ಗದಗ: ಒಂದೇ ಕುಟುಂಬದ ನಾಲ್ಕು ಮಂದಿಯನ್ನು ಮನೆಯಲ್ಲಿ ಮಲಗಿದಲ್ಲೇ ಕೊಚ್ಚಿ ಭೀಕರವಾಗಿ ಹತ್ಯೆ (Murder Case) ಮಾಡಲಾಗಿದೆ. ಈ ಬರ್ಬರ ಘಟನೆ ಗದಗ ನಗರದ ದಾಸರ ಓಣಿಯಲ್ಲಿ ನಡೆದಿದ್ದು, ಕೃತ್ಯದ (Crime news) ಬಗ್ಗೆ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಹುಬ್ಬಳ್ಳಿಯ ಕಾರ್ಪೊರೇಟರ್ ಪುತ್ರಿ ನೇಹಾ ಕೊಲೆ (Hubli Neha Murder) ಕೃತ್ಯ ಇನ್ನೂ ಹಸಿಯಾಗಿರುವಾಗಲೇ ಈ ಘಟನೆ ನಡೆದಿದೆ.
ಕೊಲೆಯಾದವರಲ್ಲಿ ನಗರಸಭೆ ಉಪಾಧ್ಯಕ್ಷೆಯ ಪುತ್ರನೊಬ್ಬ ಸೇರಿದ್ದಾನೆ. ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55), ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಕೊಲೆಯಾದವರು. ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ದರೋಡೆ ಸೇರಿದಂತೆ ವಿವಿಧ ಆಯಾಮಗಳನ್ನು ತನಿಖೆ ನಡೆಸಲಾಗುತ್ತಿದೆ.
ಮೊದಲನೇ ಮಹಡಿಯ ಕೋಣೆಯಲ್ಲಿ ಮಲಗಿದ್ದ ಪತಿ, ಪತ್ನಿ, ಮಗಳನ್ನು ಕೊಲೆ ಮಾಡಲಾಗಿದೆ. ಈ ಮೂವರೂ ಕೊಪ್ಪಳ ಮೂಲದವರಾಗಿದ್ದು, ಏಪ್ರಿಲ್ 17ರಂದು ನಡೆದ ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕ್‌ನ ಮದುವೆ ಫಿಕ್ಸ್ ಕಾರ್ಯಕ್ರಮಕ್ಕಾಗಿ ಆಗಮಿಸಿದ್ದ ಸಂಬಂಧಿಗಳಾಗಿದ್ದಾರೆ.
ಮೇಲಿನ ಮಹಡಿಯ ಬಾಗಿಲು ಸದ್ದು ಕೇಳಿ ಅನುಮಾನಗೊಂಡು ಕುಟುಂಬಸ್ಥರು ಪೊಲೀಸರಿಗೆ ಫೋನ್ ಮಾಡಿದ್ದರು. ಪೊಲೀಸರಿಗೆ ಫೋನ್ ಮಾಡುತ್ತಿದ್ದಂತೆ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಬಾಗಿಲು ತೆಗೆದಿದ್ದರೆ ನಮ್ಮನ್ನೂ ಕೊಲೆ ಮಾಡುವ ಸಾಧ್ಯತೆಯಿತ್ತು ಎಂದು ಮನೆ ಮಾಲೀಕ ಪ್ರಕಾಶ್ ಬಾಕಳೆ ಹೇಳಿಕೆ ನೀಡಿದ್ದಾರೆ.
ಶ್ವಾನದಳ, ಫಾರೆನ್ಸಿಕ್ ತಂಡಗಳು ಆಗಮಿಸಿದ್ದು, ಮನೆಯ ಇಂಚಿಂಚೂ ಪರಿಶೀಲನೆ ಮಾಡಲಾಗಿದೆ. ಸ್ಥಳಕ್ಕೆ ಎಸ್ಪಿ ಬಿ.ಎಸ್ ನೇಮಗೌಡ, ಹೆಚ್ಚುವರಿ ಎಸ್ಪಿ ಎಂ.ಬಿ ಸಂಕದ, ಡಿವೈಎಸ್ಪಿ, ಸಿಪಿಐ ಸೇರಿ ಹಲವು ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೇಲ್ನೋಟಕ್ಕೆ ದರೋಡೆಗೆ ಬಂದ ತಂಡ ನಡೆಸಿರುವ ಕೃತ್ಯದಂತೆ ಕಂಡುಬಂದಿದ್ದರೂ, ಪ್ರಕರಣದ ಹಲವು ಮಗ್ಗಲುಗಳನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಪ್ರೀತಿಸಲು ನಿರಾಕರಿಸಿದ್ದಕ್ಕೆ ಕಾರ್ಪೊರೇಟರ್ ಪತ್ನಿಯನ್ನು ಕೊಂದ ಪಾಗಲ್
ಹುಬ್ಬಳ್ಳಿ: ಪ್ರೀತಿಸಲು ನಿರಾಕರಿಸಿದಳು (Refusal to love) ಎಂಬ ಕಾರಣಕ್ಕಾಗಿ ಪಾಗಲ್ ಪ್ರೇಮಿಯೊಬ್ಬ ಹುಬ್ಬಳ್ಳಿಯಲ್ಲಿ ಕಾರ್ಪೋರೇಟರ್‌ವೊಬ್ಬರ ಮಗಳನ್ನು ಭೀಕರವಾಗಿ ಕೊಲೆ (Stab wound) ಮಾಡಿದ್ದಾನೆ. ಚಾಕುವಿನಿಂದ 9 ಬಾರಿ ಇರಿದು (Murder Case) ಕೊಂದಿದ್ದಾನೆ.
ಹುಬ್ಬಳ್ಳಿಯ ಬಿವಿಬಿ ಕಾಲೇಜು (Hubballi BVB College) ಆವರಣದಲ್ಲಿ ಕೊಲೆ ನಡೆದಿದೆ. ನೇಹಾ ಹಿರೇಮಠ ಕೊಲೆಯಾದ ಯುವತಿಯಾಗಿದ್ದಾಳೆ. ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಲಾಗಿದೆ. ನೇಹಾ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಮಗಳಾಗಿದ್ದಾಳೆ. ಫೈಜಲ್ ಎಂಬಾತ ಆರೋಪಿ ಎಂದು ಗುರುತಿಸಲಾಗಿದೆ.
ಪ್ರೀತಿಸಲು ನಿರಾಕರಿಸಿದ್ದಕ್ಕೆ ಕೊಲೆ
ನೇಹಾ ಹಿರೇಮಠ ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಓದುತ್ತಿದ್ದಾಳೆ. ಈ ವೇಳೆ ಆರೋಪಿ ಪ್ರೀತಿಸುವಂತೆ ಹಿಂದೆ ಬಿದ್ದಿದ್ದ. ಆದರೆ, ನೇಹಾ ನಿರಾಕರಣೆ ಮಾಡುತ್ತಲೇ ಬಂದಿದ್ದಾಳೆ. ಇದರಿಂದ ರೊಚ್ಚಿಗೆದ್ದ ಆತ ಗುರುವಾರ ಕಾಲೇಜು ಕ್ಯಾಂಪಸ್‌ಗೆ ಬಂದಿದ್ದಾನೆ. ಪುನಃ ಆಕೆ ಬಳಿ ಪ್ರೇಮ ನಿವೇದನೆ ಮಾಡಿಕೊಂಡಿದ್ದಾನೆ. ಆದರೆ, ನೇಹಾ ಪ್ರೀತಿಸಲು ನಿರಾಕರಿಸಿದ್ದಾಳೆ. ಹೀಗಾಗಿ ಮೊದಲೇ ನಿರ್ಧರಿಸಿ ಬಂದಿದ್ದ ಆರೋಪಿಯು ನೇಹಾಳಿಗೆ ಕಾಲೇಜು ಕ್ಯಾಂಟೀನ್‌ನಲ್ಲಿಯೇ ಚಾಕುವಿನಿಂದ ಇರಿದಿದ್ದಾನೆ.
ಯುವತಿಗೆ ಮನಬಂದಂತೆ ಚಾಕುವಿನಿಂದ ಇರಿದಿದ್ದಾನೆ. ಒಟ್ಟು ಒಂಭತ್ತು ಬಾರಿ ಚಾಕುವಿನಿಂದ ಚುಚ್ಚಿದ್ದು, ನೇಹಾಳಿಗೆ ತೀವ್ರ ರಕ್ತಸ್ರಾವವಾಗಿದೆ. ಸ್ಥಳೀಯರು ತಕ್ಷಣವೇ ಕಿಮ್ಸ್ ಆಸ್ಪತ್ರೆಗೆ ಆಕೆಯನ್ನು ರವಾನೆ ಮಾಡಿದ್ದಾರೆ. ಆದರೆ, ಅಷ್ಟರಲ್ಲಾಗಲೇ ನೇಹಾ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದ್ದಾರೆ.
ಆರೋಪಿ ಫೈಜಲ್ ಕೊಂಡಿಕೊಪ್ಪನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರ ಠಾಣೆ ಪೊಲೀಸರಿಂದ ಆರೋಪಿಯ ವಿಚಾರಣೆ ನಡೆಸಲಾಗಿದೆ.
Student Death: ರೈಲಿಗೆ ತಲೆ ಕೊಟ್ಟು ಮಣಿಪಾಲ್ ಆಸ್ಪತ್ರೆಯ ಸ್ಟಾಫ್ ನರ್ಸ್ ಸೂಸೈಡ್
ಬೆಂಗಳೂರು: ರೈಲಿಗೆ ಸಿಲುಕಿ ಯುವಕನೊಬ್ಬ ಆತ್ಮಹತ್ಯೆಗೆ (Student death) ಶರಣಾಗಿದ್ದಾರೆ. ಬೆಂಗಳೂರಿನ ದೀಪಾಂಜಲಿನಗರ ರೈಲ್ವೆ ಟ್ರಾಕ್ ಬಳಿ ಘಟನೆ ನಡೆದಿದೆ. ವಿಜಯಪುರ ಮೂಲದ ಚನ್ನಬಸು ಅಶೋಕ್ (22) ಮೃತ ದುರ್ದೈವಿ.
ಚನ್ನಬಸು ಅಶೋಕ್ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ. ಬೆಂಗಳೂರಿನ ತನ್ನ ಚಿಕ್ಕಮ್ಮನೊಟ್ಟಿಗೆ ವಾಸವಾಗಿದ್ದ. ಇಂದು ಗುರುವಾರ ಮನೆಯಿಂದ ಹೊರಟವನು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸಿಟಿ ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.
ಇದನ್ನೂ ಓದಿ: Physical Abuse : ಸ್ಪೇನ್ನ ಮಹಿಳೆ ಮೇಲೆ ಜಾರ್ಖಂಡ್ನಲ್ಲಿ ಗ್ಯಾಂಗ್ ರೇಪ್; ತಿಂಗಳ ಬಳಿಕ ಪ್ರಕರಣ ಬಯಲು