Site icon Vistara News

New Born Baby: ಹಸುಗೂಸನ್ನು ತಿಂದು ಹಾಕಿದ ಬೀದಿ ನಾಯಿಗಳು; ಅನೈತಿಕ ಸಂಬಂಧದ ಶಿಶುವೇ!

Occasional Picture of Street Dog

ಗದಗ: ದುರಸ್ಥಿ ಮನೆಯೊಂದರ ಬಳಿ ಆಗ ತಾನೇ ಜನಿಸಿದ ಮಗುವನ್ನು (New Born Baby) ಕಟುಕರು ಎಸೆದು ಹೋಗಿದ್ದಾರೆ. ರಸ್ತೆಯಲ್ಲಿ ಬಿದ್ದಿದ್ದ ಜೀವಂತ ಹಸುಗೂಸನ್ನು ಬೀದಿ ನಾಯಿಗಳು ತಿಂದು ಹಾಕಿವೆ. ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ದೇವಿಹಾಳ‌ ಎಂಬಲ್ಲಿ ಈ ಅಮಾನವೀಯ ಘಟನೆ ನಡೆದಿದೆ.

ಡಿ.21ರ ಮಧ್ಯರಾತ್ರಿ 12 ಗಂಟೆ ಸುಮಾರಿಗೆ ದೇವಿಹಾಳ ಗ್ರಾಮದ ರತ್ನಮ್ಮ ಬಡ್ನಿ ಎಂಬುವವರ ದುರಸ್ಥಿ ಮನೆಯ ಹತ್ತಿರ ನವಜಾತ ಶಿಶುವನ್ನು ಎಸೆದು ಹೋಗಿದ್ದಾರೆ. ಅನೈತಿಕ ಸಂಬಂಧದಿಂದ ಜನಿಸಿದ ಮಗು ಎಂದು ಹೇಳಲಾಗುತ್ತಿದೆ. ಅನೈತಿಕ ಸಂಬಂಧಕ್ಕೆ ಈ ಮಗು ಜನಿಸಿದ್ದು, ತಮ್ಮ ಸಂಬಂಧವನ್ನು ಮುಚ್ಚಿಡಲು ಸಲುವಾಗಿ ಹುಟ್ಟಿದ ಮಗುವನ್ನು ಎಸೆದು ಹೋಗಿದ್ದಾರೆ ಎಂದು ದೂರಲ್ಲಿ ಉಲ್ಲೇಖಸಿಲಾಗಿದೆ.

ಆರೋಪಿಗಳ ಪತ್ತೆಗೆ ಬಲೆ ಬೀಸಿರುವ ಪೊಲೀಸರು

ಇದನ್ನೂ ಓದಿ: Drowned in water : ಹೇಮಾವತಿ ನದಿಯಲ್ಲಿ ಕೊಚ್ಚಿ ಹೋದಳು ಚೆಲುವೆ

ರಸ್ತೆಯಲ್ಲಿ ಬಿದ್ದಿದ್ದ ಮಗುವನ್ನು ನಾಯಿಗಳು ಅರ್ಧಾಂಬರ್ದಾ ತಿಂದು ಹಾಕಿವೆ. ಮಗುವಿನ ತಲೆಯ ಭಾಗವಿಲ್ಲದ ದೇಹ ಪತ್ತೆಯಾಗಿದೆ. ಕೂಸಿನ ವಾರಸುದಾರರನ್ನು ಪತ್ತೆ ಹಚ್ಚಿ ಅವರ ಮೇಲೆ ಸೂಕ್ತ ಕ್ರಮಕೈಗೊಳ್ಳಿ ಎಂದು ಸ್ಥಳೀಯರು ದೂರು ನೀಡಿದ್ದಾರೆ.

ಅರ್ಧಾಂಬರ್ದಾ ಸಿಕ್ಕಿರುವ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಶಿರಹಟ್ಟಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: ಗೀಸರ್‌ ಗ್ಯಾಸ್‌ ಸೋರಿಕೆ; ಪ್ರಜ್ಞೆ ತಪ್ಪಿ ಬಿದ್ದ ಯುವತಿ ಬಾತ್‌ರೂಮ್‌ನಲ್ಲೇ ಸಾವು

ಚರಂಡಿಯಲ್ಲಿ ಪತ್ತೆಯಾದ ಗಂಡು ಶಿಶುವಿನ ಮೃತದೇಹ. ಸ್ಥಳಕ್ಕಾಗಮಿಸಿದ ಪರಿಶೀಲಿಸಿದ ಪೊಲೀಸರು

ನವಜಾತ ಶಿಶುವನ್ನು ಚರಂಡಿಗೆ ಎಸೆದು ಹೋದ ಪಾಪಿಗಳು

ಚರಂಡಿಯಲ್ಲಿ ನವಜಾತ ಗಂಡು ಶಿಶುವಿನ ಮೃತದೇಹವೊಂದು ಪತ್ತೆಯಾಗಿದೆ. ಬೆಳಗಾವಿ ಜಿಲ್ಲೆಯ ‌ಗೋಕಾಕ ತಾಲೂಕಿನ ‌ಘಟಪ್ರಭಾ ಪಟ್ಟಣದ ಕಲಾಲ್ ನಗರದಲ್ಲಿ ಘಟನೆ ನಡೆದಿದೆ.

ನವಜಾತ ಶಿಶು ಹತ್ಯೆಗೈದು ಪ್ಲಾಸ್ಟಿಕ್ ಕವರ್‌ನಲ್ಲಿ ಸುತ್ತಿ ರಾತ್ರಿ ವೇಳೆ ಚರಂಡಿಯಲ್ಲಿ ಎಸೆದಿರುವ ಶಂಕೆ ಇದೆ. ಸ್ಥಳೀಯರಿಂದ ಮಾಹಿತಿ ಪಡೆದು ಸ್ಥಳಕ್ಕೆ ಆಗಮಿಸಿದ ಘಟಪ್ರಭಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚರಂಡಿಯಲ್ಲಿ ಬಿದ್ದಿದ್ದ ಮೃತದೇಹವನ್ನು ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿದ್ದಾರೆ.

ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Exit mobile version