Murder In PG: ಕೃತಿ ಕುಮಾರಿಗೆ ಮನಬಂದಂತೆ ಇರಿದ ಪಾತಕಿ, ನೋಡ್ತಾ ಇದ್ರೂ ಸಹಾಯಕ್ಕೆ ಬಾರದ ಯುವತಿಯರು - Vistara News

ಕ್ರೈಂ

Murder In PG: ಕೃತಿ ಕುಮಾರಿಗೆ ಮನಬಂದಂತೆ ಇರಿದ ಪಾತಕಿ, ನೋಡ್ತಾ ಇದ್ರೂ ಸಹಾಯಕ್ಕೆ ಬಾರದ ಯುವತಿಯರು

Murder in PG: ಮೊದಲು ಪಿಜಿ ರೂಮಿನ ಬಾಗಿಲು ಬಡಿದ ಕೊಲೆಗಾರ, ಆಕೆ ಬಾಗಿಲು ತೆರೆದ ಕೂಡಲೇ ಒಳಹೋಗಿದ್ದಾನೆ. ನಂತರ ಕೆಲವು ಸೆಕೆಂಡ್‌ನಲ್ಲಿ ಆಕೆ ಆತನಿಂದ ಪಾರಾಗಲು ಹೊರಗೋಡಿ ಬಂದಿದ್ದು, ಆಕೆಯನ್ನು ಕಾರಿಡಾರ್‌ನಲ್ಲೇ ತಡೆದ ಪಾತಕಿ ಮನಬಂದಂತೆ ಇರಿದಿದ್ದಾನೆ.

VISTARANEWS.COM


on

murder in PG koramangala
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕೋರಮಂಗಲದ ಪಿಜಿಯೊಂದರಲ್ಲಿ (Murder in PG) ನಡೆದ ಕೃತಿ ಕುಮಾರಿ ಎಂಬ ಯುವತಿಯ ಮರ್ಡರ್ (Krithi Kumari Murder Case) ವಿಡಿಯೋ ಸಿಸಿಟಿವಿಯಲ್ಲಿ (CCTV Footage) ಲಭ್ಯವಾಗಿದ್ದು, ಇದೀಗ ವೈರಲ್‌ (Viral video) ಆಗಿದೆ. ಯುವತಿ ರಕ್ತದ ಮಡುವಿನಲ್ಲಿ ಬಿದ್ದು ಸಹಾಯಕ್ಕಾಗಿ (Help) ಆರ್ತನಾದ ಮಾಡುತ್ತಿದ್ದರೂ ಅಲ್ಲಿದ್ದ ಇತರ ಯುವತಿಯರು ಆಕೆಯ ಸಹಾಯಕ್ಕೆ ಬರದೆ ತಮ್ಮಷ್ಟಕ್ಕೇ ಹೋಗಿದ್ದುದು ಕೂಡ ಈ ವಿಡಿಯೋದಲ್ಲಿ ದಾಖಲಾಗಿದೆ.

ಜು.23ರಂದು ಕೋರಮಂಗಲದ ಪಿಜಿಯಲ್ಲಿ ಕೃತಿ ಕುಮಾರಿ ಕೊಲೆ ನಡೆದಿತ್ತು. ಆರೋಪಿ ಅಭಿಷೇಕ್ ಕೃತಿ ಕುಮಾರಿಯನ್ನು ಎರಡೇ ನಿಮಿಷದಲ್ಲಿ ಕೊಲೆಮಾಡಿ ಪರಾರಿಯಾಗಿದ್ದಾನೆ. ಕತ್ತು, ಎದೆ, ಹೊಟ್ಟೆ ಭಾಗ ಸೇರಿ ಹಲವು ಕಡೆ ಇರಿದಿದ್ದಾನೆ. ಕತ್ತನ್ನು ಕೋಳಿ ಕತ್ತಿನಂತೆ ಕೊಯಿದಿದ್ದಾನೆ. ಮೊದಲು ಪಿಜಿ ರೂಮಿನ ಬಾಗಿಲು ಬಡಿದ ಕೊಲೆಗಾರ, ಆಕೆ ಬಾಗಿಲು ತೆರೆದ ಕೂಡಲೇ ಒಳಹೋಗಿದ್ದಾನೆ. ನಂತರ ಕೆಲವು ಸೆಕೆಂಡ್‌ನಲ್ಲಿ ಆಕೆ ಆತನಿಂದ ಪಾರಾಗಲು ಹೊರಗೋಡಿ ಬಂದಿದ್ದು, ಆಕೆಯನ್ನು ಕಾರಿಡಾರ್‌ನಲ್ಲೇ ತಡೆದ ಪಾತಕಿ ಮನಬಂದಂತೆ ಇರಿದಿದ್ದಾನೆ.

ಪ್ರಾಣ ಉಳಿಸಿಕೊಳ್ಳಲು ಕೃತಿ ಕುಮಾರಿ ಒದ್ದಾಡಿದ್ದಾಳೆ. ರಕ್ತದ ಮಡುವಿನಲ್ಲಿದ್ದ ಕೃತಿ ಕುಮಾರಿ ಆರ್ತನಾದ ಮಾಡಿದರೂ ಪಿಜಿಯಲ್ಲಿದ್ದ ಮೂವರು ಯುವತಿಯರು ಮಾತ್ರ ಹತ್ತಿರ ಬಂದಿಲ್ಲ. ಮಾನವೀಯತೆಯನ್ನೇ ಮರೆತಂತೆ ವರ್ತಿಸಿದ ಇವರು ಕೃತಿ ಕುಮಾರಿಯ ಹತ್ತಿರ ಕೂಡ ಹೋಗಿಲ್ಲ. ಕೈಯಲ್ಲಿದ್ದ ಮೊಬೈಲ್ ಫೋನ್‌ ನೋಡ್ತಾ ಆಚೆ ಹೋಗಿದ್ದಾರೆ. ಈ ಎಲ್ಲಾ ದೃಶ್ಯಗಳು ಪಿಜಿಯಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಕೋರಮಂಗಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಅಭಿಷೇಕ್‌ಗಾಗಿ ಹುಡುಕಾಟ ಆರಂಭಿಸಿದ್ದಾರೆ. ಕೊಲೆಮಾಡಿದ ಬಳಿಕ ಆರೋಪಿ ಅಭಿಷೇಕ್ ಬಟ್ಟೆ ಬದಲಿಸಿಕೊಂಡು ಪರಾರಿಯಾಗಿದ್ದಾನೆ. ಆತ ಭೋಪಾಲ್‌ಗೆ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಕೋರಮಂಗಲ ಪೊಲೀಸರು ಆರೋಪಿಯನ್ನ ಆರೆಸ್ಟ್ ಮಾಡಲು ಭೋಪಾಲ್‌ಗೆ ತೆರಳಿದ್ದಾರೆ.

ಯಾರು ಕೊಲೆಗಾರ?

ʼʼಕೃತಿ ಕುಮಾರಿ ತಾನು ಪ್ರೀತಿಸುತ್ತಿದ್ದ ಯುವಕನಿಂದಲೇ ಕೊಲೆಯಾಗಿದ್ದಾರೆ. ರಾತ್ರಿ 11:30ಕ್ಕೆ ಕೃತಿ ಕುಮಾರಿಯೇ ಯುವಕನನ್ನು ಕರೆದುಕೊಂಡು ಬಂದಿರುವ ಬಗ್ಗೆ ಮೇಲ್ನೋಟಕ್ಕೆ ಮಾಹಿತಿ ಸಿಕ್ಕಿದೆ. ಪಿಜಿಯಿಂದ ಹೊರ ಬಂದ ಕೃತಿ ತನ್ನ ಪ್ರಿಯತಮನ ಜತೆ ರಾತ್ರಿ ಊಟ ಮಾಡಿದ್ದರು. ಊಟ ಮುಗಿಸಿದ ಕೃತಿ ತನ್ನೊಂದಿಗೆ ಯುವಕನ್ನು ಪಿಜಿಗೆ ಕರೆತಂದಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆʼʼ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕೃತಿಯ ರೂಂಗೆ ಆಗಮಿಸಿದ್ದ ವೇಳೆ ಇಬ್ಬರ ಮಧ್ಯೆ ಗಲಾಟೆಯಾಗಿ ಕೊಲೆಯಾಗಿರುವ ಶಂಕೆ ಇದೆ. ಕೊರಮಂಗಲ ಪೊಲೀಸರು ಸದ್ಯ ಆರೋಪಿಯ ಮಾಹಿತಿ ಕಲೆ ಹಾಕುತ್ತಿದ್ದಾರೆ. ಎರಡು ದಿನದ ಹಿಂದೆಯಷ್ಟೇ ಕೃತಿ ಪಿಜಿಗೆ ಸೇರಿದ್ದರು. ಆಕೆ ಪಿಜಿಗೆ ಆಗಮಿಸುವ ವೇಳೆಯೂ ಈ ಯುವಕ ಲಗೇಜ್‌ ತೆಗದುಕೊಂಡು ಬಂದಿದ್ದ. ಆಗ ಯುವಕನನ್ನು ಒಳ ಬಿಡುವುದಿಲ್ಲ ಎಂದು ಪಿಜಿ ಸೆಕ್ಯೂರಿಟಿ ತಡೆದಿದ್ದರು. ಪಿಜಿ ಸೆಕ್ಯುರಿಟಿ ಬಳಿ, ಆತ ತನ್ನ ಸಹೋದರ ಎಂದು ಹೇಳಿ ಬೇಗ ಕಳುಹಿಸುತ್ತೇನೆ ಎಂದು ಕೃತಿ ಒಳ ಕರೆದುಕೊಂಡು ಹೋಗಿದ್ದರು ಎನ್ನಲಾಗಿದೆ.

ಇದನ್ನೂ ಓದಿ: Murder Case: ಲೇಡಿಸ್‌ ಪಿಜಿಗೆ ನುಗ್ಗಿ ಯುವತಿಯ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್‌; ಪ್ರಿಯತಮನೇ ಕೊಲೆಗಾರ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Murder in PG: ಗೆಳತಿಗಾಗಿ ಕೊಲೆಯಾಗಿ ಹೋದ ಕೃತಿ ಕುಮಾರಿ; ಪ್ರೇಯಸಿಯನ್ನು ಬಂಧನದಲ್ಲಿಟ್ಟು ಕ್ರೌರ್ಯ ಮೆರೆದ ಪಾತಕಿ

Murder in PG: ಆರೋಪಿ ಅಭಿಷೇಕ್‌ ಬಂಧನದಲ್ಲಿ ಇಟ್ಟಿದ್ದಆತನ ಪ್ರೇಯಸಿಯನ್ನು ಕೃತಿ ಕುಮಾರಿ ಬಿಡಿಸಿ ತನ್ನ ಪಿಜಿಗೆ ಕರೆತಂದಿದ್ದಳು. ಈಕೆಯ ಈ ಮಾನವೀಯ ನಡತೆಯೇ ಆಕೆಯ ಜೀವ ತೆಗೆದಿದೆ.

VISTARANEWS.COM


on

Murder in PG Case
Koo

ಬೆಂಗಳೂರು: ರಾಜಧಾನಿಯ ಕೋರಮಂಗಲದ ಪಿಜಿಯಲ್ಲಿ ಕೊಲೆಯಾಗಿ (Murder in PG) ಹೋದ ಕೃತಿ ಕುಮಾರಿ ಮರ್ಡರ್ (Krithi Kumari Murder) ಪ್ರಕರಣದಲ್ಲಿ ಪಾತಕಿಯ ಬರ್ಬರತೆಯ ಬಗ್ಗೆ ಬೆಚ್ಚಿ ಬೀಳಿಸುವ ಇನ್ನಷ್ಟು ವಿವರಗಳು ಹೊರಬಿದ್ದಿವೆ. ಕೊಲೆಯಾಗಿ ಹೋದವಳು ಈತನ ಪ್ರೇಯಸಿಯ (lover) ಗೆಳತಿಯಾಗಿದ್ದು, ಈ ದುಷ್ಟನ ಕೈಯಿಂದ ಗೆಳತಿಯನ್ನು ಬಿಡಿಸುವ ಯತ್ನದಲ್ಲಿ ತಾನೇ ಮರ್ಡರ್‌ (Murder Case) ಆಗಿದ್ದಾಳೆ.

ಆರೋಪಿ ಅಭಿಷೇಕ್‌ ತಾನು ಪ್ರೀತಿಸಿದವಳನ್ನು ಗೃಹ ಬಂಧನದಲ್ಲಿಟ್ಟಿದ್ದ. ಆಕೆಯನ್ನು ಕಾಪಾಡಿದ ಆಕೆಯ ಗೆಳತಿಯೇ ಜೀವ ಕಳೆದುಕೊಂಡಿದ್ದಾಳೆ. ಅಭಿಷೇಕ್‌ ಯುವತಿಯೊಬ್ಬಳೊಂದಿಗೆ ಪ್ರೀತಿಯಲ್ಲಿದ್ದ. ತನ್ನ ಪ್ರೇಯಸಿಯನ್ನು ಬಲವಂತವಾಗಿ ಬಾಡಿಗೆ ರೂಮ್‌ನಲ್ಲಿ ಇರಿಸಿಕೊಂಡಿದ್ದ. ಕೊಲೆಗೂ ಮೂರು ದಿನದ ಹಿಂದೆ ಬಾಡಿಗೆ ರೂಮ್ ಮಾಡಿ, ಆಕೆಯನ್ನು ಕರೆದೊಯ್ದು ಬಲವಂತವಾಗಿ ರೂಮ್‌ನಲ್ಲಿಟ್ಟುಕೊಂಡಿದ್ದ.

ಆದರೆ ಪ್ರೇಯಸಿ ರೂಮ್‌ನಲ್ಲಿ ಇರಲಾಗದೆ ಒದ್ದಾಡಿದ್ದಳು. ರೂಮ್‌ಮೇಟ್ ಪಿಜಿಗೆ ಬರಲಿಲ್ಲ ಏಕೆಂದು ವಿಚಾರಿಸಿದಾಗ ಕೃತಿ ಕುಮಾರಿ, ಆರೋಪಿ ಆಕೆಯನ್ನು ಕೂಡಿ ಹಾಕಿದ್ದರ ಮಾಹಿತಿಯನ್ನು ಪಡೆದುಕೊಂಡಿದ್ದಳು. ನಂತರ ಸಮಯ ನೋಡಿ ಗೆಳತಿಯನ್ನು ರೂಮ್‌ನಿಂದ ಕರೆತರಲು ಪ್ಲ್ಯಾನ್ ಮಾಡಿದ್ದು, ತನ್ನ ಸ್ನೇಹಿತರೊಂದಿಗೆ ತೆರಳಿ ಗೆಳತಿಯನ್ನು ಪಿಜಿಗೆ ಕರೆತಂದಿದ್ದಳು. ಕೊಲೆ‌ ನಡೆದ ಹಿಂದಿನ ದಿನ ಗೃಹಬಂಧನದಲ್ಲಿದ್ದ ಗೆಳತಿಯನ್ನು ಕೃತಿ ಪಾರುಮಾಡಿದ್ದಳು. ಈಕೆಯ ಈ ಮಾನವೀಯ ನಡತೆಯೇ ಆಕೆಯ ಜೀವ ತೆಗೆದಿದೆ.

ಈ ವಿಚಾರ ಗೊತ್ತಾಗಿದ್ದೇ ತಡ ಕೃತಿ ಮೇಲೆ ಆರೋಪಿ ಅಭಿಷೇಕ್‌ ತೀವ್ರವಾಗಿ ಕೋಪಗೊಂಡಿದ್ದ. ತನ್ನ ಪ್ರೇಯಸಿಯನ್ನು ಕರೆದುಕೊಂಡು ಹೋಗಿದ್ದಕ್ಕೆ ಕೋಪಗೊಂಡು ಮಂಗಳವಾರ ರಾತ್ರಿ‌ 11.10ರ ಸುಮಾರಿಗೆ ಏಕಾಏಕಿ ಪಿಜಿಗೆ ಹೋಗಿದ್ದ. ಒಳ ಹೋದವನೇ ಸೀದಾ ಕೃತಿ ಕುಮಾರಿಗೆ ಚಾಕುವಿನಿಂದ ಯದ್ವಾತದ್ವಾ ಇರಿದು ಎಸ್ಕೇಪ್ ಆಗಿದ್ದಾನೆ.

ಸದ್ಯ ಹೊರ ರಾಜ್ಯಕ್ಕೆ ಆರೋಪಿ ಅಭಿಷೇಕ್‌ ಪರಾರಿಯಾಗಿರುವ ಶಂಕೆ ಇದೆ. ಮೂಲತಃ ಮಧ್ಯಪ್ರದೇಶ ಮೂಲದವನು ಆಗಿರುವ ಆರೋಪಿ ಅಭಿಷೇಕ್, ಸದ್ಯ ಮೊಬೈಲ್ ಸ್ವಿಚ್ಡ್ ಆಫ್ ಮಾಡಿಕೊಂಡು ಪರಾರಿಯಾಗಿದ್ದಾನೆ. ಕೊಲೆಯಾದ ಕೃತಿ ಕುಮಾರಿ ಬಿಹಾರದಾಕೆ ಎಂದು ಗೊತ್ತಾಗಿದೆ. ಸದ್ಯ ಆರೋಪಿಯ ಸ್ನೇಹಿತೆಯ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಕೋರಮಂಗಲ ಪೊಲೀಸರು ಆರೋಪಿಯ ಬೆನ್ನು ಬಿದ್ದಿದ್ದು, ತನಿಖೆ ಮುಂದುವರಿದಿದೆ.

ಘಟನೆ ನಡೆದದ್ದು ಹೀಗೆ

ಜು.23ರಂದು ಕೋರಮಂಗಲದ ಪಿಜಿಯಲ್ಲಿ ಕೃತಿ ಕುಮಾರಿ ಕೊಲೆ ನಡೆದಿತ್ತು. ಆರೋಪಿ ಅಭಿಷೇಕ್ ಕೃತಿ ಕುಮಾರಿಯನ್ನು ಎರಡೇ ನಿಮಿಷದಲ್ಲಿ ಕೊಲೆಮಾಡಿ ಪರಾರಿಯಾಗಿದ್ದಾನೆ. ಕತ್ತು, ಎದೆ, ಹೊಟ್ಟೆ ಭಾಗ ಸೇರಿ ಹಲವು ಕಡೆ ಇರಿದಿದ್ದಾನೆ. ಕತ್ತನ್ನು ಕೋಳಿ ಕತ್ತಿನಂತೆ ಕೊಯಿದಿದ್ದಾನೆ. ಮೊದಲು ಪಿಜಿ ರೂಮಿನ ಬಾಗಿಲು ಬಡಿದ ಕೊಲೆಗಾರ, ಆಕೆ ಬಾಗಿಲು ತೆರೆದ ಕೂಡಲೇ ಒಳಹೋಗಿದ್ದಾನೆ. ನಂತರ ಕೆಲವು ಸೆಕೆಂಡ್‌ನಲ್ಲಿ ಆಕೆ ಆತನಿಂದ ಪಾರಾಗಲು ಹೊರಗೋಡಿ ಬಂದಿದ್ದು, ಆಕೆಯನ್ನು ಕಾರಿಡಾರ್‌ನಲ್ಲೇ ತಡೆದ ಪಾತಕಿ ಮನಬಂದಂತೆ ಇರಿದಿದ್ದಾನೆ.

ಪ್ರಾಣ ಉಳಿಸಿಕೊಳ್ಳಲು ಕೃತಿ ಕುಮಾರಿ ಒದ್ದಾಡಿದ್ದಾಳೆ. ರಕ್ತದ ಮಡುವಿನಲ್ಲಿದ್ದ ಕೃತಿ ಕುಮಾರಿ ಆರ್ತನಾದ ಮಾಡಿದರೂ ಪಿಜಿಯಲ್ಲಿದ್ದ ಮೂವರು ಯುವತಿಯರು ಮಾತ್ರ ಹತ್ತಿರ ಬಂದಿಲ್ಲ. ಮಾನವೀಯತೆಯನ್ನೇ ಮರೆತಂತೆ ವರ್ತಿಸಿದ ಇವರು ಕೃತಿ ಕುಮಾರಿಯ ಹತ್ತಿರ ಕೂಡ ಹೋಗಿಲ್ಲ. ಕೈಯಲ್ಲಿದ್ದ ಮೊಬೈಲ್ ಫೋನ್‌ ನೋಡ್ತಾ ಆಚೆ ಹೋಗಿದ್ದಾರೆ. ಈ ಎಲ್ಲಾ ದೃಶ್ಯಗಳು ಪಿಜಿಯಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: Murder In PG: ಕೃತಿ ಕುಮಾರಿಗೆ ಮನಬಂದಂತೆ ಇರಿದ ಪಾತಕಿ, ನೋಡ್ತಾ ಇದ್ರೂ ಸಹಾಯಕ್ಕೆ ಬಾರದ ಯುವತಿಯರು

Continue Reading

ಬಾಲಿವುಡ್

Salman Khan: ಸಲ್ಮಾನ್ ಖಾನ್‌ ಹೆದರುವ ರೀತಿಯಲ್ಲಿ ಗುಂಡಿನ ದಾಳಿ ಆಗಬೇಕು ಎಂದು ಶೂಟರ್‌ಗಳಿಗೆ ಸ್ಫೂರ್ತಿ ತುಂಬಿದ್ದ ಬಿಷ್ಣೋಯಿ!

Salman Khan : ಎಪ್ರಿಲ್‌ 14ರಂದು ಮುಂಬೈಯ ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಗುಂಡಿನ ದಾಳಿ ನಡೆದಿತ್ತು. ಬೈಕ್‌ನಲ್ಲಿ ಬಂದು ದಾಳಿ ನಡೆಸಿದ್ದ ಶೂಟರ್‌ಗಳಾದ ಸಾಗರ್‌ ಪಾಲ್‌ ಮತ್ತು ವಿಕ್ಕಿ ಗುಪ್ತಾ ಎಂಬ ಇಬ್ಬರು ದುಷ್ಕರ್ಮಿಗಳನ್ನು ಬಳಿಕ ಅರೆಸ್ಟ್‌ ಮಾಡಲಾಗಿತ್ತು. ಮುಂಬೈ ಪೊಲೀಸರು ಜೈಲಿನಲ್ಲಿರುವ ಗ್ಯಾಂಗ್​ಸ್ಟರ್ ಲಾರೆನ್ಸ್ ಬಿಷ್ಣೋಯ್ ಮತ್ತು ಅವನ ಕಿರಿಯ ಸಹೋದರ ಅನ್ಮೋಲ್ ಬಿಷ್ಣೋಯ್ ಅವರನ್ನು ಈ ಪ್ರಕರಣದ ಪ್ರಮುಖ ಆರೋಪಿಗಳು ಎಂದು ಘೋಷಿಸಿದ್ದರು.

VISTARANEWS.COM


on

Salman Khan House Gangster's 9-Minute Speech To Shooters Before Attack
Koo

ಬೆಂಗಳೂರು: ಎಪ್ರಿಲ್‌ 14ರಂದು ಮುಂಬೈಯ ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ (Salman Khan) ಅವರ ಮನೆಯ ಹೊರಗೆ ಗುಂಡಿನ ದಾಳಿ ನಡೆದಿತ್ತು. ಗ್ಯಾಂಗ್​ಸ್ಟರ್ ಲಾರೆನ್ಸ್ ಬಿಷ್ಣೋಯ್ ಮತ್ತು ಅವನ ಕಿರಿಯ ಸಹೋದರ ಅನ್ಮೋಲ್ ಬಿಷ್ಣೋಯ್ ಅವರನ್ನು ಈ ಪ್ರಕರಣದ ಪ್ರಮುಖ ಆರೋಪಿಗಳು ಎಂದು ಘೋಷಿಸಿರುವುದು ಗೊತ್ತೇ ಇದೆ. ಜೈಲಿನಲ್ಲಿರುವ ಅನ್ಮೋಲ್ ಬಿಷ್ಣೋಯ್ ಏಪ್ರಿಲ್‌ನಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮುಂಬೈ ಮನೆಯ ಮೇಲೆ ಗುಂಡು ಹಾರಿಸಿದ ಶೂಟರ್‌ಗಳಿಗೆ ಒಂಬತ್ತು ನಿಮಿಷಗಳ ಕಾಲಕ ಸ್ಫೂರ್ತಿದಾಯಕ ಭಾಷಣವನ್ನು ನೀಡಿದ್ದ ಎಂದು ತಿಳಿದು ಬಂದಿದೆ. ಮುಂಬೈ ಪೊಲೀಸರ ಅಪರಾಧ ವಿಭಾಗದ ಚಾರ್ಜ್‌ಶೀಟ್ ಪ್ರಕಾರ, ಅನ್ಮೋಲ್ ಬಿಷ್ಣೋಯ್ ಇಬ್ಬರು ಶೂಟರ್‌ಗಳಾದ ವಿಕ್ಕಿ ಗುಪ್ತಾ ಮತ್ತು ಸಾಗರ್ ಪಾಲ್‌ಗೆ ನಟನ ನಿವಾಸದ ಮೇಲೆ ದಾಳಿ ಮಾಡಿದಾಗ ಇದೊಂದು “ಹಿಸ್ಟರಿ” ಎಂದು ಹೇಳಿದ್ದ.

ಗುಪ್ತಾ ಮತ್ತು ಪಾಲ್ ಎಂಬ ಇಬ್ಬರು ಬೈಕ್‌ನಲ್ಲಿ ಬಂದ ವ್ಯಕ್ತಿಗಳು. ಏಪ್ರಿಲ್ 14ರ ಬೆಳಗ್ಗೆ ಬಾಂದ್ರಾದ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನಲ್ಲಿರುವ ಸಲ್ಮಾನ್‌ ಖಾನ್ ಅವರ ಮನೆಯ ಹೊರಗೆ ಗುಂಡು ಹಾರಿಸಿದ್ದರು. ಆಡಿಯೊ ನೋಟ್‌ ಮೂಲಕ ಅನ್ಮೋಲ್ ಬಿಷ್ಣೋಯ್ ಇಬ್ಬರೂ ಶೂಟರ್‌ಗಳಿಗೆ ತಮ್ಮ ಜೀವನದ “ಉತ್ತಮ ಕೆಲಸ” ಮಾಡಲಿದ್ದೇವೆ ಎಂದು ಹೇಳಿದರು.

ಮುಂಬೈನ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ 1,735 ಪುಟಗಳ ಚಾರ್ಜ್‌ಶೀಟ್‌ನ ಪ್ರಕಾರ ಅನ್ಮೋಲ್ ಬಿಷ್ಣೋಯ್ ಇಬ್ಬರೂ ಶೂಟರ್‌ಗಳಿಗೆ ಹೇಳಿದ್ದು ಹೀಗೆ. “ಈ ಕೆಲಸವನ್ನು ಚೆನ್ನಾಗಿ ಮಾಡಿ. ಕೆಲಸ ಮುಗಿದ ನಂತರ, ನೀವು ಇತಿಹಾಸ ಪುಟದಲ್ಲಿ ಇರುತ್ತೀರಿʼʼ ಎಂದು ಶೂಟರ್‌ಗಳಿಗೆ ಹೇಳಿದರು. ಮಾತ್ರವಲ್ಲ ಅನ್ಮೋಲ್ ಬಿಷ್ಣೋಯ್, ಗುಪ್ತಾ ಮತ್ತು ಪಾಲ್ ಅವರಿಗೆ ಇದೊಂದು ಧಾರ್ಮಿಕ ಕೆಲಸ ಎಂದು ಪ್ರೋತ್ಸಾಹಿಸಿದ್ದಾರೆ. ಜತೆಗೆ ಈ ಕೆಲಸ ಮಾಡುವಾಗ ಸ್ವಲ್ಪವೂ ಭಯಪಡಬೇಡಿ, ಈ ಕೆಲಸ ಮಾಡುವುದರಿಂದ ಸಮಾಜದಲ್ಲಿ ಬದಲಾವಣೆ ತರಬೇಕು. ಎಂದೂ ಹೇಳಿದ್ದಾನೆ. ನಾವು ಯಾವುದೇ ಕೆಲಸ ಮಾಡಲು ಹೋದಾಗ, ನಾವು ಬಂದೂಕಿನ ಮ್ಯಾಗಜಿನ್ ಅನ್ನು ಖಾಲಿ ಮಾಡುವ ಶೈಲಿಯನ್ನು ಹೊಂದಿರಬೇಕು. ನೀವು ಸಲ್ಮಾನ್ ಖಾನ್ ಅವರ ಮನೆಯಿಂದ ಹೊರಗೆ ಬಂದಾಗ ನೀವು ಮ್ಯಾಗಜಿನ್ ಅನ್ನು ಖಾಲಿ ಮಾಡಿ. ಗುಂಡು ಹಾರಿಸುವುದು ಸಲ್ಮಾನ್ ಖಾನ್‌ಗೆ ಹೆದರಿಕೆ ತರಬೇಕು. ಸಲ್ಮಾನ್ ಖಾನ್‌ಗೆ ಹೆದರುವ ರೀತಿಯಲ್ಲಿ ಗುಂಡಿನ ದಾಳಿ ಆಗಬೇಕುʼʼಎಂದು ಅನ್ಮೋಲ್ ಸಂದೇಶ ನೀಡಿದ್ದ.

ಇದನ್ನೂ ಓದಿ: Actor Yash: ಯಶ್‌ ನಟನೆಯ ʻಟಾಕ್ಸಿಕ್‌ʼ ಸಿನಿಮಾ ವಿರುದ್ಧ ದೂರು ದಾಖಲು

ಬಿಷ್ಣೋಯ್, ವಿಕ್ಕಿ ಗುಪ್ತಾ ಮತ್ತು ಸಾಗರ್ ಪಾಲ್ ಅವರಿಗೆ ಹೆಲ್ಮೆಟ್ ಧರಿಸದೇ ಇರಬೇಕು ಮತ್ತು ನಿರ್ಭೀತರಾಗಿ ಕಾಣಿಸಿಕೊಳ್ಳಲು ಸಿಗರೇಟ್ ಸೇದಲು ಬಾರದೂ ಎಂದು ಹೇಳಿದ್ದನಂತೆ. ಗುಂಡಿನ ದಾಳಿಗೂ ಮುನ್ನ ಅನ್ಮೋಲ್ ಬಿಷ್ಣೋಯ್ ಗುಪ್ತಾ ಮತ್ತು ಪಾಲ್ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದರು ಎಂದು ಪೊಲೀಸರು ಹೇಳಿಕೆ ನೀಡಿದ್ದಾರೆ,

ಶೂಟರ್‌ಗಳು ಮತ್ತು ಇತರ ಮೂವರು, ಸೋನುಕುಮಾರ್ ಬಿಷ್ಣೋಯ್, ಮೊಹಮ್ಮದ್ ರಫೀಕ್ ಚೌಧರಿ ಮತ್ತು ಹರ್ಪಾಲ್ ಸಿಂಗ್ ಅವರನ್ನು ಬಂಧಿಸಲಾಗಿದೆ. ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ. ಲಾರೆನ್ಸ್ ಬಿಷ್ಣೋಯ್, ಅನ್ಮೋಲ್ ಮತ್ತು ರಾವತರನ್ ಬಿಷ್ಣೋಯ್ ಆರೋಪಪಟ್ಟಿಯಲ್ಲಿ ಬೇಕಾಗಿರುವ ಆರೋಪಿಗಳಾಗಿದ್ದಾರೆ.

ಏನಿದು ಪ್ರಕರಣ?

ಎಪ್ರಿಲ್‌ 14ರಂದು ಮುಂಬೈಯ ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಗುಂಡಿನ ದಾಳಿ ನಡೆದಿತ್ತು. ಬೈಕ್‌ನಲ್ಲಿ ಬಂದು ದಾಳಿ ನಡೆಸಿದ್ದ ಶೂಟರ್‌ಗಳಾದ ಸಾಗರ್‌ ಪಾಲ್‌ ಮತ್ತು ವಿಕ್ಕಿ ಗುಪ್ತಾ ಎಂಬ ಇಬ್ಬರು ದುಷ್ಕರ್ಮಿಗಳನ್ನು ಬಳಿಕ ಅರೆಸ್ಟ್‌ ಮಾಡಲಾಗಿತ್ತು. ಮುಂಬೈ ಪೊಲೀಸರು ಜೈಲಿನಲ್ಲಿರುವ ಗ್ಯಾಂಗ್​ಸ್ಟರ್ ಲಾರೆನ್ಸ್ ಬಿಷ್ಣೋಯ್ ಮತ್ತು ಅವನ ಕಿರಿಯ ಸಹೋದರ ಅನ್ಮೋಲ್ ಬಿಷ್ಣೋಯ್ ಅವರನ್ನು ಈ ಪ್ರಕರಣದ ಪ್ರಮುಖ ಆರೋಪಿಗಳು ಎಂದು ಘೋಷಿಸಿದ್ದರು.

ಈ ಮಧ್ಯೆ ಗುಂಡಿನ ದಾಳಿ ನಡೆಸಿದ್ದ ಶೂಟರ್‌ಗಳಿಗೆ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡಿದ್ದ ಆರೋಪ ಎದುರಿಸುತ್ತಿದ್ದ ಅನೂಜ್‌ ಥಾಪನ್‌ ಕೆಲವು ದಿನಗಳ ಹಿಂದೆ ಪೊಲೀಸ್‌ ಕಸ್ಟಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಆತ ಕೊನೆಯುಸಿರೆಳೆದಿದ್ದ. ಅನುಜ್ ಥಾಪನ್ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ಆತನ ಕುಟುಂಬ ಇದರ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿತ್ತು. ಲಾಕಪ್‌ನಲ್ಲಿ ಥಾಪನ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದರೆ ಆತನ ತಾಯಿ ಇದು ಕೊಲೆ ಎಂದು ಆರೋಪಿಸಿದ್ದರು.

ಕಾರಣವೇನು?

ಹಲವು ವರ್ಷಗಳ ಹಿಂದಿನ ಕೃಷ್ಣಮೃಗ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಮಾನ್‌ ಅವರನ್ನು ಕೊಲ್ಲುವುದಾಗಿ 2018 ರಲ್ಲಿ ಬೆದರಿಕೆ ಹಾಕಿದ ನಂತರ ಬಿಷ್ಣೋಯ್ ಅವರ ಸಹಾಯಕರಲ್ಲಿ ಒಬ್ಬನನ್ನು ಬಂಧಿಸಲಾಯಿತು. ಜೋಧಪುರ್​ನ ಬಿಷ್ಣೋಯ್​ಗಳು ಕೃಷ್ಣಮೃಗವನ್ನು ತಮ್ಮ ಧಾರ್ಮಿಕ ಗುರು ಭಗವಾನ್ ಜಂಬೇಶ್ವರ ಅವರ ಪುನರ್ಜನ್ಮ ಎಂದು ಪರಿಗಣಿಸುತ್ತಾರೆ. ಹೀಗಾಗಿ ಕೃಷ್ಣಮೃಗ ಕೊಲ್ಲುವುದನ್ನು ಬಿಷ್ಣೋಯ್​ಗಳು ಎಂದಿಗೂ ಸಹಿಸುವುದಿಲ್ಲ. ಈ ಕಾರಣಕ್ಕೆ ಸಲ್ಮಾನ್ ಖಾನ್ ಹತ್ಯೆ ಮಾಡಲು ಲಾರೆನ್ಸ್ ಬಿಷ್ಣೋಯ್ ನಿರ್ಧರಿಸಿದ್ದ. ಎಬಿಪಿ ನ್ಯೂಸ್‌ಗೆ ನೀಡಿದ ಇತ್ತೀಚಿನ ಸಂದರ್ಶನದಲ್ಲಿ, ʻʻಸಲ್ಮಾನ್ ಖಾನ್ ಅವರನ್ನು ಕೊಲ್ಲುವುದು ನನ್ನ ಜೀವನದ ಗುರಿ. ಸಲ್ಮಾನ್‌ ಅವರು ಬಿಷ್ಣೋಯ್ ಸಮುದಾಯಕ್ಕೆ ಕ್ಷಮೆಯಾಚಿಸಿದ ನಂತರವೇ ಈ ವಿಷಯ ಕೊನೆಗೊಳ್ಳುತ್ತದೆʼʼ ಎಂದು ಹೇಳಿದ್ದ.

Continue Reading

ಬೆಂಗಳೂರು

Assault Case : ರಾಜಧಾನಿಯಲ್ಲಿ ನಿಲ್ಲದ ಪುಂಡರ ಪುಂಡಾಟ; ಕಾರು ಚಾಲಕನ ಚೇಸ್‌ ಮಾಡಿ ಹಲ್ಲೆ

Bengaluru News : ಬೆಂಗಳೂರಿನಲ್ಲಿ ಸಿನಿಮಾ ಸ್ಟೈಲ್‌ನಲ್ಲಿ ಕಾರೊಂದನ್ನು ಚೇಸ್‌ ಮಾಡಿದ ಪುಂಡರು ಹಲ್ಲೆ (Assault Case) ಯತ್ನಿಸಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ವ್ಹೀಲಿಂಗ್‌ ಮಾಡಿ ಬೆದರಿಕೆ ಹಾಕಿದ್ದ ಪೋಕರಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮನೆ ಮುಂದೆ ನಿಲ್ಲಿಸಿದ್ದ ವಾಹನಗಳನ್ನು ಕಿಡಿಗೇಡಿಗಳು ಸುಟ್ಟು ಹಾಕಿದ್ದಾರೆ.

VISTARANEWS.COM


on

By

assault case
Koo

ಬೆಂಗಳೂರು: ಕಾರೊಂದನ್ನು ಹಿಂಬಾಲಿಸಿಕೊಂಡು ಬಂದ ಕೆಲ ಪುಂಡರು ಚಾಲಕನ ಮೇಲೆ ಹಲ್ಲೆಗೆ (Assault Case) ಯತ್ನಿಸಿದ್ದಾರೆ. ಬೈಕ್‌ನಲ್ಲಿ ಬಂದ ಪುಂಡರು ತಡರಾತ್ರಿ ಕಾರನ್ನು ಚೇಸ್‌ ಮಾಡಿ ಎರಡು ಬಾರಿ ಕಾರಿಗೆ ಅಡ್ಡ ಹಾಕಿ ಹಲ್ಲೆಗೆ ಯತ್ನಿಸಿದ್ದಾರೆ. ಕಾರಿನ ಗ್ಲಾಸ್ ಹೊಡೆದು ದರ್ಪ ಮೆರೆದಿದ್ದಾರೆ. ಬೆಂಗಳೂರಿನ ವಿಜಯನಗರ ಸಮೀಪ ಪುಂಡರ ಕ್ರೌರ್ಯಕ್ಕೆ ಚಾಲಕರು ಬೆಚ್ಚಿ ಬಿದ್ದಿದ್ದಾರೆ. ಕಾರಿನ ಅಕ್ಕ ಪಕ್ಕ ಬೈಕ್‌ಗಳಲ್ಲಿ ಸುಮಾರು ಒಂದೂವರೆ ಕಿಲೋ ಮೀಟರ್‌ವರೆಗೂ ಚೇಸ್‌ ಮಾಡಿದ್ದಾರೆ. ಕಾರಿನ ಡ್ಯಾಷ್ ಬೋರ್ಡ್‌ನಲ್ಲಿ ಪುಂಡರ ಅಟ್ಟಹಾಸ ಬಯಲಾಗಿದೆ. ಡ್ಯಾನ್ಸರ್ ಹಾಗು ಕೋರಿಯಾಗ್ರಾಫರ್ ಆಗಿರುವ ಅರವಿಂದ್ ಎಂಬುವವರ ಕಾರಿನ್ನು ಚೇಸ್‌ ಮಾಡಿ ಗ್ಲಾಸ್‌ ಹೊಡೆದು, ಹಲ್ಲೆಗೆ ಯತ್ನಿಸಿದ್ದಾರೆ. ವಿಜಯನಗರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Assault Case
assault case

ವ್ಹೀಲಿಂಗ್‌ ಮಾಡಿ ಬೆದರಿಕೆ ಹಾಕಿದ ಪುಂಡಾರು

ರಸ್ತೆಯಲ್ಲಿ ವ್ಹೀಲಿಂಗ್‌ ಮಾಡಿ ಪುಂಡಾಟ ಮಾಡಿದ್ದಲ್ಲದೇ ಬೆದರಿಸಿ ಹಲ್ಲೆಗೆ ಯತ್ನಿಸಿದ ಕಿರಾತಕರನ್ನು ಪೊಲೀಸರು ಬಂಧಿಸಿದ್ದಾರೆ. ಕ್ರಿಮಿನಲ್ ಅಫೆನ್ಸ್ ಎಂಬ ಕಾರಣಕ್ಕೆ ಲಾ ಆ್ಯಂಡ್ ಆರ್ಡರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದೀಗ ಇಬ್ಬರು ಅಪ್ರಾಪ್ತರು ಸೇರಿ ಸಂಜಯ್ ಎಂಬ ಯುವಕನನ್ನು ಬಂಧಿಸಲಾಗಿದೆ. ಸಿಲ್ಕ್ ಬೋರ್ಡ್ ಬಳಿ ಇರುವ ಹೊಸ ಫ್ಲೈ ಓವರ್ ಸಮೀಪ ಈ ಮೂವರು ವ್ಹೀಲಿಂಗ್‌ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಬೆದರಿಕೆ ಹಾಕಿ ಹಲ್ಲೆಗೆ ಯತ್ನಿಸಿದ್ದರು. ಈ ಹಿನ್ನೆಲೆಯಲ್ಲಿ ಟ್ರಾಫಿಕ್ ಪೊಲೀಸ್ ಠಾಣೆ ಹೊರತು ಪಡಿಸಿ ಲಾ ಆ್ಯಂಡ್ ಆರ್ಡರ್‌ನಲ್ಲಿ ಕೇಸ್ ದಾಖಲು ಮಾಡಲಾಗಿತ್ತು. ಇದೀಗ ಸುಮೋಟೋ ಕೇಸ್ ದಾಖಲಿಸಿ ಸುದ್ಗುಂಟೆಪಾಳ್ಯ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: Police Firing: ದರೋಡೆ, ಕೊಲೆ ಆರೋಪಿ ಕಾಲಿಗೆ ಗುಂಡು ಹಾರಿಸಿ ಸೆರೆ

assaulted case
assault case

ರೀಲ್ಸ್‌ ಮಾಡಿದ್ದಕ್ಕೆ ಠಾಣೆ ಮೆಟ್ಟಿಲೇರಿದ ಯುವಕರು

ಕಿವುಡರ ಬಗ್ಗೆ ಸಮಾಜದಲ್ಲಿ ಕೆಟ್ಟ ಭಾವನೆ ಮೂಡುವ ರೀತಿಯಲ್ಲಿ ರೀಲ್ಸ್‌ ಮಾಡಿದ್ದಕ್ಕೆ ಯುವಕರಿಬ್ಬರು ಜೈಲುಪಾಲಾಗಿದ್ದಾರೆ. ಕಿವುಡರ ಸನ್ನೆ ಹಾಗೂ ಸಂಜ್ಞಾ ಭಾಷೆಗೆ ಅವಮಾನ ಮಾಡಿದ್ದರು. ಸೋಶಿಯಲ್‌ ಮೀಡಿಯಾದಲ್ಲಿ ಕಿವುಡರ ಹಾಗು ಮೂಖರ ಸ್ವಾತಂತ್ರ್ಯಕ್ಕೆ ಧಕ್ಕೆ ಬರುವಂತೆ ರೋಹನ್ ಕಾರ್ಯಪ್ಪ ಹಾಗು ಶರವಣ ಭಟ್ಟಾಚಾರ್ಯ ಇಬ್ಬರು ವಿಡಿಯೋ ಮಾಡಿದ್ದರು. ಹೀಗಾಗಿ ವಿಶೇಷ ಚೇತನರು ಬೆಂಗಳೂರಿನ ಸೈಬರ್ ಕ್ರೈಂನಲ್ಲಿ ಪ್ರಕರಣ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಆರೋಪಿಗಳನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ಬಗ್ಗೆ ದೆಹಲಿ ಪೊಲೀಸರಿಗೂ ಕೂಡ ಆನ್ ಲೈನ್ ಮೂಲಕ ದೂರು ಸಲ್ಲಿಸಲಾಗಿತ್ತು. ಸದ್ಯ ಬೆಂಗಳೂರು ಸೈಬರ್ ಕ್ರೈಂ ಪೊಲೀಸರಿಂದ ಇಬ್ಬರ ಬಂಧಿಸಿದ್ದಾರೆ.

assault case
assault case

ಕಿಡಿಗೇಡಿಗಳಿಂದ ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ

ಮನೆ ಮುಂದೆ ನಿಲ್ಲಿಸಿದ್ದ ಗೂಡ್ಸ್ ವಾಹನ ಹಾಗೂ ಎರಡು ಆಟೋಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಬೆಂಗಳೂರಿನ ನಂದಿನಿಲೇಔಟ್ ಸಮೀಪದ ಲಕ್ಷ್ಮೀದೇವಿ ನಗರದಲ್ಲಿ ಘಟನೆ ನಡೆದಿದೆ. ಶುಕ್ರವಾರ ಮುಂಜಾನೆ ಮೂರು ಗಂಟೆ ಸುಮಾರಿಗೆ ಬಂದು ಬೆಂಕಿ ಹಾಕಿದ್ದಾರೆ. ಘಟನೆ ಸಂಬಂಧ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನರೇಂದ್ರ ಹಾಗೂ ಹಯಾಜ್ ಎಂಬುವರಿಗೆ ಸೇರಿದ ವಾಹನಗಳಿಗೆ ಬೆಂಕಿ ಹಾಕಿದ್ದಾರೆ. ಈ ಹಿಂದೆ ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಲ್ಲು ತೂರಾಟ ಮಾಡುತ್ತಿದ್ದರು. ಇದೀಗ ಬೆಂಕಿ ಹಚ್ಚಿ ಸುಟ್ಟುಹಾಕಿದ್ದಾರೆ. ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Police Firing: ದರೋಡೆ, ಕೊಲೆ ಆರೋಪಿ ಕಾಲಿಗೆ ಗುಂಡು ಹಾರಿಸಿ ಸೆರೆ

Police Firing: ಬಂಧಿಸಲು ಪೊಲೀಸರು ತೆರಳಿದಾಗ, ಅವರ ಮೇಲೆ ಹಲ್ಲೆಗೆ ಫರ್ಹಾ‌ನ್‌ ಶೇಖ್ ಮುಂದಾಗಿದ್ದ. ಆ ಸಂದರ್ಭದಲ್ಲಿ ಕೇಶ್ವಾಪುರ ಠಾಣೆ ಪಿಎಸ್‌ಐ ಕವಿತಾ ಸ. ಮಾಡಗ್ಯಾಳ ಆರೋಪಿಯ ಕಾಲಿಗೆ ಫೈರ್‌ ಮಾಡಿದ್ದಾರೆ.

VISTARANEWS.COM


on

police firing hubli
ಆರೋಪಿ ಫರ್ಹಾನ್‌ ಶೇಖ್‌, ಪಿಎಸ್‌ಐ ಕವಿತಾ ಸ. ಮಾಡಗ್ಯಾಳ
Koo

ಹುಬ್ಬಳ್ಳಿ: ದರೋಡೆ (Robbery case) ಹಾಗೂ ಕೊಲೆ (Murder Case) ಮಾಡಿ ತಲೆತಪ್ಪಿಸಿಕೊಂಡಿದ್ದ ಆರೋಪಿಯ ಕಾಲಿಗೆ ಹುಬ್ಬಳ್ಳಿ (Hubli News) ಪೊಲೀಸರು ಗುಂಡೇಟು ಹಾರಿಸಿ (Police Firing) ಬಂಧಿಸಿದ್ದಾರೆ. ಹೈದ್ರಾಬಾದ್ ಮೂಲದ ಫರ್ಹಾನ್ ಶೇಖ್‌ ಬಂಧಿತ ಆರೋಪಿ.

ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಫರ್ಹಾನ್‌ ಶೇಖ್‌ ದರೋಡೆ ಮಾಡಿದ್ದ. ಗಾಮನಗಟ್ಟಿ ರಸ್ತೆಯ ತಾರಿಹಾಳ ಕ್ರಾಸ್ ಬಳಿ ಈತ ಇರುವುದನ್ನು ತಿಳಿದು ಬಂಧಿಸಲು ಪೊಲೀಸರು ತೆರಳಿದಾಗ, ಅವರ ಮೇಲೆ ಹಲ್ಲೆಗೆ ಫರ್ಹಾ‌ನ್‌ ಶೇಖ್ ಮುಂದಾಗಿದ್ದ. ಆ ಸಂದರ್ಭದಲ್ಲಿ ಕೇಶ್ವಾಪುರ ಠಾಣೆ ಪಿಎಸ್‌ಐ ಕವಿತಾ ಸ. ಮಾಡಗ್ಯಾಳ ಆರೋಪಿಯ ಕಾಲಿಗೆ ಫೈರ್‌ ಮಾಡಿದ್ದಾರೆ.

ಫರ್ಹಾನ್‌ನ ಇರಿತದಿಂದ ಪೊಲೀಸ್ ಸಿಬ್ಬಂದಿ ಸುಜಾತಾ ಮತ್ತು ಮಹೇಶ್‌ಗೆ ಗಾಯಗಳಾಗಿವೆ. ಇಬ್ಬರೂ‌ ಕಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗುಂಡೇಟು ತಿಂದ ಫರ್ಹಾನ್ ಶೇಖ್‌ನನ್ನೂ ಕಿಮ್ಸ್‌ಗೆ ದಾಖಲು ಮಾಡಲಾಗಿದೆ.

ಕೃತಿ ಕುಮಾರಿಗೆ ಮನಬಂದಂತೆ ಇರಿದ ಪಾತಕಿ, ಭೋಪಾಲ್‌ಗೆ ಪರಾರಿಯಾದ ಕೊಲೆಗಾರ ಪ್ರಿಯತಮ

ಬೆಂಗಳೂರು: ಕೋರಮಂಗಲದ ಪಿಜಿಯೊಂದರಲ್ಲಿ ನಡೆದ ಕೃತಿ ಕುಮಾರಿ ಎಂಬ ಯುವತಿಯ ಮರ್ಡರ್ ವಿಡಿಯೋ ಸಿಸಿಟಿವಿಯಲ್ಲಿ ಲಭ್ಯವಾಗಿದ್ದು, ಇದೀಗ ವೈರಲ್‌ ಆಗಿದೆ. ಯುವತಿ ರಕ್ತದ ಮಡುವಿನಲ್ಲಿ ಬಿದ್ದು ಸಹಾಯಕ್ಕಾಗಿ ಆರ್ತನಾದ ಮಾಡುತ್ತಿದ್ದರೂ ಅಲ್ಲಿದ್ದ ಇತರ ಯುವತಿಯರು ಆಕೆಯ ಸಹಾಯಕ್ಕೆ ಬರದೆ ತಮ್ಮಷ್ಟಕ್ಕೇ ಹೋಗಿದ್ದುದು ಕೂಡ ಈ ವಿಡಿಯೋದಲ್ಲಿ ದಾಖಲಾಗಿದೆ.

ಜು.23ರಂದು ಕೋರಮಂಗಲದ ಪಿಜಿಯಲ್ಲಿ ಕೃತಿ ಕುಮಾರಿ ಕೊಲೆ ನಡೆದಿತ್ತು. ಆರೋಪಿ ಅಭಿಷೇಕ್ ಕೃತಿ ಕುಮಾರಿಯನ್ನು ಎರಡೇ ನಿಮಿಷದಲ್ಲಿ ಕೊಲೆಮಾಡಿ ಪರಾರಿಯಾಗಿದ್ದಾನೆ. ಕತ್ತು, ಎದೆ, ಹೊಟ್ಟೆ ಭಾಗ ಸೇರಿ ಹಲವು ಕಡೆ ಇರಿದಿದ್ದಾನೆ. ಕತ್ತನ್ನು ಕೋಳಿ ಕತ್ತಿನಂತೆ ಕೊಯಿದಿದ್ದಾನೆ. ಮೊದಲು ಪಿಜಿ ರೂಮಿನ ಬಾಗಿಲು ಬಡಿದ ಕೊಲೆಗಾರ, ಆಕೆ ಬಾಗಿಲು ತೆರೆದ ಕೂಡಲೇ ಒಳಹೋಗಿದ್ದಾನೆ. ನಂತರ ಕೆಲವು ಸೆಕೆಂಡ್‌ನಲ್ಲಿ ಆಕೆ ಆತನಿಂದ ಪಾರಾಗಲು ಹೊರಗೋಡಿ ಬಂದಿದ್ದು, ಆಕೆಯನ್ನು ಕಾರಿಡಾರ್‌ನಲ್ಲೇ ತಡೆದ ಪಾತಕಿ ಮನಬಂದಂತೆ ಇರಿದಿದ್ದಾನೆ.

ಪ್ರಾಣ ಉಳಿಸಿಕೊಳ್ಳಲು ಕೃತಿ ಕುಮಾರಿ ಒದ್ದಾಡಿದ್ದಾಳೆ. ರಕ್ತದ ಮಡುವಿನಲ್ಲಿದ್ದ ಕೃತಿ ಕುಮಾರಿ ಆರ್ತನಾದ ಮಾಡಿದರೂ ಪಿಜಿಯಲ್ಲಿದ್ದ ಮೂವರು ಯುವತಿಯರು ಮಾತ್ರ ಹತ್ತಿರ ಬಂದಿಲ್ಲ. ಮಾನವೀಯತೆಯನ್ನೇ ಮರೆತಂತೆ ವರ್ತಿಸಿದ ಇವರು ಕೃತಿ ಕುಮಾರಿಯ ಹತ್ತಿರ ಕೂಡ ಹೋಗಿಲ್ಲ. ಕೈಯಲ್ಲಿದ್ದ ಮೊಬೈಲ್ ಫೋನ್‌ ನೋಡ್ತಾ ಆಚೆ ಹೋಗಿದ್ದಾರೆ. ಈ ಎಲ್ಲಾ ದೃಶ್ಯಗಳು ಪಿಜಿಯಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಕೋರಮಂಗಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಅಭಿಷೇಕ್‌ಗಾಗಿ ಹುಡುಕಾಟ ಆರಂಭಿಸಿದ್ದಾರೆ. ಕೊಲೆಮಾಡಿದ ಬಳಿಕ ಆರೋಪಿ ಅಭಿಷೇಕ್ ಬಟ್ಟೆ ಬದಲಿಸಿಕೊಂಡು ಪರಾರಿಯಾಗಿದ್ದಾನೆ. ಆತ ಭೋಪಾಲ್‌ಗೆ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಕೋರಮಂಗಲ ಪೊಲೀಸರು ಆರೋಪಿಯನ್ನ ಆರೆಸ್ಟ್ ಮಾಡಲು ಭೋಪಾಲ್‌ಗೆ ತೆರಳಿದ್ದಾರೆ.

ಕೃತಿ ಹತ್ಯೆ ಪ್ರಕರಣದ ಬಗ್ಗೆ ಪೂರ್ವ ವಿಭಾಗ ಹೆಚ್ಚುವರಿ ಪೊಲೀಸ್ ಆಯುಕ್ತ ರಮನ್ ಗುಪ್ತ ಹೇಳಿಕೆ ನೀಡಿ, ʼʼಘಟನೆ ರಾತ್ರಿ 11.10ರಿಂದ 11.30ರ ಸುಮಾರಿಗೆ ನಡೆದಿದ್ದು, ರಾತ್ರಿ 12 ಗಂಟೆ ಸುಮಾರಿಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿದೆ. ತಕ್ಷಣ ನಮ್ಮ ಸಿಬ್ಬಂದಿ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದಾರೆ. ಆಕೆ ಮೂಲತಃ ಬಿಹಾರದವರು ಎನ್ನುವ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಈಗಾಗಲೇ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಯಾವ ಕಾರಣಕ್ಕೆ ಕೊಲೆಯಾಗಿದೆ ಎನ್ನುವುದು ಇನ್ನಷ್ಟೇ ಗೊತ್ತಾಗಬೇಕು. ಪಿಜಿಯ ಸಿಸಿಟಿವಿ ಸೇರಿದಂತೆ ಎಲ್ಲವನ್ನೂ ಪರಿಶೀಲನೆ ನಡೆಸಿದ್ದೇವೆ. ಪಿಜಿಯ ನಿರ್ಲಕ್ಷ್ಯತನದ ಬಗ್ಗೆ ಪರಿಶೀಲಿಸಲಾಗುತ್ತಿದೆ. ಆರೋಪಿ ಪತ್ತೆಗಾಗಿ ಪೊಲೀಸರ ವಿಶೇಷ ತಂಡವನ್ನೂ ರಚಿಸಲಾಗಿದೆʼʼ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Murder Case: ʼಸಾಫ್ಟ್ ಟಚ್ʼ ಸ್ಪಾಗೆ ಹೋಗಿದ್ದ ಕ್ರಿಮಿನಲ್‌ನನ್ನು ಪ್ರೇಯಸಿ ಎದುರೇ ತುಂಡು ತುಂಡಾಗಿ ಕತ್ತರಿಸಿದರು!

Continue Reading
Advertisement
Most Beautiful woman Science reveals Anya Taylor-Joy
ಬಾಲಿವುಡ್7 mins ago

Most Beautiful woman: ವಿಶ್ವದ ಅತ್ಯಂತ ಸುಂದರ ಮಹಿಳೆಯರ ಪಟ್ಟಿ ಬಿಡುಗಡೆ; ಟಾಪ್ 10ನಲ್ಲಿ ಏಕೈಕ ಬಾಲಿವುಡ್ ನಟಿ!

Kargil Vijay Diwas 2024
ದೇಶ14 mins ago

Kargil Vijay Diwas 2024: “ಪಾಕಿಸ್ತಾನ ತಪ್ಪುಗಳಿಂದ ಪಾಠ ಕಲಿತಿಲ್ಲ”; ಪ್ರಧಾನಿ ಮೋದಿ ಟಾಂಗ್‌

Murder in PG Case
ಪ್ರಮುಖ ಸುದ್ದಿ15 mins ago

Murder in PG: ಗೆಳತಿಗಾಗಿ ಕೊಲೆಯಾಗಿ ಹೋದ ಕೃತಿ ಕುಮಾರಿ; ಪ್ರೇಯಸಿಯನ್ನು ಬಂಧನದಲ್ಲಿಟ್ಟು ಕ್ರೌರ್ಯ ಮೆರೆದ ಪಾತಕಿ

Paris Olympics 2024 Boxing Draw
ಕ್ರೀಡೆ30 mins ago

Paris Olympics Boxing Draw: ಒಲಿಂಪಿಕ್ಸ್​ ಬಾಕ್ಸಿಂಗ್​ ಡ್ರಾ ಪ್ರಕಟ; ಮೊದಲ ಸುತ್ತಿನಲ್ಲೇ ಭಾರತೀಯ ಬಾಕ್ಸರ್​ಗಳಿಗೆ ಕಠಿಣ ಸ್ಪರ್ಧಿಗಳ ಸವಾಲು

Salman Khan House Gangster's 9-Minute Speech To Shooters Before Attack
ಬಾಲಿವುಡ್32 mins ago

Salman Khan: ಸಲ್ಮಾನ್ ಖಾನ್‌ ಹೆದರುವ ರೀತಿಯಲ್ಲಿ ಗುಂಡಿನ ದಾಳಿ ಆಗಬೇಕು ಎಂದು ಶೂಟರ್‌ಗಳಿಗೆ ಸ್ಫೂರ್ತಿ ತುಂಬಿದ್ದ ಬಿಷ್ಣೋಯಿ!

assault case
ಬೆಂಗಳೂರು43 mins ago

Assault Case : ರಾಜಧಾನಿಯಲ್ಲಿ ನಿಲ್ಲದ ಪುಂಡರ ಪುಂಡಾಟ; ಕಾರು ಚಾಲಕನ ಚೇಸ್‌ ಮಾಡಿ ಹಲ್ಲೆ

9/11 attack
ವಿದೇಶ55 mins ago

9/11 Attack: ನ್ಯೂಯಾರ್ಕ್‌ ಅವಳಿ ಗೋಪುರಗಳ ಮೇಲೆ ಉಗ್ರ ದಾಳಿಯ ಹೊಸ ವಿಡಿಯೋ ವೈರಲ್‌

Ranbir Kapoor casanova opens up about being labelled a cheater
ಬಾಲಿವುಡ್1 hour ago

Ranbir Kapoor: ʻಸ್ತ್ರೀಲೋಲʼ, ʻಚೀಟರ್ʼ ಎನ್ನುವ ಹಣೆಪಟ್ಟಿಯೊಂದಿಗೆ ಬದುಕುತ್ತಿದ್ದೇನೆ ಎಂದ ರಣಬೀರ್ ಕಪೂರ್!

CM Siddaramaiah
ಪ್ರಮುಖ ಸುದ್ದಿ1 hour ago

CM Siddaramaiah: ಇಂದು ಸಿಎಂ ಸಿದ್ದರಾಮಯ್ಯ ಸಂಪುಟ ಸಭೆ, ಇಲ್ಲಿದೆ ಅಜೆಂಡಾ

ಕ್ರೀಡೆ1 hour ago

PKL 2024: ಪ್ರೊ ಕಬಡ್ಡಿ ಲೀಗ್ ಆಟಗಾರರ ಹರಾಜು ಪ್ರಕ್ರಿಯೆಗೆ ದಿನಾಂಕ ನಿಗದಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ19 hours ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್22 hours ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ23 hours ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ1 day ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ2 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ3 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

Udupi News
ಉಡುಪಿ3 days ago

Udupi News : ಹಳೆ ಲಾರಿ ಚಾಸ್ಸಿಯಲ್ಲೇ ಕಿರು ಸೇತುವೆ ನಿರ್ಮಾಣ! ಬೈಂದೂರು ಶಾಸಕರ ಪರಿಕಲ್ಪನೆಗೆ ಜನರು ಫಿದಾ

murder case
ರಾಮನಗರ3 days ago

Murder Case : ರಾಮನಗರದಲ್ಲೊಂದು ಪೈಶಾಚಿಕ ಕೃತ್ಯ; ಅತ್ಯಾಚಾರವೆಸಗಿ 4 ವರ್ಷದ ಬಾಲಕಿಯನ್ನು ಕೊಂದ ದುಷ್ಟ

karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ6 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

ಟ್ರೆಂಡಿಂಗ್‌