Moral Policing: ಸಹೋದ್ಯೋಗಿಯನ್ನು ಬೈಕ್‌ನಲ್ಲಿ ಕೂರಿಸಿಕೊಂಡದ್ದಕ್ಕೆ ಹಿಂದೂ ಯುವಕನಿಗೆ ಹಲ್ಲೆ - Vistara News

ಕ್ರೈಂ

Moral Policing: ಸಹೋದ್ಯೋಗಿಯನ್ನು ಬೈಕ್‌ನಲ್ಲಿ ಕೂರಿಸಿಕೊಂಡದ್ದಕ್ಕೆ ಹಿಂದೂ ಯುವಕನಿಗೆ ಹಲ್ಲೆ

Moral Policing: ನಮ್ಮ ಸಮುದಾಯದ ಹುಡುಗಿಯನ್ನು ಯಾಕೆ ಬೈಕ್‌ನಲ್ಲಿ ಕೂರಿಸಿಕೊಂಡು ಹೋಗುತ್ತಿದ್ದೀಯಾ ಎಂದು ಅಕ್ಷೇಪಿಸಿ ಯುವಕರ ಗುಂಪು ಥಳಿಸಿದೆ. ಹಲ್ಲೆಯಲ್ಲಿ ನಂದನ್‌ ಕಣ್ಣು, ಕಿವಿ ಮತ್ತು ಬಾಯಿಯ ಭಾಗಕ್ಕೆ ಗಂಭೀರ ಗಾಯಗಳಾಗಿವೆ. ಗಾಯಾಳುವನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

VISTARANEWS.COM


on

moral policing shivamogga
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಶಿವಮೊಗ್ಗ: ಮುಸ್ಲಿಂ ಸಹೋದ್ಯೋಗಿಯನ್ನು (Muslim colleague) ಬೈಕ್‌ನಲ್ಲಿ ಕೂರಿಸಿಕೊಂಡು ಹೋಗಿದ್ದಕ್ಕೆ ಹಿಂದೂ ಯುವಕನ (Hindu youth) ಮೇಲೆ ಹಲ್ಲೆ (Assault Case) ಮಾಡಿದ ಘಟನೆ ಶಿವಮೊಗ್ಗ (Shivamogga news) ನಗರದ ಆರ್‌ಎಂಎಲ್ ನಗರದ ಸಮೀಪ ನಡೆದಿದೆ. ಪ್ರಕರಣ (moral policing) ತುಸು ತಡವಾಗಿ ಬೆಳಕಿಗೆ ಬಂದಿದೆ.

ಶಿವಮೊಗ್ಗ ನಗರದ ಸೀಗೆಹಟ್ಟಿಯ ನಿವಾಸಿ ನಂದನ್ ಎಂಬ ಯುವಕನ ಮೇಲೆ ಹಲ್ಲೆ ನಡೆದಿದೆ. ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ನಂದನ್, ಅನ್ಯ ಕೋಮಿನ ಸಹೋದ್ಯೋಗಿಯನ್ನು ಕೆಲಸದ ನಿಮಿತ್ತ ಬೈಕ್‌ನಲ್ಲಿ ಕರೆದುಕೊಂಡು ಹೋಗುತ್ತಿದ್ದ. ಈ ವೇಳೆ 20ಕ್ಕೂ ಹೆಚ್ಚು ಅನ್ಯ ಕೋಮಿನ ಯುವಕರು ನಂದನ್‌ನನ್ನು ತಡೆದು ಥಳಿಸಿದ್ದರು.

ನಮ್ಮ ಸಮುದಾಯದ ಹುಡುಗಿಯನ್ನು ಯಾಕೆ ಬೈಕ್‌ನಲ್ಲಿ ಕೂರಿಸಿಕೊಂಡು ಹೋಗುತ್ತಿದ್ದೀಯಾ ಎಂದು ಅಕ್ಷೇಪಿಸಿ ಯುವಕರ ಗುಂಪು ಥಳಿಸಿದೆ. ಹಲ್ಲೆಯಲ್ಲಿ ನಂದನ್‌ ಕಣ್ಣು, ಕಿವಿ ಮತ್ತು ಬಾಯಿಯ ಭಾಗಕ್ಕೆ ಗಂಭೀರ ಗಾಯಗಳಾಗಿವೆ. ಗಾಯಾಳುವನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಶಿವಮೊಗ್ಗ ಶಾಸಕ ಎಸ್.ಎನ್ ಚನ್ನಬಸಪ್ಪ ಆಸ್ಪತ್ರೆಗೆ ಭೇಟಿ ನೀಡಿ ನಂದನ್ ಆರೋಗ್ಯ ವಿಚಾರಿಸಿದರು. ನಂದನ್‌ಗೆ ಧೈರ್ಯ ಹೇಳಿ, ಸೂಕ್ತ ಕಾನೂನು ಕ್ರಮದ ಭರವಸೆ ನೀಡಿದರು.

ಘಟನೆ ಬಗ್ಗೆ ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಕಾಂಗ್ರೆಸ್‌ ಆಡಳಿತವನ್ನು ಆಕ್ಷೇಪಿಸಿದ್ದಾರೆ. “ಕಾನೂನು ಸುವ್ಯವಸ್ಥೆಯನ್ನು ಮತೀಯ ಆಧಾರದ ಮೇಲೆ ನಿರ್ವಹಿಸುವ ಮೂಲಕ ಬಹುಸಂಖ್ಯಾತರನ್ನು ಕಾಂಗ್ರೆಸ್‌ ಅಭದ್ರತೆಯ ಸ್ಥಿತಿಗೆ ತಳ್ಳುತ್ತಿದೆ. ಸರ್ಕಾರದ ಆಡಳಿತ ತುಘಲಕ್ ನೀತಿಯನ್ನು ನೆನಪಿಸುತ್ತಿದೆ. ಅಮಾಯಕ ಹಿಂದೂ ಯುವಕನ ಮೇಲಿನ ಹಲ್ಲೆ ಘಟನೆಯು ಶಾಂತಿ ಸುವ್ಯವಸ್ಥೆ ಕದಡುವ ಸ್ಥಿತಿಗೆ ಕಾರಣವಾಗದಂತೆ ಪೋಲಿಸರು ಕಾರ್ಯೋನ್ಮುಖರಾಗಿ ನಂದನ್ ಮೇಲೆ ಹಲ್ಲೆ ನಡೆಸಿದವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಿ ಎಂದು ಒತ್ತಾಯಿಸುವೆ” ಎಂದು ಎಕ್ಸ್‌ನಲ್ಲಿ ಅವರು ಪೋಸ್ಟ್ ಮಾಡಿದ್ದಾರೆ.

ಕರೆಂಟ್‌ ಶಾಕ್‌ಗೆ ಕಂಬದಲ್ಲೇ ಕಾರ್ಮಿಕನ ನರಳಾಟ

ಯಾದಗಿರಿ/ವಿಜಯಪುರ: ಭಾರಿ ಮಳೆಗೆ ವಿದ್ಯುತ್‌ ಕಂಬ ಮುರಿದು (Accident Case) ಬಿದ್ದಿತ್ತು. ಕಂಬ ಜೋಡಣೆ ಮಾಡುವಾಗ ಎಡವಟ್ಟಾಗಿದ್ದು, ಕಂಬ ಏರಿ ರಿಪೇರಿ ಕೆಲಸ ಮಾಡುವಾಗ ಕಾರ್ಮಿಕನಿಗೆ ದಿಢೀರ್‌ ವಿದ್ಯುತ್ ಪ್ರವಹಿಸಿ ಒದ್ದಾಡಿದ್ದಾನೆ. ಯಾದಗಿರಿ ಜಿಲ್ಲೆಯ ಕೆಂಭಾವಿ ಪಟ್ಟಣದಲ್ಲಿ ಘಟನೆ ನಡೆದಿದೆ. ಗಂಭೀರ ಗಾಯಗೊಂಡ ಕಾರ್ಮಿಕ ರಾಯಪ್ಪ ಎಂಬಾತನನ್ನು ಸ್ಥಳೀಯರು ರಕ್ಷಿಸಿ ಕಲಬುರಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಲೈನ್ ಬಂದ್ ಮಾಡಿ ಕೆಲಸ ಮಾಡುತ್ತಿದ್ದಾಗ ಏಕಾಎಕಿ ವಿದ್ಯುತ್‌ ಹರಿದಿದೆ. ಕಾರ್ಮಿಕ ರಾಯಪ್ಪ ನಿಯಂತ್ರಣ ತಪ್ಪಿದ್ದು ಕಂಬದಲ್ಲಿ ನೇತಾಡಿ ಸಹಾಯಕ್ಕಾಗಿ ಅಂಗಲಾಚಿದ್ದಾನೆ. ನಂತರ ವಿದ್ಯುತ್ ಬಂದ್ ಮಾಡಿಸಿ ಸ್ಥಳೀಯರೇ ವಿದ್ಯುತ್‌ ಕಂಬ ಏರಿ ಕಾರ್ಮಿಕನ‌ನ್ನು ರಕ್ಷಣೆ ಮಾಡಿದ್ದಾರೆ. ಕೆಂಭಾವಿ ವಿಭಾಗದ ಜೆಸ್ಕಾಂ ‌ಸಿಬ್ಬಂದಿ ಬೇಜವಾಬ್ದಾರಿತನ ಎಂದು ಸ್ಥಳೀಯರು ಕಿಡಿಕಾರಿದ್ದಾರೆ. ಕೆಂಭಾವಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Electric Shock: ಪಲ್ಲಕ್ಕಿ ಹೊತ್ತಿದ್ದ ಟ್ರ್ಯಾಕ್ಟರ್‌ಗೆ ಪ್ರವಹಿಸಿದ ವಿದ್ಯುತ್‌; ಕ್ಷಣಾರ್ಧದಲ್ಲೇ ಇಬ್ಬರು ಸುಟ್ಟು ಕರಕಲು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಜೈಲಿನಲ್ಲಿದ್ದುಕೊಂಡೆ ವಿಧ್ವಂಸ ಕೃತ್ಯಕ್ಕೆ ಸಂಚು: 7 ಆರೋಪಿಗಳಿಗೆ ಕಠಿಣ ಶಿಕ್ಷೆ ಪ್ರಕಟಿಸಿದ ಎನ್‌ ಐ ಎ ಕೋರ್ಟ್

VISTARANEWS.COM


on

ಬೆಂಗಳೂರು: ನಗರದ ಜೈಲಿನಲ್ಲಿದ್ದುಕೊಂಡೇ ದೇಶದ ವಿವಿಧೆಡೆ ವಿಧ್ವಂಸಕ ಕೃತ್ಯಗಳ ಎಸೆಗಲು ಸಂಚು ರೂಪಿಸಿದ್ದ ಲಷ್ಕರ್‌ ಎ ತೊಬ್ಯಾ ಸಂಪರ್ಕಿತ ಏಳು ಆರೋಪಿಗಳಿಗೆ ಎನ್‌ ಐ ಎ ನ್ಯಾಯಾಲಯ 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಪ್ರಕಟಿಸಿದೆ.
ಅಪರಾಧಿಗಳಾದ ಲಷ್ಕರ್‌ – ಎ-ತೊಯ್ಬಾ ಸಂಪರ್ಕಿತ ಉಗ್ರ ಟಿ.ನಾಸಿರ್‌ ನೇತೃತ್ವದಲ್ಲಿ ಸಯ್ಯದ್ ಸುಹೈಲ್ ಖಾನ್, ಮೊಹಮ್ಮದ್ ಉಮರ್, ಜಾಹಿದ್ ತಬ್ರೇಜ್, ಸಯ್ಯದ್ ಮುದಸ್ಸಿರ್ ಪಾಶಾ, ಮೊಹಮ್ಮದ್ ಫೈಸಲ್ ರಬ್ಬಾನಿ ಮತ್ತು ಸಲ್ಮಾನ್ ಖಾನ್ ಶಿಕ್ಷೆಗೆ ಗುರಿಯಾದವರು. ಪ್ರಕರಣದಲ್ಲಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದರು.
ಇವರು ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿದ್ದುಕೊಂಡೇ ಯುವಕರನ್ನು ಉಗ್ರವಾದದತ್ತ ಆಕರ್ಷಿಸಿ, ಮತಾಂತರಗೊಳಿಸಿ ದೇಶದಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದರು. ಆರೋಪ ರುಜುವಾತಾದ ಹಿನ್ನೆಲೆಯಲ್ಲಿ ಕೋರ್ಟ್‌ ಏಳು ವರ್ಷ ಜೈಲು ಶಿಕ್ಷೆ ಸೇರಿದಂತೆ 48 ಸಾವಿರ ರೂಪಾಯಿ ದಂಡ ವಿಧಿಸಿದೆ.
2023ರ ಜುಲೈನಲ್ಲಿ ಶಸ್ತ್ರಾಸ್ತ್ರಗಳು, ಗುಂಡುಗಳು ಮತ್ತು ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಂಡ ನಂತರ ಬೆಂಗಳೂರು ಸೆಂಟ್ರಲ್ ಕ್ರೈಮ್ ಬ್ರಾಂಚ್ (CCB) ಈ ಬಗ್ಗೆ ಪ್ರಕರಣ ದಾಖಲಿಸಿತ್ತು. ಇವರು ಬೆಂಗಳೂರಿನಲ್ಲಿಯೂ ಉಗ್ರ ದಾಳಿಗಳನ್ನು ನಡೆಸುವ ಯೋಜನೆ ರೂಪಿಸಿದ್ದರು ಎಂಬುದು ಬಯಲಾಗಿತ್ತು. ನಂತರ ಈ ಪ್ರಕರಣದ ತನಿಖೆಯನ್ನು ಎನ್‌ಐಎ ಕೈಗೆತ್ತಿಕೊಂಡಿತ್ತು.
2008ರ ಬೆಂಗಳೂರು ಸರಣಿ ಸ್ಫೋಟ ಪ್ರಕರಣದಲ್ಲಿ ಟಿ. ನಾಸೀರ್ ಅದಾಗಲೇ ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿದ್ದ ಎಂಬುದು ಗಮನಾರ್ಹ. ಬಂಧಿತರಲ್ಲಿ ಸಲ್ಮಾನ್ ಖಾನ್ ಎಂಬಾತನನ್ನು ರುವಾಂಡಾ ಗಣರಾಜ್ಯದಿಂದ ಹಸ್ತಾಂತರದ ಮೂಲಕ ಭಾರತಕ್ಕೆ ತರಲಾಗಿತ್ತು.
ಈ ಪ್ರಕರಣದಲ್ಲಿ 11 ಮಂದಿ ಬಂಧಿತ ಆರೋಪಿಗಳು ಹಾಗೂ ಪರಾರಿಯಾಗಿರುವ ಜುನೈದ್ ಅಹ್ಮದ್ ವಿರುದ್ಧ ಎನ್‌ಐಎ ಆರೋಪಪಟ್ಟಿ ಸಲ್ಲಿಸಿತ್ತು.

Continue Reading

ಅವಿಭಾಗೀಕೃತ

“ನಿಮ್ಮಿಂದಲೇ ಟ್ರಾಫಿಕ್‌ ಜಾಮ್!‌ ಗೆಟ್‌ ಔಟ್‌” ಎಂದು ಸಚಿವರನ್ನು ನಿಂದಿಸಿದ ಮಹಿಳೆ

VISTARANEWS.COM


on

ಮುಂಬೈ: ಮಹಿಳಾ ಮೀಸಲಾತಿ ಕುರಿತು ಮುಂಬೈನಲ್ಲಿ ಬಿಜೆಪಿ ಪ್ರತಿಭಟನ ಹಮ್ಮಿಕೊಂಡಿತ್ತು. ಈ ಸಂದರ್ಭದಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಮಹಾರಾಷ್ಟ್ರ ಬಿಜೆಪಿ ಸರ್ಕಾರದ ಸಚಿವರೊಬ್ಬರನ್ನು ಮಹಿಳೆಯೊಬ್ಬರು ಸಚಿವರನ್ನು ತರಾಟೆಗೆ ತೆಗೆದುಕೊಂಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಸಾಕಷ್ಟು ವೈರಲ್‌ ಆಗಿದೆ.
ಮುಂಬೈನ ವೊರ್ಲಿ ಪ್ರದೇಶದಲ್ಲಿ ಸಚಿವ ಗಿರೀಶ್ ಮಹಾಜನ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿತ್ತು. ಈ ಪ್ರತಿಭಟನೆಯಿಂದ ಸಾರ್ವಜನಿಕರಿಗೆ ಅಡಚಣೆ ಉಂಟಾಗಿತ್ತು. ಇದರಿಂದ ರೊಚ್ಚಿಗೆದ್ದ ಈ ಮಹಿಳೆ ಸಚಿವರನ್ನು ಉದ್ದೇಶಿಸಿ ನಿಮ್ಮಿಂದಲೇ ಟ್ರಾಫಿಕ್ ಜ್ಯಾಮ್ ಉಂಟಾಗುತ್ತಿದ್ದು,ಫ್ರೆಂ ಹಿಯರ್.. ಗೆಟ್‌ ಔಟ್‌ ಎಂದು ನಿಂದಿಸಿದ್ದಾರೆ.
ಈ ರೀತಿ ನಡುರಸ್ತೆಯಲ್ಲಿ ಪ್ರತಿಭಟನೆ ನಡೆಸಿ ವಾಹನ ಸಂಚಾರಕ್ಕೆ ಅಡ್ಡಿಪಡಿಸುವ ಬದಲು ಸಮೀಪದ ಮೈದಾನದಲ್ಲಿ ಪ್ರತಿಭಟನೆ ನಡೆಸಲು ಏನು ಸಮಸ್ಯೆ ಎಂದು ಪ್ರಶ್ನಿಸಿದ್ದಾರೆ.
ಪೊಲೀಸ್ ಅಧಿಕಾರಿಯೊಬ್ಬರು ಈ ಮಹಿಳೆಯನ್ನು ಸಮಾಧಾನಪಡಿಸಲು ಪ್ರಯತ್ನಿಸಿದಾಗ ಮಾತನಾಡಲು ನಿರಾಕರಿಸಿದ ಮಹಿಳೆ ತನ್ನೊಂದಿಗೆ ಯಾರೂ ಮಾತನಾಡುವ ಅವಶ್ಯಕತೆ ಇಲ್ಲ ಎಂದಿದ್ದಾರೆ.
ಈ ವಿಡಿಯೊವನ್ನು ಹಂಚಿಕೊಂಡಿರುವ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಅಧ್ಯಕ್ಷ ಹರ್ಷವರ್ಧನ್ ಸಪ್ನಲ್, ಮಹಿಳಾ ಮೀಸಲಾತಿ ಕುರಿತು ಆಡಳಿತ ಪಕ್ಷದ ಅಭಿಯಾನದ ನೈಜ ಮುಖವನ್ನು ಬಹಿರಂಗಪಡಿಸಿದೆ ಎಂದು
ಟೀಕಿಸಿದ್ದಾರೆ. ರಾಜಕೀಯ ಲಾಭಕ್ಕಾಗಿ ಬಿಜೆಪಿ ಮಹಿಳೆಯರನ್ನು ದಾರಿ ತಪ್ಪಿಸುತ್ತಿದೆ ಮತ್ತು ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದು ಅದಕ್ಕಾಗಿ ಮಹಿಳಾ ಮೀತಿ ವಿಷಯವನ್ನು ಒಂದು ಸಾಧನವಾಗಿ ಬಳಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

Continue Reading

Latest

ಇಡಿ ದಾಳಿ: ನಳಪಾಡ್‌ ಫಸ್ಟ್‌ ರಿಯಾಕ್ಷನ್‌ ಏನಿತ್ತು? ಅವರು ಕೊಟ್ಟ ಸ್ಪಷ್ಟನೆ ಏನು?

VISTARANEWS.COM


on

ಬೆಂಗಳೂರು: ನನ್ನ ಮೇಲೆ ನಡೆದ ಇಡಿ ದಾಳಿಗೂ ನನ್ನ ತಂದೆ, ಶಾಸಕ ಬಿಡಿಎ ಅಧ್ಯಕ್ಷರೂ ಆದ ಎನ್.ಎ. ಹ್ಯಾರಿಸ್‌ ಅವರಿಗೂ ಯಾವುದೇ ಸಂಬಂಧವಿಲ್ಲ. ನನ್ನ ಹಾಗೂ ನನ್ನ ತಮ್ಮನ ಮನೆಗಳ ಮೇಲೆ ದಾಳಿ ನಡೆದಿದೆ ಎಂದು ಯುವ ಕಾಂಗ್ರೆಸ್‌ ಮುಖಂಡ ನಳಪಾಡ್‌ ಸ್ಪಷ್ಟಪಡಿಸಿದ್ದಾರೆ. ಶ್ರೀಕಿ ಜತೆ ಬಿಟ್‌ ಕಾಯಿನ್‌ ಅವ್ಯವಹಾರ ನಡೆಸಿರುವುದಕ್ಕೆ ಸಂಬಂಧಪಟ್ಟಂತೆ ನಿನ್ನೆ ನಳಪಾಡ್‌ ಅವರ ಮೇಲೆ ಜಾರಿ ನಿರ್ಧೇಶನಾಲಯ ದಾಳಿ ನಡೆಸಿತ್ತು. ಇಂದು ಪ್ರತಿಕ್ರಿಯೆ ನೀಡಿದ ಅವರು, ಶ್ರೀಕಿ ನನಗೆ ಪರಿಚಯ ಇಲ್ಲ ಎಂದು ಹೇಳುವುದಿಲ್ಲ. ಶ್ರೀಕಿ ಜತೆಯಲ್ಲಿ ಕುಳಿತು ಊಟ ಮಾಡಿರಬಹುದು ಅಷ್ಟೇ. ನನ್ನ ತಂದೆ ಹ್ಯಾರಿಸ್‌ ಅವರಿಗೆ ಸಚಿವ ಹುದ್ದೆ ತಪ್ಪಿಸಲು ವಿಪಕ್ಷಗಳು ಸುಳ್ಳು ಆರೋಪ ಮಾಡುತ್ತಿವೆ ಎಂದು ಹೇಳಿದ್ದಾರೆ.

Continue Reading

Latest

ಗುಜರಾತ್‌ ನಲ್ಲಿ ಬೃಹತ್‌ ಸೈಬರ್‌ ವಂಚನೆ ಜಾಲ ಪತ್ತೆ: 2,500 ಕೋಟಿ ಹಣ ವಂಚನೆ

VISTARANEWS.COM


on

ಗುಜರಾತ್‌: ಗುಜರಾತ್‌ನಲ್ಲಿ ಪತ್ತೆಯಾದ ಈ ಬೃಹತ್ ಸೈಬರ್ ವಂಚನೆ ಪ್ರಕರಣವು ದೇಶದ ಬ್ಯಾಂಕಿಂಗ್ ವ್ಯವಸ್ಥೆಯನ್ನೇ ಆತಂಕಕ್ಕೆ ತಳ್ಳಿದೆ. ಸುಮಾರು 2,500 ಕೋಟಿ ರೂ. ಮೊತ್ತದ ಈ ಹಗರಣದಲ್ಲಿ ಭಾಗಿಯಾಗಿದ್ದ 20 ಆರೋಪಿಗಳನ್ನು ರಾಜ್‌ಕೋಟ್ ಪೊಲೀಸರು ಬಂಧಿಸಿದ್ದು, ಇವರಲ್ಲಿ ಎಚ್.ಡಿಎಫ್.ಸಿ, ಯೆಸ್ ಮತ್ತು ಆಕ್ಸಿಸ್ ಬ್ಯಾಂಕ್‌ನಂತಹ ಪ್ರತಿಷ್ಠಿತ ಸಂಸ್ಥೆಗಳ ಅಧಿಕಾರಿಗಳೂ ಸೇರಿರುವುದು ಗಂಭೀರ ವಿಚಾರವಾಗಿದೆ.

ಈ ಬ್ಯಾಂಕ್ ಅಧಿಕಾರಿಗಳು ಸೈಬರ್ ಕ್ರಿಮಿನಲ್‌ಗಳೊಂದಿಗೆ ಶಾಮೀಲಾಗಿ, ನಕಲಿ ದಾಖಲೆಗಳನ್ನು ಬಳಸಿ ಸುಮಾರು 85ಕ್ಕೂ ಹೆಚ್ಚು ‘ಮ್ಯೂಲ್ ಅಕೌಂಟ್’ಗಳನ್ನು (ನಕಲಿ ಖಾತೆ) ತೆರೆದಿದ್ದರು. ಆರ್‌ಬಿಐ ನಿಯಮಗಳನ್ನು ಉಲ್ಲಂಘಿಸಿ ದೊಡ್ಡ ಮೊತ್ತದ ಹಣ ವರ್ಗಾವಣೆ ಮಾಡುತ್ತಿದ್ದ ಇವರು, ವ್ಯವಸ್ಥೆಯಲ್ಲಿ ಬರುವ ಎಚ್ಚರಿಕೆಗಳನ್ನು (Internal Alerts) ಬೇಕೆಂದೇ ನಿರ್ಲಕ್ಷಿಸುತ್ತಿದ್ದರು. ಬಳಿಕ ಈ ಹಣವನ್ನು ಹವಾಲಾ ದಂಧೆಯ ಮೂಲಕ ಬೇರೆಡೆ ರವಾನಿಸಿ, ವಂಚಕರಿಂದ ದೊಡ್ಡ ಮೊತ್ತದ ಕಮಿಷನ್ ಪಡೆಯುತ್ತಿದ್ದರು.

ಗೊಂಡಲ್ ಮಾರ್ಕೆಟಿಂಗ್ ಯಾರ್ಡ್‌ನ ಕಂಪನಿಯೊಂದರ ಖಾತೆಯಲ್ಲಿ ನಡೆದ 200 ಕೋಟಿ ರೂ.ಗಳ ಸಂಶಯಾಸ್ಪದ ವ್ಯವಹಾರವು ಈ ಮಹಾ ಹಗರಣವನ್ನು ಬಯಲಿಗೆಳೆದಿದೆ. ಪ್ರಸ್ತುತ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ 535 ದೂರುಗಳು ದಾಖಲಾಗಿದ್ದು, 35 ನಕಲಿ ಸಂಸ್ಥೆಗಳನ್ನು ಪೊಲೀಸರು ಗುರುತಿಸಿದ್ದಾರೆ. ತನಿಖೆ ಮುಂದುವರಿದಂತೆ ಇನ್ನೂ ಹೆಚ್ಚಿನ ಬ್ಯಾಂಕ್ ನೌಕರರು ಸಿಕ್ಕಿಬೀಳುವ ಸಾಧ್ಯತೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Continue Reading
Advertisement
Latest9 hours ago

ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್‌ ಕುಸಿದು 7 ಮಂದಿ ಬಲಿ

Latest10 hours ago

ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆ

Latest11 hours ago

ಜಪಾನ್‌ಗೆ ಲಗ್ಗೆ ಇಡಲು ಸಜ್ಜಾದ ʼಧುರಂಧರ್’

bigbreaking11 hours ago

ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಾ ಮೇ ಕ್ಲೈಮ್ಯಾಕ್ಸ್‌?

Latest12 hours ago

ಡಾಲಿ ಧನಂಜಯ್ ಅಭಿಮಾನಿಗಳಿಗೆ ಸಿಹಿ ಸುದ್ದಿ: ಮೊದಲ ಮಗುವಿನ ನಿರೀಕ್ಷೆಯಲ್ಲಿ ಸ್ಯಾಂಡಲ್‌ವುಡ್ ಸ್ಟಾರ್ ದಂಪತಿ!

Latest14 hours ago

ಶಿಸ್ತು ಮರೆತರಾ ರಿಯಾನ್ ಪರಾಗ್? ಕಾನೂನು ಸಂಕಷ್ಟಕ್ಕೆ ಸಿಲುಕುತ್ತಾರಾ ರಾಜಸ್ಥಾನ ರಾಯಲ್ಸ್ ಆಟಗಾರ?

Latest15 hours ago

ಮತಯಂತ್ರದಲ್ಲಿ ಬಿಜೆಪಿ ಚಿಹ್ನೆಗೆ ಟೇಪ್‌? ಚುನಾವಣಾ ಅಕ್ರಮ ಆರೋಪಿಸಿ ಕೇಸರಿ ಪಡೆ ಆಕ್ರೋಶ

Rakshit Shetty Richard Anthony Produce By Hombale
ಅವಿಭಾಗೀಕೃತ15 hours ago

ಗುಡುಗು ಸಹಿತ ಆಲಿಕಲ್ಲು ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Latest16 hours ago

ಜಾಮೀನು ಪಡೆಯಲು ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌.

Latest17 hours ago

ಯಶ್ ಫ್ಯಾನ್ಸ್‌ಗೆ ಶಾಕ್: ಮತ್ತೆ ಮುಂದೂಡಲ್ಪಟ್ಟ ‘ಟಾಕ್ಸಿಕ್’ ರಿಲೀಸ್ ಡೇಟ್! ಹೊಸ ದಿನಾಂಕದ ಬಗ್ಗೆ ಅಪ್‌ಡೇಟ್ ನೀಡಿದ ಚಿತ್ರತಂಡ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌