮವಾಗಿ ಬಳಸಿದ ನಂತರ ವಶಪಡಿಸಿಕೊಳ್ಳಲಾದ ಖೇಡ್ಕರ್ ಅವರ ಆಡಿ ಕಾರು ಈ ಕಂಪನಿಯ ಹೆಸರಿನಲ್ಲಿ ನೋಂದಾಯಿಸಲ್ಪಟ್ಟಿದೆ.

ಅಲ್ಲದೆ ಅಂಗವೈಕಲ್ಯ ಪ್ರಮಾಣಪತ್ರಗಳನ್ನು ಪಡೆಯಲು ಸರ್ಕಾರವು ಆಧಾರ್ ಕಾರ್ಡ್‌ ಅನ್ನು ಕಡ್ಡಾಯಗೊಳಿಸಿದ್ದರೂ ಪೂಜಾ ಅದರ ಬದಲು ಪಡಿತರ ಚೀಟಿ ಹಾಜರುಪಡಿಸಿದ್ದರು ಎಂದು ದಾಖಲೆಯಲ್ಲಿ ಉಲ್ಲೇಖಿಸಲಾಗಿದೆ. ನಕಲಿ ಪಡಿತರ ಚೀಟಿಯನ್ನು ತಯಾರಿಸಲು ಪೂಜಾ ನಕಲಿ ವಿಳಾಸವನ್ನು ಬಳಸಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಪೂಜಾ ಖೇಡ್ಕರ್ ಮೊಣಕಾಲಿನಲ್ಲಿ ಶೇ. 7ರಷ್ಟು ಅಂಗವೈಕಲ್ಯವನ್ನು ಹೊಂದಿದ್ದಾರೆ ಎಂದು ಪ್ರಮಾಣ ಪತ್ರದಲ್ಲಿ ತಿಳಿಸಲಾಗಿದೆ.

ಸಿವಿಲ್‌ ಸರ್ವಿಸ್‌ ಆಯ್ಕೆಯ ಸಮಯದಲ್ಲಿ ಈ ಅಂಗವೈಕಲ್ಯ ಪ್ರಮಾಣಪತ್ರದಿಂದ ಪೂಜಾ ಅವರಿಗೆ ಅದು ಹೇಗೆ ರಿಯಾಯಿತಿ ಸಿಕ್ಕಿತು ಎನ್ನುವ ಪ್ರಶ್ನೆಯೂ ಎದ್ದಿದೆ. ಯಾಕೆಂದರೆ ಪೂಜಾ ʼಬೆಂಚ್‌ಮಾರ್ಕ್‌ ಅಂಗವೈಕಲ್ಯ ಹೊಂದಿರುವ ವ್ಯಕ್ತಿʼ ವಿಭಾಗದಲ್ಲಿ ವಿನಾಯಿತಿ ಕೋರಿದ್ದರು. ಆದರೆ ಯುಪಿಎಸ್‌ಸಿ ನಿಯಮದ ಪ್ರಕಾರ ಈ ರಿಯಾಯಿತಿ ಶೇ. 40ಕ್ಕಿಂತ ಕಡಿಮೆ ಇಲ್ಲದ ವ್ಯಕ್ತಿಗೆ ದೊರೆಯಬೇಕು. ಆದರೆ ಪೂಜಾ ಅವರ ಪ್ರಮಾಣಪತ್ರದಲ್ಲಿ ಅವರ ಅಂಗವೈಕಲ್ಯದ ಪ್ರಮಾಣವನ್ನು ಶೇ. 7 ಎಂದು ಉಲ್ಲೇಖಿಸಲಾಗಿದ್ದು, ಇದು ಯುಪಿಎಸ್‌ಸಿ ಮಿತಿಗಿಂತ ತುಂಬಾ ಕಡಿಮೆ ಇದೆ.

ಈ ಹಿಂದೆ ಅವರು ತಮ್ಮ ಅಂಗವೈಕಲ್ಯ ಪ್ರಮಾಣಪತ್ರವನ್ನು ಪರಿಶೀಲಿಸುವ ವೈದ್ಯಕೀಯ ತಪಾಸಣೆಯನ್ನು ತಪ್ಪಿಸಿಕೊಂಡಿದ್ದರು. ನಂತರ ಖಾಸಗಿ ವರದಿಯನ್ನು ಸಲ್ಲಿಸಿದ್ದರು. ಸದ್ಯ ಪೂಜಾ ಸಲ್ಲಿಸಿದ ಪ್ರಮಾಣಪತ್ರಗಳ ಸತ್ಯಾಸತ್ಯತೆಯನ್ನು ಪರಿಶೀಲಿಸುವಂತೆ ಪುಣೆಯ ಅಂಗವಿಕಲರ ಆಯುಕ್ತರ ಕಚೇರಿ ಪೊಲೀಸರಿಗೆ ಸೂಚಿಸಿದೆ.

ಇದನ್ನೂ ಓದಿ:Pooja Khedkar: ಅಂಗವೈಕಲ್ಯ ಪ್ರಮಾಣಪತ್ರಕ್ಕಾಗಿ ನಕಲಿ ವಿಳಾಸ ನೀಡಿದ್ದ ಪೂಜಾ ಖೇಡ್ಕರ್‌; ಮತ್ತೊಂದು ಕಳ್ಳಾಟ ಬಯಲು

Continue Reading

Latest

Accident Video: ಸ್ಕೂಟರ್‌ಗೆ ಅಪ್ಪಳಿಸಿದ ಕಾರು; 30 ಅಡಿ ದೂರ ಎಗರಿ ಬಿದ್ದ ಮಹಿಳಾ ಕಾನ್‌ಸ್ಟೇಬಲ್‌

Accident Video: ಅತೀ ವೇಗ ಒಳ್ಳೆಯದಲ್ಲ ಎಂದು ಎಷ್ಟು ಹೇಳಿದರೂ ಜನ ಮುನ್ನುಗ್ಗಿ ಬಿಡುತ್ತಾರೆ. ಇದರಿಂದಲೇ ಸಾಕಷ್ಟು ಅಪಘಾತಗಳಿಗೆ ತುತ್ತಾಗುತ್ತಾರೆ. ವೇಗವಾಗಿ ಚಲಿಸುತ್ತಿದ್ದ ಕಾರೊಂದು ಟರ್ನ್ ಮಾಡಲು ಹೋದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಎದುರಿನಿಂದ ಬರುತ್ತಿದ್ದ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸ್ಕೂಟರ್‌ಗೆ ಮುಂಭಾಗದಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳಾ ಪೊಲೀಸ್ ಪೇದೆ ಹಾರಿ ಹೋಗಿ 30 ಅಡಿ ದೂರಕ್ಕೆ ಬಿದ್ದಿರುವ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿದೆ.

VISTARANEWS.COM


on

Accident Video
Koo


ಚೆನ್ನೈ: ಅತಿ ವೇಗ ಅಪಘಾತಕ್ಕೆ ಕಾರಣವೆಂದು (Accident Video) ತಿಳಿದರೂ ಕೂಡ ಕೆಲವರು ವೇಗವಾಗಿ ವಾಹನಗಳನ್ನು ಚಲಾಯಿಸಿ ತಮ್ಮ ಜೀವದ ಜೊತೆಗೆ ಜನರ ಜೀವಕ್ಕೂ ಅಪಾಯವನ್ನು ತಂದೊಡ್ಡುತ್ತಾರೆ. ಇದೀಗ ಅಂತಹದೊಂದು ಅಪಘಾತದ (Hit and Run Case) ಘಟನೆ ಚೆನ್ನೈನಲ್ಲಿ ನಡೆದಿದ್ದು, ಈ ಅಪಘಾತದ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ಆ ಗಿದೆ. ಚೆನ್ನೈನಲ್ಲಿ ವೇಗವಾಗಿ ಬಂದ ಕಾರೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ 24 ವರ್ಷದ ಮಹಿಳಾ ಪೊಲೀಸ್ ಅಧಿಕಾರಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚೆನ್ನೈನಲ್ಲಿ ಬುಧವಾರ ನಡೆದಿದೆ.

ಚೆನ್ನೈ ಪೊಲೀಸರ ಪ್ರಕಾರ, ಚೆನ್ನೈನ ತಿರುಮುಲ್ಲೈವಾಯಲ್ ಪ್ರದೇಶದ ನಿವಾಸಿ ಪವಿತ್ರಾ ಅವರು ಪೋರೂರಿನ ಮಹಿಳಾ ಪೊಲೀಸ್ ಠಾಣೆಯಿಂದ ತಮ್ಮ ನಿವಾಸಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ವೇಗವಾಗಿ ಚಲಿಸುತ್ತಿದ್ದ ಕಾರನ್ನು ಚಾಲಕ ಟರ್ನ್ ಮಾಡಲು ಹೋದಾಗ ನಿಯಂತ್ರಣ ಕಳೆದುಕೊಂಡು ರಸ್ತೆಯ ಎದುರಿನಿಂದ ಬರುತ್ತಿದ್ದ ಪವಿತ್ರಾ ಅವರ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದಾನೆ. ಪವಿತ್ರಾ ಅವರ ಸ್ಕೂಟರ್ ಹಿಂದೆ ಕಪ್ಪು ಕಾರೊಂದು ಬರುತ್ತಿತ್ತು. ಹಾಗೇ ಅದರ ಹಿಂದೆ ಗ್ಯಾಸ್ ಸಿಲಿಂಡರ್‌ಗಳನ್ನು ಹೊತ್ತಿರುವ ಟೆಂಪೊ ಬರುತ್ತಿದೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೊದಲ್ಲಿ ಪವಿತ್ರಾ ಅವರ ಸ್ಕೂಟರ್ ಅನ್ನು ಮುಂಭಾಗದಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಅವರ ಸ್ಕೂಟರ್ ಹಿಂದೆ ಇದ್ದ ಕಪ್ಪು ಕಾರಿಗೆ ಡಿಕ್ಕಿ ಹೊಡೆದು ಅವರು ಹಾರಿ ಹೋಗಿ 30 ಅಡಿ ದೂರಕ್ಕೆ ಬಿದ್ದಿರುವುದು ಕಂಡುಬಂದಿದೆ.

ಅದೃಷ್ಟವಶಾತ್, ಗ್ಯಾಸ್ ಸಿಲಿಂಡರ್‌ಗಳನ್ನು ಹೊಂದಿರುವ ಟೆಂಪೊ ಕಪ್ಪು ಕಾರಿನ ಹಿಂದೆ ಇದ್ದ ಕಾರಣ ದೊಡ್ಡ ಅಪಘಾತ ಸಂಭವಿಸಲಿಲ್ಲ ಎನ್ನಲಾಗಿದೆ. ಪವಿತ್ರಾ ಅವರ ಸ್ಥಿತಿ ಬಹಳ ಗಂಭೀರವಾಗಿದ್ದು, ತಕ್ಷಣ ಅವರನ್ನು ರಾಮಚಂದ್ರ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯ ಬಳಿಕ ಚಾಲಕ ಪರಾರಿಯಾಗಿದ್ದಾನೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ತಲುಪಿ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಚಾಲಕನಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಬಸ್‌ ಡ್ರೈವರ್‌ನ ರೀಲ್ಸ್‌ ಕ್ರೇಜ್‌ಗೆ 2 ಎತ್ತುಗಳು ಬಲಿ; ರೈತನ ಸ್ಥಿತಿ ಗಂಭೀರ

ಪ್ರತಿದಿನ ಒಂದಲ್ಲ ಒಂದು ಅಪಘಾತದ ಪ್ರಕರಣಗಳು ವರದಿಯಾಗುತ್ತಿರುತ್ತದೆ. ಜುಲೈ 8ರಂದು ರಸ್ತೆ ದಾಟಲು ಕಾಯುತ್ತಿದ್ದ 61 ವರ್ಷದ ಮಹಿಳೆಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಮೃತಪಟ್ಟಿರುವ ಘಟನೆ ತಮಿಳುನಾಡಿನ ತಿರುನೆಲ್ವೇಲಿ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ಕಾಣಿಯೂರು ನಿವಾಸಿ ಗೋಮತಿ ಎಂದು ಗುರುತಿಸಲಾಗಿದೆ. ಸಿಸಿಟಿವಿಯಲ್ಲಿ ಈ ಘಟನೆಯನ್ನು ಸೆರೆಹಿಡಿಯಲಾಗಿದ್ದು, ಗೋಮತಿ ಜೀಬ್ರಾ ಕ್ರಾಸಿಂಗ್ ಬಳಿ ನಿಂತಿದ್ದಾಗ ಅತಿ ವೇಗದಲ್ಲಿ ಬಂದ ಕಾರು ನಿಂತಿದ್ದ ಆಕೆಗೆ ಡಿಕ್ಕಿ ಹೊಡೆದಿದೆ.

Continue Reading

Latest

Sexual Abuse : ಬಿಸ್ಕೆಟ್‌ಗೆ ಆಸೆ ಪಟ್ಟು ಹೋಗಿದ್ದ ಪುಟ್ಟ ಬಾಲಕಿ ಕಾಮುಕನ ಕೈಗೆ ಸಿಕ್ಕಿ ಕೊಲೆಯಾದಳು

Sexual Abuse: ಚಿಕ್ಕಮಕ್ಕಳು, ಚಾಕೋಲೆಟ್ ಐಸ್‌ಕ್ರೀಂ, ಬಿಸ್ಕತ್ ಕೊಟ್ಟರೆ ಯಾರೇ ಕರೆದರೂ ಬಂದು ಬಿಡುತ್ತಾರೆ. ಮಕ್ಕಳಿಗೆ ಯಾರು ಒಳ್ಳೆಯವರು, ಯಾರು ಕೆಟ್ಟವರು ಎಂಬ ಪರಿವೆ ಇರುವುದಿಲ್ಲ. ತಿಂಡಿಯ ಮೇಲಿನ ಆಸೆಗೆ ಅವರು ಯಾರೇ ಕರೆದರೂ ಹೋಗಿ ಬಿಡುತ್ತಾರೆ. ಇಲ್ಲೊಬ್ಬಳು ಬಾಲಕಿ ಬಿಸ್ಕೆತ್‌ನ ಆಮಿಷಕ್ಕೆ ಒಳಗಾಗಿ ಕಾಮುಕನ ಕೈಗೆ ಸಿಲುಕಿ ಜೀವವನ್ನೇ ಕಳೆದುಕೊಂಡಿದ್ದಾಳೆ. ಗಾಂಜಾ ಪ್ರಭಾವದಲ್ಲಿ ಕಾರ್ಮಿಕನೊಬ್ಬ ಈ ಹೀನ ಕೃತ್ಯ ಎಸಗಿದ್ದಾನೆ.

VISTARANEWS.COM


on

Sexual Abuse
Koo


ದಿನೇದಿನೇ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿವೆ. ಕಾಮುಕರ ಕೆಟ್ಟ ಚಟಕ್ಕೆ ಬಾಲಕಿಯರು ಬಲಿಯಾಗುತ್ತಿದ್ದಾರೆ. ಇದೀಗ ಆಂಧ್ರಪ್ರದೇಶದ ತಿರುಪತಿಯಲ್ಲಿ ಭಯಾನಕ ಅತ್ಯಾಚಾರ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Sexual Abuse)ಆಗಿದೆ. ಜನರು ಘಟನೆ ನೋಡಿ ಬೆಚ್ಚಿಬಿದ್ದಿದ್ದಾರೆ.

ದೋರಾವರಿಸತ್ರಮ್ ಮಂಡಲದ ನೆಲಬಳ್ಳಿ ಗ್ರಾಮದಲ್ಲಿ ಜುಲೈ 17ರಂದು ಈ ಘಟನೆ ನಡೆದಿದ್ದು, ಗಾಂಜಾ ಪ್ರಭಾವದಲ್ಲಿ ಕಾರ್ಮಿಕನೊಬ್ಬ ಎಂಟು ವರ್ಷದ ಬಾಲಕಿಯನ್ನು ಕಾಡಿಗೆ ಕರೆದೊಯ್ದು ಆಕೆಯ ಮೇಲೆ ಕ್ರೂರವಾಗಿ ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದಾನೆ. ವರದಿ ಪ್ರಕಾರ, ಬಿಹಾರ ಮೂಲದ ಆರೋಪಿ, ಸ್ಥಳೀಯ ಅಕ್ಕಿ ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದು, ಬಿಸ್ಕತ್ತು ನೀಡುವ ನೆಪದಲ್ಲಿ ಬಾಲಕಿಯನ್ನು ಹತ್ತಿರದ ಕಾಡಿಗೆ ಕರೆದೊಯ್ದಿದ್ದಾನೆ. ಯಾರೂ ಇಲ್ಲದ ಆ ಪ್ರದೇಶದಲ್ಲಿ, ಅವನು ಅವಳ ಮೇಲೆ ಅತ್ಯಾಚಾರ ಎಸಗಿ ಕ್ರೂರವಾಗಿ ಕೊಲೆ ಮಾಡಿದ್ದಾನೆ. ಘಟನೆಯ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.

ಬೆಳಗ್ಗೆ ಬಾಲಕಿ ಕಾಣೆಯಾದ ನಂತರ, ಅವಳ ಪೋಷಕರು ದಿನವಿಡೀ ಅವಳನ್ನು ಹುಡುಕಿದರು. ಗ್ರಾಮದ ಹೊರವಲಯದಲ್ಲಿರುವ ಅರಣ್ಯ ಪ್ರದೇಶದಲ್ಲಿ ದನಕಾಯುವವರು ಶವವನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಾಲಕಿ ಬಿಹಾರದ ದರ್ಭಾಂಗ ಜಿಲ್ಲೆಯ ವಲಸೆ ಕಾರ್ಮಿಕನ ಮಗಳಾಗಿದ್ದು, ಶಂಕಿತ ಕೂಡ ಅದೇ ರಾಜ್ಯದವನಾಗಿದ್ದ. ತಿರುಪತಿ ಜಿಲ್ಲಾ ಎಸ್ಪಿ ಎಲ್ ಸುಬ್ಬರಾಯುಡು ಅವರ ಪ್ರಕಾರ, ಬಿಹಾರದಿಂದ ಸುಮಾರು 40 ಜನರು ಎರಡು ತಿಂಗಳ ಹಿಂದೆ ನೆಲಬಳ್ಳಿ ಗ್ರಾಮದ ಬಳಿಯ ಧನ್ಯಲಕ್ಷ್ಮಿ ಅಕ್ಕಿ ಗಿರಣಿಯಲ್ಲಿ ಕೆಲಸ ಮಾಡಲು ಬಂದಿದ್ದರು. ಅವರಲ್ಲಿ ಒಬ್ಬ ಅಡುಗೆಯವನು ತನ್ನ ಎಂಟು ವರ್ಷದ ಮಗಳನ್ನು ಕರೆತಂದಿದ್ದನು. ಆಕೆಯೇ ಈಗ ಕೊಲೆಯಾದ ಬಾಲಕಿ ಎನ್ನಲಾಗಿದೆ.

ಇದನ್ನೂ ಓದಿ: ಬಡಪಾಯಿ ಡೆಲಿವರಿ ಮ್ಯಾನ್‌ನನ್ನು ಭೀಕರವಾಗಿ ಕಚ್ಚಿದ ಶ್ರೀಮಂತರ ಮನೆಯ ನಾಯಿಗಳು; ವಿಡಿಯೊ ಇದೆ

ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರದ ಮತ್ತೊಂದು ಪ್ರಕರಣ ಮಧ್ಯಪ್ರದೇಶದಲ್ಲಿ ನಡೆದಿರುವುದಾಗಿ ಬೆಳಕಿಗೆ ಬಂದಿದೆ. ಚಲಿಸುತ್ತಿದ್ದ ಕಾರಿನಲ್ಲಿ 9ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆದಿದೆ. ಅಲ್ಲದೆ, ಆರೋಪಿಗಳು ಅಪ್ರಾಪ್ತೆಯ ಅಶ್ಲೀಲ ವೀಡಿಯೊವನ್ನು ಚಿತ್ರೀಕರಿಸಿ ಅವಳ ಕುಟುಂಬ ಸದಸ್ಯರಿಗೆ ಕಳುಹಿಸಿದ್ದಾರೆ. ಇದಕ್ಕೆ ಸಂಬಂಧಪಟ್ಟಂತೆ ಕುಟುಂಬದವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಆದರೆ ಆರೋಪಿಗಳು ಪರಾರಿಯಾಗಿದ್ದು, ಪೊಲೀಸರು ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

Continue Reading

ಮೈಸೂರು

Road Accident : ಮೈಸೂರಿನಲ್ಲಿ ಭೀಕರ ರಸ್ತೆ ಅಪಘಾತಕ್ಕೆ ದಂಪತಿ ಗಂಭೀರ; ಎಎಸ್‌ಐಗೆ ಬಡಿದ ಅಪರಿಚಿತ ವಾಹನ

Road Accident : ಪ್ರತ್ಯೇಕ ಮೂರು ಕಡೆ ರಸ್ತೆ ಅಪಘಾತ ಸಂಭವಿಸಿದ್ದು, ಸಾವು-ನೋವು ಸಂಭವಿಸಿದೆ. ಮೈಸೂರಿನಲ್ಲಿ ದಂಪತಿ ಗಂಭೀರ ಗಾಯಗೊಂಡರೆ, ಕೊಪ್ಪಳದಲ್ಲಿ ಅಪರಿಚಿತ ವಾಹನ ಡಿಕ್ಕಿಗೆ ಎಎಸ್‌ಐ ಮೃತಪಟ್ಟಿದ್ದಾರೆ.

VISTARANEWS.COM


on

By

Road Accident
Koo

ಮೈಸೂರು/ಕೊಪ್ಪಳ: ಗ್ಯಾಸ್ ಟ್ಯಾಂಕರ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ (Road Accident) ಸಂಭವಿಸಿದೆ. ಮೈಸೂರಿನ ಹೊರ ವಲಯದ ರಿಂಗ್ ರಸ್ತೆಯಲ್ಲಿ ಅಪಘಾತ ನಡೆದಿದೆ. ಚಂದ್ರು ಮತ್ತು ಪ್ರೇಮಾ ಎಂಬುವವರು ಗಂಭೀರ ಗಾಯಗೊಂಡಿದ್ದಾರೆ.

ಮೈಸೂರಿನ ಕೂರ್ಗಳ್ಳಿ ಗ್ರಾಮದ ನಿವಾಸಿಯಾದ ಈ ದಂಪತಿ ಬೈಕ್‌ನಲ್ಲಿ ಬರುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಗ್ಯಾಸ್‌ ಟ್ಯಾಂಕರ್‌ ಬೈಕ್‌ಗೆ ಗುದ್ದಿದೆ. ಗುದ್ದಿದ ರಭಸಕ್ಕೆ ಕೆಳಗೆ ಬಿದ್ದ ದಂಪತಿ ಗಂಭೀರ ಗಾಯಗೊಂಡಿದ್ದಾರೆ. ಚಂದ್ರು ಅವರು ಗಂಭೀರ ಗಾಯಗೊಂಡರೆ, ಸಣ್ಣ-ಪುಟ್ಟ ಗಾಯದಿಂದ ಪ್ರೇಮಾ ಪಾರಾಗಿದ್ದಾರೆ.

ಅಪಘಾತದ ರಭಸಕ್ಕೆ ರಸ್ತೆ ಪೂರ್ತಿ ರಕ್ತಸಿಕ್ತವಾಗಿತ್ತು. ಸ್ಥಳಕ್ಕೆ ವಿವಿ ಪುರಂ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Self Harming : ಆನೇಕಲ್ ಸರ್ಕಾರಿ ಆಸ್ಪತ್ರೆ ಮೇಲಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ

ಕೊಪ್ಪಳದಲ್ಲಿ ಅಪರಿಚಿತ ವಾಹನಕ್ಕೆ ಎಎಸ್‌ಐ ಸಾವು

ಅಪರಿಚಿತ ವಾಹನ‌ ಡಿಕ್ಕಿ ಹೊಡೆದ ಪರಿಣಾಮ ಕರ್ತವ್ಯನಿರತ ಎಎಸ್ಐ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೊಪ್ಪಳ ತಾಲೂಕಿನ ಒಣಬಳ್ಳಾರಿ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಘಟನೆ ನಡೆದಿದೆ. ರಾಮಣ್ಣ(55) ಮೃತ ದುರ್ದೈವಿ.

ಮುನಿರಾಬಾದ ಪೊಲೀಸ್ ಠಾಣೆಯಲ್ಲಿ‌ ಎಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಮಣ್ಣ ಅವರು ಹೆದ್ದಾರಿ ಗಸ್ತು ವಾಹನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕಳೆದ ರಾತ್ರಿ ಕರ್ತವ್ಯ‌ ನಿರ್ವಹಿಸುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿಯಿಂದ ರಾಮಣ್ಣ ಮೃತಪಟ್ಟಿದ್ದಾರೆ. ಮುನಿರಾಬಾದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅಪಘಾತ ಮಾಡಿ ಪರಾರಿ ಆಗಿರುವವರಿಗಾಗಿ ಹುಡುಕಾಟ ನಡೆದಿದೆ.

ಬ್ರೇಕ್‌ ಫೇಲ್‌ ಆಗಿ ಹೊಲಕ್ಕೆ ನುಗ್ಗಿದ ಬಸ್‌

ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್‌ವೊಂದು ಹೊಲಕ್ಕೆ ನುಗ್ಗಿದೆ. ಧಾರವಾಡ ತಾಲೂಕಿನ ಮರೇವಾಡ ಗ್ರಾಮದ ಬಳಿ ಘಟನೆ ನಡೆದಿದೆ. ಧಾರವಾಡದಿಂದ ಕರಡಿಗುಡ್ಡದ ಗ್ರಾಮಕ್ಕೆ ಹೊರಟಿದ್ದ ಬಸ್‌ನ ಬ್ರೇಕ್ ಫೇಲ್ ಆದ ಹಿನ್ನೆಲೆಯಲ್ಲಿ ಈ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಸಾವು-ನೋವು ಸಂಭವಿಸಿಲ್ಲ. ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಪಾತಕ್ಕೆ ಬಿದ್ದ ಲಾರಿ, ಚಾಲಕ ಗ್ರೇಟ್‌ ಎಸ್ಕೇಪ್‌

ಚಿಕ್ಕಮಗಳೂರಿನಲ್ಲಿ ಲಾರಿ ಚಾಲಕರೊಬ್ಬರು ಗ್ರೇಟ್ ಎಸ್ಕೇಪ್ ಆಗಿದ್ದಾರೆ. ಲಾರಿ ಪ್ರಪಾತಕ್ಕೆ ಬಿದ್ದರೂ ಅದೃಷ್ಟವಶಾತ್ ಚಾಲಕ ಬದುಕುಳಿದಿದ್ದಾರೆ. ನಿರಂತರ ಮಳೆಗೆ ನೆಮ್ಮಾರು ಸಮೀಪದ ರಸ್ತೆ ಕುಸಿದು, ಲಾರಿಯೊಂದು ಸುಮಾರು 50 ಅಡಿ ಆಳದಲ್ಲಿ ಬಿದ್ದಿದೆ. ಲಾರಿ ಸಂಪೂರ್ಣ ನಜ್ಜು-ಗುಜ್ಜಾಗಿದ್ದು, ಚಾಲಕ ಪವಾಡ ಸದೃಶ ಪಾರಾಗಿದ್ದಾರೆ. ಶೃಂಗೇರಿ ನೆಮ್ಮಾರು ಬಳಿ ರಸ್ತೆ ಕುಸಿದ ಪರಿಣಾಮ ಲಾರಿಯು ಪ್ರಪಾತಕ್ಕೆ ಬಿದ್ದಿದೆ. ನೆಮ್ಮಾರು ವ್ಯಾಪ್ತಿಯ ಹೊಸದೇವರಹಡ್ಳು ಸಮೀಪದಲ್ಲಿ ಘಟನೆ ನಡೆದಿದೆ.

ಕರೆಂಟ್‌ ಶಾಕ್‌ಗೆ ಕೋತಿಗಳು ಸಾವು

ವಿದ್ಯುತ್ ಸ್ಪರ್ಸ್‌ದಿಂದ ಕೋತಿಗಳು ಮೃತಪಟ್ಟಿರುವ ಘಟನೆ ದಾವಣಗೆರೆ ನಗರದ ಹಳೇ ಕುಂದುವಾಡದಲ್ಲಿ ನಡೆದಿದೆ. ವಿದ್ಯುತ್ ತಂತಿ ತಗುಲಿ ಎರಡು ಕೋತಿಗಳು ಸಾವನ್ನಪ್ಪಿವೆ. ಇತ್ತ ಗ್ರಾಮಸ್ಥರು ಕೋತಿಗಳಿಗೆ ಪೂಜೆ ಸಲ್ಲಿಸಿ ಅಂತ್ಯಕ್ರಿಯೆ ನಡೆಸಿದರು. ಇದಕ್ಕೂ ಮೊದಲು ಆಟೋದಲ್ಲಿ ಮೆರವಣಿಗೆ ಮಾಡಿ ಜೈ ಭಜರಂಗಿ ಎಂದು ಘೋಷಣೆ ಕೂಗುತ್ತಾ ಮೆರವಣಿಗೆ ನಡೆಸಿದರು. ಬಳಿಕ ಹಳೇ ಕುಂದುವಾಡದಲ್ಲಿ ಅಂತ್ಯಕ್ರಿಯೆ ನಡೆಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Pooja Khedkar
ದೇಶ12 mins ago

Pooja Khedkar: IAS ಟ್ರೈನಿ ಅಧಿಕಾರಿ ಪೂಜಾ ಖೇಡ್ಕರ್‌ ವಿರುದ್ಧ FIR ದಾಖಲಿಸಿದ UPSC

CM Siddaramaiah
ಕರ್ನಾಟಕ26 mins ago

CM Siddaramaiah: ವಾಲ್ಮೀಕಿ ನಿಗಮ ಅಕ್ರಮಕ್ಕೆ ಸರ್ಕಾರ ಹೊಣೆಯಲ್ಲ; ಚಂದ್ರಶೇಖರನ್‌ ಆತ್ಮಹತ್ಯೆಗೆ ಅಧಿಕಾರಿಗಳು ಕಾರಣ ಎಂದ ಸಿಎಂ!

Ishan Kishan
ಕ್ರಿಕೆಟ್29 mins ago

Ishan Kishan: ಟೀಮ್​ ಇಂಡಿಯಾದಲ್ಲಿ ಇಶಾನ್ ಕಿಶನ್​ಗೆ ಬಾಗಿಲು ಬಂದ್​?

Krishan Kumar Daughter Tishaa Dies Of Cancer At 21
ಬಾಲಿವುಡ್37 mins ago

Krishan Kumar: ಕೇವಲ 21ನೇ ವಯಸ್ಸಿಗೆ ನಿಧನ ಹೊಂದಿದ ‘ಅನಿಮಲ್’ ಸಿನಿಮಾ ನಿರ್ಮಾಪಕನ ಮಗಳು

Indian Navy Recruitment
ಉದ್ಯೋಗ51 mins ago

Indian Navy Recruitment: ಭಾರತೀಯ ನೌಕಾ ಪಡೆಯಲ್ಲಿದೆ 741 ಹುದ್ದೆ; 10ನೇ ತರಗತಿ ಪಾಸಾದವರಿಗೂ ಇದೆ ಅವಕಾಶ

Microsoft Windows Outage
ಪ್ರಮುಖ ಸುದ್ದಿ58 mins ago

Microsoft Windows Outage: ಮೈಕ್ರೊಸಾಫ್ಟ್​​ ಸಮಸ್ಯೆ ; ಬೆಂಗಳೂರು ಸೇರಿದಂತೆ ದೇಶದ ವಿಮಾನ ನಿಲ್ದಾಣಗಳಲ್ಲಿ ಅಲ್ಲೋಲಕಲ್ಲೋಲ

Dengue Fever
ಬೆಂಗಳೂರು1 hour ago

Dengue Fever : ಡೆಂಗ್ಯೂ ಭೀತಿ- ಸೊಳ್ಳೆಗಳ ನಾಶಕ್ಕೆ ಫೀಲ್ಡಿಗಿಳಿದ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

Accident Video
Latest1 hour ago

Accident Video: ಸ್ಕೂಟರ್‌ಗೆ ಅಪ್ಪಳಿಸಿದ ಕಾರು; 30 ಅಡಿ ದೂರ ಎಗರಿ ಬಿದ್ದ ಮಹಿಳಾ ಕಾನ್‌ಸ್ಟೇಬಲ್‌

Indian Olympics History
ಕ್ರೀಡೆ1 hour ago

Indian Olympics History: ಭಾರತಕ್ಕೆ ಒಲಿಂಪಿಕ್ಸ್​ನಲ್ಲಿ ವೈಯಕ್ತಿಕ ಚಿನ್ನ ಗೆದ್ದ ಮೊದಲ ಸಾಧಕ ಅಭಿನವ್‌ ಬಿಂದ್ರಾ

Sexual Abuse
Latest1 hour ago

Sexual Abuse : ಬಿಸ್ಕೆಟ್‌ಗೆ ಆಸೆ ಪಟ್ಟು ಹೋಗಿದ್ದ ಪುಟ್ಟ ಬಾಲಕಿ ಕಾಮುಕನ ಕೈಗೆ ಸಿಕ್ಕಿ ಕೊಲೆಯಾದಳು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ4 hours ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ5 hours ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ1 day ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ1 day ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ3 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ4 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ4 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ4 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ5 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

ಟ್ರೆಂಡಿಂಗ್‌