Site icon Vistara News

Murder Case: ಚಿಕ್ಕಬಳ್ಳಾಪುರದಲ್ಲಿ 2ನೇ ಪತ್ನಿ ಕೊಲೆಗೈದ ಪತಿ; ಮುಂಡರಗಿ ನಡುರಸ್ತೆಯಲ್ಲೇ ಮಚ್ಚಿನಿಂದ ಪತ್ನಿ ಮೇಲೆ ಹಲ್ಲೆ!

Murder case

ಚಿಕ್ಕಬಳ್ಳಾಪುರ: ಎರಡನೇ ಪತ್ನಿ ಕೊಲೆ ಮಾಡಿ ಆರೋಪಿ ಪೊಲೀಸರಿಗೆ ಶರಣಾದ ಘಟನೆ (Murder Case) ಜಿಲ್ಲೆಯ ಚಿಂತಾಮಣಿಯ ಸೊಣ್ಣಶೆಟ್ಟಿಹಳ್ಳಿ ಬಡಾವಣೆಯಲ್ಲಿ ನಡೆದಿದೆ. ಮೂರು ದಿನಗಳ ಹಿಂದೆ ಪತ್ನಿಯನ್ನು ಕೊಲೆ ಮಾಡಿ ಬುಧವಾರ ಪೊಲೀಸರಿಗೆ ಆರೋಪಿ ಶರಣಾಗಿದ್ದಾನೆ.

ರೆಡ್ಡಿಲಕ್ಷ್ಮಿ(30) ಕೊಲೆಯಾದ ದುರ್ದೈವಿ. ಪತಿ ಹರೀಶ ಕೊಲೆ ಆರೋಪಿ. ಆಂಧ್ರ ಮೂಲದ ದಂಪತಿ ನಗರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಕಳೆದ ಮುರು ದಿನಗಳ ಹಿಂದೆ ಪತ್ನಿಯನ್ನು ಕೊಲೆ ಮಾಡಿ ಆರೋಪಿ ಪರಾರಿಯಾಗಿದ್ದ. ಇದೀಗ ಆರೋಪಿ ಹೊಸಕೋಟೆ ಪೊಲೀಸರಿಗೆ ಶರಣಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಡುರಸ್ತೆಯಲ್ಲಿ ಪತ್ನಿ ಮೇಲೆ ಮಚ್ಚಿನಿಂದ ಹಲ್ಲೆ

children murder case by mother

ಗದಗ: ನಡುರಸ್ತೆಯಲ್ಲಿ ಪತ್ನಿ ಮೇಲೆ ಮಚ್ಚಿನಿಂದ ಪತಿ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಮುಂಡರಗಿ ಪಟ್ಟಣದ ಅಂಚೆ ಕಚೇರಿ ಬಳಿ ನಡೆದಿದೆ. ಗೀತಾ ಬೇಲೂರಪ್ಪ ಪೂಜಾರ (35) ಹಲ್ಲೆಗೊಳಗಾದ ಮಹಿಳೆ. ಬೇಲೂರಪ್ಪ ಪೂಜಾರ ಹಲ್ಲೆ ಆರೋಪಿ. ಪತ್ನಿಯ ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಪತ್ನಿ ಮೇಲೆ ಪತಿ ಹಲ್ಲೆ ನಡೆಸಿರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ | Murder Case: ಪತ್ನಿಯನ್ನು ಕೊಂದ, ತಾನೂ ನೇಣು ಹಾಕಿಕೊಂಡ

ಹಲ್ಲೆ ಮಾಡಿ ಕೈಯಲ್ಲಿ ಮಚ್ಚು ಹಿಡಿದಿದ್ದ ಬೇಲೂರಪ್ಪ, ಕೌಟುಂಬಿಕ ಕಲಹದ ಕುರಿತು ನೆರೆದವರಿಗೆ ಹೇಳುತ್ತಾ ನಿಂತಿದ್ದ. ಮಾರಣಾಂತಿಕವಾಗಿ ಹಲ್ಲೆ ಮಾಡಿದ ಹಿನ್ನೆಲೆಯಲ್ಲಿ ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ಮುಂಡರಗಿ ತಾಲೂಕು‌ ಆಸ್ಪತ್ರೆಗೆ ದಾಖಲಿಸಲಾಗಿದೆ ಹಲ್ಲೆಗೊಳಗಾದ ಮಹಿಳೆ ಅಂಚೆ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು. ಸ್ಥಳಕ್ಕೆ ಮುಂಡರಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿ ಪತಿ ಬೇಲೂರಪ್ಪನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇಬ್ಬರು ಮಕ್ಕಳನ್ನು ಕೊಲೆ ಮಾಡಿ ಕಂಟ್ರೋಲ್‌ ರೂಂಗೆ ಕರೆ ಮಾಡಿದ ತಾಯಿ; ತಂದೆ ಪೋಕ್ಸೋ ಆರೋಪಿ!

children murder case by mother

ಬೆಂಗಳೂರು: ರಾಜಧಾನಿಯಲ್ಲಿ ನಡೆದ ಬರ್ಬರ ಅಪರಾಧ ಪ್ರಕರಣವೊಂದರಲ್ಲಿ ತಾಯಿಯೇ ಮಕ್ಕಳನ್ನು ಕೊಲೆ ಮಾಡಿದ್ದಾಳೆ. ಇಬ್ಬರು ಮಕ್ಕಳನ್ನು ಕೊಂದು, ನಂತರ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಸಿ ಕಂಟ್ರೋಲ್‌ ರೂಂಗೆ ಕರೆ ಮಾಡಿದ್ದಾಳೆ (Murder Case).

ಜಾಲಹಳ್ಳಿ ಪೊಲೀಸ್ ಠಾಣಾ ‌ವ್ಯಾಪ್ತಿಯಲ್ಲಿ ನಿನ್ನೆ (ಏಪ್ರಿಲ್‌ 9) ರಾತ್ರಿ ಈ ಬರ್ಬರ ಘಟನೆ ನಡೆದಿದೆ. 9 ವರ್ಷದ ಹೆಣ್ಣು ಮಗು ಹಾಗೂ 7 ವರ್ಷದ ಗಂಡು ಮಗುವನ್ನು ಕೊಲೆ ಮಾಡಲಾಗಿದೆ. ಮಕ್ಕಳನ್ನು ಕೊಲೆ ಮಾಡಿದ ತಾಯಿ ಗಂಗಾದೇವಿ ಎಂಬಾಕೆಯನ್ನು ಜಾಲಹಳ್ಳಿ ಪೊಲೀಸರು ಆರೆಸ್ಟ್ ಮಾಡಿದ್ದಾರೆ. ಲಕ್ಷ್ಮೀ (9) ಹಾಗೂ ಗೌತಮ್ (7) ಕೊಲೆಯಾದ ಮಕ್ಕಳು.

ಆಂಧ್ರ ಪ್ರದೇಶ ಮೂಲದ ಗಂಗಾದೇವಿ ಕುಟುಂಬ, ಬೆಂಗಳೂರಿನ ಜಾಲಹಳ್ಳಿಯಲ್ಲಿ ವಾಸವಾಗಿತ್ತು. ಅಚ್ಚರಿ ಎಂದರೆ ಕೊಲೆ ಆರೋಪಿತೆ ಗಂಗಾದೇವಿ ಪತಿ ಪೋಕ್ಸೋ ಕೇಸ್‌ನಲ್ಲಿ ಬಂಧಿತನಾಗಿ ಈಗಾಗಲೇ ಜೈಲಿನಲ್ಲಿದ್ದಾನೆ. ಪತಿ ಮಗಳ ಜತೆಗೆ ಅಸಭ್ಯವಾಗಿ ವರ್ತಿಸಿದ ಹಿನ್ನೆಲೆಯಲ್ಲಿ ಸ್ವತಃ ಗಂಗಾದೇವಿಯೇ ಪತಿಯ ವಿರುದ್ಧ ಪೊಲೀಸ್​ ಠಾಣೆಗೆ ದೂರು ನೀಡಿದ್ದಳು. ಗಂಗಾದೇವಿ ಖಾಸಗಿ ಕಂಪನಿಯಲ್ಲಿ ಮಾರ್ಕೆಟಿಂಗ್ ಕೆಲಸ ಮಾಡುತ್ತಿದ್ದಳು ಎನ್ನಲಾಗಿದೆ.

ಕೊಲೆಗೆ ಕಾರಣವೇನು?

ಮಕ್ಕಳಿಬ್ಬರನ್ನು ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡದ ಬಳಿಕ ಗಂಗಾದೇವಿ ಕಂಟ್ರೊಲ್ ರೂಂಗೆ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಗಂಗಾದೇವಿಗೆ ಹತ್ತು ವರ್ಷಗಳ ಹಿಂದೆ ಮದುವೆಯಾಗಿತ್ತು. ಆಕೆಯ ಪತಿ ಪತಿ ಪೌರಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ಕಳೆದ ತಿಂಗಳು ಆತನ ವಿರುದ್ಧ ಪೋಕ್ಸೋ ಕೇಸ್‌ ದಾಖಲಾಗಿತ್ತು. ʼʼಕೇಸ್ ಸಂಬಂಧ ಕೌನ್ಸಿಲಿಂಗ್ ನಡೆಸಿ ಆತನನ್ನು ಬಂಧಿಸಲಾಗಿತ್ತು. ಹೀಗಾಗಿ ಕೌಟುಂಬಿಕ ಸಮಸ್ಯೆಯಿಂದ ಬೇಸತ್ತು ಗಂಗಾದೇವಿ ಈ ಕೃತ್ಯ ಎಸಗಿದ್ದಾಳೆʼʼ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪತ್ನಿಯನ್ನು ಕೊಂದ, ತಾನೂ ನೇಣು ಹಾಕಿಕೊಂಡ

ಕೊಪ್ಪಳ: ಪತ್ನಿಯನ್ನು ಹೊಡೆದು ಕೊಲೆ ಮಾಡಿದ ಪತಿ ಕೊಲೆಯ ನಂತರ ತಾನು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಬರ್ಬರ ಘಟನೆ ಕೊಪ್ಪಳ ತಾಲೂಕಿನ ಬುಡಶೆಟ್ನಾಳ ಗ್ರಾಮದಲ್ಲಿ ನಡೆದಿದೆ. ಬುಡಶೆಟ್ನಾಳದ ನಿಂಗಪ್ಪ (45) ಪತ್ನಿಯ ಕೊಲೆಗಡುಕ ಹಾಗೂ ಆತ್ಮಹತ್ಯೆ ಮಾಡಿಕೊಂಡಾತ. ಪತ್ನಿ ಲಕ್ಷ್ಮವ್ವ (40) ಗಂಡನಿಂದ ಕೊಲೆಯಾಗಿರುವವಳು. ಕುಡಿತದ ಚಟಕ್ಕೆ ಅಂಟಿಕೊಂಡಿದ್ದ ನಿಂಗಪ್ಪ, ಪದೇ ಪದೆ ಮದ್ಯ ಸೇವಿಸಿ ಬಂದು ಪತ್ನಿಯ ಜೊತೆಗೆ ವಿನಾಕಾರಣ ಜಗಳ ತೆಗೆಯುತ್ತಿದ್ದ ಎಂದು ಆಸುಪಾಸಿನವರು ತಿಳಿಸಿದ್ದಾರೆ.

ಇದನ್ನೂ ಓದಿ: Road Accident: ಬೈಕ್‌ ಚಲಾಯಿಸುತ್ತಿದ್ದ ತಂದೆ- ಮಗ ಅಪಘಾತದಲ್ಲಿ ಸಾವು

ಹೊಲದಲ್ಲೇ ಘಟನೆ ನಡೆದಿದೆ. ಹೊಲದಲ್ಲೇ ಹೆಂಡತಿಯನ್ನು ಕೊಂದು ಹಾಕಿದ ಈತ, ಅಲ್ಲೇ ಇದ್ದ ಮರವೊಂದಕ್ಕೆ ನೇಣು ಹಾಕಿಕೊಂಡಿದ್ದಾನೆ. ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ‌ ನಡೆದಿದ್ದು, ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Exit mobile version