ತುಮಕೂರು: ಆಗಾಗ ವೈದ್ಯಕೀಯ ನಿರ್ಲಕ್ಷ (Medical Negligence) ಪ್ರಕರಣಗಳು ಬೆಳಕಿಗೆ ಬರುತ್ತಲೇ ಇರುತ್ತವೆ. ಮಧುಗಿರಿ ತಾಲೂಕಿನ ಮುತ್ಯಾಲಮ್ಮನಹಳ್ಳಿ ಗ್ರಾಮದಲ್ಲಿ ಮಹಿಳೆಯೊಬ್ಬಳು ಹೊಲದ ಕೆಲಸ ಮಾಡುತ್ತಿದ್ದಾಗ ಹಾವೊಂದು (Snake Bite) ಕಚ್ಚಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ, ಚಿಕಿತ್ಸೆ ನೀಡಿದ್ದ ವೈದ್ಯ ಆಕೆಗೆ ಏನೂ ಆಗಿಲ್ಲ ಎಂದು ಹೇಳಿ, ಒಂದು ಗ್ಲೂಕೋಸ್ ಡ್ರಿಪ್ ಹಾಕಿ ಕಳುಹಿಸಿದ್ದೇ ಮಹಿಳೆ ಸಾವಿಗೆ ಕಾರಣವಾಗಿದೆ.
ಪಾರ್ವತಮ್ಮ (45 ) ಮೃತ ದುರ್ದೈವಿ. ಇವರು ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಹಾವು ಕಚ್ಚಿತ್ತು. ತಕ್ಷಣ ಕೊಡಿಗೇನಹಳ್ಳಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ನೀಡಿದ್ದ ವೈದ್ಯರು, ಇವರಿಗೆ ಏನೂ ಆಗಿಲ್ಲ ಎಂದು ಹೇಳಿ ಗ್ಲೂಕೋಸ್ ಹಾಕಿ ಮನೆಗೆ ಕಳುಹಿಸಿದ್ದರು.
ಪಾರ್ವತಮ್ಮ ಸಹ ಏನೂ ಆಗಿಲ್ಲ ಎಂದುಕೊಂಡು ಮನೆಗೆ ಬಂದಿದ್ದಾರೆ. ಮನೆಯವರೊಂದಿಗೆ ಆರಾಮವಾಗಿಯೇ ಮಾತನಾಡಿದ್ದಾರೆ. ಮನೆಯವರೂ ಸಹ ಆಕೆಯನ್ನು ಮಾತನಾಡಿಸಿ ಆರೋಗ್ಯವನ್ನು ವಿಚಾರಿಸಿದ್ದಾರೆ. ಕೊನೆಗೆ ಎಲ್ಲರೂ ಒಟ್ಟಿಗೆ ಊಟ ಮಾಡಿ ಮಲಗಿದ್ದಾರೆ. ಆದರೆ, ಮಧ್ಯರಾತ್ರಿ ಆಗುತ್ತಿದ್ದಂತೆ ಪಾರ್ವತಮ್ಮ ಸ್ಥಿತಿ ಗಂಭೀರವಾಗಿದೆ.
ಪಾರ್ವತಮ್ಮ ಮೈಗೆ ವಿಷವೇರಿಬಿಟ್ಟಿತ್ತು. ತಕ್ಷಣ ಅವರನ್ನು ತುಮಕೂರಿನ ಖಾಸಗಿ ಆಸ್ಪತ್ರೆಗೆ ಕುಟುಂಬಸ್ಥರು ದಾಖಲು ಮಾಡಿದ್ದಾರೆ. ಅಲ್ಲಿನ ವೈದ್ಯರು ಚಿಕಿತ್ಸೆ ನೀಡಿದರಾದರೂ ಫಲಕಾರಿಯಾಗದೆ ಅವರು ಮೃಪಟ್ಟಿದ್ದಾರೆ. ಕೊಡಿಗೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಅಮೆಜಾನ್ ಕಂಪನಿ ಮ್ಯಾನೇಜರ್ ಸ್ಥಳದಲ್ಲೇ ಸಾವು
ಬೆಂಗಳೂರು ನಗರದ ಮಾಗಡಿ ರಸ್ತೆ ನೈಸ್ ರೋಡ್ ಜಂಕ್ಷನ್ (NICE Road Junction) ಬಳಿ ಭೀಕರ ರಸ್ತೆ ಅಪಘಾತ (Road accident) ಸಂಭವಿಸಿ ಅಮೆಜಾನ್ ಕಂಪನಿಯಲ್ಲಿ ಮ್ಯಾನೇಜರ್ (Manager in Amazon) ಆಗಿ ಕೆಲಸ ಮಾಡುತ್ತಿದ್ದ ಸಂತೋಷ್ ಎಂಬವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.
ಸಂತೋಷ್ ಅವರು ರಾತ್ರಿ ಕೆಲಸ ಮುಗಿಸಿ ಕಾರಿನಲ್ಲಿ ಸಾಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ನೈಸ್ ರಸ್ತೆ ಜಂಕ್ಷನ್ ಬಳಿ ನಿಂತಿದ್ದ ಲಾರಿಗೆ ಕಾರು ಹಿಂದಿನಿಂದ (Car Rams into lorry) ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ಜಖಂ ಆಗಿದ್ದು ಸಂತೋಷ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೆಳಗ್ಗೆ ಈ ಘಟನೆ ಬೆಳಕಿಗೆ ಬಂದಿದ್ದು, ಕಾರಂತೂ ಸಂಪೂರ್ಣ ನಜ್ಜುಗುಜ್ಜಾಗಿದೆ. ಹೀಗಾಗಿ ಕಾರು ವಿಪರೀತ ವೇಗದಲ್ಲಿ ಇತ್ತು ಎಂದು ಹೇಳಲಾಗುತ್ತಿದೆ.
ಸಂತೋಷ್ ಅವರ ಕುಟುಂಬಿಕರು, ಸ್ನೇಹಿತರು ಆಗಮಿಸಿದ್ದು, ಮೃತದೇಹವನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.
ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ
ಡಿಸೆಂಬರ್ 18ರ ಸಂಜೆ ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ ಸಂಭವಿಸಿ ಆರು ಕಾರುಗಳು ಜಖಂಗೊಂಡಿದ್ದವು. ಜನನಿಬಿಡ ರಸ್ತೆಯಲ್ಲಿ ಓಮ್ನಿ ಕಾರೊಂದು ಹಠಾತ್ತನೆ ಲೇನ್ ಬದಲಿಸಿ ಬ್ರೇಕ್ ಹಾಕಿದ್ದರಿಂದ ಅಪಘಾತ ಸಂಭವಿಸಿದ್ದು, ರಸ್ತೆಯಲ್ಲಿ ಕಾರುಗಳು ಪರಸ್ಪರ ಡಿಕ್ಕಿ ಹೊಡೆದುಕೊಂಡಿವೆ.
ಇದನ್ನೂ ಓದಿ: Road Accident: ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮನೆಗೆ ಡಿಕ್ಕಿ ಹೊಡದ ಲಾರಿ; ಮನೆಯಲ್ಲಿದ್ದ ಮಹಿಳೆ ಸಾವು
ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯ ಚಿಕ್ಕಜಾಲ ಮೇಲ್ಸೇತುವೆ ಬಳಿ ಅವಘಡ ಸಂಭವಿಸಿದೆ. ಅಪಘಾತದಿಂದಾಗಿ ರಸ್ತೆಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಚಿಕ್ಕಜಾಲ ಸಂಚಾರ ಪೊಲೀಸರು ನಿಲ್ದಾಣಕ್ಕೆ ಆಗಮಿಸಿ ವಾಹನಗಳನ್ನು ತೆರವುಗೊಳಿಸಿದರು. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.