Site icon Vistara News

Love Failure : ಅಂತರ್ಜಾತಿ ವಿವಾಹಕ್ಕೆ ಪ್ರಿಯಕರನ ಪೋಷಕರು ಅಡ್ಡಿ; ಕಟ್ಟಡದಿಂದ ಜಿಗಿದು ಯುವತಿ ಸೂಸೈಡ್‌

Love Failure

ರಾಯಚೂರು: ರಾಯಚೂರಿನಲ್ಲಿ ಅಂತರ್ಜಾತಿ ವಿವಾಹಕ್ಕೆ (Love Failure) ಯುವಕನ ಕಡೆಯವರ ಅಡ್ಡಿ ಆಗಿದ್ದಕ್ಕೆ ಮನನೊಂದ ಯುವತಿಯೊಬ್ಬಳು ಸಾಂತ್ವನ ಕೇಂದ್ರದ ಹಾಸ್ಟೆಲ್‌ ಕಟ್ಟಡದಿಂದ ಜಿಗಿದು ಯುವತಿ ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾನೆ. ಅನುರಾಧ (18) ಆತ್ಮಹತ್ಯೆ ಮಾಡಿಕೊಂಡವಳು.

ರಾಯಚೂರು ನಗರದ ಜಲಾಲ್ ನಗರದ ನಿವಾಸಿಯಾದ ಅನುರಾಧ, ವಿನಯ್ ರೆಡ್ಡಿ ಎಂಬ ಯುವಕನನ್ನು ಪ್ರೀತಿಸುತ್ತಿದ್ದಳು. ಈ ನಡುವೆ ಇವರಿಬ್ಬರು ಮದುವೆಯಾಗಲು ಸಹ ನಿಶ್ಚಯಿಸಿದ್ದರು. ಆದರೆ ಯುವತಿ ಕೆಳಜಾತಿಯವಳು ಎಂಬ ವಿಚಾರಕ್ಕೆ ವಿನಯ್‌ ಕುಟುಂಬಸ್ಥರು ಕ್ಯಾತೆ ತೆಗೆದಿದ್ದರು ಎನ್ನಲಾಗಿದೆ.

ಈ ವಿಚಾರ ತಿಳಿದು ಪೊಲೀಸ್ ಠಾಣೆಗೆ ಪೋಷಕರು ದೂರು ನೀಡಿದ್ದರು. ಯುವಕನ ಮನೆಯವರು ಮದುವೆಗೆ ಒಪ್ಪದ ಹಿನ್ನೆಲೆಯಲ್ಲಿ ಪೊಲೀಸರು ಯುವತಿಯನ್ನು ಸಾಂತ್ವನ ಕೇಂದ್ರಕ್ಕೆ ಕಳುಹಿಸಿದ್ದರು. ಇದರಿಂದ ಮನನೊಂದ ಅನುರಾಧ ಸಾಂತ್ವನ ಕೇಂದ್ರದ ಹಾಸ್ಟೆಲ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಮೇಲಿಂದ ಬಿದ್ದ ರಭಸಕ್ಕೆ ಅನುರಾಧ ಮೃತಪಟ್ಟಿದ್ದಾಳೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸದ್ಯ ರಿಮ್ಸ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಹಸ್ತಾಂತರ ಮಾಡಲಾಗಿದೆ. ಪಶ್ಚಿಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Love Failure Women commits suicide in Bagalakote

ಬಾಗಲಕೋಟೆಯಲ್ಲಿ ಬಾವಿಗೆ ಜಿಗಿದು ಮಹಿಳೆ ಆತ್ಮಹತ್ಯೆ

ಜೀವನದಲ್ಲಿ ಜಿಗುಪ್ಸೆಗೊಂಡ ಮಹಿಳೆಯೊಬ್ಬರು ಬಾವಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಾಗಲಕೋಟ ಜಿಲ್ಲೆಯ ರಬಕವಿ ಬನಹಟ್ಟಿ ತಾಲ್ಲೂಕಿನ ರಬಕವಿಯ ಗಣಪತಿ ದೇವಸ್ಥಾನ ಹತ್ತಿರದ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ. ದ್ರಾಕ್ಷಯಣಿ (50) ಮೃತಳು. ಅಗ್ನಿಶಾಮಕ ದಳ ಸಿಬ್ಬಂದಿ ಬಾವಿಯಿಂದ ಮೃತ ದೇಹ ಹೊರ ತೆಗೆದಿದ್ದಾರೆ. ಮರಣೋತ್ತರ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದೆ. ಬನಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Love Case : ವಿವಾಹಿತನೊಂದಿಗೆ ಕಾಲೇಜು ವಿದ್ಯಾರ್ಥಿನಿ ನಾಪತ್ತೆ; ಮಾವತ್ತೂರು ಕೆರೆಯಲ್ಲಿ ಇಬ್ಬರು ಶವವಾಗಿ ಪತ್ತೆ

ಪೊಲೀಸ್‌ ಕಾನ್ಸ್‌ಟೇಬಲ್‌ ಸೂಸೈಡ್‌

ಕಲಬುರಗಿ: ಕಲಬುರಗಿಯಲ್ಲಿ ನೇಣು ಬಿಗಿದುಕೊಂಡು (Self Harming) ಪೊಲೀಸ್ ಕಾನ್ಸ್‌ಟೇಬಲ್‌ (Police Constable) ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಾಡಬೂಳ ಠಾಣೆಯ ಪೊಲೀಸ್ ಕಾನ್ಸ್‌ಟೇಬಲ್ ದೊಡ್ಡೇಶ್ (40) ಮೃತ ದುರ್ದೈವಿ.

ದೊಡ್ಡೇಶ್ ಕಲಬುರಗಿ ನಗರದ ಹೈ ಕೋರ್ಟ್ ಬಳಿ ವಾಸವಾಗಿದ್ದು, ಕಲಬುರಗಿ ಮಗರದ ಉದನೂರ ರಸ್ತೆಯಲ್ಲಿರುವ ಜಮೀನಿನಲ್ಲಿ ನೇಣಿಗೆ ಶರಣಾಗಿದ್ದಾರೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳೀಯರ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕಾಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version