ಟ್ಯಾಂಕ್‌ನಲ್ಲಿ ಮಹಿಳೆಯ ತುಂಡಾದ ದೇಹ ಪತ್ತೆ, ಮಗಳೇ ತಾಯಿಯನ್ನು ಕತ್ತರಿಸಿ ಕೊಂದಳಾ? - Vistara News

ಕ್ರೈಂ

ಟ್ಯಾಂಕ್‌ನಲ್ಲಿ ಮಹಿಳೆಯ ತುಂಡಾದ ದೇಹ ಪತ್ತೆ, ಮಗಳೇ ತಾಯಿಯನ್ನು ಕತ್ತರಿಸಿ ಕೊಂದಳಾ?

ಮಹಾರಾಷ್ಟ್ರದ ಮುಂಬೈನಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದೆ. ಮನೆಯ ಟ್ಯಾಂಕ್‌ನಲ್ಲಿ ತುಂಡು ತುಂಡಾದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಮಗಳೇ ಕೊಂದಿರುವ ಶಂಕೆ ವ್ಯಕ್ತವಾಗಿದೆ.

VISTARANEWS.COM


on

Man murders his own father in honnavar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ಮಹಾರಾಷ್ಟ್ರದ ಮುಂಬೈನಲ್ಲಿರುವ ಮನೆಯೊಂದರಲ್ಲಿ ಮಹಿಳೆಯೊಬ್ಬರ ತುಂಡು ತುಂಡಾದ ದೇಹ ಪತ್ತೆಯಾಗಿದೆ. ಟ್ಯಾಂಕ್‌ನಲ್ಲಿ ಕತ್ತರಿಸಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಪ್ರಕರಣದಲ್ಲಿ 23 ವರ್ಷದ ಯುವತಿಯನ್ನು ಬಂಧಿಸಲಾಗಿದೆ. ಬಂಧಿತ ಯುವತಿಯು ಹತ್ಯೆಗೀಡಾದ ಮಹಿಳೆಯ ಪುತ್ರಿಯಾಗಿದ್ದು, ಮಗಳೇ ತಾಯಿಯನ್ನು ಕೊಂದಳಾ ಎಂಬ ಪ್ರಶ್ನೆ ಮೂಡಿದೆ.

ಲಾಲ್‌ಬಾಗ್‌ ಪ್ರದೇಶದಲ್ಲಿರುವ ಮನೆಯಲ್ಲಿ ಟ್ಯಾಂಕ್‌ ಸಿಕ್ಕಿದೆ. ಟ್ಯಾಂಕ್‌ನಲ್ಲಿ ಸ್ಟೀಲ್‌ ಬಾಕ್ಸ್‌ ಪತ್ತೆಯಾಗಿದ್ದು, ಅದರಲ್ಲಿ ವೀಣಾ ಜೋಶಿ ಎಂಬ ಮಹಿಳೆಯ ಶವ ಪತ್ತೆಯಾಗಿದೆ. ತುಂಡಾದ ಕೈಗಳು, ಮೂಳೆಗಳು ಪತ್ತೆಯಾಗಿದ್ದು, ಹತ್ಯೆ ಮಾಡಿ ತಿಂಗಳುಗಳೇ ಆಗಿರಬಹುದು ಎಂದು ಅಂದಾಜಿಸಲಾಗಿದೆ. ಮೃತ ಮಹಿಳೆಯ ಪುತ್ರಿ ರಿಂಪಲ್‌ ಜೈನ್‌ ಅವರನ್ನು ಗಂಟೆಗಟ್ಟಲೆ ವಿಚಾರಣೆ ನಡೆಸಿದ ಪೊಲೀಸರು, ಬಳಿಕ ಬಂಧಿಸಿದ್ದಾರೆ.

ವೀಣಾ ಜೋಶಿ ಅವರ ಸಹೊದರ ಸೇರಿ ಇಬ್ಬರು ಸಂಬಂಧಿಕರು ವೀಣಾ ನಾಪತ್ತೆಯಾಗಿರುವ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ. ನವೆಂಬರ್‌ 26ರಂದು ಕೊನೆಯ ಬಾರಿಗೆ ವೀಣಾ ಜೋಶಿ ಅವರನ್ನು ನೋಡಿದ್ದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ತನಿಖೆಯ ಭಾಗವಾಗಿ ವೀಣಾ ಜೋಶಿ ಅವರ ಮನೆಗೆ ಬಂದು ತಪಾಸಣೆ ನಡೆಸಿದಾಗ ಶವ ಪತ್ತೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Dalit woman murder: ಪ್ರೀತಿಸಿ ಮದುವೆಯಾದ ಮೂರೇ ದಿನಕ್ಕೆ ದಲಿತ ಯುವತಿ ಸಾವು, ಕೊಲೆ ಶಂಕೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

Neha Murder Case: ನೇಹಾ ಕೊಲೆ ಪ್ರಕರಣ ರಾಜಕೀಯಕ್ಕೆ ಬಳಕೆ; ಕೊಲೆಗಾರನಿಗೆ ಉಗ್ರ ಶಿಕ್ಷೆ ಎಂದ ಸಿದ್ದರಾಮಯ್ಯ

Neha Murder Case: ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಬಗ್ಗೆ ಪ್ರತಿಪಕ್ಷಗಳ ಆರೋಪದ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಎಲ್ಲ ಕಾಲದಲ್ಲಿಯೂ ಕೊಲೆಗಳಾಗಿವೆ. ಹಾಗೆಂದು ಕಾನೂನು ಸುವ್ಯವಸ್ಥೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದಲ್ಲ. ಕರ್ನಾಟಕದಲ್ಲಿ ಇರುವಷ್ಟು ಶಾಂತಿ ಸುವ್ಯವಸ್ಥೆ ಬೇರೆ ರಾಜ್ಯಗಳಲ್ಲಿಲ್ಲ. ನಾವು ಯಾವುದೇ ಕೃತ್ಯ ನಡೆದರೂ, ಅದನ್ನು ತೀವ್ರವಾಗಿ ಖಂಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ರಾಜಕೀಯಕ್ಕಾಗಿ ಒಬ್ಬರ ಸಾವನ್ನು ಬಳಸಿಕೊಳ್ಳುವುದು ದುರ್ದೈವ ಹಾಗೂ ಖಂಡನೀಯ ಎಂದು ಹೇಳಿರುವ ಸಿಎಂ ಸಿದ್ದರಾಮಯ್ಯ, ಕೊಲೆಗಾರನಿಗೆ ಉಗ್ರ ಶಿಕ್ಷೆ ನೀಡಲು ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.

VISTARANEWS.COM


on

Koo

ಮೈಸೂರು: ಪ್ರತಿಪಕ್ಷಗಳು ನೇಹಾ ಕುಲಕರ್ಣಿ ಅವರ ಕೊಲೆ ಪ್ರಕರಣವನ್ನು (Neha Murder Case) ರಾಜಕೀಯಕ್ಕೆ ಬಳಸುತ್ತಿದ್ದಾರೆ. ಆಕೆಯನ್ನು ಕೊಂದವನಿಗೆ ಉಗ್ರ ಶಿಕ್ಷೆಯನ್ನು ಕೊಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಶನಿವಾರ ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ನೇಹಾ ಕುಲಕರ್ಣಿ ಕೊಲೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಕೊಲೆಗಾರನನ್ನು ಕೂಡಲೇ ಬಂಧಿಸಲಾಗಿದೆ. ಇದು ಲವ್ ಜಿಹಾದ್ ಪ್ರಕರಣವಲ್ಲ. ಸರ್ಕಾರ ತನಿಖೆಯನ್ನು ಗಂಭೀರವಾಗಿ ಕೈಗೊಂಡಿದ್ದು, ಕೊಲೆಗಾರನಿಗೆ ಉಗ್ರ ಶಿಕ್ಷೆ ನೀಡಲು ಪ್ರಯತ್ನ ಮಾಡಲಾಗುವುದು ಎಂದರು.

ರಾಜಕೀಯಕ್ಕಾಗಿ ಒಬ್ಬರ ಸಾವನ್ನು ಬಳಸಿಕೊಳ್ಳುವುದು ದುರ್ದೈವ

ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಬಗ್ಗೆ ಪ್ರತಿಪಕ್ಷಗಳ ಆರೋಪದ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಎಲ್ಲ ಕಾಲದಲ್ಲಿಯೂ ಕೊಲೆಗಳಾಗಿವೆ. ಹಾಗೆಂದು ಕಾನೂನು ಸುವ್ಯವಸ್ಥೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದಲ್ಲ. ಕರ್ನಾಟಕದಲ್ಲಿ ಇರುವಷ್ಟು ಶಾಂತಿ ಸುವ್ಯವಸ್ಥೆ ಬೇರೆ ರಾಜ್ಯಗಳಲ್ಲಿಲ್ಲ. ನಾವು ಯಾವುದೇ ಕೃತ್ಯ ನಡೆದರೂ, ಅದನ್ನು ತೀವ್ರವಾಗಿ ಖಂಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ರಾಜಕೀಯಕ್ಕಾಗಿ ಒಬ್ಬರ ಸಾವನ್ನು ಬಳಸಿಕೊಳ್ಳುವುದು ದುರ್ದೈವ ಹಾಗೂ ಖಂಡನೀಯ ಎಂದು ಹೇಳಿದರು. ಇನ್ನು ರಾಜ್ಯಾದ್ಯಂತ ಪ್ರತಿಭಟನೆಗಳಾಗುತ್ತಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಇದರ ಪರಿಣಾಮ ಸರ್ಕಾರದ ಮೇಲೆ ಆಗುವುದಿಲ್ಲ ಎಂದು ಹೇಳಿದರು.

ದೇಶದಲ್ಲಿ ಅಥವಾ ಕರ್ನಾಟಕದಲ್ಲಿ ಮೋದಿ ಅಲೆ ಇಲ್ಲ

ರಾಜ್ಯದಲ್ಲಿ ಚುನಾವಣಾ ವಾತಾವರಣ ಉತ್ತಮವಾಗಿದ್ದು ದೇಶದಲ್ಲಿ ಅಥವಾ ಕರ್ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಲೆ ಇಲ್ಲ. ಬಿಜೆಪಿ ಅಭ್ಯರ್ಥಿಗಳು ಮೋದಿ ಹೆಸರಿನಲ್ಲಿ ಮತ ಯಾಚಿಸುತ್ತಿದ್ದಾರೆ. ಮೋದಿಯವರ ಮೇಲೆ ಅವಲಂಬನೆಯಾಗಿದ್ದು, ಜನ ಮೋದಿ ಸರ್ಕಾರದ ವಿರುದ್ಧವಾಗಿದ್ದಾರೆ. ದೇಶದಲ್ಲಿ ಇಂಡಿಯಾ ಪರವಾದ ವಾತಾವರಣವಿದೆ ಎಂದರು.

ಬಿಜೆಪಿ ಸರ್ಕಾರ ಜನರಿಗೆ ಖಾಲಿ ಚೆಂಬು ಕೊಟ್ಟಿದೆ

ಕಾಂಗ್ರೆಸ್‌ನ ಚೆಂಬು ಜಾಹೀರಾತನ್ನು ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿರುವುದರ ಚಿಹ್ನೆ ಎಂಬ ಬಿಜೆಪಿ ಟೀಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ನಿನ್ನೆ ಕೊಟ್ಟಿರುವ ಜಾಹೀರಾತು ಈ ದೇಶದ ಜನರಿಗೆ ಬಿಜೆಪಿ ಸರ್ಕಾರ ಖಾಲಿ ಚೆಂಬು ಕೊಟ್ಟಿದೆ ಎಂದು ತಿಳಿಸಲು. ದೇಶದ ಜನರಿಗೆ 15 ಲಕ್ಷ ರೂಪಾಯಿ ಕೊಟ್ಟರೇ? 2 ಕೋಟಿ ಉದ್ಯೋಗ ಸೃಷ್ಟಿ ಆಯಿತೇ? ರೈತರ ಆದಾಯ ದುಪ್ಪಟ್ಟು ಆಯಿತೇ? ಅಚ್ಚೇ ದಿನ್ ಬಂದಿದೆಯೇ? ಅದಕ್ಕೆ ಚೆಂಬು ಕೊಟ್ಟಿದ್ದಾರೆ ಎಂದು ಜಾಹೀರಾತು ನೀಡಲಾಗಿದೆ ಎಂದು ಪ್ರತಿಕ್ರಿಯೆ ನೀಡಿದರು.

ನರೇಂದ್ರ ಮೋದಿ ರಾಜ್ಯಕ್ಕೆ ಬರುತ್ತಿದ್ದು, 11 ತಿಂಗಳಲ್ಲಿ ಬೊಕ್ಕಸ ಖಾಲಿಯಾಗಿದೆ ನಮಗೆ ಭಿಕ್ಷೆ ಕೊಡಿ ಎಂಬ ಅರ್ಥದಲ್ಲಿ ಜಾಹೀರಾತು ನೀಡಿದೆ ಎಂದು ಬಿಜೆಪಿ ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ಕೊಟ್ಟಿರುವ ಆಶ್ವಾಸನೆಗಳಲ್ಲಿ ಒಂದನ್ನೂ ಈಡೇರಿಸಿಲ್ಲ. ದೇಶದ ಜನರಿಗೆ ಖಾಲಿ ಚೆಂಬು ನೀಡಿದ್ದಾರೆ ಎಂದು ಜಾಹೀರಾತು ನೀಡಿದ್ದೇವೆ. ಅವರು ಏನಾದರೂ ಹೇಳಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಬೊಕ್ಕಸ ಖಾಲಿಯಾಗಿಲ್ಲ. ಎಲ್ಲ ಗ್ಯಾರಂಟಿಗಳನ್ನು ಜಾರಿ ಮಾಡಿ ಅಭಿವೃದ್ಧಿ ಕೆಲಸವನ್ನೂ ಮಾಡಿದ್ದೇವೆ ಎಂದರು.

ಭಯವಿರುವುದರಿಂದ ಬಿಜೆಪಿ ಜತೆಗೆ ಜೆಡಿಎಸ್ ಮೈತ್ರಿ

ಏಣಿ ಹತ್ತಿಸಿ ನಂತರ ಸರ್ವನಾಶ ಮಾಡುತ್ತಾರೆ ಎಂಬ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಎಚ್‌.ಡಿ. ಕುಮಾರಸ್ವಾಮಿ ಅವರು ಕೋಮುವಾದಿಗಳಾಗಿದ್ದು, ಜನತಾ ದಳ (ಎಸ್) ಪಕ್ಷವನ್ನು ರದ್ದು ಮಾಡಬೇಕು. ನನಗೆ ಅವರ ಬಗ್ಗೆ ಭಯವಿದ್ದರೆ ಇವರಿಬ್ಬರ ವಿರುದ್ಧ ಹೋರಾಟ ಮಾಡುತ್ತಿರಲಿಲ್ಲ. ಅವರಿಗೆ ಭಯವಿರುವುದರಿಂದ ಮೈತ್ರಿ ಮಾಡಿಕೊಂಡಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: CET 2024 exam: ಸಿಇಟಿಯಲ್ಲಿ 50 ಔಟ್ ಆಫ್ ಸಿಲೆಬಸ್ ಪ್ರಶ್ನೆ; ಮರು ಪರೀಕ್ಷೆ ಅಥವಾ ಗ್ರೇಸ್‌ ಮಾರ್ಕ್ಸ್‌? ಇಂದು ನಿರ್ಧಾರ

ಏನಿದು ಪ್ರಕರಣ?

ಪ್ರೀತಿಸಲು‌ ನಿರಾಕರಿಸಿದಳು (Refusal to love) ಎಂಬ ಕಾರಣಕ್ಕಾಗಿ ಪಾಗಲ್‌ ಪ್ರೇಮಿ ಫಯಾಜ್‌, ಕಾರ್ಪೋರೇಟರ್‌ ಮಗಳನ್ನು ಭೀಕರವಾಗಿ ಕೊಲೆ (Stab wound) ಮಾಡಿದ್ದ. ಚಾಕುವಿನಿಂದ 9 ಬಾರಿ ಇರಿದು (Murder Case) ಕೊಂದಿದ್ದಾನೆ. ಹುಬ್ಬಳ್ಳಿಯ ಬಿವಿಬಿ ಕಾಲೇಜು (Hubballi BVB College) ಆವರಣದಲ್ಲಿ ಕೊಲೆ ನಡೆದಿದೆ. ನೇಹಾ ಹಿರೇಮಠ ಕೊಲೆಯಾದ ಯುವತಿ. ನೇಹಾ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಮಗಳಾಗಿದ್ದಾಳೆ.

ಪ್ರೀತಿಸಲು ನಿರಾಕರಿಸಿದ್ದಕ್ಕೆ ಕೊಲೆ

ನೇಹಾ ಹಿರೇಮಠ ಹುಬ್ಬಳ್ಳಿಯ ಬಿವಿಬಿ‌ ಕಾಲೇಜಿನಲ್ಲಿ ಓದುತ್ತಿದ್ದಾಳೆ. ಈ ವೇಳೆ ಆರೋಪಿ ಪ್ರೀತಿಸುವಂತೆ ಹಿಂದೆ ಬಿದ್ದಿದ್ದ. ಆದರೆ, ನೇಹಾ ನಿರಾಕರಣೆ ಮಾಡುತ್ತಲೇ ಬಂದಿದ್ದಾಳೆ. ಇದರಿಂದ ರೊಚ್ಚಿಗೆದ್ದ ಆತ ಗುರುವಾರ ಕಾಲೇಜು ಕ್ಯಾಂಪಸ್‌ಗೆ ಬಂದಿದ್ದಾನೆ. ಪುನಃ ಆಕೆ ಬಳಿ ಪ್ರೇಮ ನಿವೇದನೆ ಮಾಡಿಕೊಂಡಿದ್ದಾನೆ. ಆದರೆ, ನೇಹಾ ಪ್ರೀತಿಸಲು‌ ನಿರಾಕರಿಸಿದ್ದಾಳೆ. ಹೀಗಾಗಿ ಮೊದಲೇ ನಿರ್ಧರಿಸಿ ಬಂದಿದ್ದ ಆರೋಪಿಯು ನೇಹಾಳಿಗೆ ಕಾಲೇಜು ಕ್ಯಾಂಟೀನ್‌ನಲ್ಲಿಯೇ ಚಾಕುವಿನಿಂದ ಇರಿದಿದ್ದಾನೆ. ಯುವತಿಗೆ ಮನಬಂದಂತೆ ಚಾಕುವಿನಿಂದ ಇರಿದಿದ್ದಾನೆ. ಒಟ್ಟು ಒಂಭತ್ತು ಬಾರಿ ಚಾಕುವಿನಿಂದ ಚುಚ್ಚಿದ್ದು, ನೇಹಾಳಿಗೆ ತೀವ್ರ ರಕ್ತಸ್ರಾವವಾಗಿದೆ. ಸ್ಥಳೀಯರು ತಕ್ಷಣವೇ ಕಿಮ್ಸ್ ಆಸ್ಪತ್ರೆಗೆ ಆಕೆಯನ್ನು ರವಾನೆ ಮಾಡಿದ್ದಾರೆ. ಆದರೆ, ಅಷ್ಟರಲ್ಲಾಗಲೇ ನೇಹಾ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದ್ದಾರೆ.

Continue Reading

ಕ್ರೈಂ

Neha Murder Case: ನೇಹಾ ಹತ್ಯೆ ಆರೋಪಿಯನ್ನು ಜನರ ಕೈಗೆ ಒಪ್ಪಿಸಿ ಎಂದ ಡಿಂಪಲ್‌ ಕ್ವೀನ್‌!

Neha Murder Case: ಪ್ರೀತಿಸಲು‌ ನಿರಾಕರಿಸಿದಳು (Refusal to love) ಎಂಬ ಕಾರಣಕ್ಕಾಗಿ ಪಾಗಲ್‌ ಪ್ರೇಮಿ ಫಯಾಜ್‌, ಕಾರ್ಪೋರೇಟರ್‌ ಮಗಳನ್ನು ಭೀಕರವಾಗಿ ಕೊಲೆ (Stab wound) ಮಾಡಿದ್ದ. ಚಾಕುವಿನಿಂದ 9 ಬಾರಿ ಇರಿದು (Murder Case) ಕೊಂದಿದ್ದ. ಹುಬ್ಬಳ್ಳಿಯ ಬಿವಿಬಿ ಕಾಲೇಜು (Hubballi BVB College) ಆವರಣದಲ್ಲಿ ಕೊಲೆ ನಡೆದಿತ್ತು. ನೇಹಾ ಹಿರೇಮಠ ಕೊಲೆಯಾದ ಯುವತಿ. ನೇಹಾ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಮಗಳಾಗಿದ್ದಾಳೆ.

VISTARANEWS.COM


on

Neha Murder Case Rachita Ram React
Koo

ಬೆಂಗಳೂರು: ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ (Neha Murder Case) ಬರ್ಬರ ಕೊಲೆ ಪ್ರಕರಣ ರಾಜ್ಯಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಆರೋಪಿ ಫಯಾಜ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಸಿನಿಮಾ ತಾರೆಯರು ಕೂಡ ಧ್ವನಿ ಎತ್ತಿದ್ದಾರೆ. ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ, ನಟಿ ಪ್ರಿಯಾ ಸವದಿ, ನಟಿ ಕಾವ್ಯಾ ಶಾಸ್ತ್ರಿ ಪೋಸ್ಟ್‌ ಬೆನ್ನಲ್ಲೇ ಇದೀಗ ಡಿಂಪಲ್‌ ಕ್ವೀನ್‌ ರಚಿತಾ ರಾಮ್‌ (Rachita ram) ಈ ಬಗ್ಗೆ ಪೋಸ್ಟ್‌ ಹಂಚಿಕೊಂಡಿದ್ದಾರೆ. ʻಈ ರೀತಿಯ ಕೃತ್ಯ ಮಾಡುವವರನ್ನು ಗಲ್ಲಿಗೇರಿಸುವ ಬದಲು ಅವರನ್ನು ಜನರ ಕೈಗೆ ಒಪ್ಪಿಸಿʼಎಂದು ಬರೆದುಕೊಂಡಿದ್ದಾರೆ.

ರಚಿತಾ ರಾಮ್‌ ಪೋಸ್ಟ್‌ನಲ್ಲಿ ʻʻಜಾತಿ, ಧರ್ಮ ಯಾವುದೇ ಆಗಿರಲಿ ಮೊದಲು ನಾವು ಮಾನವರು. ನಾನು ಈ ಪೋಸ್ಟ್‌ ಹಾಕಲು ಕಾರಣ ಆಕೆಗೆ ಆಗಿರುವ ಅನ್ಯಾಯ. ತಪ್ಪು ಯಾರೇ ಮಾಡಿದರು ತಪ್ಪೇ. ಸರ್ಕಾರಕ್ಕೆ ನನ್ನ ಒಂದು ಮನವಿ. ರಾಜಕೀಯ ಆಯಾಮದಲ್ಲಿ ಈ ವಿಷಯವನ್ನು ತರಬೇಡಿ. ಆಗಿರೋದು ಅನ್ಯಾಯ. ಈಗ ನ್ಯಾಯ ಬೇಕಾಗಿದೆ ಅಷ್ಟೆ. ಈ ರೀತಿಯ ಕೃತ್ಯ ಮಾಡುವವರನ್ನು ಗಲ್ಲಿಗೇರಿಸುವ ಬದಲು ಅವರನ್ನು ಜನಸಮಾನ್ಯರ ಕೈಗೆ ಒಪ್ಪಿಸಿʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Neha Murder Case: ನೇಹಾಳನ್ನು ಮದುವೆ ಮಾಡಿಸುವಂತೆ ಆಕೆಯ ಹೆತ್ತವರ ಪ್ರಾಣ ತಿಂದಿದ್ದ ಫಯಾಜ್!‌

ಇಬ್ಬರೂ ಲವ್‌ ಮಾಡ್ತಿದ್ದರು ಅನ್ನೋದು ಸತ್ಯ ಎಂದ ಫಯಾಜ್‌ ತಾಯಿ

ಏ.18ರಂದು ಹುಬ್ಬಳ್ಳಿಯ ಬಿವಿಬಿ ಕಾಲೇಜು (Hubballi BVB College) ಆವರಣದಲ್ಲೇ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಮಗಳು ನೇಹಾ ಹಿರೇಮಠ ಬರ್ಬರವಾಗಿ (Neha Murder Case) ಕೊಲೆಯಾಗಿದ್ದಳು. ಪಾಗಲ್‌ ಪ್ರೇಮಿಯ ಕೃತ್ಯಕ್ಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಗಳು ಮುಂದುವರಿದಿದೆ. ಆರೋಪಿಯನ್ನು ಎನ್‌ಕೌಂಟರ್ ಮಾಡಿ ಬಿಸಾಕಿ ಎಂದು ಆಕ್ರೋಶಗಳು ಕೇಳಿಬರುತ್ತಿವೆ. ಈ ನಡುವೆ ಘಟನೆ ಬಗ್ಗೆ ಆರೋಪಿ ಫಯಾಜ್‌ ತಾಯಿ ಮಮ್ತಾಜ್ ಪ್ರತಿಕ್ರಿಯಿಸಿದ್ದು, ಫಯಾಜ್‌ಗೆ ಶಿಕ್ಷೆ ಆಗಬೇಕೆಂದು ಕಣ್ಣೀರು ಹಾಕಿದ್ದಾರೆ.

ನನ್ನ ಮಗ ಫಯಾಜ್‌ ಮಾಡಿದ ಕೃತ್ಯಕ್ಕೆ ತಕ್ಕ ಶಿಕ್ಷೆ ಆಗಬೇಕು. ಆತನ ತಪ್ಪಿಗೆ ನಾನು ರಾಜ್ಯದ ಜನತೆಗೆ ಹಾಗೂ ನೇಹಾಳ ತಂದೆ-ತಾಯಿಗೂ ಕ್ಷಮೆಯಾಚಿಸುತ್ತೆನೆ. ಅವರಿಗೆ ಎಷ್ಟು ದುಃಖ ಆಗಿದ್ದೀಯೋ ಅಷ್ಟೇ ನೋವನ್ನು ನಾವು ಅನುಭವಿಸುತ್ತಿದ್ದೇವೆ. ಯಾವ ಮಕ್ಕಳು ತಪ್ಪು ಮಾಡಿದರೂ ತಪ್ಪೇ.. ನನ್ನ ಮಗ ಮಾಡಿದ ತಪ್ಪಿಗೆ ಈ ನೆಲದ ಕಾನೂನು ಏನು ಶಿಕ್ಷೆ ವಿಧಿಸುತ್ತೋ ಆ ಪ್ರಕಾರ ಶಿಕ್ಷೆ ಆಗಲಿ ಎಂದರು.

Continue Reading

ಕ್ರೈಂ

Neha Murder Case: ನೇಹಾಳನ್ನು ಮದುವೆ ಮಾಡಿಸುವಂತೆ ಆಕೆಯ ಹೆತ್ತವರ ಪ್ರಾಣ ತಿಂದಿದ್ದ ಫಯಾಜ್!‌

Neha Murder Case: ಖುದ್ದು ಪೋಷಕರು ನೀಡಿರುವ ದೂರಿನಲ್ಲಿ ಈ ವಿಷಯ ಬಹಿರಂಗವಾಗಿದೆ. ನೇಹಾಳನ್ನು ಪ್ರೀತಿ ಮಾಡುತ್ತಿದ್ದೇನೆ. ತನಗೆ ಮದುವೆ ಮಾಡಿ ಕೊಡುವಂತೆ ನೇಹಾಳ ಪೋಷಕರಿಗೆ ಫಯಾಜ್‌ ಬೆನ್ನು ಬಿದ್ದಿದ್ದ. ನಾಲ್ಕೈದು ತಿಂಗಳಿಂದಲೂ ಮದುವೆಗಾಗಿ ಈತ ಪೀಡಿಸುತ್ತಿದ್ದ ಎಂದು ಗೊತ್ತಾಗಿದೆ.

VISTARANEWS.COM


on

Neha Murder case JDS slams hands for defending love jihad to protect accused
Koo

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ದಾರುಣವಾಗಿ (Hubli Murder Case) ಕೊಲೆಯಾದ ನೇಹಾ ಹಿರೇಮಠ (Neha Murder Case) ಅವರನ್ನು ತನಗೆ ಮದುವೆ ಮಾಡಿಕೊಡುವಂತೆ ಕೊಲೆಪಾತಕಿ ಫಯಾಜ್‌ (Fayaz) ಬಹು ದಿನಗಳಿಂದ ಆಕೆಯ ಹೆತ್ತವರನ್ನು ಪೀಡಿಸುತ್ತಿದ್ದ ಎಂಬ ವಿಚಾರ ಬಯಲಾಗಿದೆ. ನೇಹಾ ಹೆತ್ತವರು ನೀಡಿರುವ ದೂರಿನ ಕಾಪಿಯಲ್ಲಿ ಇದು ಉಲ್ಲೇಖವಾಗಿದೆ.

ಖುದ್ದು ಪೋಷಕರು ನೀಡಿರುವ ದೂರಿನಲ್ಲಿ ಈ ವಿಷಯ ಬಹಿರಂಗವಾಗಿದೆ. ನೇಹಾಳನ್ನು ಪ್ರೀತಿ ಮಾಡುತ್ತಿದ್ದೇನೆ. ತನಗೆ ಮದುವೆ ಮಾಡಿ ಕೊಡುವಂತೆ ನೇಹಾಳ ಪೋಷಕರಿಗೆ ಫಯಾಜ್‌ ಬೆನ್ನು ಬಿದ್ದಿದ್ದ. ನಾಲ್ಕೈದು ತಿಂಗಳಿಂದಲೂ ಮದುವೆಗಾಗಿ ಈತ ಪೀಡಿಸುತ್ತಿದ್ದ ಎಂದು ಗೊತ್ತಾಗಿದೆ.

ನಮ್ಮ ಮಗಳು ನಿನ್ನನ್ನು ಇಷ್ಟಪಟ್ಟಿಲ್ಲ ಎಂದು ಪೋಷಕರು ಹೇಳಿದ್ದರು. ಇನ್ನೂ ಹೆಚ್ಚಿನ ವ್ಯಾಸಂಗ ಮಾಡುವುದಿದೆ ಎಂದು ಫಯಾಜ್‌ನ ತಂದೆ, ತಾಯಿಗೆ ದೂರವಾಣಿ ಕರೆ ಮಾಡಿ ನೇಹಾ ಪೋಷಕರು ಹೇಳಿದ್ದರು. ಇಬ್ಬರ ಮತವೂ ಬೇರೆ ಆಗಿರುವುದರಿಂದಲೂ ಸಮಸ್ಯೆ ಉಂಟಾಗಬಹುದು ಎಂಬುದನ್ನು ಕೂಡ ಅವರ ಅರಿವಿಗೆ ತರಲಾಗಿತ್ತು. ಎಫ್‌ಐಆರ್‌ನಲ್ಲಿ ಈ ಬಗ್ಗೆ ವಿವರವಾದ ಉಲ್ಲೇಖವನ್ನು ನೇಹಾಳ ತಾಯಿ ಗೀತಾ ನೀಡಿದ್ದಾರೆ.

ಇಷ್ಟಾದರೂ ನಮ್ಮ ಮಗಳ ಬೆನ್ನು ಬಿದ್ದಿದ್ದ ಫಯಾಜ್, ನಾಲ್ಕೈದು ಬಾರಿ ಬೆದರಿಕೆ ಹಾಕಿದ್ದ. ಮದುವೆಯಾಗದಿದ್ದರೆ ನಿನ್ನನ್ನು ಜೀವಂತವಾಗಿ ಬಿಡುವುದಿಲ್ಲ ಎಂದು ಬೆದರಿಕೆ ಹಾಕುತ್ತಿದ್ದ ಎಂದು ನೇಹಾ ತಮ್ಮ ಗಮನಕ್ಕೆ ತಂದಿದ್ದಳು ಎಂದು ನೇಹಾಳ ಪೋಷಕರು ತಿಳಿಸಿದ್ದಾರೆ. ಆಗಲೇ ಬಹುಶಃ ಇದನ್ನು ಪೊಲೀಸರ ಗಮನಕ್ಕೆ ತಂದಿದ್ದರೆ ನೇಹಾ ಜೀವ ಉಳಿಯುತ್ತಿತ್ತೋ ಏನೋ ಎಂದು ಹೇಳಲಾಗುತ್ತಿದೆ.

“ತಪ್ಪು ಆಕೆಯಲ್ಲೂ ಇದೆ” ಎಂದು ಫಯಾಜ್‌ ತಾಯಿ

ಈ ನಡುವೆ, “ತಪ್ಪು ಆಕೆಯಲ್ಲೂ ಇದೆʼ ಎಂದು ಹೇಳಿರುವ ಆರೋಪಿ ಫಯಾಜ್‌ ತಾಯಿಯ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ. ವಿಸ್ತಾರ ನ್ಯೂಸ್‌ಗೆ ಹೇಳಿಕೆ ನೀಡಿರುವ ಫಯಾಜ್‌ ತಾಯಿ, ತಪ್ಪು ಒಬ್ಬರಿಂದ ಆಗಲು ಸಾಧ್ಯವೇ ಇಲ್ಲ. ತಪ್ಪು ಇಬ್ಬರಲ್ಲೂ ಇರುತ್ತೆ. ಅವರಿಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಅದು ಹೇಗೆ ಒನ್ ಸೈಡ್ ಲವ್ ಆಗುತ್ತೆ?” ಎಂದು ಪ್ರಶ್ನಿಸಿದ್ದಾರೆ.

“ಸತ್ಯಾಸತ್ಯತೆ ಪರಿಶೀಲಿಸಿ, ಸಾಧಕ ಬಾಧಕ ನೋಡಿ ಅವನಿಗೆ ಶಿಕ್ಷೆ ನೀಡಬೇಕು. ಏನೇ ಶಿಕ್ಷೆ ಕೊಟ್ಟರೂ ಸಹ ನಾನು ಒಪ್ಪಿಕೊಳ್ಳುತ್ತೇನೆ. ಇಬ್ಬರೂ ಕ್ಲಾಸ್ ಮೇಟ್ ಆಗಿದ್ದವರು. ಮುಂದೆ ಅವರಲ್ಲಿ ಏನು ನಡೆಯಿತು ಅದು ಗೊತ್ತಿಲ್ಲ. ಪೋನ್‌ನಲ್ಲಿ ಅವಳ ಜೊತೆ ಮಾತನಾಡಿದ ಎಲ್ಲ ರೆಕಾರ್ಡ್‌ಗಳಿವೆ. ಇದರ ಮೇಲೆ ಕಾನೂನು ಯಾವ ರೀತಿ ಕ್ರಮ ಕೈಗೊಳ್ಳುತ್ತೋ ಅದು ತೆಗೆದುಕೊಳ್ಳಲಿ” ಎಂದಿದ್ದಾರೆ.

“ಇರುವೆಯನ್ನೂ ಸಹ ಸಾಯಿಸದ ಅವನಿಗೆ ಇಷ್ಟೊಂದು ಧೈರ್ಯ ಹೇಗೆ ಬಂತು ಅಂತ ನಮಗೆ ಗೊತ್ತಿಲ್ಲ. ಜಿಮ್ ಮಾಡಿ ಒಳ್ಳೆಯ ಬಾಡಿ ಇಟ್ಟುಕೊಂಡಿದ್ದ ಅವನು. ಅವಳ ಜೊತೆಗಿನ ಪ್ರೀತಿ ಸ್ನೇಹದಿಂದಲೇ ಅವನು ಡಿಪ್ರೆಶನ್‌ಗೆ ಹೋದ. ಊಟ ಸಹ ಸರಿಯಾಗಿ ಮಾಡುತ್ತಿರಲಿಲ್ಲ” ಎಂದಿದ್ದಾರೆ.

“ನಾವು ನೂರಾರು ಮಕ್ಕಳಿಗೆ ಶಿಕ್ಷಣ ಕೊಟ್ಟಿದ್ದೇವೆ. ಅವರು ತಪ್ಪು ಮಾಡಿದಾಗ ಹೊಡೆದು ಬುದ್ಧಿ ಹೇಳ್ತೀವಿ. ಆದ್ರೆ ನನ್ನ ಮಗನೇ ಈಗ ತಪ್ಪು ಮಾಡಿದ್ದಾನೆ, ಅದು ತಪ್ಪು ತಪ್ಪೇ. ಕಾನೂನು ಪ್ರಕಾರ ಏನು ಶಿಕ್ಷೆ ಆಗಬೇಕೋ ಅದು ಆಗಲಿ. ಘಟನೆ ನಡೆದು ಸಂಜೆ ಗೊತ್ತಾಗಿದೆ. ಎರಡು ದಿನದಿಂದ ನಂಗೆ ಕರೆ ಸಹ ಮಾಡಿಲ್ಲ ಅವನು. ಅವನ ತಪ್ಪಿಗೆ ಶಿಕ್ಷೆ ಆಗಲೇಬೇಕು, ಅದನ್ನು ಅವನು ಅನುಭವಿಸಬೇಕು” ಎಂದು ಹೇಳಿದ್ದಾರೆ.

“ಐಎಎಸ್ ಆಫೀಸರ್ ಆಗುತ್ತಾನೆ ಅಂತ ನಾವು ಅಂದುಕೊಂಡಿದ್ದೆವು. ಒಬ್ಬನೇ ಮಗ ಎಂದು ಉತ್ತಮ ಶಿಕ್ಷಣ ಕೊಡಿಸಿದ್ದೆವು. ಅವನ ತಪ್ಪಿನಿಂದ ನಾವೆಲ್ಲರೂ ತಲೆ ತಗ್ಗಿಸುವಂತೆ ಆಗಿದೆ” ಎಂದು ಹೇಳಿದ್ದಾರೆ. ಆದರೆ ಅವರು ಫಯಾಜ್‌ ಕೃತ್ಯವನ್ನು ಸಮರ್ಥಿಸಿಕೊಂಡಂತೆ ಮಾತನಾಡಿರುವುದು ಹಾಗೂ ಈ ಕೃತ್ಯದಲ್ಲಿ ನೇಹಾ ಪಾಲೂ ಇದೆ ಎಂಬರ್ಥ ಬರುವಂತೆ ಮಾತನಾಡಿರುವುದು ಎಲ್ಲರ ಹುಬ್ಬೇರುವಂತೆ ಮಾಡಿದೆ.

ಇದನ್ನೂ ಓದಿ: Neha Murder Case: ನೇಹಾ ಹತ್ಯೆ: ಅಪರಾಧಿಗೆ ಶಿಕ್ಷೆ ನೀಡಬೇಕು ಎಂದು ಸಿನಿಮಾ ತಾರೆಯರ ಆಗ್ರಹ

Continue Reading

ದೇಶ

Drunken Groom: ಕುಡಿದ ಮತ್ತಿನಲ್ಲಿಯೇ ಮಂಟಪಕ್ಕೆಬಂದ ವರ; ಒದ್ದೋಡಿಸಿದ ವಧು!

Drunken Groom ತನ್ನನ್ನು ವರಿಸುವ ವರ ಬರಲಿದ್ದಾನೆ ಎಂದು ವಧು ಕನಸು ಕಾಣುತ್ತಿದ್ದಾರೆ ವರ ಮಹಾಶಯ ಸಿಕ್ಕಾಪಟ್ಟೆ ಕುಡಿದು ಮದುವೆ ಮಂಟಪಕ್ಕೆ ಬಂದಿದ್ದಾನೆ. ವರನ ಈ ಸ್ಥಿತಿ ಕಂಡು ಬೇಸರಗೊಂಡ ವಧು ಮದುವೆಯನ್ನೇ ನಿರಾಕರಿಸಿದ್ದಾಳೆ.

VISTARANEWS.COM


on

Drunken Groom
Koo

ಮಧ್ಯಪ್ರದೇಶ: ‘ಒಂದು ಗಂಡಿಗೊಂದು ಹೆಣ್ಣು ಹೇಗೋ ಏನೋ ಹೊಂದಿಕೊಂಡು/ ದುಃಖ ಹಗುರ ಏನುತಿರೆ/ ಪ್ರೇಮವೇನು ಹಾಸ್ಯವೇ?’ ನರಸಿಂಹ ಸ್ವಾಮಿಯವರ ಈ ಕವಿತೆಯ ಸಾಲು ಕೇಳುತ್ತಿದ್ದರೆ ಮದುವೆ ಆಗದಿದ್ದವರಿಗೂ ಒಮ್ಮೆ ಮದುವೆಯಾಗಿಬಿಡೋಣ ಅನಿಸುತ್ತದೆ. ಸಂಗಾತಿಯ ಬಗ್ಗೆ, ಮದುವೆ ಬಗ್ಗೆ ಸಾಕಷ್ಟು ಕನಸುಗಳನ್ನು ಈ ಕವಿತೆ ಹಸಿ ಎದೆಯಲ್ಲಿ ಪ್ರೇಮಾಂಕುರದ ಬೀಜ ಬಿತ್ತುತ್ತದೆ. ತಮ್ಮ ಮದುವೆಯನ್ನು ಹಾಗೇ ಆಚರಿಸಬೇಕು, ಈ ರೀತಿಯಾಗಿ ಮಾಡಬೇಕು ಎಂದು ಈಗಿನವರು ತಿಂಗಳಾನುಗಟ್ಟಲೆಯಿಂದ ತಯಾರಿ ನಡೆಸುತ್ತಾರೆ. ಆದರೆ ಇಲ್ಲೊಬ್ಬ ವರ ಮಹಾಶಯ ಸಿಕಾಪಟ್ಟೆ ಕುಡಿದು (Drunken Groom) ನಡೆಯಬೇಕಿದ್ದ ತನ್ನ ಮದುವೆಯನ್ನೇ ಮುರಿದುಕೊಂಡ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ಜಿಲ್ಲೆಯಲ್ಲಿ ನಡೆದಿದೆ.

ತನ್ನನ್ನು ವರಿಸುವವನು ಬರುತ್ತಾನೆ ಎಂದು ವಧು ಕನಸು ಕಂಗಳಿನಿಂದ ಕಾಯುತ್ತಿದ್ದರೆ ಅವಳ ಕನಸಿಗೆ ವರನು ತಣ್ಣೀರು ಎರೆಚಿದ್ದಾನೆ. ಭಿಂಡ್ ಜಿಲ್ಲೆಯ ಲಹಾರ್ ಮೂಲದ ವೀರೇಂದ್ರ ರಾಜಾವತ್ ಅವರ ಮಗನ ಮದುವೆಯ ಮೆರವಣಿಗೆ ಬ್ಯಾಂಡ್ ವಾದ್ಯಗಳ ಮೂಲಕ  ವಧುವಿನ ಮನೆಯ ಬಾಗಿಲಿಗೆ ಬಂದಿತ್ತು. ಆದರೆ ವರ ಕುಡಿದ ಮತ್ತಿನಲ್ಲಿದ್ದ. ಕುದುರೆಯಿಂದ ಇಳಿಯುತ್ತಿದ್ದಂತೆ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ. ಎದ್ದು ನಿಲ್ಲಲು ಆಗದ ಸ್ಥಿತಿಯಲ್ಲಿ ಆತ ಇದ್ದ. ಅಲ್ಲಿದ್ದವರು ಕೆಳಗೆ ಬಿದ್ದ ವರನನ್ನು ಮೇಲಕ್ಕೆತ್ತಲು ಸಹಾಯ ಮಾಡಿದ್ದಾರೆ. ಆದರೆ ಆತನಡೆಯುವಾಗ ಮತ್ತೆ ಎಡವಿ ಬಿದ್ದಿದ್ದಾನೆ. ಹಾಗೇ ಅವನ ಸ್ನೇಹಿತರು ಕೂಡ ಕುಡಿದ ಮತ್ತಿನಲ್ಲಿದ್ದಿದ್ದರು ಎನ್ನಲಾಗಿದೆ.

ವರನ ಈ ಸ್ಥಿತಿ ಕಂಡು ಬೇಸರಗೊಂಡ ವಧು ಮದುವೆಯನ್ನೇ ರದ್ದುಗೊಳಿಸಿದ್ದಾಳೆ. ಆಕೆಯ ಮನವೊಲಿಸಲು ಕುಟುಂಬಸ್ಥರು ಹಾಗೂ ವರನ ಕಡೆಯವರು ಎಷ್ಟೇ ಪ್ರಯತ್ನಿಸಿದರೂ ಆಕೆ ತನ್ನ ನಿಲುವನ್ನು ಬದಲಾಯಿಸಿದೆ ಮದುವೆಯಾಗಲು ನಿರಾಕರಿಸಿದ್ದಾಳೆ. ಇದರಿಂದ ವರನ ಕಡೆಯವರು ಕೋಪಗೊಂಡಿದ್ದು, ಎರಡು ಕುಟುಂಬದ ನಡುವೆ ವಾಗ್ವಾದ ಏರ್ಪಟ್ಟಿದೆ. ಆ ವೇಳೆ ವರನ ಕಡೆಯವರು ವಧುವಿನ ಕುಟುಂಬದವರ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ವಧುವಿನ ಕಡೆಯವರು ಹಾಗೂ ವರನ ಕಡೆಯವರು ಪರಸ್ಪರರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈ ಹಿನ್ನಲೆಯಲ್ಲಿ ವರ ಮತ್ತು ವಧುವಿನ ಕಡೆಯವರು ರಾತ್ರಿಯಿಡೀ ಪೊಲೀಸ್ ಠಾಣೆಯಲ್ಲಿ ಇರುವಂತಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: Viral Video: 7 ಮಕ್ಕಳನ್ನು ದೇವರು ಕೊಟ್ಟಿದ್ದಾದರೆ ಬಡತನಕ್ಕೆ ಮೋದಿ ಹೇಗೆ ಕಾರಣ? ಮುಸ್ಲಿಂ ಮಹಿಳೆಗೆ ತರಾಟೆ!

ವರ ಕುಡಿದ ಅಮಲಿನಲ್ಲಿ ಬಂದಿದ್ದು, ವಧುವಿನ ಮನೆ ಬಾಗಿಲಿಗೆ ಬಂದ ಕೂಡಲೇ ಕುಸಿದು ಬಿದ್ದಿದ್ದಾನೆ. ಇದನ್ನು ಕಂಡು ವಧು ಆತನನ್ನು ಮದುವೆಯಾಗಲು ನಿರಾಕರಿಸಿ ಬಾರಾತ್ ಅನ್ನು ವಾಪಾಸ್ ಕಳುಹಿಸಿದ್ದಾಳೆ. ಇದರಿಂದ ಪರಸ್ಪರ ಹಲ್ಲೆ ಮತ್ತು ಸುಲಿಗೆ ಆರೋಪದಡಿ ಎರಡು ಕಡೆಯವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಸದ್ಯ ತನಿಖೆ ನಡೆಯುತ್ತಿದೆ ಎಂದು ಅಲ್ಲನ ನಗರ ಠಾಣಾ ಪ್ರಭಾರಿ ರಾಜ್ ಕುಮಾರ್ ತಿಳಿಸಿದ್ದಾರೆ.

Continue Reading
Advertisement
Uttarakaanda Movie bande kaaka rangayana Raghu
ಸ್ಯಾಂಡಲ್ ವುಡ್18 mins ago

Uttarakaanda Movie: ‘ಬಂಡೆ ಕಾಕಾ’ ನಾಗಿ ‘ಉತ್ತರಕಾಂಡ’ದಲ್ಲಿ ಕಾಣಿಸಿಕೊಳ್ಳಲಿದ್ದಾರೆ ರಂಗಾಯಣ ರಘು

India Economy
ಪ್ರಮುಖ ಸುದ್ದಿ21 mins ago

Indian Economy : ಭಾರತದ ಆರ್ಥಿಕತೆ ಚೀನಾಕ್ಕಿಂತ ವೇಗವಾಗಿ ಬೆಳೆಯುತ್ತಿದೆ ಎಂದ ಐಎಮ್​ಎಫ್​

ರಾಜಕೀಯ24 mins ago

Neha Murder Case: ನೇಹಾ ಕೊಲೆ ಪ್ರಕರಣ ರಾಜಕೀಯಕ್ಕೆ ಬಳಕೆ; ಕೊಲೆಗಾರನಿಗೆ ಉಗ್ರ ಶಿಕ್ಷೆ ಎಂದ ಸಿದ್ದರಾಮಯ್ಯ

Road Accident in karnataka
ಕೊಡಗು26 mins ago

Road Accident : ಯಮ ರೂಪಿ ಕೆಎಸ್‌ಆರ್‌ಟಿಸಿ ಬಸ್‌ಗೆ ಸ್ಕೂಟರ್‌ ಸವಾರ ಸಾವು, ಬಾಲಕ ಗಂಭೀರ

Gut Health
ಲೈಫ್‌ಸ್ಟೈಲ್41 mins ago

Gut Health: ನಿಮ್ಮ ಕರುಳಿನ ಆರೋಗ್ಯಕ್ಕಾಗಿ ಬೇಸಿಗೆಯಲ್ಲಿ ಈ ಡ್ರಿಂಕ್ಸ್ ಸೇವಿಸಿ

Viral news
ವೈರಲ್ ನ್ಯೂಸ್42 mins ago

Viral news: ಚುನಾವಣೆಗೆ ಮೊದಲೇ 19 ಲಕ್ಷ ಇವಿಎಂ ಕಾಣೆಯಾಗಿದ್ದು ನಿಜವೇ? ಏನಿದರ ಅಸಲಿಯತ್ತು ?

Manjummel Boys ott malayalam to premiere on may
ಮಾಲಿವುಡ್47 mins ago

Manjummel Boys: ಕನ್ನಡದಲ್ಲೂ ಬರಲಿದೆ ʻಮಂಜುಮ್ಮೆಲ್ ಬಾಯ್ಸ್ʼ? ಒಟಿಟಿಗೆ ಯಾವಾಗ?

China Missile
ವಿದೇಶ50 mins ago

China Missile : ಪಾಕಿಸ್ತಾನಕ್ಕೆ ಗುಟ್ಟಾಗಿ ಕ್ಷಿಪಣಿ ಕಳುಹಿಸಿದ ಚೀನಾದ ಎರಡು ಕಂಪನಿಗಳಿಗೆ ಅಮೆರಿಕದ ನಿರ್ಬಂಧ

Rain news
ಮಳೆ51 mins ago

Rain News : ಶುರುವಾಯ್ತು ಮಳೆ ಅವಘಡ; ಮಲಗಿದ್ದಾಗ ಚಾವಣಿ ಕುಸಿದು ಮಹಿಳೆ ಸಾವು

50 out of syllabus question in CET 2024 exam Re examination or grace marks
ಶಿಕ್ಷಣ1 hour ago

CET 2024 exam: ಸಿಇಟಿಯಲ್ಲಿ 50 ಔಟ್ ಆಫ್ ಸಿಲೆಬಸ್ ಪ್ರಶ್ನೆ; ಮರು ಪರೀಕ್ಷೆ ಅಥವಾ ಗ್ರೇಸ್‌ ಮಾರ್ಕ್ಸ್‌? ಇಂದು ನಿರ್ಧಾರ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Rain News
ಮಳೆ2 hours ago

Rain News : ಸಿಡಿಲಿಗೆ ವ್ಯಕ್ತಿ ಸೇರಿ ಜಾನುವಾರುಗಳು ಮೃತ್ಯು; ವ್ಯಾಪಕ ಮಳೆಗೆ ಜನರು ಕಂಗಾಲು

Neha Murder Case
ಹುಬ್ಬಳ್ಳಿ3 hours ago

Neha Murder Case : ನನ್ನ ಮಗನಿಗೆ ಶಿಕ್ಷೆ ಆಗಲಿ; ಇಬ್ಬರೂ ಲವ್‌ ಮಾಡ್ತಿದ್ದರು ಅನ್ನೋದು ಸತ್ಯ ಎಂದ ಫಯಾಜ್‌ ತಾಯಿ

Dina Bhavishya
ಭವಿಷ್ಯ9 hours ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಕೂಡಿಬರಲಿದೆ ಶುಭ ಘಳಿಗೆ

Neha Murder Case
ಹುಬ್ಬಳ್ಳಿ23 hours ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ1 day ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ3 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ4 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20245 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20246 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

ಟ್ರೆಂಡಿಂಗ್‌