Murder Case: ಪ್ರಿಯತಮೆಯ ಕತ್ತು ಹಿಸುಕಿ ಕೊಂದು ಹೂತಿಟ್ಟ ಪ್ರಿಯಕರ - Vistara News

ಕ್ರೈಂ

Murder Case: ಪ್ರಿಯತಮೆಯ ಕತ್ತು ಹಿಸುಕಿ ಕೊಂದು ಹೂತಿಟ್ಟ ಪ್ರಿಯಕರ

Murder Case: ಎರಡು ವರ್ಷದಿಂದ ಪ್ರೀತಿಸುತ್ತಿದ್ದ ಯುವತಿಯನ್ನು ಪ್ರಿಯಕರನೇ ಕತ್ತು ಹಿಸುಕಿ ಕೊಂದಿರುವ ಅಮಾನುಷ ಘಟನೆ ಹೊಸನಗರದ ತಾಲೂಕಿನ ಹೆದ್ದಾರಿಪುರ ಗ್ರಾಮದಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದ ಸೌಮ್ಯಾ ಮೃತ ಯುವತಿ. ಕೊಲೆ ಮಾಡಿದವನನ್ನು ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಯುವಕ ಸೃಜನ್ ಎಂದು ಗುರುತಿಸಲಾಗಿದೆ.

VISTARANEWS.COM


on

Murder Case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿವಮೊಗ್ಗ: ಎರಡು ವರ್ಷದಿಂದ ಪ್ರೀತಿಸುತ್ತಿದ್ದ ಯುವತಿಯನ್ನು ಪ್ರಿಯಕರನೇ ಕತ್ತು ಹಿಸುಕಿ ಕೊಂದಿರುವ ಅಮಾನುಷ ಘಟನೆ ಹೊಸನಗರದ ತಾಲೂಕಿನ ಹೆದ್ದಾರಿಪುರ ಗ್ರಾಮದಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದ ಸೌಮ್ಯಾ ಮೃತ ಯುವತಿ. ಕೊಲೆ ಮಾಡಿದವನನ್ನು ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಯುವಕ ಸೃಜನ್ ಎಂದು ಗುರುತಿಸಲಾಗಿದೆ (Murder Case).

ಸೌಮ್ಯಾ ಮತ್ತು ಸೃಜನ್ ಕಳೆದ ಎರಡೂವರೆ ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಈ ಮಧ್ಯೆ ತನ್ನನ್ನು ಮದುವೆಯಾಗುವಂತೆ ಸೌಮ್ಯಾ ಒತ್ತಾಯಿಸುತ್ತಿದ್ದಳು. ಇದರಿಂದ ಬೇಸತ್ತ ಸೃಜನ್ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಕೊಲೆ ಮಾಡಿದ ಬಳಿಕ ಸೃಜನ್ ಮೃತದೇಹವನ್ನು ಶಿವಮೊಗ್ಗದ ಮುಂಬಾಳು ಗ್ರಾಮದ ಬಳಿ ಹೂತಿಟ್ಟಿದ್ದ. ಯುವತಿಯ ಪೋಷಕರು ನಾಪತ್ತೆ ಪ್ರಕರಣ ದಾಖಲಿಸಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಸೃಜನ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ತೀರ್ಥಹಳ್ಳಿಯಲ್ಲಿ ಫೈನಾನ್ಸ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ಸೃಜನ್‌ ಕೊಪ್ಪಕ್ಕೆ ಹಣ ವಸೂಲಿಗೆ ಹೋಗುತ್ತಿದ್ದ ವೇಳೆ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ಸೌಮ್ಯಾಳ ಪರಿಚಯವಾಗಿತ್ತು. ಇಬ್ಬರ ನಡುವಿನ ಪರಿಚಯ ನಂತರ ಪ್ರೀತಿಯಾಗಿ ಬದಲಾಗಿತ್ತು. ಬೇರೆ ಬೇರೆ ಸಮುದಾಯ ಆಗಿದ್ದಕ್ಕೆ ಯುವಕನ ಮನೆಯವರು ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಇದರಿಂದ ಸೃಜನ್‌ ಕ್ರಮೇಣ ಸೌಮ್ಯಾಳಿಂದ ದೂರವಾಗತೊಡಗಿದ್ದ. ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಲು ಮುಂದಾಗಿದ್ದ ಸೃಜನ್‌ ಬಳಿ ಸೌಮ್ಯಾ ಮದುವೆಯಾಗುವಂತೆ ಆಗಾಗ ಒತ್ತಾಯಿಸುತ್ತಿದ್ದಳು ಎನ್ನಲಾಗಿದೆ.

ಘಟನೆ ವಿವರ

ತೀರ್ಥಹಳ್ಳಿಗೆ ಹೋಗುತ್ತೇನೆ ಎಂದು ಹೇಳಿ ಜುಲೈ 2ರಂದು‌ ಸೌಮ್ಯಾ ಕೊಪ್ಪದಿಂದ ತೀರ್ಥಹಳ್ಳಿಗೆ ಬಂದಿದ್ದಳು. ಬಳಿಕ ತನ್ನ ಪ್ರಿಯತಮನನ್ನು ಭೇಟಿ ಮಾಡಿ ಮನೆಗೆ ‌ಕರೆದುಕೊಂಡು‌ ಹೋಗುವಂತೆ ‌ಒತ್ತಡ ಹಾಕಿದ್ದಳು. ನಮ್ಮ ಮನೆಗೆ ಈಗ ಬರಬೇಡ. ನಿಮ್ಮ ಮನೆಗೆ ವಾಪಸ್ ಹೋಗು ಎಂದು ಸೃಜನ್‌ ಸಾಗಹಾಕಲು ಮುಂದಾಗಿದ್ದ. ಇದಕ್ಕಾಗಿ ಇಬ್ಬರ ನಡುವೆ ಜಗಳವೇ ನಡೆದಿತ್ತು. ಬಳಿಕ ಸ್ವಲ್ಪ ಸಮಾಧಾನಗೊಂಡಿದ್ದರು.

ತೀರ್ಥಹಳ್ಳಿಯಿಂದ ಹೆದ್ದಾರಿಪುರಕ್ಕೆ ಬಂದ ಇಬ್ಬರ ನಡುವೆ ಮತ್ತೆ ವಾಗ್ವಾದ ಆರಂಭವಾಗಿತ್ತು. ಸಿಟ್ಟಿನಿಂದ ಸೃಜನ್‌ ಸೌಮ್ಯಾಳ ವೇಳೆ ಬಲವಾಗಿ ಹಲ್ಲೆ ಮಾಡಿದ್ದ. ಬಳಿಕ ಕತ್ತು ಹಿಸುಕಿದ್ದ. ಪರಿಣಾಮವಾಗಿ ಸ್ಥಳದಲ್ಲೇ ಆಕೆ ಮೃತಪಟ್ಟಿದ್ದಳು. ನಂತರ ಸೌಮ್ಯಾಳ ಶವವನ್ನು ಮುಂಬಾಳು ಬಳಿ ಹೂತಿಟ್ಟು ಸೃಜನ್‌ ಮನೆಗೆ ತೆರಳಿದ್ದ. ಈ ನಡುವೆ ತಮ್ಮ ಮಗಳು ನಾಪತ್ತೆಯಾಗಿದ್ದಾಳೆ ಎಂದು ಸೌಮ್ಯಾ ಪೋಷಕರು ಕೊಪ್ಪ ಪೊಲೀಸರಿಗೆ ದೂರು ನೀಡಿದ್ದರು. ಅನುಮಾನ ಬಂದು ಸೃಜನ್‌ನನ್ನು ಪೊಲೀಸರು ವಿಚಾರಣೆ ನಡೆಸಿದ್ದರು. ಈ ವೇಳೆ ಪೊಲೀಸರ ಎದುರು ಸೌಮ್ಯಾಳನ್ನು ಹೂತಿಟ್ಟ ಸ್ಥಳದ ರಹಸ್ಯವನ್ನು ಸೃಜನ್‌ ಬಿಚ್ಚಿಟ್ಟಿದ್ದ. ಇಂದು ಎಸಿ ಸಮ್ಮುಖದಲ್ಲಿ ಯುವತಿಯ ಶವ ಹೊರಗೆ ತೆಗೆಯಲು ಸಿದ್ದತೆ ನಡೆಯುತ್ತಿದೆ. ಸ್ಥಳದಲ್ಲಿ ಪೊಲೀಸರು ಮೊಕ್ಕಂ ಹೂಡಿದ್ದಾರೆ. ಮಂಗಳವಾರ ಬೆಂಗಳೂರಿನಲ್ಲಿಯೂ ಪ್ರಿಯಕರ ತನ್ನ ಪ್ರಿಯತಮೆಯನ್ನು ಕೊಂದ ಘಟನೆ ನಡೆದಿದೆ. ಬಿಹಾರ ಮೂಲದ ಕೃತಿ ಕುಮಾರಿ ಮೃತ ಯುವತಿ. ಸದ್ಯ ತಲೆ ಮರೆಸಿಕೊಂಡ ಪ್ರಿಯಕರನಿಗಾಗಿ ಹುಡುಕಾಟ ನಡೆಯುತ್ತಿದೆ.

ಇದನ್ನೂ ಓದಿ: Murder Case: ಜಮೀನು ವಿವಾದಕ್ಕೆ ಚಿಕ್ಕಬಳ್ಳಾಪುರದಲ್ಲಿ ಹರಿಯಿತು ನೆತ್ತರು; ಸಂಬಂಧಿಕನಿಂದಲೇ ತಂದೆ-ಮಗನ ಕೊಲೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Cat Kidnaping Case: ಬೆಕ್ಕು ಅಪಹರಣ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ನಿಂದ ಮಹತ್ವದ ತೀರ್ಪು

Cat Kidnaping Case: ನ್ಯಾಯಮೂರ್ತಿ ನಾಗಪ್ರಸನ್ನ ಇದ್ದ ನ್ಯಾಯಪೀಠ ಮಧ್ಯಂತರ ಜಾಮೀನು ನೀಡಿದೆ. ಹುಸೇನ್ ಅವರ ನೆರೆಹೊರೆಯವರು ಡೈಸಿ ಕಾಣೆಯಾದ ಮೇಲೆ ಅವರ ವಿರುದ್ಧ ಪೊಲೀಸ್ ದೂರು ದಾಖಲಿಸಿದರು. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 504, 506 ಮತ್ತು 509 ರ ಅಡಿಯಲ್ಲಿ ಪೊಲೀಸರು ಆತನ ಮೇಲೆ ಕ್ರಿಮಿನಲ್ ಬೆದರಿಕೆ, ಶಾಂತಿ ಭಂಗ ಮತ್ತು ಮಹಿಳೆಯ ನಮ್ರತೆಗೆ ಅವಮಾನ ಮಾಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದಾರೆ.

VISTARANEWS.COM


on

Cat kidnaping Case
Koo

ಬೆಂಗಳೂರು: ನೆರೆ ಮನೆಯ ಬೆಕ್ಕನ್ನು ಅಪಹರಿಸಿ ತನ್ನ ಮನೆಯಲ್ಲಿ ಕೂಡಿ ಹಾಕಿದ ಆರೋಪ ಎದುರಿಸುತ್ತಿದ್ದ ವ್ಯಕ್ತಿ ವಿರುದ್ಧದ ವಿಚಾರಣೆಗೆ ಕರ್ನಾಟಕ ಹೈಕೋರ್ಟ್‌ ತಡೆಯಾಜ್ಞೆ(High Court stay) ತಂದಿದೆ. ಡೈಸಿ ಎಂಬ ಬೆಕ್ಕನ್ನು ಅಪಹರಿಸಿದ್ದ(Cat Kidnaping Case) ಆರೋಪದಲ್ಲಿ ತಾಹಾ ಹುಸೇನ್‌ ಎಂಬಾತನಿಗೆ ಹೈಕೋರ್ಟ್‌ ಮಧ್ಯಂತರ ರಿಲೀಫ್‌ ಕೊಟ್ಟಿದ್ದು, ಆತನ ವಿರುದ್ಧ ಎಲ್ಲಾ ಮೊಕದ್ದಮೆಗೆ ತಡೆಯಾಜ್ಞೆ ತಂದಿದೆ.

ನ್ಯಾಯಮೂರ್ತಿ ನಾಗಪ್ರಸನ್ನ ಇದ್ದ ನ್ಯಾಯಪೀಠ ಮಧ್ಯಂತರ ಜಾಮೀನು ನೀಡಿದೆ. ಹುಸೇನ್ ಅವರ ನೆರೆಹೊರೆಯವರು ಡೈಸಿ ಕಾಣೆಯಾದ ಮೇಲೆ ಅವರ ವಿರುದ್ಧ ಪೊಲೀಸ್ ದೂರು ದಾಖಲಿಸಿದರು. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 504, 506 ಮತ್ತು 509 ರ ಅಡಿಯಲ್ಲಿ ಪೊಲೀಸರು ಆತನ ಮೇಲೆ ಕ್ರಿಮಿನಲ್ ಬೆದರಿಕೆ, ಶಾಂತಿ ಭಂಗ ಮತ್ತು ಮಹಿಳೆಯ ನಮ್ರತೆಗೆ ಅವಮಾನ ಮಾಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದಾರೆ.

ಆಪಾದನೆಯ ತಿರುಳು ಏನೆಂದರೆ, ಪ್ರತಿವಾದಿ ನಂ.2 ರ ಒಡೆತನದ ಡೈಸಿ ಎಂಬ ಹೆಸರಿನ ಬೆಕ್ಕು ಪಕ್ಕದ ಮನೆಗಳ ಗೋಡೆಯಿಂದ ಗೋಡೆಗೆ ಜಿಗಿದು ಕಾಣೆಯಾಗಿತ್ತು. ಆದ್ದರಿಂದ, ಬೆಕ್ಕನ್ನು ಹಿಡಿದಿದ್ದಕ್ಕಾಗಿ ಈ ಅರ್ಜಿದಾರರ ವಿರುದ್ಧ ಮೇಲ್ಕಂಡ ಅಪರಾಧಗಳಿಗೆ ದೂರು ನೀಡಲಾಗಿದೆ. ಅರ್ಜಿದಾರರ ಮನೆಯಲ್ಲಿ ಬೆಕ್ಕು ಇರುವುದು ಸಿಸಿಟಿವಿ ದೃಶ್ಯಾವಳಿಗಳಿಂದ ತಿಳಿದುಬರುತ್ತದೆ ಎಂದು ಆರೋಪಿಸಲಾಗಿದೆ, ಎಂದು ನ್ಯಾಯಾಲಯವು ಹುಸೇನ್ ವಿರುದ್ಧದ ಕ್ರಿಮಿನಲ್ ವಿಚಾರಣೆಗೆ ತಡೆಯಾಜ್ಞೆ ನೀಡಿದೆ.

ಬೆಕ್ಕುಗಳು ಕಿಟಕಿಯಿಂದ ಒಳಗೆ ಬರುತ್ತವೆ ಮತ್ತು ಹೊರಗೆ ಹೋಗುತ್ತವೆ ಮತ್ತು ಐಪಿಸಿಯ ಸೆಕ್ಷನ್ 504, 506 ಮತ್ತು 509 ರ ಅಡಿಯಲ್ಲಿ ಆಪಾದಿತ ಅಪರಾಧಗಳಿಗೆ ಇಂತಹ ಕ್ಷುಲ್ಲಕ ದೂರಿನ ಮೇಲೆ ಮುಂದಿನ ವಿಚಾರಣೆಗೆ ಅನುಮತಿ ನೀಡುವುದು ಕ್ರಿಮಿನಲ್ ನ್ಯಾಯ ವ್ಯವಸ್ಥೆಗೆ ಅಡ್ಡಿಪಡಿಸುತ್ತದೆ. ತನ್ನ ಬೆಕ್ಕನ್ನು ತೆಗೆದುಕೊಂಡು ಹೋಗಿರುವುದಾಗಿ ನೆರೆಹೊರೆಯವರು ನೀಡಿದ ದೂರಿನ ಮೇರೆಗೆ ಪೊಲೀಸರು ಆತನ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಹುಸೇನ್ ಅವರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು.

ಡೈಸಿ ಬೆಕ್ಕು ಹುಸೇನ್ ಮನೆಯಲ್ಲಿ ಬಂಧಿಯಾಗಿದೆ ಎಂದು ಪೊಲೀಸರು ಹೇಗೆ ತೀರ್ಮಾನಿಸಿದರು ಎಂದು ನ್ಯಾಯಾಲಯ ಪ್ರಶ್ನಿಸಿದಾಗ, ಪೊಲೀಸರು ಆ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಹುಸೇನ್ ಅವರ ಮನೆಯಲ್ಲಿ ಬೆಕ್ಕು ಇರುವುದು ಕಂಡುಬಂದಿದೆ. ಬೆಕ್ಕಿಗೆ ಗೋಡೆ ಹತ್ತಿ ನೆರೆ ಮನೆಗೆ ಹೋಗುವ ಅಭ್ಯಾಸ ಇತ್ತು ಎಂದು ವಕೀಲರು ಹೈಕೋರ್ಟ್‌ಗೆ ತಿಳಿಸಿದರು.

ಹುಸೇನ್ ವಿರುದ್ಧದ ಎಲ್ಲಾ ಪ್ರಕ್ರಿಯೆಗಳಿಗೆ ತಡೆ ನೀಡಿದ ಹೈಕೋರ್ಟ್, ಇಂತಹ ಕ್ಷುಲ್ಲಕ ಪ್ರಕರಣಗಳಲ್ಲಿ ಮುಂದಿನ ವಿಚಾರಣೆಗೆ ಅನುಮತಿ ನೀಡುವುದು ಕ್ರಿಮಿನಲ್ ನ್ಯಾಯ ವ್ಯವಸ್ಥೆಗೆ ಅಡ್ಡಿಪಡಿಸುತ್ತದೆ ಎಂದು ಹೇಳಿದೆ. ಆದ್ದರಿಂದ ಅರ್ಜಿ ಇತ್ಯರ್ಥವಾಗುವವರೆಗೆ ಮುಂದಿನ ಪ್ರಕ್ರಿಯೆಗಳಿಗೆ ತಡೆ ನೀಡಿ ಮಧ್ಯಂತರ ಆದೇಶ ನೀಡಿದೆ.

ಇದನ್ನೂ ಓದಿ:Rahul Gandhi: ರಾಹುಲ್‌ ಗಾಂಧಿಯನ್ನು ಭೇಟಿಯಾದ ರೈತರು; ಆ.15ರಂದು ದೇಶಾದ್ಯಂತ ರ‍್ಯಾಲಿಗೆ ನಿರ್ಧಾರ!

Continue Reading

ಕರ್ನಾಟಕ

Bitcoin Scam: ಬಿಟ್‌‌ ಕಾಯಿನ್ ಹಗರಣ; ಆರೋಪಿಗಳಾದ ಶ್ರೀಕಿ, ಖಂಡೇಲ್ ವಾಲಾ ಜೈಲಿನಿಂದ ಬಿಡುಗಡೆ

Bitcoin Scam: ಆರೋಪಿಗಳಾದ ಶ್ರೀಕಿ ಮತ್ತು ರಾಬಿನ್ ಖಂಡೇಲ್ ವಾಲಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು ತುಮಕೂರಿನ ಒಂದನೇ ಹೆಚ್ಚುವರಿ ಹಿರಿಯ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ, ಆರೋಪಿಗಳಿಗೆ ಜಾಮೀನು ನೀಡಿದೆ. ಹೀಗಾಗಿ ಇಬ್ಬರೂ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

VISTARANEWS.COM


on

Bitcoin Scam
ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ
Koo

ಬೆಂಗಳೂರು: ಬಹುಕೋಟಿ ಬಿಟ್ ಕಾಯಿನ್ ಹಗರಣದಲ್ಲಿ (Bitcoin Scam) ಬಂಧನವಾಗಿದ್ದ ಆರೋಪಿಗಳಾದ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ, ಖಂಡೇಲ್ ವಾಲಾ, ಜಾಮೀನು ಪಡೆದು ಬಿಡುಗಡೆಯಾಗಿದ್ದಾರೆ. ಬಿಟ್‌ ಕಾಯಿನ್ ಹಗರಣ ಸಂಬಂಧ ತುಮಕೂರು ತಿಲಕ್‌ಪಾರ್ಕ್‌ನಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ಎಸ್‌ಐಟಿ ರಚನೆ ಮಾಡಿತ್ತು. ಇದೀಗ ಇಬ್ಬರು ಆರೋಪಿಗಳು ಜಾಮೀನು ಪಡೆದು ಹೊರಬಂದಿದ್ದಾರೆ.

ಶ್ರೀಕಿ ಮತ್ತು ರಾಬಿನ್ ಖಂಡೇಲ್ ವಾಲಾ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು ತುಮಕೂರಿನ ಒಂದನೇ ಹೆಚ್ಚುವರಿ ಹಿರಿಯ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ, ಆರೋಪಿಗಳಿಗೆ ಜಾಮೀನು ನೀಡಿದೆ. ಹೀಗಾಗಿ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಪ್ರಕರಣದ ಒಂದನೇ ಆರೋಪಿ ಶ್ರೀಕಿ 50 ಸಾವಿರ ಮೊತ್ತದ ಬಾಂಡ್‌ ಹಾಗೂ ಒಬ್ಬರ ಭದ್ರತೆ ನೀಡಬೇಕು ಮತ್ತು ಎರಡನೇ ಆರೋಪಿ ರಾಬಿನ್‌ ಖಂಡೇಲ್‌ವಾಲಾ 25 ಸಾವಿರ ಮೊತ್ತದ ನಗದು ಭದ್ರತೆ ಸೇರಿ ಇತರೆ ಷರತ್ತುಗಳನ್ನು ವಿಧಿಸಲಾಗಿದೆ.

ಸರ್ಕಾರ ತಮ್ಮ‌ ವಿರುದ್ಧ ಕೋಕಾ (ಕರ್ನಾಟಕ ಸಂಘಟಿತ ಅಪರಾಧ ತಡೆ) ಕಾಯ್ದೆ–2000 ಅನ್ನು ಅನ್ವಯಿಸಿತ್ತು. ಇತ್ತೀಚೆಗಷ್ಟೇ ಹೈಕೋರ್ಟ್, ಕೋಕಾ ಕಾಯ್ದೆ ಹೇರಿದ್ದ ಆದೇಶವನ್ನು ರದ್ದುಪಡಿಸಿದೆ. ಹೀಗಾಗಿ ಪ್ರಕರಣದ ತನಿಖೆ ನಡೆಸಿರುವ, ವಿಶೇಷ ತನಿಖಾ ತಂಡ (ಎಸ್ಐಟಿ) 60 ದಿನಗಳ ಒಳಗಾಗಿ ವಿಚಾರಣಾ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಬೇಕಿತ್ತು. ಆದರೆ, 60 ದಿನ ಕಳೆದರೂ ಯಾವುದೇ (ಪ್ರಾಥಮಿಕ ಅಥವಾ ಅಂತಿಮ‌ ವರದಿ) ಆರೋಪ ಪಟ್ಟಿ ಸಲ್ಲಿಸಿಲ್ಲ. ಹೀಗಾಗಿ, ಸುಪ್ರೀಂ ಕೋರ್ಟ್ ತೀರ್ಪುಗಳ ಪ್ರಕಾರ ನಾವು ಕಾನೂನು ಬದ್ಧ ಜಾಮೀನು ಪಡೆಯಲು ಅರ್ಹರಾಗಿದ್ದು ಜಾಮೀನು ಮಂಜೂರು ಮಾಡಬೇಕು ಎಂದು ಅರ್ಜಿದಾರರು ಕೋರಿದ್ದರು.

ಇದನ್ನೂ ಓದಿ: Murder Case: ಜಮೀನು ವಿವಾದಕ್ಕೆ ಚಿಕ್ಕಬಳ್ಳಾಪುರದಲ್ಲಿ ಹರಿಯಿತು ನೆತ್ತರು; ಸಂಬಂಧಿಕನಿಂದಲೇ ತಂದೆ-ಮಗನ ಕೊಲೆ

ಬಹುಕೋಟಿ ಮೌಲ್ಯದ ಬಿಟ್ ಕಾಯಿನ್ ಕಳವು ಮಾಡಿ ಅವುಗಳನ್ನು ಪಶ್ಚಿಮ ಬಂಗಾಳದ ತನ್ನ ಸಹಚರ ರಾಬಿನ್ ಖಂಡೇಲ್ ವಾಲಾಗೆ ವರ್ಗಾವಣೆ ಮಾಡಿದ ಆರೋಪ ಶ್ರೀಕಿ ಮೇಲಿದೆ. ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಗಳನ್ನು ಬಿಡುಗಡೆ ಮಾಡಲಾಗಿದೆ.

Prajwal Revanna Case: ಪ್ರಜ್ವಲ್ ರೇವಣ್ಣಗೆ ಹಿನ್ನಡೆ; 4ನೇ ಕೇಸ್‌ನಲ್ಲೂ ನಿರೀಕ್ಷಣಾ ಜಾಮೀನು ಅರ್ಜಿ ವಜಾ!

Prajwal Revanna Case
Prajwal Revanna Files Anticipatory Bail Plea Ahead Of His Returing To India

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna Case) ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದೆ. ನಾಲ್ಕನೇ ಕೇಸ್‌ನಲ್ಲಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬುಧವಾಋ ವಜಾಗೊಳಿಸಿದೆ.

ಈ ಹಿಂದೆ ಮೂರು ಅರ್ಜಿಗಳನ್ನು ಸೆಷನ್ಸ್ ಕೋರ್ಟ್ ವಜಾ ಮಾಡಿತ್ತು. ಇದರಲ್ಲಿ ಒಂದು ಜಾಮೀನು ಅರ್ಜಿ, ಎರಡು ನಿರೀಕ್ಷಣಾ ಜಾಮೀನು ಅರ್ಜಿ ಸೇರಿವೆ. ಇದೀಗ ಮೂರನೇ ನಿರೀಕ್ಷಣಾ ಜಾಮೀನು ಅರ್ಜಿ ಕೂಡ ತಿರಸ್ಕೃತಗೊಂಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾ. ಸಂತೋಷ್ ಗಜಾನನ ಭಟ್ ಅವರು ಅರ್ಜಿ ವಜಾಗೊಳಿಸಿದ್ದಾರೆ. ಇದರಿಂದ ನಾಲ್ಕನೇ ಕೇಸ್‌ನಲ್ಲಿಯೂ ಪ್ರಜ್ವಲ್‌ಗೆ ಹಿನ್ನಡೆಯಾದಂತಾಗಿದೆ.

ಇದನ್ನೂ ಓದಿ | BMTC Bus: ಬಿಎಂ‌ಟಿಸಿ ಬಸ್‌ನಲ್ಲಿ ಹಿಂದಿ ಬೋರ್ಡ್; ಕನ್ನಡ ಮಾಯವಾಗಿದ್ದಕ್ಕೆ ಸಾರ್ವಜನಿಕರ ಆಕ್ರೋಶ!

ಏನಿದು ಪ್ರಕರಣ?

ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನದ ಭೀತಿಯಿಂದ 35 ದಿನ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಪ್ರಜ್ವಲ್‌ ರೇವಣ್ಣ ಎರಡು ತಿಂಗಳ ಹಿಂದೆ ಬೆಂಗಳೂರಿಗೆ ವಾಪಸಾದಾಗ ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಅದನ್ನು ಚಿತ್ರೀಕರಿಸಿದ ಆರೋಪ ಪ್ರಜ್ವಲ್‌ ವಿರುದ್ದ ಕೇಳಿ ಬಂದಿದೆ. ಆರೋಪಿ ಪ್ರಜ್ವಲ್‌ ರೇವಣ್ಣ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

Continue Reading

ಸಿನಿಮಾ

Salman Khan: “ನನ್ನನ್ನು ಕೊಲ್ಲಲು ಬಿಷ್ಣೋಯಿ ಗ್ಯಾಂಗ್‌ ಯತ್ನಿಸುತ್ತಿದೆ”-ಗುಂಡಿನ ದಾಳಿ ಬಗ್ಗೆ ಸಲ್ಮಾನ್‌ ಖಾನ್‌ ಹೇಳಿಕೆ ದಾಖಲು

Salman Khan: ಮುಂಬೈ ಕ್ರೈಂ ಬ್ರ್ಯಾಂಚ್‌ಗೆ ವಿಚಾರಣೆ ವೇಳೆ ಮಾಹಿತಿ ನೀಡಿದ ಸಲ್ಮಾನ್‌, ಅಂದು ನನಗೆ ಪಟಾಕಿಯಂತಹ ಸದ್ದು ಕೇಳಿಸಿತ್ತು. ಸುಮಾರು ಬೆಳಗ್ಗೆ 4.55 ಗಂಟೆ ಹೊತ್ತಿಗೆ ಬೈಕ್‌ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನ ಬಾಲ್ಕನಿಯನ್ನು ಗುರಿಯಾಗಿಸಿ ಗುಂಡಿನ ದಾಳಿ ನಡೆಸಿದ್ದರು. ನನ್ನನ್ನು ಮತ್ತು ನನ್ನ ಕುಟುಂಬಸ್ಥರನ್ನು ಗುರಿಯಾಗಿಸಿ ಆ ದಾಳಿ ನಡೆದಿತ್ತು. ಲಾರೆನ್ಸ್‌ ಬಿಷ್ಣೋಯಿ ಈ ಕೃತ್ಯದ ಹೊಣೆ ಹೊತ್ತುಕೊಂಡಿರುವ ಬಗ್ಗೆ ಮಾಧ್ಯಮಗಳ ಮೂಲಕ ಮಾಹಿತಿ ಸಿಕ್ಕಿತ್ತು.

VISTARANEWS.COM


on

Salman Khan
Koo

ಮುಂಬೈ: ಕಳೆದ ಕೆಲವು ವರ್ಷಗಳಿಂದ ತಮಗೆ ಮತ್ತು ತಮ್ಮ ಕುಟುಂಬಕ್ಕೆ ಲಾರೆನ್ಸ್‌ ಬಿಷ್ಣೋಯಿ ಗ್ಯಾಂಗ್‌(Lawrence Bishnoi gang)ನಿಂದ ನಿರಂತರ ಜೀವ ಬೆದರಿಕೆ(Life threats) ಕರೆ ಬರುತ್ತಿವೆ ಎಂದು ಬಾಲಿವುಡ್‌ ನಟ ಸಲ್ಮಾನ್‌ ಖಾನ್‌(Salman Khan) ಹೇಳಿದ್ದಾರೆ. ಕೆಲವು ತಿಂಗಳ ಹಿಂದೆ ತಮ್ಮ ಮನೆ ಮೇಲೆ ನಡೆದ ದಾಳಿ ಬಗ್ಗೆ ಇದೀಗ ಮಾತನಾಡಿರುವ ಸಲ್ಲು, ಲಾರೆನ್ಸ್‌ ಬಿಷ್ಣೋಯಿ ಗ್ಯಾಂಗ್‌ ನನ್ನನ್ನು ಕೊಲ್ಲಲು ಸಕಲ ಪ್ರಯತ್ನವನ್ನೂ ನಡೆಸುಲ್ಲೇ ಇದೆ. ಗುಂಡಿನ ದಾಳಿ ಬಳಿ ನನ್ನ ಕುಟುಂಬಸ್ಥರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದ್ದೇನೆ ಎಂದು ಅವರು ಹೇಳಿದ್ದಾರೆ.

ಮುಂಬೈ ಕ್ರೈಂ ಬ್ರ್ಯಾಂಚ್‌ಗೆ ವಿಚಾರಣೆ ವೇಳೆ ಮಾಹಿತಿ ನೀಡಿದ ಸಲ್ಮಾನ್‌, ಅಂದು ನನಗೆ ಪಟಾಕಿಯಂತಹ ಸದ್ದು ಕೇಳಿಸಿತ್ತು. ಸುಮಾರು ಬೆಳಗ್ಗೆ 4.55 ಗಂಟೆ ಹೊತ್ತಿಗೆ ಬೈಕ್‌ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನ ಬಾಲ್ಕನಿಯನ್ನು ಗುರಿಯಾಗಿಸಿ ಗುಂಡಿನ ದಾಳಿ ನಡೆಸಿದ್ದರು. ನನ್ನನ್ನು ಮತ್ತು ನನ್ನ ಕುಟುಂಬಸ್ಥರನ್ನು ಗುರಿಯಾಗಿಸಿ ಆ ದಾಳಿ ನಡೆದಿತ್ತು. ಲಾರೆನ್ಸ್‌ ಬಿಷ್ಣೋಯಿ ಈ ಕೃತ್ಯದ ಹೊಣೆ ಹೊತ್ತುಕೊಂಡಿರುವ ಬಗ್ಗೆ ಮಾಧ್ಯಮಗಳ ಮೂಲಕ ಮಾಹಿತಿ ಸಿಕ್ಕಿತ್ತು.

ಈ ಹಿಂದೆ ಕೂಡ ಸಂದರ್ಶನವೊಂದರಲ್ಲಿ ಲಾರೆನ್ಸ್ ಬಿಷ್ಣೋಯ್ ಮತ್ತು ಅವರ ಗ್ಯಾಂಗ್ ಸದಸ್ಯರು ನನ್ನನ್ನು ಮತ್ತು ನನ್ನ ಸಂಬಂಧಿಕರನ್ನು ಕೊಲ್ಲುವ ಬಗ್ಗೆ ಮಾತನಾಡಿದ್ದ. ಹಾಗಾಗಿ, ಲಾರೆನ್ಸ್ ಬಿಷ್ಣೋಯ್ ತನ್ನ ಗ್ಯಾಂಗ್ ಸದಸ್ಯರ ಸಹಾಯದಿಂದ ನನ್ನ ಕುಟುಂಬ ಸದಸ್ಯರು ಒಳಗೆ ಮಲಗಿದ್ದಾಗ ಗುಂಡಿನ ದಾಳಿ ನಡೆಸಿ ನನ್ನನ್ನು ಮತ್ತು ನನ್ನ ಕುಟುಂಬ ಸದಸ್ಯರನ್ನು ಕೊಲ್ಲಲು ಯೋಜಿಸಿ ದಾಳಿ ನಡೆಸಿದ್ದಾನೆ ಎಂದು ನಾನು ನಂಬುತ್ತೇನೆ ಎಂದಿದ್ದಾರೆ.

ಏನಿದು ಪ್ರಕರಣ?

ಎಪ್ರಿಲ್‌ 14ರಂದು ಮುಂಬೈಯ ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಗುಂಡಿನ ದಾಳಿ ನಡೆದಿತ್ತು. ಬೈಕ್‌ನಲ್ಲಿ ಬಂದು ದಾಳಿ ನಡೆಸಿದ್ದ ಶೂಟರ್‌ಗಳಾದ ಸಾಗರ್‌ ಪಾಲ್‌ ಮತ್ತು ವಿಕ್ಕಿ ಗುಪ್ತಾ ಎಂಬ ಇಬ್ಬರು ದುಷ್ಕರ್ಮಿಗಳನ್ನು ಬಳಿಕ ಅರೆಸ್ಟ್‌ ಮಾಡಲಾಗಿತ್ತು. ಮುಂಬೈ ಪೊಲೀಸರು ಜೈಲಿನಲ್ಲಿರುವ ಗ್ಯಾಂಗ್​ಸ್ಟರ್ ಲಾರೆನ್ಸ್ ಬಿಷ್ಣೋಯ್ ಮತ್ತು ಅವನ ಕಿರಿಯ ಸಹೋದರ ಅನ್ಮೋಲ್ ಬಿಷ್ಣೋಯ್ ಅವರನ್ನು ಈ ಪ್ರಕರಣದ ಪ್ರಮುಖ ಆರೋಪಿಗಳು ಎಂದು ಘೋಷಿಸಿದ್ದರು.

ಈ ಮಧ್ಯೆ ಗುಂಡಿನ ದಾಳಿ ನಡೆಸಿದ್ದ ಶೂಟರ್‌ಗಳಿಗೆ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡಿದ್ದ ಆರೋಪ ಎದುರಿಸುತ್ತಿದ್ದ ಅನೂಜ್‌ ಥಾಪನ್‌ ಕೆಲವು ದಿನಗಳ ಹಿಂದೆ ಪೊಲೀಸ್‌ ಕಸ್ಟಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಆತ ಕೊನೆಯುಸಿರೆಳೆದಿದ್ದ. ಅನುಜ್ ಥಾಪನ್ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ಆತನ ಕುಟುಂಬ ಇದರ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿತ್ತು. ಲಾಕಪ್‌ನಲ್ಲಿ ಥಾಪನ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದರೆ ಆತನ ತಾಯಿ ಇದು ಕೊಲೆ ಎಂದು ಆರೋಪಿಸಿದ್ದರು.

ಕಾರಣವೇನು?

ಹಲವು ವರ್ಷಗಳ ಹಿಂದಿನ ಕೃಷ್ಣಮೃಗ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಮಾನ್‌ ಅವರನ್ನು ಕೊಲ್ಲುವುದಾಗಿ 2018 ರಲ್ಲಿ ಬೆದರಿಕೆ ಹಾಕಿದ ನಂತರ ಬಿಷ್ಣೋಯ್ ಅವರ ಸಹಾಯಕರಲ್ಲಿ ಒಬ್ಬನನ್ನು ಬಂಧಿಸಲಾಯಿತು. ಜೋಧಪುರ್​ನ ಬಿಷ್ಣೋಯ್​ಗಳು ಕೃಷ್ಣಮೃಗವನ್ನು ತಮ್ಮ ಧಾರ್ಮಿಕ ಗುರು ಭಗವಾನ್ ಜಂಬೇಶ್ವರ ಅವರ ಪುನರ್ಜನ್ಮ ಎಂದು ಪರಿಗಣಿಸುತ್ತಾರೆ. ಹೀಗಾಗಿ ಕೃಷ್ಣಮೃಗ ಕೊಲ್ಲುವುದನ್ನು ಬಿಷ್ಣೋಯ್​ಗಳು ಎಂದಿಗೂ ಸಹಿಸುವುದಿಲ್ಲ. ಈ ಕಾರಣಕ್ಕೆ ಸಲ್ಮಾನ್ ಖಾನ್ ಹತ್ಯೆ ಮಾಡಲು ಲಾರೆನ್ಸ್ ಬಿಷ್ಣೋಯ್ ನಿರ್ಧರಿಸಿದ್ದ. ಎಬಿಪಿ ನ್ಯೂಸ್‌ಗೆ ನೀಡಿದ ಇತ್ತೀಚಿನ ಸಂದರ್ಶನದಲ್ಲಿ, ʻʻಸಲ್ಮಾನ್ ಖಾನ್ ಅವರನ್ನು ಕೊಲ್ಲುವುದು ನನ್ನ ಜೀವನದ ಗುರಿ. ಸಲ್ಮಾನ್‌ ಅವರು ಬಿಷ್ಣೋಯ್ ಸಮುದಾಯಕ್ಕೆ ಕ್ಷಮೆಯಾಚಿಸಿದ ನಂತರವೇ ಈ ವಿಷಯ ಕೊನೆಗೊಳ್ಳುತ್ತದೆʼʼ ಎಂದು ಹೇಳಿದ್ದ.

ಇದನ್ನೂ ಓದಿ: Rahul Gandhi: ರಾಹುಲ್‌ ಗಾಂಧಿಯನ್ನು ಭೇಟಿಯಾದ ರೈತರು; ಆ.15ರಂದು ದೇಶಾದ್ಯಂತ ರ‍್ಯಾಲಿಗೆ ನಿರ್ಧಾರ!

Continue Reading

ಕ್ರೀಡೆ

Paris Olympics: ಒಲಿಂಪಿಕ್ಸ್​ ನೋಡಲು ಬಂದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ಸಿಸಿಟಿವಿಯಲ್ಲಿ ಭಯಾನಕ ವಿಡಿಯೊ ಸೆರೆ

Paris Olympics: ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟ ನೋಡಲು ಬಂದಿದ್ದ ಆಸ್ಟ್ರೇಲಿಯಾ ಮೂಲದ ಮಹಿಳೆಯ ಮೇಲೆ ಐವರು ಬರ್ಬರವಾಗಿ ಗ್ಯಾಂಗ್‌ ರೇಪ್ ಮಾಡಿರುವ ಆತಂಕಕಾರಿ ಘಟನೆ ತಡವಾಗಿ ನಡೆದಿದೆ. ಈ ದೃಶ್ಯಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

VISTARANEWS.COM


on

Paris Olympics
Koo

ಪ್ಯಾರಿಸ್​: ಜಗತ್ತಿನ ಅತ್ಯಂತ ದೊಡ್ಡ ಕ್ರೀಡಾಕೂಟವಾದ ಒಲಿಂಪಿಕ್ಸ್‌(Paris Olympics) ಟೂರ್ನಿಯ ಆತಿಥ್ಯ ವಹಿಸಿಕೊಂಡ ‘ಬೆಳಕಿನ ನಗರಿ’ ಪ್ಯಾರಿಸ್‌ ಈ ಕ್ರೀಡಾ ಮಹಾಮೇಳಕ್ಕೆ ಸಿದ್ಧವಾಗಿ ನಿಂತಿದೆ. ಇನ್ನೆರಡು ದಿನಗಳು ಕಳೆದರೆ ಇಲ್ಲಿ ಒಲಿಂಪಿಕ್ಸ್ ಜ್ಯೋತಿಯು ಪ್ರಜ್ವಲಿಸಲಿದೆ. ಆದರೆ, ಈ ಮಹಾ ಕ್ರೀಡಾಕೂಟ ಆರಂಭಕ್ಕೂ ಮುನ್ನವೇ ಪ್ಯಾರಿಸ್​ನಲ್ಲಿ ಅಹಿತಕರ ಘಟನೆಗಳು ನಡೆಯುತ್ತಿರುವುದು ಕ್ರೀಡಾಭಿಮಾನಿಗಳನ್ನು ಬೆಚ್ಚಿ ಬೀಳಿಸಿದೆ.

ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟ ನೋಡಲು ಬಂದಿದ್ದ ಆಸ್ಟ್ರೇಲಿಯಾ ಮೂಲದ ಮಹಿಳೆಯ ಮೇಲೆ ಐವರು ಬರ್ಬರವಾಗಿ ಗ್ಯಾಂಗ್‌ ರೇಪ್ ಮಾಡಿರುವ ಆತಂಕಕಾರಿ ಘಟನೆ ತಡವಾಗಿ ನಡೆದಿದೆ. ಈ ದೃಶ್ಯಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. 25 ವರ್ಷದ ಆಸ್ಟ್ರೇಲಿಯಾ ಮಹಿಳೆಯ ಮೇಲೆ ಗ್ಯಾಂಗ್‌ ರೇಪ್ ಮಾಡಲಾಗಿದೆ.

ಜುಲೈ 19ರ ರಾತ್ರಿ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮೌಲಿನ್ ರೋಗ್ ಕ್ಯಾಬರ್ಟ್‌ನ ಪಬ್​ ಒಂದರಲ್ಲಿ ಮದ್ಯ ಸೇವಿಸಿ, ಹೊರ ಬರುವ ಸಂದರ್ಭದಲ್ಲಿ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಗ್ಯಾಂಗ್ ರೇಪ್ ನಡೆಸಿದ್ದಾಗಿ ಮಹಿಳೆ ತನ್ನ ದೂರಿನಲ್ಲಿ ಆರೋಪಿಸಿದ್ದಾಳೆ.

ವೈರಲ್​ ಆಗುತ್ತಿರುವ ವಿಡಿಯೊದಲ್ಲಿ ಆಕೆ ಹರಿದ ಬಟ್ಟೆಯಲ್ಲೇ ಸಹಾಯಕ್ಕಾಗಿ ಹತ್ತಿರದಲ್ಲೇ ಇದ್ದ ಕಬಾಬ್ ಶಾಪ್‌ಗೆ ಓಡಿ ಬಂದು ಬಂದು ರಕ್ಷಣೆ ಪಡೆದಿದ್ದಾಳೆ. ಈ ಎಲ್ಲ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಿಸಿಟಿವಿ ವಿಡಿಯೊ ಕಂಡ ಅನೇಕರು ಈ ಘಟನೆ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಫ್ರಾನ್ಸ್​ನಲ್ಲಿ ಮಹಿಳೆಯರಿಗೆ ಸರಿಯಾದ ಸುರಕ್ಷತೆ ಮತ್ತು ರಕ್ಷಣ ಇಲ್ಲ ಎಂದು ಆರೋಪಿಸಿದ್ದಾರೆ. ಸಿಸಿಟಿವಿ ವಿಡಿಯೋದಲ್ಲಿ ಆ ಮಹಿಳೆಯು ಓಡೋಡಿ ಬರುವುದು, ಭಯಭೀತರಾಗಿರುವುದು, ಸಹಾಯಕ್ಕಾಗಿ ಅಲ್ಲಿರುವ ಸಿಬ್ಬಂದಿಗಳಲ್ಲಿ ಮನವಿ ಮಾಡಿಕೊಳ್ಳುವ ದೃಶ್ಯಾವಳಿಗಳು ಸೆರೆಯಾಗಿವೆ. ಈಗಾಗಲೇ ಪ್ಯಾರಿಸ್ ನಗರದಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದರೂ ಕೂಡ ಈ ಘಟನೆ ನಡೆದಿರುವು ನಿಜಕ್ಕೂ ಆಘಾತಕಾರಿ ಸಂಗತಿ.

ಇದನ್ನೂ ಓದಿ Paris Olympics: ಒಲಿಂಪಿಕ್ಸ್​ ಶೂಟಿಂಗ್; ಪದಕ ಗೆಲ್ಲುವ ವಿಶ್ವಾಸದಲ್ಲಿ ಬಿಜೆಪಿ ಶಾಸಕಿ

ಬೆದರಿಕೆ ಹಾಕಿದ ಹಮಾಸ್ ಉಗ್ರರು


ಈಗಾಗಲೇ ಈ ಕ್ರೀಡಾಕೂಟಕ್ಕೆ ಉಗ್ರರ ದಾಳಿಯ ಭೀತಿ ಎದುರಾಗಿದ್ದ ಕಾರಣ ಪ್ಯಾರಿಸ್​ನಲ್ಲಿ ಹಿಂದೆಂದೂ ಕಾಣದ ಭಾರೀ ಭದ್ರತೆ ಕೈಗೊಳ್ಳಲಾಗಿದೆ. ಹೆಚ್ಚುವರಿ ಭದ್ರತೆಗಾಗಿ ಫ್ರಾನ್ಸ್​ನೊಂದಿಗೆ ಭಾರತದ ಯೋಧರು ಕೂಡ ಕೈಜೋಡಿಸಿದ್ದಾರೆ. ಇದೀಗ ಹಮಾಸ್(Hamas) ಭಯೋತ್ಪಾದಕರಿಂದ(hamas terrorist) ಭೀಕರ ದಾಳಿಯ ಬೆದರಿಕೆ ಬಂದಿದೆ.

ಮುಸುಕುಧಾರಿ ವ್ಯಕ್ತಿಯೊಬ್ಬ ಅರೇಬಿಕ್ ಭಾಷೆಯಲ್ಲಿ ಬೆದರಿಕೆ ಹಾಕಿರುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ವಿಡಿಯೊದಲ್ಲಿ ಮುಸುಕುಧಾರಿ ಒಲಿಂಪಿಕ್ಸ್​ ವೇಳೆ ಫ್ರಾನ್ಸ್​ ಅಧ್ಯಕ್ಷರನ್ನು ಹತ್ಯೆ ಮಾಡುವುದಾಗಿ ಮತ್ತು ಫ್ರಾನ್ಸ್​ನಲ್ಲಿ ರಕ್ತದೋಕುಳಿ ಹರಿಸುವುದಾಗಿ ಎಚ್ಚರಿಕೆ ನೀಡಿದ್ದಾನೆ.

ಈ ವಿಡಿಯೊ ವೈರಲ್​ ಆಗುತ್ತಿದ್ದಂತೆ ಫ್ರಾನ್ಸ್​ನಲ್ಲಿ ಮತ್ತಷ್ಟು ಭದ್ರತೆ ಕೈಗೊಳ್ಳಲಾಗಿದೆ. ಪ್ಯಾರಿಸ್​ನ ಕ್ರೀಡಾ ಗ್ರಾಮದ ವಿವಿಧ ಸ್ಥಳಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಲು ಸಂಘಟಕರು ನಿರ್ಧರಿಸಿದ್ದಾರೆ. ಪ್ಯಾರಿಸ್ ಪೊಲೀಸ್ ಮುಖ್ಯಸ್ಥ ಲಾರೆಂಟ್ ನುನೆಜ್ ಅವರು ಸುದ್ದಿಗೋಷ್ಠಿಯಲ್ಲಿ ಕ್ರೀಡಾಕೂಟಕ್ಕೆ ಸಂಬಂಧಿಸಿ ಮಾತನಾಡಿದ್ದು, ನಾವು ಉಗ್ರರ ಬೆದರಿಕೆಯ ಬಗ್ಗೆ ಕಳವಳ ಹೊಂದಿದ್ದೇವೆ. ವಿಶೇಷವಾಗಿ ಇಸ್ಲಾಮಿಕ್ ಉಗ್ರವಾದಿಗಳು, ಪ್ಯಾಲೆಸ್ಟೀನಿಯನ್ ಪರ ಚಳವಳಿಯಿಂದ ಕಡಿಮೆ-ತೀವ್ರತೆಯ ಬೆದರಿಕೆಯ ಬಗ್ಗೆಯೂ ನಾವು ವಿಶೇಷ ಕಾಳಜಿ ವಹಿಸುತ್ತೇವೆ. ಕ್ರೀಡಾಪಟುಗಳು ಆತಂಕಪಡಬೇಕಿಲ್ಲ ಎಂದು ಹೇಳಿದ್ದಾರೆ.

Continue Reading
Advertisement
Greater Bengaluru Governance Bill 2024
ಬೆಂಗಳೂರು36 seconds ago

Greater Bengaluru Governance Bill 2024: ಗ್ರೇಟರ್ ಬೆಂಗಳೂರಿನಲ್ಲಿ ಯಾವ್ಯಾವ ಏರಿಯಾಗಳು ಸೇರಬಹುದು? ಇದರ ಉದ್ದೇಶ ಏನು?

Cat kidnaping Case
ಕರ್ನಾಟಕ10 mins ago

Cat Kidnaping Case: ಬೆಕ್ಕು ಅಪಹರಣ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ನಿಂದ ಮಹತ್ವದ ತೀರ್ಪು

Bitcoin Scam
ಕರ್ನಾಟಕ15 mins ago

Bitcoin Scam: ಬಿಟ್‌‌ ಕಾಯಿನ್ ಹಗರಣ; ಆರೋಪಿಗಳಾದ ಶ್ರೀಕಿ, ಖಂಡೇಲ್ ವಾಲಾ ಜೈಲಿನಿಂದ ಬಿಡುಗಡೆ

No Makeup For Kids
ಲೈಫ್‌ಸ್ಟೈಲ್22 mins ago

No Makeup For Kids: ನಿಮ್ಮ ಮಕ್ಕಳ ಮೇಕಪ್‌ ಕ್ರೇಜ್‌ಗೆ NO ಹೇಳಿ!

Union Budget 2024
ದೇಶ45 mins ago

Union Budget 2024: ಬಜೆಟ್‌ನಲ್ಲಿ ಕಸ್ಟಮ್ಸ್‌ ಸುಂಕ ಇಳಿಕೆ; ಚಿನ್ನದ ಮೇಲಿನ ಹೂಡಿಕೆಗೆ ಇದು ಸಕಾಲವೇ? ತಜ್ಞರು ಹೇಳೋದಿಷ್ಟು

Salman Khan
ಸಿನಿಮಾ1 hour ago

Salman Khan: “ನನ್ನನ್ನು ಕೊಲ್ಲಲು ಬಿಷ್ಣೋಯಿ ಗ್ಯಾಂಗ್‌ ಯತ್ನಿಸುತ್ತಿದೆ”-ಗುಂಡಿನ ದಾಳಿ ಬಗ್ಗೆ ಸಲ್ಮಾನ್‌ ಖಾನ್‌ ಹೇಳಿಕೆ ದಾಖಲು

Viral Video
Latest1 hour ago

Viral Video: ದೆಹಲಿ ಬೀದಿಯಲ್ಲಿ ಈ ಹುಡುಗಿಯ ಪರೋಟಾ ತಿನ್ನಲು ಕ್ಯೂ! ವಿಡಿಯೊ ನೋಡಿ

Sandalwood Star Fashion
ಫ್ಯಾಷನ್1 hour ago

Sandalwood Star Fashion: ಮಾನ್ಸೂನ್‌ನಲ್ಲಿ ಮಾಲಾಶ್ರೀ ಮಗಳ ಗ್ಲಾಮರಸ್‌ ಫ್ಯಾಷನ್‌!

DK Shivakumar
ಕರ್ನಾಟಕ2 hours ago

DK Shivakumar: ನಮ್ಮ ಶಾಲೆಯಲ್ಲಿ ಮಗನಿಗೆ ಸೀಟು ಕೇಳಲು ದರ್ಶನ್‌ ಪತ್ನಿ ಬಂದಿದ್ರು: ಡಿಸಿಎಂ ಡಿಕೆಶಿ

Assembly Session 2024 Irrigation Amendment Bill Approval to protect the farmers of the last part of the canals
ಕರ್ನಾಟಕ2 hours ago

Assembly Session 2024: ಕಾಲುವೆಗಳ ಕೊನೇ ಭಾಗದ ರೈತರಿಗೆ ನೀರು ಖಾತರಿ; ನೀರಾವರಿ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ13 hours ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ1 day ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

Udupi News
ಉಡುಪಿ1 day ago

Udupi News : ಹಳೆ ಲಾರಿ ಚಾಸ್ಸಿಯಲ್ಲೇ ಕಿರು ಸೇತುವೆ ನಿರ್ಮಾಣ! ಬೈಂದೂರು ಶಾಸಕರ ಪರಿಕಲ್ಪನೆಗೆ ಜನರು ಫಿದಾ

murder case
ರಾಮನಗರ1 day ago

Murder Case : ರಾಮನಗರದಲ್ಲೊಂದು ಪೈಶಾಚಿಕ ಕೃತ್ಯ; ಅತ್ಯಾಚಾರವೆಸಗಿ 4 ವರ್ಷದ ಬಾಲಕಿಯನ್ನು ಕೊಂದ ದುಷ್ಟ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ4 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ5 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ5 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ6 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ6 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

ಟ್ರೆಂಡಿಂಗ್‌