Site icon Vistara News

Lokayukta Raid : ಲಂಚಕ್ಕೆ ಕೈವೊಡ್ಡಿದ ಕೆಆರ್‌ ಆಸ್ಪತ್ರೆ ವೈದ್ಯನಿಗೆ 4 ವರ್ಷ ಶಿಕ್ಷೆ, 50 ಸಾವಿರ ರೂ. ದಂಡ

Lokayukta Raid

ಮೈಸೂರು/ಉಡುಪಿ: ಮೈಸೂರಿನ ಕೆ.ಆರ್‌ ಆಸ್ಪತ್ರೆಯಲ್ಲಿ ವೈದ್ಯರೊಬ್ಬರು ಲಂಚಕ್ಕೆ ಬೇಡಿಕೆ (Lokayukta Raid) ಇಟ್ಟಿದ್ದರು. ಇದೀಗ ಲಂಚಕ್ಕೆ ಕೈವೊಡ್ಡಿದ ವೈದ್ಯನಿಗೆ ನಾಲ್ಕು ವರ್ಷ ಜೈಲು ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಲಾಗಿದೆ. 3ನೇ ಅಪರ ಜಿಲ್ಲಾ ಸತ್ರ ಮತ್ತು ಲೋಕಾಯುಕ್ತ ವಿಶೇಷ ನ್ಯಾಯಾಲಯ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

ಕೆ.ಆರ್. ಆಸ್ಪತ್ರೆಯ ಮೂಳೆ ಶಸ್ತ್ರಚಿಕಿತ್ಸಕ ಡಾ.ಪುಟ್ಟಸ್ವಾಮಿ ಶಿಕ್ಷೆಗೊಳಗಾದ ವೈದ್ಯರಾಗಿದ್ದಾರೆ. ಕಳೆದ 2017ರ ಏಪ್ರಿಲ್ 12ರಂದು ದೇವರಾಜು ಎಂಬುವವರು ದೂರು ನೀಡಿದ್ದರು. ಪುಟ್ಟಸ್ವಾಮಿ 26 ಸಾವಿರ ರೂ. ಲಂಚ ಸ್ವೀಕರಿಸುವಾಗ ಎಸಿಬಿ ಪೊಲೀಸಲಿಗೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದರು.

ಆರೋಪಿ ಪುಟ್ಟಸ್ವಾಮಿ ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಡಾ ಪುಟ್ಟಸ್ವಾಮಿಗೆ ನಾಲ್ಕು ವರ್ಷ ಜೈಲು ಶಿಕ್ಷೆ ಹಾಗೂ 50 ಸಾವಿರ ದಂಡ ಹಾಕಲಾಗಿದೆ.

Lokayukta Raid

ಉಡುಪಿಯಲ್ಲಿ ಲೋಕಾಯುಕ್ತ ದಾಳಿ; ಬಲೆಗೆ ಬಿದ್ದ ಅಧಿಕಾರಿಗಳು

ಉಡುಪಿ ಜಿಲ್ಲೆಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕಾಯುಕ್ತ ದಾಳಿ ವೇಳೆ ಉಪ್ಪೂರು ಪಿಡಿಓ ಇನಾಯತ್ ಉಲ್ಲಾ ಬೇಗ್ ಹಾಗೂ ಪಂಚಾಯತ್ ಬಿಲ್ ಕಲೆಕ್ಟರ್ ಸಂಜಯ್ ಕೂಡ ಸಿಕ್ಕಿಬಿದ್ದಿದ್ದಾರೆ. ರವಿ ಡಿಲಿಮಾ ಅವರಿಂದ 13,300 ರೂ. ಲಂಚ ಪಡೆಯುತ್ತಿದ್ದಾಗ ಲೋಕಾ ಬಲೆಗೆ ಸಿಲುಕಿದ್ದಾರೆ. ಲೋಕಾಯುಕ್ತ ಎಸ್‌ಪಿ ನಟರಾಜ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಬಂಧಿತರಿಬ್ಬರಿಗೂ ಜೂನ್ 12ರವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version