Site icon Vistara News

Murder Case: ಎಮ್ಮೆ ಮಾರಿ ಬಂದ ಕಾಸಿನಿಂದ ಕುಡಿದ; ಆಕ್ಷೇಪಿಸಿದ ಹೆಂಡತಿಯ ಕೊಂದು ನೇಣು ಹಾಕಿಕೊಂಡ

murder case belagavi news

ಬೆಳಗಾವಿ: ಇದ್ದ ಒಂದು ಎಮ್ಮೆಯನ್ನೂ ಮಾರಿ ಅದರಿಂದ ಬಂದ ಕಾಸನ್ನು ಕುಡಿತಕ್ಕೆ ಖರ್ಚು ಮಾಡಿದ ಭಂಡ ಗಂಡ, ಇದನ್ನು ಆಕ್ಷೇಪಿಸಿದ ಹೆಂಡತಿಯನ್ನು ಕೊಂದು (Murder Case) ತಾನೂ ನೇಣಿಗೆ (Self harming) ಶರಣಾಗಿದ್ದಾನೆ. ಈ ಘಟನೆ ಬೆಳಗಾವಿ (Belagavi news) ಜಿಲ್ಲೆ ಮೂಡಲಗಿ ತಾಲೂಕಿನ ಪುಲಗಡ್ಡಿ ಎಂಬ ಗ್ರಾಮದಲ್ಲಿ ನಡೆದಿದೆ.

ಅಣ್ಣಪ್ಪ ನಂದಿ, ಯಲ್ಲವ್ವ ನಂದಿ(41) ದುರಂತ ಅಂತ್ಯ ಕಂಡ ಗಂಡ ಹೆಂಡತಿ. ತನ್ನಲ್ಲಿದ್ದ ಎಮ್ಮೆಯನ್ನು‌ ಮಾರಿ ಬಂದ ಹಣದಿಂದ ಅಣ್ಣಪ್ಪ ಕಂಠಪೂರ್ತಿ ಕುಡಿದು ಬಂದಿದ್ದ. ನಿನ್ನೆ ಸಂಜೆ ವೇಳೆ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಪತ್ನಿ ಯಲ್ಲವ್ವ ನಂದಿ, ಗಂಡನ ಈ ನಡತೆಯನ್ನು ಆಕ್ಷೇಪಿಸಿದ್ದಳು.

ಇದರಿಂದ ಜಗಳ ಹುಟ್ಟಿಕೊಂಡಿದೆ. ಹೆಂಡತಿಯ ಮೇಲೆ‌ ಮೊದಲೇ ಸಂಶಯ ಪಡುತ್ತಿದ್ದ ಪಾಪಿ ಅಣ್ಣಪ್ಪ, ಹೆಂಡತಿ ಪ್ರಶ್ನೆ ಮಾಡುತ್ತಿದ್ದಂತೆ ಆಕೆಯನ್ನು ಕೊಂದು ಹಾಕಿದ್ದಾನೆ, ನಂತರ ಮನೆಗೆ ಬಂದು ಮನೆಯ ಹೊರ ಭಾಗದ ತಗಡಿನ ಶೆಡ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕುಲಗೋಡ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿರ್ಲಕ್ಷ್ಯ ಚಾಲನೆ ಪ್ರಶ್ನಿಸಿದ ಹಿಂದೂ ಯುವಕರಿಗೆ ಮುಸ್ಲಿಂ ಗುಂಪಿನಿಂದ ಹಲ್ಲೆ

ಮಂಡ್ಯ : ಅತಿ ವೇಗದಲ್ಲಿ ಕಾರು ಚಾಲನೆ ಮಾಡಿದ್ದನ್ನು ಪ್ರಶ್ನಿಸಿದ್ದ ಅಭಿಲಾಷ್​ ಎಂಬುವರ ಮೇಲೆ ಮುಸ್ಲಿಂ ಸಮುದಾಯಕ್ಕೆ ಸೇರಿದ್ದ ಯುವಕರ ಗುಂಪೊಂದು ಹಲ್ಲೆ ಮಾಡಿದ ಘಟನೆ ಮಂಡ್ಯ ಜಿಲ್ಲೆಯ (Mandya News) ನಾಗಮಂಗಲ ತಾಲೂಕಿನ ಬೆಳ್ಳೂರಿನಲ್ಲಿ ಸೋಮವಾರ ಸಂಜೆ ವೇಳೆ ನಡೆದಿದೆ. ಘಟನೆ ಬಳಿಕ ಬೆಳ್ಳೂರು ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ಉಟಾಗಿದ್ದು ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ಶ್ರಮ ವಹಿಸುತ್ತಿದ್ದಾರೆ. ಗಂಭೀರವಾಗಿ ಪೆಟ್ಟು ತಿಂದಿರುವ ಅಭಿಲಾಷ್​ ಅವರನ್ನು ಬೆಳ್ಳೂರಿನ ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕಳೆದ ಶುಕ್ರವಾರ ಮುಸ್ಲಿಂ ಯುವಕರ ಗುಂಪು ಬೆಳ್ಳೂರಿನ ಸಂತೆ ಬೀದಿಯಲ್ಇ ಅತಿ ವೇಗದಲ್ಲಿ ಪಟ್ಟಣದೊಳಗೆ ಕಾರು ಓಡಿಸಿಕೊಂಡು ಹೋಗಿದೆ. ಅಪಾಯಕಾರಿ ರೀತಿಯಲ್ಲಿ ವಾಹನ ಓಡಿಸಿದ್ದನ್ನು ಹಲ್ಲೆಗೆ ಒಳಗಾಗಿರುವ ಅಭಿಲಾಷ್ ಹಾಗೂ ಅವರ ಜತೆಗಾರ ನಾಗೇಶ್​ ಎಂಬುವರು ಪ್ರಶ್ನಿಸಿದ್ದರು. ಮಿತಿ ಮೀರಿದ ವೇಗದಲ್ಲಿ ಕಾರು ಓಡಿಸದಂತೆ ಆ ಗುಂಪಿಗೆ ಬುದ್ಧಿವಾದ ಹೇಳಿದ್ದರು. ಈ ವೇಳೆ ಸಣ್ಣ ಮಟ್ಟಿನ ಮಾತಿನ ಚಕಮಕಿ ನಡೆದಿತ್ತು. ಅದೇ ದ್ವೇಷವನ್ನು ಇಟ್ಟುಕೊಂಡಿದ್ದ ಮುಸ್ಲಿಂ ಯುವಕರ ಗುಂಪಿ ಇನ್ನಷ್ಟು ದೊಡ್ಡ ಗುಂಪನ್ನು ಕಟ್ಟಿಕೊಂಡು ಬಂದು ಸೋಮವಾರ ಸಂಜೆ ಹಲ್ಲೆ ಮಾಡಿದ್ದಾರೆ.

ದೊಡ್ಡ ಗುಂಪಿನಿಂದ ಏಟು ತಿಂದಿರುವ ಅಭಿಲಾಷ್​ ಅವರಿಗೆ ಬಹು ವಿಧದಲ್ಲಿ ಗಾಯಗಳಾಗಿವೆ ಎಂದು ಅವರ ಆಪ್ತರು ಹೇಳಿದ್ದಾರೆ. ತಕ್ಷಣ ಸ್ಥಳೀಯರು ಅವರನ್ನು ಏಮ್ಸ್​ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಸುದ್ದಿಯಾದ ಬಳಿಕ ಬೆಳ್ಳೂರು ಪಟ್ಟಣದಲ್ಲಿ ಆತಂಕ ಮನೆ ಮಾಡಿದೆ. ಪಟ್ಟಣದಲ್ಲಿ ಪ್ರಕ್ಷುಬ್ದ ವಾತಾವರಣ ಉಂಟಾಗಿದ್ದು ಗಲಾಟೆ ಸಂಭವಿಸುವ ಸಾಧ್ಯತೆಗಳನ್ನು ಮನಗಂಡಿರುವ ಪೊಲೀಸರು ಬೆಳ್ಳೂರು ಪಟ್ಟಣ ಹಾಗೂ ಬಿಜಿಎಸ್ ಆಸ್ಪತ್ರೆಗೆ ಬಿಗಿ ಪೊಲೀಸ್ ಭದ್ರತೆ. ಒದಗಿಸಿದ್ದಾರೆ. ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ: Assault Case: ಹಿಂಡಲಗಾ ಜೈಲಿನಲ್ಲಿ ಕೈದಿಯಿಂದಲೇ ಮಾರಣಾಂತಿಕ ಹಲ್ಲೆ; ಭಯದಲ್ಲಿ ಬದುಕುತ್ತಿರುವ ಸಿಬ್ಬಂದಿ!

Exit mobile version