ಬೆಂಗಳೂರು: ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ (Neha Murder Case) ಬರ್ಬರ ಕೊಲೆ ಪ್ರಕರಣ ರಾಜ್ಯಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಆರೋಪಿ ಫಯಾಜ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಸಿನಿಮಾ ತಾರೆಯರು ಕೂಡ ಧ್ವನಿ ಎತ್ತಿದ್ದಾರೆ. ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ, ನಟಿ ಪ್ರಿಯಾ ಸವದಿ, ನಟಿ ಕಾವ್ಯಾ ಶಾಸ್ತ್ರಿ, ರಚಿತಾ ರಾಮ್. ರಿಷಬ್ ಶೆಟ್ಟಿ, ಶಿವಣ್ಣ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಬೆನ್ನಲ್ಲೇ ಇದೀಗ ಈ ಬಗ್ಗೆ ದೊಡ್ಮನೆ ಸೊಸೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ‘ಜಸ್ಟಿಸ್ ಫಾರ್ ನೇಹಾ’ ಬೆಂಬಲ ಸೂಚಿಸಿದ್ದಾರೆ.
ಈಗ ಅಶ್ವಿನಿ ಪುನೀತ್ ರಾಜ್‌ಕುಮಾರ್ ತಮ್ಮ ಇನ್‌ಸ್ಟಾಗ್ರಾಂ ಖಾತೆಯ ಸ್ಟೋರಿಯಲ್ಲಿ ನೇಹಾ ಸಾವಿಗೆ (Neha Murder Case) ನ್ಯಾಯ ಸಿಗಬೇಕೆಂದು ಪೋಸ್ಟ್ ಮಾಡಿದ್ದಾರೆ. ಈ ಮೂಲಕ ರಾಜ್ಯ ಸರ್ಕಾರಕ್ಕೂ ಮನವಿಯನ್ನು ಮಾಡಿಕೊಂಡಿದ್ದಾರೆ.
ಅಶ್ವಿನಿ ಪುನೀತ್ ರಾಜ್‌ಕುಮಾರ್ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹೀಗೆ ಬರೆದಿದ್ದಾರೆ. “ನೇಹಾ ಹಿರೇಮಠ ಅವರ ಸಾವಿಗೆ ನ್ಯಾಯ ಸಿಗಲಿ ಎಂಬುದು ನಮ್ಮೆಲ್ಲರ ಆಶಯ. ಕಾನೂನಿನ ಅಡಿಯಲ್ಲಿ ಇಂತಹ ಕಹಿ ಘಟನೆಗಳು ಮರುಕಳಿಸದಂತೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕೆಂದು ನಮ್ಮ ವಿನಂತಿ. ಅವರ ಕುಟುಂಬಕ್ಕೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಆ ದೇವರಲ್ಲಿ ಪ್ರಾರ್ಥಿಸುತ್ತೇನೆʼʼ. ಎಂದು ಬರೆದುಕೊಂಡು ಪೋಸ್ಟ್ ಮಾಡಿದ್ದಾರೆ.
ಇದನ್ನೂ ಓದಿ: Neha Murder Case: ನೇಹಾ ನಿವಾಸಕ್ಕೆ ಜೆ.ಪಿ.ನಡ್ಡಾ, ರಾಧಾ ಮೋಹನ್ ದಾಸ್ ಭೇಟಿ; ಕುಟುಂಬಸ್ಥರಿಗೆ ಸಾಂತ್ವನ
#JusticeforNeha 🙏🏼 pic.twitter.com/RXzfXq6fjs
— Ashwini Puneeth Rajkumar (@Ashwini_PRK) April 21, 2024
ಶಿವರಾಜ್ ಕುಮಾರ್ ಅವರು ಈ ಮುಂಚೆಯೇ ಪೋಸ್ಟ್‌ನಲ್ಲಿ ʻʻಈ ರೀತಿಯ ಅಮಾನುಷ ಘಟನೆ ಮತ್ತೆಂದೂ ಮರುಕಳಿಸದಿರಲಿ. ಮಗಳನ್ನು ಕಳೆದುಕೊಂಡ ಆ ತಂದೆ ತಾಯಿಯ ಆಕ್ರಂದನ ನೋಡಲಾಗದು. ನಮ್ಮ ಸರ್ಕಾರ, ನ್ಯಾಯಾಂಗ ವ್ಯವಸ್ಥೆ, ಹಾಗೂ ಪೊಲೀಸ್ ಆದಷ್ಟು ಬೇಗ ನೇಹಾ ಹಿರೇಮಠ ಸಾವಿಗೆ ನ್ಯಾಯ ದೊರಕುವಂತೆ ಮಾಡಲಿ ಎನ್ನುವುದು ನನ್ನ ಕಳಕಳಿಯ ವಿನಂತಿ” ಎಂದು ಬರೆದುಕೊಂಡಿದ್ದರು.
ಇಬ್ಬರೂ ಲವ್ ಮಾಡ್ತಿದ್ದರು ಅನ್ನೋದು ಸತ್ಯ ಎಂದ ಫಯಾಜ್ ತಾಯಿ
ಏ.18ರಂದು ಹುಬ್ಬಳ್ಳಿಯ ಬಿವಿಬಿ ಕಾಲೇಜು (Hubballi BVB College) ಆವರಣದಲ್ಲೇ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಮಗಳು ನೇಹಾ ಹಿರೇಮಠ ಬರ್ಬರವಾಗಿ (Neha Murder Case) ಕೊಲೆಯಾಗಿದ್ದಳು. ಪಾಗಲ್ ಪ್ರೇಮಿಯ ಕೃತ್ಯಕ್ಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಗಳು ಮುಂದುವರಿದಿದೆ. ಆರೋಪಿಯನ್ನು ಎನ್‌ಕೌಂಟರ್ ಮಾಡಿ ಬಿಸಾಕಿ ಎಂದು ಆಕ್ರೋಶಗಳು ಕೇಳಿಬರುತ್ತಿವೆ. ಈ ನಡುವೆ ಘಟನೆ ಬಗ್ಗೆ ಆರೋಪಿ ಫಯಾಜ್ ತಾಯಿ ಮಮ್ತಾಜ್ ಪ್ರತಿಕ್ರಿಯಿಸಿದ್ದು, ಫಯಾಜ್‌ಗೆ ಶಿಕ್ಷೆ ಆಗಬೇಕೆಂದು ಕಣ್ಣೀರು ಹಾಕಿದ್ದಾರೆ.
ನನ್ನ ಮಗ ಫಯಾಜ್ ಮಾಡಿದ ಕೃತ್ಯಕ್ಕೆ ತಕ್ಕ ಶಿಕ್ಷೆ ಆಗಬೇಕು. ಆತನ ತಪ್ಪಿಗೆ ನಾನು ರಾಜ್ಯದ ಜನತೆಗೆ ಹಾಗೂ ನೇಹಾಳ ತಂದೆ-ತಾಯಿಗೂ ಕ್ಷಮೆಯಾಚಿಸುತ್ತೆನೆ. ಅವರಿಗೆ ಎಷ್ಟು ದುಃಖ ಆಗಿದ್ದೀಯೋ ಅಷ್ಟೇ ನೋವನ್ನು ನಾವು ಅನುಭವಿಸುತ್ತಿದ್ದೇವೆ. ಯಾವ ಮಕ್ಕಳು ತಪ್ಪು ಮಾಡಿದರೂ ತಪ್ಪೇ.. ನನ್ನ ಮಗ ಮಾಡಿದ ತಪ್ಪಿಗೆ ಈ ನೆಲದ ಕಾನೂನು ಏನು ಶಿಕ್ಷೆ ವಿಧಿಸುತ್ತೋ ಆ ಪ್ರಕಾರ ಶಿಕ್ಷೆ ಆಗಲಿ ಎಂದರು.