Site icon Vistara News

Killer Python: ಮಹಿಳೆಯನ್ನು ಜೀವಂತವಾಗಿ ನುಂಗಿದ ಹೆಬ್ಬಾವು! ಹೊಟ್ಟೆ ಸೀಳಿ ಹೊರ ತೆಗೆದರು!

Killer Python

ಇಂಡೋನೇಷ್ಯಾ: ನಾಪತ್ತೆಯಾದ 45 ವರ್ಷದ ಮಹಿಳೆಯೊಬ್ಬರು (women) ಶವವಾಗಿ ಮೂರು ದಿನಗಳ ಬಳಿಕ ಹೆಬ್ಬಾವಿನ (Killer Python) ಹೊಟ್ಟೆಯೊಳಗೆ ಪತ್ತೆಯಾಗಿರುವ ಘಟನೆ ಇಂಡೋನೇಷ್ಯಾದಲ್ಲಿ (Indonesian) ನಡೆದಿದೆ. ಮಹಿಳೆಯ ಪತಿ ಸೇರಿದಂತೆ ದಕ್ಷಿಣ ಸುಲವೆಸಿ ಪ್ರಾಂತ್ಯದ ಕಲೆಂಪಂಗ್ ಗ್ರಾಮದ ನಿವಾಸಿಗಳು ಸುಮಾರು 16 ಅಡಿ ಉದ್ದದ ಹೆಬ್ಬಾವಿನೊಳಗೆ (python) ಮಹಿಳೆ ಇರುವುದನ್ನು ಪತ್ತೆ ಹಚ್ಚಿದ್ದಾರೆ.

ಮಧ್ಯ ಇಂಡೋನೇಷ್ಯಾದಲ್ಲಿ ಹೆಬ್ಬಾವು 45 ವರ್ಷದ ಫರೀದಾ ಅವರನ್ನು ಸಂಪೂರ್ಣವಾಗಿ ನುಂಗಿತ್ತು. ಅದರ ಹೊಟ್ಟೆಯಲ್ಲಿ ಫರೀದಾ ಅವರ ಶವ ಪತ್ತೆಯಾಗಿದೆ ಎಂದು ಸ್ಥಳೀಯ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ನಾಲ್ಕು ಮಕ್ಕಳ ತಾಯಿಯಾಗಿರುವ ಫರೀದಾ ಗುರುವಾರ ರಾತ್ರಿ ನಾಪತ್ತೆಯಾಗಿದ್ದರು. ಹೀಗಾಗಿ ಅವರ ಪತಿ ಮತ್ತು ಮಕ್ಕಳು ಸಾಕಷ್ಟು ಹುಡುಕಾಡಿದ್ದಾರೆ. ಎಲ್ಲೂ ಪತ್ತೆಯಾಗದ ಹಿನ್ನೆಲೆಯಲ್ಲಿ ಗ್ರಾಮದ ಮುಖ್ಯಸ್ಥ ಸುರ್ದಿ ರೋಸಿ ಎಎಫ್‌ಪಿಗೆ ಮಾಹಿತಿ ನೀಡಿದ್ದಾರೆ. ಮಹಿಳೆ ನಾಪತ್ತೆಯಾದ ಸ್ಥಳದಲ್ಲಿ ಮಹಿಳೆಯ ವಸ್ತುಗಳು ಕಂಡು ಬಂದಿದೆ. ಇದರಿಂದ ಅನುಮಾನಗೊಂಡ ಆಕೆಯ ಪತಿ ಮತ್ತು ಗ್ರಾಮಸ್ಥರು ಆ ಪ್ರದೇಶವನ್ನು ಹುಡುಕಿದರು. ಆಗ ಅವರಿಗೆ ದೊಡ್ಡ ಹೊಟ್ಟೆಯ ಹೆಬ್ಬಾವೊಂದು ಕಂಡು ಬಂದಿದೆ.

ಅವರು ಹೆಬ್ಬಾವಿನ ಹೊಟ್ಟೆಯನ್ನು ಸೀಳಿದಾಗ ತಕ್ಷಣ ಫರೀದಾ ಅವರ ತಲೆ ಗೋಚರಿಸಿದೆ ಮತ್ತು ಹಾವಿನೊಳಗೆ ಫರೀದಾ ಸಂಪೂರ್ಣ ಬಟ್ಟೆ ಧರಿಸಿದ ಸ್ಥಿತಿಯಲ್ಲೇ ಇರುವುದು ಕಂಡುಬಂದಿದೆ. ಇಂತಹ ಘಟನೆಗಳನ್ನು ಅತ್ಯಂತ ಅಪರೂಪವೆಂದು ಪರಿಗಣಿಸಲಾಗಿದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಇಂಡೋನೇಷ್ಯಾದಲ್ಲಿ ಹೆಬ್ಬಾವುಗಳು ಹಲವಾರು ಜನರನ್ನು ಸಂಪೂರ್ಣ ನುಂಗಿರುವ ಪ್ರಕರಣಗಳು ನಡೆದಿವೆ.

ಕಳೆದ ವರ್ಷ ಆಗ್ನೇಯ ಸುಲವೆಸಿಯ ಟಿನಾಂಗ್ಜಿಯಾ ಜಿಲ್ಲೆಯ ನಿವಾಸಿಗಳು ಎಂಟು ಮೀಟರ್ ಹೆಬ್ಬಾವನ್ನು ಕೊಂದಾಗ ಅದು ಹಳ್ಳಿಯೊಂದರಲ್ಲಿ ರೈತರೊಬ್ಬರನ್ನು ಕತ್ತು ಹಿಸುಕಿ ತಿಂದಿರುವುದು ಕಂಡುಬಂದಿದೆ.

ಇದನ್ನೂ ಓದಿ: Road Accident : ವಾಕಿಂಗ್‌ ಹೊರಟಿದ್ದ ವೃದ್ಧೆಗೆ ಬೈಕ್‌ ಡಿಕ್ಕಿ; ಕ್ಷಣದಲ್ಲೇ ಹಾರಿಹೋಯ್ತು ಪ್ರಾಣ

2018 ರಲ್ಲಿ ಆಗ್ನೇಯ ಸುಲವೆಸಿಯ ಮುನಾ ಪಟ್ಟಣದಲ್ಲಿ 54 ವರ್ಷದ ಮಹಿಳೆ ಏಳು ಮೀಟರ್ ಹೆಬ್ಬಾವಿನೊಳಗೆ ಶವವಾಗಿ ಪತ್ತೆಯಾಗಿದ್ದರು. ಅದಕ್ಕೂ ಮೊದಲು ಪಶ್ಚಿಮ ಸುಲವೆಸಿಯ ರೈತರೊಬ್ಬರು ತಾಳೆ ಎಣ್ಣೆ ತೋಟದಲ್ಲಿ ಕಾಣೆಯಾಗಿದ್ದು, ನಾಲ್ಕು ಮೀಟರ್ ಉದ್ದದ ಹೆಬ್ಬಾವು ಅವರನ್ನು ಜೀವಂತವಾಗಿ ನುಂಗಿತ್ತು.

ದೇವರ ದರ್ಶನ ಮಾಡಿ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಯತ್ನ; ಒಬ್ಬನ ಸಾವು

ಕೌಟುಂಬಿಕ ಸಮಸ್ಯೆಯಿಂದಾಗಿ ಒಂದೇ ಕುಟುಂಬದ ನಾಲ್ವರು ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದರಲ್ಲಿ ಒಬ್ಬರು ಮೃತಪಟ್ಟಿದ್ದು, ಮೂವರು ತೀವ್ರ ಅಸ್ವಸ್ಥಗೊಂಡಿದ್ದರು. ಈ ಮಲೆಮಹದೇಶ್ವರ ಬೆಟ್ಟ ವ್ಯಾಪ್ತಿಯ ತಾಳಬೆಟ್ಟದಲ್ಲಿ ಘಟನೆ ನಡೆದಿದೆ.

ಚಂದಗಾಲು ಗ್ರಾಮದ ಮಹದೇವನಾಯಕ (65) ಮೃತರು. ಅಸ್ವಸ್ಥಗೊಂಡ ಮಹದೇವನಾಯಕನ ಪತ್ನಿ ಗೌರಮ್ಮ(60), ರಿಷಿತಾ (21), ಲೀಲಾವತಿ (45) ಎಂಬವರನ್ನು ಮೈಸೂರಿನ ಕೆಆರ್‌ನಗರ ತಾಲೂಕಿನ ಚಂದಗಾಲು ಗ್ರಾಮಸ್ಥರು ಎಂದು ತಿಳಿದು ಬಂದಿದೆ.

ಮಹದೇಶ್ವರ ಬೆಟ್ಟಕ್ಕೆ ಬಂದು ದೇವರ ದರ್ಶನ ಪಡೆದು ವಾಪಸ್ ಬರುವಾಗ ತಾಳ ಬೆಟ್ಟದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮಹದೇವನಾಯಕ ವಿಷ ಸೇವಿಸಿದ ಕೂಡಲೇ ಒದ್ದಾಡಿ ಮೃತಪಟ್ಟಿದ್ದಾರೆ. ಇತ್ತ ಗೌರಮ್ಮ, ಲೀಲಾವತಿ, ರಿಷಿತಾ ವಿಷ ಸೇವನೆ ಮಾಡಿದ್ದಾರೆ. ಆದರೆ ದೇಹದಲ್ಲಿ ಉರಿ ಕಾಣಿಸಿಕೊಂಡು ಜೋರಾಗಿ ಕೂಗಿಕೊಂಡು ನರಳಾಡಿದ್ದಾರೆ.

ಈ ವೇಳೆ ತಾಳ ಬೆಟ್ಟದಲ್ಲಿದ್ದ ಸ್ಥಳೀಯರು ಕೂಡಲೇ ಅವರನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದರು. ಮೂವರು ಮಹಿಳೆಯರಿಗೆ ಚಿಕಿತ್ಸೆ ಮುಂದುವರಿದಿದೆ. ಈ ಕುರಿತು ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

Exit mobile version