Site icon Vistara News

Murder Case: ಅಪ್ಪ-ಅಮ್ಮನ ಜಗಳ ಬಿಡಿಸಲು ಹೋದ ಇನ್‌ಫೋಸಿಸ್‌ ಎಂಜಿನಿಯರ್ ತಂದೆಯ ಇರಿತಕ್ಕೆ ಬಲಿ

murder case infosys engineer

ಬೆಂಗಳೂರು: ಗಂಡ- ಹೆಂಡತಿ ಜಗಳ (couple fight) ಆಕಸ್ಮಿಕವಾಗಿ ಮಗನ ಕೊಲೆಯಲ್ಲಿ (Murder Case) ಅಂತ್ಯವಾದ ದಾರುಣ ಘಟನೆ ಜರಗನಹಳ್ಳಿಯಲ್ಲಿ ನಡೆದಿದೆ. ಇನ್‌ಫೋಸಿಸ್‌ (Infosys) ಕಂಪನಿಯಲ್ಲಿ ಸಾಫ್ಟ್‌ವೇರ್‌ ಎಂಜಿನಿಯರ್‌ (Software engineer) ಮಗ, ತಂದೆ- ತಾಯಿಯ ಜಗಳ ಬಿಡಿಸಲು ಹೋಗಿ ಕೊಲೆಯಾಗಿದ್ದಾನೆ.

ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯ ಜರಗನಹಳ್ಳಿಯಲ್ಲಿ ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ದುರ್ಘಟನೆ ನಡೆದಿದೆ. ಯಶವಂತ್ (23) ತಂದೆಯಿಂದಲೇ ಕೊಲೆಯಾದ ಪುತ್ರ. ಸರ್ಜಾಪುರ ಸಮೀಪದ ಮ್ಯಾಟ್ರಿಕ್ಸ್ ಎಂಬ ಕಂಪನಿಯಲ್ಲಿ ಯಶವಂತ್‌ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ.

ಮೃತನ ಅಜ್ಜಿ ಕಾಯಿಲೆ ಬಿದ್ದು ಹಾಸಿಗೆ ಹಿಡಿದಿದ್ದು, ಆಕೆಯನ್ನು ನೋಡಿಕೊಳ್ಳುವ ವಿಚಾರಕ್ಕೆ ಆಗಾಗ ಜಗಳ ಆಗುತ್ತಿತ್ತು. ಬೆಳಗ್ಗೆಯೂ ಇದೇ ವಿಚಾರಕ್ಕಾಗಿ ಅಪ್ಪ ಅಮ್ಮನ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಜಗಳ ಬಿಡಿಸಲು ಹೋದ ಮಗನನ್ನು ಹೆದರಿಸಲು ತಂದೆ ಅಡುಗೆ ಮನೆಯಿಂದ ಚಾಕು ತಂದು ಇರಿಯಲು ಹೋಗಿದ್ದಾನೆ. ಚಾಕು ಯುವಕನ ಎದೆಗೆ ಆಳವಾಗಿ ನಾಟಿ ಪ್ರಾಣ ಹೋಗಿದೆ ಎಂದು ತಿಳಿದುಬಂದಿದೆ.

“ಯಶವಂತ ಉತ್ತಮ ವ್ಯಕ್ತಿತ್ವ ಹೊಂದಿದ್ದ ಹುಡುಗ. ಇನ್ಫೋಸಿಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಎಂಜಿನಿಯರ್ ವೃತ್ತಿ ಮಾಡುತ್ತ, ತಂದೆ ಮಾಡಿದ್ದ ಸಾಲ ಸಹ ತೀರಿಸುತ್ತಿದ್ದ. ನೇತ್ರದಾನ ಸಹ ಮಾಡಿದ್ದ. ಆತನ ಆಸೆಯಂತೆ ಕುಟುಂಬಸ್ಥರು‌ ಯಶವಂತನ ಕಣ್ಣುಗಳನ್ನು ದಾನ ಮಾಡಿದ್ದಾರೆ” ಎಂದು ಸಂಬಂಧಿ ರಾಕೇಶ್ ಮಾಹಿತಿ ನೀಡಿದ್ದಾರೆ.

ಸದ್ಯ ಆರೋಪಿ ತಂದೆ ಬಸವರಾಜುವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. “ಪುಟ್ಟೇನಹಹಳ್ಳಿ ಠಾಣಾ ವ್ಯಾಪ್ತಿಯ ಜರಗನಹಳ್ಳಿಯಲ್ಲಿ 23 ವರ್ಷದ ಯುವಕನ ಕೊಲೆಯಾಗಿದೆ. ಗಂಡ ಹೆಂಡತಿ ಹೊಡೆದಾಡುತ್ತಿದ್ದಾಗ ಬಿಡಿಸಲು ಹೋಗಿದ್ದಾನೆ. ಈ ವೇಳೆ ತಂದೆ ಚಾಕು ತಂದು ಹೆದರಿಸಲು ಹೋಗಿದ್ದ. ಯುವಕ ಆಸ್ಪತ್ರೆ ಮಾರ್ಗ‌ಮಧ್ಯೆ ಸಾವನ್ನಪ್ಪಿದ್ದಾನೆ” ಎಂದು ದಕ್ಷಿಣ ವಿಭಾಗ ಡಿಸಿಪಿ ಲೊಕೇಶ್ ಜಗಲಾಸರ್ ಹೇಳಿಕೆ ನೀಡಿದ್ದಾರೆ.

ಹಾಸನದಲ್ಲಿ ರೌಡಿ ಚೈಲ್ಡ್‌ ರವಿ ಕೊಲೆ

ಹಾಸನ: ಹಾಸನ ನಗರದಲ್ಲಿ ಗುರುವಾರ ಬೆಳಗ್ಗೆ ಬರ್ಬರ ಕೊಲೆಯೊಂದು ನಡೆದಿದೆ. ನಟೋರಿಯಸ್ ರೌಡಿ ರವಿ ಅಲಿಯಾಸ್ ಚೈಲ್ಡ್ ರವಿ (45) ಎಂಬಾತನನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಹಾಸನದ ಹೇಮಾವತಿನಗರದಲ್ಲಿ ಘಟನೆ ನಡೆದಿದೆ. ಮಾರಕಾಸ್ತ್ರಗಳೊಂದಿಗೆ ದಾಳಿ ನಡೆಸಿದ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ರೌಡಿ ರವಿ ಕುಡಿಯುವ ನೀರು ತೆಗೆದುಕೊಂಡು ಬೈಕ್‌ನಲ್ಲಿ ತೆರಳುತ್ತಿದ್ದಾಗ ಏಕಾಏಕಿ ದಾಳಿ ಮಾಡಿದ ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ತೀವ್ರ ರಕ್ತ ಸ್ರಾವದಿಂದಾಗಿ ಆತ ಅಲ್ಲೇ ಕೊಲೆಯಾಗಿದ್ದಾನೆ. ಕೊಲೆಯಾದ ರವಿಯ ವಿರುದ್ಧ ಕೊಲೆ, ದರೋಡೆ ಸೇರಿದಂತೆ ಹಲವು ಪ್ರಕರಣಗಳಿದ್ದವು. ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸುತ್ತಿದ್ದಾರೆ. ಪೆನ್‌ಷನ್ ಮೊಹಲ್ಲಾ ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ದೂರು ದಾಖಲಿಸುತ್ತಿದ್ದಾರೆ.

ಬಿಜೆಪಿ ಮುಖಂಡನ ಮೇಲೆ ತಲ್ವಾರ್‌ನಿಂದ ಹಲ್ಲೆ

ಮಂಗಳೂರು/ಯಾದಗಿರಿ: ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ (Assault Case) ಬಿಜೆಪಿ ಕಾರ್ಯಕರ್ತ ಮತ್ತು ಬಿಜೆಪಿ ಮುಖಂಡನ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರು ದಾಳಿ ನಡೆಸಿರುವುದು ಮಂಗಳವಾರ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕಾರ್ಯತಡ್ಕದ ಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ತಲ್ವಾರ್‌ನಿಂದ ಹಲ್ಲೆ ಮಾಡಲಾಗಿದ್ದು, ಸುರಪುರದಲ್ಲಿ ಉಪಚುನಾವಣೆಯ ಬಿಜೆಪಿ ಪರಾಜಿತ ಅಭ್ಯರ್ಥಿ ರಾಜುಗೌಡ ಅಳಿಯನ ಕಾರಿನ ಮೇಲೆ ಕೈ ಕಾರ್ಯಕರ್ತರಿಂದ ಕಲ್ಲು ತೂರಾಟ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: Murder Case : ಶಿವಮೊಗ್ಗದಲ್ಲಿ ವೃದ್ಧೆ ಬರ್ಬರ ಕೊಲೆ; ಅನ್ಯಕೋಮಿನ ಹುಡುಗನಿಂದ ಮಾರಣಾಂತಿಕ ಹಲ್ಲೆ

Exit mobile version