ಮುಂಬೈ: ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯಲ್ಲಿ ಮನೆಯಲ್ಲಿಯೇ ನಕಲಿ ನೋಟುಗಳನ್ನು (Printing Fake Notes) ಮುದ್ರಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಮನೆಯಲ್ಲಿ ನಕಲಿ ನೋಟುಗಳನ್ನು ಮುದ್ರಿಸುತ್ತಿರುವ ಕುರಿತು ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿದ್ದು, ರೆಡ್ ಹ್ಯಾಂಡ್ ಆಗಿ ಆರೋಪಿಯನ್ನು ಹಿಡಿದಿದ್ದಾರೆ.
ಕುಸುಂಬಾ ಗ್ರಾಮದ ತನ್ನ ಮನೆಯಲ್ಲಿಯೇ ಆರೋಪಿಯು ಪ್ರಿಂಟಿಂಗ್ ಮಷೀನ್ ಇಟ್ಟುಕೊಂಡಿದ್ದ. ನಕಲಿ ನೋಟುಗಳನ್ನು ಮುದ್ರಿಸಿ, ಅವುಗಳನ್ನು ಮಾರಾಟ ಮಾಡುತ್ತಿದ್ದ. ಒಂದೂವರೆ ಲಕ್ಷ ರೂ. ಮೌಲ್ಯದ ನೋಟುಗಳನ್ನು ಮುದ್ರಿಸಲು ಆತ 50 ಸಾವಿರ ರೂ. ಪಡೆಯುತ್ತಿದ್ದ ಎಂದು ತಿಳಿದುಬಂದಿದೆ. ಜನ ಈತನ ಬಳಿ ಬಂದು ನಕಲಿ ನೋಟುಗಳನ್ನು ಖರೀದಿಸುತ್ತಿದ್ದರು ಎನ್ನಲಾಗಿದೆ.
ಇದನ್ನೂ ಓದಿ: ಮನೆಯಿಂದಲೇ 4 ಲಕ್ಷ ಕದ್ದು ಮೋಜು ಮಾಡಿ ನಕಲಿ ನೋಟು ತಂದಿಟ್ಟ ಮಕ್ಕಳು!
ಯುಟ್ಯೂಬ್ ನೋಡಿ ಪ್ರಿಂಟಿಂಗ್ ಕಲಿತ
“ನಕಲಿ ನೋಟು ಮುದ್ರಿಸುತ್ತಿರುವ ಕುರಿತು ನಿಖರ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿ ಆರೋಪಿಯನ್ನು ಬಂಧಿಸಿದ್ದಾರೆ. ಈತನು ಯುಟ್ಯೂಬ್ ವಿಡಿಯೊಗಳನ್ನು ನೋಡಿ ನೋಟ್‌ಗಳನ್ನು ಪ್ರಿಂಟ್ ಮಾಡುತ್ತಿದ್ದ. ಬಂಧನದ ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮಾರ್ಚ್ 9ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ” ಎಂದು ಜಲಗಾಂವ್ ಎಸ್‌ಪಿ ಎಂ.ರಾಜಕುಮಾರ್ ಮಾಹಿತಿ ನೀಡಿದರು.