Murder case : ಮತ್ತೊಬ್ಬಳ ಮೋಹಿಸಿದ; ಉಸಿರುಗಟ್ಟಿಸಿ 2ನೇ ಹೆಂಡ್ತಿಯನ್ನು ಕೊಂದ! - Vistara News

ಕರ್ನಾಟಕ

Murder case : ಮತ್ತೊಬ್ಬಳ ಮೋಹಿಸಿದ; ಉಸಿರುಗಟ್ಟಿಸಿ 2ನೇ ಹೆಂಡ್ತಿಯನ್ನು ಕೊಂದ!

Murder Case : ಕತ್ತು ಹಿಸುಕಿ ಕೊಲೆ ಮಾಡಿ ಬಳಿಕ ಆತ್ಮಹತ್ಯೆ ಬಿಂಬಿಸಲು ಹೋಗಿ ಪತಿಯೊಬ್ಬ ಜೈಲಿನಲ್ಲಿ ಬಂಧಿಯಾಗಿದ್ದಾನೆ.

VISTARANEWS.COM


on

Rajashekar And Anuradha
ಹತ್ಯೆಯಾದ ಅನುರಾಧ ಹಾಗೂ ಕೊಲೆ ಆರೋಪಿ ರಾಜಶೇಖರ್‌
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಮಹಿಳೆ ಆತ್ಮಹತ್ಯೆ ಪ್ರಕರಣವೊಂದು ತನಿಖೆ ವೇಳೆ ಕೊಲೆ (Murder Case) ಎಂಬುದು ತಿಳಿದು ಬಂದಿದೆ. ಪರಪ್ಪನ ಅಗ್ರಹಾರದ ಕೂಡ್ಲು ಶಿವ ದೇವಾಲಯದ ನಂಜಾರೆಡ್ಡಿ ಲೇಔಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡು ಪತ್ನಿ ಮೃತಪಟ್ಟಿದ್ದಾಳೆ ಎಂದು ಪತಿಯೊಬ್ಬ ಕಥೆ ಕಟ್ಟಿದ್ದ. ಪೊಲೀಸರು ಕೂಡ ಅಸಹಜ ಸಾವೆಂದು ಪ್ರಕರಣವನ್ನು ದಾಖಲಿಸಿಕೊಂಡಿದ್ದರು. ಆದರೆ ಮರಣೋತ್ತರ ಪರೀಕ್ಷೆಯಲ್ಲಿ ಮಹಿಳೆ ಸಾವಿನ ರಹಸ್ಯ ಬಯಲಾಗಿದೆ. ಮಹಿಳೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ.

ಅನುರಾಧ ಅಲಿಯಾಸ್ ಅಲೀಮಾ (31) ಹತ್ಯೆಯಾದವಳು. ರಾಜಶೇಖರ್‌ ಕೊಲೆ ಆರೋಪಿಯಾಗಿದ್ದಾನೆ. ಅನುರಾಧ ರಾಜಶೇಖರ್ ಜತೆ ಎರಡನೇ ಮದುವೆಯಾಗಿದ್ದಳು. ಮೊದಮೊದಲು ಇವರಿಬ್ಬರ ದಾಂಪತ್ಯ ಜೀವನ ಚೆನ್ನಾಗಿಯೇ ಇತ್ತು. ಆದರೆ ಈ ನಡುವೆ ರಾಜಶೇಖರ್ ಬೇರೊಬ್ಬ ಮಹಿಳೆ ಜತೆಗೆ ಸಂಪರ್ಕ ಹೊಂದಿದ್ದ. ಇದೇ ವಿಚಾರಕ್ಕೆ ಅನುರಾಧ ಹಾಗೂ ರಾಜಶೇಖರ್‌ ನಡುವೆ ಗಲಾಟೆ ನಡೆಯುತ್ತಲೆ ಇತ್ತು.

ಹತ್ಯೆ ದಿನವು ಅನುರಾಧ ಹಾಗೂ ರಾಜಶೇಖರ್‌ ನಡುವೆ ಮಾತಿನ ಚಕಮಕಿ ನಡೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿದ್ದು, ರಾಜಶೇಖರ್‌ ಕೈಗಳಿಂದ ಕುತ್ತಿಗೆ ಹಿಸುಕಿ ನಂತರ ವೇಲ್‌ನಿಂದ ಕುತ್ತಿಗೆ ಬಿಗಿದು ಹತ್ಯೆ ಮಾಡಿದ್ದಾನೆ. ಕೊಲೆ ಮಾಡಿ ಬಳಿಕ ಅನುರಾಧಳನ್ನು ಆಸ್ಪತ್ರೆಗೂ ದಾಖಲು ಮಾಡಿದ್ದ.

ಇದನ್ನೂ ಓದಿ: Neymar: ಫುಟ್ಬಾಲ್​ ಆಟಗಾರ ನೇಯ್ಮರ್‌ ಗೆಳತಿ, ಮಗುವನ್ನು ಅಪಹರಿಸಲು ಯತ್ನ

ಮಾತ್ರವಲ್ಲ ಅನುಮಾನ ಬಾರದೆ ಇರಲಿ ಎಂದು ತಾನೇ ಪೊಲೀಸ್ ಠಾಣೆಗೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮಾಹಿತಿಯನ್ನು ನೀಡಿದ್ದ. ಪರಪ್ಪನ ಅಗ್ರಹಾರ ಪೊಲೀಸರು ಆತ್ಮಹತ್ಯೆ ಪ್ರಕರಣ ದಾಖಲು ಮಾಡಿಕೊಂಡಿದ್ದರು. ಆದರೆ ಮರಣೋತ್ತರ ಪರೀಕ್ಷೆ ವರದಿಯಲ್ಲಿ ಸಾವಿನ ರಹಸ್ಯ ಹೊರಬಂದಿದೆ. ಬಲವಂತವಾಗಿ ಕುತ್ತಿಗೆ ಹಿಸುಕಿರುವುದು ಬೆಳಕಿಗೆ ಬಂದಿದೆ.

ಕೂಡಲೇ ರಾಜಶೇಖರ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ. ಸದ್ಯ ಆತ್ಮಹತ್ಯೆ ಬದಲಿಗೆ ಕೊಲೆ ಪ್ರಕರಣವನ್ನು ಪೊಲೀಸರು ದಾಖಲು ಮಾಡಿಕೊಂಡಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಬೆಂಗಳೂರಲ್ಲಿ ರೌಡಿಶೀಟರ್ ಬರ್ಬರ ಹತ್ಯೆ, ಟೀ ಕುಡಿಯಲು ಬಂದವನ ಕೊಚ್ಚಿ ಕೊಂದರು

ಬೆಂಗಳೂರು: ರಾಜಧಾನಿಯಲ್ಲಿ ಮತ್ತೊಬ್ಬ ರೌಡ್‌ಶೀಟರ್‌ನ (Rowdy sheeter murder) ಬರ್ಬರ ಕೊಲೆಯಾಗಿದೆ (Murder Case). ರಾತ್ರಿ ಟೀ ಕುಡಿಯಲು ಬಂದಿದ್ದವನನ್ನು ಕೊಚ್ಚಿ ಕೊಂದು ಹಂತಕರು ಪರಾರಿಯಾಗಿದ್ದಾರೆ.

ಕೊಲೆಯಾದ ರೌಡಿಶೀಟರ್‌ನನ್ನು ಸಹದೇವ್ ಎಂದು ಗುರುತಿಸಲಾಗಿದೆ. ಕೋಣನಕುಂಟೆ ಠಾಣೆ ವ್ಯಾಪ್ತಿಯ ರೌಡಿಶೀಟರ್ ಆಗಿದ್ದ ಸಹದೇವನನ್ನು ಚುಂಚನಘಟ್ಟ ಮುಖ್ಯರಸ್ತೆಯಲ್ಲಿ ಭೀಕರವಾಗಿ ಹತ್ಯೆ ಮಾಡಲಾಗಿದೆ.

ರಾತ್ರಿ 9:30 ಸುಮಾರಿಗೆ ಘಟನೆ ನಡೆದಿದೆ. ಟೀ ಕುಡಿಯಲು ಬೇಕರಿ ಬಳಿ ಬಂದಿದ್ದ ರೌಡಿಶೀಟರ್ ಸಹದೇವನನ್ನು ಮೂರು ಬೈಕ್‌ನಲ್ಲಿ ಬಂದಿದ್ದ ಆರು ಮಂದಿ ಹಂತಕರು ಸುತ್ತುವರಿದಿದ್ದು, ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಕ್ಷಣಾರ್ಧದಲ್ಲಿ ಎಸ್ಕೇಪ್ ಆಗಿದ್ದಾರೆ.

ಪುಟ್ಟೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪುಟ್ಟೇನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಹಂತಕರಿಗಾಗಿ ಬಲೆ ಬೀಸಿದ್ದಾರೆ. ಇತ್ತೀಚೆಗೆ ಸಿದ್ಧಾಪುರ ಮಹೇಶ್‌ ಎಂಬ ರೌಡಿಶೀಟರ್‌ನನ್ನು ಜೈಲಿನಿಂದ ಹೊರಬರುತ್ತಲೇ ಕೊಚ್ಚಿ ಕೊಲೆ ಮಾಡಲಾಗಿತ್ತು. ರಾಮನಗರದಲ್ಲೂ ಒಬ್ಬ ರೌಡಿಶೀಟರ್‌ ಕೊಲೆಯಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Karnataka Rain: ಮಳೆ ಅನಾಹುತ; ಜೀವ, ಬೆಳೆ ಹಾನಿಯ ವರದಿ ಕೂಡಲೇ ಸಲ್ಲಿಸುವಂತೆ ಸಿಎಂ ಸೂಚನೆ

Karnataka Rain: ಮಳೆ ಅನಾಹುತ ಮತ್ತು‌ ಪ್ರವಾಹದಿಂದ ಆದ ಜೀವಹಾನಿಗೆ ಪರಿಹಾರ ತುರ್ತಾಗಿ ಕೊಡಬೇಕು. ಕೋಸ್ಟಲ್ ಲೈನ್‌ನಲ್ಲಿ ವಿದ್ಯುತ್ ಕಂಬಗಳ ಅಳವಡಿಕೆ, ಅಗತ್ಯ ಇರುವ ಕಡೆ ವೈರ್‌ಗಳ ದುರಸ್ತಿ ಮತ್ತು ಬದಲಾವಣೆ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

VISTARANEWS.COM


on

Koo

ಕಾರವಾರ: ಮಳೆ ಅನಾಹುತರಿಂದ ಉಂಟಾದ ಜೀವ ಹಾನಿ, ಕೃಷಿ ಮತ್ತು ತೋಟಗಾರಿಕೆ ನಷ್ಟಕ್ಕೆ (Karnataka Rain) ಎನ್‌ಡಿಆರ್‌ಎಫ್‌ ಪ್ರಕಾರ ಪರಿಹಾರ ಒಗದಿಸುವ ಕುರಿತಂತೆ ತಕ್ಷಣ ಹಾನಿಯ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ (Karnataka Rain) ಸೂಚನೆ ನೀಡಿದರು.

ಶಿರೂರು ಗುಡ್ಡ ಕುಸಿತದ ಸ್ಥಳ ಪರಿಶೀಲನೆ ಬಳಿಕ ಕಾರ್ಯದರ್ಶಿಗಳು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆಗಿನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಸೂಚನೆಗಳನ್ನು ನೀಡಿದರು.‌

ಕದ್ರಾ ಅಣೆಕಟ್ಟೆಯಿಂದ ಹೊರಬಿಡುವ ನೀರಿನಿಂದ ತೊಂದರೆಗೊಳಗಾಗುವ ಸಂತ್ರಸ್ತರಿಗೆ ಶಾಶ್ವತ ಪರಿಹಾರ ಒದಗಿಸುವ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಬೇಕು. ಮಳೆ ಅನಾಹುತ ಮತ್ತು‌ ಪ್ರವಾಹದಿಂದ ಆದ ಜೀವಹಾನಿಗೆ ನೀಡಲಾಗಿರುವ ಪರಿಹಾರದ ಕುರಿತು ಮಾಹಿತಿ ಪಡೆದ ಸಿಎಂ ಉಳಿದವರಿಗೆ ತುರ್ತಾಗಿ ಕೊಡಬೇಕು. ಕೋಸ್ಟಲ್ ಲೈನ್‌ನಲ್ಲಿ ವಿದ್ಯುತ್ ಕಂಬಗಳ ಅಳವಡಿಕೆ, ಅಗತ್ಯ ಇರುವ ಕಡೆ ವೈರ್‌ಗಳ ದುರಸ್ತಿ ಮತ್ತು ಬದಲಾವಣೆಗೆ ಸೂಚಿಸಿದರು.

ಕಂದಾಯ ಸಚಿವ ಕೃಷ್ಣ ಬೈರೇಗೌಡ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ,ಶಾಸಕರಾದ ಸತೀಶ್ ಸೈಲ್, ಶಿವರಾಮ ಹೆಬ್ಬಾರ್, ಭೀಮಣ್ಣ ನಾಯ್ಕ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಶಾಲಿನಿ ರಜನೀಶ್, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಅತೀಕ್, ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಧಾನ ಕಾರ್ಯದರ್ಶಿ ರಶ್ಮಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ, ಜಿ.ಪಂ. ಸಿಇಒ ಈಶ್ವರ ಕುಮಾರ್ ಕಾಂದು, ಎಸ್ಪಿ ನಾರಾಯಣ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ | Karnataka Rain : ಭರ್ತಿಯತ್ತ ಜಲಾಶಯಗಳು; ಪ್ರವಾಹ ಭೀತಿ ಹಿನ್ನೆಲೆ ನದಿ ತೀರದಲ್ಲಿ ಹೈ ಅಲರ್ಟ್

ಶಿರೂರು ಗುಡ್ಡ ಕುಸಿತದ ಸ್ಥಳ ವೀಕ್ಷಿಸಿದ ಸಿಎಂ; NDRF-SDRF ತಂಡಗಳ ಕಾರ್ಯಕ್ಕೆ ಮೆಚ್ಚುಗೆ

ಶಿರೂರು: ಅಂಕೋಲಾದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಗುಡ್ಡ ಕುಸಿತ ಸ್ಥಳದಲ್ಲಿ (Karnataka Rain) ಅತ್ಯಂತ ಅಪಾಯಕಾರಿ ಸನ್ನಿವೇಶದಲ್ಲಿ ಜೀವದ ಹಂಗು ತೊರೆದು ಕಾರ್ಯಾಚರಣೆ ನಡೆಸುತ್ತಿರುವ NDRF, SDRF ತಂಡಗಳ ಸಿಬ್ಬಂದಿಯ ಕಾರ್ಯಕ್ಷಮತೆಗೆ ಸಿಎಂ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು.

ಶಿರೂರು ಬಳಿ ಗುಡ್ಡ ಕುಸಿತ ಸ್ಥಳ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಮುಚ್ಚಿ ಹೋಗಿರುವ ರಸ್ತೆಯ ಎಡಭಾಗದಲ್ಲಿ ಕುಸಿತದ ಗುಡ್ಡ-ಬಲ ಭಾಗದಲ್ಲಿ ಭೋರ್ಗರೆದು ಹರಿಯುತ್ತಿರುವ ಕಾಳಿ ನದಿ ಇದೆ. ಜೊತೆಗೆ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಲ್ಲಿ ಮಣ್ಣಿನಡಿ ಸಿಲುಕಿರುವ ಜೀವಗಳ ಪತ್ತೆ ಕಾರ್ಯ ಬಹಳ ಸವಾಲಿನದ್ದಾಗಿದೆ ಎಂದು ಮುಖ್ಯಮಂತ್ರಿಗಳು ಸಿಬ್ಬಂದಿಯ ಶ್ರಮಕ್ಕೆ ಮೆಚ್ಚುಗೆ ಸೂಚಿಸಿದರು.

ನಾಲ್ಕು ತಂಡಗಳು ಗುಡ್ಡ ಕುಸಿತದ ಕೆಳಗೆ ಸಿಲುಕಿರಬಹುದಾದವರ ಪತ್ತೆಗೆ ರಾಡಾರ್ ತಂತ್ರಜ್ಞಾನ ಬಳಸಿ ಕಾರ್ಯಾಚರಣೆ ನಡೆಸುತ್ತಿವೆ. ಇನ್ನು ನಾಲ್ಕು ತಂಡಗಳು ಮತ್ತೊಂದು ಬದಿಯ ನದಿಯೊಳಗೆ ಕಾರ್ಯಾಚರಣೆ ನಡೆಸುತ್ತಿವೆ. ಈ ಬಗ್ಗೆ ಹಲವು ದಿನಗಳಿಂದ ತಾಲ್ಲೂಕಿನಲ್ಲೇ ಮೊಕ್ಕಾಂ ಹೂಡಿರುವ ಕಂದಾಯ ಸಚಿವ ಕೃಷ್ಣಬೈರೇಗೌಡರು ಮುಖ್ಯಮಂತ್ರಿಗಳಿಗೆ ವಿವರಿಸಿದರು.

ಗುಡ್ಡ ಕುಸಿತದ ಸ್ಥಳ ಒಂದು ರೀತಿ ದ್ವೀಪದಂತಾಗಿದೆ. ಸುತ್ತಲೂ ಕಾಳಿ ನದಿ ಭೋರ್ಗರೆದು ಹರಿಯುತ್ತಿದೆ. ನಡುವೆ ಅರ್ಧ ಕುಸಿದ ಗುಡ್ಡ ನಿಂತಿದೆ. ಹೀಗಾಗಿ ಲಭ್ಯವಿರುವ ಎಲ್ಲಾ ಆಧುನಿಕ ತಂತ್ರಜ್ಞಾನ ಬಳಸಲು, ಉನ್ನತ ಮೆಟಲ್ ಡಿಟೆಕ್ಟರ್ ಮತ್ತು ಜೆಸಿಬಿ ಬಳಸಿ ಕಾರ್ಯಾಚರಣೆ ಮಾಡಬೇಕು ಎಂದ ಸಿಎಂ, ಕಾರ್ಯಾಚರಣೆ ವೇಳೆ ಎದುರಾಗಬಹುದಾದ ಅಪಾಯಗಳು ಮತ್ತು ಸವಾಲುಗಳ ಬಗ್ಗೆ ಉನ್ನತ ಮಟ್ಟದ ತಜ್ಞರಿಂದ ಮಾಹಿತಿ ಪಡೆದು ತಂತ್ರಜ್ಞಾನದ ನೆರವು ಪಡೆಯುವಂತೆ ಸೂಚಿಸಿದರು.

ಅಂಕೋಲಾದ ಕಡಲ್ಕೊರೆತದ ಸ್ಥಳಕ್ಕೆ ಭೇಟಿ

ಗುಡ್ಡ ಕುಸಿತ ಸ್ಥಳ ವೀಕ್ಷಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಕೋಲಾದ ಕಡಲ್ಕೊರೆತದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಾಸಕ ಸತೀಶ್ ಸೈಲ್ ಮತ್ತು ಅಧಿಕಾರಿಗಳು ಜೊತೆಗಿದ್ದರು.

ಪತ್ರಕರ್ತರಿಗೆ ರೇನ್ ಕೋಟ್ ಕೊಟ್ಟಿದ್ದೀರಾ?

ಒಂದೇ ಸಮನೆ ಸುರಿಯುತ್ತಿದ್ದ ಭೀಕರ ಮಳೆ ನಡುವೆ ಕಾರ್ಯ ನಿರ್ವಹಿಸುತ್ತಿದ್ದ ಪತ್ರಕರ್ತರು ಮತ್ತು ಕ್ಯಾಮೆರಾಮನ್‌ಗಳನ್ನು ಗಮನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “ಪತ್ರಕರ್ತರಿಗೆಲ್ಲಾ ರೇನ್ ಕೋಟ್ ಮತ್ತು ರಬ್ಬರ್ ಶೂ ಕೊಟ್ಟಿದ್ದೀರಾ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು. ಮುಖ್ಯಮಂತ್ರಿಗಳಿಂದ ಈ ಪ್ರಶ್ನೆ ನಿರೀಕ್ಷಿಸಿರದ ಅಧಿಕಾರಿಗಳು ತಬ್ಬಿಬ್ಬಾದರು.

Continue Reading

ಕರ್ನಾಟಕ

Renaming Ramanagara: ರಾಮನಗರದಲ್ಲಿ ಬೆಂಗಳೂರಿನ ಕಸ ಸುರಿಯಲು ಹುನ್ನಾರ: ಎಚ್‌.ಡಿ. ಕುಮಾರಸ್ವಾಮಿ

Renaming Ramanagara: ಇವರ ಬ್ರ್ಯಾಂಡ್ ಬೆಂಗಳೂರು ರೀತಿ ರಾಮನಗರವನ್ನೂ ಅಭಿವೃದ್ಧಿ ಮಾಡಬೇಕಾ? ರಾಮನಗರ ಜಿಲ್ಲೆ ಅಭಿವೃದ್ಧಿಯಾಗಿ ಹತ್ತು ವರ್ಷಗಳಾಯಿತು. ಇವರು ಬಂದು ಏನು ಅಭಿವೃದ್ಧಿ ಮಾಡುತ್ತಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

VISTARANEWS.COM


on

Koo

ಹಾಸನ: ರಾಮನಗರ ಹೆಸರು ಬದಲಾವಣೆ (Renaming Ramanagara) ಮಾಡಲು ಆಗುತ್ತಾ? ಅವರ ಹೆಸರು ಬದಲಾವಣೆ ಮಾಡಲು ಆಗದಿದ್ದ ಮೇಲೆ ರಾಮನಗರ ಹೆಸರು ಬದಲಾವಣೆ ಮಾಡಲು ಆಗುತ್ತದೆಯೇ? ಅದರ ಬಗ್ಗೆ ತಲೆಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ. 1989ರಲ್ಲಿ ಇವರು ಸಾತನೂರಿನಲ್ಲಿ ಶಾಸಕರಾಗಿರಲಿಲ್ಲವೇ? ಹೇಗಿತ್ತು ಸಾತನೂರು? ಕನಕಪುರ ಹೇಗಿತ್ತು? ಯಾರಿಂದ ಅಭಿವೃದ್ಧಿ ಆಯಿತು ಎಂಬ ಮಾಹಿತಿ ಇಲ್ಲವೇ ಅವರಿಗೆ ಎಂದು ಡಿಸಿಎಂ ಡಿಕೆಶಿ ವಿರುದ್ಧ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ವಿಚಾರದ ಬಗ್ಗೆ ಟೀಕಿಸಿದ ಅವರು, ಇವರ ಬ್ರ್ಯಾಂಡ್ ಬೆಂಗಳೂರು ರೀತಿ ರಾಮನಗರವನ್ನೂ ಅಭಿವೃದ್ಧಿ ಮಾಡಬೇಕಾ? ರಾಮನಗರ ಜಿಲ್ಲೆ ಅಭಿವೃದ್ಧಿಯಾಗಿ ಹತ್ತು ವರ್ಷಗಳಾಯಿತು. ಇವರು ಬಂದು ಏನು ಅಭಿವೃದ್ಧಿ ಮಾಡುತ್ತಾರೆ? ಈಗ ಬೆಂಗಳೂರಿನ ಜಾಗವನ್ನು ಯಾವನಿಗೋ 45 ಸಾವಿರ ಕೋಟಿಗೆ ಮೂವತ್ತು ವರ್ಷ ಲೀಸ್ʼಗೆ ಕೊಡಲು ಹೊರಟಿದ್ದಾರೆ. ಬ್ರ್ಯಾಂಡ್ ಬೆಂಗಳೂರು ಮಾಡೋದು ಕಸ ತುಂಬಿಸಲಿಕ್ಕಾ? ರಾಮನಗರ ತೆಗೆದು ಬೆಂಗಳೂರು ದಕ್ಷಿಣ ಹೆಸರಿಡುವುದು ಬೆಂಗಳೂರಿನ ಕಸ ತಂದು ತುಂಬಿಸಲಿಕ್ಕಾ? ಕಪ್ಪುಪಟ್ಟಿಯಲ್ಲಿ ಇದ್ದವರನ್ನು ಕರೆದುಕೊಂಡು ಬಂದು ಲೀಸ್ ಕೊಡಲು ಹೊರಟಿದ್ದೀರಾ? ಸುಮ್ಮನೆ ಬಾಯಿ ಚಪಲಕ್ಕೆ ಹೇಳುತ್ತಿಲ್ಲ ನಾನು, ಸರ್ಕಾರದಲ್ಲಿ ಏನೇನು ನಡೆದಿದೆ ಎಲ್ಲಾ ಮಾಹಿತಿ ಸಂಗ್ರಹ ಮಾಡಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ | Lakshmi Hebbalkar: ಮಳೆಗೆ ತತ್ತರಿಸಿದ ಉಡುಪಿ; ನನ್ನ ಅವಶ್ಯಕತೆ ಇದ್ದಾಗಷ್ಟೇ ಬರ್ತೀನಿ ಎಂದ ಲಕ್ಷ್ಮೀ ಹೆಬ್ಬಾಳಕರ್

ಚನ್ನಪಟ್ಟಣ ಅಭ್ಯರ್ಥಿ ಬಗ್ಗೆ ಇನ್ನು ನಿರ್ಧಾರ ಮಾಡಿಲ್ಲ

ಚನ್ನಪಟ್ಟಣ ಉಪ ಚುನಾವಣೆ ಅಭ್ಯರ್ಥಿ ಬಗ್ಗೆ ಇನ್ನು ನಿರ್ಧಾರ ಮಾಡಿಲ್ಲ. ಯಾರೇ ಅಭ್ಯರ್ಥಿಯಾದರೂ ಅವರು
ಎನ್‌ಡಿಎ ಅಭ್ಯರ್ಥಿಯಾಗುತ್ತಾರೆ. ಎನ್‌ಡಿಎ ಅಭ್ಯರ್ಥಿ ನಿಲ್ಲುವುದಷ್ಟೇ ಅಲ್ಲ, ಗೆಲ್ಲಲೇಬೇಕು. ಗೆಲ್ಲುವುದಕ್ಕೆ ಏನೆಲ್ಲಾ ನಿರ್ಧಾರ ಮಾಡಬೇಕೋ ಅದನ್ನೆಲ್ಲಾ ಮಾಡುತ್ತೇವೆ. ಯಾರು ಅಭ್ಯರ್ಥಿ ಎಂದು ಇನ್ನೂ ಚರ್ಚೆ ಹಂತಕ್ಕೆ ಬಂದಿಲ್ಲ. ಕೇಂದ್ರದ ನಾಯಕರು, ರಾಜ್ಯದ ಬಿಜೆಪಿ ನಾಯಕರು ಎಲ್ಲಾ ಕುಳಿತು ಚರ್ಚೆ ಮಾಡುತ್ತೇವೆ. ಯೋಗೇಶ್ವರ್ ಅವರು ಗೆಲ್ಲಲು ಅವಕಾಶ ಇದ್ದರೆ ಅವರೇ ಚುನಾವಣೆಗೆ ನಿಲ್ಲುತ್ತಾರೆ. ಇಲ್ಲವೆಂದರೆ ಬೇರೆ ಅಭ್ಯರ್ಥಿಯನ್ನು ನಿಲ್ಲಿಸುತ್ತೇವೆ ಎಂದು ಕುಮಾರಸ್ವಾಮಿ ಅವರು ಪ್ರಶ್ನೆಯೊಂದಕ್ಕೆ ಉತ್ತರ ಕೊಟ್ಟರು.

ಸ್ಥಳೀಯ ಕಾರ್ಯಕರ್ತನಿಗೆ ಟಿಕೆಟ್ ಕೊಡಬೇಕಾ? ಎನ್ನುವ ಬಗ್ಗೆ ತೀರ್ಮಾನ ಮಾಡುತ್ತೇವೆ. ನಾನು ಮೊದಲಿನಿಂದಲೂ ಹೇಳುತ್ತಿದ್ದೇನೆ. ಹಾಸನದಲ್ಲಿ ಒಬ್ಬ ಕಾರ್ಯಕರ್ತನನ್ನು ನಿಲ್ಲಿಸಿ ಗೆಲ್ಲಿಸುತ್ತೇನೆ ಎಂದು ಹೇಳಿದ್ದೆ. ಗೆಲ್ಲಿಸಲಿಲ್ಲವೇ? ನಮ್ಮ ಪಕ್ಷಕ್ಕೆ ಆ ಶಕ್ತಿ ಇದೆ, ಚನ್ನಪಟ್ಟಣದಲ್ಲೂ ಅಷ್ಟೇ ಎಂದು ಅವರು ಹೇಳಿದರು.

ಇದನ್ನೂ ಓದಿ | Vande Mataram: ಸಂಸತ್ತಿನಲ್ಲಿ ವಂದೇ ಮಾತರಂ, ಥ್ಯಾಂಕ್ಸ್‌ ಎಂದು ಹೇಳುವಂತಿಲ್ಲ; ಏಕಿಂಥ ಆದೇಶ?

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಎಚ್.ಕೆ.ಕುಮಾರಸ್ವಾಮಿ, ಶಾಸಕ ಸಿ.ಎನ್.‌ಬಾಲಕೃಷ್ಣ, ಸ್ವರೂಪ್‌ ಪ್ರಕಾಶ್‌, ಸಿಮೆಂಟ್‌ ಮಂಜುನಾಥ್‌, ಹೆಚ್.ಕೆ.ಸುರೇಶ್‌ ಮುಂತಾದವರು ಹಾಜರಿದ್ದರು.

Continue Reading

ಕರ್ನಾಟಕ

HD Kumaraswamy: ನನ್ನ ಮತ್ತು ದೇವೇಗೌಡರ ಸರ್ಕಾರ ಕೆಡವಿದ್ದು ಯಾರು ಅಂತ ಹೇಳಿ; ಡಿಕೆಶಿ ವಿರುದ್ಧ ಎಚ್‌ಡಿಕೆ ಕಿಡಿ

HD Kumaraswamy: ಆವತ್ತು ನಾನಾಗಲಿ ಅಥವಾ ದೇವೇಗೌಡರಾಗಲಿ ಕಾಂಗ್ರೆಸ್‌ನವರ ಮನೆ ಬಾಗಿಲಿಗೆ ಬಂದಿದ್ದೆವಾ? ಒಬ್ಬ ಕನ್ನಡಿಗನನ್ನು ಪ್ರಧಾನಿ ಸ್ಥಾನದಿಂದ ತೆಗೆದವರು ಯಾರು? ನಾನು ಏನು ತಪ್ಪು ಮಾಡಿದ್ದೆ ಎಂದು ನನ್ನ ಸರ್ಕಾರ ತೆಗೆದರು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

VISTARANEWS.COM


on

HD Kumaraswamy
Koo

ಹಾಸನ: ಪಾಪ ಕನಕಪುರದವರು… ಬ್ರ್ಯಾಂಡ್ ಬೆಂಗಳೂರು ಮಾಡಲು ಹೊರಟವರು ಹೇಳುತ್ತಿದ್ದಾರೆ! ಕುಮಾರಸ್ವಾಮಿ 39 ಸೀಟ್ ಗೆದ್ದರು, ಮುಖ್ಯಮಂತ್ರಿ ಮಾಡಿದ್ದೀವಿ, ದೇವೇಗೌಡರು 16 ಸೀಟ್ ಗೆದ್ದರು, ಪ್ರಧಾನಮಂತ್ರಿ ಮಾಡಿದ್ದೀವಿ ಎಂದು ಹೇಳಿದ್ದಾರೆ. ಆದರೆ, ನನ್ನ ಮತ್ತು ದೇವೇಗೌಡರ ಸರ್ಕಾರಗಳನ್ನು ತೆಗೆದವರು ಯಾರು ಎನ್ನುವುದನ್ನು ಅವರು ಹೇಳಬೇಕಲ್ಲವೇ? ಹೀಗೆಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ (HD Kumaraswamy) ತಿರುಗೇಟು ಕೊಟ್ಟರು.

ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆವತ್ತು ನಾನಾಗಲಿ ಅಥವಾ ದೇವೇಗೌಡರಾಗಲಿ ಕಾಂಗ್ರೆಸ್‌ನವರ ಮನೆ ಬಾಗಿಲಿಗೆ ಬಂದಿದ್ದೆವಾ? ದೇವೇಗೌಡರನ್ನು ಪ್ರಧಾನಮಂತ್ರಿಯನ್ನಾಗಿ ಮಾಡಿದ್ದು ಕಮ್ಯುನಿಸ್ಟ್ ಪಕ್ಷಗಳು ಹಾಗೂ ಸಂಯುಕ್ತ ರಂಗದ ಅಂಗಪಕ್ಷಗಳು. ಒಬ್ಬ ಕನ್ನಡಿಗನನ್ನು ಪ್ರಧಾನಿ ಸ್ಥಾನದಿಂದ ತೆಗೆದವರು ಯಾರು? ನಾನು ಏನು ತಪ್ಪು ಮಾಡಿದ್ದೆ ಎಂದು ನನ್ನ ಸರ್ಕಾರ ತೆಗೆದರು? ಇದರ ಬಗ್ಗೆಯೂ ಉಪ ಮುಖ್ಯಮಂತ್ರಿ ಹೇಳಬೇಕಲ್ಲವೇ ಎಂದು ಚಾಟಿ ಬೀಸಿದರು.

ಈ ಸರ್ಕಾರದಲ್ಲಿ ದಲಿತರು ಅಂತ ಕರೆಯಬೇಡಿ ಎಂದು ಚರ್ಚೆ ನಡೆದಿದೆ. ಅಹಿಂದ ಎಂದು ಎಷ್ಟು ವರ್ಷದಿಂದ ಇಟ್ಟುಕೊಂಡಿದ್ದೀರಾ? ಅಹಿಂದ ಹೆಸರು ಇಟ್ಟುಕೊಂಡು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಅವಮಾನ ಮಾಡುತ್ತಿದ್ದೀರಾ? ಅವರಿಗೆ ಮೀಸಲಿಟ್ಟಿದ್ದ ಹಣ ದುರುಪಯೋಗ ಮಾಡಿಕೊಂಡಿದ್ದೀರಿ. ದಾನ-ಧರ್ಮ ಮಾಡಿ ಬಂದವರಂತೆ ಇವರು ಮಾತನಾಡುತ್ತಿದ್ದಾರೆ. ಬಹಳ ನೀತಿವಂತರು ಇವರು ಎಂದು ಕೇಂದ್ರ ಸಚಿವರು ಟೀಕಾಪ್ರಹಾರ ನಡೆಸಿದರು.

ಇದನ್ನೂ ಓದಿ | HD Kumaraswamy: ದರೋಡೆ, ಲೂಟಿ ತಡೆಯಲು ಸೇನೆ ಕರೆಸಬೇಕಿತ್ತಾ? ಡಿಕೆಶಿಗೆ ತಿರುಗೇಟು ಕೊಟ್ಟ ಎಚ್‌ಡಿಕೆ

ಕುಮಾರಸ್ವಾಮಿ ಇಲ್ಲಿ ಏಕೆ ಬರುತ್ತಾನೆ ಎಂದು ಉಪ ಮುಖ್ಯಮಂತ್ರಿ ಕೇಳುತ್ತಾರೆ. ಮಿಲಿಟರಿ ಕರೆದುಕೊಂಡು ಬಂದಿದ್ದಾರೆಯೇ ಎನ್ನುತ್ತಾರೆ. ಇಲ್ಲಿಗೆ ಮಿಲಿಟರಿ ಬರುವ ಕಾಲವೂ ಬರುತ್ತದೆ. ಅವರು ಏಕೆ ಆ ರೀತಿಯ ಹೇಳಿಕೆ ಕೊಟ್ಟರು ಎಂದು ನಾನು ಯೋಚನೆ ಮಾಡಿದೆ. ದರೋಡೆ ಮಾಡುವುದನ್ನು ನಿಲ್ಲಿಸಲು, ಮಿಲಿಟರಿ ಕರೆದುಕೊಂಡು ಬನ್ನಿ ಎಂಬರ್ಥದಲ್ಲಿ ಅವರು ಹೇಳಿಕೆ ಕೊಟ್ಟಿರಬಹುದು. ಮಿಲಿಟರಿ ಬರುವ ಕಾಲವೂ ಬರುತ್ತದೆ, ಆಗ ಕರೆದುಕೊಂಡು ಬರೋಣವಂತೆ ಎಂದು ಡಿಕೆಶಿಗೆ ತಿರುಗೇಟು ಕೊಟ್ಟರು.

ಹಾಸನ ಜಿಲ್ಲೆಯಲ್ಲಿ ದೊಡ್ಡ ಮಟ್ಟದ ಮಳೆ ಅನಾಹುತ ಆಗಿದೆ. ಶಿರಾಡಿ ಘಾಟ್ ರಸ್ತೆಯಲ್ಲಿ ಅವೈಜ್ಞಾನಿಕವಾದ ಕಳಪೆ ಕಾಮಗಾರಿಯನ್ನು ಗಮನಿಸಿದ್ದೇನೆ. ಲೋಕಸಭೆ ಚುನಾವಣೆ ನಂತರ ಮೊದಲ ಬಾರಿಗೆ ಜಿಲ್ಲೆಗೆ ಬಂದಿದ್ದೇನೆ. ಕೇಂದ್ರದ ಸಾರಿಗೆ ಸಚಿವರ ಜತೆಗೂಡಿ ಹಾಸನಕ್ಕೆ ಬರಬೇಕು ಎಂಬ ಉದ್ದೇಶವನ್ನು ಕೂಡ ಹೊಂದಿದ್ದೇನೆ. ಈ ರಸ್ತೆಯನ್ನು ಸುರಂಗ ಮಾರ್ಗದ ಮೂಲಕ ನಿರ್ಮಾಣ ಮಾಡಬೇಕು ಎಂಬ ಪ್ರಸ್ತಾಪ ಇತ್ತು. ಅರಣ್ಯ ಇಲಾಖೆಯ ತೊಡಕುಗಳು ಇವೆ, ಅದರ ಬಗ್ಗೆಯೂ ಸಾರಿಗೆ ಸಚಿವರ ಜತೆ ಚರ್ಚಿಸುತ್ತೇನೆ. ನಾಳೆಯಿಂದ ಸಂಸತ್ ಅಧಿವೇಶನ ಪ್ರಾರಂಭ ಆಗುತ್ತಿದೆ ಎಂದು ಕೇಂದ್ರ ಸಚಿವರು ಮಾಹಿತಿ ನೀಡಿದರು.

ದಲಿತರ ಭೂಮಿಗೆ ಸಿಎಂ ಕೈ

ಸಿಎಂ ಸಿದ್ದರಾಮಯ್ಯ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಕಳೆದ ಒಂದು ಕಾಲ ವರ್ಷದಿಂದ ಅವರು ಆಡಳಿತ ನಡೆಸುತ್ತಿದ್ದಾರೆ. 2010-2011 ಇಸವಿಯದ್ದು ಈಗ ಮಾತನಾಡುತ್ತಿದ್ದೀರಾ, ಅವತ್ತು ನಿಮ್ಮ ಗಮನಕ್ಕೆ ಬಂದಿರಲಿಲ್ಲವಾ? ನೀವು ಮಾಡಿರುವ ಅಕ್ರಮಗಳನ್ನು ಮುಚ್ಚಿಕೊಳ್ಳಲು ಈಗ ತನಿಖೆ ಮಾಡಿಸುತ್ತೇವೆ ಎಂದು ಹೇಳುತ್ತಿದ್ದೀರಾ? ಯಾವ ತನಿಖೆ ನಡೆಸಿ ಯಾರ ಮೇಲೆ ಕ್ರಮ ತೆಗೆದುಕೊಳ್ಳುತ್ತೀರಿ? ಸ್ವತಂತ್ರವಾದ ಸರ್ಕಾರವನ್ನು ಜನರು ನನಗೆ ಕೊಡಲಿಲ್ಲ. ನನಗೆ ಕೆಲ ವರದಿಗಳನ್ನು ಕೊಡಲು ಬಿಡಲಿಲ್ಲ. ಮೈಸೂರಿನ ಮುಡಾದಲ್ಲಿ ಅಷ್ಟೆಲ್ಲಾ ತಪ್ಪು ಮಾಡಿ ನನ್ನ ಬಾಮೈದ ತಪ್ಪು ಮಾಡಿದ್ದಾನೆ ಎಂದು ಅವರ ಮೇಲೆ ಸಿಎಂ ಹೇಳುತ್ತಿದ್ದಾರೆ. ಆ ಭೂಮಿಯನ್ನು ನಿಮ್ಮ ಬಾಮೈದ ತೆಗೆದುಕೊಳ್ಳಲು ಅವಕಾಶ ಇತ್ತಾ? ಅದು ದಲಿತರಿಗೆ ಸೇರಿದ ಭೂಮಿ ಎಂದು ಕಿಡಿಕಾರಿದರು.

ಸತ್ತವನು ಬಂದು ಅರ್ಜಿ ಹಾಕಿದನಾ?

ಸಿದ್ದರಾಮಯ್ಯ ಅವರೇ ಮುಡಾದಲ್ಲಿ ಯಾರದ್ದೋ ಜಮೀನು, 62 ಕೋಟಿ ಕೊಟ್ಟರೆ ಪುಕ್ಸಟ್ಟೆ ಬಿಟ್ಟುಕೊಡ್ತೀರಾ ನೀವು? 1992ರಲ್ಲಿ ಅಂತಿಮ ಅಧಿಸೂಚನೆ ಆಗಿದೆ. 1998ರಲ್ಲಿ ಅವರು ಬದುಕೇ ಇರಲಿಲ್ಲ. ಡಿನೋಟಿಫೀಕೇಷನ್ ಮಾಡಿ ಎಂದು ಅರ್ಜಿ ಕೊಟ್ಟವರು ಯಾರು? ನಿಂಗ ಎನ್ನುವ ವ್ಯಕ್ತಿ ತೀರಿಕೊಂಡಿದ್ದು ಯಾವಾಗ? ಸ್ವರ್ಗದಿಂದ ಬಂದು ಅರ್ಜಿ ಕೊಟ್ಟು ಡಿನೋಟಿಫಿಕೇಷನ್ ಮಾಡಿ ಎಂದು ಕೇಳಿದ್ರಾ ಅವರು? ಆ ಜಮೀನನ್ನು ನಿಮ್ಮ ಬಾಮೈದ ಖರೀದಿ ಮಾಡಿ ದಾನ ಕೊಟ್ಟ ಎನ್ನುವುದೆಲ್ಲಾ ಬರೀ ಡ್ರಾಮಾ. ಇದರಲ್ಲಿ ನಿಮ್ಮ ಕುಟುಂಬದ ನೇರ ಪಾತ್ರ ಇದೆ ಎಂದು ಕೇಂದ್ರ ಸಚಿವರು ಆರೋಪ ಮಾಡಿದರು.

ಮುಡಾದಲ್ಲಿ ನನ್ನದೂ ನಿವೇಶನ ಇದೆ ಎಂದು ಚರ್ಚೆ ಆಗುತ್ತಿದೆ. ನೂರಾರು ಬಾರಿ ಹೇಳಿದ್ದೇನೆ, ನನ್ನ ಜೀವನ ತೆರೆದ ಪುಸ್ತಕ ಎಂದು. ನನಗೆ 1985ರಲ್ಲಿ 21,000 ಚದರ ಅಡಿ ಜಾಗವನ್ನು ಇಂಡಸ್ಟ್ರಿಯಲ್ ಲೇಔಟ್‌ನಲ್ಲಿ ಹಂಚಿಕೆ ಮಾಡಿದ್ದಾರೆ. ನಲವತ್ತು ವರ್ಷದ ಹಿಂದೆ ಅದು ಹಂಚಿಕೆ ಆಗಿದೆ. ದಾಖಲೆ ತೆಗೆಯಿರಿ. ನನಗೆ ಹಂಚಿಕೆ ಆಗಿದ್ದಕ್ಕೆ ಹಣವನ್ನೂ ಕಟ್ಟಿದ್ದೇನೆ. ನನಗೆ ಹಂಚಿಕೆ ಆಗಿರುವ ಜಾಗದಲ್ಲಿ ಯಾವನೋ ಒಬ್ಬ ಕಟ್ಟಡ ಕಟ್ಟಿಕೊಂಡಿದ್ದಾನೆ. ಆತ ಕಟ್ಟಡ ಕಟ್ಟಿರುವುದರಿಂದ ಮತ್ತೆ ಅರ್ಜಿ ಹಾಕುವುದು ಬೇಡ ಅಂದುಕೊಂಡಿದ್ದೆ. ಆದರೆ, ನನ್ನ ಸ್ನೇಹಿತರು ನನ್ನ ಗಮನಕ್ಕೆ ಬಾರದೆ ಸಹಿ ಹಾಕಿಸಿಕೊಂಡು ಹೋಗಿದ್ದಾರೆ. ಇಲ್ಲಿಯವರೆಗೆ ನನಗೆ ಯಾವ ಮಾಹಿತಿಯೂ ಬಂದಿಲ್ಲ ಎಂದು ಕುಮಾರಸ್ವಾಮಿ ಅವರು ಮಾಹಿತಿ ನೀಡಿದರು.

ಇದನ್ನೂ ಓದಿ | Vande Mataram: ಸಂಸತ್ತಿನಲ್ಲಿ ವಂದೇ ಮಾತರಂ, ಥ್ಯಾಂಕ್ಸ್‌ ಎಂದು ಹೇಳುವಂತಿಲ್ಲ; ಏಕಿಂಥ ಆದೇಶ?

ಮುಖ್ಯಮಂತ್ರಿಗಳೇ ದಯಮಾಡಿ ಹೇಳುತ್ತೇನೆ, ದಾಖಲೆಗಳನ್ನು ತೆಗೆದು ನೋಡಿ. ಯಾವ್ಯಾವ ಮಂತ್ರಿಗಳು ಹೇಳಿಕೆ ಕೊಡುತ್ತಿದ್ದಾರೆ ಎಂದು ಜನರ ಮುಂದೆ ಇಟ್ಟುಬಿಡಿ. ವಿಷಯ ತಿಳಿದಕೊಂಡು, ದಾಖಲೆ ಹಿಡಿದುಕೊಂಡು ಮಾತಾಡಬೇಕು. ಮುಡಾದ್ದು ದಾಖಲೆ ಸಮೇತ ಮಾತನಾಡುತ್ತಿದ್ದೇವೆ ನಾವು. ನಿಮಗೆ ನಾಚಿಕೆ ಆಗಲ್ವಾ ಸಿದ್ದರಾಮಯ್ಯನವರೇ..? ನಿಮ್ಮ ಮುಖ ನೋಡಿದರೆ ಗೊತ್ತಾಗುತ್ತದೆ, ನಿಮ್ಮ ಮುಖದಲ್ಲಿ ಪಾಪಪ್ರಜ್ಞೆ ಎನ್ನುವುದು ಎದ್ದು ಕಾಣುತ್ತಿದೆ. ವಿಧಾನಸಭೆಯಲ್ಲಿ ನೀವು ಕೊಟ್ಟ ಉತ್ತರ ಇದೆಯಲ್ಲಾ, ಅದನ್ನು ನೋಡಿದರೆ ಗೊತ್ತಾಗುತ್ತದೆ ನಿಮ್ಮ ಸ್ಥಿತಿ. ಹಿಂದೆ ನೀವು ಯಾವ ರೀತಿ ಉತ್ತರ ಕೊಡುತ್ತಿದ್ದಿರಿ, ಶುಕ್ರವಾರ ಯಾವ ರೀತಿ ಉತ್ತರ ಕೊಟ್ಟಿರಿ? ಎಲ್ಲವನ್ನು ಗಮನಿಸಿದ್ದೇನೆ. ಈ ಸರ್ಕಾರದ ಪಾಪದ ಕೊಡ ತುಂಬಿ ಹೋಗಿದೆ ಎಂದು ಕುಮಾರಸ್ವಾಮಿ ಕಿಡಿಕಾರಿದರು.

Continue Reading

ಮಳೆ

Karnataka Weather : ಥಂಡಿ ಮಿಶ್ರಿತ ಗಾಳಿ-ಮಳೆಗೆ ಹೈರಣಾದ ಜನತೆ; ಜು.25ರವರಗೆ ಮಳೆ ಮುಂದುವರಿಕೆ

Karnataka Weather Forecast : ರಾಜ್ಯಾದ್ಯಂತ ಮಳೆಯಾಟ (Rain News) ಮುಂದುವರಿದಿದ್ದು, ಜನರು ತತ್ತರಿಸಿ ಹೋಗಿದ್ದಾರೆ. ಮಳೆಗೆ ಮನೆಯಿಂದ ಹೊರಬರಲು ಆಗದೆ ಒಳಗೆ ಕೂರಲು ಆಗದೆ ಚಡಪಡಿಸುವಂತಾಗಿದೆ. ಸದ್ಯ ಮುಂದಿನ ಐದು ದಿನಗಳಿಗೆ ಮಳೆ ಮುನ್ಸೂಚನೆಯನ್ನು ನೀಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು/ವಿಜಯನಗರ: ಭಾನುವಾರ ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯು (Karnataka Weather Forecast) ಅಬ್ಬರಿಸಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಮಧ್ಯಾಹ್ನದಿಂದ ಜಿಟಿಜಿಟಿ ಮಳೆಯಾಗಿತ್ತು. ಥಂಡಿ ಮಿಶ್ರಿತ ಗಾಳಿ ಜತೆಗೆ ಜಿಟಿ ಜಿಟಿ ಮಳೆಗೆ (Rain news) ಜನರು ಹೈರಾಣಾದರು. ಹಡಗಲಿ, ಹರಪನಹಳ್ಳಿ, ಕೂಡ್ಲಿಗಿ, ಕೊಟ್ಟೂರು, ಹಗರಿಬೊಮ್ಮನಹಳ್ಳಿ ತಾಲೂಕುಗಳಲ್ಲಿಯೂ ಇದೇ ರೀತಿಯ ವಾತಾವರಣ ಇತ್ತು.

ಇನ್ನೂ ಜು.22ರಂದು ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆಯೊಂದಿಗೆ ನಿರಂತರ ಗಾಳಿಯ ವೇಗ 30-40 ಕಿಮೀ ತಲುಪುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬಹುತೇಕ ಸ್ಥಳಗಳಲ್ಲಿ ಲಘುವಾಗಿ ಮಧ್ಯಮ ಮಳೆ ಜತೆಗೆ ಗಾಳಿಯು ಸಾಥ್‌ ನೀಡಲಿದೆ. ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಬೆಂಗಳೂರಲ್ಲಿ ಹಗುರ ಮಳೆ

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಥಂಡಿ ಗಾಳಿ ಜತೆಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ಮತ್ತು 21 ಡಿ.ಸೆ ಇರಲಿದೆ.

ಇದನ್ನೂ ಓದಿ: Karnataka Rain : ಭರ್ತಿಯತ್ತ ಜಲಾಶಯಗಳು; ಪ್ರವಾಹ ಭೀತಿ ಹಿನ್ನೆಲೆ ನದಿ ತೀರದಲ್ಲಿ ಹೈ ಅಲರ್ಟ್

ಬೆಳಗಾವಿಯಲ್ಲಿ 17 ಸಂಪರ್ಕ ಸೇತುವೆಗಳು ಜಲಾವೃತ

ಬೆಳಗಾವಿ: ಭಾರಿ ಮಳೆಗೆ (Karnataka Rain) ಬೆಳಗಾವಿ ಜಿಲ್ಲೆಗೆ ಸಪ್ತ ನದಿಗಳ ನೆರೆ ಭೀತಿ ಶುರುವಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಕೇವಲ ಐದು ದಿನದಲ್ಲಿ 17 ಸಂಪರ್ಕ ಸೇತುವೆಗಳು ಜಲಾವೃತಗೊಂಡಿದೆ. ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯ ಏಳು ಸೇತುವೆಗಳು ಹಾಗೂ ಬೆಳಗಾವಿ ವ್ಯಾಪ್ತಿಯಲ್ಲಿ ಹತ್ತು ಸಂಪರ್ಕ ಸೇತುವೆ ಮುಳುಗಡೆಯಾಗಿವೆ.

ದೂದಗಂಗಾ ನದಿಗೆ ದತ್ತವಾಡ-ಮಲ್ಲಿಕವಾಡ, ಬೋಜ್-ಕಾರದಗಾ, ಬೋಜವಾಡಿ-ಕುಣ್ಣೂರ ಹಾಗೂ ವೇದಗಂಗಾ ನದಿಗೆ ಜತ್ರಾಟ-ಭೀವಶಿ, ಅಕ್ಕೋಳ-ಸಿದ್ನಾಳ, ಕೃಷ್ಣಾ ನದಿಗೆ ಮಾಂಜರಿ-ಬಾವನಸೌದತ್ತಿ, ಹಿರಣ್ಯಕೇಶಿ ನದಿಗೆ ಯರನಾಳ-ಮದಮಕ್ಕನಾಳ ಸೇರಿ ಘಟಪ್ರಭಾ ನದಿಗೆ ಸುಣಧೋಳಿ – ಮೂಡಲಗಿ, ಅವರಾದಿ- ನಂದಗಾಂವ, ಕಮಲದಿನ್ನಿ – ಹುಣಶ್ಯಾಳ ಪಿವೈ, ವಡ್ಡರಹಟ್ಟಿ- ಉದಗಟ್ಟಿ, ಗೋಕಾಕ್-ಶಿಂಗಳಾಪುರ, ಮಲಪ್ರಭಾಗೆ ಖಾನಾಪುರ-ಹೆಮ್ಮಡಗಾ, ಸಾತ್ನಾಳಿ-ಮಾಸಾಳಿ ಸಂಪರ್ಕ ಕಡಿತಗೊಂಡಿದೆ. ಇದರಿಂದ ಬರೋಬ್ಬರಿ 34 ಗ್ರಾಮಗಳಿಗೆ ಸಂಪರ್ಕ ಕಡಿತವಾಗಿದ್ದು, ಕಿ.ಮೀ ಗಟ್ಟಲೇ ಸುತ್ತಿ ಹಾಕಿ ಓಡಾಡುವಂತಾಗಿದೆ.

ಕೊಡಗಿನಲ್ಲಿ ಕರೆಂಟ್‌ ಶಾಕ್‌ಗೆ ಎತ್ತು ಸಾವು

ಕೊಡಗು: ಗದ್ದೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಎತ್ತೊಂದು ಮೃತಪಟ್ಟಿದೆ. ಮತ್ತೊಂದು ಎತ್ತು ಹಾಗೂ ರೈತನ ಕುಟುಂಬ ಹಾಗೂಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೊಡಗಿನ ಸೋಮವಾರಪೇಟೆ ತಾಲೂಕಿನ ದೊಡ್ಡಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಗದ್ದೆಯಲ್ಲಿ ಉಳುಮೆ ಮಾಡುತ್ತಿದ್ದ ಸಂದರ್ಭದಲ್ಲಿ ಕರೆಂಟ್‌ ಶಾಕ್‌ ಹೊಡೆದಿದೆ. ಈ ವೇಳೆ ಒಂದು ಎತ್ತು ಮೃತಪಟ್ಟರೆ, ಕುಂಬಗೌಡನ ಸದಾ ಅವರ ಪತ್ನಿ ವೀಣಾ, ಮತ್ತೊಂದು ಎತ್ತು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಭಾರಿ ಮಳೆ ಹಿನ್ನೆಲೆಯಲ್ಲಿ ಕಂಬದಿಂದ ವಿದ್ಯುತ್ ಲೀಕೇಜ್‌ ಆಗಿದ್ದೆ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಚೆಸ್ಕಾಂ ಸಿಬ್ಬಂದಿ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Mamata Banerjee
ದೇಶ9 mins ago

Mamata Banerjee: ‘ನಾನು ಕಾಫಿರ್‌ ಅಲ್ಲ’ ಎಂದ ಮಮತಾ ಬ್ಯಾನರ್ಜಿಗೆ ಬಿಜೆಪಿ ತಿರುಗೇಟು; ಏನಿದು ವಿವಾದ?

Joe Root
ಪ್ರಮುಖ ಸುದ್ದಿ22 mins ago

Joe Root : ವೆಸ್ಟ್​ ಇಂಡೀಸ್ ವಿರುದ್ಧ ಶತಕ ಬಾರಿಸಿ ಸ್ಟೀವ್​ ವಾ ದಾಖಲೆ ಸರಿಗಟ್ಟಿದ ಜೋ ರೂಟ್​

ಕರ್ನಾಟಕ24 mins ago

Karnataka Rain: ಮಳೆ ಅನಾಹುತ; ಜೀವ, ಬೆಳೆ ಹಾನಿಯ ವರದಿ ಕೂಡಲೇ ಸಲ್ಲಿಸುವಂತೆ ಸಿಎಂ ಸೂಚನೆ

Paris Olympics 2024 :
ಕ್ರೀಡೆ55 mins ago

Paris Olympics 2024 : ಒಲಿಂಪಿಕ್ಸ್​ ಸ್ಪರ್ಧೆಗೆ ಹೊರಟಿರುವ ಅಥ್ಲೀಟ್​ಗೆ 8.5 ಕೋಟಿ ರೂ. ಪ್ರೋತ್ಸಾಹಧನ ನೀಡಿದ ಬಿಸಿಸಿಐ

ಕರ್ನಾಟಕ1 hour ago

Renaming Ramanagara: ರಾಮನಗರದಲ್ಲಿ ಬೆಂಗಳೂರಿನ ಕಸ ಸುರಿಯಲು ಹುನ್ನಾರ: ಎಚ್‌.ಡಿ. ಕುಮಾರಸ್ವಾಮಿ

Budget Session 2024
ದೇಶ1 hour ago

Budget Session 2024: ನಾಳೆಯಿಂದ ಬಜೆಟ್‌ ಅಧಿವೇಶನ; ಕೇಂದ್ರದ ಅಜೆಂಡಾ ಏನು? ಪ್ರತಿಪಕ್ಷಗಳ ತಂತ್ರವೇನು?

Paris Olympics 2024
ಕ್ರಿಕೆಟ್1 hour ago

Paris Olympics 2024 : ಒಲಿಂಪಿಕ್ಸ್​ನಲ್ಲಿ ಸ್ಪರ್ಧಿಸಲಿರುವ ಈ ಅಥ್ಲೀಟ್​ಗೆ ಕೇವಲ 11 ವರ್ಷ! ಇಲ್ಲಿದೆ ಆಕೆಯ ವಿವರ

HD Kumaraswamy
ಕರ್ನಾಟಕ2 hours ago

HD Kumaraswamy: ನನ್ನ ಮತ್ತು ದೇವೇಗೌಡರ ಸರ್ಕಾರ ಕೆಡವಿದ್ದು ಯಾರು ಅಂತ ಹೇಳಿ; ಡಿಕೆಶಿ ವಿರುದ್ಧ ಎಚ್‌ಡಿಕೆ ಕಿಡಿ

Women's Asia Cup 2024
ಪ್ರಮುಖ ಸುದ್ದಿ2 hours ago

Women’s Asia Cup 2024 : ದಾಖಲೆ ಬರೆದ ರಿಚಾ ಘೋಷ್​, ಇತಿಹಾಸ ಸೃಷ್ಟಿಸಿದ ಭಾರತ ತಂಡ

Vande Mataram
ದೇಶ2 hours ago

Vande Mataram: ಸಂಸತ್ತಿನಲ್ಲಿ ವಂದೇ ಮಾತರಂ, ಥ್ಯಾಂಕ್ಸ್‌ ಎಂದು ಹೇಳುವಂತಿಲ್ಲ; ಏಕಿಂಥ ಆದೇಶ?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ1 day ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ2 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ2 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ3 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ3 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ5 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ6 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ6 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌