Site icon Vistara News

Murder Case : ತಲೆ ಮೇಲೆ ಕಲ್ಲು ಎತ್ತಿಹಾಕಿ 8ನೇ ಕ್ಲಾಸ್‌ ಹುಡುಗನ ಬರ್ಬರ ಹತ್ಯೆ

nippani police

ಚಿಕ್ಕೋಡಿ/ಬೆಂಗಳೂರು: ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಹೊರವಲಯದ ಬಾಳುಮಾಮಾ ನಗರದಲ್ಲಿ ಕೊಲೆಯಾದ ಸ್ಥಿತಿಯಲ್ಲಿ (Murder Case) 15 ವರ್ಷದ ಬಾಲಕನ ಮೃತದೇಹ ಪತ್ತೆಯಾಗಿದೆ. ನಿರ್ಮಾಣ ಹಂತದ ಕಟ್ಟಡದಲ್ಲಿ ಮೃತದೇಹ ಸಿಕ್ಕಿದ್ದು, ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆಗೈದಿದ್ದಾರೆ.

ನಿಪ್ಪಾಣಿಯ ಹಳೆ ಸಂಭಾಜಿ ನಗರದ ಸಾಕೀಬ್ ಪಠಾಣ್ ಕೊಲೆಯಾದ ಬಾಲಕ. ನಿಪ್ಪಾಣಿಯ ಖಾಸಗಿ ಶಾಲೆಯಲ್ಲಿ 8ನೇ ತರಗತಿಯಲ್ಲಿ ಸಾಕೀಬ್‌ ವ್ಯಾಸಂಗ ಮಾಡುತ್ತಿದ್ದ. ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ನಿಪ್ಪಾಣಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಇದನ್ನೂ ಓದಿ:Drowned in Canal : ಕಾಲುವೆಯಲ್ಲಿ ಈಜಲು ಹೋದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಮಧ್ಯರಾತ್ರಿ ಅಟ್ಟಾಡಿಸಿ ಕೊಂದರು

ಬೆಂಗಳೂರಿನ ಪುಲಕೇಶಿನಗರ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯನ್ನು ಅಟ್ಟಾಡಿಸಿ ಹತ್ಯೆ ಮಾಡಲಾಗಿದೆ. ಎಸ್‌.ಕೆ ಗಾರ್ಡನ್ ನಿವಾಸಿ ಅಸ್ಗರ್ ಕೊಲೆಯಾದವನು. ತಡರಾತ್ರಿ 12.30ರ ಸುಮಾರಿಗೆ ನಾಲ್ವರು ದಾಳಿ ಮಾರಕಾಸ್ತ್ರದಿಂದ ಕೊಚ್ಚಿ ಕೊಂದಿದ್ದಾರೆ.

ಅಸ್ಗರ್‌ ಸ್ರ್ಕ್ಯಾಪ್ ಬ್ಯುಜಿನೆಸ್ ನಡೆಸುತ್ತಿದ್ದ. ಕಳೆದ 19ರ ರಾತ್ರಿ ಕೆಲಸ ಮುಗಿಸಿ ಪುಲಕೇಶಿನಗರದಲ್ಲಿ ಹೋಗುತ್ತಿದ್ದಾಗ ಏಕಾ ಏಕಿ ಬಂದ ನಾಲ್ವರಿಂದ ಹತ್ಯೆ ಮಾಡಿ ಪರಾರಿ ಆಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ಹುಡುಕಾಟ ನಡೆಸಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version