Site icon Vistara News

Molestation Case : ವಿದ್ಯಾರ್ಥಿನಿಯರ ಜತೆ ಶಿಕ್ಷಕನ ಕುಚೇಷ್ಟೆ; ಶಾಲೆಗೆ ನುಗ್ಗಿ ಥಳಿಸಿದ ಪೋಷಕರು!

Physical abuse by government school teacher.

ಹಾಸನ: ಸರ್ಕಾರಿ ಶಾಲೆಯ ಶಿಕ್ಷಕನೊಬ್ಬ ವಿದ್ಯಾರ್ಥಿನಿಯರ ಜತೆ ಕುಚೇಷ್ಟೆ ಮಾಡಿ ಲೈಂಗಿಕ ಕಿರುಕುಳ ನೀಡುತ್ತಿದ್ದವನನ್ನು (Molestation Case) ಪೋಷಕರು ಜಾಡಿಸಿದ್ದಾರೆ. ಆನೆಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಮಂಜುನಾಥ್‌ ಎಂಬಾತ ವಿದ್ಯಾರ್ಥಿನಿಯರ ಜತೆ ಅನುಚಿತವಾಗಿ ವರ್ತಿಸುತ್ತಿದ್ದ.

ಚನ್ನರಾಯಪಟ್ಟಣ ತಾಲೂಕಿನ ಆನೆಕೆರೆ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ. ನಿಮ್ಮನ್ನು ಮದುವೆ ಆಗುತ್ತೇನೆ ಎಂದು ವಿದ್ಯಾರ್ಥಿನಿಯರಿಗೆ ಕಾಟ ಕೊಡುತ್ತಿದ್ದ. ಈತನ ಕಾಟಕ್ಕೆ ಬೇಸತ್ತ ವಿದ್ಯಾರ್ಥಿನಿಯರು ಶಾಲೆಯಲ್ಲಿ ನಡೆಯುವ ವಿಷಯವನ್ನು ಹೆತ್ತವರ ಜತೆಗೆ ಹೇಳಿಕೊಂಡಿದ್ದಾರೆ.

ಈ ವಿಚಾರ ತಿಳಿದಿದ್ದೆ ತಡ ಪೋಷಕರು ಶಾಲೆಗೆ ನುಗ್ಗಿ ಶಿಕ್ಷಕನಿಗೆ ಮನಬಂದಂತೆ ಥಳಿಸಿದ್ದಾರೆ. ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ಶಿಕ್ಷಕನಿಗೆ ತಕ್ಕ ಪಾಠ ಕಲಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಚನ್ನರಾಯಪಟ್ಟಣ ಪೊಲೀಸರು ಭೇಟಿ ನೀಡಿದರು. ಪೋಷಕರನ್ನು ಸಮಾಧಾನಪಡಿಸಲು ಮುಂದಾದರೂ, ಆದರೂ ಪಟ್ಟು ಬಿಡದೆ ಕಾಮುಕ ಶಿಕ್ಷಕನನ್ನು ಥಳಿಸಿದ್ದಾರೆ. ಜತೆಗೆ ಪೊಲೀಸರ ವಾಹನಕ್ಕೆ ಅಡ್ಡ ಹಾಕಿ ಆತನನ್ನು ಕೆಳಗಿಳಿಸಿ ಒಪ್ಪಿಸುವಂತೆ ಆಕ್ರೋಶ ಹೊರಹಾಕಿದರು. ಸದ್ಯ ಶಿಕ್ಷಕನ್ನು ಪೊಲೀಸರು ಠಾಣೆಗೆ ಕರೆದುಹೋಗಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version