Kolkata Doctor Murder Case: ಕೋಲ್ಕತಾ ವೈದ್ಯೆಯ ಅತ್ಯಾಚಾರ- ಕೊಲೆ ಎಸಗುವ ಮುನ್ನ 2 ವೇಶ್ಯಾಗೃಹಗಳಿಗೆ ಭೇಟಿ ನೀಡಿದ್ದ ಕಾಮುಕ! - Vistara News

ಕ್ರೈಂ

Kolkata Doctor Murder Case: ಕೋಲ್ಕತಾ ವೈದ್ಯೆಯ ಅತ್ಯಾಚಾರ- ಕೊಲೆ ಎಸಗುವ ಮುನ್ನ 2 ವೇಶ್ಯಾಗೃಹಗಳಿಗೆ ಭೇಟಿ ನೀಡಿದ್ದ ಕಾಮುಕ!

Kolkata Doctor Murder Case: ಆರೋಪಿ ಸಂಜಯ್ ರಾಯ್ ಆಗಸ್ಟ್ 8ರ ರಾತ್ರಿ ಕೋಲ್ಕತಾದ ಸೋನಾಗಚಿ ರೆಡ್ ಲೈಟ್ ಏರಿಯಾದಲ್ಲಿದ್ದ. ಅಲ್ಲಿ ಆತ ಮದ್ಯ ಸೇವಿಸಿ ಎರಡು ವೇಶ್ಯಾಗೃಹಗಳಿಗೆ ಭೇಟಿ ನೀಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

VISTARANEWS.COM


on

sanjoy roy Kolkata Doctor Murder Case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೋಲ್ಕತಾ: ನಗರದ ಆರ್‌ಜಿ ಕರ್ ಆಸ್ಪತ್ರೆಯಲ್ಲಿ (RG Kar Hospital) ನಡೆದ ವೈದ್ಯೆಯ ಬರ್ಬರ ಅತ್ಯಾಚಾರ ಹಾಗೂ ಕೊಲೆ (Kolkata Doctor Murder Case) ಪ್ರಕರಣದಲ್ಲಿ ಇನ್ನಷ್ಟು ಬೀಭತ್ಸ (Kolkata horror) ವಿವರಗಳು ಹೊರಬೀಳುತ್ತಿವೆ. 31 ವರ್ಷದ ಕಿರಿಯ ವೈದ್ಯೆಯ (Junior Doctor) ಮೇಲೆ ಅತ್ಯಾಚಾರ (Physical Abuse) ಎಸಗಿ ಕೊಲೆಗೈದ ಕಾಮುಕ ಹಿಂದಿನ ದಿನ ರಾತ್ರಿ ನಗರದ ಎರಡು ವೇಶ್ಯಾಗೃಹಗಳಿಗೆ (brothels) ಭೇಟಿ ನೀಡಿದ್ದ ಎಂದು ಬಯಲಾಗಿದೆ.

ಆರೋಪಿ ಸಂಜಯ್ ರಾಯ್ ಆಗಸ್ಟ್ 8ರ ರಾತ್ರಿ ಕೋಲ್ಕತಾದ ಸೋನಾಗಚಿ ರೆಡ್ ಲೈಟ್ ಏರಿಯಾದಲ್ಲಿದ್ದ. ಅಲ್ಲಿ ಆತ ಮದ್ಯ ಸೇವಿಸಿ ಎರಡು ವೇಶ್ಯಾಗೃಹಗಳಿಗೆ ಭೇಟಿ ನೀಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಜೂನಿಯರ್ ಡಾಕ್ಟರ್ ಮಲಗಿದ್ದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್‌ಗೆ ಆತ ಪ್ರವೇಶಿಸುತ್ತಿರುವುದು ಮತ್ತು ಹೊರಹೋಗುತ್ತಿರುವುದನ್ನು ತೋರಿಸುವ ಸಿಸಿಟಿವಿ ದೃಶ್ಯಾವಳಿಗಳು ಆತನ ಬಂಧನಕ್ಕೆ ನೆರವಾಗಿವೆ.

ಕೋಲ್ಕತಾದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿಚಾರಣೆ ನಡೆಸಿದ ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, “ದೇಶದಲ್ಲಿ ಕಾನೂನು ಸುವ್ಯವಸ್ಥೆಯಲ್ಲಿ ಬದಲಾವಣೆಯಾಗಲು ಮತ್ತೊಂದು ಅತ್ಯಾಚಾರ ಪ್ರಕರಣಕ್ಕಾಗಿ ದೇಶ ಕಾಯಲು ಸಾಧ್ಯವಿಲ್ಲ” ಎಂದು ಕಟುವಾಗಿ ಹೇಳಿದ್ದರು. ಅಸ್ತಿತ್ವದಲ್ಲಿರುವ ಕಾಯ್ದೆಗಳು ವೈದ್ಯರು ಮತ್ತು ವೈದ್ಯಕೀಯ ಕಾರ್ಯಕರ್ತರ ಸಾಂಸ್ಥಿಕ ಸುರಕ್ಷತಾ ಮಾನದಂಡಗಳನ್ನು ಖಾತರಿಪಡಿಸುವುದಿಲ್ಲ. ಪುರುಷಪ್ರಭುತ್ವದಿಂದಾಗಿ ಮಹಿಳಾ ವೈದ್ಯರೇ ಹೆಚ್ಚು ಗುರಿಯಾಗುತ್ತಿದ್ದಾರೆ ಎಂದು ಸಿಜೆಐ ಚಂದ್ರಚೂಡ್ ಗಮನಿಸಿದ್ದರು.

ಪ್ರತಿಭಟಿಸುವ ವೈದ್ಯರ ಮೇಲೆ ನಿಮ್ಮ ಅಧಿಕಾರವನ್ನು ಪ್ರದರ್ಶಿಸಬೇಡಿ ಎಂದು ಸುಪ್ರೀಂ ಕೋರ್ಟ್ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಹೇಳಿದೆ. ಕೋರ್ಟ್‌ ವೈದ್ಯರಿಗೆ ಕೆಲಸವನ್ನು ಪುನರಾರಂಭಿಸಲು ಕೇಳಿದೆ. ವೈದ್ಯರ ಕಳವಳವನ್ನು ಅತ್ಯಂತ ಪ್ರಾಮುಖ್ಯತೆಯೊಂದಿಗೆ ಸ್ವೀಕರಿಸಲಾಗುತ್ತಿದೆ ಎಂದು ಸರ್ಕಾರ ಹೇಳಿದ್ದು, ಕಾರ್ಯಪಡೆಯು ತನ್ನ ಮಧ್ಯಂತರ ವರದಿಯನ್ನು ಮೂರು ವಾರಗಳಲ್ಲಿ ಮತ್ತು ಅಂತಿಮ ವರದಿಯನ್ನು ಎರಡು ತಿಂಗಳೊಳಗೆ ಸಲ್ಲಿಸಲಿದೆ ಎಂದು ಹೇಳಿದೆ.

ಆರ್‌ಜಿ ಕರ್ ಮೆಡಿಕಲ್ ಕಾಲೇಜಿನ ಮಾಜಿ ಪ್ರಾಂಶುಪಾಲರು ಸೇರಿದಂತೆ ಶಂಕಿತರನ್ನು ಸಿಬಿಐ ತನಿಖೆಗೊಳಪಡಿಸಿದೆ. ನಿನ್ನೆ ಮುಂಜಾನೆ ಪ್ರಕರಣದ ಹಲವಾರು ಶಂಕಿತರು ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಸಿಬಿಐ) ಯಿಂದ ಸರಣಿ ತನಿಖೆಗೆ ಒಳಗಾದರು. ಸುಪ್ರೀಂ ಕೋರ್ಟ್ ಪ್ರಕರಣವನ್ನು ತನ್ನ ವ್ಯಾಪ್ತಿಗೆ ತೆಗೆದುಕೊಂಡಿದ್ದು, ಆಗಸ್ಟ್ 22ರೊಳಗೆ ತನಿಖೆಯ ಸ್ಥಿತಿಗತಿಯ ವರದಿಯನ್ನು ಸಲ್ಲಿಸುವಂತೆ ಏಜೆನ್ಸಿಯನ್ನು ಕೇಳಿದೆ.

ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲನಾದ ಡಾ. ಸಂದೀಪ್ ಘೋಷ್, ಕೋಲ್ಕತ್ತಾ ಪೊಲೀಸ್ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಅನುಪ್ ದತ್ತಾ, ಸಂಜಯ್ ರಾಯ್ ಜೊತೆಗಿರುವ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ಕಂಡುಬಂದಿವೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ. ಕೊಲೆಯಾದ ಕೆಲವೇ ದಿನಗಳಲ್ಲಿ ಸಂದೀಪ್ ಘೋಷ್ ರಾಜೀನಾಮೆ ನೀಡಿದ್ದಾನೆ. ಈತ ಘಟನೆಯ ನಂತರ ಸೆಮಿನಾರ್ ಹಾಲ್ ಬಳಿಯ ಕೊಠಡಿಗಳನ್ನು ಕ್ಲೀನ್‌ ಮಾಡಲು ಆದೇಶಿಸಿದ್ದ. ಅಪರಾಧದ ಹಿಂದೆ ಪಿತೂರಿ ಇದೆಯೇ ಎಂದು ಕಂಡುಹಿಡಿಯಲು ಸಿಬಿಐ ಈತನನ್ನು ಪ್ರಶ್ನಿಸುತ್ತಿದೆ. ಅಂದು ಕರ್ತವ್ಯದಲ್ಲಿದ್ದ ವೈದ್ಯರು ಮತ್ತು ಇಂಟರ್ನ್‌ಗಳೊಂದಿಗೆ ಸಂದೀಪ್ ಘೋಷ್ ಅವರ ಉತ್ತರಗಳನ್ನು ಸಿಬಿಐ ಪರಿಶೀಲಿಸುತ್ತಿದೆ.

ಇದನ್ನೂ ಓದಿ: Kolkata Doctor murder case: ಅಂತ್ಯಕ್ರಿಯೆ ನಡೆದ 3 ಗಂಟೆ ನಂತ್ರ FIR ದಾಖಲು..ಆಸ್ಪತ್ರೆ ವೈದ್ಯರು, ಪೊಲೀಸರು ಏನ್‌ ಮಾಡ್ತಿದ್ರು?- ಸುಪ್ರೀಂ ತರಾಟೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Couple Death: ಪತ್ನಿಯ ಅನುಮಾನಾಸ್ಪದ ಸಾವು; ಜನರ ಆಕ್ರೋಶಕ್ಕೆ ಹೆದರಿ ಗಂಡ ಕೂಡ ಆತ್ಮಹತ್ಯೆ

Couple Death: ನೆನ್ನೆ ರಾತ್ರಿ ಮೋಹನ್ ಮನೆಯಲ್ಲಿ ಪತ್ನಿ ಸ್ವಾತಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಘಟನೆ ಬಳಿಕ ಗಂಡ ಮೋಹನ್ ಹಾಗು ಆತನ ಪೋಷಕರು ಮನೆಯಿಂದ ನಾಪತ್ತೆಯಾಗಿದ್ದರು. ಮೃತ ಯುವತಿಯ ಪೋಷಕರು ಗಂಡ ಹಾಗು ಆತನ ಮನೆಯವರ ವಿರುದ್ಧ ಕೊಲೆ ಆರೋಪ ಮಾಡಿದ್ದು, ರಾತ್ರಿ ಯುವತಿಯ ಸಂಬಂಧಿಕರು ಗಂಡನ ಮನೆಗೆ ನುಗ್ಗಿ ಬೆಂಕಿ ಹಚ್ಚಿ ದಾಂಧಲೆ ಎಸಗಿದ್ದರು.

VISTARANEWS.COM


on

Couple death
Koo

ಮಂಡ್ಯ: ಗಂಡನ ಮನೆಯಲ್ಲಿ ಗೃಹಿಣಿಯೊಬ್ಬಳ ಶವ ನೇಣು (Woman Self Harming) ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಪತ್ತೆಯಾಗಿದೆ. ಇದಾದ ಕೆಲವೇ ಗಂಟೆಗಳಲ್ಲಿ ಗಂಡನ ಶವ ಕೂಡ (Couple Death) ಕೆರೆಯಲ್ಲಿ ಪತ್ತೆಯಾಗಿದೆ. ಗಂಡನ ಮನೆಯ ಉಳಿದವರು ನಾಪತ್ತೆಯಾಗಿದ್ದು, ಗೃಹಿಣಿ ಸಾವಿನಿಂದ ಜನರಲ್ಲಿ ಹುಟ್ಟಿಕೊಂಡಿರುವ ಆಕ್ರೋಶದ ಪರಿಣಾಮ ಅಂಜಿ ತಲೆ ಮರೆಸಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.

ಕೆ‌.ಆರ್.ಪೇಟೆ ತಾಲೂಕಿನ ಮಂದಗೆರೆ ಗ್ರಾಮದಲ್ಲಿ ಘಟನೆ ನಡೆದಿದೆ. ಸ್ವಾತಿ (21) ಅನುಮಾನಾಸ್ಪದವಾಗಿ ಮೃತಪಟ್ಟಿರುವ ಗೃಹಿಣಿ. ಮೋಹನ್ (26) ಆತ್ಮಹತ್ಯೆ ಮಾಡಿಕೊಂಡಿರುವ ಪತಿ. ಪತ್ನಿಯ ಸಾವಿಗೆ ಹೆದರಿ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ. ಸ್ವಾತಿ ಸಾವು ಆತ್ಮಹತ್ಯೆಯೋ ಕೊಲೆಯೋ ಎಂಬುದು ಖಚಿತವಾಗಿಲ್ಲ. ಇದು ಗಂಡನ ಮನೆಯವರಿಂದ ಆಗಿರುವ ಕೊಲೆ (Murder) ಎಂದು ಸ್ವಾತಿ ಪೋಷಕರು ಆರೋಪಿಸಿದ್ದಾರೆ.

ನೆನ್ನೆ ರಾತ್ರಿ ಮೋಹನ್ ಮನೆಯಲ್ಲಿ ಪತ್ನಿ ಸ್ವಾತಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಘಟನೆ ಬಳಿಕ ಗಂಡ ಮೋಹನ್ ಹಾಗು ಆತನ ಪೋಷಕರು ಮನೆಯಿಂದ ನಾಪತ್ತೆಯಾಗಿದ್ದರು. ಮೃತ ಯುವತಿಯ ಪೋಷಕರು ಗಂಡ ಹಾಗು ಆತನ ಮನೆಯವರ ವಿರುದ್ಧ ಕೊಲೆ ಆರೋಪ ಮಾಡಿದ್ದು, ರಾತ್ರಿ ಯುವತಿಯ ಸಂಬಂಧಿಕರು ಗಂಡನ ಮನೆಗೆ ನುಗ್ಗಿ ಬೆಂಕಿ ಹಚ್ಚಿ ದಾಂಧಲೆ ಎಸಗಿದ್ದರು.

ಇಂದು ಬೆಳಿಗ್ಗೆ ಕೆರೆಯಲ್ಲಿ ಗಂಡ ಮೋಹನ್ ಶವ ಪತ್ತೆಯಾಗಿದೆ. ಸ್ಥಳಕ್ಕೆ ಕಿಕ್ಕೇರಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ದಂಪತಿಗೆ ಒಂದುವರೆ ವರ್ಷದ ಹೆಣ್ಣು ಮಗುವಿದ್ದು, ದಂಪತಿಯ ಸಾವಿನಿಂದ ಅದು ಅನಾಥವಾಗಿದೆ.

ಬೆಂಗಳೂರಿನಲ್ಲಿ ಯುವಕನಿಗೆ ಪ್ರಜ್ಞೆ ತಪ್ಪಿಸಿ ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತಿಸಿದ ಮಂಗಳಮುಖಿಯರು!

ಬೆಂಗಳೂರು: ಟೀ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ಯುವಕನನ್ನು ಹೆದರಿಸಿ, ಬೆದರಿಸಿ ಮನೆಯಲ್ಲಿ (Assault Case) ಇರಿಸಿಕೊಂಡಿದ್ದ ಮಂಗಳಮುಖಿಯರು ಪ್ರಜ್ಞೆ ತಪ್ಪಿಸಿ ಆತನ ಮರ್ಮಾಂಗ ಕತ್ತರಿಸಿ, ಲಿಂಗ ಪರಿವರ್ತಿಸಿದ್ದಾರೆ. ಸುಲಭವಾಗಿ ಹಣ ಸಂಪಾದನೆ ಮಾಡುವ ದೃಷ್ಟಿಯಿಂದ ಇಂತಹ ಕೃತ್ಯ‌ ನಡೆಸಿದ್ದಾರೆ.

ಮೂರು ವರ್ಷಗಳ ಹಿಂದೆ ಅಂಬೇಡ್ಕರ್‌ ಕಾಲೇಜ ಸಮೀಪದಲ್ಲಿದ್ದ ಟೀ ಅಂಗಡಿಯಲ್ಲಿ ಸಂತ್ರಸ್ತ ಕೆಲಸ ಮಾಡಿಕೊಂಡಿದ್ದ. ಚಿತ್ರ, ಅಶ್ವಿನಿ, ಕಾಜಲ್‌, ಪ್ರೀತಿ, ಮುಗಿಲ ಎಂಬುವವರು ಟೀ ಕುಡಿಯುವ ನೆಪದಲ್ಲಿ ಬಂದು ಯುವಕನನ್ನು ಪರಿಚಯ ಮಾಡಿಕೊಂಡಿದ್ದರು.

ನಮ್ಮ ಜತೆಗೆ ಬಂದರೆ ನಿನ್ನನ್ನು ಒಳ್ಳೆಯ ಮನೆಯಲ್ಲಿರಿಸಿ, ಸಂಪಾದನೆಯ ದಾರಿಯನ್ನು ಮಾಡಿಕೊಡುವುದಾಗಿ ಯುವಕನನ್ನು ಪುಸಲಾಯಿಸಿದ್ದಾರೆ. ಆದರೆ ಯುವಕ ಇದಕ್ಕೆ ಒಪ್ಪದೆ ಇದ್ದಾಗ, ಬಲವಂತವಾಗಿ ಬೆದರಿಸಿ ಮನೆಗೆ ಕರೆದೊಯ್ದಿದ್ದಾರೆ.

ಟ್ಯಾನರಿ ರಸ್ತೆಯಲ್ಲಿದ್ದ ಮನೆಯಲ್ಲಿ ಯುವಕನನ್ನು ಇರಿಸಿಕೊಂಡಿದ್ದಾರೆ. ಬಳಿಕ ಭಿಕ್ಷೆ ಬೇಡು ಇಲ್ಲದಿದ್ದರೆ ರೌಡಿಗಳಿಗೆ ಹೇಳಿ ನಿನ್ನ ತಂದೆ-ತಾಯಿಯನ್ನು ಕೊಲೆ ಮಾಡಿಸುತ್ತೇವೆ ಎಂದು ಹೆದರಿಸಿದ್ದಾರೆ. ಇವರ ಬ್ಲ್ಯಾಕ್‌ಮೇಲ್‌ಗೆ ಹೆದರಿದ ಯುವಕ ಸುಮಾರು ಮೂರು ವರ್ಷಗಳ ಕಾಲ ಭಿಕ್ಷಾಟನೆ ಮಾಡಿಸಿ ಹಣ ಸಂಪಾದಿಸಿದ್ದಾರೆ.

ಇತ್ತೀಚೆಗೆ ಈ ಮಂಗಳಮುಖಿಯರು ಯುವಕನಾಗಿಯೇ ಇಷ್ಟು ದುಡಿಯುತ್ತಿದ್ದಯಾ, ಹೆಣ್ಣಾದರೆ ಇನ್ನೂ ಎಷ್ಟು ಹಣವನ್ನು ಸಂಪಾದನೆ ಮಾಡಬಹುದು ಎಂದಿದ್ದಾರೆ. ಲಿಂಗ ಪರಿವರ್ತಿಸಿಕೊಂಡು ಹೆಣ್ಣಾಗು ಎಂದು ಬಲವಂತ ಮಾಡಿದ್ದಾರೆ. ಒಪ್ಪದೆ ಇದ್ದಾಗ ಗಾಂಜಾ ಸೇವಿಸಿ, ಮದ್ಯಪಾನ ಮಾಡಿಕೊಂಡು ಬಂದು ಹಲ್ಲೆ ನಡೆಸಿದ್ದಾರೆ.

ಬಳಿಕ ಬಲವಂತವಾಗಿ ಇಂಜೆಕ್ಷನ್ ಕೊಟ್ಟು ಪ್ರಜ್ಞೆ ತಪ್ಪಿಸಿ ಮರ್ಮಾಂಗವನ್ನು ಕತ್ತರಿಸಿದ್ದಾರೆ. ಯುವಕ ಎಚ್ಚರಗೊಂಡ ಲಿಂಗ ಪರಿವರ್ತನೆ ಮಾಡಿದ್ದಾರೆ. ಅಕ್ರಮವಾಗಿ ಲಿಂಗ ಪರಿವರ್ತನೆ, ಅಶ್ಲೀಲ ಫೋಟೊ ತೆಗೆದುಕೊಂಡು ಬ್ಲಾಕ್ ಮೇಲ್ ಮಾಡಿದ್ದಲ್ಲದೆ ಮನಬಂದಂತೆ ಥಳಿಸಿ ಚಿತ್ರ ಹಿಂಸೆ ಕೊಟ್ಟಿದ್ದಾರೆ.

ಇದನ್ನೂ ಓದಿ: Assault Case : ಬೆಂಗಳೂರಿನಲ್ಲಿ ನಿಲ್ಲದ ರೋಡ್‌ ರೇಜ್‌ ಕಿರಿಕ್‌; ಕಾರಿನ ಮೇಲೆ ಕಲ್ಲು ಎತ್ತಿಹಾಕಿ ಪುಂಡಾಟ

Continue Reading

ತುಮಕೂರು

Food Poisoning: ಬೀಗರೂಟ ಸೇವಿಸಿ ಮನೆಗೆ ಬಂದವರು ಅಸ್ವಸ್ಥ; 20ಕ್ಕೂ ಹೆಚ್ಚು ಮಂದಿ ಆಸ್ಪತ್ರೆಪಾಲು

Food Poisoning: ನಾಗೇನಹಳ್ಳಿ ತಾಂಡಾದವರು ಪಕ್ಕದ ಶ್ರೀರಂಗಪುರ ತಾಂಡಾದಲ್ಲಿ ಬೀಗರ ಊಟ ಸೇವಿಸಿದ್ದು, ಹಾಗೆ ಸೇವಿಸಿದವರಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿದೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ದು ಉಪಚರಿಸಲಾಗಿದೆ. ಶಾಸಕ ವೆಂಕಟೇಶ್ ಆಸ್ಪತ್ರೆಗೆ ಭೇಟಿ ನೀಡಿ ಎಲ್ಲರ ಆರೋಗ್ಯ ವಿಚಾರಿಸಿದ್ದಾರೆ.

VISTARANEWS.COM


on

food poisoning tumkur
Koo

ತುಮಕೂರು: ಬೀಗರ ಊಟ ಸೇವಿಸಿ 20ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾದ ಘಟನೆ (food poisoning) ತುಮಕೂರು (tumkur news) ಜಿಲ್ಲೆ ಪಾವಗಡ ತಾಲೂಕಿನ ನಾಗೇನಹಳ್ಳಿ ತಾಂಡಾದಲ್ಲಿ ನಡೆದಿದೆ. ಅಸ್ವಸ್ಥಗೊಂಡವರನ್ನು ಪಾವಗಡ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ನಾಗೇನಹಳ್ಳಿ ತಾಂಡಾದವರು ಪಕ್ಕದ ಶ್ರೀರಂಗಪುರ ತಾಂಡಾದಲ್ಲಿ ಬೀಗರ ಊಟ ಸೇವಿಸಿದ್ದು, ಹಾಗೆ ಸೇವಿಸಿದವರಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿದೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ದು ಉಪಚರಿಸಲಾಗಿದೆ. ಶಾಸಕ ವೆಂಕಟೇಶ್ ಆಸ್ಪತ್ರೆಗೆ ಭೇಟಿ ನೀಡಿ ಎಲ್ಲರ ಆರೋಗ್ಯ ವಿಚಾರಿಸಿದ್ದಾರೆ. ಅಧಿಕಾರಿಗಳು ನಾಗೇನಹಳ್ಳಿ ತಾಂಡಾಗೆ ತೆರಳಿ ಕುಡಿಯುವ ನೀರಿನ ಪರೀಕ್ಷೆ ನಡೆಸಿದ್ದು, ನೀರಿನಿಂದ ಯಾವುದೇ ಸಮಸ್ಯೆ ಆಗಿಲ್ಲ ಎನ್ನುವುದು ಖಚಿತವಾಗಿದೆ. ಹೀಗಾಗಿ ಫುಡ್ ಪಾಯಿಸನಿಂಗ್‌ನಿಂದಲೇ ಆರೋಗ್ಯದಲ್ಲಿ ಏರುಪೇರಾಗಿರುವ ಶಂಕೆ ಮೂಡಿದೆ.

ಬೆಂಗಳೂರಿನಲ್ಲಿ ಯುವಕನಿಗೆ ಪ್ರಜ್ಞೆ ತಪ್ಪಿಸಿ ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತಿಸಿದ ಮಂಗಳಮುಖಿಯರು!

ಬೆಂಗಳೂರು: ಟೀ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ಯುವಕನನ್ನು ಹೆದರಿಸಿ, ಬೆದರಿಸಿ ಮನೆಯಲ್ಲಿ (Assault Case) ಇರಿಸಿಕೊಂಡಿದ್ದ ಮಂಗಳಮುಖಿಯರು ಪ್ರಜ್ಞೆ ತಪ್ಪಿಸಿ ಆತನ ಮರ್ಮಾಂಗ ಕತ್ತರಿಸಿ, ಲಿಂಗ ಪರಿವರ್ತಿಸಿದ್ದಾರೆ. ಸುಲಭವಾಗಿ ಹಣ ಸಂಪಾದನೆ ಮಾಡುವ ದೃಷ್ಟಿಯಿಂದ ಇಂತಹ ಕೃತ್ಯ‌ ನಡೆಸಿದ್ದಾರೆ.

ಮೂರು ವರ್ಷಗಳ ಹಿಂದೆ ಅಂಬೇಡ್ಕರ್‌ ಕಾಲೇಜ ಸಮೀಪದಲ್ಲಿದ್ದ ಟೀ ಅಂಗಡಿಯಲ್ಲಿ ಸಂತ್ರಸ್ತ ಕೆಲಸ ಮಾಡಿಕೊಂಡಿದ್ದ. ಚಿತ್ರ, ಅಶ್ವಿನಿ, ಕಾಜಲ್‌, ಪ್ರೀತಿ, ಮುಗಿಲ ಎಂಬುವವರು ಟೀ ಕುಡಿಯುವ ನೆಪದಲ್ಲಿ ಬಂದು ಯುವಕನನ್ನು ಪರಿಚಯ ಮಾಡಿಕೊಂಡಿದ್ದರು.

ನಮ್ಮ ಜತೆಗೆ ಬಂದರೆ ನಿನ್ನನ್ನು ಒಳ್ಳೆಯ ಮನೆಯಲ್ಲಿರಿಸಿ, ಸಂಪಾದನೆಯ ದಾರಿಯನ್ನು ಮಾಡಿಕೊಡುವುದಾಗಿ ಯುವಕನನ್ನು ಪುಸಲಾಯಿಸಿದ್ದಾರೆ. ಆದರೆ ಯುವಕ ಇದಕ್ಕೆ ಒಪ್ಪದೆ ಇದ್ದಾಗ, ಬಲವಂತವಾಗಿ ಬೆದರಿಸಿ ಮನೆಗೆ ಕರೆದೊಯ್ದಿದ್ದಾರೆ.

ಟ್ಯಾನರಿ ರಸ್ತೆಯಲ್ಲಿದ್ದ ಮನೆಯಲ್ಲಿ ಯುವಕನನ್ನು ಇರಿಸಿಕೊಂಡಿದ್ದಾರೆ. ಬಳಿಕ ಭಿಕ್ಷೆ ಬೇಡು ಇಲ್ಲದಿದ್ದರೆ ರೌಡಿಗಳಿಗೆ ಹೇಳಿ ನಿನ್ನ ತಂದೆ-ತಾಯಿಯನ್ನು ಕೊಲೆ ಮಾಡಿಸುತ್ತೇವೆ ಎಂದು ಹೆದರಿಸಿದ್ದಾರೆ. ಇವರ ಬ್ಲ್ಯಾಕ್‌ಮೇಲ್‌ಗೆ ಹೆದರಿದ ಯುವಕ ಸುಮಾರು ಮೂರು ವರ್ಷಗಳ ಕಾಲ ಭಿಕ್ಷಾಟನೆ ಮಾಡಿಸಿ ಹಣ ಸಂಪಾದಿಸಿದ್ದಾರೆ.

ಇತ್ತೀಚೆಗೆ ಈ ಮಂಗಳಮುಖಿಯರು ಯುವಕನಾಗಿಯೇ ಇಷ್ಟು ದುಡಿಯುತ್ತಿದ್ದಯಾ, ಹೆಣ್ಣಾದರೆ ಇನ್ನೂ ಎಷ್ಟು ಹಣವನ್ನು ಸಂಪಾದನೆ ಮಾಡಬಹುದು ಎಂದಿದ್ದಾರೆ. ಲಿಂಗ ಪರಿವರ್ತಿಸಿಕೊಂಡು ಹೆಣ್ಣಾಗು ಎಂದು ಬಲವಂತ ಮಾಡಿದ್ದಾರೆ. ಒಪ್ಪದೆ ಇದ್ದಾಗ ಗಾಂಜಾ ಸೇವಿಸಿ, ಮದ್ಯಪಾನ ಮಾಡಿಕೊಂಡು ಬಂದು ಹಲ್ಲೆ ನಡೆಸಿದ್ದಾರೆ.

ಬಳಿಕ ಬಲವಂತವಾಗಿ ಇಂಜೆಕ್ಷನ್ ಕೊಟ್ಟು ಪ್ರಜ್ಞೆ ತಪ್ಪಿಸಿ ಮರ್ಮಾಂಗವನ್ನು ಕತ್ತರಿಸಿದ್ದಾರೆ. ಯುವಕ ಎಚ್ಚರಗೊಂಡ ಲಿಂಗ ಪರಿವರ್ತನೆ ಮಾಡಿದ್ದಾರೆ. ಅಕ್ರಮವಾಗಿ ಲಿಂಗ ಪರಿವರ್ತನೆ, ಅಶ್ಲೀಲ ಫೋಟೊ ತೆಗೆದುಕೊಂಡು ಬ್ಲಾಕ್ ಮೇಲ್ ಮಾಡಿದ್ದಲ್ಲದೆ ಮನಬಂದಂತೆ ಥಳಿಸಿ ಚಿತ್ರ ಹಿಂಸೆ ಕೊಟ್ಟಿದ್ದಾರೆ.

ಇದನ್ನೂ ಓದಿ: Assault Case : ಬೆಂಗಳೂರಿನಲ್ಲಿ ನಿಲ್ಲದ ರೋಡ್‌ ರೇಜ್‌ ಕಿರಿಕ್‌; ಕಾರಿನ ಮೇಲೆ ಕಲ್ಲು ಎತ್ತಿಹಾಕಿ ಪುಂಡಾಟ

Continue Reading

ಕ್ರೈಂ

Stabbing Case: ಪುತ್ತೂರು ನಗರ ಉದ್ವಿಗ್ನತೆಗೆ ಕಾರಣವಾದ ವಿದ್ಯಾರ್ಥಿನಿಗೆ ಬ್ಲೇಡ್‌ ಇರಿತ ಪ್ರಕರಣ; ನಿಜಕ್ಕೂ ನಡೆದದ್ದೇನು?

Stabbing Case: ವಿದ್ಯಾರ್ಥಿನಿ ಮುಸ್ಲಿಂ ಸಮುದಾಯಕ್ಕೆ ಹಾಗೂ ವಿದ್ಯಾರ್ಥಿ ಹಿಂದೂ ಸಮುದಾಯಕ್ಕೆ ಸೇರಿದ್ದು ಇಬ್ಬರ ಮಧ್ಯೆ ಸಣ್ಣ ವಿಷಯಕ್ಕೆ ಗಲಾಟೆ ನಡೆದಿದೆ ಎನ್ನಲಾಗಿದೆ. ಮಾತಿಗೆ ಮಾತು ಬೆಳೆದು ಹರಿತವಾದ ವಸ್ತುವಿನಿಂದ ಗೀರಿದ ಗಾಯ ಉಂಟಾಗಿದ್ದು ವಿದ್ಯಾರ್ಥಿ ತನಗೆ ಚಾಕುವಿನಿಂದ ಇರಿದಿದ್ದಾನೆ ಎಂದು ವಿದ್ಯಾರ್ಥಿನಿ ದೂರಿದ್ದಾಳೆ.

VISTARANEWS.COM


on

puttur stabbing case
Koo

ಮಂಗಳೂರು: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಪುತ್ತೂರು (Puttur) ನಗರದ ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿಗೆ ಅದೇ ಕಾಲೇಜಿನ ಸಹಪಾಠಿ ವಿದ್ಯಾರ್ಥಿಯೋರ್ವ ಬ್ಲೇಡ್‌ನಿಂದ ಗೀರಿರುವ (Stabbing Case) ಆರೋಪದ ಹಿನ್ನೆಲೆಯಲ್ಲಿ ನಗರದಲ್ಲಿ ತುಸು ಉದ್ವಿಗ್ನ ಪರಿಸ್ಥಿತಿ ತಲೆದೋರಿದೆ. ಇಬ್ಬರೂ ಭಿನ್ನ ಸಮುದಾಯಕ್ಕೆ ಸೇರಿದವರಾದ ಹಿನ್ನೆಲೆಯಲ್ಲಿ ಎರಡೂ ಕಡೆಯ ಮುಖಂಡರು ಆಸ್ಪತ್ರೆ ಮುಂಭಾಗ ಜಮಾಯಿಸಿದ ಪರಿಣಾಮ ಉದ್ವಿಗ್ನ ಸ್ಥಿತಿ (Puttur Tense) ನಿರ್ಮಾಣಗೊಂಡಿದೆ.

ಗಾಯಾಳು ವಿದ್ಯಾರ್ಥಿನಿ ಬನ್ನೂರಿನವಳಾಗಿದ್ದು, ವಿದ್ಯಾರ್ಥಿ ಕಬಕ ಸಮೀಪದವನು. ಇಬ್ಬರೂ ಒಂದೇ ಕಾಲೇಜಿನಲ್ಲಿ ಕಲಿಯುತ್ತಿದ್ದಾರೆ. ಇವರಿಬ್ಬರು ಕೊಂಬೆಟ್ಟು ಕಾಲೇಜಿನ ಪ್ರಥಮ ಪಿಯು ವಿದ್ಯಾರ್ಥಿಗಳು. ವಾಣಿಜ್ಯ, ಕಲಾ ವಿಭಾಗದ ವಿದ್ಯಾರ್ಥಿಗಳಾಗಿದ್ದು ಇತಿಹಾಸ ವಿಷಯದಲ್ಲಿ ಒಂದೇ ತರಗತಿಯ ಸಹಪಾಠಿಗಳಾಗಿದ್ದರು. ವಿದ್ಯಾರ್ಥಿನಿ ಮುಸ್ಲಿಂ ಸಮುದಾಯಕ್ಕೆ ಹಾಗೂ ವಿದ್ಯಾರ್ಥಿ ಹಿಂದೂ ಸಮುದಾಯಕ್ಕೆ ಸೇರಿದ್ದು ಇಬ್ಬರ ಮಧ್ಯೆ ಸಣ್ಣ ವಿಷಯಕ್ಕೆ ಗಲಾಟೆ ನಡೆದಿದೆ ಎನ್ನಲಾಗಿದೆ. ಮಾತಿಗೆ ಮಾತು ಬೆಳೆದು ಹರಿತವಾದ ವಸ್ತುವಿನಿಂದ ಗೀರಿದ ಗಾಯ ಉಂಟಾಗಿದ್ದು ವಿದ್ಯಾರ್ಥಿ ತನಗೆ ಚಾಕುವಿನಿಂದ ಇರಿದಿದ್ದಾನೆ ಎಂದು ವಿದ್ಯಾರ್ಥಿನಿ ದೂರಿದ್ದಾಳೆ.

ಬೆಳಗ್ಗೆ ಕಾಲೇಜು ಆರಂಭಕ್ಕೆ ಮೊದಲು ಪುತ್ತೂರು ಮುಖ್ಯ ಆಂಚೆ ಕಚೇರಿಯನ್ನು ಸಂಪರ್ಕಿಸುವ ರಸ್ತೆಯಲ್ಲಿ ಕಾಲೇಜು ವಿದ್ಯಾರ್ಥಿಗಳು ಬರುತ್ತಿರುವ ವೇಳೆ ಈ ಘಟನೆ ನಡೆದಿದೆ. ಇಲ್ಲಿ ಇಬ್ಬರ ನಡುವೆ ಜಗಳ ಸಂಭವಿಸಿ ಅದು ತರಗತಿ ತನಕವೂ ಮುಂದುವರಿದಿದೆ ಎನ್ನಲಾಗಿದೆ. ಇನ್ನೊಂದು ಮಾಹಿತಿ ಪ್ರಕಾರ, ಪ್ರಥಮ ಅವಧಿಯ ತರಗತಿಯಲ್ಲಿ ಇಬ್ಬರ ನಡುವೆ ಜಗಳ ಸಂಭವಿಸಿದ್ದು ಈ ವೇಳೆ ವಿದ್ಯಾರ್ಥಿ ಹರಿತವಾದ ವಸ್ತುವಿನಿಂದ ತಿವಿದಿದ್ದಾನೆ ಎನ್ನಲಾಗಿದೆ. ಆದರೆ ಕೆಲ ವಿದ್ಯಾರ್ಥಿಗಳ ಪ್ರಕಾರ ಆತ ತಿವಿದಿಲ್ಲ. ಗಾಯ ಹೇಗೆ ಸಂಭವಿಸಿದೆ ಅನ್ನುವುದೇ ಆಶ್ಚರ್ಯಕರ ಸಂಗತಿ ಎನ್ನುತ್ತಾರೆ.

ಘಟನೆಯ ಮಾಹಿತಿ ಪಡೆದ ವಿದ್ಯಾರ್ಥಿನಿ ತಾಯಿ ನೀಡಿದ ದೂರಿನ ಪ್ರಕಾರ ನಗರ ಠಾಣಾ ಪೊಲೀಸರು ಕಾಲೇಜಿಗೆ ಅಗಮಿಸಿ ಸಿಸಿಟಿವಿ ವೀಡಿಯೋ ಪರಿಶೀಲಿಸಿದ್ದಾರೆ. ಆಕೆಯ ಜತೆಗಿದ್ದ ಬೇರೆ ವಿದ್ಯಾರ್ಥಿಗಳ ಬಳಿಯೂ ಮಾಹಿತಿ ಕಲೆ ಹಾಕಿದ್ದಾರೆ. ಪೊಲೀಸರು ಆರೋಪಿ ವಿದ್ಯಾರ್ಥಿಯನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ. ವಿದ್ಯಾರ್ಥಿಗಳಿಬ್ಬರ ಸಹಪಾಠಿಗಳನ್ನು ಕರೆಯಿಸಿ ವಾಸ್ತವ ಘಟನೆಯ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ.

ಇಬ್ಬರೂ ಭಿನ್ನ ಧರ್ಮದ ವಿದ್ಯಾರ್ಥಿಗಳು ಎಂಬ ಮಾಹಿತಿ ಹರಡುತಿದ್ದಂತೆ ಆಸ್ಪತ್ರೆಗೆ ಒಂದು ಸಮುದಾಯದ ನೂರಾರು ಮಂದಿ ಆಗಮಿಸಿದ್ದು ಘಟನೆಯನ್ನು ತೀವ್ರವಾಗಿ ಖಂಡಿಸಿದರು. ಪೊಲೀಸರು ಆಸ್ಪತ್ರೆ ಮುಂಭಾಗ ಬಿಗಿ ಬಂದೋಬಸ್ತು ಮಾಡಿ, ಮುಖಂಡರನ್ನು ಸಮಾಧಾನಿಸಿದರು.

ಗಾಯವು ಗಾಜು ತಗಲಿ ಆದದ್ದು ಎಂದು ಪೊಲೀಸರಿಗೆ ತಿಳಿಸುವಂತೆ ಕಾಲೇಜಿನ ಉಪನ್ಯಾಸಕಿಯೊಬ್ಬರು ಹೇಳಿದ್ದಾರೆ ಎಂದು ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿನಿ ಹೇಳಿದ್ದಾಳೆ. ಈ ಉಪನ್ಯಾಸಕಿ ವಿರುದ್ಧ ಪ್ರಕರಣ ದಾಖಲಿಸಿ ಕಾಲೇಜಿನಿಂದ ಅಮಾನತು ಮಾಡುವಂತೆ ವಿದ್ಯಾರ್ಥಿನಿ ಪರ ಹಾಜರಿದ್ದ ಹಲವಾರು ಮಂದಿ ಆಗ್ರಹಿಸಿದ್ದಾರೆ. ಬೆಳಗ್ಗೆ 9.20ಕ್ಕೆ ಘಟನೆಯ ಬಗ್ಗೆ ಮಾಹಿತಿ ಸಿಕ್ಕಿತ್ತು. ಪ್ರಕರಣದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು ಸತ್ಯಾಸತ್ಯತೆ ಆ ಮೇಲೆ ತಿಳಿಯಲಿದೆ. ಇದು ಕಾಲೇಜಿನ ಆವರಣದೊಳಗೆ ನಡೆದ ಘಟನೆ ಅಲ್ಲ ಅನ್ನುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಕಾಲೇಜಿನ ಪ್ರಾಂಶುಪಾಲ ಗೋಪಾಲ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: Murder Case: ಬೆಳ್ತಂಗಡಿ ಬಳಿ ಮನೆಯ ಅಂಗಳದಲ್ಲೇ ನಿವೃತ್ತ ಶಿಕ್ಷಕನ ಭೀಕರ ಕೊಲೆ

Continue Reading

ಕ್ರೈಂ

Students Death: ಇಬ್ಬರು ಮಕ್ಕಳ ಜೀವ ಕಸಿದ ಮೊಬೈಲ್;‌ ತಂದೆ- ತಾಯಿ ಫೋನ್ ಕೊಡದಿದ್ದುದಕ್ಕೆ ಆತ್ಮಹತ್ಯೆ

Students Death: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪ ಕರಾಯದಲ್ಲಿ ನೀಲಮ್ ಎಂಬ ಬಾಲಕಿ ನೇಣು ಬಿಗಿದು ಸಾವನ್ನಪ್ಪಿದ್ದರೆ, ಉಡುಪಿ ಜಿಲ್ಲೆಯ ಹಿರಿಯಡ್ಕದಲ್ಲಿ ವಿದ್ಯಾರ್ಥಿ ಪ್ರಥಮೇಶ್ ಬ್ಯಾಗ್ ಸಹಿತ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಎರಡೂ ಪ್ರಕರಣಗಳು ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದೆ.

VISTARANEWS.COM


on

students death
Koo

ಮಂಗಳೂರು: ಮೊಬೈಲ್‌ ಬಳಕೆ ಸಾಕು ಮಾಡಿ (Smartphone Use) ಎಂದು ಪೋಷಕರು ಬುದ್ಧಿ ಹೇಳಿ ಫೋನ್‌ ಎತ್ತಿಟ್ಟದ್ದರಿಂದ ಕೋಪಗೊಂಡ ಇಬ್ಬರು ಮಕ್ಕಳು ಆತ್ಮಹತ್ಯೆ (Students Death) ಮಾಡಿಕೊಂಡಿದ್ದಾರೆ. ಈ ಎರಡು ಪ್ರತ್ಯೇಕ ಆತ್ಮಹತ್ಯೆ (Self Harming) ಪ್ರಕರಣಗಳು ದಕ್ಷಿಣ ಕನ್ನಡ (Dakshina Kannada) ಮತ್ತು ಉಡುಪಿ (Udupi) ಜಿಲ್ಲೆಗಳಲ್ಲಿ ನಡೆದಿವೆ.

ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪ ಕರಾಯದಲ್ಲಿ ನೀಲಮ್ ಎಂಬ ಬಾಲಕಿ ನೇಣು ಬಿಗಿದು ಸಾವನ್ನಪ್ಪಿದ್ದರೆ, ಉಡುಪಿ ಜಿಲ್ಲೆಯ ಹಿರಿಯಡ್ಕದಲ್ಲಿ ವಿದ್ಯಾರ್ಥಿ ಪ್ರಥಮೇಶ್ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಎರಡೂ ಪ್ರಕರಣಗಳು ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದೆ.

ಪರೀಕ್ಷೆಗಳು ಹತ್ತಿರವಾಗುತ್ತಿವೆ, ಮೊಬೈಲ್ ಅನ್ನು ಪದೇ ಪದೇ ನೋಡಿ ಮಾರ್ಕ್ ಕಡಿಮೆ ಪಡೆಯಬೇಡ, ಓದುವುದರ ಕಡೆ ಗಮನ ಕೊಡು ಎಂದು ಹೆತ್ತವರು ಹಿರಿಯಡ್ಕ ಸರಕಾರಿ ಪದವಿಪೂರ್ವ ಕಾಲೇಜಿನ ಪಿಯುಸಿ ವಿದ್ಯಾರ್ಥಿ ಹಾಗು ಅಂಜಾರು ಪೊಲೀಸ್ ಕ್ವಾರ್ಟರ್ಸ್ ಬಳಿ ನಿವಾಸಿ ಪ್ರಥಮೇಶ್ (17)ಗೆ ಆಗಾಗ್ಗೆ ಹೇಳುತ್ತಿದ್ದರು. ಇದಕ್ಕೆ ಪೂರಕವಾಗಿ ಆತನಿಗೆ ಪರೀಕ್ಷೆಗಳಲ್ಲಿ ಕಡಿಮೆ ಅಂಕಗಳು ಬರುತ್ತಿದ್ದವು. ಅತಿಯಾಗಿ ಮೊಬೈಲ್ ಬಳಸುತ್ತಿದ್ದ ಆತನ ಚಾಳಿ ಕಡಿಮೆ ಮಾಡಲು ಮನೆಯವರು ಬುದ್ಧಿ ಮಾತು ಹೇಳಿ ಮೊಬೈಲ್ ತೆಗೆದಿಟ್ಟಿದ್ದರು.

ಆದರೆ ಕಾಲೇಜಿಗೆಂದು ಹೋದ ವಿದ್ಯಾರ್ಥಿ, ಅತ್ತ ಕಾಲೇಜಿಗೂ ಹೋಗದೆ, ಮನೆಗೂ ಬಾರದೆ ನಾಪತ್ತೆಯಾಗಿದ್ದ. ಸೋಮವಾರ ಎಷ್ಟು ಹುಡುಕಿದರೂ ಪ್ರಥಮೇಶ್ ಸಿಕ್ಕಿರಲಿಲ್ಲ. ಮಂಗಳವಾರ ಬೆಳಗ್ಗೆ ಹಿರಿಯಡ್ಕ ಪ್ರಥಮ ದರ್ಜೆ ಕಾಲೇಜಿನ ಸಮೀಪ ಜನವಸತಿರಹಿತ ಬಾವಿಯಲ್ಲಿ ಶಾಲಾ ಬ್ಯಾಗ್ ತೇಲುತ್ತಿರುವುದನ್ನು ಯಾರೋ ಕಂಡು ಮಾಹಿತಿ ನೀಡಿದ್ದರು. ಕೂಡಲೇ ಪೊಲೀಸರು ವಿದ್ಯಾರ್ಥಿಯ ಮೃತದೇಹ ಹೊರಕ್ಕೆ ತೆಗೆದಿದ್ದಾರೆ.

ತಾಯಿ ಮೇಲಿನ ಮುನಿಸಿಗೆ ಆತ್ಮಹತ್ಯೆ

ಪದೇ ಪದೇ ಮೊಬೈಲ್‌ನಲ್ಲಿ ವಿಡಿಯೋ ಕರೆ ಮಾಡಿ ಮಾತನಾಡುವುದನ್ನು ಆಕ್ಷೇಪಿಸಿದ ತಾಯಿಯ ಮೇಲೆ ಮುನಿಸಿಕೊಂಡ ಬಾಲಕಿ ಆತ್ಮಹತ್ಯೆ ಮಾಡಿಕೊಂಡು ಸೇಡು ತೀರಿಸಿಕೊಂಡಿದ್ದಾಳೆ. 14 ವರ್ಷದ ಈ ಬಾಲಕಿ ನೇಣು ಬಿಗಿದು ಸಾವನ್ನಪ್ಪಿದ್ದಾಳೆ. ಉಪ್ಪಿನಂಗಡಿ ಸಮೀಪದ ಕರಾಯ ಗ್ರಾಮದ ಕೊಂಬೆಟ್ಟಿ ಮಾರು ಎಂಬಲ್ಲಿ ಭಾನುವಾರ ರಾತ್ರಿ ಘಟನೆ ನಡೆದಿದೆ.

ಕೃಷಿ ಕೂಲಿ ಕಾರ್ಮಿಕರಾಗಿ ಆಗಮಿಸಿದ್ದ ಜಾರ್ಖಂಡ್ ರಾಜ್ಯದ ಕುಟುಂಬದ ಬಾಲಕಿ ನೀಲಮ್ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಜಾರ್ಖಂಡ್‌ನ ಲಾತೆಹಾರ್ ಜಿಲ್ಲೆಯ ಜಲ್ತಾ ಪರ್ಸಾರಿ ಲೆಡ್‌ನ ನಿವಾಸಿಯಾಗಿರುವ ಸರ್ಜು ಬುಯ್ಯಾನ್ ಎಂಬವರು ತನ್ನ ಪತ್ನಿ, ಮಗಳೊಂದಿಗೆ ವಾರದ ಹಿಂದೆ ಕರಾಯದ ಕೊಂಬೆಟ್ಟಿ ಮಾರು ಎಂಬಲ್ಲಿ ಜಗದೀಶ್ ಸರಳಾಯ ಎಂಬವರ ತೋಟದ ಕೆಲಸಕ್ಕೆ ಆಗಮಿಸಿದ್ದರು.

ಭಾನುವಾರ ರಾತ್ರಿ 7.30ರ ಸುಮಾರಿಗೆ ತೋಟದ ಮಾಲೀಕರು ಒದಗಿಸಿದ ವಾಸ್ತವ್ಯದ ಕೋಣೆಯಲ್ಲಿ ನೀಲಮ್ ಮೊಬೈಲ್‌ನಲ್ಲಿ ಸಂಬಂಧಿಕಳೊಂದಿಗೆ ವಿಡಿಯೋ ಕರೆ ಮಾಡಿ ಮಾತನಾಡುತ್ತಿದ್ದಳು. ಇದಕ್ಕೆ ತಾಯಿ ಆಕ್ಷೇಪಿಸಿ, ಮೊಬೈಲ್ ಕಿತ್ತುಕೊಂಡಿದ್ದರು. ಇದರಿಂದ ಸಿಟ್ಟಾದ ಬಾಲಕಿ ತೋಟದ ಮಾವಿನ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆಕೆಯ ತಂದೆ ಉಪ್ಪಿನಂಗಡಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Murder Case: ಬೆಳ್ತಂಗಡಿ ಬಳಿ ಮನೆಯ ಅಂಗಳದಲ್ಲೇ ನಿವೃತ್ತ ಶಿಕ್ಷಕನ ಭೀಕರ ಕೊಲೆ

Continue Reading
Advertisement
Couple death
ಕ್ರೈಂ53 mins ago

Couple Death: ಪತ್ನಿಯ ಅನುಮಾನಾಸ್ಪದ ಸಾವು; ಜನರ ಆಕ್ರೋಶಕ್ಕೆ ಹೆದರಿ ಗಂಡ ಕೂಡ ಆತ್ಮಹತ್ಯೆ

Mimi Chakraborty
ಪ್ರಮುಖ ಸುದ್ದಿ1 hour ago

Mimi Chakraborty : ಕೋಲ್ಕೊತಾ ಅತ್ಯಾಚಾರ ಪ್ರಕರಣವನ್ನು ವಿರೋಧಿಸಿದ ನಟಿ ಮಿಮಿ ಚಕ್ರವರ್ತಿಗೆ ಅತ್ಯಾಚಾರ ಬೆದರಿಕೆ!

ದೇಶ1 hour ago

Physical Abuse : ಅಶ್ಲೀಲ ಚಿತ್ರ ತೋರಿಸಿ ಹೆಣ್ಣು ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಕಾಮುಕ ಶಿಕ್ಷನ ಬಂಧನ

Rishab Shetty
ಪ್ರಮುಖ ಸುದ್ದಿ2 hours ago

Rishab Shetty : ಭಾರತವನ್ನು ಕೆಟ್ಟದಾಗಿ ತೋರಿಸುವ ಸಿನಿಮಾಗಳಿಗೆ ಹಿಗ್ಗಾಮುಗ್ಗಾ ಜಾಡಿಸಿದ ರಿಷಭ್‌ ಶೆಟ್ಟಿ

food poisoning tumkur
ತುಮಕೂರು2 hours ago

Food Poisoning: ಬೀಗರೂಟ ಸೇವಿಸಿ ಮನೆಗೆ ಬಂದವರು ಅಸ್ವಸ್ಥ; 20ಕ್ಕೂ ಹೆಚ್ಚು ಮಂದಿ ಆಸ್ಪತ್ರೆಪಾಲು

PM Modi to visits US
ಪ್ರಮುಖ ಸುದ್ದಿ2 hours ago

PM Modi US Visit : ಸೆಪ್ಟೆಂಬರ್‌ನಲ್ಲಿ ಅಮೆರಿಕ ಪ್ರವಾಸ ಮಾಡಲಿದ್ದಾರೆ ಮೋದಿ; ಅಮೆರಿಕ ಚುನಾವಣೆ ನಡುವೆ ಕುತೂಹಲ ಮೂಡಿಸಿದೆ ಅವರ ಭೇಟಿ

Job Alert
ಕರ್ನಾಟಕ2 hours ago

Banking Recruitment 2024: ರಾಷ್ಟ್ರೀಯ ಬ್ಯಾಂಕ್‌‌ಗಳಲ್ಲಿ 4455 ಹುದ್ದೆಗೆ ನೇಮಕ: ಅರ್ಜಿ ಸಲ್ಲಿಸಲು ಇಂದು ಅಂತಿಮ ದಿನ

Bharat Bandh today;
ಪ್ರಮುಖ ಸುದ್ದಿ3 hours ago

Bharat Bandh today : ಇಂದು ಭಾರತ್ ಬಂದ್‌; ಯಾವೆಲ್ಲಾ ಸೇವೆ ಇರುತ್ತೆ? ಏನಿರೋದಿಲ್ಲ? ಇಲ್ಲಿದೆ ಕಂಪ್ಲೀಟ್‌ ಡೀಟೆಲ್ಸ್‌

Worlds Oldest Office Worker
ವಿದೇಶ3 hours ago

Worlds Oldest Office Worker: ನಿವೃತ್ತಿ ಬಗ್ಗೆ ಇನ್ನೂ ಯೋಚನೆಯನ್ನೇ ಮಾಡಿಲ್ಲವಂತೆ 94ರ ಈ ಅಜ್ಜಿ!

sanjoy roy Kolkata Doctor Murder Case
ಕ್ರೈಂ3 hours ago

Kolkata Doctor Murder Case: ಕೋಲ್ಕತಾ ವೈದ್ಯೆಯ ಅತ್ಯಾಚಾರ- ಕೊಲೆ ಎಸಗುವ ಮುನ್ನ 2 ವೇಶ್ಯಾಗೃಹಗಳಿಗೆ ಭೇಟಿ ನೀಡಿದ್ದ ಕಾಮುಕ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌