Site icon Vistara News

Murder Case: ಮಂಡ್ಯದ ಬೀದಿಯಲ್ಲಿ ರೌಡಿಶೀಟರ್‌ ಕೊಚ್ಚಿ ಕೊಲೆ

mandya crime rowdysheeter murder case

ಮಂಡ್ಯ: ರೌಡಿಶೀಟರ್‌ (Rowdy Sheeter) ಒಬ್ಬಾತನನ್ನು ಬೀದಿಯಲ್ಲಿ ಮಧ್ಯ ರಾತ್ರಿ ಕೊಚ್ಚಿ ಬರ್ಬರವಾಗಿ ಹತ್ಯೆ (Murder Case) ಮಾಡಲಾಗಿದೆ. ಮಂಡ್ಯ ನಗರದ ಸ್ವರ್ಣ ಸಂದ್ರದಲ್ಲಿ ಈ ಘಟನೆ ನಡೆದಿದ್ದು, ಹಳೆ ದ್ವೇಷದ (old vengeance) ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿರಬಹುದು ಎಂದು ಶಂಕಿಸಲಾಗಿದೆ.

ಅಕ್ಷಯ್ (24) ಹತ್ಯೆಯಾದ ಯುವಕ. ಈತನನ್ನು ಫೋನ್ ಮಾಡಿ ಕರೆಸಿಕೊಂಡು ನಡು ಬೀದಿಯಲ್ಲಿ ಕೊಚ್ಚಿ ಕೊಲೆ ಮಾಡಲಾಗಿದೆ. ಹಲವು ಅಪರಾಧ ಪ್ರಕರಣಗಳ ಹಿನ್ನೆಲೆಯಲ್ಲಿ ಅಕ್ಷಯ್ ವಿರುದ್ಧ ರೌಡಿಶೀಟರ್ ತೆರೆಯಲಾಗಿತ್ತು. ಈತನ ಜೊತೆಗೆ ಹಿಂದೆ ಇದ್ದ ಹಲವು ಸ್ನೇಹಿತರು ಇಂದು ಶತ್ರುಗಳಾಗಿದ್ದು, ದ್ವೇಷದ ಹಿನ್ನೆಲೆಯಲ್ಲಿ ಕೊಲೆ ನಡೆಸಿರುವ ಸಾಧ್ಯತೆ ಇದೆ. ಮಂಡ್ಯದ ಈಸ್ಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆಗೆ ತೊಡಗಿದ್ದಾರೆ.

ಪತ್ನಿಯನ್ನು ಕೊಂದ, ತಾನೂ ನೇಣು ಹಾಕಿಕೊಂಡ

ಕೊಪ್ಪಳ: ಪತ್ನಿಯನ್ನು ಹೊಡೆದು ಕೊಲೆ ಮಾಡಿದ ಪತಿ ಕೊಲೆಯ ನಂತರ ತಾನು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಬರ್ಬರ ಘಟನೆ ಕೊಪ್ಪಳ ತಾಲೂಕಿನ ಬುಡಶೆಟ್ನಾಳ ಗ್ರಾಮದಲ್ಲಿ ನಡೆದಿದೆ.

ಬುಡಶೆಟ್ನಾಳದ ನಿಂಗಪ್ಪ (45) ಪತ್ನಿಯ ಕೊಲೆಗಡುಕ ಹಾಗೂ ಆತ್ಮಹತ್ಯೆ ಮಾಡಿಕೊಂಡಾತ. ಪತ್ನಿ ಲಕ್ಷ್ಮವ್ವ (40) ಗಂಡನಿಂದ ಕೊಲೆಯಾಗಿರುವವಳು. ಕುಡಿತದ ಚಟಕ್ಕೆ ಅಂಟಿಕೊಂಡಿದ್ದ ನಿಂಗಪ್ಪ, ಪದೇ ಪದೆ ಮದ್ಯ ಸೇವಿಸಿ ಬಂದು ಪತ್ನಿಯ ಜೊತೆಗೆ ವಿನಾಕಾರಣ ಜಗಳ ತೆಗೆಯುತ್ತಿದ್ದ ಎಂದು ಆಸುಪಾಸಿನವರು ತಿಳಿಸಿದ್ದಾರೆ. ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ‌ ನಡೆದಿದ್ದು, ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಬೈಕಿಗೆ ಟಾಟಾ ಏಸ್‌ ಡಿಕ್ಕಿ; ಇಬ್ಬರ ಸಾವು

ಬೆಂಗಳೂರು: ಬೆಂಗಳೂರಿನ ರಾಜಗೋಪಾಲನಗರ ಬಳಿಯ ಹೆಗ್ಗನಹಳ್ಳಿ ಬಳಿ ಇಬ್ಬರು ಪ್ರಯಾಣಿಸುತ್ತಿದ್ದ ಬೈಕ್‌ಗೆ ಟಾಟಾ ಏಸ್‌ ಡಿಕ್ಕಿಯಾಗಿದೆ. ಇಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಟಾಟಾ ಏಸ್‌ ಚಾಲಕನ ಅತಿ ವೇಗ ಹಾಗೂ ನಿರ್ಲಕ್ಷ್ಯದ ಚಾಲನೆ ಈ ದುರ್ಘಟನೆಗೆ ಕಾರಣವಾಗಿದೆ. ನಿನ್ನೆ ರಾತ್ರಿ 11 ಘಂಟೆಯ ಸುಮಾರಿಗೆ ಅಪಘಾತ ನಡೆದಿದ್ದು, ಪೀಣ್ಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜಕಾಲುವೆಗೆ ಬಿದ್ದ ಬೈಕ್‌, ಸವಾರ ಸಾವು

ಕಾರವಾರ: ನಿಯಂತ್ರಣ ತಪ್ಪಿ ರಾಜಕಾಲುವೆಗೆ ಬೈಕ್ ಬಿದ್ದ ಪರಿಣಾಮ ಒಬ್ಬ ಸ್ಥಳದಲ್ಲೇ ಸತ್ತಿದ್ದು, ಇನ್ನೋರ್ವ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ- ಯಲ್ಲಾಪುರ ರಸ್ತೆಯ ಪಂಚವಟಿ ಕ್ರಾಸ್‌ ಬಳಿ ಘಟನೆ ನಡೆದಿದೆ. ಸಂದೀಪ ಛಲವಾದಿ (24) ಮೃತ ಬೈಕ್ ಸವಾರ. ಸುಭಾಷ್ ದೇವಾಡಿಗ (26) ಗಂಭೀರ ಗಾಯಗೊಂಡವನು. ಯಲ್ಲಾಪುರದ ಭರತ್ನಳ್ಳಿ ಗ್ರಾಮದ ಈ ಯುವಕರು ಸ್ನೇಹಿತನನ್ನು ಶಿರಸಿ ಬಸ್‌ ನಿಲ್ದಾಣಕ್ಕೆ ಬಿಟ್ಟು ವಾಪಸ್ಸಾಗುವಾಗ ಅಪಘಾತ ನಡೆದಿದೆ. ಇಳಿಜಾರಿನ ರಸ್ತೆ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಬೈಕ್ ಸುಮಾರು 20 ಅಡಿ ಆಳದ ರಾಜಕಾಲುವೆಗೆ ಬಿದ್ದಿದೆ.

ಅಗ್ನಿಶಾಮಕ ದಳ, ಪೊಲೀಸ್ ಸಿಬ್ಬಂದಿಯಿಂದ ಕಾಲುವೆಗೆ ಬಿದ್ದವರ ಮೇಲಕ್ಕೆತ್ತುವ ಕಾರ್ಯಾಚರಣೆ ನಡೆಯಿತು. ಗಂಭೀರ ಗಾಯಗೊಂಡಿದ್ದ ಸವಾರನನ್ನು ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ. ಶಿರಸಿ ಮಾರುಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: Murder case : ತಡರಾತ್ರಿ ಕೆಲಸ ಮುಗಿಸಿ ವಾಪಸ್ ಆಗುತ್ತಿದ್ದವನ ಕೊಚ್ಚಿ ಕೊಲೆ

Exit mobile version