ಬೆಂಗಳೂರು: ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ (Neha Murder Case) ಬರ್ಬರ ಕೊಲೆ ಪ್ರಕರಣ ರಾಜ್ಯಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಆರೋಪಿ ಫಯಾಜ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಸಿನಿಮಾ ತಾರೆಯರು ಕೂಡ ಧ್ವನಿ ಎತ್ತಿದ್ದಾರೆ. ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ, ನಟಿ ಪ್ರಿಯಾ ಸವದಿ, ನಟಿ ಕಾವ್ಯಾ ಶಾಸ್ತ್ರಿ, ರಚಿತಾ ರಾಮ್. ರಿಷಬ್ ಶೆಟ್ಟಿ, ಶಿವಣ್ಣ ಪೋಸ್ಟ್ ಬೆನ್ನಲ್ಲೇ ಇದೀಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಈ ಬಗ್ಗೆ ಧ್ವನಿ ಎತ್ತಿದ್ದಾರೆ. “ಪ್ರೀತಿಯ ಹೆಸರಲ್ಲಿ ಇಂತ ಅಮಾನುಷಕರವಾದ ಕೃತ್ಯ ಮಾಡಿರುವವರಿಗೆ ನ್ಯಾಯಾಂಗದ ಅನುಸಾರವಾಗಿ ತಕ್ಕ ಶಿಕ್ಷೆ ಸಿಗಲಿ” ಎಂದು ಬರೆದುಕೊಂಡಿದ್ದಾರೆ.
ದರ್ಶನ್ ಪೋಸ್ಟ್‌ನಲ್ಲಿ ʻʻಪ್ರೀತಿಯ ಹೆಸರಲ್ಲಿ ಇಂತ ಅಮಾನುಷಕರವಾದ ಕೃತ್ಯ ಮಾಡಿರುವವರಿಗೆ ನ್ಯಾಯಾಂಗದ ಅನುಸಾರವಾಗಿ ತಕ್ಕ ಶಿಕ್ಷೆ ಸಿಗಲಿ. ಇನ್ನು ಬಾಳಿ ಬದುಕಬೇಕಿದ್ದ 23 ವಯಸ್ಸಿನ ನೇಹಾ ಹಿರೇಮಠ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಈ ನೋವನ್ನು ಸಹಿಸಿಕೊಳ್ಳುವ ಶಕ್ತಿ ಅವರ ಕುಟುಂಬಕ್ಕೆ ದೇವರು ನೀಡಲಿʼʼಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ: Neha Murder Case: ನೇಹಾ-ಫಯಾಜ್ ಪ್ರೀತಿಗೆ ನ್ಯಾಯ ಕೊಡಿಸಿ ಎಂದು ಪೋಸ್ಟ್ ಮಾಡಿದ ಇಬ್ಬರು ವಶಕ್ಕೆ
ರಿಷಬ್ ಶೆಟ್ಟಿ ಪೋಸ್ಟ್‌ನಲ್ಲಿ ʻʻನೇಹಾ ಹೀರೆಮಠ ಅವರ ಘಟನೆ ಅಮಾನವೀಯವಾಗಿದೆ. ಇಂತಹ ಘಟನೆ ಮರುಕಳಿಸದಂತೆ ಕಾನೂನು ಕ್ರಮಗಳನ್ನು ತಪ್ಪಿತಸ್ಥರ ಮೇಲೆ ಕೈಗೊಳ್ಲಬೇಕೆಂದು ವಿನಂತಿಸುತ್ತಾ, ನೇಹಾ ಅವರ ಕುಟುಂಬಕ್ಕೆ ಈ ದುಃಖ ಭರಿಸುಬ ಸಕ್ತಿ ದೇವರು ಕೊಡಲಿ ಎಂದು ಪ್ರಾರ್ಥಿಸುತ್ತೇನೆʼʼಎಂದು ಬರೆದುಕೊಂಡಿದ್ದಾರೆ.
ಶಿವರಾಜ್ ಕುಮಾರ್ ಅವರು ಪೋಸ್ಟ್‌ನಲ್ಲಿ ʻʻಈ ರೀತಿಯ ಅಮಾನುಷ ಘಟನೆ ಮತ್ತೆಂದೂ ಮರುಕಳಿಸದಿರಲಿ. ಮಗಳನ್ನು ಕಳೆದುಕೊಂಡ ಆ ತಂದೆ ತಾಯಿಯ ಆಕ್ರಂದನ ನೋಡಲಾಗದು. ನಮ್ಮ ಸರ್ಕಾರ, ನ್ಯಾಯಾಂಗ ವ್ಯವಸ್ಥೆ, ಹಾಗೂ ಪೊಲೀಸ್ ಆದಷ್ಟು ಬೇಗ ನೇಹಾ ಹಿರೇಮಠ ಸಾವಿಗೆ ನ್ಯಾಯ ದೊರಕುವಂತೆ ಮಾಡಲಿ ಎನ್ನುವುದು ನನ್ನ ಕಳಕಳಿಯ ವಿನಂತಿ” ಎಂದು ಬರೆದುಕೊಂಡಿದ್ದಾರೆ.
ಈ ರೀತಿಯ ಅಮಾನುಷ ಘಟನೆ ಮತ್ತೆಂದೂ ಮರುಕಳಿಸದಿರಲಿ. ಮಗಳನ್ನು ಕಳೆದುಕೊಂಡ ಆ ತಂದೆ ತಾಯಿಯ ಆಕ್ರಂದನ ನೋಡಲಾಗದು. ನಮ್ಮ ಸರ್ಕಾರ, ನ್ಯಾಯಾಂಗ ವ್ಯವಸ್ಥೆ, ಹಾಗೂ ಪೊಲೀಸ್ ಆದಷ್ಟು ಬೇಗ ನೇಹಾ ಹಿರೇಮಠ್ ಸಾವಿಗೆ ನ್ಯಾಯ ದೊರಕುವಂತೆ ಮಾಡಲಿ ಎನ್ನುವುದು ನನ್ನ ಕಳಕಳಿಯ ವಿನಂತಿ. #NehaHiremath
— DrShivaRajkumar (@NimmaShivanna) April 20, 2024
ಇಬ್ಬರೂ ಲವ್ ಮಾಡ್ತಿದ್ದರು ಅನ್ನೋದು ಸತ್ಯ ಎಂದ ಫಯಾಜ್ ತಾಯಿ
ಏ.18ರಂದು ಹುಬ್ಬಳ್ಳಿಯ ಬಿವಿಬಿ ಕಾಲೇಜು (Hubballi BVB College) ಆವರಣದಲ್ಲೇ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಮಗಳು ನೇಹಾ ಹಿರೇಮಠ ಬರ್ಬರವಾಗಿ (Neha Murder Case) ಕೊಲೆಯಾಗಿದ್ದಳು. ಪಾಗಲ್ ಪ್ರೇಮಿಯ ಕೃತ್ಯಕ್ಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಗಳು ಮುಂದುವರಿದಿದೆ. ಆರೋಪಿಯನ್ನು ಎನ್‌ಕೌಂಟರ್ ಮಾಡಿ ಬಿಸಾಕಿ ಎಂದು ಆಕ್ರೋಶಗಳು ಕೇಳಿಬರುತ್ತಿವೆ. ಈ ನಡುವೆ ಘಟನೆ ಬಗ್ಗೆ ಆರೋಪಿ ಫಯಾಜ್ ತಾಯಿ ಮಮ್ತಾಜ್ ಪ್ರತಿಕ್ರಿಯಿಸಿದ್ದು, ಫಯಾಜ್‌ಗೆ ಶಿಕ್ಷೆ ಆಗಬೇಕೆಂದು ಕಣ್ಣೀರು ಹಾಕಿದ್ದಾರೆ.
ನನ್ನ ಮಗ ಫಯಾಜ್ ಮಾಡಿದ ಕೃತ್ಯಕ್ಕೆ ತಕ್ಕ ಶಿಕ್ಷೆ ಆಗಬೇಕು. ಆತನ ತಪ್ಪಿಗೆ ನಾನು ರಾಜ್ಯದ ಜನತೆಗೆ ಹಾಗೂ ನೇಹಾಳ ತಂದೆ-ತಾಯಿಗೂ ಕ್ಷಮೆಯಾಚಿಸುತ್ತೆನೆ. ಅವರಿಗೆ ಎಷ್ಟು ದುಃಖ ಆಗಿದ್ದೀಯೋ ಅಷ್ಟೇ ನೋವನ್ನು ನಾವು ಅನುಭವಿಸುತ್ತಿದ್ದೇವೆ. ಯಾವ ಮಕ್ಕಳು ತಪ್ಪು ಮಾಡಿದರೂ ತಪ್ಪೇ.. ನನ್ನ ಮಗ ಮಾಡಿದ ತಪ್ಪಿಗೆ ಈ ನೆಲದ ಕಾನೂನು ಏನು ಶಿಕ್ಷೆ ವಿಧಿಸುತ್ತೋ ಆ ಪ್ರಕಾರ ಶಿಕ್ಷೆ ಆಗಲಿ ಎಂದರು.